Breaking News

ಆಯುಧ ಪೂಜೆ, ವಿಜಯದಶಮಿ ಹಬ್ಬ: ಬೆಂಗಳೂರಿನಲ್ಲಿ ಭಾರಿ ಪ್ರಮಾಣದ ಹೆಚ್ಚುವರಿ ತ್ಯಾಜ್ಯ

ಬೆಂಗಳೂರು: ಆಯುಧ ಪೂಜೆ ಹಾಗೂ ವಿಜಯದಶಮಿ ಹಬ್ಬದ ಹಿನ್ನೆಲೆಯಲ್ಲಿ ನಗರದಲ್ಲಿ ಭಾರಿ ಪ್ರಮಾಣದ ಹೆಚ್ಚುವರಿ ತ್ಯಾಜ್ಯ ಉತ್ಪತ್ತಿಯಾಗಿದ್ದು, ಬಹುತೇಕ ಕಡೆ ಕಸ ರಾಶಿ ಬಿದ್ದಿರುವುದು ಕಂಡುಬರುತ್ತಿದೆ. ಮಾರುಕಟ್ಟೆ, ಜನಸಂದಣಿಯಿದ್ದ ಪ್ರದೇಶದಲ್ಲಿ ಮಾರಾಟವಾಗದೇ ಉಳಿದ ಬಾಳೆಕಂಬ, ಬೂದುಗುಂಬಳ ಅಲ್ಲಲ್ಲೇ ಬಿದ್ದಿದ್ದು, ಶೀಘ್ರ ವಿಲೇವಾರಿಯಾಗದೇ ಇದ್ದಲ್ಲಿ ಕೊಳೆತು ಗಬ್ಬು ನಾರುವ ಸ್ಥಿತಿಗೆ ತಲುಪಲಿದೆ. ಸಾಮಾನ್ಯ ದಿನಗಳಲ್ಲಿ ನಗರದಲ್ಲಿ 4,000 ಟನ್ ತ್ಯಾಜ್ಯ ಉತ್ಪತ್ತಿಯಾದರೆ, ಹಬ್ಬದ ಸಂದರ್ಭದಲ್ಲಿ ಶೇ. 20ರಿಂದ ಶೇ. 30ರಷ್ಟು ಹೆಚ್ಚುವರಿ ತ್ಯಾಜ್ಯ …

Read More »

ಒಂದೇ ಜಾತಿಗೆ ರಾಣಿ ಚನ್ನಮ್ಮಳನ್ನು ಸೀಮಿತಗೊಳಿಸಬೇಡಿ: ಸಂಶೋಧಕ ಸಂತೋಷ ಹಾನಗಲ್

ಬೆಳಗಾವಿ: “ವೀರರಾಣಿ ಕಿತ್ತೂರು ಚನ್ನಮ್ಮಾಜಿಯನ್ನು ಒಂದೇ ಜಾತಿ ಮತ್ತು ಸಮುದಾಯಕ್ಕೆ ಸೀಮಿತಗೊಳಿತ್ತಿರುವ ವಿಚಾರ ಕಳೆದ ಐದು ವರ್ಷಗಳಿಂದ ಶುರುವಾಗಿದೆ. ಮೊಳಕೆಯೊಡೆಯುವ ಮೊದಲೇ ಚಿವುಟಿ ಹಾಕುವ ಅವಶ್ಯಕತೆಯಿದೆ” ಎಂದು ಸಂಶೋಧಕ ಸಂತೋಷ ಹಾನಗಲ್ ಅಭಿಪ್ರಾಯ ವ್ಯಕ್ತಪಡಿಸಿದರು. ಕಿತ್ತೂರು ಉತ್ಸವದ ಅಂಗವಾಗಿ ಮಂಗಳವಾರ ನಡೆದ ವಿಚಾರಗೋಷ್ಠಿಯಲ್ಲಿ ಮಾತನಾಡಿದ ಅವರು, “ರಾಣಿ ಚನ್ನಮ್ಮಾಜಿ ಜತೆ ಸೇರಿಕೊಂಡು ಎಲ್ಲ ಸಮುದಾಯದ ವೀರರು ಸಂಸ್ಥಾನದ ಉಳಿವಿಗಾಗಿ ಹೋರಾಡಿದ್ದಾರೆ. ಅವರೆಲ್ಲ ಇಡೀ ದೇಶಕ್ಕೆ ಸೇರಿದ ಮಹಾಪುರುಷರು. ಅಂತಹವರನ್ನು ಒಂದೇ ಜಾತಿ, …

Read More »

ಕಿತ್ತೂರು ಉತ್ಸವದಲ್ಲಿ ತೋಟಗಾರಿಕಾ ಇಲಾಖೆ, ಬೆಳಗಾವಿ ಜಿ.ಪಂ. ಸಹಯೋಗದಲ್ಲಿ ಫಲಪುಷ್ಪ ಪ್ರದರ್ಶನ ಏರ್ಪಡಿಸಿದ್ದು, ಗಮನ ಸೆಳೆಯುತ್ತಿದೆ.

ಬೆಳಗಾವಿ: ಸಿರಿಧಾನ್ಯಗಳಲ್ಲಿ ತಯಾರಿಸಿರುವ ವೀರರಾಣಿ ಕಿತ್ತೂರು‌ ಚನ್ನಮ್ಮಾಜಿಯ ಅಶ್ವಾರೂಢ ಮೂರ್ತಿ ಕಿತ್ತೂರು ಉತ್ಸವದ ಫಲಪುಷ್ಪ ಪ್ರದರ್ಶನದಲ್ಲಿ ಗಮನ ಸೆಳೆಯುತ್ತಿದೆ. ತರಕಾರಿ, ಹೂವುಗಳಿಂದ ತಯಾರಿಸಿದ ನಾನಾ ರೀತಿಯ ಕಲಾಕೃತಿಗಳು ಜನರ ಕುತೂಹಲ ಕೆರಳಿಸಿವೆ. ಸಿರಿಧಾನ್ಯಗಳಾದ ಜೋಳ, ಸಜ್ಜೆ, ನವನೆ, ರಾಗಿ, ಚನ್ನಂಗಿ ಬೇಳೆಗಳನ್ನು ಬಳಸಿ ತಯಾರಿಸಿರುವ 6.5 ಅಡಿ ಎತ್ತರದ ಚನ್ನಮ್ಮಾಜಿ ವಿಗ್ರಹವನ್ನು ಕಲಾವಿದ ಶಿವಲಿಂಗಪ್ಪ ಬಡಿಗೇರ ರಚಿಸಿದ್ದಾರೆ. ಕಲ್ಲಂಗಡಿಯಲ್ಲಿ ಮಹನೀಯರ ಚಿತ್ರಗಳು: ಕಲ್ಲಂಗಡಿ ಹಣ್ಣಿನಲ್ಲಿ ಅರಳಿರುವ ರಾಣಿ ಚನ್ನಮ್ಮ‌, ಸಂಗೊಳ್ಳಿ ರಾಯಣ್ಣ, …

Read More »

ದಾವಣಗೆರೆಯ ಕನ್ನಿಕಾ ಪರಮೇಶ್ವರಿ ದೇವಿಗೆ ಧನಲಕ್ಷ್ಮಿ ಅಲಂಕಾರ

ದಾವಣಗೆರೆ: ದಸರಾ ಪ್ರಯುಕ್ತ ದಾವಣಗೆರೆಯಾದ್ಯಂತ ಬಹುತೇಕ ಎಲ್ಲಾ ದೇವತೆಗಳಿಗೆ ವಿಶೇಷ ಅಲಂಕಾರ ಮಾಡಲಾಗಿದೆ. ದೇವಾಲಯಗಳಲ್ಲಿ ಹೂವು, ಕುಂಕುಮ, ಎಲೆ, ಉತ್ತುತ್ತಿ, ತರಕಾರಿ, ಹಣ್ಣು-ಹಂಪಲುಗಳಿಂದ ತರಹೇವಾರಿ ಅಲಂಕಾರ ಮಾಡುವುದು ಸಾಮಾನ್ಯ. ಆದರೆ ದಾವಣಗೆರೆ ನಗರದ ಕನ್ನಿಕಾ ಪರಮೇಶ್ವರಿ ದೇವಿಗೆ ಕರೆನ್ಸಿ ನೋಟುಗಳಿಂದ ಧನಲಕ್ಷ್ಮಿ ಅಲಂಕಾರ ಮಾಡಲಾಗಿದ್ದು, ಭಕ್ತರ ಗಮನ ಸೆಳೆಯುತ್ತಿದೆ. ದೊಡ್ಡಪೇಟೆಯ ಕನ್ನಿಕಾ ಪರಮೇಶ್ವರಿ ದೇವಿಗೆ ನವರಾತ್ರಿಯ ಒಂಭತ್ತು ದಿನಗಳ ಕಾಲ ವಿವಿಧ ಅಲಂಕಾರ ಮಾಡಲಾಗಿತ್ತು. ಹತ್ತನೇ ದಿನವಾದ ಇಂದು ಲಕ್ಷಾಂತರ ರೂಪಾಯಿ …

Read More »

ಇಂದು ದಸರಾ ಜಂಬೂ ಸವಾರಿ ವೈಭವ: ಅಂಬಾರಿ ಹೊರಡುವ ಮಾರ್ಗದಲ್ಲಿ ಭಾರಿ ಭದ್ರತೆ

ಮೈಸೂರು: ವಿಶ್ವವಿಖ್ಯಾತ ಸಾಂಪ್ರದಾಯಿಕ ಮೈಸೂರು ದಸರಾ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದೆ. ವಿಜಯದಶಮಿ ಮೆರವಣಿಗೆಗೆ ಸಕಲ ಸಿದ್ಧತೆಗಳು ಭರದಿಂದ ಸಾಗಿವೆ. ಚಿನ್ನದ ಅಂಬಾರಿಯಲ್ಲಿ ಆಸೀನಳಾಗುವ ನಾಡದೇವತೆ ಶ್ರೀ ಚಾಮುಂಡೇಶ್ವರಿಗೆ ಗಣ್ಯರು ಪುಷ್ಪಾರ್ಚನೆ ಮಾಡುವ ಮೂಲಕ ವೈಭವದ ಜಂಬೂ ಸವಾರಿ ಮೆರವಣಿಗೆಗೆ ವಿಧ್ಯುಕ್ತ ಚಾಲನೆ ಸಿಗಲಿದೆ. ಜಂಬೂ ಸವಾರಿಗೆ ಸಕಲ ಸಿದ್ಧತೆಜಂಬೂಸವಾರಿ ಮೆರವಣಿಗೆಗೆ 47 ಸ್ತಬ್ಧಚಿತ್ರಗಳು ಹಾಗೂ ಕಲಾತಂಡಗಳು ಸಿದ್ಧವಾಗಿವೆ. ಮಧ್ಯಾಹ್ನ 1.46 ರಿಂದ 2.08 ರ ಶುಭ ಮಕರ ಲಗ್ನದಲ್ಲಿ ಸಿಎಂ …

Read More »

ಚೆನ್ನೈನ ಅವಡಿ ಬಳಿ ಹಳಿ ತಪ್ಪಿದ ವಿದ್ಯುತ್ ಚಾಲಿತ​ ರೈಲು: ತಪ್ಪಿದ ಭಾರಿ ದುರಂತ

ಚೆನ್ನೈ (ತಮಿಳುನಾಡು): ಇಂದು ಬೆಳಗ್ಗೆ ತಮಿಳುನಾಡು ರಾಜ್ಯದ ಚೆನ್ನೈನ ಅವಡಿ ರೈಲು ನಿಲ್ದಾಣದ ಬಳಿ ವಿದ್ಯುತ್ ಚಾಲಿತ ರೈಲು (electric train) ಹಳಿ ತಪ್ಪಿದೆ. ಅದೃಷ್ಟವಶಾತ್​ ಪ್ರಯಾಣಿಕರಿಲ್ಲದ ಕಾರಣ ಯಾವುದೇ ಅನಾಹುತ ಸಂಭವಿಸಿಲ್ಲ. ರೈಲ್ವೆ ಹಳಿ ಬಿರುಕು ಬಿಟ್ಟಿದ್ದರಿಂದ ಈ ಅವಘಡ ಸಂಭವಿಸಿರಬಹುದು ಎಂದು ಹೇಳಲಾಗುತ್ತಿದೆ. ತಿರುವಳ್ಳೂರಿನಿಂದ ಪುರಟ್ಚಿ ತಲೈವರ್​ ಡಾ. ಎಂಜಿಆರ್​ ಸೆಂಟ್ರಲ್​ ರೈಲು ನಿಲ್ದಾಣದವರೆಗೆ ರೈಲ್ವೆ ಹಳಿಯ (ಟ್ರ್ಯಾಕ್​) ನಿರ್ವಹಣಾ ಕಾರ್ಯ ನಡೆಯುತ್ತಿದೆ. ಈ ವೇಳೆ, ಇಂದು (ಅ.24) …

Read More »

ಚನ್ನಮ್ಮನ ಕಿತ್ತೂರು ಉತ್ಸವ, ರಾಷ್ಟ್ರೀಯ ಉತ್ಸವ ಆಗಲಿ

ಬೆಳಗಾವಿ : ಕಿತ್ತೂರು ರಾಣಿ‌ ಚನ್ನಮ್ಮಾಜಿ ಬ್ರಿಟಿಷರ ವಿರುದ್ಧ ಮೊದಲ ದಿಗ್ವಿಜಯ ಸಾಧಿಸಿದ್ದಕ್ಕೆ ಮುಂದಿನ ವರ್ಷ 200 ವರ್ಷ ತುಂಬಲಿದೆ. ಆ ವೇಳೆ, ಕಿತ್ತೂರು ಉತ್ಸವ ರಾಷ್ಟ್ರಮಟ್ಟದ ಉತ್ಸವ ಆಗಬೇಕು ಎಂದು ಕೂಡಲ ಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಮತ್ತು ಮಡಿವಾಳ ರಾಜಯೋಗಿಂದ್ರ ಸ್ವಾಮೀಜಿ ಕಿತ್ತೂರು ಉತ್ಸವದಲ್ಲಿ ಆಗ್ರಹಿಸಿದರು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಮುಂದಿನ ವರ್ಷ ನಡೆಯಲಿರುವ ಕಿತ್ತೂರು ಉತ್ಸವ ರಾಷ್ಟ್ರೀಯ ಉತ್ಸವವಾಗಿ‌ ಘೋಷಿಸಬೇಕು. ಪಾರ್ಲಿಮೆಂಟ್ ಮುಂದೆ ಚನ್ನಮ್ಮ ಮತ್ತು …

Read More »

“ಬರ ವಿಚಾರವನ್ನು ಕುಮಾರಸ್ವಾಮಿ ಸರಿಯಾಗಿ ತಿಳಿದುಕೊಂಡಿಲ್ಲ. ಸುಮ್ಮನೆ ಆರೋಪ ಮಾಡುತ್ತಿದ್ದಾರೆ” ಎಂದ ಮುಖ್ಯಮಂತ್ರಿ

ಮೈಸೂರು: “ಬರ ವಿಚಾರವನ್ನು ಕುಮಾರಸ್ವಾಮಿ ಸರಿಯಾಗಿ ತಿಳಿದುಕೊಂಡಿಲ್ಲ. ಸುಮ್ಮನೆ ಆರೋಪ ಮಾಡುತ್ತಿದ್ದಾರೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಸೋಮವಾರ ದಸರಾ ಏರ್ ಶೋ ವೀಕ್ಷಣೆ ಮಾಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, “ರಾಜ್ಯದಲ್ಲಿ ಈಗಾಗಲೇ ಬರಗಾಲ ಕಾಮಗಾರಿಗಳು ಆರಂಭವಾಗಿವೆ. ಕುಡಿಯುವ ನೀರು, ಮೇವು ಕೊಡುವ ಕೆಲಸ ಮಾಡುತ್ತಿದ್ದೇವೆ. ಕುಡಿಯುವ ನೀರಿಗೆ ಎಷ್ಟೇ ಹಣ ಖರ್ಚಾದರೂ ತೊಂದರೆ ಆಗಬಾರದು ಎಂದು ಸೂಚಿಸಿದ್ದೇನೆ‌. ಸದ್ಯಕ್ಕೆ ಮೇವಿಗೆ ಕೊರತೆ ಇಲ್ಲ. ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ …

Read More »

ಬಸವರಾಜ ಬೊಮ್ಮಾಯಿ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಮನೆಗೆ ಮರಳಿದ್ದಾರೆ.

ಬೆಂಗಳೂರು: ಹೃದಯದ ಪರಿಧಮನಿಯ ಬೈಪಾಸ್ ಗ್ರಾಫ್ಟಿಂಗ್ (ಸಿಎಬಿಜಿ) ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚೇತರಿಸಿಕೊಂಡಿದ್ದು ಸೋಮವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದರು. ಕೆಲವು ದಿನಗಳ ಕಾಲ ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚಿಸಿದ್ದು, ಇನ್ನಷ್ಟು ಸಮಯದ ನಂತರವೇ ರಾಜಕೀಯ ಚಟುವಟಿಕೆಗೆ ಮರಳಲಿದ್ದಾರೆ. ಬನ್ನೇರುಘಟ್ಟ ರಸ್ತೆಯಲ್ಲಿರುವ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ಪರಿಧಮನಿಯ ಬೈಪಾಸ್ ಗ್ರಾಫ್ಟಿಂಗ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಬೊಮ್ಮಾಯಿ ಗುಣಮುಖರಾಗಿದ್ದಾರೆ. ಅಕ್ಟೋಬರ್ 15 ರಂದು ಆಸ್ಪತ್ರೆಗೆ ದಾಖಲಾಗಿದ್ದು, ಒಂದು ವಾರದ ನಂತರ ಗುಣಮುಖರಾಗಿ …

Read More »

ಅಂಬಾರಿಯಲ್ಲಿ ಮೈಸೂರು ದಸರಾ ದೀಪಾಲಂಕಾರ ವೀಕ್ಷಿಸಿದ ಸಿಎಂ

ಮೈಸೂರು ದಸರಾ ದೀಪಾಲಂಕಾರ ಕಣ್ತುಂಬಿಕೊಂಡರು. ಮೈಸೂರು: ನಾಡಹಬ್ಬ ದಸರಾದಲ್ಲಿ ಭಾಗವಹಿಸಲು 3 ದಿನಗಳ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಏರ್ ಶೋ ವೀಕ್ಷಣೆ ಮಾಡಿದ ಬಳಿಕ, ಅಂಬಾರಿ ಬಸ್​ನಲ್ಲಿ ಜನರಿಗೆ ಕೈ ಬೀಸುತ್ತಾ ದಸರಾ ದೀಪಾಲಂಕಾರ ವೀಕ್ಷಿಸಿದರು.   ಅಂಬಾರಿಯಲ್ಲಿ ಮೈಸೂರು ದಸರಾ ದೀಪಾಲಂಕಾರ ವೀಕ್ಷಿಸಿದ ಸಿಎಂ ಸಿದ್ದರಾಮಯ್ಯಸೋಮವಾರ ಬನ್ನಿ ಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ದಸರಾ ಏರ್​ ಶೋ ವೀಕ್ಷಣೆ ಮಾಡಿದ ಬಳಿಕ ಸಂಜೆ ಅರಮನೆಯ ಮುಂಭಾಗದ …

Read More »