ಬೆಂಗಳೂರು: ರಾಜ್ಯದ 15 ತಿಂಗಳ ಮಗುವೊಂದು ‘ಸ್ಪೈನಲ್ ಮಸ್ಕ್ಯುಲರ್ ಅಟ್ರೋಪಿ’ ಎಂಬ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದು, ವಿದೇಶದಿಂದ ಆಮದು ಮಾಡಿಕೊಳ್ಳಬೇಕಿರುವ ದುಬಾರಿ ಚುಚ್ಚುಮದ್ದಿನ ಆಮದು ಸುಂಕಕ್ಕೆ ವಿನಾಯಿತಿ ನೀಡುವಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ. ಈ ಕುರಿತು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಪ್ರಧಾನಿಯವರನ್ನು (Narendra Modi) ಟ್ಯಾಗ್ ಮಾಡಿ ಪೋಸ್ಟ್ ಮಾಡಿರುವ ಸಿದ್ದರಾಮಯ್ಯ, ಪ್ರಧಾನಿ ನರೇಂದ್ರ ಮೋದಿ ಅವರೇ, ಕರ್ನಾಟಕದ 15 …
Read More »ಹಾವೇರಿ ಕ್ಷೇತ್ರಕ್ಕೆ ಈಶ್ವರಪ್ಪ ಪುತ್ರನಿಗೆ ಟಿಕೆಟ್ ಕೊಟ್ಟರೆ ಸೋಲು: ಬಿ.ಸಿ. ಪಾಟೀಲ್
ದಾವಣಗೆರೆ: ಹಾವೇರಿ ಲೋಕಸಭಾ ಕ್ಷೇತ್ರದಿಂದ (Lok Sabha Election 2024) ಬಿಜೆಪಿ ಟಿಕೆಟ್ ಸಿಕ್ಕಿದರೆ ಸ್ಪರ್ಧಿಸುತ್ತೇನೆ. ಪಕ್ಷ ಬೇರೆಯವರಿಗೆ ಟಿಕೆಟ್ ಕೊಟ್ಟರೂ ಬೆಂಬಲವನ್ನು ನೀಡುತ್ತೇನೆ. ಯಾರಿಗೆ, ಯಾವುದೇ ಜಾತಿಯವರಿಗೆ ಟಿಕೆಟ್ ಕೊಟ್ಟರೂ ನನ್ನ ಬೆಂಬಲ ಇದ್ದೇ ಇರುತ್ತದೆ. ಆದರೆ, ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ (Former Deputy CM KS Eshwarappa) ಪುತ್ರ ಕೆ.ಇ. ಕಾಂತೇಶ್ ಹಾವೇರಿಗೆ ಬಂದು ಸ್ಪರ್ಧೆ ಮಾಡಿದರೆ ಗೆಲ್ಲುವುದು ಕಷ್ಟ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ್ …
Read More »ಬಿಜೆಪಿಯವ್ರು ಸುಮ್ಮನಿರಲಾಗದೆ ಮೈ ಪರಚಿಕೊಳ್ತಿದ್ದಾರೆ: ಚೆಲುವರಾಯಸ್ವಾಮಿ
ಮಂಡ್ಯ: ಬಿಜೆಪಿಯವ್ರು ಸುಮ್ಮನಿರಲಾಗದೆ ಮೈ ಪರಚಿಕೊಳ್ತಿದ್ದಾರೆ ಎಂದು ಸಚಿವ ಚೆಲುವರಾಯಸ್ವಾಮಿ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅವರಿಗೆ ಯಾವುದು ವಿಚಾರ ಇಲ್ಲ, ಅತ್ಯಂತ ಹೀನಾಯ ಪರಿಸ್ಥಿತಿಯಲ್ಲಿದ್ದಾರೆ. ರಾಜ್ಯದ ಮುಖಂಡರನ್ನು ಮಾತನಾಡಿಸುವ ಸೌಜನ್ಯ ರಾಷ್ಟ್ರೀಯ ನಾಯಕರಿಗೆ ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. ಇತಿಹಾಸದಲ್ಲಿ ಮೊದಲ ರಾಜ್ಯಪಾಲರ ಭಾಷಣ, ಮೊದಲ ಬಜೆಟ್‌ಗೆ ವಿರೋಧ ಪಕ್ಷದ ನಾಯಕನನ್ನು ನೇಮಕ ಮಾಡಿರದ ಇತಿಹಾಸವೇ ಇಲ್ಲ. ನಾನೇನಾದ್ರೂ
Read More »ಹೈಕಮಾಂಡ್ ಬುಲಾವ್ ಮೇರೆಗೆ ಈಶ್ವರಪ್ಪ ದೆಹಲಿಗೆ
ಬೆಂಗಳೂರು: ಹೈಕಮಾಂಡ್ ಬುಲಾವ್ ಮೇರೆಗೆ ಇಂದು (ಗುರುವಾರ) ದೆಹಲಿಗೆ ತೆರಳುತ್ತಿದ್ದೇನೆ. ಯಾವ ವಿಚಾರದ ಕುರಿತು ಕರೆದಿದ್ದಾರೆ ಎಂದು ಅಲ್ಲಿಗೆ ಹೋದ ನಂತರವೇ ತಿಳಿಯಲಿದೆ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ತಿಳಿಸಿದರು. ಮಲ್ಲೇಶ್ವರದಲ್ಲಿರುವ ಪಕ್ಷದ ಕಚೇರಿ ಜಗನ್ನಾಥ ಭವನದಲ್ಲಿ ಬುಧವಾರ ಮಾತನಾಡಿದ ಅವರು, ದೆಹಲಿ ಕಚೇರಿಯಿಂದ ಕರೆ ಬಂದಿತ್ತು. ಹಾಗಾಗಿ, ಗುರುವಾರ ದೆಹಲಿಗೆ ಹೋಗುತ್ತಿದ್ದೇನೆ. ಕೋಟ ಶ್ರೀನಿವಾಸ ಪೂಜಾರಿ ಮತ್ತು ಸಂಸದ ಪಿ.ಸಿ.ಮೋಹನ್ ಅವರನ್ನೂ ಕರೆದಿದ್ದಾರೆ. ನಾವು ಮೂವರು ಹೋಗಲಿದ್ದೇವೆ ಎಂದರು. ರಾಜ್ಯಾಧ್ಯಕ್ಷರ …
Read More »ರೈತನ ಮೇಲೆ ಹುಲಿ ದಾಳಿ; ಗ್ರಾಮದ ಕೆಲವರಿಂದ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಹಲ್ಲೆ
ಮೈಸೂರು: ತೊಂದರೆ ಕೊಟ್ಟು ಓಡಾಡುತ್ತಿದ್ದ ಹುಲಿಯನ್ನು ಸೆರೆ ಹಿಡಿದಿಲ್ಲ ಎಂದು ಕೋಪಗೊಂಡ ನಂಜನಗೂಡು ತಾಲೂಕಿನ ಮಹಾದೇವ ನಗರದ ಕೆಲವರು ಅರಣ್ಯ ಇಲಾಖೆ ಸಿಬ್ಬಂದಿ ಮೇಲೆಯೇ ಹಲ್ಲೆ ಮಾಡಿದ್ದಾರೆ. ಏನಿದು ಘಟನೆ?: ನಂಜನಗೂಡು ತಾಲೂಕಿನ ಮಲ್ಕುಂಡಿ ಸಮೀಪದ ಹೆಡಿಯಾಲ ಕುದುರೆಗುಂಡಿ ಹಿನ್ನೀರು ಪ್ರದೇಶದಲ್ಲಿ ರೈತರೊಬ್ಬರು ಜಾನುವಾರುಗಳನ್ನು ಮೇಯಿಸಲು ಹೋಗಿದ್ದ ಸಂದರ್ಭದಲ್ಲಿ ಹುಲಿಯೊಂದು ದಾಳಿ ಮಾಡಿ ಹಸುವನ್ನು ಕೊಂದು ಹಾಕಿತ್ತು. ಹಸುವನ್ನು ರಕ್ಷಿಸಲು ಹೋಗಿದ್ದ ರೈತ ವೀರಭದ್ರ ಭೋವಿ (71) ಅವರ ಮೇಲೂ ದಾಳಿ …
Read More »ಎರಡನೇ ಬಾರಿಗೆ ದಾಖಲೆಯ 1.72 ಲಕ್ಷ ಕೋಟಿ ಜಿಎಸ್ಟಿ ಸಂಗ್ರಹ: ಕರ್ನಾಟಕದಿಂದ ಕೋಟಿ ಆದಾಯ ಗೊತ್ತಾ?
ನವದೆಹಲಿ: ಅಕ್ಟೋಬರ್ ತಿಂಗಳಲ್ಲಿ ಒಟ್ಟು 1.72 ಲಕ್ಷ ಕೋಟಿ ರೂ. ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) (GST Revenue Collection) ಸಂಗ್ರಹವಾಗಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ಇಂದು ತಿಳಿಸಿದೆ. ಕಳೆದ ವರ್ಷ ಇದೇ ಅಕ್ಟೋಬರ್ ತಿಂಗಳ ಜಿಎಸ್ಟಿ ಆದಾಯಕ್ಕೆ ಹೋಲಿಸಿದರೆ, ಈ ಬಾರಿ ಶೇ.13ರಷ್ಟು ಅಧಿಕ ಆದಾಯ ಸಂಗ್ರಹವಾಗಿದೆ ಎಂದು ಹೇಳಿದೆ. ಅಕ್ಟೋಬರ್ನಲ್ಲಿ ಒಟ್ಟಾರೆ 1,72,003 ಕೋಟಿ ರೂ. ಜಿಎಸ್ಟಿ ಆದಾಯ ಸಂಗ್ರಹವಾಗಿದೆ. ಇದರಲ್ಲಿ ಕೇಂದ್ರ ಜಿಎಸ್ಟಿ (CGST) …
Read More »ನ್ನಡದಲ್ಲೂ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ: ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಮನವಿ
ಬೆಂಗಳೂರು: ಕೇಂದ್ರ ಸರ್ಕಾರದ ಉದ್ಯೋಗಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಹಿಂದಿ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಮಾತ್ರ ನಡೆಸುವುದನ್ನು ಒಪ್ಪಲು ಸಾಧ್ಯವಿಲ್ಲ. ಕನ್ನಡದಲ್ಲಿ ಪ್ರವೇಶ ಪರೀಕ್ಷೆ ನಡೆಸುವಂತೆ ಈ ಹಿಂದೆ ಒತ್ತಾಯಿಸಿದ್ದೆ. ಅಗತ್ಯ ಬಿದ್ದರೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಭಾಷಾ ಮಾಧ್ಯಮವನ್ನು ಮರುಪರಿಶೀಲಿಸುವಂತೆ ಪ್ರಧಾನಿ ಮೋದಿಗೆ ಮತ್ತೊಮ್ಮೆ ಪತ್ರ ಬರೆಯುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಕಂಠೀರವ ಕ್ರೀಡಾಂಗಣದಲ್ಲಿ ರಾಜ್ಯ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಆಯೋಜನೆ ಮಾಡಿದ್ದ 68ನೇ ಕರ್ನಾಟಕ ರಾಜ್ಯೋತ್ಸವ ಆಚರಣೆ …
Read More »ಅರಣ್ಯ ಸಿಬ್ಬಂದಿ ಗಾಯಗೊಳಿಸಿ ಪರಾರಿಯಾಗಿದ್ದ ಚಿರತೆ ಕೊನೆಗೂ ಸೆರೆ
ಬೆಂಗಳೂರು: ಕಾರ್ಯಾಚರಣೆ ವೇಳೆ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ದಾಳಿ ಮಾಡಿದ್ದ ಚಿರತೆಯನ್ನು ಕೊನೆಗೂ ಸೆರೆ ಹಿಡಿಯಲಾಗಿದೆ. ಬೊಮ್ಮನಹಳ್ಳಿ ಕೃಷ್ಣಾರೆಡ್ಡಿ ಬಡಾವಣೆ ಸುತ್ತಮುತ್ತ ಕಾಣಿಸಿಕೊಂಡು ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸಿದ್ದ ಚಿರತೆ ಬೋನಿನಲ್ಲಿ ಬಂಧಿಯಾಗಿದೆ. ಚಿರತೆ ಕಾಣಿಸಿಕೊಂಡ ಹಿನ್ನೆಲೆ ಸೆರೆಹಿಡಿಯಲು ಟಾಸ್ಕ್ ಫೋರ್ಸ್ ಸಿಬ್ಬಂದಿ ಕಾರ್ಯಾಚರಣೆ ಕೈಗೊಂಡಿದ್ದರು. ಈ ವೇಳೆ ಟಾಸ್ಕ್ ಫೋರ್ಸ್ ಸಿಬ್ಬಂದಿ ಧನರಾಜ್ ಎಂಬುವರು ಚಿರತೆ ದಾಳಿಯಿಂದ ಗಾಯಗೊಂಡಿದ್ದರು. ಚಿರತೆ ದಾಳಿಯಿಂದ ಧನರಾಜ್ ಕಾಲು, ಹೊಟ್ಟೆ ಭಾಗಕ್ಕೆ ಗಾಯವಾಗಿದ್ದು, ಅವರನ್ನು …
Read More »ಪ್ರಸ್ತುತ ನಾವು ಬಳಕೆ ಮಾಡುತ್ತಿರುವ ಧ್ವಜ ಬೇರೊಂದು ಪಕ್ಷದ ಧ್ವಜವಾಗಿದೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಬೆಂಗಳೂರು: ಕರ್ನಾಟಕದ ಹೆಸರಿಗೆ ಇಂದು 50ರ ಸಂಭ್ರಮ. ನಾಡಿನೆಲ್ಲೆಡೆ ಸಡಗರ ಸಂಭ್ರಮದಿಂದ ಹಳದಿ ಮತ್ತು ಕೆಂಪು ಬಣ್ಣದ ನಾಡಧ್ವಜಗಳು ಹಾರಾಡುತ್ತಿವೆ. ಆದರೆ ಈ ಧ್ವಜ ಅಧಿಕೃತ ನಾಡಧ್ವಜವಾ? ಈ ಧ್ವಜವನ್ನು ಯಾರು ರಚಿಸಿದ್ದು, ಸರ್ಕಾರ ನಾಡಧ್ವಜದ ವಿಚಾರದಲ್ಲಿ ಏನೆಲ್ಲಾ ಮಾಡಿದೆ. ನಾಡಧ್ವಜ ಹೊಂದಲು ಸಾಂವಿಧಾನಿಕ ಮಾನ್ಯತೆ ಇದೆಯಾ ಎನ್ನುವ ಕುರಿತ ವರದಿ ಇಲ್ಲಿದೆ. 1956ರಲ್ಲಿಯೇ ಕನ್ನಡಿಗರ ವಾಸಿಸುವ ಪ್ರದೇಶಗಳನ್ನು ಒಳಗೊಂಡು ರಾಜ್ಯ ಏಕೀಕರಣಗೊಂಡರೂ ಕರ್ನಾಟಕದ ಹೆಸರು ಪಡೆಯಲು 17 ವರ್ಷ ಹೋರಾಟ …
Read More »ರಾಜ್ಯದಲ್ಲಿ ಸೈಬರ್ ಪ್ರಕರಣ ಹೆಚ್ಚಳ, ಸೈಬರ್ ಕ್ರೈಂ ತಡೆಗೆ ಹೊಸ ನಿಯಮ ತರಲು ಕ್ರಮ: ಡಾ. ಪರಮೇಶ್ವರ್
ತುಮಕೂರು: ರಾಜ್ಯದಲ್ಲಿ ಸೈಬರ್ ಪ್ರಕರಣಗಳು ಹೆಚ್ಚಾಗ್ತಿದ್ದು, ಇಂಥ ಪ್ರಕರಣಗಳ ತಡೆಗೆ ಎಚ್ಚರಿಕೆ ವಹಿಸ್ತಿದ್ದೇವೆ. ಇದಕ್ಕಾಗಿ ಹೋಂ ಡಿಪಾರ್ಟ್ಮೆಂಟ್ ಹಾಗೂ ಐಟಿ ಡಿಪಾರ್ಟ್ಮೆಂಟ್ ಸೇರಿ ಒಂದು ಹೊಸ ಸಮಿತಿ ಮಾಡಲಾಗಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ತಿಳಿಸಿದ್ದಾರೆ. ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಆಯಂಟಿ ಸೈಬರ್ ಕಾನೂನು ಜಾರಿಗೆ ತರಲು ಒಂದು ಅಜೆಂಡಾ ರೂಪಿಸಲು ಜವಾಬ್ದಾರಿ ಕೊಟ್ಟಿದ್ದಾರೆ.ನಾವು ಸದ್ಯದಲ್ಲೇ ಅದನ್ನ ಪ್ರಕಟಣೆ ಮಾಡ್ತೀವಿ. ಸೈಬರ್ ಪ್ರಕರಣಗಳನ್ನು ಪೊಲೀಸ್ ಇಲಾಖೆ ಗಂಭೀರವಾಗಿ …
Read More »