Breaking News

ದೀಪಾವಳಿ ಹಬ್ಬ : ಮಣ್ಣಿನ ಹಣತೆಗಳ ಖರೀದಿಯಲ್ಲಿ ನಿರತರಾದ ಸಿಲಿಕಾನ್ ಸಿಟಿ ಮಂದಿ

ಬೆಂಗಳೂರು : ದೀಪಾವಳಿ ಹಬ್ಬದಲ್ಲಿ ಎಲ್ಲೆಡೆ ಸಂಭ್ರಮ ಮನೆಮಾಡಿದೆ. ಮೂರು ದಿನಗಳ ಕಾಲ ಸಾಲು ಸಾಲು ದೀಪಗಳನ್ನು ಹಚ್ಚಿ ಸಂಭ್ರಮಿಸುವುದು ಈ ಹಬ್ಬದ ಸಂಪ್ರದಾಯ. ಅಂಧಕಾರವ ಕಳೆದು ಬೆಳಕಿನೆಡೆಗೆ ಕರೆದುಕೊಂಡು ಹೋಗುವ ದೀಪಗಳ ಹಬ್ಬವನ್ನು ಸ್ವಾಗತಿಸಲು ನಗರದ ಮಾರುಕಟ್ಟೆಯಲ್ಲಿ ಬಗೆಬಗೆಯ ಹಣತೆಗಳು ಬಂದಿವೆ. ಮಣ್ಣಿನ ದೀಪಗಳು ದುಬಾರಿ ಎನಿಸಿದರೂ ಪರಿಸರ ಸ್ನೇಹಿ ದೀಪಗಳಾಗಿರುವುದರಿಂದ ಬೇಡಿಕೆ ಹೆಚ್ಚಿದೆ. ನಗರದಲ್ಲಿ ಜೇಡಿ ಮಣ್ಣಿನಿಂದ ಹೂವು, ಆನೆಯ ಮಾದರಿಯ ದೀಪ, ನವಿಲುಗರಿ ಮತ್ತು ಮಹಿಳಾ ಪ್ರತಿರೂಪದ …

Read More »

ಭಾರತ vs ನೆದರ್ಲೆಂಡ್ಸ್‌ ಪಂದ್ಯ: ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತ ಸರಕು ಸಾಗಣೆ ವಾಹನಗಳಿಗೆ ನಿಷೇಧ

ಬೆಂಗಳೂರು: ಐಸಿಸಿ ಏಕದಿನ ವಿಶ್ವಕಪ್‌ನ ಭಾರತ ಹಾಗೂ ನೆದರ್ಲೆಂಡ್ಸ್​ ನಡುವಿನ ಪಂದ್ಯಕ್ಕೆ ನಾಳೆ ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣ ಆತಿಥ್ಯವಹಿಸುತ್ತಿರುವ ಹಿನ್ನೆಲೆಯಲ್ಲಿ ಸುಗಮ ಸಂಚಾರದ ದೃಷ್ಟಿಯಿಂದ ಮೈದಾನದ ಸುತ್ತಮುತ್ತ ಸರಕು ಹಾಗೂ ಸಾಗಣಿಕೆ ವಾಹನಗಳಿಗೆ ನಿಷೇಧ ವಿಧಿಸಲಾಗಿದೆ. ವಿಶ್ವಕಪ್‌ನಲ್ಲಿ ಲೀಗ್ ಹಂತದ ಮತ್ತು ಭಾರತ ತಂಡದ ಕೊನೆಯ ಪಂದ್ಯ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಯಾವುದೇ ರೀತಿಯ ಸಂಚಾರ ದಟ್ಟಣೆ ಆಗದಂತೆ ಕ್ರಮವಹಿಸಲಾಗಿದೆ. ಕ್ಯಾಬ್​ಗಳಿಗೆ ಪಿಕ್ ಅಪ್ ಅಂಡ್ ಡ್ರಾಪ್ ಸ್ಥಳಗಳನ್ನ ಗುರುತಿಸಲಾಗಿದೆ. ವಾರಾಂತ್ಯ …

Read More »

ದೀಪಾವಳಿಯಲ್ಲಿ ಬದುಕು ಕತ್ತಲಾಗದಿರಲಿ: ಪಟಾಕಿ ಹೊಡೆಯುವಾಗ ಮುಂಜಾಗ್ರತೆ ವಹಿಸಲು ನೇತ್ರತಜ್ಞರ ಸಲಹೆ

ದಾವಣಗೆರೆ: ದೀಪಾವಳಿ ಬೆಳಕಿನ‌ ಹಬ್ಬ. ಆದರೆ, ಈ ಬೆಳಕಿನ ಹಬ್ಬದಲ್ಲಿ ಸಾಕಷ್ಟು ಜನ ಪಟಾಕಿ ಹೊಡೆಯುವ ಸಾಹಸಕ್ಕೆ ಕೈ ಹಾಕಿ ತಮ್ಮ ಬದುಕು ಕತ್ತಲಾಗಿಸಿಕೊಂಡಿದ್ದಾರೆ. ಪಟಾಕಿ ಸಿಡಿದರೆ ಕಣ್ಣಿಗಾಗುವ ಹಾನಿ ಹಾಗೂ ಪಟಾಕಿ ಹೊಡೆಯುವ ಮುನ್ನ ಮುಖ್ಯವಾಗಿ ಮಕ್ಕಳು ಯುವಕರು ಮುಂಜಾಗ್ರತಾ ಕ್ರಮಗಳನ್ನು ವಹಿಸಬೇಕು. ಯಾವ ರೀತಿ ಮುಂಜಾಗ್ರತೆ ವಹಿಸಬೇಕು ಎಂದು ನೇತ್ರತಜ್ಞ ರವೀಂದ್ರನಾಥ್ ಮಾಹಿತಿ ಕೊಟ್ಟಿದ್ದಾರೆ. ದೀಪಗಳ ಹಬ್ಬ ದೀಪಾವಳಿ. ಬೆಳಕಿನ ಹಬ್ಬದಲ್ಲಿ ಪಟಾಕಿ ಹೊಡೆದು ಸಂಭ್ರಮಿಸುವುದು ಯಾವ ಹಬ್ಬಗಳಲ್ಲೂ …

Read More »

ರಾಜ್ಯಾಧ್ಯಕ್ಷರ ಆಯ್ಕೆ ಮಾಡುವ ವಿಚಾರದಲ್ಲಿ ಬಿಜೆಪಿ‌ ಫೇಲ್: ಜಗದೀಶ್ ಶೆಟ್ಟರ್​

ಹುಬ್ಬಳ್ಳಿ: ”ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆಯು ಅತ್ತು ಕರೆದು ಮಾಡಿರೋ ತರಹ ಕಾಣುತ್ತಿದೆ. ಕಳೆದ ಆರು ತಿಂಗಳಿಂದ ಬಿಜೆಪಿ ನಾಯಕನ ಆಯ್ಕೆ ಮಾಡಿರಲಿಲ್ಲ. ಆದ್ರೆ, ಇವಗ್ಯಾಕೆ ಆಯ್ಕೆ ಮಾಡಿದ್ರು” ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್​ ಪ್ರಶ್ನಿಸಿದ್ದಾರೆ. ನಗರದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ”ರಾಜಕೀಯ ಪಕ್ಷ ಆಗಿ ತಕ್ಷಣವೇ ರಾಜ್ಯಾಧ್ಯಕ್ಷರ ಆಯ್ಕೆ ಮಾಡಬೇಕಿತ್ತು. ಆದ್ರೆ ಬಿಜೆಪಿ‌ ಈ ವಿಚಾರದಲ್ಲಿ ಸಂಪೂರ್ಣ ಫೇಲ್ ಆಗಿದೆ” ಎಂದರು. ಲಿಂಗಾಯತ ನಾಯಕರಿಗೆ ಮಣೆ ಹಾಕಿರುವ ವಿಚಾರಕ್ಕೆ …

Read More »

ಯಡಿಯೂರಪ್ಪರನ್ನು ಬಳಸಿಕೊಳ್ಳಲು ವಿಜಯೇಂದ್ರಗೆ ಪಟ್ಟ: ಎಂ.ಬಿ ಪಾಟೀಲ್

ಬೆಂಗಳೂರು : ಯಡಿಯೂರಪ್ಪರನ್ನು ಬಳಸಿಕೊಳ್ಳಲು ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಮಾಡುವ ಮೂಲಕ ಬಿಜೆಪಿ ಹೈಕಮಾಂಡ್‌ ನಾಯಕರು ನಾಟಕವಾಡ್ತಿದ್ದಾರೆ ಎಂದು ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ. ಬಿ.ವೈ ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆ ಮಾಡಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಬಿಜೆಪಿಗೆ ರಾಜ್ಯಾಧ್ಯಕ್ಷರು ಇದ್ದರು. ನಾವು ಕೇಳಿದ್ದು ವಿಪಕ್ಷ ನಾಯಕನನ್ನು. ಆದರೆ, ಹೊಸ ರಾಜ್ಯಾಧ್ಯಕ್ಷರನ್ನು ಆಯ್ಕೆ ಮಾಡಿದ್ದಾರೆ. ಅದು ಅವರ ಪಕ್ಷದ ಆಂತರಿಕ ವಿಚಾರ. ಈ ಹಿಂದೆ ಲಿಂಗಾಯತರೇ ರಾಜ್ಯದ ಸಿಎಂ …

Read More »

ಡಿಕೆಶಿಯವರೊಂದಿಗೆ ಹೊಂದಾಣಿಕೆ ಪ್ರಶ್ನೆಯೇ ಇಲ್ಲ ಎಂದ ಜಾರಕಿಹೊಳಿ

ಬೆಳಗಾವಿ: ನಾನು ಯಾವುದೇ ಹುದ್ದೆಗೆ ಬೇಡಿಕೆ ಇಟ್ಟಿಲ್ಲ. ಉಪಮುಖ್ಯಮಂತ್ರಿ (DCM) ಡಿ.ಕೆ. ಶಿವಕುಮಾರ್ (D.K. Shivakumar) ಅವರೊಂದಿಗೆ ಹೊಂದಾಣಿಕೆ ಆಗುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಸತೀಶ್​ ಜಾರಕಿಹೊಳಿ (Sathish jarakiholi) ಹೇಳಿದರು. ಬೆಳಗಾವಿ (belagavi) ರಾಜಕಾರಣದಲ್ಲಿ ಬೇರೆಯವರ ಹಸ್ತಕ್ಷೇಪದ ಕುರಿತು ಮುನಿಸಿಕೊಂಡಿರುವ ಜಾರಕಿಹೊಳಿ ಬೆಳಗಾವಿಯಲ್ಲಿ ಮಾತನಾಡಿ, ಈ ಬಗ್ಗೆ ಪಕ್ಷದ ವತಿಯಿಂದ ಚರ್ಚೆ ನಡೆಯಬೇಕು. ನಾವು ಏನೂ ಮಾಡಲು ಸಾಧ್ಯವಿಲ್ಲ ಎಂದರು. ಡಿ.ಕೆ. ಶಿವಕುಮಾರ್ ಅವರು ಹಲವು ಬಾರಿ …

Read More »

ಸರ್ಕಾರದಲ್ಲಿ ಹಣ ಇಲ್ಲ, ದಿವಾಳಿಯಾಗಿರುವುದು ಸ್ಪಷ್ಟ:B.S.Y.

ಬೆಂಗಳೂರು: ರಾಜ್ಯದಲ್ಲಿ ಬರಗಾಲ (Drought) ಆವರಿಸಿದ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ (BJP) ಮುಖಂಡರು ಬರ ಅಧ್ಯಯನ ನಡೆಸುತ್ತಿದ್ದಾರೆ. ಬರ ಅಧ್ಯಯನದ ನಂತರ ಸರ್ಕಾರಕ್ಕೂ ಒಂದು ವಾಸ್ತವದ ಚಿತ್ರಣ ನೀಡುತ್ತೇವೆ. ರಾಜ್ಯದಲ್ಲಿ ಎಲ್ಲ ಅಭಿವೃದ್ಧಿ ಕಾರ್ಯಗಳು ಸ್ಥಗಿತವಾಗಿದೆ. ಸರ್ಕಾರದಲ್ಲಿ ಹಣ ಇಲ್ಲ, ದಿವಾಳಿಯಾಗಿರುವುದು ಸ್ಪಷ್ಟವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ (BS Yediyurappa) ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಬೆಂಗಳೂರಿನಲ್ಲಿ (Bengaluru) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಬಿಎಸ್ ವೈ, …

Read More »

ಯಾರೋ ಒಬ್ಬನಿಂದ ಪಕ್ಷ ಬೆಳೆಯಲ್ಲ: ಕೆ.ಎಸ್‌.ಈಶ್ವರಪ್ಪ

ಶಿವಮೊಗ್ಗ: ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ನೇಮಕವಾಗಿರುವ ಬಗ್ಗೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಪ್ರತಿಕ್ರಿಯಿಸಿದ್ದು ಯಾರೋ ಒಬ್ಬ ವ್ಯಕ್ತಿಯಿಂದ ಪಕ್ಷ ಬೆಳೆಯಲ್ಲ. ಭಾರತೀಯ ಜನತಾ ಪಾರ್ಟಿ ಯಾರ ಮೇಲೂ ನಿಂತಿಲ್ಲ ಎಂದಿದ್ದಾರೆ.   ಪ್ರಧಾನಿ ನರೇಂದ್ರ ಮೋದಿ ಅವರೂ ಬಿಜೆಪಿಯಲ್ಲಿ ಒಬ್ಬ ಕಾರ್ಯಕರ್ತರು. ನಾನು ಕೂಡ ಕಾರ್ಯಕರ್ತ. ಲೋಕಸಭೆ ಚುನಾವಣೆಯಲ್ಲಿ ಎಲ್ಲರೂ ಒಟ್ಟಾಗಿ 28 ಸ್ಥಾನ ಗೆಲ್ಲುತ್ತೇವೆ. ಸಾಮೂಹಿಕ ನೇತೃತ್ವದಲ್ಲಿ ಈ ಚುನಾವಣೆ ನಡೆಯಲಿದೆ ಎಂದು ಹೇಳಿದ್ದಾರೆ. ದೇಶದಲ್ಲಿ …

Read More »

ಹೊಸ ಬಾಟಲಿಯಲ್ಲಿ ಹಳೆ ವೈನ್: ವಿಜಯೇಂದ್ರ ನೇಮಕಕ್ಕೆ ಸಚಿವ ಸುಧಾಕರ್ ವ್ಯಂಗ್ಯ

ಚಿತ್ರದುರ್ಗ : ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ ಅವರನ್ನು ಆಯ್ಕೆ ಮಾಡಿರುವ ಕುರಿತು ಪ್ರತಿಕ್ರಿಯಿಸಿದ ಸಚಿವ ಡಿ. ಸುಧಾಕರ್ ‘ಹೊಸ ಬಾಟಲಿಯಲ್ಲಿ ಹಳೆ ವೈನ್’ ಎಂದು ವ್ಯಂಗ್ಯವಾಡಿದ್ದಾರೆ. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯ ಆಂತರಿಕ ವಿಚಾರದಲ್ಲಿ ನಾವು ಮೂಗು ತೋರಿಸುವುದಿಲ್ಲ. ಕಾಂಗ್ರೆಸ್‌ನ ಸಿದ್ಧಾಂತವೇ ಬೇರೆ ಬಿಜೆಪಿಯ ಸಿದ್ಧಾಂತವೇ ಬೇರೆ. ಬಿಜೆಪಿ ಸಮಾಜ ಒಡೆಯುವ ನೀತಿ ಹೊಂದಿದೆ. ಯಾರೇ ಬಂದರೂ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ ಎಂದು ಎಂದರು.

Read More »

ಇದು ಕುಟುಂಬ ರಾಜಕಾರಣವಲ್ಲ-ಯುವ ನಾಯಕತ್ವಕ್ಕೆ ಸಿಕ್ಕ ಆದ್ಯತೆ: ಬಿ.ವೈ. ವಿಜಯೇಂದ್ರ

ಬೆಂಗಳೂರು:ಕುಟುಂಬ ರಾಜಕಾರಣ ನನ್ನ ಆಯ್ಕೆಯಲ್ಲ. ಯುವಕರಿಗೆ ಆದ್ಯತೆ ಕೊಡಬೇಕು ಎಂಬ ನಿಟ್ಟಿನಲ್ಲಿ ವರಿಷ್ಠರು ನನಗೆ ಅವಕಾಶವನ್ನು ನೀಡಿದ್ದಾರೆ ಎಂದು ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವ ಬಿ.ವೈ. ವಿಜಯೇಂದ್ರ (BY Vijayendra) ಹೇಳಿದ್ದಾರೆ. ಮಾಧ್ಯಮದವರ ಜತೆ ಮಾತನಾಡಿದ ಅವರು, ಕುಟುಂಬ ರಾಜಕಾರಣದ ಆಧಾರದಲ್ಲಿ ರಾಜ್ಯಾಧ್ಯಕ್ಷರ ಆಯ್ಕೆ ಮಾಡುವುದಿದ್ದರೆ ಕಳೆದ ಮೂರು ತಿಂಗಳ ಹಿಂದೆಯೇ ವರಿಷ್ಠರು ಮಾಡುತ್ತಿದ್ದರು. ಇದು ಬಿಜೆಪಿ ರಾಜಕಾರಣವಲ್ಲ. ಯುವಕರಿಗೆ ಆದ್ಯತೆ ಕೊಡಬೇಕು ಎಂಬ ನಿಟ್ಟಿನಲ್ಲಿ ನನಗೆ ಅವಕಾಶವನ್ನು ನೀಡಿದ್ದಾರೆ …

Read More »