ಚಿತ್ರದುರ್ಗ: ಶಸ್ತ್ರ ಚಿಕಿತ್ಸೆಗಾಗಿ ಚಿತ್ರದುರ್ಗದ ಸರ್ಕಾರಿ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದಂತ ರೋಗಿಯೊಬ್ಬರಿಗೆ ಜನರಲ್ ಸರ್ಜನ್ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಕೂಡ ಆಗಿತ್ತು. ಈ ಹಿನ್ನಲೆಯಲ್ಲಿ ಚಿತ್ರದುರ್ಗ ಜಿಲ್ಲಾಸ್ಪತ್ರೆಯ ಜನರಲ್ ಸರ್ಜನ್ ಡಾ.ಸಾಲಿ ಮಂಜಪ್ಪ ಅವರನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಅದರಲ್ಲಿ ಚಂದ್ರಶೇಖರ್ ಬಿನ್ ಕೃಷ್ಣಪ್ಪ ರವರು ಜಿಲ್ಲಾ ಆಸ್ಪತ್ರೆ, ಚಿತ್ರದುರ್ಗ …
Read More »BJP ಕರ್ನಾಟಕ ‘ಭ್ರಷ್ಟ ರಾಜ್ಯ’ ಎಂದು ಬಿಂಬಿಸಲು ಮುಂದಾಗಿದೆ: ನಿರ್ಮಲಾ ವಿರುದ್ಧ ಸಿಎಂ ಕಿಡಿ
ಮೈಸೂರು: ಕೇಂದ್ರ ಬಜೆಟ್‌ನಲ್ಲಿ ರಾಜ್ಯಕ್ಕೆ ‘ಅನ್ಯಾಯ’ ಎಸಗಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ನಮ್ಮ ವಿರುದ್ಧ “ಸುಳ್ಳು” ಆರೋಪಗಳನ್ನು ಮಾಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಸೋಮವಾರ ಕಿಡಿ ಕಾರಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಅನುದಾನ ಹಂಚಿಕೆ ಕುರಿತು ಸಾಕಷ್ಟು ತಪ್ಪು ಮಾಹಿತಿಗಳನ್ನು ಹರಡಲಾಗುತ್ತಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿಕೆ ನೀಡಿರುವ ಕುರಿತು ಪ್ರತಿಕ್ರಿಯಿಸಿದರು. ‘ಕಾಂಗ್ರೆಸ್ ಆಡಳಿತವಿರುವ ಕರ್ನಾಟಕವನ್ನು ‘ಭ್ರಷ್ಟ ರಾಜ್ಯ’ ಎಂದು …
Read More »ಮಳೆಹಾನಿ ಸಂತ್ರಸ್ತರಿಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ ನೆರೆ ಪರಿಹಾರಕ್ಕೆ 777 ಕೋಟಿ ಬಿಡುಗಡೆ
ಬೆಂಗಳೂರು: ರಾಜ್ಯದಲ್ಲಿ ನೆರೆ ಪರಿಹಾರ ಹಾಗೂ ಇತರೆ ಕಾರ್ಯಕ್ರಮಗಳಿಗೆ ಒಟ್ಟು 777 ಕೋಟಿ ಬಿಡುಗಡೆ ಮಾಡಲಾಗಿದೆ. ಹಾಸನ ಜಿಲ್ಲೆಗೆ 23 ಕೋಟಿ ನೀಡಲಾಗಿದೆ ಅಂತ ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಸುರಿದಂತ ಭಾರೀ ಮಳೆಯಿಂದಾಗಿ ಹಲವೆಡೆ ಮನೆಗಳು ಬಿದ್ದು ಹೋಗಿದ್ದಾವೆ. ನೀರು ಬೆಳೆಯ ಮೇಲೆ ನುಗ್ಗಿದ ಪರಿಣಾಮ, ಬೆಳೆಹಾನಿ ಕೂಡ ಆಗಿದೆ. ಈ ರೈತರಿಗೆ ನೆರವಾಗುವ ಸಲುವಾಗಿ ನೆರೆ ಪರಿಹಾರವಾಗಿ ರಾಜ್ಯ ಸರ್ಕಾರದಿಂದ …
Read More »ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ ಶಿಪ್
ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆ ಏನು? ಅರ್ಜಿ ಸಲ್ಲಿಕೆ ಹೇಗೆ? ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ. ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?: * ಪರಿಶಿಷ್ಟ ಜಾತಿ ವರ್ಗಕ್ಕೆ ಸೇರಿದಂತಹ ವಿದ್ಯಾರ್ಥಿಗಳು ಹಾಗೂ ಪರಿಶಿಷ್ಟ ಪಂಗಡ ವರ್ಗಕ್ಕೆ ಸೇರಿದಂತಹ ವಿದ್ಯಾರ್ಥಿಗಳು ಅರ್ಹರು. * ಮೊದಲನೆಯ ಪ್ರಯತ್ನದಲ್ಲಿಯೆ ಪ್ರಥಮ ದರ್ಜೆಯಲ್ಲಿ ಪಾಸ್ ಆಗಿರುವ ಅಭ್ಯರ್ಥಿಗಳು ಈ ವಿದ್ಯಾರ್ಥಿ ವೇತನಕ್ಕೆ …
Read More »ಅಬಕಾರಿ ನೀತಿ ಪ್ರಕರಣ: ಕೇಜ್ರಿವಾಲ್ ಸೇರಿ ಐವರ ವಿರುದ್ಧ ಆರೋಪಪಟ್ಟಿ ಸಲ್ಲಿಸಿದ CBI
ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣದ ತನಿಖೆಯನ್ನು ಪೂರ್ಣಗೊಳಿಸಿರುವ ಸಿಬಿಐ ಅಧಿಕಾರಿಗಳು, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹಾಗೂ ಎಎಪಿ ಶಾಸಕ ದುರ್ಗೇಶ್ ಪಾಠಕ್ ಸೇರಿದಂತೆ ಐವರ ವಿರುದ್ಧ ಅಂತಿಮ ದೋಷಾರೋಪ ಪಟ್ಟಿಯನ್ನು ಸೋಮವಾರ ಸಲ್ಲಿಸಿದ್ದಾರೆ. ದೆಹಲಿಯ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ತೆಲಂಗಾಣದ ವಿಧಾನ ಪರಿಷತ್ ಸದಸ್ಯೆ ಕೆ. ಕವಿತಾ ಹಾಗೂ 15 ಮಂದಿ ಇತರರ ವಿರುದ್ಧ ಸಿಬಿಐ ಅಧಿಕಾರಿಗಳು ಈ ಹಿಂದೆ ಒಂದು ಮುಖ್ಯ ದೋಷಾರೋಪ …
Read More »ಬೆಳಗಾವಿ: 41 ಸೇತುವೆಗಳು ಮುಳುಗಡೆ
ಬೆಳಗಾವಿ/ರಾಯಚೂರು: ರಾಜ್ಯದ ವಿವಿಧೆಡೆ ಭಾನುವಾರ ಮಳೆಯ ಅಬ್ಬರ ಕಡಿಮೆಯಾಗಿದೆ. ಆದರೆ ಮಹಾರಾಷ್ಟ್ರದ ಪಶ್ಚಿಮಘಟ್ಟ ಹಾಗೂ ಜಲಾನಯನ ಪ್ರದೇಶಗಳಲ್ಲಿ ಮಳೆ ಮುಂದುವರಿದಿದ್ದು, ಕೃಷ್ಣಾ ನದಿಯಲ್ಲಿ ಒಳಹರಿವು ಹೆಚ್ಚಿದೆ. ಬೆಳಗಾವಿ ಜಿಲ್ಲೆಯಲ್ಲಿ 41 ಸೇತುವೆಗಳು ಮುಳುಗಡೆಯಾಗಿವೆ. ರಾಯಚೂರು ಜಿಲ್ಲೆಯಲ್ಲಿ ಕೃಷ್ಣಾ ಹಾಗೂ ತುಂಗಭದ್ರಾ ನದಿಗಳು ತುಂಬಿ ಹರಿಯುತ್ತಿವೆ. ಕೃಷ್ಣಾ ಪ್ರವಾಹದಲ್ಲಿ ಎರಡು ಸೇತುವೆಗಳು, ಒಂದು ಬ್ಯಾರೇಜ್ ಮುಳುಗಡೆಯಾಗಿದೆ. ಎಲೆಬಿಚ್ಚಾಲಿ ಗ್ರಾಮದಲ್ಲಿರುವ ರಾಯರ ಏಕಶಿಲಾ ವೃಂದಾವನ ಹಾಗೂ ಜಪದ ಕಟ್ಟೆ ತುಂಗಭದ್ರಾ ನದಿ ನೀರಿನಿಂದ ಜಲಾವೃತವಾಗಿವೆ. …
Read More »ಮಹಿಳೆ ಮೇಲೆ ಪಿಎಸ್‌ಐ ಅನಿತಾ ರಾಠೋಡರಿಂದ ಹಲ್ಲೆ- ಆರೋಪ
ಚಿಕ್ಕೋಡಿ(ಬೆಳಗಾವಿ ಜಿಲ್ಲೆ): ‘ವಿಚಾರಣೆ ನೆಪದಲ್ಲಿ ಪಿಎಸ್‌ಐ ಅನಿತಾ ರಾಠೋಡ ಅವರು ನನ್ನ ಹೊಟ್ಟೆಗೆ ಒದ್ದು ಗಾಯಗೊಳಿಸಿದ್ದಾರೆ’ ಎಂದು ಮಹಿಳೆಯೊಬ್ಬರು ಆರೋಪಿಸಿದ್ದಾರೆ. ಇದನ್ನು ಅಲ್ಲಗಳೆದಿರುವ ಎಸ್ಪಿ ಡಾ.ಭೀಮಾಶಂಕರ ಗುಳೇದ, ‘ಮಹಿಳೆಯ ಕೆನ್ನೆಗೆ ಹೊಡೆದಿದ್ದು ದೃಢಪಟ್ಟಿದೆ. ಹೊಟ್ಟೆಗೆ ಒದ್ದಿದ್ದು ವೈದ್ಯಕೀಯ ಪರೀಕ್ಷೆಯಲ್ಲಿ ಗೊತ್ತಾಗಿಲ್ಲ’ ಎಂದು ತಿಳಿಸಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಸಂತ್ರಸ್ತೆ, ತಾಲ್ಲೂಕಿನ ಖಡಕಲಾಟ ಗ್ರಾಮದ ಪೂನಂ ಮಾಯಣ್ಣವರ, ‘ನನ್ನನ್ನು ಜುಲೈ 27ರಂದು ಠಾಣೆಗೆ ಕರೆಯಿಸಿ, ಹಲ್ಲೆ ಮಾಡಿದ್ದಾರೆ. ನಿಪ್ಪಾಣಿಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ …
Read More »ನಡುಗಡ್ಡೆಯಾದ ಢವಳೇಶ್ವರ, ಹುಣಶ್ಯಾಳ, ಮಸಗುಪ್ಪಿ
ಮೂಡಲಗಿ: ತಾಲ್ಲೂಕಿನ ಕೊನೆಯ ಗ್ರಾಮಗಳಾಗಿರುವ ಹುಣಶ್ಯಾಳ ಮತ್ತು ಢವಳೇಶ್ವರ ಗ್ರಾಮಗಳು ಘಟಪ್ರಭಾ ನದಿಯ ಪ್ರವಾಹಕ್ಕೆ ಭಾನುವಾರ ಬೆಳಿಗ್ಗೆಯಿಂದ ಅಕ್ಷರಶಃ ನಡುಗಡ್ಡೆಗಳಾಗಿವೆ. ಹುಣಶ್ಯಾಳ ಪಿವೈ ಗ್ರಾಮದ ಹಣಮಂತ ದೇವರ ದೇವಾಲಯವು ಜಲಾವೃತಗೊಂಡಿದೆ. ಶನಿವಾರ ಸಂಜೆಯಿಂದ ನದಿಯ ನೀರಿನ ಪ್ರಮಾಣ ಏರುತ್ತಿರುವುದರಿಂದ ಇಡೀ ಊರಿನ ಜನ, ಜಾನುವಾರು, ಸಾಮಾನು ಸರಂಜುಮಗಳೊಂದಿಗೆ ಸುರಕ್ಷಿತ ಸ್ಥಳಕ್ಕೆ ಸಾಗುತ್ತಿದ್ದಾರೆ. ಗ್ರಾಮದಲ್ಲಿ ಎರಡು ದಿನಗಳ ಹಿಂದೆ ಕಾಳಜಿ ಕೇಂದ್ರ ತೆರೆದಿದ್ದು 200ಕ್ಕೂ ಹೆಚ್ಚು ಸಂತ್ರಸ್ತರು ಆಶ್ರಯ ಪಡೆದಿದ್ದಾರೆ. ಶಾಸಕ …
Read More »ಮನೆಗಳಿಗೆ ನುಗ್ಗಿದ ಮಳೆ ನೀರು
ಯಮಕನಮರಡಿ: ಹುಕ್ಕೇರಿ ತಾಲ್ಲೂಕಿನ ದಡ್ಡಿ ಗ್ರಾಮದ ಹೊರವಲಯದಲ್ಲಿ ಬರುವ ಹೊಸ ರಸ್ತೆಯ ಬಳಿ ಹಲವು ಮನೆಗಳಿಗೆ ಮಳೆ ನೀರು ನುಗ್ಗಿದ್ದು, ನಿವಾಸಿಗಳು ಪರದಾಡುವಂತಾಗಿದೆ. ಕಳೆದ ವರ್ಷ ಲೋಕೋಪಯೋಗಿ ಇಲಾಖೆಯಿಂದ ₹ 20 ಲಕ್ಷ ವೆಚ್ಚದಲ್ಲಿ ಆಗಿರುವ ಸಿಮೆಂಟ್ ರಸ್ತೆ ನಿರ್ಮಾಣ ಕಾಮಗಾರಿ ಅವೈಜ್ಞಾನಿಕವಾಗಿದೆ. ಹೀಗಾಗಿ ಈ ರಸ್ತೆಯ ಮೇಲೆ ಹರಿಯುವ ಮಳೆ ನೀರು ಗಟಾರಕ್ಕೆ ಹೋಗದೆ ಮನೆಗೆ ನುಗ್ಗುತ್ತಿದೆ ಎಂದು ನಿವಾಸಿಗಳು ದೂರಿದ್ದಾರೆ. ‘ಈ ಬಗ್ಗೆ ಇಲ್ಲಿಯ ಮುಸ್ಲಿಂ ಸಮುದಾಯದವರು …
Read More »ಮಹಾದಾಯಿಗೆ ಶೀಘ್ರದಲ್ಲಿ ತಾರ್ಕಿಕ ಅಂತ್ಯ: ಶೆಟ್ಟರ
ಸವದತ್ತಿ: ಮಹಾದಾಯಿ, ಕಳಸಾ-ಬಂಡೂರಿ ಸೇರಿ 13 ಟಿಎಂಸಿ ಅಡಿ ನೀರು ಮಲಪ್ರಭೆಗೆ ಹರಿಸಬೇಕಿದೆ. ಗೋವಾ ಸರ್ಕಾರದ ಉದ್ಧಟತನದಿಂದ ವಿಳಂಬವಾಗುತ್ತಿದೆ. ಅರಣ್ಯ, ನೀರಾವರಿ ಇಲಾಖೆಗಳಿಂದ ಕ್ಲಿಯರನ್ಸ್ ಬಂದಿದ್ದು, ಕೆಲ ದಿನಗಳಲ್ಲಿ ಇದಕ್ಕೊಂದು ತಾರ್ಕಿಕ ಅಂತ್ಯ ನೀಡಲಾಗುವುದು ಎಂದು ಸಂಸದ ಜಗದೀಶ ಶೆಟ್ಟರ ಹೇಳಿದರು. ಇಲ್ಲಿನ ಕಲ್ಮಠದ ಆರವಣದಲ್ಲಿ ಕರ್ನಾಟಕ ರಾಜ್ಯ ಬಣಜಿಗ ಕ್ಷೇಮಾಭಿವೃದ್ಧಿ ಸಂಘ ತಾಲ್ಲೂಕು ಘಟಕದಿಂದ ಭಾನುವಾರ ಜರುಗಿದ ಪ್ರತಿಭಾ ಪುರಸ್ಕಾರ ಮತ್ತು ಗೌರವ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು. …
Read More »
Laxmi News 24×7