ಬೆಂಗಳೂರು: ಶಾಸಕ ಮುನಿರತ್ನ ವಿರುದ್ಧ ಕಾಂಗ್ರೆಸ್ ಸರ್ಕಾರ ಸೇಡಿನ ರಾಜಕಾರಣ ಮಾಡುತ್ತಿದೆ. ಖಂಡಿಸಿ ಹಾಗು ಸರ್ಕಾರದ ಆಡಳಿತ ವೈಫಲ್ಯ, ಭ್ರಷ್ಟಾಚಾರ ವಿರೋಧಿಸಿ ತಿಂಗಳಾಂತ್ಯಕ್ಕೆ ಮೂರು ದಿನ ಸರ್ಕಾರದ ವಿರುದ್ಧ ಧರಣಿ ನಡೆಸಲಿದ್ದು ಬೆಳಗಾವಿ ಅಧಿವೇಶನದಲ್ಲಿಯೂ ಈ ವಿಚಾರವನ್ನು ಇರಿಸಿಕೊಂಡು ಬಿಜೆಪಿ ಹೋರಾಟ ನಡೆಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರಕಟಿಸಿದ್ದಾರೆ. ಆರ್.ಆರ್. ನಗರದಲ್ಲಿ ಅರ್ಧಕ್ಕೆ ನಿಂತಿರುವ ಕಾಮಗಾರಿಗಳ ವೀಕ್ಷಣೆ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುನಿರತ್ನ ವಿರುದ್ಧ ಈ ರೀತಿಯ …
Read More »ಒಂಟಿ ಮಹಿಳೆ ರಕ್ಷಣೆ, ಸಾಂತ್ವನ ಕೇಂದ್ರದಲ್ಲಿ ಆಶ್ರಯ
ಕೊಪ್ಪಳ : ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಮಧ್ಯರಾತ್ರಿ ಒಂಟಿ ಮಹಿಳೆಯೊಬ್ಬರು ಸಹಾಯ ಕೋರಿ ನಿಂತಿದ್ದು, ಸ್ಥಳೀಯರು ಮಹಿಳೆಯನ್ನು ರಕ್ಷಣೆ ಮಾಡಿ ಸಾಂತ್ವನ ಕೇಂದ್ರಕ್ಕೆ ಒಪ್ಪಿಸಿದ ಘಟನೆ ಕೊಪ್ಪಳ ಜಿಲ್ಲೆ ಕುಷ್ಟಗಿ ಮಾರುತಿ ವೃತ್ತದಲ್ಲಿ ನ. 8ರ ಬುಧವಾರ ತಡರಾತ್ರಿ ನಡೆದಿದೆ. ಟ್ರಕ್ ಚಾಲಕನೊಬ್ಬ ಮಧ್ಯ ವಯಸ್ಕ ಮಹಿಳೆಯನ್ನ ಶೌಚಕ್ಕೆ ಇಳಿಸಿ, ಪುನಃ ಹತ್ತಿಸಿಕೊಳ್ಳದೇ ಆಕೆಯನ್ನು ಬಿಟ್ಟು ಹೋಗಿದ್ದಾನೆ. ಮಹಿಳೆಯನ್ನು ವಿಚಾರಿಸಿದಾಗ ಓಡಿಶಾ ಮೂಲದ ಮಹಿಳೆ ಸಂಗೀತಾ ಎಂಬುವುದನ್ನು ಹೇಳಿಕೊಂಡಿದ್ದು, ಆಕೆ, ಪತಿಯೊಂದಿಗೆ …
Read More »ಸಚಿವ ಸತೀಶ್ ಜಾರಕಿಹೊಳಿ ಭೇಟಿ ಬಳಿಕ ಸಂಸದ ಡಿ ಕೆ ಸುರೇಶ್ ಹೇಳಿದ್ದೇನು?
ಬೆಂಗಳೂರು: ಸಂಸದ ಡಿ ಕೆ ಸುರೇಶ್ ಅವರು ಇಂದು ಸಚಿವ ಸತೀಶ್ ಜಾರಕಿಹೊಳಿ ನಿವಾಸಕ್ಕೆ ತೆರಳಿ ಅವರನ್ನು ಭೇಟಿ ಮಾಡಿದ್ದಾರೆ. ಮೊನ್ನೆಯಷ್ಟೇ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹಠಾತ್ ಆಗಿ ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾಗಿ ಅಚ್ಚರಿ ಮೂಡಿಸಿದ್ದರು. ಇದೀಗ ಸಂಸದ ಸುರೇಶ್ ಅವರ ಭೇಟಿ ರಾಜಕೀಯದಲ್ಲಿ ಕುತೂಹಲ ಮೂಡಿಸಿದೆ. ಈ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿರುವ ಅವರು, ನಮ್ಮ ಕಾರ್ಯಾಧ್ಯಕ್ಷರ ಜೊತೆಗೆ ಮಹತ್ತರವಾದ ಖಾತೆ ಹೊಂದಿದ್ದಾರೆ. ಮಳೆಯಿಂದ ರಸ್ತೆಗೆ ಗುಂಡಿಗಳು ಬಿದ್ದು, …
Read More »ಕಾಂತರಾಜು ವರದಿಯಿಂದ ಯಾವುದೇ ಸಮುದಾಯಕ್ಕೆ ಅನ್ಯಾಯ ಆಗಲ್ಲ: ಸಚಿವ ತಂಗಡಗಿ
ಬೆಂಗಳೂರು:ರಾಜ್ಯ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಎಚ್ ಕಾಂತರಾಜು ನೇತೃತ್ವದ ಸಮೀಕ್ಷಾ ವರದಿಯಿಂದ ಯಾವುದೇ ಸಮುದಾಯಕ್ಕೆ ಅನ್ಯಾಯವಾಗುವುದಿಲ್ಲ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇನ್ನು ಕಾಂತರಾಜು ವರದಿಯನ್ನು ಜಾತಿ ಗಣತಿ ಎಂದು ಕರೆಯಲಾಗುತ್ತಿದೆ. ಮೂಲವಾಗಿ ಇದು ಜಾತಿಗಣತಿ ಸಮೀಕ್ಷೆ ಅಲ್ಲವೇ, ಅಲ್ಲ. ಇದು ಶೈಕ್ಷಣಿಕ, ಆರ್ಥಿಕ ಹಾಗೂ ಸಾಮಾಜಿಕವಾಗಿ ಸರಿಪಡಿಸುವ ಹಿನ್ನೆಲೆಯಲ್ಲಿ ವರದಿ ಸಿದ್ಧಪಡಿಸಲಾಗಿದೆ. ಅದನ್ನು ಹೊರತುಪಡಿಸಿ ಜಾತಿ …
Read More »ಮಂಗಳೂರು: ಬ್ಯಾಂಕ್ ಅಧಿಕಾರಿ ಆತ್ಮಹತ್ಯೆ, ಕಾರಣ ನಿಗೂಢ
ಮಂಗಳೂರು: ಬ್ಯಾಂಕ್ನ ಹಿರಿಯ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ಗುರುವಾರ ನಡೆದಿದೆ. ಬ್ಯಾಂಕ್ ಅಧಿಕಾರಿ ವಾದಿರಾಜ್(55) ಆತ್ಮಹತ್ಯೆ ಮಾಡಿಕೊಂಡವರು. ವಾದಿರಾಜ್ ಅವರು ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮನೆಯವರು ಬಂದು ನೋಡಿದಾಗ ಅವರು ರಕ್ತದ ಮಡುವಿನಲ್ಲಿ ಬಿದ್ದಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಮೃತಪಟ್ಟಿರುವುದಾಗಿ ಸಂಬಂಧಿಕರು ತಿಳಿಸಿದ್ದಾರೆ. ವಾದಿರಾಜ್ ಅವರಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದು, ಬೆಳಗ್ಗೆ ಮಕ್ಕಳು ಕಾಲೇಜಿಗೆ ತೆರಳಿದ್ದರು. ಪತ್ನಿ ಕೂಡಾ …
Read More »ಕಿಯೋನಿಕ್ಸ್ನಲ್ಲಿ 500 ಕೋಟಿ ರೂ ಅವ್ಯವಹಾರ:ಸಚಿವ ಪ್ರಿಯಾಂಕ್ ಖರ್ಗೆ
ಬೆಂಗಳೂರು : ಬಿಜೆಪಿಯವರು ಮೊದಲೇ ಮಾತನಾಡಿದ್ದರೆ ಪ್ರತಿಪಕ್ಷದ ನಾಯಕರು ಸಿಗುತ್ತಿದ್ದರೇನೋ, ಹಲವು ನಾಯಕರು ನನ್ನ ರಾಜೀನಾಮೆಗೆ ಆಗ್ರಹಿಸುತ್ತಿದ್ದಾರೆ. ಅವರ ಮಾತು ಕೇಳಿ ಸಂತೋಷವಾಗಿದೆ. ಅವರು ನನಗೆ ಖೆಡ್ಡಾ ತೋಡಲು ಹೊರಟಿದ್ದಾರೆ. ಆದರೆ, ಅವರೇ ಖೆಡ್ಡಾಕ್ಕೆ ಬೀಳುತ್ತಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಲೇವಡಿ ಮಾಡಿದ್ದಾರೆ. ವಿಧಾನಸೌಧದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅವರೇ ತಿಂದು ತೇಗಿದವರು. ನನ್ನ ರಾಜೀನಾಮೆಗೆ ಆಗ್ರಹಿಸುತ್ತಿದ್ದಾರೆ. ಬಿಜೆಪಿಯವರದ್ದು ಸುಳ್ಳಿನ …
Read More »ನಾನೊಬ್ಬ ಸ್ವಾಭಿಮಾನಿ ರಾಜಕಾರಣಿ, ಸ್ವಾರ್ಥ ರಾಜಕಾರಣಿ ನಾನಲ್ಲ:D.V.S.
ಮಂಡ್ಯ: ನಾನೊಬ್ಬ ಸ್ವಾಭಿಮಾನಿ ರಾಜಕಾರಣಿ, ಸ್ವಾರ್ಥ ರಾಜಕಾರಣಿ ನಾನಲ್ಲ. ಸಾಯುವವರೆಗೂ ಹೆಣದ ಮೇಲೆ ಫ್ಲಾಗ್ ಹಾಕುವವರಗೆ ರಾಜಕಾರಣದಲ್ಲಿರಬೇಕು ಎನ್ನುವವರ ಸಂಖ್ಯೆ ಹೆಚ್ಚಾಗ್ತಿದೆ. ನನ್ನ ಚುನಾವಣಾ ರಾಜಕೀಯ ನಿವೃತ್ತಿ ಸಯಂಪ್ರೇರಿತ ನಿರ್ಧಾರ ಯಾರ ಒತ್ತಡವು ಇಲ್ಲ ಎಂದು ಮಾಜಿ ಸಿಎಂ ಡಿ.ವಿ ಸದಾನಂದಗೌಡ ತಿಳಿಸಿದ್ದಾರೆ. ಬರ ಅಧ್ಯಯನ ಮಾಡಲು ಮಂಡ್ಯಕ್ಕೆ ಆಗಮಿಸಿದ ವೇಳೆ ಮದ್ದೂರಿನಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಮನುಷ್ಯನಿಗೆ ಕೆಲವು ಇತಿಮಿತಿ ಇರಬೇಕು. ಮೂವತ್ತು ವರ್ಷದಿಂದ ಎಲ್ಲ ಸ್ಥಾನಮಾನ …
Read More »ಹುಬ್ಬಳ್ಳಿ ಧಾರವಾಡ ಅವಳಿ ನಗರ ಧೂಳಿನಿಂದ ಮುಕ್ತ ಮಾಡಲು ಮಹಾನಗರ ಪಾಲಿಕೆ ದಿಟ್ಟ ಹೆಜ್ಜೆ..!
ಹುಬ್ಬಳ್ಳಿ:ರಾಜ್ಯದ ಎರಡನೇ ಅತಿದೊಡ್ಡ ಮಹಾನಗರ ಪಾಲಿಕೆ ಎಂಬ ಹೆಗ್ಗಳಿಕೆ ಗಳಿಸಿರುವ ಹುಬ್ಬಳ್ಳಿ- ಧಾರವಾಡ ಅವಳಿ ನಗರ ಬೆಳೆಯುತ್ತಲೇ ಇದೆ. ಆದ್ರೆ ನಗರದಲ್ಲಿ ಉಸಿರಾಡಲು ಸ್ವಚ್ಛ ಗಾಳಿ ಸಿಗದಂತಾಗಿದೆ. ಅವಳಿ ನಗರದಲ್ಲಿ ಧೂಳಿನ ಸಮಸ್ಯೆಯಿಂದ ಜನರು ಹೈರಾಣ ಆಗಿದ್ದಾರೆ. ಅವಳಿ ನಗರದಲ್ಲಿ ಧೂಳು ಹೆಚ್ಚಾಗಿರುವ ಹಿನ್ನೆಲೆ ಹುಬ್ಬಳ್ಳಿ ಧಾರವಾಡ ಜನರಿಗೆ ವಿವಿಧ ಅಲರ್ಜಿಗಳು ಕಾಡುತ್ತಿವೆ. ಹೀಗಾಗಿ ಅವಳಿನಗರ ಧೂಳುಮುಕ್ತ ಮಾಡಲು ಹಾಗೂ ಧೂಳು ತೆಗೆಯಲು ಈಗ ಪಾಲಿಕೆ ನಿರ್ಧಾರವೊಂದನ್ನು ತೆಗೆದುಕೊಂಡಿದೆ. ಧೂಳು …
Read More »ಜಾಮೀನು ರಹಿತ ವಾರಂಟ್ನಿಂದ ರಣ್ದೀಪ್ ಸುರ್ಜೇವಾಲಾಗೆ 5 ವಾರ ಬಿಗ್ ರಿಲೀಫ್
ನವದೆಹಲಿ : ಕಾಂಗ್ರೆಸ್ ವಕ್ತಾರ ರಣ್ದೀಪ್ ಸುರ್ಜೇವಾಲಾ ಅವರಿಗೆ ಸುಪ್ರೀಂ ಕೋರ್ಟ್ ಇಂದು ರಿಲೀಫ್ ನೀಡಿದೆ. 23 ವರ್ಷಗಳ ಹಿಂದಿನ ಪ್ರಕರಣದಲ್ಲಿ ಅವರ ವಿರುದ್ಧ ಜಾರಿಯಾಗಿದ್ದ ಜಾಮೀನು ರಹಿತ ವಾರಂಟ್ನಿಂದ ಸರ್ವೋಚ್ಛ ನ್ಯಾಯಾಲಯವು ಐದು ವಾರಗಳ ಕಾಲ ರಕ್ಷಣೆ ನೀಡಿದೆ. ವಾರಾಣಸಿಯ ವಿಭಾಗೀಯ ಆಯುಕ್ತರ ನ್ಯಾಯಾಲಯ ಮತ್ತು ಕಚೇರಿ ಆವರಣದಲ್ಲಿ ನಡೆದಿದ್ದ ಹಿಂಸಾತ್ಮಕ ಪ್ರತಿಭಟನೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ನವೆಂಬರ್ 7ರಂದು ವಾರಾಣಸಿಯ ವಿಶೇಷ ನ್ಯಾಯಾಧೀಶರು (ಸಂಸದರು, ಶಾಸಕರ ಪ್ರಕರಣಗಳ ನ್ಯಾಯಾಲಯ) ಜಾಮೀನು …
Read More »21 ದಿನಕ್ಕೆ 21 ಲಕ್ಷ ರೂ ಕರೆಂಟ್ ಬಿಲ್..
ಮೈಸೂರು: ನಾಡ ಹಬ್ಬ ಮೈಸೂರು ದಸರಾ ನಿಮಿತ್ತ ಮೈಸೂರಿನಲ್ಲಿ ಅಳವಡಿಸಲಾಗಿದ್ದ ವಿದ್ಯುತ್ ದೀಪಾಲಂಕಾರದಿಂದ ಇಡೀ ಮೈಸೂರನ್ನು ಝಗಮಗಿಸುವಂತೆ ಮಾಡಲಾಗಿತ್ತು. ಇದು ದಿನಕ್ಕೆ ಒಂದು ಲಕ್ಷ ರೂಪಾಯಿಯಂತೆ ಕರೆಂಟ್ ಬಿಲ್ ಬಂದಿದ್ದು. ಒಟ್ಟು 21 ದಿನಕ್ಕೆ 21 ಲಕ್ಷ ರೂಪಾಯಿ ವಿದ್ಯುತ್ ವೆಚ್ಚವಾಗಿದೆ. ಇದು ಎಲ್ಲಾ ರಸ್ತೆಗಳು, ವೃತ್ತಗಳು, ಹಲವು ಕಲಾಕೃತಿಗಳ ದೀಪಾಲಂಕಾರ ಸೇರಿದಂತೆ ನಗರದ ದೀಪಾಲಂಕಾರಕ್ಕೆ ತಗುಲಿದೆ ಒಟ್ಟು ಖರ್ಚಾಗಿದೆ. ಈ ಬಾರಿಯ ದಸರಾ ದೀಪಾಲಂಕಾರಕ್ಕೆ ಒಟ್ಟು 1.45 ಲಕ್ಷ ಯುನಿಟ್ …
Read More »