ತುಮಕೂರು: ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಕಾಡರಾಮನಹಳ್ಳಿಯಲ್ಲಿ ಮಾಂಸಕ್ಕಾಗಿ ಎಂಟು ಬಾವಲಿಗಳನ್ನು ಕೊಂದು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ರಾಜ್ಯ ಅರಣ್ಯ ಇಲಾಖೆ ಸಿಬ್ಬಂದಿ ಸೋಮವಾರ ಅರೆಸ್ಟ್ ಮಾಡಿದ್ದಾರೆ. ಮಾಗಡಿ ತಾಲ್ಲೂಕಿನ ಹೊಂಬಾಳಮ್ಮಪೇಟೆಯ ನಿವಾಸಿಗಳಾದ ರಂಗನಾಥ, ರಾಮಕೃಷ್ಣ, ಶಿವಶಂಕರ ಹಾಗೂ ರಂಗನಾಥ ಎಂದು ಆರೋಪಿಗಳನ್ನು ಗುರುತಿಸಲಾಗಿದೆ. ಆರೋಪಿಗಳು ಕಾಡರಾಮನಹಳ್ಳಿಯ ಜಮೀನೊಂದರಲ್ಲಿ 8 ಬಾವಲಿಗಳನ್ನು ಮಾಂಸಕ್ಕಾಗಿ ಬೇಟೆಯಾಡಿದ್ದರು. ಈ ಕುರಿತು ಖಚಿತ ಮಾಹಿತಿ ಪಡೆದ ಹುಲಿಯೂರುದುರ್ಗ ವಲಯ ಅರಣ್ಯಾಧಿಕಾರಿ ಜಗದೀಶ್ ಮತ್ತು ಸಿಬ್ಬಂದಿ …
Read More »ಬೆಂಗಳೂರು ಹೊರವಲಯದ ರಸ್ತೆ, ಅಪಾರ್ಟ್ಮೆಂಟ್ಗಳಲ್ಲಿ ಚಿರತೆ ಓಡಾಟ; ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಬೆಂಗಳೂರು: ನಗರದ ಹೊರವಲಯದಲ್ಲಿರುವ ಬೊಮ್ಮನಹಳ್ಳಿಯ ಸಿಂಗಸಂದ್ರ ಎಇಸಿಎಸ್ ಲೇಔಟ್‌ನಲ್ಲಿ ಚಿರತೆ ಸಂಚಾರದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅರಣ್ಯ ಇಲಾಖೆ ಸಿಬ್ಬಂದಿ ಹುಡುಕಾಟ ನಡೆಸುತ್ತಿದ್ದಾರೆ. ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದ್ದಾರೆ. ಮೈಕ್ ಮೂಲಕ ಚಿರತೆ ಇದೆ, ಜನ ಎಚ್ಚರಿಕೆಯಿಂದ ಓಡಾಟ ಮಾಡಬೇಕು ಎಂದು ಇಲಾಖೆ ಸಿಬ್ಬಂದಿ ಮನವಿ ಮಾಡಿದ್ದಾರೆ. ಸಿಂಗಸಂದ್ರ, ಹೊಸಪಾಳ್ಯ, ಕೂಡ್ಲುಭಾಗದಲ್ಲಿ ಚಿರತೆ ಓಡಾಟ ಹೆಚ್ಚಾಗಿದೆ. ಪ್ರತಿಷ್ಠಿತ ಅಪಾರ್ಟ್ಮೆಂಟ್ಗಳ ಆವರಣ ಹಾಗೂ ಲೇಔಟ್ಗಳಲ್ಲಿ ಸಂಚಾರ ಮಾಡಿದೆ. ಕತ್ತಲಾಗುತ್ತಿದ್ದಂತೆ ಅಪಾರ್ಟ್ಮೆಂಟ್ನ ಮೆಟ್ಟಿಲು, …
Read More »ಮೆಟ್ರೋಗೆ ಬಸವಣ್ಣ ಅವರ ಹೆಸರಿಡಬೇಕು.:ಸಚಿವ ಎಂ ಬಿ ಪಾಟೀಲ್
ಬೆಂಗಳೂರು: ನಿಶ್ವಿತವಾಗಿ ಮೆಟ್ರೋಗೆ ಜಗಜ್ಯೋತಿ ಬಸವಣ್ಣ ಅವರ ಹೆಸರಿಡಬೇಕು. ಇದು ಜನರ ಒತ್ತಾಯ, ಹಾಗೆ ನನ್ನ ಒತ್ತಾಯವೂ ಇದೆ ಎಂದು ಸಚಿವ ಎಂ ಬಿ ಪಾಟೀಲ್ ತಿಳಿಸಿದ್ದಾರೆ. ಮೆಟ್ರೋಗೆ ಬಸವೇಶ್ವರರ ಹೆಸರಿಡುವ ವಿಚಾರವಾಗಿ ಪ್ರತಿಕ್ರಿಯಿಸುತ್ತ, ಕೆಂಪೇಗೌಡರು ಬೆಂಗಳೂರನ್ನು ನಿರ್ಮಾಣ ಮಾಡಿದರು. ಅವರ ಹೆಸರನ್ನು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಟ್ಟಿದ್ದೇವೆ. ಬಹಳ ಒಳ್ಳೆಯ ಕೆಲಸ ಮಾಡಿದ್ದೇವೆ. ಇನ್ನೋರ್ವ ಮಹಾತ್ಮರು ಬಸವೇಶ್ವರ. 12ನೇ ಶತಮಾನದಲ್ಲಿ ಸಮಾನತೆ ತಂದವರು. ಅನುಭವ ಮಂಟಪದ ಪರಿಕಲ್ಪನೆ ತಂದವರು. …
Read More »ಧಾರವಾಡ ಕರ್ನಾಟಕ ವಿವಿ ಘಟಿಕೋತ್ಸವ: ಡಿ.ಕೆ.ಶಿವಕುಮಾರ್ ಹೆಸರಲ್ಲಿ ಚಿನ್ನದ ಪದಕ ಪ್ರದಾನ
ಧಾರವಾಡ: ಕರ್ನಾಟಕ ವಿಶ್ವವಿದ್ಯಾಲಯದ 73ನೇ ಘಟಿಕೋತ್ಸವ ಸೋಮವಾರ ಇಲ್ಲಿನ ಗಾಂಧಿ ಭವನದಲ್ಲಿ ನಡೆಯಿತು. ಘಟಿಕೋತ್ಸವದಲ್ಲಿ ಇದೇ ಪ್ರಥಮ ಬಾರಿಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೆಸರಿನಲ್ಲಿ ಒಂದು ಚಿನ್ನದ ಪದಕ ಪ್ರದಾನ ಮಾಡಲಾಯಿತು. ಡಿ.ಕೆ.ಶಿವಕುಮಾರ್ ಹೆಸರಿನಲ್ಲಿ ಈ ವರ್ಷದಿಂದ ಚಿನ್ನದ ಪದಕ ದತ್ತಿ ಇಡಲಾಗಿದೆ. ಕವಿವಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ದಾದಾಗೌಡ ಪಾಟೀಲ್ ಅವರಿಗೆ ಈ ಪದಕ ಲಭಿಸಿತು. ದಾದಾಗೌಡ ಪಾಟೀಲ್ 9 ಪದಕ ಪಡೆದರು. ವಿವಿ ಕನ್ನಡ ವಿಭಾಗದ …
Read More »ಹೊಳೆನರಸೀಪುರ ಶಾಸಕ ಹೆಚ್ ಡಿ ರೇವಣ್ಣ ಅವರಿಗೆ ಹೈಕೋರ್ಟ್ ಮತ್ತೊಮ್ಮೆ ಸಮನ್ಸ್ ಮರು ಜಾರಿ ಮಾಡಿದೆ.
ಬೆಂಗಳೂರು : ಚುನಾವಣಾ ಅಕ್ರಮಗಳನ್ನು ನಡೆಸಿ ಹೊಳೆನರಸೀಪುರ ಶಾಸಕ ಹೆಚ್ ಡಿ ರೇವಣ್ಣ ಆಯ್ಕೆಯಾಗಿದ್ದು, ಅವರ ಶಾಸಕ ಸ್ಥಾನವನ್ನು ಅನರ್ಹಗೊಳಿಸಬೇಕು ಎಂದು ಕೋರಿ ಸಲ್ಲಿಕೆಯಾಗಿರುವ ಅರ್ಜಿಯ ಸಂಬಂಧ ಹೈಕೋರ್ಟ್ ಮತ್ತೊಂದು ಬಾರಿ ಸಮನ್ಸ್ ಜಾರಿ ಮಾಡಿ ಆದೇಶಿಸಿದೆ. ಹೊಳೆನರಸೀಪುರದ ಪರಾಜಿತ ಅಭ್ಯರ್ಥಿ ಹಾಗೂ ವಕೀಲ ದೇವರಾಜೇಗೌಡ ಎಂಬುವರು ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ ಅವರಿದ್ದ ನ್ಯಾಯಪೀಠ ಸಮನ್ಸ್ ಜಾರಿ ಮಾಡಿದೆ. ಈ ಹಿಂದೆ …
Read More »ಮತ್ತೆ 15 ದಿನ ತಮಿಳುನಾಡಿಗೆ 2,600 ಕ್ಯೂಸೆಕ್ ನೀರು ಬಿಡುವಂತೆ CWRC ಆದೇಶ
ನವದೆಹಲಿ/ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ರಾಜ್ಯಕ್ಕೆ ಮತ್ತೊಮ್ಮೆ ಆಘಾತ ಎದುರಾಗಿದೆ. ನವೆಂಬರ್ 1ರಿಂದ ನವೆಂಬರ್ 15ರ ವರೆಗೆ ತಮಿಳುನಾಡಿಗೆ ಪ್ರತಿದಿನ 2,600 ಕ್ಯೂಸೆಕ್ ನೀರು ಬಿಡಬೇಕು ಎಂದು ಕಾವೇರಿ ನೀರು ನಿಯಂತ್ರಣ ಸಮಿತಿ (ಸಿಡಬ್ಲ್ಯೂಆರ್‌ಸಿ) ಕರ್ನಾಟಕಕ್ಕೆ ಆದೇಶ ನೀಡಿದೆ. ಈ ಹಿಂದೆ ಕಾವೇರಿ ನೀರು ನಿರ್ವಹಣಾ ಮಂಡಳಿ ತಮಿಳುನಾಡಿಗೆ 3 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ತಿಳಿಸಿತ್ತು. ಅಕ್ಟೋಬರ್ 16ರಿಂದ ಅಕ್ಟೋಬರ್ 31ರ ವರೆಗೆ ನೀರು ಹರಿಸುವಂತೆ …
Read More »ಸಚಿವ ಸ್ಥಾನ ಸಿಗುವ ಬಗ್ಗೆ ನೂರಕ್ಕೆ ನೂರು ಭರವಸೆ ಇದೆ” ಅಶೋಕ್ ಪಟ್ಟಣ್
ಬೆಂಗಳೂರು: “ಸಚಿವ ಸ್ಥಾನಕ್ಕೆ ಚಾತಕ ಪಕ್ಷಿ ತರ ಕಾಯುತ್ತಿದ್ದೇನೆ. ಸಚಿವ ಸ್ಥಾನ ಸಿಗುವ ಬಗ್ಗೆ ನೂರಕ್ಕೆ ನೂರು ಭರವಸೆ ಇದೆ” ಎಂದು ಆಡಳಿತ ಪಕ್ಷದ ಮುಖ್ಯ ಸಚೇತಕ ಅಶೋಕ್ ಪಟ್ಟಣ್ ತಿಳಿಸಿದರು. ವಿಧಾನಸೌಧದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ನಮಗೂ ಶೀಘ್ರದಲ್ಲೇ ಅವಕಾಶ ಸಿಗುತ್ತೆ. ಮತ್ತೆ ಯಾವುದೇ ವಿಚಾರವನ್ನು ನಾನು ಮಾತನಾಡಲ್ಲ. ಶಾಸಕರು ಈ ಬಗ್ಗೆ ಹೇಳಿ ಹೇಳಿಯೇ ಪಕ್ಷಕ್ಕೆ ಸ್ವಲ್ಪ ಹಿನ್ನಡೆ ಆಗ್ತಿದೆ. ಡಿಸಿಎಂ ಡಿ.ಕೆ.ಶಿವಕುಮಾರ್ ಸಹ ಮಾತನಾಡಬೇಡಿ ಅಂತ …
Read More »ಬೆಂಗಳೂರು: ಗ್ಯಾರೇಜ್‌ನಲ್ಲಿ ಅಗ್ನಿ ಅವಘಡ, ಒಂಬತ್ತಕ್ಕೂ ಹೆಚ್ಚು ಬಸ್‌ಗಳು ಬೆಂಕಿಗೆ ಆಹುತಿ
ಬೆಂಗಳೂರು : ಗ್ಯಾರೇಜ್‌ನಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಒಂಬತ್ತಕ್ಕೂ ಅಧಿಕ ಬಸ್‌ಗಳು ಆಹುತಿಯಾದ ಘಟನೆ ಬೆಂಗಳೂರಿನ ವೀರಭದ್ರ ನಗರದಲ್ಲಿ ನಡೆದಿದೆ. ಎಸ್ವಿ ಕೋಚ್ ಎನ್ನುವ ಹೆಸರಿನ ಗ್ಯಾರೇಜ್‌ನಲ್ಲಿ ಹೊಸ ಹಾಗೂ ಹಳೆಯ ಬಸ್ ಇಂಜಿನ್‌ಗಳಿಗೆ ಬಾಡಿ ಅಳವಡಿಸುವ ಕೆಲಸ ಮಾಡಲಾಗುತ್ತಿತ್ತು. ಇದ್ದಕ್ಕಿದ್ದಂತೆ ಕಾಣಿಸಿಕೊಂಡ ಬೆಂಕಿ ಗ್ಯಾರೇಜ್‌ನಲ್ಲಿ ನಿಂತಿರುವ ಬಸ್‌ಗಳಿಗೆ ಆವರಿಸಿದೆ ಎನ್ನಲಾಗ್ತಿದೆ. ನೋಡ ನೋಡುತ್ತಿದ್ದಂತೆ ಐದಕ್ಕೂ ಅಧಿಕ ಬಸ್‌ಗಳು ಅಗ್ನಿಗಾಹುತಿಯಾಗಿದ್ದು, ಮತ್ತಷ್ಟು ವ್ಯಾಪಿಸುವ ಸಾಧ್ಯತೆಯಿದೆ. ಸದ್ಯ ಘಟನಾ ಸ್ಥಳಕ್ಕೆ ಎರಡು …
Read More »ಮುಂಬೈನ ಐಕಾನಿಕ್ ಪ್ರೀಮಿಯರ್ ಪದ್ಮಿನಿ ಟ್ಯಾಕ್ಸಿಗಳಿಗೆ ವಿದಾಯ.. ಇಂದಿನಿಂದ ‘ಕಪ್ಪು ಹಳದಿ’ ಟ್ಯಾಕ್ಸಿಗಳು ಬಂದ್..
ಹೈದರಾಬಾದ್: ಮುಂಬೈನ ಬೀದಿಗಳಲ್ಲಿ ಪ್ರಯಾಣಿಸುವಾಗ ‘ಕಪ್ಪು ಮತ್ತು ಹಳದಿ’ ಟ್ಯಾಕ್ಸಿಗಳ ಚಿತ್ರವು ಖಂಡಿತವಾಗಿಯೂ ಕಣ್ಮುಂದೆ ಬರುತ್ತದೆ. ಅನೇಕ ವರ್ಷಗಳಿಂದ, ಈ ಟ್ಯಾಕ್ಸಿ ಸೇವೆಯನ್ನು ‘ಕಾಲಿ-ಪಿಲಿ’ ಎಂದು ಕರೆಯಲಾಗುತ್ತಿತ್ತು. ಇದು ಸಾಮಾನ್ಯರಿಂದ ಶ್ರೀಮಂತರವರೆಗಿನ ಮುಂಬೈನ ಎಲ್ಲಾ ವರ್ಗದ ಜನರಿಗೆ ಸಾರಿಗೆ ಸಾಧನವಾಗಿತ್ತು. ಈಗ ಕನಸಿನ ನಗರಿಯಲ್ಲಿ ಕಪ್ಪು ಹಳದಿಯ ನೆನಪುಗಳು ಮೂಲೆ ಸೇರುವ ದಿನ ಸಮೀಪಿಸುತ್ತದೆ. ಮಹಾನಗರಿ ಮುಂಬೈಗೂ ಇಲ್ಲಿನ ‘ಕಾಲಿ-ಪಿಲಿ’ ಟ್ಯಾಕ್ಸಿಗೂ ಅವಿನಾಭಾವ ಸಂಬಂಧವಿದ್ದು, ಈಗ ಸುಮಾರು ಆರು ದಶಕಗಳ ನಂತರ …
Read More »ಸಿದ್ದರಾಮಯ್ಯ ನೇತೃತ್ವದಲ್ಲಿ 5 ವರ್ಷ ಸರ್ಕಾರ ಸ್ಥಿರ : ವಿಧಾನ ಪರಿಷತ್ ಸದಸ್ಯ ಲಖನ ಜಾರಕಿಹೊಳಿ
ಸಿದ್ದರಾಮಯ್ಯ ನೇತೃತ್ವದಲ್ಲಿ ಐದು 5 ಸರ್ಕಾರ ಸ್ಥಿರ : ವಿಧಾನ ಪರಿಷತ್ ಸದಸ್ಯ ಲಖನ ಜಾರಕಿಹೊಳಿ ಗೋಕಾಕ : ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸರ್ಕಾರ 5 ವರ್ಷ ಸ್ಥಿರವಾಗಿರುತ್ತದೆ, ಯಾವುದೇ ಆಪರೇಷನ್ ಇಲ್ಲ ಎಲ್ಲವೂ ಊಹಾಪೋಹ ಅಷ್ಟೇ ಎಂದು ವಿಧಾನ ಪರಿಷತ್ ಸದಸ್ಯ ಲಖನ ಜಾರಕಿಹೊಳಿ ಅವರು ತಿಳಿಸಿದ್ದಾರೆ. ನಗರದ ತಮ್ಮ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಸರ್ಕಾರ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸ್ಥಿರವಾಗಿರುತ್ತದೆ, ಯಾವುದೇ ಆಪರೇಷನ್ ಕಮಲ …
Read More »