ನವದೆಹಲಿ/ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಂಗಳವಾರ ನವದೆಹಲಿಯಲ್ಲಿ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಅವರನ್ನು ಭೇಟಿ ಮಾಡಿ, ಕೇಂದ್ರ ಪುರಸ್ಕೃತ ಯೋಜನೆಗಳ ಅನುದಾನ ಬಿಡುಗಡೆ ಕುರಿತಂತೆ ಸುದೀರ್ಘವಾಗಿ ಮಾತುಕತೆ ನಡೆಸಿದರು. ಕೇಂದ್ರ ಪುರಸ್ಕೃತ ಯೋಜನೆಗಳಾದ ಸಖಿ ಒನ್ ಸ್ಟಾಪ್ ಸೆಂಟರ್, ಸಖಿ ನಿವಾಸ್, ಶಕ್ತಿ ಸದನ್, ಉಜ್ವಲ್ ಹಾಗೂ ಸ್ವಾಧಾರ ಗೃಹ ಯೋಜನೆಗಳ ಅನುದಾನ ಬಿಡುಗಡೆಗೊಳಿಸುವಂತೆ …
Read More »ಖಾನಾಪುರದ ಭಾಗ್ಯಲಕ್ಷ್ಮಿ ಸಹಕಾರಿ ಸಕ್ಕರೆ ಕಾರ್ಖಾನೆ ಅವ್ಯವಹಾರ ಆರೋಪ ಚರ್ಚೆಗೆ ಬನ್ನಿ: ಶಾಸಕ ಹಲಗೇಕರ್ಗೆ ನಿಂಬಾಳ್ಕರ್ ಸವಾಲು
ಬೆಳಗಾವಿ: ಖಾನಾಪುರದ ಭಾಗ್ಯಲಕ್ಷ್ಮಿ ಸಹಕಾರಿ ಸಕ್ಕರೆ ಕಾರ್ಖಾನೆ ಅವ್ಯವಹಾರ ಆರೋಪದಲ್ಲಿ ರಾಜಕೀಯ ಏನೂ ಇಲ್ಲ. ಈಗ ಚುನಾವಣೆ ಮುಗಿದಿದ್ದು, ನೀವು ದಾಖಲೆ ಸಮೇತ ಬಹಿರಂಗ ಚರ್ಚೆ ಬರುವಂತೆ ಶಾಸಕ ವಿಠ್ಠಲ ಹಲಗೇಕರ್ಗೆ ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್ ಸವಾಲ್ ಹಾಕಿದ್ದಾರೆ. ಖಾನಾಪುರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಮಾಹಿತಿ ಹಕ್ಕಿನಡಿ ಯಾವುದೇ ದಾಖಲೆ ಕೊಡ್ತಿಲ್ಲ. ಕಳೆದ 6 ವರ್ಷಗಳಿಂದ ಬೆನ್ನು ಬಿದ್ದ ಮೇಲೆ ನಿವೃತ್ತ ನ್ಯಾಯಾಧೀಶ ಎಸ್.ಪಿ.ವಸ್ತ್ರದ ಅವರ ನೇತೃತ್ವದಲ್ಲಿ ತನಿಖೆ …
Read More »ಖೇಲೋ ಇಂಡಿಯಾ ಪ್ಯಾರಾ ಗೇಮ್ಸ್‌ನಲ್ಲಿ ಬೆಳ್ಳಿ ಪದಕವನ್ನು ಗೆದ್ದ ಬೆಳಗಾವಿಯ ಸಂಜೀವ್ ಹಮ್ಮನ್ನವರ
ಬೆಳಗಾವಿ: ದೆಹಲಿಯ ಐಜಿ ಸ್ಟೇಡಿಯಂನಲ್ಲಿ ನಡೆದ ಖೇಲೋ ಇಂಡಿಯಾ ಪ್ಯಾರಾ ಗೇಮ್ಸ್‌ನಲ್ಲಿ ಬೆಳಗಾವಿಯ ಕೆಪಿಟಿಸಿಎಲ್ ಮತ್ತು ಹೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಸಂಜೀವ್ ಹಮ್ಮನ್ನವರ ಬೆಳ್ಳಿ ಪದಕವನ್ನು ಗೆದ್ದಿದ್ದಾರೆ. ಡಿಸೆಂಬರ್ 10 ರಿಂದ 17ರ ವರೆಗೆ ನಡೆದ ಕ್ರೀಡಾಕೂಟದಲ್ಲಿ ಪ್ಯಾರಾ ಟೇಬಲ್ ಟೆನಿಸ್ ಸೆಮಿಫೈನಲ್ ಪಂದ್ಯದಲ್ಲಿ ಕರ್ನಾಟಕದ ಸಂಜೀವ್ ಹಜೇರಿ ವಿರುದ್ಧ 3-0 ಅಂತರದಲ್ಲಿ ಗೆದ್ದಿದ್ದ ಸಂಜೀವ ಹಮ್ಮನ್ನವರ ಫೈನಲ್‌ನಲ್ಲಿ ಹರಿಯಾಣದ ಯಗೇಶ್ ನಾಡಾರ್ ವಿರುದ್ಧ 3-1 ಅಂತರದಿಂದ ಪರಾಭವಗೊಂಡು ಬೆಳ್ಳಿ ಪದಕ್ಕೆ …
Read More »2023ರಲ್ಲಿ ಯಶಸ್ವಿಯಾದ ಕನ್ನಡ ಚಿತ್ರರಂಗದ ಬ್ಯೂಟಿಫುಲ್ ನಟಿಯರು
ರುಕ್ಮಿಣಿ ವಸಂತ್, ಚೈತ್ರಾ ಆಚಾರ್, ಅಮೃತಾ ಪ್ರೇಮ್ ಸೇರಿದಂತೆ ಸ್ಯಾಂಡಲ್ವುಡ್ನ ಕೆಲ ನಟಿಯರಿಗೆ ಈ ವರ್ಷವು ಲಕ್ಕಿ ಇಯರ್ ಎಂದೇ ಹೇಳಬಹುದು. ಕನ್ನಡ ಚಿತ್ರರಂಗದಲ್ಲಿ ವರ್ಷಕ್ಕೆ ನೂರಾರು ಸಿನಿಮಾಗಳು ನಿರ್ಮಾಣ ಆಗುತ್ತಿವೆ. ಈ ವರ್ಷ ಕೂಡ ಇದಕ್ಕೆ ಹೊರತಾಗಿಲ್ಲ. 2023 ಕೊನೆಗೊಳ್ಳುವುದಕ್ಕೆ ಕೆಲವೇ ದಿನಗಳು ಬಾಕಿ ಇದೆ. ಈಗಾಗಲೇ ಚಂದನವನದಲ್ಲಿ 200ಕ್ಕೂ ಹೆಚ್ಚು ಚಿತ್ರಗಳು ಬಿಡುಗಡೆ ಆಗಿವೆ. ಇವುಗಳಲ್ಲಿ ಕೆಲ ನಟಿಮಣಿಯರು ತಮ್ಮ ಅಭಿನಯ ಹಾಗೂ ಗ್ಲ್ಯಾಮರ್ನಿಂದ ಕನ್ನಡಿಗರ ಹೃದಯ …
Read More »ಒಂದು ವಾಹನದ ಮೇಲೆ ಪೋಸ್ಟರ್ ಅಂಟಿಸಿಕೊಳ್ಳಲು ಸಹ ನಾವು ಬಿಡಲ್ಲ. ಹಿಡಿದು ಕಿತ್ತಾಕಿಸುತ್ತೇವೆ. ಈ ಘಟನೆಯಲ್ಲಿ ಸಾರ್ವಜನಿಕರು ಭಾಗಿಯಾಗಿ ತಡೆಯಬಹುದಿತ್ತು
ಬೆಳಗಾವಿ: ವಂಟಮೂರಿ ಪ್ರಕರಣದಲ್ಲಿ ಬಿಜೆಪಿ ಆರೋಪ ಮಾಡುತ್ತಿರುವುದಕ್ಕೆ ತಿರುಗೇಟು ಕೊಟ್ಟಿರುವ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ, ಇದರಲ್ಲಿ ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ. ಗೃಹ ಸಚಿವರು ಸ್ಥಳಕ್ಕೆ ಭೇಟಿ ವಿಚಾರಣೆ ಮಾಡಿದ್ದಾರೆ. ಅವರು ಯಾಕೆ ರಾಜೀನಾಮೆ ಕೊಡಬೇಕು.? ಯಾರು ಕೂಡ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ಏನು ಮಾಡಬೇಕು ಎಂದು ಸಲಹೆ ನೀಡಲಿ ಎಂದು ತಿಳಿಸಿದ್ದಾರೆ. ವಂಟಮೂರಿ ಪ್ರಕರಣದಲ್ಲಿ ಬಿಜೆಪಿ ರಾಜಕೀಯ: ಬಿಜೆಪಿ ವಂಟಮೂರಿ ಪ್ರಕರಣಕ್ಕೆ ಹೆಚ್ಚು ಆಸಕ್ತಿ ತೋರುತ್ತಿರುವ ವಿಚಾರಕ್ಕೆ …
Read More »ವನ್ಯಜೀವಿ ಅಂಗಾಂಗಗಳನ್ನು ಹಿಂದಿರುಗಿಸಲು ಸಾರ್ವಜನಿಕರಿಗೆ ಕೊನೆಯ ಅವಕಾಶ
ಬೆಂಗಳೂರು : ಹುಲಿ ಉಗುರು ವಿವಾದದ (Tiger claw controversy) ಬಳಿಕ ರಾಜ್ಯ ಸರ್ಕಾರ ವನ್ಯಜೀವಿ ಅಂಗಾಂಗಗಳನ್ನು ಹಿಂದಿರುಗಿಸಲು ಸಾರ್ವಜನಿಕರಿಗೆ ಕೊನೆಯ ಅವಕಾಶ ನೀಡಲು ಚಿಂತನೆ ನಡೆಸಿದೆ. ಈ ಕುರಿತು ಅರಣ್ಯ ಇಲಾಖೆ (Forest department) ಸಚಿವ ಈಶ್ವರ ಖಂಡ್ರೆ (Eshwar Khandre) ಎ.ಜಿ. ಶಶಿಕಿರಣ್ ಶೆಟ್ಟಿ ನೇತೃತ್ವದ ಅಧಿಕಾರಿಗಳೊಡನೆ ಚರ್ಚೆ ನಡೆಸಿದ್ದಾರೆ. ವನ್ಯ ಜೀವಿಗೆ ಸಂಬಂಧಿಸಿದ ವಸ್ತುಗಳು ಚರ್ಮ, ಮೂಳೆ. ಕೊಂಬು, ಕೂದಲು ಇತ್ಯಾದಿ ವಸ್ತುಗಳ ಸಂಗ್ರಹಿಸುವುದು ಕಾನೂನಿನ …
Read More »ಸಂಸದ ಪ್ರಜ್ವಲ್, ಭವಾನಿ ರೇವಣ್ಣ ವಿರುದ್ಧ ಕಿಡ್ನಾಪ್, ಚಿತ್ರಹಿಂಸೆ ಆರೋಪ
ಹಾಸನ : ಸಂಸದ ಪ್ರಜ್ವಲ್ ರೇವಣ್ಣ (MP Prajwal revanna) ಹಾಗೂ ಶಾಸಕ ಎಚ್.ಡಿ. ರೇವಣ್ಣ (MLA H D Revanna) ಪತ್ನಿ ಭವಾನಿ ರೇವಣ್ಣ (Bhavani revanna) ತನ್ನನ್ನು ಹಾಗೂ ತನ್ನ ಪತ್ನಿಯನ್ನು ಅಪಹರಿಸಿ (Kidnap) ಚಿತ್ರಹಿಂಸೆ ನೀಡಿದ್ದಾರೆ ಎಂದು ಅವರ ಮಾಜಿ ಕಾರು ಚಾಲಕ ಕಾರ್ತಿಕ್ ಆರೋಪಿಸಿದ್ದಾನೆ. ಈ ಕುರಿತು ದಕ್ಷಿಣ ವಲಯದ ಐಜಿಪಿಗೆ ದೂರನ್ನೂ ಸಹ ದಾಖಲಿಸಿದ್ದಾನೆ. ತಾನು ಹತ್ತು ವರ್ಷಗಳ ಕಾಲ ಅವರ ಬಳಿ …
Read More »ಪ್ರಧಾನಿ ಭೇಟಿಯಾದ ಸಿಎಂ – 18 ಸಾವಿರ ಕೋಟಿ ರೂ. ಪರಿಹಾರಕ್ಕೆ ಬೇಡಿಕೆ
ನವದೆಹಲಿ : ಸಿಎಂ ಸಿದ್ದರಾಮಯ್ಯ (CM Siddaramaiah) ಮಂಗಳವಾರ ಪ್ರಧಾನಿ ನರೇಂದ್ರ ಮೋದಿಯವರನ್ನು (PM Narendra modi) ಭೇಟಿಯಾಗಿ ಚರ್ಚೆ ನಡೆಸಿದರು. ಕರ್ನಾಟಕದ ಬರಗಾಲ, ಅನುದಾನ, ಬರ ಪರಿಹಾರ ಮುಂತಾದವುಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರಧಾನಿ ಮೋದಿಯವರೊಡನೆ ಚರ್ಚಿಸಿದ್ದಾರೆ. ರಾಜ್ಯದ ಬರ ಪರಿಸ್ಥಿತಿಯ ಕುರಿತು ವಿವರಿಸಿ, ಶೀಘ್ರವೇ 18 ಸಾವಿರ ಕೋಟಿ ರೂ. ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದರು. ಇದರಲ್ಲಿ 4.6 ಸಾವಿರ ಕೋಟಿ ರೂ. ಇನ್‌ಪುಟ್ …
Read More »ಈ ದಿನ ʻಗೃಹ ಲಕ್ಷ್ಮಿʼ 4ನೇ ಕಂತಿನ ಹಣ ಖಾತೆಗೆ ಜಮಾ!
ಬೆಂಗಳೂರು : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಮೂರು ಕಂತುಗಳು ಮನೆಯ ಯಜಮಾನಿ ಖಾತೆಗೆ ಜಮಾ ಆಗಿದ್ದು, ಇದೀಗ 4ನೇ ಕಂತಿನ ಹಣ ಈ ದಿನದೊಳಗೆ ಜಮಾ ಆಗುವ ಸಾಧ್ಯತೆ ಇದೆ. ಈಗಾಗಲೇ ಮೂರನೇ ಕಂತು ಪಡೆದಿರುವ ಯಜಮಾನಿಯರ ಖಾತೆಗೆ ಇದೀಗ ನಾಲ್ಕನೇ ಕಂತಿನ ಹಣ ಜಮೆ ಮಾಡಲು ಸರ್ಕಾರ ಸಿದ್ಧತೆ ನಡೆಸಿದ್ದು, ಮೂಲಗಳ ಪ್ರಕಾರ ಈ ವಾರದಲ್ಲೇ ಎಲ್ಲ ಯಜಮಾನಿಯರ ಖಾತೆಗೆ ಹಣ ಜಮಾ …
Read More »ಲೋಕಸಭಾ ಚುನಾವಣೆಯಲ್ಲಿ ಈ ಕ್ಷೇತ್ರದಿಂದ ಯತ್ನಾಳ್ ಸ್ಪರ್ಧೆ?;
ಬೆಂಗಳೂರು,ಡಿಸೆಂಬರ್ 19: 2023 ರ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟಗೊಂಡು ಆರು ತಿಂಗಳ ಬಳಿಕ ಬಿಜೆಪಿ ಹೈಕಮಾಂಡ್ ವಿಜಯೇಂದ್ರ ಅವರನ್ನ ಆಯ್ಕೆ ಮಾಡಿರುವುದು ಬಿಜೆಪಿಗೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಿಸಿ ತುಪ್ಪದಂತಾಗಿದ್ದಾರೆ. ಹೌದು, ಕರ್ನಾಟಕ ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ವಿಪಕ್ಷ ನಾಯಕ ಸ್ಥಾನದ ಮೇಲೆ ಕಣ್ಣೀಟ್ಟಿದ ಯತ್ನಾಳ್ ಗೆ ಈ ಎರಡು ಸ್ಥಾನಗಳು ಕೈ ತಪ್ಪಿದ ಬಳಿಕ ಸ್ವಪಕ್ಷದ ನಾಯಕರಾದ ಮಾಜಿ ಮುಖ್ಯಮಂತ್ರಿ ಬಿ ಎಸ್ …
Read More »
Laxmi News 24×7