ಚಾಮರಾಜನಗರ: “ರಾಜ್ಯದಮುಖ್ಯಮಂತ್ರಿಗಳಲ್ಲಿ ಅತಿ ಹೆಚ್ಚು ಸುಳ್ಳು ಹೇಳುವ ಮುಖ್ಯಮಂತ್ರಿ ಎಂದರೆ ಅದು ಸಿದ್ದರಾಮಯ್ಯ” ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಎಂ ರಮೇಶ್ ಕಿಡಿಕಾರಿದರು. ಚಾಮರಾಜನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಹಿಂದೆ ಹೆಚ್ಚು ಸುಳ್ಳು ಹೇಳುವ ಮುಖ್ಯಮಂತ್ರಿ ಎಂದರೆ ವೀರಪ್ಪ ಮೊಯ್ಲಿ ಎಂದು ಹೇಳುತ್ತಿದ್ದರು, ಆದರೆ ಸಿದ್ದರಾಮಯ್ಯ ಅವರ ದುಪ್ಪಟ್ಟು ಸುಳ್ಳು ಹೇಳುತ್ತಾರೆ” ಎಂದು ಟೀಕಿಸಿದರು. “ಪ್ರಜಾಪ್ರಭುತ್ವದ ಬಗ್ಗೆ, ರಾಜ್ಯ ಸರ್ಕಾರದ ನಿಯಮಗಳ ಬಗ್ಗೆ ಅವರು ಬಹಳಷ್ಟು ಮಾತನಾಡುತ್ತಾರೆ. ಅವರ …
Read More »ಅವಳಿ ನಗರಕ್ಕೆ ಬಂತು “ಭಾರತ್ ಬ್ರಾಂಡ್” : ಕಡಿಮೆ ಬೆಲೆಯಲ್ಲಿ ಪದಾರ್ಥಗಳ ವಿತರಣೆ
ಹುಬ್ಬಳ್ಳಿ : ದೀಪಾವಳಿಯ ಉಡುಗೊರೆಯಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶಾದ್ಯಂತ “ಭಾರತ್ ಬ್ರಾಂಡ್” ಬೇಳೆ, ಈರುಳ್ಳಿಯಂತಹ ಪದಾರ್ಥಗಳನ್ನು ಮನೆ ಮನೆಗೆ ತಲುಪಿಸುವ ಹೊಸ ಯೋಜನೆ ಹಾಕಿಕೊಂಡಿದೆ. ಹುಬ್ಬಳ್ಳಿ ಧಾರವಾಡದಲ್ಲಿ ಕಡಿಮೆ ಬೆಲೆಯಲ್ಲಿ ಈರುಳ್ಳಿ ತಲುಪಿಸುವ ಉದ್ದೇಶದಿಂದ ಒಟ್ಟು ಮೂರು ಸಂಚಾರಿ ವಾಹನಗಳಲ್ಲಿ ಜನರಿಗೆ ಅತ್ಯಂತ ಕಡಿಮೆ ದರದಲ್ಲಿ ಪದಾರ್ಥಗಳನ್ನು ಮಾರಾಟ ಮಾಡಲಾಗುತ್ತಿದೆ. ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆ ₹80 ಇದ್ದರೆ, ಭಾರತ್ ಬ್ರಾಂಡ್ ಸಂಚಾರಿ ವಾಹನದಲ್ಲಿ ₹25ಗೆ …
Read More »ಬೆಳಗಾವಿ ಪೌರಕಾರ್ಮಿಕರ ನೌಕರಿ ಕಾಯಮಾತಿ 15 ವರ್ಷಗಳಿಂದ ಕಾಯಮಾತಿ ಆದೇಶ ಸಿಕ್ಕಿಲ್ಲ.
ಬೆಳಗಾವಿ:ಬೆಳಗಾವಿ ನಗರವನ್ನು ಸ್ವಚ್ಛ ಮತ್ತು ಸುಂದರವಾಗಿಡಲು ತಮ್ಮ ಜೀವನವನ್ನು ಮುಡಿಪಾಗಿಡುವ ಪೌರಕಾರ್ಮಿಕರಿಗೆ ಇನ್ನೂ ನೌಕರಿ ಕಾಯಮಾತಿ ಆದೇಶ ಸಿಕ್ಕಿಲ್ಲ. 2008ರಿಂದ ಮಹಾನಗರ ಪಾಲಿಕೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಪೌರ ಕಾರ್ಮಿಕರನ್ನು ಕಾಯಂಗೊಳಿಸಬೇಕೆಂದು ಸರ್ಕಾರದ ಆದೇಶವಿದ್ದರೂ ನೇಮಕ ಮಾಡದೇ ಜಿಲ್ಲಾಡಳಿತ ಮೀನಮೇಷ ಎಣಿಸುತ್ತಿದೆ. ಇನ್ನು ಅಧಿವೇಶನದೊಳಗೆ ಕಾರ್ಮಿಕರ ನೌಕರಿ ಕಾಯಂಗೊಳಿಸುವ ವಿಶ್ವಾಸವನ್ನು ಜಿಲ್ಲಾಧಿಕಾರಿ ಇಂದು ವ್ಯಕ್ತಪಡಿಸಿದ್ದು, ಪೌರ ಕಾರ್ಮಿಕರ ಮೊಗದಲ್ಲಿ ಮಂದಹಾಸ ಮೂಡಿದೆ. ಹೌದು.. ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಪೌರ ಕಾರ್ಮಿಕರ ಕಾಯಮಾತಿ …
Read More »ಬೆಳಗಾವಿಯಲ್ಲಿ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಮುಗಿಬಿದ್ದ ಕೇಸರಿ ಪಡೆ
ಬೆಳಗಾವಿ : ಚಳಿಗಾಲ ಅಧಿವೇಶನಕ್ಕಿಂತ ಮುಂಚೆ ತುಘಲಕ್ ದರ್ಬಾರ್ನ ರೈತ ವಿರೋಧಿ ಆದೇಶಗಳನ್ನು ವಾಪಸ್ ಪಡೆದು ಮುಖ್ಯಮಂತ್ರಿಗಳು ಬೆಳಗಾವಿಗೆ ಬರಬೇಕು. ಇಲ್ಲದಿದ್ದರೆ ರೈತರು ಅಧಿವೇಶನದ ವೇಳೆ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಬೇಕಾಗುತ್ತದೆ. ಅಲ್ಲದೇ ವಿದ್ಯುತ್ ಖಾತೆ ಬಗ್ಗೆ ಜ್ಞಾನವಿಲ್ಲದ ಕೆ. ಜೆ ಜಾರ್ಜ್ ಅವರನ್ನು ಸಂಪುಟದಿಂದ ಕೈ ಬಿಡುವಂತೆ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಆಗ್ರಹಿಸಿದರು. ರಾಜ್ಯ ಸರ್ಕಾರ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಬೆಳಗಾವಿಯಲ್ಲಿ ಬಿಜೆಪಿ …
Read More »ಕೆಇಎ ಪರೀಕ್ಷಾ ಹಗರಣದ ಪ್ರಮುಖ ಆರೋಪಿ ಆರ್‌ಡಿ ಪಾಟೀಲ್ನನ್ನು ಕಲಬುರಗಿ ಜಿಲ್ಲೆಯ ವಿಶೇಷ ಪೊಲೀಸ್ ತಂಡ ಮಹಾರಾಷ್ಟ್ರ ಗಡಿಯಲ್ಲಿ ಬಂಧಿಸಿದ್ದಾರೆ.
ಕಲಬುರಗಿ: ಕೆಇಎ ನಡೆಸಿರೋ ಎಫ್‌ಡಿಎ ಪರೀಕ್ಷೆಯಲ್ಲಿ ಅಕ್ರಮ ಎಸೆಗಿರುವ ಆರೋಪ ಎದುರಿಸುತ್ತಿರುವ ಪ್ರಕರಣದ ಕಿಂಗ್‌ಪಿನ್ ಆರ್‌ಡಿ ಪಾಟೀಲ್ನ್ನು ಕೊನೆಗೂ ಬಂಧನ ಮಾಡಲಾಗಿದೆ. ಮಹಾರಾಷ್ಟ್ರ ಗಡಿಯಲ್ಲಿ ಕಲಬುರಗಿ ಜಿಲ್ಲೆಯ ವಿಶೇಷ ಪೊಲೀಸ್ ತಂಡದಿಂದ ಕಿಂಗ್‌ಪಿನ್ ಆರ್‌ಡಿ ಪಾಟೀಲ್ ನನ್ನು ಅರೆಸ್ಟ್ ಮಾಡಲಾಗಿದೆ. ಆರ್‌ಡಿಪಿಯನ್ನು ಬಂಧಿಸಿದ್ದು, ಕಲಬುರಗಿಗೆ ಕರೆತರುವ ಸಾಧ್ಯತೆ ಇದೆ. ಕಳೆದ 12 ದಿನಗಳಿಂದ ತಲೆಮರೆಸಿಕೊಂಡಿದ್ದ ಕೆಇಎ ಪರೀಕ್ಷಾ ಹಗರಣದ ಪ್ರಮುಖ ಆರೋಪಿ ಆರ್‌ಡಿ ಪಾಟೀಲ್, ನವೆಂಬರ್ 6 ರಂದು ಕಲಬುರಗಿ ನಗರದ …
Read More »ಹಾಡಹಗಲೇ ರಸ್ತೆಯಲ್ಲಿ ಮಹಿಳೆ ಅಟ್ಟಾಡಿಸಿ ಹಿಗ್ಗಾಮುಗ್ಗಾ ಥಳಿತ
ಹುಬ್ಬಳ್ಳಿ: ಹಾಡಹಗಲೇ ಮಹಿಳೆಯೊಬ್ಬಳನ್ನು ನಡುರಸ್ತೆಯಲ್ಲಿ ಅಟ್ಟಾಡಿಸಿಕೊಂಡು ಇಟ್ಟಿಗೆ, ಚಪ್ಪಲಿಯಿಂದ ಥಳಿಸಿದ ಘಟನೆ ವಿದ್ಯಾನಗರದ ಕಿಮ್ಸ್ ಆಸ್ಪತ್ರೆಯ ಹಿಂಭಾಗದಲ್ಲಿ ಗುರುವಾರ ನಡೆದಿದೆ. ಹಲ್ಲೆಗೊಳಗಾದ ಮಹಿಳೆ ಸುಮಾರು 10 ವರ್ಷಗಳಿಂದ ಕಿಮ್ಸ್ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಮಹಿಳೆ ಮೇಲೆ ವ್ಯಕ್ತಿ ಸೇರಿದಂತೆ ಕೆಲ ಮಹಿಳೆಯರು ಹಲ್ಲೆ ನಡೆಸಿದ್ದು, ಕಾರಣ ಏನೆಂಬುದು ತಿಳಿದು ಬಂದಿಲ್ಲ. ವ್ಯಕ್ತಿಯ ಕುಟುಂಬಸ್ಥರೂ ಸೇರಿಕೊಂಡು ಮಹಿಳೆಗೆ ನಡುರಸ್ತೆಯಲ್ಲಿಯೇ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಈ ವೇಳೆ ಮಹಿಳೆಯ ಸಹೋದರಿ ಮಧ್ಯ …
Read More »ಹೊಸ ಸಂಸತ್ ಭವನದಲ್ಲಿ ಡಿಸೆಂಬರ್ 4 ರಿಂದ ಚಳಿಗಾಲದ ಅಧಿವೇಶನ
ನವದೆಹಲಿ: ಪಂಚರಾಜ್ಯ ಚುನಾವಣೆ ಹಿನ್ನೆಲೆಯಲ್ಲಿ ಮುಂದೂಡಿಕೆಯಾಗಿದ್ದ ಚಳಿಗಾಲದ ಸಂಸತ್ ಅಧಿವೇಶನ ಡಿಸೆಂಬರ್ 4 ರಿಂದ ಆರಂಭವಾಗಲಿದೆ. ಡಿಸೆಂಬರ್ 22 ರವರೆಗೆ ಅಂದರೆ 19 ದಿನಗಳ ಕಾಲ ನಡೆಯಲಿದೆ. ಇಷ್ಟು ದಿನಗಳಲ್ಲಿ 15 ಕಲಾಪಗಳನ್ನು ನಡೆಸಲು ಕೇಂದ್ರ ಸರ್ಕಾರ ಯೋಜಿಸಿದೆ. ಈ ಬಗ್ಗೆ ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ (ಟ್ವಿಟರ್) ಮಾಹಿತಿ ಹಂಚಿಕೊಂಡಿರುವ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು, ಅಮೃತ ಕಾಲದ ಅಧಿವೇಶನದಲ್ಲಿ ಸರ್ಕಾರದ ಕಾರ್ಯಗಳು …
Read More »ಅಕಾಲಿಕ ಮಳೆಗೆ ಭತ್ತದ ಬೆಳೆ ಹಾನಿ ಅಂದಾಜು 70 ಕೋಟಿ ರೂ ಹಾನಿ
ಗಂಗಾವತಿ (ಕೊಪ್ಪಳ) : ಬುಧವಾರ ರಾತ್ರಿಯಿಂದ ಗುರುವಾರ ಬೆಳಗಿನ ಜಾವದವರೆಗೂ ಸುರಿದ ಅಕಾಲಿಕ ಮಳೆ ಹಾಗೂ ಬೀಸಿದ ಭಾರಿ ಗಾಳಿಗೆ ಗಂಗಾವತಿ ಮತ್ತು ಕಾರಟಗಿ ತಾಲೂಕಿನಲ್ಲಿ 3500ಕ್ಕೂ ಅಧಿಕ ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿದ್ದ ಭತ್ತದ ಬೆಳೆ ಹಾನಿಯಾಗಿದೆ. ಕೊಯ್ಲಿನ ಹಂತಕ್ಕೆ ಬಂದಿದ್ದ ಸೋನಾಮಸೂರಿ ತಳಿಯ ಭತ್ತದ ಬೆಳೆ ಹೆಚ್ಚಿನ ಹಾನಿಯಾಗಿದೆ. ಕಾರಟಗಿ ತಾಲೂಕು ಒಂದರಲ್ಲಿಯೇ ಅತಿಹೆಚ್ಚು ಹಾನಿಯಾಗಿದ್ದು, ಸುಮಾರು ಮೂರು ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಹಾನಿಯಾಗಿದೆ. ಗಂಗಾವತಿ ತಾಲೂಕಿನಲ್ಲಿ …
Read More »ಬರ ಪರಿಹಾರದ ಬಗ್ಗೆ ಕೇಂದ್ರದ ಮಲತಾಯಿ ಧೋರಣೆಗೆ ಸಚಿವ ಸಂಪುಟ ಸಭೆಯಲ್ಲಿ ತೀವ್ರ ಕಳವಳ: ಹೆಚ್ ಕೆ ಪಾಟೀಲ್
ಬೆಂಗಳೂರು: ಬರ ಪರಿಹಾರಕ್ಕೆ ಕೇಂದ್ರದಿಂದ ಸ್ಪಂದಿಸದೇ ಇರುವ ಬಗ್ಗೆ ಸಚಿವ ಸಂಪುಟದಲ್ಲಿ ಕಳವಳ ವ್ಯಕ್ತವಾಗಿದ್ದು, ಸಚಿವರು ಎಲ್ಲ ತಾಲೂಕು, ಜಿಲ್ಲಾ ಕೇಂದ್ರಗಳಿಗೆ ತೆರಳಿ ಬರ ಪರಿಸ್ಥಿತಿ, ನಿರ್ವಹಣೆ ಬಗ್ಗೆ ಪರಿಶೀಲಿಸುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಸಚಿವ ಸಂಪುಟ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಸಚಿವ ಹೆಚ್ ಕೆ ಪಾಟೀಲ್, ಇಂದಿನವರೆಗೆ ಕೇಂದ್ರ ಸರ್ಕಾರದಿಂದ ನಯಾ ಪೈಸೆ ಬರ ಪರಿಹಾರ ಬಂದಿಲ್ಲ. ಸಂಪುಟ ಸಭೆಯಲ್ಲಿ ಬರದ ಬಗ್ಗೆ ಸುದೀರ್ಘ …
Read More »ಸತೀಶ್ ಜಾರಕಿಹೊಳಿ ಹೆಗಲಿಗೆ ಕೈ ಹಾಕಿಕೊಂಡು ಸಂಪುಟ ಸಭೆಗೆ ಬಂದ ಡಿಕೆಶಿ
ಬೆಂಗಳೂರು: ಗುರುವಾರ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಗೆ ಕೆಂಗಲ್ ಗೇಟ್ ಮೂಲಕ ಆಗಮಿಸಿದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸಚಿವರಾದ ಕೆ.ಎನ್.ರಾಜಣ್ಣ ಹಾಗೂ ಸತೀಶ್ ಜಾರಕಿಹೊಳಿ ಹೆಗಲಿಗೆ ಕೈ ಹಾಕುತ್ತಾ ಬಂದು ಗಮನ ಸೆಳೆದರು. ಇತ್ತೀಚೆಗೆ ಕೆ.ಎನ್.ರಾಜಣ್ಣ ಲೋಕಸಭೆ ಚುನಾವಣೆಯ ದೃಷ್ಟಿಯಿಂದ ರಾಜ್ಯದಲ್ಲಿ ಮೂರು ಡಿಸಿಎಂ ಆಗಬೇಕು ಎಂದು ಹೈಕಮಾಂಡ್ ನಾಯಕರನ್ನು ಒತ್ತಾಯಿಸಿದ್ದರು. ಐದು ವರ್ಷ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಬೇಕೆಂಬ ಅಪೇಕ್ಷೆ ಇದೆ ಎಂದಿದ್ದರು. ಸಿಎಂ ಸ್ಥಾನಕ್ಕೆ ಡಾ.ಜಿ.ಪರಮೇಶ್ವರ್ …
Read More »