ಚಾಮರಾಜನಗರ: ಉಯ್ಯಾಲೆಯಲ್ಲಿ ಆಟ ಆಡುತ್ತಿದ್ದ ಶಿಕ್ಷಕಿ ಆಯತಪ್ಪಿ ಬಿದ್ದು ಸಾವನ್ನಪ್ಪಿರುವ ಘಟನೆ ಕೊಳ್ಳೇಗಾಲ ಜಿ.ಪಿ.ಮಲ್ಲಪ್ಪಪುರಂ ಬಡಾವಣೆಯಲ್ಲಿ ನಡೆದಿದೆ. ಶಿಕ್ಷಕಿ ಕೆ.ಪುಟ್ಟಿ(53) ಮೃತರು. ಪುಟ್ಟಿ ಅವರು ಯಳಂದೂರು ತಾಲೂಕಿನ ಮಾಂಬಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು ಹಾಗೂ ರಾಜ್ಯ ಸಾವಿತ್ರಿಬಾಯಿ ಪುಲೆ ಶಿಕ್ಷಕಿ ಸಂಘದ ತಾಲೂಕು ಅಧ್ಯಕ್ಷರು ಕೂಡ ಆಗಿದ್ದರು. ಮಂಗಳವಾರ ಸಂಜೆ ಮನೆಯ ಮೇಲೆ ಉಯ್ಯಾಲೆ ಆಡುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಶಿಕ್ಷಕಿ ಕೆಳಗೆ ಬಿದ್ದಿದ್ದಾರೆ. ತಕ್ಷಣವೇ …
Read More »ಕುಲಕ್ಷ ಕಾರಣಕ್ಕೆ ಮಗನ ಜೊತೆ ಸೇರಿ ಗಂಡನನ್ನು ಕೊಂದ ಪತ್ನಿ.. ಮಂಡ್ಯದಲ್ಲಿ ಭೀಭತ್ಸಕ ಕೃತ್ಯ
ಮಂಡ್ಯ: ಕೌಟುಂಬಿಕ ಕಲಹಕ್ಕೆ ವ್ಯಕ್ತಿಯೊಬ್ಬನನ್ನು ಆತನ ಪತ್ನಿ ಹಾಗೂ ಮಗ ಸೇರಿ ಕೊಲೆ ಮಾಡಿರುವ ಘಟನೆ ಸಕ್ಕರೆ ನಾಡು ಮಂಡ್ಯದಲ್ಲಿ ನಡೆದಿದೆ. ಮದ್ದೂರು ತಾಲೂಕು ಬೆಸಗರಹಳ್ಳಿ ಪೋಲೀಸ್ ಠಾಣಾ ವ್ಯಾಪ್ತಿಯ ಚಾಪುರದೊಡ್ಡಿ ಗ್ರಾಮದಲ್ಲಿ ಗುರುವಾರ ತಡರಾತ್ರಿ ಘಟನೆ ನಡೆದಿದ್ದು, ಕೊಲೆಯಾದ ವ್ಯಕ್ತಿ ಉಮೇಶ್ (50) ಎಂದು ಗುರುತಿಸಲಾಗಿದೆ. ಘಟನೆಯ ಹಿನ್ನೆಲೆ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಹಲವು ದಿನಗಳಿಂದಲೂ ಗಂಡ ಹೆಂಡತಿ ನಡುವೆ ಜಗಳ ನಡೆಯುತ್ತಿತ್ತು ಎನ್ನಲಾಗುತ್ತಿದೆ. ಈಗಾಗಲೇ ಕಳೆದ ಐದಾರು ತಿಂಗಳ …
Read More »ಅಪೊಲೊ, ಮೆಡ್ ಪ್ಲಸ್ ಔಷಧ ಅಂಗಡಿಗಳನ್ನು ಗುರಿಯಾಗಿಸಿ ದರೋಡೆ; ಆರೋಪಿ ಬಂಧನ
ಬೆಂಗಳೂರು: ರಾಜಧಾನಿಯ ಅಪೊಲೊ ಫಾರ್ಮಸಿ ಹಾಗೂ ಮೆಡ್ ಪ್ಲಸ್ ಔಷಧ ಅಂಗಡಿಗಳನ್ನು ಗುರಿಯಾಗಿಸಿಕೊಂಡು ಹಾಡಹಾಗಲೇ ಔಷಧ ಖರೀದಿ ನೆಪದಲ್ಲಿ ಚಾಕು ತೋರಿಸಿ ದೋಚುತ್ತಿದ್ದ ದರೋಡೆಕೋರನನ್ನು ವಿದ್ಯಾರಣಪುರ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅ.8ರಂದು ವಿದ್ಯಾರಣ್ಯಪುರ ಠಾಣಾ ವ್ಯಾಪ್ತಿಯಲ್ಲಿ ಬರುವ ಅಪೊಲೊ ಫಾರ್ಮಸಿಯಲ್ಲಿ ಬಿಲ್ಲಿಂಗ್ ಮಾಡುತ್ತಿದ್ದ ಹರಿಕುಮಾರ್ ಎಂಬವನಿಗೆ ಚಾಕು ತೋರಿಸಿ ಬೆದರಿಸಿ ಅಂಗಡಿಯಲ್ಲಿ ಆರೋಪಿ ದರೋಡೆ ಮಾಡಿದ್ದಾನೆ. ಫಾರ್ಮಸಿ ಮಾಲೀಕ ದೂರು ನೀಡಿದ ಹಿನ್ನೆಲೆಯಲ್ಲಿ ಪೊಲೀಸರು ಜೆ.ಸಿ.ನಗರ ನಿವಾಸಿ …
Read More »ಬಂಗಾರಪೇಟೆ: ಪರವಾನಗಿ ಇಲ್ಲದೆ ನಡೆಸುತ್ತಿದ್ದ ನಕಲಿ ಕ್ಲಿನಿಕ್ ಸೀಜ್ ಮಾಡಿದ ತಹಶೀಲ್ದಾರ್
ಕೋಲಾರ: ನಕಲಿ ಕ್ಲಿನಿಕ್ ಮೇಲೆ ಅಧಿಕಾರಿಗಳು ದಾಳಿ ಮಾಡಿ ಸೀಜ್ ಮಾಡಿರುವ ಘಟನೆ ಕೋಲಾರದ ಬಂಗಾರಪೇಟೆಯಲ್ಲಿ ಗುರುವಾರ ನಡೆದಿದೆ. ಬಂಗಾರಪೇಟೆ ತಹಶೀಲ್ದಾರ್ ಮತ್ತು ತಾಲ್ಲೂಕು ಆರೋಗ್ಯಾಧಿಕಾರಿಗಳು ಬಂಗಾರಪೇಟೆ ಪಟ್ಟಣದ ಕೆಜಿಎಫ್ ಮುಖ್ಯರಸ್ತೆಯ ದೇಶಿಹಳ್ಳಿಯಲ್ಲಿ ನಕಲಿಯಾಗಿ ನಡೆಸಲಾಗುತ್ತಿದ್ದ ಪ್ರಗತಿ ಕ್ಲಿನಿಕ್ ಜಪ್ತಿ ಮಾಡಿದರು. ಯಾವುದೇ ಪರವಾನಗಿ ಇಲ್ಲದೆ ಕ್ಲಿನಿಕ್ ನಡೆಸುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಕಳೆದ ಮೂರು ವಾರಗಳಿಂದ ತನಿಖೆ ಮಾಡಲಾಗಿತ್ತು. ಇದೀಗ ಡಾ.ರಜನಿಕಾಂತ್ ಎಂಬವರಿಗೆ ಸೇರಿದ ಈ …
Read More »ಚಿನ್ನಸ್ವಾಮಿಯಲ್ಲಿ ಇಂದು ಆಸ್ಟ್ರೇಲಿಯಾ – ಪಾಕ್ ಮುಖಾಮುಖಿ: ಉಭಯ ತಂಡಗಳಿಗೆ ಮಹತ್ವದ ಪಂದ್ಯ
ಬೆಂಗಳೂರು: ಪ್ರಸಕ್ತ ಸಾಲಿನ ಐಸಿಸಿ ಏಕದಿನ ವಿಶ್ವಕಪ್‌ನ 18ನೇ ಪಂದ್ಯಕ್ಕೆ ರಾಜಧಾನಿ ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣ ಸಜ್ಜಾಗಿದೆ. ಟೂರ್ನಿಯಲ್ಲಿ ಈಗಾಗಲೇ ಆಡಿರುವ ಮೂರು ಪಂದ್ಯಗಳಲ್ಲಿ ಒಂದರಲ್ಲಿ ಮಾತ್ರ ಜಯ ಸಾಧಿಸಿರುವ ಆಸ್ಟ್ರೇಲಿಯಾ ಅಂಕಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದ್ದರೆ, ಮೂರು ಪಂದ್ಯಗಳಲ್ಲಿ ಎರಡು ಗೆಲುವು ಸಾಧಿಸಿರುವ ಪಾಕಿಸ್ತಾನ ನಾಲ್ಕನೇ ಸ್ಥಾನದಲ್ಲಿದೆ. ಉಭಯ ತಂಡಗಳು ಇಂದು ಚಿನ್ನಸ್ವಾಮಿಯಲ್ಲಿ ಸೆಣಸಾಡಲಿದ್ದು, ಕ್ರಿಕೆಟ್ ಅಭಿಮಾನಿಗಳ ಕಾತರವನ್ನ ಮತ್ತಷ್ಟು ಹೆಚ್ಚಿಸಿದೆ. ಆಸ್ಟ್ರೇಲಿಯಾ Vs ಪಾಕ್: ಈವರೆಗೂ ಏಕದಿನ ಮಾದರಿಯಲ್ಲಿ 107 …
Read More »ಸಪ್ತ ಸಾಗರದಾಚೆ ಎಲ್ಲೋ ಸೈಡ್ ಬಿ’ ಬಿಡುಗಡೆಗೆ ಮುಹೂರ್ತ ಫಿಕ್ಸ್: ಅದ್ಭುತ ಪ್ರೇಮಕಥೆ ವೀಕ್ಷಿಸಲು ಪ್ರೇಕ್ಷಕರ ಕಾತರ
ಸಪ್ತ ಸಾಗರದಾಚೆ ಎಲ್ಲೋ ಸೈಡ್ ಬಿ’ ಬಿಡುಗಡೆ ದಿನಾಂಕವನ್ನು ನಟ ರಕ್ಷಿತ್ ಶೆಟ್ಟಿ ಬಹಿರಂಗಪಡಿಸಿದ್ದಾರೆ. ರಕ್ಷಿತ್ ಶೆಟ್ಟಿ ಕನ್ನಡ ಚಿತ್ರರಂಗದ ಬಹುಬೇಡಿಕೆ ನಟ. ಏಳು ಬೀಳುಗಳನ್ನು ಎದುರಿಸಿ, ಪ್ರಸ್ತುತ ಸ್ಟಾರ್ ನಟನಾಗಿ ಹೊರ ಹೊಮ್ಮಿದ್ದಾರೆ. ರಕ್ಷಿತ್ ಶೆಟ್ಟಿ ಮುಖ್ಯಭೂಮಿಕೆಯ ಬಹುತೇಕ ಸಿನಿಮಾಗಳು ಹಿಟ್ ಸಾಲಿಗೆ ಸೇರಿವೆ. ಪ್ರತೀ ಸಿನಿಮಾಗಳು ಕೂಡ ಅದ್ಭುತ ಅಂತಾರೆ ಅಭಿಮಾನಿಗಳು. ಪ್ರತೀ ಪಾತ್ರಗಳಿಗೂ ಅಚ್ಚುಕಟ್ಟಾಗಿ ಜೀವ ತುಂಬೋ ಮುಖೇನ ಆ ಪಾತ್ರವನ್ನು, ಸಿನಿಮಾವನ್ನು ವಿಶೇಷವಾಗಿಸುತ್ತಾರೆ. ಕಥೆ …
Read More »ಬಾಗಲಕೋಟೆಯಲ್ಲಿ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆ: ಅ.19 ಅರ್ಜಿ ಸಲ್ಲಿಕೆಗೆ ಕಡೆಯ ದಿನ
ಬಾಗಲಕೋಟೆಯ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಒಟ್ಟು 23 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಅರ್ಜಿ ಸಲ್ಲಿಸಲು ಇನ್ನು ಮೂರು ದಿನ ಮಾತ್ರ ಕಾಲಾವಕಾಶವಿದೆ. ಅಧಿಸೂಚನೆಹುದ್ದೆಗಳ ವಿವರ: ಬಾದಾಮಿಯಲ್ಲಿ 3, ಬಾಗಲಕೋಟೆಯಲ್ಲಿ 2, ಬೀಳಗಿಯಲ್ಲಿ 2, ಇಲಕಲ್ಲ 2, ಗುಳೇದ ಗುಡ್ಡ 2, ಹುನಗುಂದ 4, ಜಮಖಂಡಿ 3, ಮುಧೋಳ 3, ರಬಕವಿ, …
Read More »ಕಳ್ಳತನದಲ್ಲಿ ಭಾಗಿಯಾದ ಪೊಲೀಸ್ ಕಾನ್ಸ್ಟೆಬಲ್; ಸೇವೆಯಿಂದ ವಜಾಗೊಳಿಸಲು ಶಿಫಾರಸು
ಬೆಂಗಳೂರು: ಕ್ಯಾಸಿನೋ ಆಟಕ್ಕಿಳಿದು ನಷ್ಟಕ್ಕೊಳಗಾಗಿ ಲಕ್ಷಾಂತರ ರೂ. ಸಾಲ ತೀರಿಸಲು ಮನೆ ಕಳವು ಮಾಡಿದ ಆರೋಪದಡಿ ಪೊಲೀಸ್ ಕಾನ್ಸ್ಟೆಬಲ್ನನ್ನು ಜ್ಞಾನಭಾರತಿ ಠಾಣಾ ಪೊಲೀಸರು ಬಂಧಿಸಿದ್ದರು. ಇದೀಗ ಆತನನ್ನು ಸೇವೆಯಿಂದ ವಜಾಗೊಳಿಸಲು ಪೊಲೀಸ್ ಇಲಾಖೆ ಶಿಫಾರಸು ಮಾಡಿದೆ. ಬಳ್ಳಾರಿ ಜಿಲ್ಲೆಯ ಸಿರಗುಪ್ಪ ಮೂಲದ ಯಲ್ಲಪ್ಪ 2023ರ ಫೆಬ್ರವರಿಯಲ್ಲಿ ಬನಶಂಕರಿ ಠಾಣೆ ವ್ಯಾಪ್ತಿಯಲ್ಲಿ ಅಭಿಷೇಕ್ ಅಲಿಯಾಸ್ ಅಭಿ ಜತೆ ಸೇರಿ ಮುತ್ತೂಟ್ ಫೈನಾನ್ಸ್ ಕಚೇರಿಯಲ್ಲಿ ಕಳ್ಳತನಕ್ಕೆ ಯತ್ನಿಸಿದ್ದ. ಆದರೆ, ಕಚೇರಿಯಲ್ಲಿಟ್ಟಿದ್ದ ಅಲಾರಾಂ ಗಂಟೆ ಜೋರಾಗಿ …
Read More »ನಗರ ಪ್ರದೇಶಗಳಲ್ಲಿನ ಅನಧಿಕೃತ ಆಸ್ತಿಗಳಿಗೆ ಬಿ ಖಾತೆ ನೀಡಲು ಸರ್ಕಾರ ಮುಂದಾಗಿದೆ.
ಬೆಂಗಳೂರು: ಹೆಚ್ಚಿನ ಆದಾಯ ಸಂಗ್ರಹದ ನಿಟ್ಟಿನಲ್ಲಿ ನಗರ ಪ್ರದೇಶಗಳಲ್ಲಿನ ಅನಧಿಕೃತ ಆಸ್ತಿಗಳಿಗೆ ಬಿ ಖಾತೆ ನೀಡಲು ಸರ್ಕಾರ ಮುಂದಾಗಿದೆ. ಇದರಿಂದ ಸುಮಾರು 2,000 ಕೋಟಿ ರೂ. ಆದಾಯ ಸಂಗ್ರಹವಾಗಲಿದೆ ಎಂದು ಅಂದಾಜಿಸಲಾಗಿದೆ. ಬಿಬಿಎಂಪಿ ಹೊರತುಪಡಿಸಿ ನಗರಪಾಲಿಕೆ, ನಗರಸಭೆ ಮತ್ತು ಪುರಸಭೆಯ ವ್ಯಾಪ್ತಿ ಅಕ್ರಮ ಬಡಾವಣೆಯಲ್ಲಿ ನಕ್ಷೆ ಮಂಜೂರಾತಿ ಇಲ್ಲದೆ ಕಟ್ಟಡ ನಿರ್ಮಿಸಿ ಸೌಲಭ್ಯ ಪಡೆಯುತ್ತಿರುವ ಮಾಲೀಕರಿಗೆ ನಿರ್ವಹಣಾ ಶುಲ್ಕ ವಿಧಿಸುವ ಕುರಿತಂತೆ ಗುರುವಾರ ನಡೆದ ಸಂಪುಟ ಉಪಸಮಿತಿಯಲ್ಲಿ ತೀರ್ಮಾನಿಸಲಾಯಿತು. ಅರಣ್ಯ, ಜೀವಿಶಾಸ್ತ್ರ …
Read More »ಸಚಿನ್ ತೆಂಡೂಲ್ಕರ್ ದಾಖಲೆ ಮುರಿದ ವಿರಾಟ್ ಕೊಹ್ಲಿ: ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ವೇಗದ 26,000 ರನ್ ಗಳಿಕೆ!
ಹೈದರಾಬಾದ್: ಚೇಸ್ ಮಾಸ್ಟರ್ ವಿರಾಟ್ ಕೊಹ್ಲಿ ಹೆಸರಿಗೆ ತಕ್ಕಂತೆ ಮತ್ತೊಂದು ಇನಿಂಗ್ಸ್ ಕಟ್ಟಿದರು. ಬಾಂಗ್ಲಾದೇಶ ವಿರುದ್ಧ ಪುಣೆಯಲ್ಲಿ ನಡೆದ ಪಂದ್ಯದಲ್ಲಿ ಶತಕ ಸಾಧನೆ ಮಾಡುವ ಮೂಲಕ ಭಾರತಕ್ಕೆ ಗೆಲುವು ತಂದುಕೊಟ್ಟರು. ಇದರೊಂದಿಗೆ ಅತಿ ವೇಗವಾಗಿ 26 ಸಾವಿರ ರನ್ ಪೂರೈಸಿದ ಆಟಗಾರ ಎನಿಸಿಕೊಂಡರು. ಈ ಮೂಲಕ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನೂ ಮುರಿದರು. ಭಾರತದ ಸ್ಟಾರ್ ಬ್ಯಾಟರ್ ಆಗಿರುವ ವಿರಾಟ್ ಕೊಹ್ಲಿ ಬಾಂಗ್ಲಾದೇಶ ವಿರುದ್ಧ 77 ರನ್ ಗಳಿಸಿದಾಗ …
Read More »