ಬೆಳಗಾವಿ: ಮಹಿಳೆಯರೇ ದುಡಿದು ಆ ಕುಟುಂಬ ಜೀವನ ಸಾಗಿಸುತ್ತಿತ್ತು. ಎಲ್ಲರ ಮನೆಯಲ್ಲಂತೆ ಈ ಮನೆಯಲ್ಲಿಯೂ ದೀಪಾವಳಿ ಸಂಭ್ರಮ ಮನೆ ಮಾಡಿತ್ತು. ನಾಳೆ ಬೆಳಕಾದರೆ ಮನೆಗೆ ಟ್ರ್ಯಾಕ್ಟರ್ ತರುವ ಖುಷಿಯಲ್ಲಿದ್ದರು. ಆದರೆ ವಿಧಿ ಈ ಕುಟುಂಬದ ಜೊತೆ ಚೆಲ್ಲಾಟ ಆಡಿದೆ. ಆಕಸ್ಮಿಕವಾಗಿ ಹತ್ತಿದ ಬೆಂಕಿಗೆ ಸಂಪೂರ್ಣ ಮನೆ ಸುಟ್ಟು ಭಸ್ಮವಾಗಿ, ಬದುಕು ಬೀದಿಗೆ ಬಂದಿದೆ. ಹೌದು ಬಸವನ ಕುಡಚಿ ಗ್ರಾಮದ ಸವಿತಾ ದುನೊಳ್ಳಿ ಮತ್ತು ಅನಿತಾ ಕೌಲಗಿ ಎಂಬ ಸಹೋದರಿಯರಿಗೆ ಸೇರಿದ ಎರಡೂ …
Read More »ಥಿಯೇಟರ್‌ಗಳಲ್ಲಿ ಪಟಾಕಿ ಸಿಡಿಸಿ ಅವಾಂತರ; ಅತಿರೇಕದ ಅಭಿಮಾನಿಗಳಿಗೆ ಸಲ್ಮಾನ್ ಖಾನ್ ಕಿವಿ ಮಾತು
ಮುಂಬೈ (ಮಹಾರಾಷ್ಟ್ರ): ಟೈಗರ್ 3 ಚಿತ್ರದ ವೀಕ್ಷಣೆ ವೇಳೆ ಥಿಯೇಟರ್ಗಳಲ್ಲಿಯೇ ಪಟಾಕಿ ಸಿಡಿಸಿ ಅತಿರೇಕದ ಅಭಿಮಾನ ತೋರಿರುವ ಬಗ್ಗೆ ನಟ ಸಲ್ಮಾನ್ ಖಾನ್ ವಿಷಾದ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಯಾರೂ ಸಹ ಜೀವಕ್ಕೆ ಅಪಾಯವನ್ನುಂಟು ಮಾಡುವ ಇಂತಹ ಅಭಿಮಾನಕ್ಕೆ ಮುಂದಾಗಬಾರದು ಎಂದು ಅವರು ಅಭಿಮಾನಿಗಳಿಗೆ ಕಿವಿ ಮಾತು ಹೇಳಿದ್ದಾರೆ. ಇನ್‌ಸ್ಟಾಗ್ರಾಮ್ ವಿಷಾದ ವ್ಯಕ್ತಪಡಿಸಿರುವ ಸಲ್ಮಾನ್ ಖಾನ್, “ಥಿಯೇಟರ್‌ಗಳಲ್ಲಿ ಪಟಾಕಿ ಸಿಡಿಸಿದ ಬಗ್ಗೆ ನಾನೂ ಸಹ ಕೇಳಿದೆ. ಈ ಘಟನೆ ತುಂಬಾ ಅಪಾಯಕಾರಿ. ನಮ್ಮನ್ನು …
Read More »ಹಾವೇರಿ: ತೈವಾನ್ ದೇಶದ ಪಪ್ಪಾಯಿ ಬೆಳೆದ ರೈತ.. 8 ಲಕ್ಷ ರೂ ಆದಾಯದ ನಿರೀಕ್ಷೆಯಲ್ಲಿ ಬೆಳೆಗಾರ!
ಹಾವೇರಿ : ತಾಲೂಕಿನ ಕಬ್ಬೂರು ಗ್ರಾಮದಲ್ಲಿ ಹಲವು ಬೆಳೆಗಳಲ್ಲಿ ಅಂತರಬೆಳೆ ಬೆಳೆಯುವ ಮೂಲಕ ಪ್ರಗತಿಪರ ರೈತರೊಬ್ಬರು ಕೃಷಿಯಲ್ಲಿ ಲಾಭಗಳಿಸಿಕೊಂಡಿದ್ದಾರೆ. ಕಬ್ಬೂರು ಗ್ರಾಮದ ಪ್ರಗತಿಪರ ರೈತ ಉಮೇಶ ಸಂಗೂರು ಅವರು ಎಲ್ಲ ರೈತರಂತೆ ಒಂದೇ ಬೆಳೆಗೆ ಅಂಟಿಕೊಂಡಿಲ್ಲ. ಗ್ರಾಮದ ಸಮೀಪ ಇರುವ ಎರಡು ಎಕರೆ ಜಮೀನಿನಲ್ಲಿ ಎರಡು ವರ್ಷದ ಹಿಂದೆ ಅಡಕೆ ನೆಟ್ಟಿದ್ದಾರೆ. ಅಡಿಕೆ ಗಿಡಗಳ ನಡುವೆ ಇರುವ ಜಾಗದಲ್ಲಿ ಉಮೇಶ್ ಈ ವರ್ಷ ಪಪ್ಪಾಯಿ ಬೆಳೆದಿದ್ದಾರೆ. ಉಮೇಶ್ ತೈವಾನ್ ದೇಶದ ರೆಡ್ …
Read More »ಲೋಕಸಭೆ ಚುನಾವಣೆ: ಬೆಳಗಾವಿ ಲಿಂಗಾಯತ, ಚಿಕ್ಕೋಡಿ ಕುರುಬರಿಗೆ ಟಿಕೆಟ್ ಚಿಂತನೆ – ಸಚಿವ ಸತೀಶ ಜಾರಕಿಹೊಳಿ
ಬೆಳಗಾವಿ: ಲೋಕಸಭೆ ಚುನಾವಣೆಯಲ್ಲಿ ಬೆಳಗಾವಿ ಕ್ಷೇತ್ರಕ್ಕೆ ಲಿಂಗಾಯತ, ಚಿಕ್ಕೋಡಿಯಲ್ಲಿ ಕುರುಬ ಸಮುದಾಯಕ್ಕೆ ಕಾಂಗ್ರೆಸ್ ಟಿಕೆಟ್ ನೀಡಲು ಚಿಂತನೆ ನಡೆದಿದೆ. ರಾಜ್ಯದ 20 ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲುವ ಗುರಿ ಹೊಂದಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು. ಬೆಳಗಾವಿ ಕಾಂಗ್ರೆಸ್ ಭವನದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಗೆ ಈಗಾಗಲೇ ತಯಾರಿ ನಡೆಸಿದ್ದೇವೆ. ಕಾರ್ಯಕರ್ತರು ಚುನಾವಣೆ ಎದುರಿಸಲು ಸಿದ್ಧರಾಗಿದ್ದು, ಎಲ್ಲ ರೀತಿಯ ಮಾನದಂಡಗಳನ್ನು ಅನುಸರಿಸಿ, ಮೂರು ಹಂತಗಳಲ್ಲಿ …
Read More »ವಿಜಯೇಂದ್ರಗೆ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಪದಗ್ರಹಣಕಾರ್ಯಕ್ರಮಕ್ಕೆ ನಾನು ಹೋಗಲ್ಲ.:C.T.RAVI
ಚಿಕ್ಕಮಗಳೂರು : ವಿಜಯೇಂದ್ರಗೆ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಪದಗ್ರಹಣ ಮಾಡಲಿರುವ ಕಾರ್ಯಕ್ರಮಕ್ಕೆ ನಾನು ಹೋಗಲ್ಲ. ಅವರು ನನ್ನ ಜೊತೆ 2 ಬಾರಿ ಫೋನ್ನಲ್ಲಿ ಮಾತನಾಡಿದ್ದಾರೆ. 15ನೇ ತಾರೀಖು ಜವಾಬ್ದಾರಿ ಸ್ವೀಕಾರ ಮಾಡ್ತಿದ್ದಾರೆ. 15 ರ ರಾತ್ರಿವರೆಗೂ ಮಧ್ಯ ಪ್ರದೇಶದಲ್ಲಿ ಚುನಾವಣಾ ಕ್ಯಾಂಪೇನ್ ಇದೆ. 15ಕ್ಕೆ ನಾನು ಇರಲ್ಲ ಅಂತ ಹೇಳಿದ್ದೇನೆ ಎಂದು ಚಿಕ್ಕಮಗಳೂರಿನಲ್ಲಿ ಮಾಜಿ ಸಚಿವ ಸಿ ಟಿ ರವಿ ಹೇಳಿದ್ದಾರೆ. ನಂತರ ಎಂ ಪಿ ರೇಣುಕಾಚಾರ್ಯ ಹೇಳಿಕೆಗೆ ಸಿ ಟಿ ರವಿ …
Read More »ಎಸ್ಎಂ ಕೃಷ್ಣ ಭೇಟಿಯಾದ ರಾಜ್ಯಾಧ್ಯಕ್ಷ ವಿಜಯೇಂದ್ರ
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಎಸ್.ಎಂ.ಕೃಷ್ಣ ಅವರನ್ನು ಭೇಟಿಯಾದ ಸಂದರ್ಭದಲ್ಲಿ ‘ಹತ್ತಾರು ವರ್ಷಗಳಿಂದ ಬಿಜೆಪಿಯನ್ನು ಕರ್ನಾಟಕದಲ್ಲಿ ಭದ್ರವಾದ ಬುನಾದಿಯ ಮೇಲೆ ಕಟ್ಟಲು ಯಡಿಯೂರಪ್ಪ ಶ್ರಮಿಸಿದ್ದಾರೆ ಎಂದು ಮಾಜಿ ಸಿಎಂ ಎಸ್.ಎಂ. ಕೃಷ್ಣ ಅವರು ಹೇಳಿದ್ದಾರೆ. ರಾಜ್ಯ ಬಿಜೆಪಿಯ ನೂತನ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಇಂದು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣರನ್ನು ಅವರ ಸದಾಶಿವನಗರದ ನಿವಾಸದಲ್ಲಿ ಭೇಟಿ ಮಾಡಿ ಆಶೀರ್ವಾದ ಮತ್ತು ಮಾರ್ಗದರ್ಶನ ಪಡೆದರು. ಇದೇ ವೇಳೆ, ಮಾಧ್ಯಮಗಳ ಜೊತೆ ಮಾತನಾಡಿದ ಎಸ್.ಎಂ.ಕೃಷ್ಣ ಅವರು, …
Read More »ಸಿಎಂ, ಡಿಸಿಎಂರಿಂದ ತೆಲಂಗಾಣದಲ್ಲಿ ಮತಬೇಟೆ
ಬೆಂಗಳೂರು: ತೆಲಂಗಾಣ ಚುನಾವಣೆಯಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ರಾಜ್ಯ ಚುನಾವಣಾ ಮಾದರಿಯನ್ನೇ ತೆಲಂಗಾಣದಲ್ಲಿ ಕಾಂಗ್ರೆಸ್ ಅಳವಡಿಸಿಕೊಂಡಿದೆ. ರಾಜ್ಯ ಸಿಎಂ, ಡಿಸಿಎಂ ಸೇರಿ ಸಚಿವರುಗಳು, ಕೈ ಶಾಸಕರ ದಂಡೇ ತೆಲಂಗಾಣ ಅಖಾಡಕ್ಕಿಳಿದಿದೆ. ಆ ಮೂಲಕ ಕರ್ನಾಟಕದ ಭರ್ಜರಿ ಜಯಭೇರಿಯನ್ನು ತೆಲಂಗಾಣದಲ್ಲೂ ಪುನರಾವರ್ತಿಸಲು ಮುಂದಾಗಿದೆ. ತೆಲಂಗಾಣದ ಚುನಾವಣ ಅಖಾಡ ರಂಗೇರಿದೆ. ಆಡಳಿತಾರೂಢ ಬಿಆರ್ಎಸ್ ಹ್ಯಾಟ್ರಿಕ್ ಗೆಲುವಿಗೆ ಹೋರಾಟ ನಡೆಸಿದರೆ, ಕಾಂಗ್ರೆಸ್ ಮೊದಲ ಬಾರಿಗೆ ತೆಲಂಗಾಣದ ಗದ್ದುಗೆ ಹಿಡಿಯಲು ತನ್ನ ಎಲ್ಲ ಕಾರ್ಯತಂತ್ರ, …
Read More »ರಾಣಿಪೇಟೆಯಲ್ಲಿ ಪಟಾಕಿ ಸಿಡಿದು ಬಾಲಕಿ ಸಾವು; ಬೆಳಕಿನ ಹಬ್ಬದಲ್ಲಿ ಕತ್ತಲಾದ ಬದುಕು
ರಾಣಿಪೇಟೆ (ತಮಿಳುನಾಡು) : ಬೆಳಕಿನ ಹಬ್ಬದ ಸಂಭ್ರಮದಲ್ಲಿ ಅವಘಡವೊಂದು ನಡೆದು ಬದುಕು ಕತ್ತಲಾಗಿದೆ. ದೀಪಾವಳಿ ಸಂಭ್ರಮಾಚರಣೆಯಲ್ಲಿದ್ದ ತಮಿಳುನಾಡಿನ ರಾಣಿಪೇಟೆ ಜಿಲ್ಲೆಯ ಮಂಪಕ್ಕಂನ ಆದಿ ದ್ರಾವಿಡರ ವಸತಿ ಪ್ರದೇಶದಲ್ಲಿ ಸೂತಕದ ಛಾಯೆ ಆವರಿಸಿದೆ. ಭಾನುವಾರ ಪಟಾಕಿ ಸಿಡಿಸುವ ಸಮಯದಲ್ಲಿ ಪುಟ್ಟ ಬಾಲಕಿಯೋರ್ವಳು ಸಾವನ್ನಪ್ಪಿದ್ದಾಳೆ. ಆದಿ ದ್ರಾವಿಡರ ವಸತಿ ಪ್ರದೇಶದ ನಿವಾಸಿಗಳಾದ ರಮೇಶ್ (28) ಮತ್ತು ಅಶ್ವಿನಿ (25) ಎಂಬುವರ 4 ವರ್ಷದ ಕಂದಮ್ಮ ಮೃತ ದುರ್ದೈವಿ. ದೀಪಾವಳಿ ಹಬ್ಬದ ನಿಮಿತ್ತ ರಮೇಶ್ ಅವರ …
Read More »ವಯಸ್ಸಾದ ಪೋಷಕರ ರಕ್ಷಣೆ ಮಕ್ಕಳ ಜವಾಬ್ದಾರಿ: ಹೈಕೋರ್ಟ್ ಆದೇಶ
ಬೆಂಗಳೂರು: ವಯಸ್ಸಾದ ಪೋಷಕರನ್ನು ಸಂಧ್ಯಾಕಾಲದಲ್ಲಿ ಅವರ ಆರೈಕೆ ಮಾಡುವ ಜವಾಬ್ದಾರಿ ಕಾನೂನು, ಧರ್ಮ ಮತ್ತು ನೈತಿಕತೆಯು ಮಕ್ಕಳ ಮೇಲಿರುತ್ತದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ತಂದೆಯಿಂದ ಆಸ್ತಿಯನ್ನು ಉಡುಗೊರೆಯಾಗಿ ಪಡೆದ ನಂತರ ಹಲ್ಲೆ ನಡೆಸಿ ಮನೆಯಿಂದ ಹೊರಹಾಕಿದ್ದ ಪುತ್ರಿ ಮತ್ತು ಅಳಿಯನ ವರ್ತನೆ ಗಮನಿಸಿ ಮುಖ್ಯ ನ್ಯಾಯಮೂರ್ತಿ ಪಿ ಬಿ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ, ಪೋಷಕರು ಆಸ್ತಿಯನ್ನು ಉಡುಗೊರೆಯಾಗಿ ನೀಡಿದಾಗ ಈ ಜವಾಬ್ದಾರಿ …
Read More »ಹಾಡಹಗಲೇ ಪುರಸಭೆ ಸದಸ್ಯನ ಮೇಲೆ ಮಚ್ಚಿನಿಂದ ಹಲ್ಲೆ,
ಬಳ್ಳಾರಿ : ಜಿಲ್ಲೆಯ ತೋರಣಗಲ್ಲು ರೈಲು ನಿಲ್ದಾಣ ಪ್ರದೇಶದ 11ನೇ ವಾರ್ಡ್‌ನ ಘೋರ್ಪಡೆ ನಗರದಲ್ಲಿ ಎಚ್‌ಎಲ್‌ಸಿ ಕಾಲುವೆಯ ಬಳಿ ಪುರಸಭೆ ಸದಸ್ಯನ ಮೇಲೆ ಮಚ್ಚಿನಿಂದ ದಾಳಿ ನಡೆದಿದೆ. ಪರಿಣಾಮ ಪುರಸಭೆ ಸದಸ್ಯ ನಾಗರಾಜ ನಾಯ್ಕ (32) ಗಂಭೀರವಾಗಿ ಗಾಯಗೊಂಡಿದ್ದಾರೆ. ಅದೇ ವಾರ್ಡ್ ನಿವಾಸಿ ಶಿವಕುಮಾರ್ ಮಚ್ಚಿನಿಂದ ಹಲ್ಲೆ ನಡೆಸಿರುವ ಆರೋಪಿ. ನಾಗರಾಜ ನಾಯ್ಕ ಅವರಿಗೆ ತಲೆ, ಬೆನ್ನಿಗೆ ಹಾಗೂ ಕೈಗಳಿಗೆ ಗಂಭೀರ ಗಾಯಗಳಾಗಿದ್ದು, ತಕ್ಷಣ ಜಿಂದಾಲ್ ಸಂಜೀವಿನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ …
Read More »