ಬೆಂಗಳೂರು: ಜೆಡಿಎಸ್ ರಾಜ್ಯ ಘಟಕವನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ವಿಸರ್ಜಿಸಲಾಗಿದ್ದು ಹಂಗಾಮಿ ರಾಜ್ಯಾಧ್ಯಕ್ಷರಾಗಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಪಕ್ಷದ ಕಚೇರಿ ಜೆ.ಪಿ.ಭವನದಲ್ಲಿ ಗುರುವಾರ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷರು, ಸದಸ್ಯರು, ಶಾಸಕರು ಒಳಗೊಂಡಂತೆ ಪಕ್ಷ ಸಂಘಟನೆಗೆ ಸಂಬಂಧಿಸಿದಂತೆ ನಡೆದ ಮಹತ್ವದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು. ಜೆಡಿಎಸ್ ರಾಜ್ಯ ಘಟಕ ವಿಸರ್ಜನೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯಾಧ್ಯಕ್ಷರಾಗಿದ್ದು ವಜಾಗೊಂಡ ಸಿ.ಎಂ.ಇಬ್ರಾಹಿಂ ಅಧಿಕಾರ ಕಳೆದುಕೊಂಡಿದ್ದಾರೆ. ಕೋರ್ ಕಮಿಟಿ ಸಭೆ ಬಳಿಕ …
Read More »ಅರ್ಧ ಶತಕೋಟಿ ಕಂಪ್ಯೂಟರ್ಗಳಲ್ಲಿ ಓಡುತ್ತಿದೆ ವಿಂಡೋಸ್ 11 ಓಎಸ್: ನಿರೀಕ್ಷೆ ಮೀರಿದ ಸಾಧನೆ
ನವದೆಹಲಿ: ಮೈಕ್ರೋಸಾಫ್ಟ್ನ ವಿಂಡೋಸ್ 11 ಆಪರೇಟಿಂಗ್ ಸಿಸ್ಟಮ್ ಪ್ರಸ್ತುತ 400 ದಶಲಕ್ಷಕ್ಕೂ ಹೆಚ್ಚು ಇನ್ಸ್ಟಾಲ್ ಆಗಿದ್ದು, 2024 ರ ಆರಂಭದಲ್ಲಿ ಈ ಸಂಖ್ಯೆ 500 ಮಿಲಿಯನ್ ತಲುಪುವ ಸಾಧ್ಯತೆಯಿದೆ ಎಂದು ವರದಿ ತಿಳಿಸಿದೆ. ವಿಂಡೋಸ್ 11 ಈಗ ಸುಮಾರು ಅರ್ಧ ಶತಕೋಟಿ ಸಾಧನಗಳಲ್ಲಿ ಸಕ್ರಿಯವಾಗಿದೆ, ಇದು ಕಂಪನಿಯ ನಿರೀಕ್ಷೆಗಳಿಗಿಂತ ಹೆಚ್ಚಾಗಿದೆ ಎಂದು ಮೈಕ್ರೋಸಾಫ್ಟ್ ಆಂತರಿಕ ಡೇಟಾ ಉಲ್ಲೇಖಿಸಿ ವಿಂಡೋಸ್ ಸೆಂಟ್ರಲ್ ವರದಿ ಮಾಡಿದೆ. ವಿಂಡೋಸ್ 10 ಬಿಡುಗಡೆಯಾದ ಒಂದು ವರ್ಷದ ನಂತರ …
Read More »‘ಡಿಕೆಶಿ ರಾಜೀನಾಮೆ ಪಡೆಯಿರಿ, ಸಾಕ್ಷಿ ನಾಶ ಮಾಡುವ ಸಾಧ್ಯತೆ ಇದೆ’: ಸಿಎಂಗೆ ಛಲವಾದಿ ನಾರಾಯಣಸ್ವಾಮಿ ಆಗ್ರಹ
ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಆದಾಯ ಮೀರಿದ ಆಸ್ತಿಗಳಿಕೆ ಆರೋಪ ಪ್ರಕರಣದ ತನಿಖೆಯನ್ನು ಸಿಬಿಐ ಮುಂದುವರಿಸುವಂತೆ ಹೈಕೋರ್ಟ್ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಕ್ಷಣ ಡಿ.ಕೆ. ಶಿವಕುಮಾರ್ ಅವರ ರಾಜೀನಾಮೆ ಪಡೆಯಬೇಕು ಎಂದು ಬಿಜೆಪಿ ರಾಜ್ಯ ಎಸ್‍ಸಿ ಮೋರ್ಚಾ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಸಿಬಿಐ ತನಿಖೆ ಮುಂದುವರೆಯುವ ಕಾರಣಕ್ಕೆ ಡಿ.ಕೆ.ಶಿವಕುಮಾರ್ ಅವರು …
Read More »ದೇವೇಗೌಡರ ಪುತ್ರ ವ್ಯಾಮೋಹ ಸಾಬೀತಾಗಿದೆ; ಉಚ್ಚಾಟನೆ ನಿರ್ಧಾರವನ್ನು ಚು.ಆಯೋಗದಲ್ಲಿ ಪ್ರಶ್ನಿಸುವೆ: ಸಿ.ಎಂ.ಇಬ್ರಾಹಿಂ
ಬೆಂಗಳೂರು: ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರಿಗೆ ಪುತ್ರ ವ್ಯಾಮೋಹ ಇರುವುದು ಸಾಬೀತಾಗಿದೆ. ನನ್ನನ್ನು ಕೆಣಕಿದ್ದೀರಿ, ಇದರ ಪರಿಣಾಮ ಮುಂದೆ ಕಾದು ನೋಡಿ ಎಂದು ರಾಜ್ಯಾಧ್ಯಕ್ಷ ಸ್ಥಾನದಿಂದ ಉಚ್ಚಾಟಿತರಾದ ಸಿ.ಎಂ.ಇಬ್ರಾಹಿಂ ಹೇಳಿದ್ದಾರೆ. ಬೆನ್ಸನ್ ಟೌನ್‌ನಲ್ಲಿರುವ ತಮ್ಮ ನಿವಾಸದ ಬಳಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಜೆಡಿಎಸ್ ನಾಯಕರಿಗೆ ನನ್ನನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ತೆಗೆಯುವ ಅಧಿಕಾರ ಇಲ್ಲ. ಕಾರ್ಯಕಾರಿ ಸಮಿತಿಯ 2/3ನೇ ಸದಸ್ಯರ ಅನುಮತಿ ಪಡೆದು ಮೊದಲು ನನಗೆ ನೊಟೀಸ್ ಕೊಡಬೇಕು. ನಾನು ಚುನಾವಣಾ …
Read More »ನನ್ನ ಹಾಗು ಸತೀಶಣ್ಣನ ಮಧ್ಯೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಬೆಂಗಳೂರು: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಜಿಲ್ಲೆಯಲ್ಲಿ ಪಕ್ಷದ ಎಲ್ಲಾ ಶಾಸಕರು ಒಗ್ಗಟ್ಟಾಗಿ ಕೆಲಸ ಮಾಡಿಕೊಂಡು ಹೋಗುತ್ತಿದ್ದೇವೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದ್ದಾರೆ. ಸತೀಶ್ ಜಾರಕಿಹೊಳಿ ಅಸಮಾಧಾನದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ನನಗೆ ಬಹಳ ಒಳ್ಳೆಯ ಖಾತೆ ಕೊಟ್ಟಿದ್ದಾರೆ. ಉಡುಪಿ ಜಿಲ್ಲಾ ಉಸ್ತುವಾರಿ ವಹಿಸಿದ್ದಾರೆ. ಸತೀಶಣ್ಣ ಬಹಳ ಅನುಭವ ಇರುವವರು. ಅವರ ನೇತೃತ್ವದಲ್ಲಿ ನಾವೆಲ್ಲ ಒಂದಾಗಿ ಕೆಲಸ ಮಾಡುತ್ತಿದ್ದೇವೆ ಎಂದರು. ಜಿಲ್ಲೆಗೆ …
Read More »ಒಂದೂವರೆ ವರ್ಷದ ಮಗನನ್ನು ಕೆರೆಗೆ ಎಸೆದುಕೊಂದ ಪಾಪಿ ತಂದೆ
ಮೈಸೂರು : ಒಂದೂವರೆ ವರ್ಷದ ಮಗನನ್ನು ತಂದೆಯೇ ಕೆರೆಗೆ ಎಸೆದು ಹತ್ಯೆ ಮಾಡಿರುವ ಹೃದಯ ವಿದ್ರಾವಕ ಘಟನೆ ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಮಾಕೋಡು ಗ್ರಾಮದಲ್ಲಿ ನಡೆದಿದೆ. ಮಾಕೋಡು ಗ್ರಾಮದ ಗಣೇಶ್ ಎಂಬಾತನೇ ಮಗನನ್ನು ಕೊಂದಿರುವ ಪಾಪಿ ತಂದೆ. ಪ್ರಕರಣ ಸಂಬಂಧ ಪಿರಿಯಾಪಟ್ಟಣ ಪೊಲೀಸರು ಗಣೇಶ್ನನ್ನು ಬಂಧಿಸಿದ್ದಾರೆ. 2014ರಲ್ಲಿ ದೇವನಹಳ್ಳಿ ತಾಲೂಕಿನ ದೊಡ್ಡಸನ್ನೆ ಗ್ರಾಮದ ಲಕ್ಷ್ಮಿ ಎಂಬುವವರನ್ನು ಗಣೇಶ್ ಮದುವೆಯಾಗಿದ್ದ. ಬೆಂಗಳೂರು ಬಳಿಯ ದೇವನಹಳ್ಳಿಯಲ್ಲಿ ದಂಪತಿ ವಾಸವಿದ್ದರು. ಈ ದಂಪತಿಗೆ ಹಾರಿಕಾ ಮತ್ತು …
Read More »ಜೆಡಿಎಸ್ ರಾಜ್ಯಾಧ್ಯಕ್ಷ ಇಬ್ರಾಹಿಂ ಮೇಲೆ ಕ್ರಮ ಆಗುತ್ತಾ, ಇಲ್ಲವೋ ಗೊತ್ತಿಲ್ಲ.. ಸಭೆಯಲ್ಲಿ ಭಾಗಿಯಾದ ಬಳಿಕ ಗೊತ್ತಾಗಲಿದೆ: ಕುಮಾರಸ್ವಾಮಿ
ಬೆಂಗಳೂರು : ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ. ದೇವೇಗೌಡರು ಕೋರ್ ಕಮಿಟಿ ಸಭೆ ಕರೆದಿದ್ದಾರೆ. ಕೋರ್ ಕಮಿಟಿ ಅಧ್ಯಕ್ಷರು ಸಭೆಗೆ ಬರಲು ಹೇಳಿದ್ದಾರೆ, ಅದಕ್ಕೆ ಬಂದಿದ್ದೇನೆ. ಸಭೆಯ ಬಳಿಕ ದೇವೇಗೌಡರು ಮಾಹಿತಿಯನ್ನು ಹಂಚಿಕೊಳ್ಳುತ್ತಾರೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದರು. ಪಕ್ಷದ ಕಚೇರಿ ಜೆಪಿ ಭವನದಲ್ಲಿ ಇಂದು ಸಭೆಗೂ ಮುನ್ನ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಅವರ ಮೇಲೆ ಕ್ರಮ ಆಗುತ್ತಾ, ಇಲ್ಲವೋ …
Read More »ಭಾರತ – ಬಾಂಗ್ಲಾ ಮುಖಾಮುಖಿ: ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಬಾಂಗ್ಲಾ
ಪುಣೆ (ಮಹಾರಾಷ್ಟ್ರ): ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿಂದು ಭಾರತ ಮತ್ತು ಬಾಂಗ್ಲಾದೇಶ ತಂಡಗಳು ಮುಖಾಮುಖಿಯಾಗಿವೆ. ಟಾಸ್ ಗೆದ್ದ ಬಾಂಗ್ಲಾದೇಶದ ನಾಯಕ ನಜ್ಮುಲ್ ಹೊಸೈನ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ರೋಹಿತ್ ಶರ್ಮಾ ಪಡೆಯ ಭಾರತಕ್ಕೆ ಕ್ಷೇತ್ರ ರಕ್ಷಣೆಯ ಹೊಣೆ ಹೊರೆಸಿದ್ದಾರೆ. ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂ ಇಂದಿನ ಪಂದ್ಯದ ಆತಿಥ್ಯ ವಹಿಸಿಕೊಂಡಿದೆ. ಈ ವಿಶ್ವಕಪ್ ಟೂರ್ನಿಯಲ್ಲಿ ರೋಹಿತ್ ಶರ್ಮಾ ನಾಯಕತ್ವದ ಟೀಂ ಇಂಡಿಯಾ ಸತತ ಮೂರು …
Read More »ಕಾಂಗ್ರೆಸ್ ಮುಖಂಡನ ಮನೆ ಮೇಲೆ ಇಡಿ ದಾಳಿ
ಕಲಬುರಗಿ : ಜಿಲ್ಲೆಯ ಚಿಂಚೋಳಿ ತಾಲೂಕಿನ ಚಂದಾಪುರ ಗ್ರಾಮದಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ ಬಾಬುರಾವ್ ಪಾಟೀಲ್ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಚಂದಾಪುರದ ಬಸವ ನಗರದಲ್ಲಿರುವ ಮನೆಯ ಮೇಲೆ ಇಂದು ಬೆಳಗ್ಗೆ ಹೈದರಾಬಾದ್ ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನೆರೆ ರಾಜ್ಯದ ನೋಂದಣಿ ಹೊಂದಿರುವ ಖಾಸಗಿ ಇನ್ನೋವಾ ಕಾರುಗಳಲ್ಲಿ ಅಧಿಕಾರಿಗಳ ತಂಡದವರು ಆಗಮಿಸಿದ್ದಾರೆ. ಸದ್ಯ ಮನೆಯಲ್ಲಿ ಅಧಿಕಾರಿಗಳು ಶೋಧ ನಡೆಸಿ, ಮಹತ್ವದ ದಾಖಲೆಗಳನ್ನು ಪರಿಶೀಲನೆ ಮಾಡ್ತಿದ್ದಾರೆ. …
Read More »ಬೆಳಗಾವಿ ಸಮಸ್ಯೆಯಿಂದಲೇ ಮೈತ್ರಿ ಸರ್ಕಾರ ಪತನ… ಈಗಲೂ ಅಂತಹದ್ದೇ ಲಕ್ಷಣ ಗೋಚರಿಸ್ತಿದೆ: ಮುನಿರತ್ನ
ಬೆಂಗಳೂರು: ”ಬೆಳಗಾವಿ ರಾಜಕಾರಣದಲ್ಲಿ ಸಮಸ್ಯೆ ಮತ್ತೆ ಉಕ್ಕುತ್ತಿದೆ. ಬೆಳಗಾವಿಯಲ್ಲಿ ಸಮಸ್ಯೆ ಪ್ರಾರಂಭ ಆದರೇನೇ ಸರ್ಕಾರಗಳು ಉರುಳುತ್ತವೆ. ಈಗಲೂ ಅಂತಹದ್ದೇ ಲಕ್ಷಣ ಕಾಣಿಸುತ್ತಿದೆ. ಮಹಾಭಾರತದ ಯುದ್ಧ ಒಂದು ಸಲಕ್ಕೆ ನಿಂತಿಲ್ಲ. ನಡೀತನೇ ಇತ್ತು, ಅದೇ ರೀತಿ ಬೆಳಗಾವಿ ರಾಜಕಾರಣದಲ್ಲಿಯೂ ಶೀತಲ ಸಮರ ನಡೆಯುತ್ತಲೇ ಇದೆ. ಯಾವಾಗ ಏನಾಗಲಿದೆಯೋ ಗೊತ್ತಿಲ್ಲ” ಎಂದು ಮಾಜಿ ಸಚಿವ ಮುನಿರತ್ನ ಅವರು ಪರೋಕ್ಷವಾಗಿ ಕಾಂಗ್ರೆಸ್ ಸರ್ಕಾರದ ಪತನದ ಹಾದಿಯಲ್ಲಿದೆ ಎನ್ನುವುದನ್ನು ಹೇಳಿದ್ದಾರೆ. ವೈಯಾಲಿ ಕಾವಲ್ನಲ್ಲಿರುವ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ …
Read More »