ಕಾರವಾರ: ತಾಲೂಕಿನ ತಲಾಂದ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ವತಿಯಿಂದ ಬುಧವಾರ ರಾತ್ರಿ ಆಯೋಜಿಸಲಾಗಿದ್ದ ಗಣೇಶ ವಿಸರ್ಜನಾ ಮೆರವಣಿಗೆಯ ವೇಳೆ ಮಸೀದಿ ಹಾಗೂ ಮದರಸಾದ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ ಘಟನೆ ನಡೆದಿದೆ. ತಲಾಂದದಿಂದ ಹೊರಟ ಮೆರವಣಿಗೆಯು ಗುಳ್ಳೆ ರೈಲ್ವೆ ಬ್ರಿಡ್ಜ್ ದಾಟಿ ರೈಲ್ವೆ ಸ್ಟೇಷನ್ ರಸ್ತೆಯ ಮೂಲಕ ಸಾಗುತ್ತಿದ್ದಾಗ, ಮಾರ್ಗಮಧ್ಯದಲ್ಲಿದ್ದ ಇಸ್ಮಾಯಿಲ್ ಸುನ್ನಿ ಜಾಮೀಯಾ ಮಸೀದಿ ಹಾಗೂ ತಾಜುಸುನ್ನಾ ಅರೇಬಿಕ್ ಮದರಸಾದ ಮೇಲೆ ಅಪರಿಚಿತರು ಕಲ್ಲುಗಳನ್ನು ತೂರಿದ್ದಾರೆ. ಮುರಿನಕಟ್ಟೆ …
Read More »ಗಣಪತಿ ಮೆರವಣಿಗೆ ವಿಚಾರಕ್ಕೆ ಧಮ್ಕಿ – ಇನ್ಸ್‌ಪೆಕ್ಟರ್ ಧನಂಜಯ್ ಪರ ಯತೀಂದ್ರ ಬ್ಯಾಟಿಂಗ್
ಮೈಸೂರು: ಜಿಲ್ಲೆಯ ಟಿ.ನರಸೀಪುರ ಇನ್ಸ್‌ಪೆಕ್ಟರ್ ಧಮ್ಕಿ ವಿಚಾರದ ಬಗ್ಗೆ 5 ದಿನಗಳ ಬಳಿಕ ಜಿಲ್ಲಾ ಉಸ್ತುವಾರಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೌನ ಮುರಿದಿದ್ದು, ಧನಂಜಯ್ ಪರ ಬ್ಯಾಟಿಂಗ್ ಮಾಡಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇನ್ಸ್‌ಪೆಕ್ಟರ್ ಧನಂಜಯ್ ಯಾವುದೇ ತಪ್ಪು ಮಾಡಿಲ್ಲ. ಅವರು ಬುದ್ಧಿವಾದ ಹೇಳಿದ್ದಾರೆ. ಬುದ್ಧಿವಾದ ಹೇಳುವ ದಾಟಿ ಸ್ವಲ್ಪ ಬದಲಾಗಿದೆ ಅಷ್ಟೇ. ಅದನ್ನ ಬಿಟ್ಟು ಬೇರೆ ಯಾವುದೇ ತಪ್ಪು ಮಾಡಿಲ್ಲ. ತಪ್ಪೇ ಮಾಡದ ಇನ್ಸ್‌ಪೆಕ್ಟರ್ ಮೇಲೆ ಕ್ರಮ ಯಾಕೆ …
Read More »ಬಡವರಿಗೆ ನಿವೇಶನ; ತಿಂಗಳಾಂತ್ಯದೊಳಗೆ ಭೂಮಿ ಗುರುತಿಸುವ ಕಾರ್ಯ ಪೂರ್ಣಗೊಳಿಸಿ: ಪರಮೇಶ್ವರ್
ಬೆಂಗಳೂರು: ಉಪ ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಾದ ಡಾ.ಜಿ.ಪರಮೇಶ್ವರ ಅವರು ಇಂದು ವಿಧಾನಸೌಧದಲ್ಲಿ ಎಲ್ಲ ಜಿಲ್ಲಾಧಿಕಾರಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದರು. ಬಡವರಿಗೆ ನಿವೇಶನ ನೀಡುವ ಕಾರ್ಯಕ್ರಮ ಘೋಷಣೆಯಾದ ಬಳಿಕ ಜನರಿಂದ ಉತ್ತಮ ಪ್ರತಿಕ್ರಿಯೆ ಬರುತ್ತಿದೆ. ಈ ಯೋಜನೆಯನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಬೇಕು. ಕೆಲ ಜಿಲ್ಲೆಗಳಲ್ಲಿ ಭೂಮಿ ಗುರುತಿಸುವ ಕೆಲಸ ಆಗಿಲ್ಲ. ನಿವೇಶನ ಸಿದ್ಧಪಡಿಸಲು ಭೂಮಿ ಗುರುತಿಸುವ …
Read More »ಧ್ವನಿವರ್ಧಕಕ್ಕೆ ಅನುಮತಿ ನೀಡದ ಪೊಲೀಸರು; ಗೌರಿ-ಗಣೇಶನನ್ನು ನಡುರಸ್ತೆಯಲ್ಲೇ ಬಿಟ್ಟು ತೆರಳಿದ ಗ್ರಾಮಸ್ಥರು
ಹಾಸನ: ಗಣಪತಿ ವಿಸರ್ಜನೆ ವೇಳೆ ಧ್ವನಿವರ್ಧಕ ಬಳಕೆಗೆ ಪೊಲೀಸರು ಅನುಮತಿ ನೀಡದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಮೆರವಣಿಗೆಯನ್ನು ಅರ್ಧಕ್ಕೆ ನಿಲ್ಲಿಸಿ ತೆರಳಿದ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಮಾರನಹಳ್ಳಿ ಗ್ರಾಮದಲ್ಲಿ ನಡೆದಿದೆ. ಹಲವು ವರ್ಷಗಳಿಂದ ಮಾರನಹಳ್ಳಿ ಗ್ರಾಮದಲ್ಲಿ ಗ್ರಾಮಸ್ಥರು ಗಣಪತಿಯನ್ನು ಪ್ರತಿಷ್ಠಾಪಿಸಿಕೊಂಡು ಬರುತ್ತಿದ್ದಾರೆ. ಈ ವರ್ಷವೂ ಗೌರಿ-ಗಣಪತಿಯನ್ನು ಪ್ರತಿಷ್ಠಾಪಿಸಿ ಇಂದು ಅದ್ಧೂರಿಯಾಗಿ ಮೆರವಣಿಗೆ ಮೂಲಕ ವಿಸರ್ಜನೆ ಮಾಡಲು ಗ್ರಾಮಸ್ಥರು ತೆರಳುತ್ತಿದ್ದರು. ಒಂದು ಟ್ರ್ಯಾಕ್ಟರ್‌ನಲ್ಲಿ ಧ್ವನಿವರ್ಧಕಗಳನ್ನು ಅಳವಡಿಸಿಕೊಂಡು ಗ್ರಾಮಸ್ಥರು ಮೆರವಣಿಗೆ ನಡೆಸುತ್ತಿದ್ದರು. …
Read More »ಮರ ಬಿದ್ದು ಕಾಡಾನೆ ಮರಿಗೆ ಗಂಭೀರ ಗಾಯ – ಮರಿಯಾನೆ ಎಬ್ಬಿಸಲು ತಾಯಿಯಾನೆ ಪರದಾಟ
ಚಾಮರಾಜನಗರ: ಮರ ಉರುಳಿ ಬಿದ್ದು ಕಾಡಾನೆ ಮರಿ ಗಂಭೀರ ಗಾಯಗೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಬಿಳಿಗಿರಿರಂಗನ ಬೆಟ್ಟದ ಹುಲಿ ಸಂರಕ್ಷಿತ ಅರಣ್ಯದ ಪುಣಜನೂರು ವಲಯದಲ್ಲಿ ನಡೆದಿದೆ. ಮರಿಯಾನೆ ಮೇಲೆ ಬಿದ್ದಿದ್ದ ಮರವನ್ನು ಅರಣ್ಯ ಸಿಬ್ಬಂದಿ ಜೆಸಿಬಿ ಮೂಲಕ ತೆರವುಗೊಳಿಸಿದ್ದು, ಗಾಯಗೊಂಡ ಆನೆಗೆ ಚಿಕಿತ್ಸೆ ನೀಡಲು ಯತ್ನಿಸುತ್ತಿದ್ದಾರೆ. ಆದರೆ ತಾಯಿಯಾನೆ ಮರಿಯಾನೆಯನ್ನು ಬಿಟ್ಟು ಕದಲದ ಕಾರಣ ಚಿಕಿತ್ಸೆ ನೀಡಲು ಕಷ್ಟವಾಗಿದೆ. ತಾಯಿಯಾನೆಯನ್ನು ಎಷ್ಟೇ ಓಡಿಸಲು ಪ್ರಯತ್ನಪಟ್ಟರೂ ಕೂಡ ಪ್ರಯೋಜನವಾಗಲಿಲ್ಲ. ಇತ್ತ ಮರಿಯಾನೆ …
Read More »ಬೆಳಗಾವಿ ಗ್ರಾಮ ಪಂಚಾಯಿತಿಯಲ್ಲಿ ತಂದೆ, ಮಗಳ ಬರ್ಬರ ಹತ್ಯೆ
ಬೆಳಗಾವಿ: ಆಸ್ತಿ ದಾಖಲೆ ಪಡೆಯಲು ಗ್ರಾಮ ಪಂಚಾಯಿತಿಗೆ ಬಂದಿದ್ದ ತಂದೆ-ಮಗಳನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅವರಾದಿ ಗ್ರಾಮದಲ್ಲಿ ನಡೆದಿದೆ. ಮಾಜಿ ಯೋಧ ರುದ್ರಪ್ಪ ಕುಂದರಗಿ (67) ಹಾಗೂ ಅವರ ಪುತ್ರಿ ಶಶಿಕಲಾ ಕುಂದರಗಿ (26) ಹತ್ಯೆಯಾದ ದುರ್ದೈವಿ. ಘಟನೆಯಲ್ಲಿ ರುದ್ರಪ್ಪ ಅವರ ಕಾರು ಚಾಲಕನಿಗೂ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ರುದ್ರಪ್ಪ ಹಾಗೂ ಅವರ …
Read More »ಪಪ್ಪಾಯ ಹಣ್ಣಿನಲ್ಲಿ ಮೂಡಿದ ಗಣೇಶಾಕೃತಿ – ರೈತ ಕುಟುಂಬದಲ್ಲಿ ಸಂತಸ
ಬಳ್ಳಾರಿ: ಗಣಪತಿ ಹಬ್ಬದ ಸಂದರ್ಭದಲ್ಲಿ ಪಪ್ಪಾಯಿ ಹಣ್ಣಿನಲ್ಲಿ ಗಣೇಶನ ರೂಪ ಕಂಡು ರೈತ ಕುಟುಂಬ ಅಚ್ಚರಿಗೊಂಡಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕಾನಾಮಡಗು ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ರೈತ ಬಸವರಾಜ್ ಎನ್ನುವವರ ತೋಟದಲ್ಲಿನ ಪಪ್ಪಾಯದಲ್ಲಿ ಗಣೇಶಾಕೃತಿ ಕಂಡುಬಂದಿದೆ. ಸಹೋದರನಿಗೆ ಹಣ್ಣು ನೀಡಲು ರೈತ ಬಸವರಾಜ್ ಪಪ್ಪಾಯ ಕಿತ್ತು ತಂದಿದ್ದ. ಈ ವೇಳೆ ತಂದಿದ್ದ ಪಪ್ಪಾಯದಲ್ಲಿ ಗಣೇಶಾಕೃತಿ ಕಂಡುಬಂದಿದ್ದು, ಕುಟುಂಬಸ್ಥರು ಸಂತಸ ಪಟ್ಟಿದ್ದಾರೆ. ಆನಂತರ ಪಪ್ಪಾಯಿಯನ್ನೇ ಗಣೇಶನ ರೂಪವೆಂದು ಭಾವಿಸಿದ …
Read More »ವೀಸಾ ಅವಧಿ ಮುಗಿದು 7 ತಿಂಗಳಾದರೂ ಅಕ್ರಮ ವಾಸ; ಇಸ್ರೇಲಿ ಪ್ರಜೆಯನ್ನ ವಶಕ್ಕೆ ಪಡೆದ ಹೊನ್ನಾವರ ಪೊಲೀಸರು
ಕಾರವಾರ: ವೀಸಾ ಅವಧಿ ಮುಗಿದಿದ್ದರೂ ಭಾರತದಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದ ಆರೋಪದಡಿ ಇಸ್ರೇಲ್ ಪ್ರಜೆಯನ್ನ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಸ್ರೇಲ್‌ನ ಮಾರ್ಚಾವಿ ಅಸ್ಸಾಪ್ ಎಂಬ ವಿದೇಶಿ ಪ್ರಜೆಯನ್ನು ಹೊನ್ನಾವರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಸ್ಸಾಪ್ ಅವರ ವೀಸಾ ಅವಧಿ 2025ರ ಏಪ್ರಿಲ್‌ನಲ್ಲೇ ಮುಕ್ತಾಯಗೊಂಡಿತ್ತು ಆದರೂ ತನ್ನ ಗುರುತನ್ನ ಹೇಳದೇ ಅಕ್ರಮವಾಗಿ ದೇಶದಲ್ಲಿ ಸುತ್ತಾಡುತಿದ್ದ. ವೀಸಾ ಅವಧಿ ಮುಗಿದ ಬಳಿಕವೂ ಭಾರತದಲ್ಲೇ ಉಳಿದುಕೊಂಡಿದ್ದು ಗೋಕರ್ಣದಿಂದ ಮುರುಡೇಶ್ವರದತ್ತ ಕಾಲ್ನಡಿಗೆಯಲ್ಲಿ …
Read More »ಖ್ಯಾತ ನಟ ಅನಂತ್ ನಾಗ್‌ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ
ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್ ನಾಗ್ ಅವರನ್ನು ಭಾರತೀಯ ಸಿನಿಮಾ ಕ್ಷೇತ್ರದ ಅತ್ಯುನ್ನತ ಗೌರವ ಎನಿಸಿರುವ ‘ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ’ಗೆ ಕೇಂದ್ರ ಸರ್ಕಾರ ಆಯ್ಕೆ ಮಾಡಿದೆ. ಭಾರತೀಯ ಸಿನಿಮಾದ ಪಿತಾಮಹ ದಾದಾಸಾಹೇಬ್ ಫಾಲ್ಕೆ ಹೆಸರಿನಲ್ಲಿ ಈ ಪ್ರಶಸ್ತಿ ಸ್ಥಾಪಿಸಲಾಗಿದೆ. ಸಿನಿಮಾ ರಂಗದಲ್ಲಿ ಗಣನೀಯ ಸಾಧನೆ ಮಾಡಿದವರಿಗೆ ಈ ಪ್ರಶಸ್ತಿ ನೀಡಲಾಗುತ್ತದೆ. ಸೆಪ್ಟೆಂಬರ್ 22 ರಂದು 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಗುಜರಾತ್‌ನ ಕೆವಾಡಿಯಾದಲ್ಲಿ …
Read More »ಸೆ.18 ರಿಂದ ರಾಜ್ಯದಲ್ಲಿ ಅಮಿತ್ ಶಾ 2 ದಿನ ಪ್ರವಾಸ
ಬೆಳಗಾವಿ/ ಧಾರವಾಡ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 18 ಮತ್ತು 19 ರಂದು ರಾಜ್ಯದಲ್ಲಿ ಎರಡು ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಇತ್ತೀಚೆಗಷ್ಟೇ ಸಚಿವ ಸತೀಶ್ ಜಾರಕಿಹೊಳಿ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಬೆನ್ನಲ್ಲೇ ಅಮಿತ್ ಶಾ ಅವರ ಈ ಭೇಟಿ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಸೆ.18 ರಾತ್ರಿ 10 ಗಂಟೆಗೆ ಹುಬ್ಬಳ್ಳಿಗೆ ಆಗಮಿಸಲಿರುವ ಅಮಿತ್ ಶಾ, …
Read More »
Laxmi News 24×7