Breaking News

ಹಾವೇರಿ: ಅಣ್ಣನ ಹೆಂಡತಿ, ಮಕ್ಕಳನ್ನು ನಿರ್ದಯವಾಗಿ ಕೊಚ್ಚಿ ಕೊಂದ ಪಾಪಿ

ಹಾವೇರಿ : ಅಣ್ಣನ ಹೆಂಡತಿ ಮತ್ತು ಇಬ್ಬರು ಮಕ್ಕಳನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆಗೈದು ವ್ಯಕ್ತಿ ಪರಾರಿಯಾಗಿರುವ ಘಟನೆ ಜಿಲ್ಲೆಯ ಹಾನಗಲ್ ತಾಲೂಕಿನ ಯಳ್ಳೂರು ಗ್ರಾಮದಲ್ಲಿ ನಡೆದಿದೆ. ಕೊಲೆಗೀಡಾದವರನ್ನು ಗೀತಾ ಮರಿಗೌಡ್ರು(32) ಅಕುಲ್(10) ಮತ್ತು ಅಂಕಿತಾ(7) ಎಂದು ಗುರುತಿಸಲಾಗಿದೆ. ಕುಮಾರಗೌಡ್ ಮರಿಗೌಡ್ರು ಕೊಲೆಗೈದ ಆರೋಪಿ ಎಂದು ಗುರುತಿಸಲಾಗಿದೆ. ಆರೋಪಿ ಕುಮಾರ್​ಗೌಡ್​​ ತನ್ನ ಸ್ವಂತ ಅಣ್ಣ ಹೊನ್ನೇಗೌಡರ ಹೆಂಡತಿ ಮತ್ತು ಮಕ್ಕಳ ಹತ್ಯೆಗೈದು ಪರಾರಿಯಾಗಿದ್ದಾನೆ. ಕೊಲೆಯಾದ ಗೀತಾ ಅವರ ಗಂಡ ಹೊನ್ನೇಗೌಡ ದುಬೈನಲ್ಲಿ ಕೆಲಸ …

Read More »

ರಾಯಚೂರು: ಜಲ ಜೀವನ್ ಮಿಷನ್‌ ಕಾಮಗಾರಿಗೆ ತಂದಿದ್ದ ಪೈಪ್​ ಬಂಡಲ್‌ಗಳಿಗೆ ಬೆಂಕಿ

ರಾಯಚೂರು: ಜಲ ಜೀವನ್ ಮೀಷನ್‌ (ಜೆಎಂಎಂ) ಕಾಮಗಾರಿಗಾಗಿ ತಂದು ಹಾಕಿದ್ದ ಪೈಪ್​ಗಳಿಗೆ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ರಾಯಚೂರಿನ ದೇವಸೂಗೂರು ಗ್ರಾಮದಲ್ಲಿ ಬುಧವಾರ ಜರುಗಿದೆ. ಅವಘಡದ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿ ಪರಿಸ್ಥಿತಿ ಹತೋಟಿಗೆ ತಂದರು.   ಜಿಲ್ಲೆಯ ಮನೆ ಮನೆಗೆ ನೀರು ಪೂರೈಕೆ ಮಾಡಲು ಜೆಎಂಎಂ ಕಾಮಗಾರಿ ನಡೆಯುತ್ತಿದೆ. ದೇವಸೂಗೂರು ಗ್ರಾಮ ಪಂಚಾಯತಿ ಕಚೇರಿಯ ಹತ್ತಿರದ ಹಿಂಬದಿಯ ಖಾಲಿ ಜಾಗದಲ್ಲಿ …

Read More »

ಹಟಕಿನಾಳ ಗ್ರಾಮದಲ್ಲಿ ಚಿರತೆ ದಾಳಿಗೆ ಎತ್ತು ಬಲಿ‌

ಹುಬ್ಬಳ್ಳಿ: ಕಲಘಟಗಿ ತಾಲೂಕಿನಲ್ಲಿ ದಿನದಿನಕ್ಕೆ ಕಾಡು ಪ್ರಾಣಿಗಳ ಹಾವಳಿ ಜೋರಾಗಿದೆ. ತಾಲೂಕಿನ ಹಟಕಿನಾಳ ಗ್ರಾಮದಲ್ಲಿ ಚಿರತೆಗಳ ಗುಂಪು ದಾಳಿ ಮಾಡಿ ಎತ್ತನ್ನು ತಿಂದು ಹಾಕಿರುವ ಘಟನೆ ನಡೆದಿದೆ. ಗ್ರಾಮದ ಮಲ್ಲಯ್ಯ ಶರಣಯ್ಯ ಗೋಡಿಮನಿ ಎಂಬವರು ಎತ್ತು ಕಳೆದುಕೊಂಡಿದ್ದಾರೆ.‌ ರಾತ್ರಿ ಹೊಲದ ಮನೆಯಲ್ಲಿ ಎರಡು ಎತ್ತುಗಳನ್ನು ಕಟ್ಟಿ ಹಾಕಿದ್ದರು. ಈ ಪೈಕಿ ಒಂದು ಕಾಣೆಯಾಗಿತ್ತು. ಬೆಳಿಗ್ಗೆ ತಾನಾಗಿಯೇ ಒಂದು ಎತ್ತು ಮನೆಯತ್ತ ಮರಳಿದೆ. ಆದ್ರೆ ಇನ್ನೊಂದು ಕಾಣದೇ ಇದ್ದಾಗ ರೈತ ಕಬ್ಬಿನ ಗದ್ದೆಯಲ್ಲಿ …

Read More »

ಹುಬ್ಬಳ್ಳಿಯಲ್ಲಿ ರೈತ ಆತ್ಮಹತ್ಯೆ: ಸಾಲ ಮರುಪಾವತಿಗೆ ಕಿರುಕುಳ ಆರೋಪ

ಹುಬ್ಬಳ್ಳಿ: ರೈತನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನವಲಗುಂದ ತಾಲೂಕಿನ ಗುಮ್ಮಗೋಳ ಗ್ರಾಮದಲ್ಲಿ ನಡೆದಿದೆ. ರಾಜ್ಯದಲ್ಲಿ ಬರ ತಾಂಡವಾಡುತ್ತಿದ್ದು, ಮಳೆ ಇಲ್ಲದೇ ರೈತರು ಕಂಗಾಲಾಗಿದ್ದಾರೆ.‌ ಇಂತಹ ಪರಿಸ್ಥಿತಿಯಲ್ಲಿ ಬೆಳೆ ಸಾಲ ವಸೂಲಿ ಮಾಡಲು ಬ್ಯಾಂಕ್​ವೊಂದರ ಮ್ಯಾನೇಜರ್​ ರೈತನಿಗೆ ನಿರಂತರ ಕಿರುಕುಳ‌ ನೀಡಿರುವುದೇ ಆತ್ಮಹತ್ಯೆಗೆ ಕಾರಣ ಎನ್ನುವ ಆರೋಪ ಕೇಳಿ ಬಂದಿದೆ. ಮಹಾದೇವಪ್ಪ ಫಕೀರಪ್ಪ ಜಾವೂರ್ (75) ಎಂಬಾತ ಆತ್ಮಹತ್ಯೆ ಮಾಡಿಕೊಂಡ ರೈತನಾಗಿದ್ದಾನೆ. ಈತ ನಿನ್ನೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಕೂಡಲೇ …

Read More »

ಕಾಂಗ್ರೆಸ್ ಸರ್ಕಾರ ಬಂದಾಗಿದ್ದ ಅಧಿಕಾರಕ್ಕಾಗಿ ಹೊಡೆದಾಟ ನಡೆದೇ ಇದೆ : ಶಾಸಕ ಅರವಿಂದ ಬೆಲ್ಲದ

ಹುಬ್ಬಳ್ಳಿ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ‌ ಬಂದು ಮೊದಲ ತಿಂಗಳಿನಿಂದ ಗದ್ದಲ ಆರಂಭವಾಗಿದೆ. ಇದು ಹನಿಮೂನ್​ ಸಮಯ. ಒಂದೇ ತಿಂಗಳಲ್ಲಿ ಅಸಮಾಧಾನ ಶುರುವಾಗಿದೆ ಎಂದು ಸರ್ಕಾರದ ವಿರುದ್ದ ಶಾಸಕ ಅರವಿಂದ ಬೆಲ್ಲದ ವಾಗ್ದಾಳಿ ನಡೆಸಿದರು. ನಗರದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಮ್ಮ ಪ್ರಕಾರ ಸಿದ್ದರಾಮಯ್ಯ ಎರಡೂವರೆ ವರ್ಷ, ಡಿ ಕೆ ಶಿವಕುಮಾರ್ ಎರಡೂವರೆ ವರ್ಷ ಅನ್ನೋ ಮಾಹಿತಿ ಇತ್ತು. ಆದ್ರೆ ಸಿದ್ದರಾಮಯ್ಯ ಈಗಿನಿಂದಲೇ ನಾಲ್ಕು ಜನರನ್ನು ರೆಡಿ ಮಾಡಿದ್ದಾರೆ. ಎರಡು ವರ್ಷ …

Read More »

ಹೊಸ ಬಿಪಿಎಲ್, ಎಪಿಎಲ್ ಕಾರ್ಡ್ ವಿತರಣೆ ಪ್ರಕ್ರಿಯೆ ಇಂದಿನಿಂದ: ಸಚಿವ ಕೆ.ಎಚ್.ಮುನಿಯಪ್ಪ

ಹುಬ್ಬಳ್ಳಿ: ಹೊಸ ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ವಿತರಣೆ ಪ್ರಕ್ರಿಯೆ ಇಂದಿನಿಂದಲೇ ಆರಂಭಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ. ನಗರದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್​ಗೆ ಈವರೆಗೆ 2 ಲಕ್ಷ 90 ಸಾವಿರ ಅರ್ಜಿಗಳು ಬಂದಿವೆ. ಇದರಲ್ಲಿ ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ಅರ್ಜಿ ಪರಿಷ್ಕರಣೆ ಮಾಡಿ ಅರ್ಹರಿಗೆ ಕಾರ್ಡ್ ವಿತರಣೆ ಮಾಡಲಾಗುವುದು. ಈಗಾಗಲೇ ಅರ್ಜಿ ಹಾಕಿಕೊಂಡು ಕಾಯುತ್ತಿರುವ ಜನರಿಗೆ …

Read More »

ನೈರುತ್ಯ ರೈಲ್ವೆ ಆದಾಯದಲ್ಲಿ ಗಣನೀಯ ಏರಿಕೆ

ಹುಬ್ಬಳ್ಳಿ : ನೈರುತ್ಯ ರೈಲ್ವೆ ಇಲಾಖೆಯು ಆದಾಯದಲ್ಲಿ ಅತ್ಯುತ್ತಮ ಬೆಳವಣಿಗೆ ದಾಖಲಿಸಿದೆ. ಈ ವಲಯವು 2023 ರ ಏಪ್ರಿಲ್​ನಿಂದ ಅಕ್ಟೋಬರ್ ಅವಧಿಯಲ್ಲಿ ಶೇ. 10.44% ಹೆಚ್ಚಳದೊಂದಿಗೆ ಒಟ್ಟು 4288.27 ಕೋಟಿ ರೂ.ಗಳ ಆದಾಯವನ್ನು (ಹಂಚಿಕೆ) ಗಳಿಸಿದೆ. ಕಳೆದ ವರ್ಷದ ಇದೇ ಅವಧಿಯಲ್ಲಿ 3882.93 ಕೋಟಿ ರೂಪಾಯಿ ಸಂಗ್ರಹವಾಗಿತ್ತು. ನೈರುತ್ಯ ರೈಲ್ವೆಯ ಮೂಲ ಪ್ರಯಾಣಿಕರ ಆದಾಯವು 2023 ರ ಏಪ್ರಿಲ್​ನಿಂದ ಅಕ್ಟೋಬರ್ ಅವಧಿಯಲ್ಲಿ 1801.68 ಕೋಟಿ ರೂ.ಗಳಾಗಿದ್ದು, ಕಳೆದ ವರ್ಷದ ಇದೇ ಅವಧಿಯ …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ ಸವದತ್ತಿ ತಾಲೂಕಿನ ತಲ್ಲೂರ ಗ್ರಾಮದಲ್ಲಿ

ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.     ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲೂಕಿನ ತಲ್ಲೂರ ಗ್ರಾಮದಲ್ಲಿ ಶ್ರೀ ಬಸವಣ್ಣ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.       ಸೌಭಾಗ್ಯ ಲಕ್ಷ್ಮಿ …

Read More »

ಹೆಚ್ ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಇಂದು ಜೆಡಿಎಸ್ ಮಹತ್ವದ ಸಭೆ

ಬೆಂಗಳೂರು: ರಾಜ್ಯದಲ್ಲಿ ಬರ ಅಧ್ಯಯನಕ್ಕಾಗಿ ಬಿಜೆಪಿ ಮಾದರಿಯಲ್ಲಿಯೇ ತಂಡ ರಚಿಸಿಕೊಂಡು ಜೆಡಿಎಸ್‌ ಸಹ ಅಧ್ಯಯನ ನಡೆಸಲು ತೀರ್ಮಾನಿಸಿದ್ದು, ಈ ಸಂಬಂಧ ಇಂದು ಸಭೆ ನಡೆಸಲಿದೆ. ಪಕ್ಷದ ಕಚೇರಿ ಜೆಪಿ ಭವನದಲ್ಲಿ ಮಾಜಿ ಸಿಎಂ, ಪಕ್ಷದ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಇಂದು ಜಿಲ್ಲಾವಾರು, ವಿಭಾಗವಾರು ಸಭೆ ನಡೆಯಲಿದೆ. ರಾಜ್ಯದಲ್ಲಿನ ಬರ ಅಧ್ಯಯನಕ್ಕೆ ಬಿಜೆಪಿ ನಿರ್ಧರಿಸಿ ತಂಡ ರಚಿಸಿದೆ. ಈ ಬೆನ್ನಲ್ಲೇ ಜೆಡಿಎಸ್ ಸಹ ಬರ ನಿರ್ವಹಣೆಯಲ್ಲಿ ಸರ್ಕಾರದ ವೈಫಲ್ಯ ಖಂಡಿಸಿ …

Read More »

ಹಾವೇರಿಯಲ್ಲಿ ಮೂವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ

ಹಾವೇರಿ : ಅಣ್ಣನ ಹೆಂಡತಿ ಮತ್ತು ಇಬ್ಬರು ಮಕ್ಕಳನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆಗೈದು ಮೈದುನ ಪರಾರಿಯಾಗಿರುವ ಘಟನೆ ಜಿಲ್ಲೆಯ ಹಾನಗಲ್ ತಾಲೂಕಿನ ಯಳ್ಳೂರು ಗ್ರಾಮದಲ್ಲಿ ನಡೆದಿದೆ. ಕೊಲೆಗೀಡಾದವರನ್ನು ಗೀತಾ ಮರಿಗೌಡ್ರು(32) ಅಕುಲ್(10) ಮತ್ತು ಅಂಕಿತಾ(7) ಎಂದು ಗುರುತಿಸಲಾಗಿದೆ. ಕುಮಾರಗೌಡ್ ಮರಿಗೌಡ್ರು ಕೊಲೆಗೈದ ಆರೋಪಿ ಎಂದು ಗುರುತಿಸಲಾಗಿದೆ. ಆರೋಪಿ ಕುಮಾರ್​ಗೌಡ್​​ ತನ್ನ ಸ್ವಂತ ಅಣ್ಣ ಹೊನ್ನೇಗೌಡರ ಹೆಂಡತಿ ಮತ್ತು ಮಕ್ಕಳ ಹತ್ಯೆಗೈದು ಪರಾರಿಯಾಗಿದ್ದಾನೆ. ಕೊಲೆಯಾದ ಗೀತಾ ಅವರ ಗಂಡ ಹೊನ್ನೇಗೌಡ ದುಬೈನಲ್ಲಿ ಕೆಲಸ …

Read More »