ರಾಯಚೂರು: ಸರ್ಕಾರಿ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಮಹಿಳೆಯನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಹಟ್ಟಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಹಟ್ಟಿ (ಚಿನ್ನದಗಣಿ) ಕಳೆದ ಅ.26 ರಂದು ಕೆಮಿಕಲ್ ಹಾಗೂ ಮಾರಕಾಸ್ತ್ರಗಳಿಂದ ಚಿತ್ರಹಿಂಸೆ ನೀಡಿ ಕೊಲೆ ಮಾಡಲಾಗಿದೆ ಎಂದು ಮೃತ ಲ್ಯಾಬ್ ಟೆಕ್ನಿಷಿಯನ್ ಮಂಜುಳಾ ಅವರ ಮಗ ಸಚಿನ್ ಪಾಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ದೂರಿನ ಆಧಾರದ …
Read More »ಈ ನಗರದಲ್ಲಿ ಎಲ್ಲೆಂದರಲ್ಲಿ ಉಗುಳಿದ್ರೆ ಜೋಕೆ; ಉಗಿದ್ರೆ ಬೀಳುತ್ತೆ ದಂಡ!
ಸೂರತ್(ಗುಜರಾತ್) : ಸೂರತ್ ನಗರದ ರಸ್ತೆಗಳಲ್ಲಿ ಗುಟ್ಕಾ ತಿಂದು ಉಗುಳುವವರ ವಿರುದ್ಧ ಕ್ರಮಕೈಗೊಳ್ಳಲು ನಗರ ಪಾಲಿಕೆ ಮುಂದಾಗಿದೆ. ಈ ಸಂಬಂಧ ನಗರದ ರಸ್ತೆಗಳಲ್ಲಿ ಗುಟ್ಕಾ, ಪಾನ್ ಮಸಾಲ ತಿಂದು ಉಗುಳುವವರನ್ನು ಪತ್ತೆ ಹಚ್ಚಲು ನಗರದೆಲ್ಲೆಡೆ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಸೂರತ್ ನಗರ ಪಾಲಿಕೆಯು ನಗರವನ್ನು ಅಂದವಾಗಿಡಲು ವಿವಿಧ ಕ್ರಮಗಳನ್ನು ಕೈಗೊಂಡಿದೆ. ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲೂ ಸೂರತ್ ನಗರದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗಿದೆ. ನಗರವನ್ನು ಚಂದಗಾಣಿಸಲು ಇಲ್ಲಿನ ರಸ್ತೆಗಳ ಬದಿಯಲ್ಲಿನ …
Read More »ತೆಲಂಗಾಣ ಹೈಕೋರ್ಟ್ ನ್ಯಾಯಮೂರ್ತಿ ಸಿ. ಸುಮಲತಾ ಅವರನ್ನು ಕರ್ನಾಟಕ ಹೈಕೋರ್ಟ್‌ಗೆ ವರ್ಗಾವಣೆ
ಬೆಂಗಳೂರು : ತೆಲಂಗಾಣ ಹೈಕೋರ್ಟ್ ನ್ಯಾಯಮೂರ್ತಿ ಸಿ ಸುಮಲತಾ ಅವರನ್ನು ಕರ್ನಾಟಕ ಹೈಕೋರ್ಟ್‌ಗೆ ವರ್ಗಾವಣೆ ಮಾಡಿ ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲಯ ಆದೇಶಿಸಿದೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ವರ್ಗಾವಣೆ ಮಾಡಿರುವುದಾಗಿ ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲಯದ ವಿಶೇಷ ಕಾರ್ಯದರ್ಶಿ ರಾಜೇಂದ್ರ ಕಶ್ಯಪ್ ಅವರು ತಿಳಿಸಿದ್ದಾರೆ. ನ್ಯಾಯಮೂರ್ತಿ ಸುಮಲತಾ ಅವರನ್ನು ಈ ಹಿಂದೆ ಗುಜರಾತ್ ಹೈಕೋರ್ಟ್‌ಗೆ ವರ್ಗಾವಣೆ ಮಾಡಲಾಗಿತ್ತು. ಆದರೆ, ಅವರು ಸುಪ್ರೀಂಕೋರ್ಟ್ ಕೊಲಿಜಿಯಂಗೆ …
Read More »ಮನೆಗೆ ವಿದ್ಯುತ್ ಕಂಬದಿಂದ ಅಕ್ರಮ ಕರೆಂಟ್ ಸಂಪರ್ಕ ಪಡೆದ :H.D.K.
ಬೆಂಗಳೂರು: ದೀಪಾವಳಿ ಹಬ್ಬಕ್ಕೆ ನನ್ನ ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಲು ಖಾಸಗಿ ಡೆಕೋರೇಟರ್ ಒಬ್ಬರಿಗೆ ಹೇಳಲಾಗಿತ್ತು. ಅವರು ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಿದ ಮೇಲೆ ಪಕ್ಕದಲ್ಲಿಯೇ ಇದ್ದ ಕಂಬದಿಂದ ವಿದ್ಯುತ್ ಸಂಪರ್ಕ ಪಡೆದು ಪರೀಕ್ಷೆ ಮಾಡಿದ್ದಾರೆ. ಆಗ ನಾನು ಬಿಡದಿಯ ತೋಟದಲ್ಲಿದ್ದೆ. ನಿನ್ನೆ ರಾತ್ರಿ ಮನೆಗೆ ವಾಪಸ್ ಬಂದಾಗ ಈ ವಿಷಯ ನನ್ನ ಗಮನಕ್ಕೆ ಬಂತು. ತಕ್ಷಣ ಅದನ್ನು ತೆಗೆಸಿ ಮನೆಯ ಮೀಟರ್ ಬೋರ್ಡ್ನಿಂದಲೇ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ …
Read More »ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ದರ್ಜೆಯ ಈಜುಕೊಳ ನಿರ್ಮಾಣ
ಮಂಗಳೂರು : ಕಡಲನಗರಿ ಮಂಗಳೂರಿನಲ್ಲಿ ಹಲವು ಯೋಜನೆಗಳು ಪ್ರಗತಿಯಲ್ಲಿದೆ. ಇದೀಗ ಸ್ಮಾರ್ಟ್ ಸಿಟಿ ಯೋಜನೆಯ ಮೂಲಕ ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಮಟ್ಟದ ಈಜುಕೊಳ ನಿರ್ಮಾಣವಾಗಿದೆ. ಇಲ್ಲಿ ಒಲಿಂಪಿಕ್ಗೂ ತಯಾರಿ ನಡೆಸಲು ತರಬೇತಿ ಸಿಗುತ್ತದೆ ಎಂಬುದು ವಿಶೇಷವಾಗಿದೆ. ನಗರದ ಎಮ್ಮೆಕೆರೆಯಲ್ಲಿ 2.50 ಎಕರೆ ಪ್ರದೇಶದಲ್ಲಿ ಈ ಈಜುಕೊಳ ನಿರ್ಮಾಣಗೊಂಡಿದೆ. ಸಾಧಾರಣವಾಗಿ ಈಜುಕೊಳಗಳು ನೆಲ ಅಂತಸ್ತಿನಲ್ಲಿರುತ್ತವೆ. ಕೆಲವೊಂದು ಬಹುಮಹಡಿಯ ಮೇಲಂತಸ್ತಿನಲ್ಲಿ ಸಣ್ಣ ಮಟ್ಟಿನ ಈಜುಕೊಳ ಇದೆಯಾದರೂ ಅಂತಾರಾಷ್ಟ್ರೀಯ ಮಟ್ಟದ ಈಜುಕೊಳಗಳು ನೆಲ ಅಂತಸ್ತಿನಲ್ಲಿರುತ್ತವೆ. ಆದರೆ ಮಂಗಳೂರಿನಲ್ಲಿ …
Read More »ಜೂಜಾಟದ ವೇಳೆ ದಾಳಿ: ಪೊಲೀಸರ ಮೇಲೆ ಹಲ್ಲೆ ನಡೆಸಿದ ಗುಂಪು
ಧಾರವಾಡ : ದೀಪಾವಳಿ ನಿಮಿತ್ತ ಜೂಜಾಡುತ್ತಿದ್ದ ಗುಂಪಿನ ಮೇಲೆ ದಾಳಿ ಮಾಡಿದ ಪೊಲೀಸರ ಮೇಲೆ ಹಲ್ಲೆ ಮಾಡಿದ ಘಟನೆ ತಾಲೂಕಿನ ನರೇಂದ್ರ ಗ್ರಾಮದಲ್ಲಿ ನಡೆದಿದೆ. ಗಾಯಾಳು ಪೊಲೀಸ್ ಸಿಬ್ಬಂದಿಯನ್ನು ಚಿಕಿತ್ಸೆಗಾಗಿ ಧಾರವಾಡ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ನರೇಂದ್ರ ಗ್ರಾಮದಲ್ಲಿ ಜೂಜಾಟ ನಡೆಯುವ ಖಚಿತ ಮಾಹಿತಿ ಮೇರೆಗೆ ಪಿಎಸ್‌ಐ ನಾಗರಾಜ್ ಪಾಟೀಲ ನೇತೃತ್ವದಲ್ಲಿ ಧಾರವಾಡ ಗ್ರಾಮೀಣ ಠಾಣೆಯ ಪೊಲೀಸರು ದಾಳಿ ಮಾಡಿದ್ದರು. ಈ ವೇಳೆ, ಜೂಜುಕೋರರು ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ. ಹಲ್ಲೆ …
Read More »ಅಣ್ಣಾವ್ರು ಹುಟ್ಟಿದ ಮನೆಯಲ್ಲಿ ದೀಪಾವಳಿ ಸಂಭ್ರಮ: ‘ಗ್ರಾಮಾಯಣ’ದಿಂದ ವಿಶೇಷ ವಿಡಿಯೋ ರಿಲೀಸ್
ವಿನಯ್ ರಾಜ್ಕುಮಾರ್ ನಟನೆಯ ‘ಗ್ರಾಮಾಯಣ’ ಚಿತ್ರತಂಡ ದೀಪಾವಳಿ ಹಬ್ಬಕ್ಕೆ ವಿಶೇಷ ವಿಡಿಯೋವೊಂದನ್ನು ರಿಲೀಸ್ ಮಾಡಿದೆ. ಅಣ್ಣಾವ್ರು ಹುಟ್ಟಿದ ಮನೆಯಲ್ಲಿ ದೀಪಾವಳಿ ಸಂಭ್ರಮ: ‘ಗ್ರಾಮಾಯಣ’ದಿಂದ ವಿಶೇಷ ವಿಡಿಯೋ ರಿಲೀಸ್ ಕನ್ನಡ ಚಿತ್ರರಂಗದಲ್ಲಿ ವಿಭಿನ್ನ ಚಿತ್ರಗಳ ಮೂಲಕ ತನ್ನದೇ ಸ್ಟಾರ್‌ಡಮ್ ಗಿಟ್ಟಿಸಿಕೊಂಡಿರುವ ನಟ ವಿನಯ್ ರಾಜ್ಕುಮಾರ್. ಸದ್ಯ ‘ಪೆಪೆ’ ಹಾಗೂ ‘ಗ್ರಾಮಾಯಣ’ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ವಿನಯ್ ರಾಜ್ಕುಮಾರ್ ಅವರ ತಾತ ಹುಟ್ಟಿದ ಮನೆ ಅಂದ್ರೆ ಡಾ.ರಾಜ್ಕುಮಾರ್ ಅವರ ಮನೆ ಗಾಜನೂರಿನಲ್ಲಿ ಬಹಳ ವಿಶೇಷವಾಗಿ …
Read More »ಎರಡು – ಮೂರು ದಿನಗಳಲ್ಲಿ ವಿಪಕ್ಷ ನಾಯಕರ ನೇಮಕ’: ಪ್ರಹ್ಲಾದ್ ಜೋಶಿ
ಹುಬ್ಬಳ್ಳಿ : ಡಿ.ಕೆ. ಶಿವಕುಮಾರ್ ಮತ್ತೊಂದು ಪವರ್ ಸೆಂಟರ್ ಆಗಿರಬಾರದು ಎಂದು ಕಾಂಗ್ರೆಸ್‌ನಲ್ಲಿ ದೊಡ್ಡ ಪ್ರಮಾಣದ ಷಡ್ಯಂತ್ರ ನಡೆಯುತ್ತಿದೆ. ಅವರವರ ಜಗಳದಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಎರಡು – ಮೂರು ದಿನಗಳಲ್ಲಿ ವಿಪಕ್ಷ ನಾಯಕರ ನೇಮಕ’: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನಗರದ ತಮ್ಮ ಕಚೇರಿಯಲ್ಲಿ ಲಕ್ಷ್ಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಇದೊಂದು ನೆಗೆಟಿವ್ ಸರ್ಕಾರವಾಗಿ ಪರಿವರ್ತನೆಯಾಗಿದೆ. ಹಳ್ಳಿಗಳಿಗೆ, ರೈತರಿಗೆ ಸಮರ್ಪಕ …
Read More »ಹರ್ಷಾ ಹೊಟೇಲ್ ಮಾಲೀಕ ಸುರೇಶ ನಾಯಿರಿ ನಿಧನ
ಹರ್ಷಾ ಹೊಟೇಲ್ ಮಾಲೀಕ ಸುರೇಶ ನಾಯಿರಿ ನಿಧನ ಬೆಳಗಾವಿ: ನಗರದ ಪ್ರತಿಷ್ಠಿತ ಹರ್ಷಾ ಹೊಟೇಲ್, ಶಬರಿ ಹೊಟೇಲ್ ಮಾಲೀಕರಾದ, ರಾಮತೀರ್ಥನಗರ ನಿವಾಸಿ ಮೂಲತಃ ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಸುರೇಶ ಗಣಪಯ್ಯ ನಾಯಿರಿ(52) ಅನಾರೋಗ್ಯದಿಂದ ಸೋಮವಾರ ರಾತ್ರಿ ನಿಧನರಾದರು. ಅನಾರೋಗ್ಯದಿಂದ ಬಳಲುತ್ತಿದ್ದ ಸುರೇಶ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ. ಮೃತರು ಪತ್ನಿ, ಇಬ್ಬರು ಪುತ್ರಿಯರು, ಪುತ್ರ ಸೇರಿದಂತೆ ಅಪಾರ ಬಂಧು-ಬಳಗ ಅಗಲಿದ್ದಾರೆ. ಅಂತ್ಯಕ್ರಿಯೆ ಉಡುಪಿ ಜಿಲ್ಲೆಯ …
Read More »ಪತ್ನಿ ನವಾಜ್ರಿಂದ ಬೇರ್ಪಟ್ಟ ರೇಮಂಡ್ಸ್ ಅಧ್ಯಕ್ಷ ಗೌತಮ್ ಸಿಂಘಾನಿಯಾ
ನವದೆಹಲಿ: ರೇಮಂಡ್ ಗ್ರೂಪ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಗೌತಮ್ ಸಿಂಘಾನಿಯಾ ಮತ್ತು ಅವರ ಪತ್ನಿ ನವಾಜ್ ಸಿಂಘಾನಿಯಾ ಸೋಮವಾರ ಬೇರ್ಪಡುವುದಾಗಿ ಘೋಷಿಸಿದ್ದಾರೆ. “ಈ ದೀಪಾವಳಿ ಹಿಂದಿನಂತೆ ಇರುವುದಿಲ್ಲ. ದಂಪತಿಗಳಾಗಿ ಒಟ್ಟಿಗೆ 32 ವರ್ಷ ಕಳೆದಿದ್ದೇವೆ, ಪೋಷಕರಾಗಿ ಜವಾಬ್ದಾರಿ ನಿಭಾಯಿಸಿದ್ದೇವೆ ಮತ್ತು ಯಾವಾಗಲೂ ಪರಸ್ಪರ ಶಕ್ತಿಯ ಮೂಲವಾಗಿದ್ದೆವು… ನಮ್ಮ ಜೀವನದಲ್ಲಿ ಮತ್ತೆರಡು ಸುಂದರ ಜೀವಗಳು ಸೇರ್ಪಡೆಯಾಗಿದ್ದರಿಂದ ನಾವು ಬದ್ಧತೆ, ಸಂಕಲ್ಪ, ನಂಬಿಕೆಯೊಂದಿಗೆ ಪ್ರಯಾಣಿಸಿದ್ದೇವೆ” ಎಂದು ಗೌತಮ್ ಸಿಂಘಾನಿಯಾ ಎಕ್ಸ್ (ಟ್ವಿಟರ್) …
Read More »