ಹುದಲಿ: ‘ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಾಗಲೆಲ್ಲ ಹಳ್ಳಿಗಳ ಅಭಿವೃದ್ಧಿಗೆ ಆದ್ಯತೆ ನೀಡಿದೆ. ನನ್ನ ಕ್ಷೇತ್ರದ ಹಳ್ಳಿಗಳಿಗೆ ನಾನು ಕಳೆದ 15 ವರ್ಷಗಳಲ್ಲಿ ಸಾಕಷ್ಟು ಅನುದಾನ ನೀಡಿದ್ದೇನೆ. ಕುಡಿಯುವ ನೀರು, ರಸ್ತೆ, ಶಾಲೆಗಳಿಗೆ ಪ್ರಾಧಾನ್ಯತೆ ಕೊಟ್ಟಿದ್ದೇನೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ಯಮಕನಮರಡಿ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ, ಬೆಳಗಾವಿ ತಾಲ್ಲೂಕಿನ ಹುದಲಿ ಗ್ರಾಮದಲ್ಲಿ ಗ್ರಾಮದೇವಿ ಜಾತ್ರೆ ಅಂಗವಾಗಿ ಚರಂಡಿ, ಸಿಸಿ ರಸ್ತೆ ಹಾಗೂ ರಸ್ತೆ …
Read More »ಲೋಕಸಭಾ ಚುನಾವಣೆ: ಗೆಲ್ಲುವ ಕುದುರೆಗೆ ನಿಲ್ಲದ ಹುಡುಕಾಟ
ಬೆಳಗಾವಿ: ಬೆಳಗಾವಿ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರಗಳನ್ನು ಈ ಬಾರಿ ಹೇಗಾದರೂ ಮಾಡಿ ಗೆಲ್ಲಲೇಬೇಕು ಎಂದು ಕಾಂಗ್ರೆಸ್ ಸಿದ್ಧತೆ ನಡೆಸಿದೆ. ಆದರೆ, ಬಿಜೆಪಿಯಲ್ಲಿ ಮಾತ್ರ ಇನ್ನೂ ‘ಗುಮ್ಮನ ಗುಸುಕ’ ಎಂಬ ಸ್ಥಿತಿ ಇದೆ. ಯಾರನ್ನು ಕೇಳಿದರೂ ‘ಗೆಲ್ಲುವ ಕುದುರೆ ಹುಡುಕಾಟ’ ಎಂಬ ಉತ್ತರ ಸಿಗುತ್ತದೆ. ‘ನಾವು ಆಕಾಂಕ್ಷಿಗಳು’ ಎಂದು ಇಬ್ಬರು ಮಾತ್ರ ಮಾಧ್ಯಮದ ಮುಂದೆ ಹೇಳಿಕೆ ಕೊಟ್ಟಿದ್ದಾರೆ. ಕಾರ್ಯಕರ್ತರು, ಸಮುದಾಯದವರು ಸೇರಿ ಯಾರೂ ಸಹ ಇಂಥವರಿಗೇ ಟಿಕೆಟ್ ಕೊಡಬೇಕು ಎಂಬ …
Read More »‘ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುವವರು ಸಂದರ್ಭಕ್ಕೆ ತಕ್ಕಂತೆ ಧೈರ್ಯದಿಂದ ಕೆಲಸ ಮಾಡಬೇಕು’ : ಕಮಿಷನರ್ ಎಸ್.ಎನ್.ಸಿದ್ರಾಮಪ್ಪ
ಬೆಳಗಾವಿ: ‘ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುವವರು ಸಂದರ್ಭಕ್ಕೆ ತಕ್ಕಂತೆ ಧೈರ್ಯದಿಂದ ಕೆಲಸ ಮಾಡಬೇಕು’ ಎಂದು ನಗರ ಪೊಲೀಸ್ ಕಮಿಷನರ್ ಎಸ್.ಎನ್.ಸಿದ್ರಾಮಪ್ಪ ಕರೆ ನೀಡಿದರು. ಇಲ್ಲಿನ ಪೊಲೀಸ್ ಕವಾಯತು ಮೈದಾನದಲ್ಲಿ ತಮ್ಮ ಸೇವಾನಿವೃತ್ತಿ ಹಿನ್ನೆಲೆಯಲ್ಲಿ ಪೊಲೀಸರಿಂದ ಬುಧವಾರ ಗೌರವವಂದನೆ ಸ್ವೀಕರಿಸಿ ಅವರು ಮಾತನಾಡಿದರು. ‘ಬೆಳಗಾವಿಯಲ್ಲಿ ನಡೆಯುವ ಗಣೇಶ ಉತ್ಸವದ ವಿಸರ್ಜನೆಯಂಥ ಸಂದರ್ಭ ನಾವು 18ರಿಂದ 20 ತಾಸು ಕೆಲಸ ಮಾಡಬೇಕಾಗುತ್ತದೆ. ಹಾಗಾಗಿ ಆರೋಗ್ಯ ಕಾಪಾಡಿಕೊಳ್ಳಬೇಕು. ನಿಯಮಿತವಾಗಿ ವ್ಯಾಯಾಮ ಮಾಡಬೇಕು. ಪೊಲೀಸ್ ಇಲಾಖೆ …
Read More »ಊರಿನ ಸುತ್ತಲೂ ಕ್ರಷರ್ ಮಷಿನ್‌ಗಳ ಕರ್ಕಶ ಧ್ವನಿ. ದೂಳಿನ ಹಾವಳಿ.
ಚಿಕ್ಕೋಡಿ: ಊರಿನ ಸುತ್ತಲೂ ಕ್ರಷರ್ ಮಷಿನ್‌ಗಳ ಕರ್ಕಶ ಧ್ವನಿ. ದೂಳಿನ ಹಾವಳಿ. ಗ್ರಾಮದೊಳಗೆ ತಿಪ್ಪೆಗಳ ಸಾಲು. ಗ್ರಾಮ ಪಂಚಾಯಿತಿ ಕಚೇರಿ ಹತ್ತಿರವೇ ಕಸದ ರಾಶಿ. ತ್ಯಾಜ್ಯ ವಿಲೇವಾರಿ ಘಟಕದ ಬಳಿಯಂತೂ ಕಸವೋ ಕಸ. ವೀಳ್ಯದೆಲೆಗೆ ಪ್ರಸಿದ್ಧವಾದ ತಾಲ್ಲೂಕಿನ ಜೈನಾಪೂರ ಗ್ರಾಮದ ಸದ್ಯದ ನೋಟವಿದು. ಅಂದಾಜು 8,000 ಜನಸಂಖ್ಯೆ ಹೊಂದಿರುವ ಗ್ರಾಮದಲ್ಲಿ 3 ವಾರ್ಡ್‌ಗಳಿದ್ದು, 10 ಸದಸ್ಯರಿದ್ದಾರೆ. ಈ ಪಂಚಾಯಿತಿ ವ್ಯಾಪ್ತಿಯ ತೋರಣಹಳ್ಳಿ ಗ್ರಾಮದಲ್ಲಿ 5,000 ಜನಸಂಖ್ಯೆ ಇದ್ದು, 6 ಸದಸ್ಯರಿದ್ದಾರೆ. ಜೈನಾಪೂರದಲ್ಲಿ …
Read More »ವಾಕಿಂಗ್ ಹೋದವರ ಮೇಲೆ ಕರಡಿ ದಾಳಿ.
ಶಿವಮೊಗ್ಗ: ಚಿರತೆ, ಕಾಡಾನೆ ಕಾಡು ಬಿಟ್ಟು ನಾಡಿನತ್ತ ಹೆಜ್ಜೆ ಹಾಕುತ್ತಿರುವುದು ಹೊಸತೇನು ಅಲ್ಲ ಆದರೆ ಈ ಬಾರಿ ಕರಡಿಯೊಂದು ನಗರ ಪ್ರದೇಶದಲ್ಲಿ ಕಂಡು ಬಂದಿದ್ದು ಬೆಳ್ಳಂಬೆಳಗ್ಗೆ ವಾಕಿಂಗ್ ಹೋಗುವವರ ಮೇಲೆ ದಾಳಿ ನಡೆಸಿದ ಘಟನೆ ಶಿವಮೊಗ್ಗ ನಗರದ ಗೋಪಾಲಗೌಡ ಬಡಾವಣೆಯಲ್ಲಿ ಬುಧವಾರ ಬೆಳಿಗ್ಗೆ ಸಂಭವಿಸಿದೆ. ಘಟನೆಯಲ್ಲಿ ತುಕಾರಂ ಶೆಟ್ಟಿ ಎಂಬುವವರ ಹೊಟ್ಟೆಯ ಭಾಗಕ್ಕೆ ತರಚಿದ ಗಾಯಗಳಾಗಿವೆ. ಸೋಮವಾರ ಬೆಳಗ್ಗೆ ತುಕಾರಾಂ ಶೆಟ್ಟಿ ಅವರು ವಾಕಿಂಗ್ ಹೋದ ವೇಳೆ ಕರಡಿಯನ್ನು ಬೀದಿ …
Read More »ಕಾಣೆಯಾಗಿದ್ದ ಖಾಸಗಿ ಶಾಲೆಯ ನಾಲ್ವರು ವಿದ್ಯಾರ್ಥಿಗಳ ಶವ ಪತ್ತೆ
ಸುರತ್ಕಲ್: ಕಾಣೆಯಾಗಿದ್ದ ನಾಲ್ವರು ವಿದ್ಯಾರ್ಥಿಗಳ ಶವ ಮುಲ್ಕಿ ಸಮೀಪ ಹಳೆಯಂಗಡಿ ಡ್ಯಾಂ ಬಳಿ ಫೆ. 27ರ ಮಂಗಳವಾರ ತಡರಾತ್ರಿ ಪತ್ತೆಯಾಗಿದೆ. ಈಜಲು ಹೋಗಿದ್ದ ವೇಳೆ ವಿದ್ಯಾರ್ಥಿಗಳು ಮುಳುಗಿರುವ ಶಂಕೆ ವ್ಯಕ್ತವಾಗಿದೆ. ಮೃತ ದೇಹಗಳನ್ನು ವೆನ್ಲಾಕ್ ಆಸ್ಪತ್ರೆಗೆ ಸಾಗಿಸಲಾಗಿದೆ. ಘಟನೆಯ ವಿವರ: ಖಾಸಗಿ ಶಾಲೆಯೊಂದರ ನಾಲ್ವರು ವಿದ್ಯಾರ್ಥಿಗಳು ಮಂಗಳವಾರ ಮಧ್ಯಾಹ್ನ 1.30ಕ್ಕೆ ಶಾಲೆಯಿಂದ ಹೊರಗೆ ತೆರಳಿದ್ದು, ಹಿಂದಿರುಗಿ ಬಾರದೆ ನಾಪತ್ತೆಯಾಗಿದ್ದರು. ಹತ್ತನೇ ತರಗತಿಯ ವಿದ್ಯಾರ್ಥಿಗಳಾದ ಯಶ್ವಿತ್ ಚಂದ್ರಕಾಂತ್, ನಿರುಪ್,ಅನ್ವಿತ್ ಹಾಗೂ ರಾಘವೇಂದ್ರ …
Read More »ವಸತಿ ಶಾಲೆಯಲ್ಲಿ ಬೆಂಕಿ ಅವಘಡ:
ಮುದ್ದೇಬಿಹಾಳ: ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕೊಠಡಿಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿ, ಓರ್ವ ವಿದ್ಯಾರ್ಥಿಯ ಸ್ಥಿತಿ ಗಂಭೀರಗೊಂಡು ಹಲವರಿಗೆ ಗಾಯಗಳಾದ ಘಟನೆ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಕೃಷ್ಣಾ ನದಿ ತೀರದ ಘಾಳಪೂಜಿ ಗ್ರಾಮವೊಂದರಲ್ಲಿ ನಡೆದಿದೆ. ಪರಿಶಿಷ್ಟ ಜಾತಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕೊಠಡಿಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 6ನೇ ತರಗತಿಯ ಓರ್ವ ವಿದ್ಯಾರ್ಥಿಗೆ ಕೈಕಾಲು ಸುಟ್ಟು ಗಂಭೀರ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ವಿಜಯಪುರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೋರ್ವ …
Read More »ನಾಲ್ವರು ಮೊಬೈಲ್ ಸುಲಿಗೆಕೋರರ ಬಂಧನ: 70 ಮೊಬೈಲ್ ವಶ
ಬೆಂಗಳೂರು, ಫೆ.27- ಒಂಟಿಯಾಗಿ ಹೋಗುವ ಸಾರ್ವಜನಿಕರನ್ನು ಗುರಿಯಾಗಿಟ್ಟುಕೊಂಡು ಮೊಬೈಲ್ ಸುಲಿಗೆ ಮಾಡಿ ಪರಾರಿಯಾಗುತ್ತಿದ್ದ ನಾಲ್ವರು ದರೋಡೆಕೋರರನ್ನು ನಗರ ಪೊಲೀಸರು ಬಂಧಿಸಿ 70 ಮೊಬೈಲ್‍ಗಳನ್ನು ವಶಪಡಿಸಿಕೊಂಡಿದ್ದಾರೆ. ಕೆಆರ್ ಪುರ: ಮಹದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬರು ನಡೆದುಕೊಂಡು ಹೋಗುತ್ತಿರುವಾಗ ಹಿಂದಿನಿಂದ ಬೈಕ್‍ನಲ್ಲಿ ಬಂದ ದರೋಡೆಕೋರರು ಅವರ ಕೈಯಲಿದ್ದ ಮೊಬೈಲ್ ಪೋನ್ ಕಿತ್ತುಕೊಂಡು ಪರಾರಿಯಾಗಿದ್ದ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಆರೋಪಿಗಳಿಂದ 20 ಲಕ್ಷ ಬೆಲೆ ಬಾಳುವ ಒಟ್ಟು …
Read More »ಅಬಕಾರಿ ಹಗರಣ: ದೆಹಲಿ ಸಿಎಂ ಕೇಜ್ರಿವಾಲ್‌ಗೆ 8ನೇ ಬಾರಿ ಸಮನ್ಸ್ ನೀಡಿದ ಇ.ಡಿ
ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾರಿ ನಿರ್ದೇಶನಾಲಯವು ಸತತ 8 ನೇ ಬಾರಿಗೆ ಸಮನ್ಸ್ ನೀಡಿದೆ. 7 ನೇ ಬಾರಿಯೂ ವಿಚಾರಣೆಗೆ ಹಾಜರಾಗದ ಹಿನ್ನೆಲೆ ಮತ್ತೆ ಸಮನ್ಸ್ ಜಾರಿ ಮಾಡಲಾಗಿದೆ. ಮಾರ್ಚ್ 4 ರಂದು ವಿಚಾರಣೆಗೆ ಹಾಜರಾಗುವಂತೆ ತಿಳಿಸಲಾಗಿದೆ. ಕೇಜ್ರಿವಾಲ್ ಅವರು ವಿಚಾರಣೆಗೆ ಹಾಜರಾಗದ ಕುರಿತು ಜಾರಿ ನಿರ್ದೇಶನಾಲಯ (ಇಡಿ)ವನ್ನು ನಗರ ನ್ಯಾಯಾಲಯವು ಸಂಪರ್ಕಿಸಿ ಮಾಹಿತಿ ಪಡೆದಿದ್ದು, ಮಾರ್ಚ್ 16 ರಂದು …
Read More »ಸಮುದ್ರದಲ್ಲಿ ಮೋದಿ ನವಿಲುಗರಿ ನೆಟ್ಟರೆ ಚಿಗುರುತ್ತಾ: ಖರ್ಗೆ
ಹುಬ್ಬಳ್ಳಿ, ಫೆಬ್ರವರಿ 27: ಪ್ರಧಾನಿ ನರೇಂದ್ರ ಮೋದಿ (Narendra Modi)ಸಮುದ್ರದ ಆಳದಲ್ಲಿ ನವಿಲುಗರಿ ನೆಟ್ಟರೆ ಚಿಗುರುತ್ತಾ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಮಜುನ ಖರ್ಗೆ (Mallikarjun Kharge) ವ್ಯಂಗ್ಯವಾಡಿರುವುದಕ್ಕೆ ಬಿಜೆಪಿ ನಾಯಕ ಜಗದೀಶ್ ಶೆಟ್ಟರ್ (Jagadish Shettar) ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಮಲ್ಲಿಕಾರ್ಜುನ ಖರ್ಗೆ ಟೀಕೆಗೆ ಅರ್ಥವೇ ಇಲ್ಲ. ನಮ್ಮ ಧರ್ಮ, ಸಂಸ್ಕೃತಿ, ಪರಂಪರೆಯನ್ನು ಉಳಿಸುವ ಕೆಲಸವನ್ನು ಮೋದಿ ಮಾಡುತ್ತಿದ್ದಾರೆ. ಇಡೀ ದೇಶ ಆರಾಧನೆ ಮಾಡುವ ಪವಿತ್ರ ಸ್ಥಳಗಳನ್ನು ಅಭಿವೃದ್ಧಿ ಮಾಡುತ್ತಿದ್ದಾರೆ …
Read More »
Laxmi News 24×7