Breaking News

ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಅಭ್ಯರ್ಥಿಯಾದರೆ ನನ್ನ ಸಹಮತವಿದೆ ಎಂದು ಪರಿಷತ್ ಸದಸ್ಯ ಹೆಚ್ ​​ವಿಶ್ವನಾಥ್

ಮೈಸೂರು: ಇಂಡಿಯಾ ಒಕ್ಕೂಟದಿಂದ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಅಭ್ಯರ್ಥಿಯಾಗಿ ಆಯ್ಕೆಯಾದರೆ ಅದಕ್ಕೆ ನನ್ನ ಸಂಪೂರ್ಣ ಸಹಮತವಿದೆ ಎಂದು ವಿಧಾನ ಪರಿಷತ್ ಸದಸ್ಯ ಹೆಚ್​​ವಿಶ್ವನಾಥ್ ಹೇಳಿದರು. ಜಲದರ್ಶಿನಿ ಅತಿಥಿ ಗೃಹದಲ್ಲಿ ಇಂದು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಮಲ್ಲಿಕಾರ್ಜುನ ಖರ್ಗೆ ಸಾಮಾನ್ಯ ಕುಟುಂಬದಿಂದ ಬಂದವರು. ಎಲ್ಲ ರೀತಿಯ ಆಡಳಿತ ಅನುಭವ ಇರುವವರು. ದೇವೇಗೌಡರ ನಂತರ ರಾಜ್ಯದಿಂದ ಇನ್ನೊಬ್ಬರು ಪ್ರಧಾನಿ ಆಗಲಿ ಎಂಬುದು ನನ್ನ ಆಸೆ ಎಂದರು. ಅಡ್ವಾಣಿ ಬಂದರೆ ಮೋದಿಗೆ ಕ್ರೆಡಿಟ್ ಸಿಗುವುದಿಲ್ಲ: ರಾಮ …

Read More »

ರಾಜ್ಯದಲ್ಲಿ ಕೋವಿಡ್‌ ಹೈ ಅಲರ್ಟ್‌: ಕಿಮ್ಸ್​ ಕೈ ಸೇರದ ಸರ್ಕಾರದ ಮಾರ್ಗಸೂಚಿ

ಹುಬ್ಬಳ್ಳಿ: ಕೇರಳದಲ್ಲಿ ಕೋವಿಡ್​ ಉಪ ತಳಿ ಜೆಎನ್‌-1 ಪತ್ತೆಯಾಗಿದ್ದು, ರಾಜ್ಯದಲ್ಲಿಯೂ ಆತಂಕ ಆರಂಭವಾಗಿದೆ. ಹೀಗಾಗಿ ರಾಜ್ಯ ಆರೋಗ್ಯ ಇಲಾಖೆ ಕರ್ನಾಟಕದಲ್ಲಿ ಹೈಲರ್ಟ್ ಘೋಷಣೆ ಮಾಡಿದೆ. ಜತೆಗೆ, 60 ವರ್ಷ ಮೇಲ್ಪಟ್ಟವರು, ಹೃದಯ ಸಂಬಂಧಿ ಸಮಸ್ಯೆ ಇರುವವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಕೊರೊನಾ ಲಕ್ಷಣ ಇರುವವರಿಗೂ ಮಾಸ್ಕ್‌ ಕಡ್ಡಾಯ ಮಾಡಲಾಗಿದೆ ಎಂದು ಕಿಮ್ಸ್ ಆಸ್ಪತ್ರೆಯ ಪ್ರಭಾರ ನಿರ್ದೇಶಕ ಡಾ. ಎಸ್.ಎಸ್.ಕಮ್ಮಾರ ಹೇಳಿದ್ದಾರೆ‌.‌ ಈಗಾಗಲೇ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಅವರು ರಾಜ್ಯದಲ್ಲಿ ಕೊರೊನಾ …

Read More »

ಕೊರೊನಾ ಸೋಂಕು ತಗುಲಿದ್ದ ವೃದ್ಧ ಸಾವು: ಟೆಸ್ಟಿಂಗ್ ಹೆಚ್ಚಳಕ್ಕೆ ಸೂಚನೆ ಕೊಟ್ಟ ಆರೋಗ್ಯ ಸಚಿವರು

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್​ ಸೋಂಕು ತಗುಲಿದ್ದ ಒಬ್ಬರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.   ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಇಂದು ಎಲ್ಲ ರಾಜ್ಯಗಳ ಆರೋಗ್ಯ ಸಚಿವರ ಜೊತೆ ವಿಡಿಯೋ ಸಂವಾದದ ಮೂಲಕ ಸಭೆ ನಡೆಸಿದರು. ವಿಕಾಸಸೌಧದಲ್ಲಿ ಇಂದು ವಿಡಿಯೋ ಕಾನ್ಫರೆನ್ಸ್​​ನಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು, ಬೆಂಗಳೂರಿನ ಚಾಮರಾಜಪೇಟೆಯಲ್ಲಿ 64 ವರ್ಷದ ವೃದ್ಧರೊಬ್ಬರು ಮೃತಪಟ್ಟಿದ್ದಾರೆ. …

Read More »

ಕೊರೊನಾ ಟೆಸ್ಟಿಂಗ್ ಹೆಚ್ಚಳ; ನಿತ್ಯ 5,000 ಟೆಸ್ಟಿಂಗ್ ಗುರಿ : ದಿನೇಶ್ ಗುಂಡೂರಾವ್

ಬೆಂಗಳೂರು : ನಾಳೆಯಿಂದ ಕೊರೊನಾ ಟೆಸ್ಟಿಂಗ್ ಹೆಚ್ಚು ಮಾಡಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ತಿಳಿಸಿದರು. ಕೇರಳದಲ್ಲಿ ಕೊರೊನಾ ರೂಪಾಂತರಿ ತಳಿ ಕಂಡುಬಂದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳುವ ಕುರಿತು ವಿಕಾಸಸೌಧ ಕಚೇರಿಯಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿದರು. ನಾಳೆ ಕೇಂದ್ರ ಆರೋಗ್ಯ ಸಚಿವರು ರಾಜ್ಯಗಳ‌ ಜೊತೆ ಕೊರೊನಾ ಸ್ಥಿತಿಗತಿ ಸಂಬಂಧ ಸಭೆ ಕರೆದಿದ್ದಾರೆ. ಸಭೆಯಲ್ಲಿ ಕೊರೊನಾ ಸ್ಥಿತಿಗತಿ ಬಗ್ಗೆ ಚರ್ಚೆ ನಡೆಯಲಿದೆ. …

Read More »

ತುರ್ತಾಗಿ ಉನ್ನತ ಮಟ್ಟದ ಸಭೆ ಕರೆದು, ಬರ ಪರಿಹಾರ ನೀಡಲು ಪ್ರಧಾನಿಗೆ ಒತ್ತಾಯಿಸಿದ್ದೇವೆ: ಸಿಎಂ

ನವದೆಹಲಿ/ಬೆಂಗಳೂರು: ಗೃಹ ಸಚಿವ ಅಮಿತ್ ಶಾ ನೇತೃತ್ವದ ಹೈ ಪವರ್ ಸಮಿತಿ ಸಭೆಯನ್ನು ತುರ್ತಾಗಿ ನಡೆಸಿ, ಶೀಘ್ರ ಬರ ಪರಿಹಾರ ಒದಗಿಸಲು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಒತ್ತಾಯಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಪ್ರಧಾನಿ ಭೇಟಿ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, “ರಾಜ್ಯಕ್ಕೆ ಬರ ಪರಿಹಾರ ಸಿಗಬೇಕು ಎಂದರೆ ಗೃಹ ಸಚಿವ ಅಮಿತ್ ಶಾ ನೇತೃತ್ವದ ಹೈ ಪವರ್ ಕಮಿತಿ ಸಭೆ ನಡೆಯಬೇಕು. ಆದರೆ, ನಾವು ಇದುವರೆಗೂ ಮೂರು ಬಾರಿ …

Read More »

ಮಹಾರಾಷ್ಟ್ರದಲ್ಲಿ ಜಾತಿ ಆಧಾರಿತ ಜನಗಣತಿ ವಿರೋಧಿಸಿದ ಆರ್‌ಎಸ್‌ಎಸ್

ನಾಗ್ಪುರ : ಮಹಾರಾಷ್ಟ್ರ ರಾಜ್ಯದಲ್ಲಿ ಜಾತಿ ಆಧಾರಿತ ಜನಗಣತಿಗೆ ಜನರು ಬೇಡಿಕೆ ಇಟ್ಟಿದ್ದಾರೆ. ಆದರೆ, ಆರ್‌ಎಸ್‌ಎಸ್ ಜಾತಿ ಆಧಾರಿತ ಜನಗಣತಿ ವಿರೋಧಿಸಿದೆ ಎಂದು ವಿದರ್ಭ ವಲಯದ ಸಹ ಸಂಘಚಾಲಕ್ ಶ್ರೀಧರ ಗಾಡಗೆ ಇಂದು ನಾಗ್ಪುರದಲ್ಲಿ ಹೇಳಿದರು. ಜಾತಿ ಆಧಾರಿತ ಜನಗಣತಿಯನ್ನು ಆರ್​ಎಸ್​ಎಸ್​ ವಿರೋಧಿಸಿದ ನಂತರ ವಿರೋಧ ಪಕ್ಷದ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಹಾರಾಷ್ಟ್ರದಲ್ಲಿ ಜಾತಿವಾರು ಜನಗಣತಿ ಬಗ್ಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ವಿದರ್ಭ ಪ್ರದೇಶದ ಸಹಸಂಚಾಲಕ್ ಶ್ರೀಧರ್ ಗಾಡ್ಗೆ ವಿರೋಧ ವ್ಯಕ್ತಪಡಿಸಿದ್ದಾರೆ. …

Read More »

ಲೋಕಸಭೆ ಚುನಾವಣೆಗೆ ಬಿಜೆಪಿಯಿಂದ ನಟಿ ಕಂಗನಾ ಸ್ಪರ್ಧಿಸುವುದು ಖಚಿತ

ಮಂಡಿ (ಹಿಮಾಚಲ ಪ್ರದೇಶ): ಬಾಲಿವುಡ್​ ಚಿತ್ರರಂಗದ ಖ್ಯಾತ ನಟಿ ಕಂಗನಾ ರಣಾವತ್​ 2024ರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿರಂತರ ಚರ್ಚೆಗಳು ನಡೆಯುತ್ತಿವೆ. ಅವರು ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಸಿದ್ಧತೆ ನಡೆಸುತ್ತಿದ್ದಾರೆ ಎಂಬ ವದಂತಿಗಳು ಇವೆ. ಈ ಬಗ್ಗೆ ಇದೀಗ ಕಂಗನಾ ತಂದೆ ಅಮರ್​ದೀಪ್​ ರಣಾವತ್​ ಸ್ಪಷ್ಟಪಡಿಸಿದ್ದಾರೆ. ತಮ್ಮ ಮಗಳು ಲೋಕಸಭೆ ಚುನಾವಣೆಗೆ ಬಿಜೆಪಿ ಪಕ್ಷದಿಂದ ಸ್ಪರ್ಧಿಸುವುದು ಖಚಿತ ಎಂದು ತಿಳಿಸಿದ್ದಾರೆ. ಕಳೆದ ನವೆಂಬರ್‌ನಲ್ಲಿ ಕಂಗನಾ ತಮ್ಮ ರಾಜಕೀಯ ವಲಯದ ಆಕಾಂಕ್ಷೆಗಳ …

Read More »

ರೈತರ ಪಂಪ್​ಸೆಟ್​ಗಳಿಗೆ ವಿದ್ಯುತ್ ಕಡಿತ: ಕಾರಣ ಬಿಚ್ಚಿಟ್ಟ ಹೆಸ್ಕಾಂ ಎಂಡಿ

ಹುಬ್ಬಳ್ಳಿ : ಸಮರ್ಪಕವಾಗಿ ಮಳೆಯಾಗದೇ ಅನ್ನದಾತ ಕಂಗಾಲಾಗಿದ್ದಾನೆ. ಇದರ ಜೊತೆಗೆ ವಿದ್ಯುತ್ ನಂಬಿ ಕೃಷಿ ಮಾಡುವ ರೈತನ ಜೊತೆಗೆ ಹೆಸ್ಕಾಂ ಇಲಾಖೆ ಕಣ್ಣಾಮುಚ್ಚಾಲೆ ಆಟ ಆಡುತ್ತಿದೆ. ನೀರಾವರಿಗೆ ಬೇಕಾದ ವಿದ್ಯುತ್ ಪೂರೈಸಲು ಮೀನಮೇಷ ಎಣಿಸುತ್ತಿದ್ದು, ರೈತ ಸಮುದಾಯಕ್ಕೆ ನುಂಗಲಾರದ ಬಿಸಿ ತುಪ್ಪವಾಗಿದೆ. ಧಾರವಾಡ ಜಿಲ್ಲೆಯ ರೈತರ ಪಂಪ್‌ಸೆಟ್‌ಗಳಿಗೆ ಕಳೆದ ಕೆಲ ದಿನಗಳಿಂದ ನಿಗದಿತ ಸಮಯಕ್ಕೆ ವಿದ್ಯುತ್ ನೀಡದಿರುವುದು ರೈತರಿಗೆ ಅನಾನುಕೂಲವಾಗುತ್ತಿದೆ. ರೈತರು ಮಳೆಯಿಲ್ಲದೇ ಕಂಗಾಲಾಗಿದ್ದಾರೆ. ಬಿತ್ತಿದ ಬೆಳೆ ಒಣಗುತ್ತಿದೆ. ಆದರೆ, ಬೋರ್‌ವೆಲ್ …

Read More »

ಮೈಸೂರಲ್ಲಿ ಕೋವಿಡ್​ ಆತಂಕ

ಮೈಸೂರು: ಕೇರಳದಲ್ಲಿ ಕೋವಿಡ್ ರೂಪಾಂತರಿ ಜೆಎನ್.1 ಪ್ರಕರಣ ವರದಿಯಾದ ಹಿನ್ನೆಲೆ ಹೆಚ್​ಡಿ ಕೋಟೆ ತಾಲೂಕಿನ ಬಾವಲಿ ಚೆಕ್​ ಪೋಸ್ಟ್​ಗೆ ತಾಲೂಕು ಆರೋಗ್ಯಾಧಿಕಾರಿ ಡಾ ರವಿಕುಮಾರ್.ಟಿ. ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆರೋಗ್ಯಾಧಿಕಾರಿ ಡಾ ರವಿಕುಮಾರ್​ ಮಾತನಾಡಿ, “ಕೇರಳದ ವಯನಾಡ್ ಜಿಲ್ಲೆಯಲ್ಲಿ ಕೋವಿಡ್​ ಪ್ರಕರಣಗಳು ಕಂಡುಬಂದ ಹಿನ್ನೆಲೆ ಇಂದು ಹೆಚ್​ಡಿ ಕೋಟೆಯ ಬಾವಲಿ ಚೆಕ್​ ಪೋಸ್ಟ್​ಗೆ ಆಗಮಿಸಿ ಪರಿಶೀಲನೆ ನಡೆಸಿದ್ದೇನೆ. ನಾಳೆಯಿಂದ ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 2 ಗಂಟೆ ವರೆಗೆ ಹಾಗೂ …

Read More »

ಪ್ರಧಾನಿ ಅಭ್ಯರ್ಥಿಯಾಗಿ ಖರ್ಗೆ ಹೆಸರು ಪ್ರಸ್ತಾಪಿಸಿದ ಮಮತಾ, ಕೇಜ್ರಿವಾಲ್

ನವದೆಹಲಿ: ಪ್ರತಿಪಕ್ಷಗಳ ‘ಇಂಡಿಯಾ’ ಮೈತ್ರಿಕೂಟದಲ್ಲಿ ಮಂಗಳವಾರ ಮಹತ್ವದ ಬೆಳವಣಿಗೆ ನಡೆದಿದೆ. ಪ್ರಧಾನಿ ಅಭ್ಯರ್ಥಿಯಾಗಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರನ್ನು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಪ್ರಸ್ತಾಪಿಸಿದ್ದಾರೆ. ಆದರೆ, ವರಿಷ್ಠ ನಾಯಕ ಖರ್ಗೆ, ಮೊದಲು ಚುನಾವಣೆಯಲ್ಲಿ ಗೆಲ್ಲುವುದು ಮುಖ್ಯವಾಗಿದೆ. ಉಳಿದೆಲ್ಲವನ್ನೂ ನಂತರ ನಿರ್ಧರಿಸಬಹುದು ಎಂದು ಹೇಳಿದ್ದಾರೆ.   ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದು ಇಂಡಿಯಾ ಮೈತ್ರಿಕೂಟದ ನಾಲ್ಕನೇ ಸಭೆ ಜರುಗಿದ್ದು. 28 …

Read More »