ಬೆಳಗಾವಿ/ಬೆಂಗಳೂರು : ವರ್ಗಾವಣೆ ದಂಧೆ ಸೇರಿ ಬೇರೆ ಬೇರೆ ವಿಚಾರಗಳ ಬಗ್ಗೆ ಮುಂದಿನ ಜಂಟಿ ಅಧಿವೇಶನದಲ್ಲಿ ಮಾತನಾಡುತ್ತೇನೆ. ಒಂದು ವೇಳೆ ವೈಯಕ್ತಿಕವಾಗಿ ಕೆಣಕಿದ್ರೆ ನಾನು ಸುಮ್ನೆ ಇರಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ. ಅಧಿವೇಶನಕ್ಕೆ ಆಗಮಿಸಿದ ಹೆಚ್.ಡಿ ಕುಮಾರಸ್ವಾಮಿ ಸುವರ್ಣಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತ, ಬರ ನಿರ್ವಹಣೆ, ಉತ್ತರ ಕರ್ನಾಟಕ ಅಭಿವೃದ್ಧಿ ನನ್ನ ಆದ್ಯತೆ. ಈ ಬಗ್ಗೆ ಚಳಿಗಾಲ ಅಧಿವೇಶನದಲ್ಲಿ ಚರ್ಚೆ ಮಾತನಾಡುತ್ತೇನೆ. ಈ ಭಾಗದ …
Read More »ಅಬಕಾರಿ ಸಿಎಲ್ 7 ಪರವಾನಗಿ ಅಕ್ರಮ: ಆಡಳಿತ-ಪ್ರತಿಪಕ್ಷಗಳ ಸದಸ್ಯರ ನಡುವೆ ಆರೋಪ-ಪ್ರತ್ಯಾರೋಪ
ಬೆಳಗಾವಿ/ ಬೆಂಗಳೂರು : ರಾಜ್ಯದ ಹಲವು ಕಡೆ ಅಬಕಾರಿ ಇಲಾಖೆಯಲ್ಲಿನ ಸಿಎಲ್ -7 ಪರವಾನಗಿಯಲ್ಲಿ ಅಕ್ರಮ ನಡೆದಿದ್ದು, ಇದರ ಬಗ್ಗೆ ತನಿಖೆಯಾಗಬೇಕೆಂಬ ವಿಚಾರ ವಿಧಾನಸಭೆಯಲ್ಲಿ ಇಂದು ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಮಾತಿನ ವಾಗ್ವಾದ ನಡೆಯಿತು. ಪ್ರಶ್ನೋತ್ತರ ವೇಳೆ ಕಾಂಗ್ರೆಸ್ ಶಾಸಕ ಎಸ್ ಎನ್ ನಾರಾಯಣಸ್ವಾಮಿ ಅವರು, ಸಿಎಲ್ 7 ಪರವಾನಗಿಯಲ್ಲಿ ಅಕ್ರಮ ನಡೆದಿದೆ. ನಿಯಮಗಳನ್ನು ಗಾಳಿಗೆ ತೂರಿ ಪರವಾನಗಿ ನೀಡಲಾಗಿದೆ ಎಂದು ಸದನದಲ್ಲಿ ಪ್ರಸ್ತಾಪಿಸಿದರು. ಕೋಲಾರ ಜಿಲ್ಲೆಯಲ್ಲಿ ಅಬಕಾರಿ ಇಲಾಖೆಯ …
Read More »ಧಾರವಾಡ ಜಿಲ್ಲೆಗೆ 50.298 ಕೋಟಿ ರೂ. ಗಳ ಮಧ್ಯಂತರ ಬೆಳೆ ವಿಮೆ ಮಂಜೂರು
ಧಾರವಾಡ: ಜಿಲ್ಲೆಯ 63,566 ಜನ ರೈತರಿಗೆ 50.298 ಕೋಟಿ ರೂ.ಗಳ ಮಧ್ಯಂತರ ವಿಮೆ ಮಂಜೂರಾಗಿದೆ ಎಂದು ಜಿಲ್ಲಾಧಿಕಾರಿ ಗರುದತ್ತ ಹೆಗಡೆ ತಿಳಿಸಿದ್ದಾರೆ. 2023 ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭಿಮಾ (ವಿಮಾ) ಯೋಜನೆ ಧಾರವಾಡ ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಲಾಗಿತ್ತು. ಭತ್ತ, ಮೆಕ್ಕೆಜೋಳ, ಹತ್ತಿ, ಈರುಳ್ಳಿ, ಕೆಂಪು ಮೆಣಸಿನಕಾಯಿ ಮತ್ತು ಆಲೂಗಡ್ಡೆ ಬೆಳೆಗಳಡಿ ನೋಂದಾಯಿಸಿಕೊಂಡ ರೈತರಿಗೆ ಮಧ್ಯಂತರ ವಿಮೆ ಜಮಾವಣೆ ಪ್ರಾರಂಭವಾಗಿದೆ. ಅಳ್ನಾವರ ತಾಲೂಕಿನ 3,052 …
Read More »13 ಸರ್ಕಾರಿ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ: ಕೋಟ್ಯಂತರ ಮೌಲ್ಯದ ಆಸ್ತಿ ಪತ್ತೆ!
ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಸಂಪಾದಿಸಿರುವ ಗಂಭೀರ ಆರೋಪದಡಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕೆಲಸ ಮಾಡುತ್ತಿದ್ದ 13 ಮಂದಿ ಸರ್ಕಾರಿ ಅಧಿಕಾರಿಗಳ ಮನೆ, ಸಂಬಂಧಿಕರ ನಿವಾಸಗಳು ಸೇರಿದಂತೆ ಒಟ್ಟು 68 ಸ್ಥಳಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಚರ, ಸ್ಥಿರಾಸ್ತಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿತರ ವಿರುದ್ಧ ಪ್ರತ್ಯೇಕವಾಗಿ 13 ಪ್ರಕರಣ ದಾಖಲಿಸಿಕೊಂಡು ತನಿಖೆ ಚುರುಕುಗೊಳಿಸಿದ್ದಾರೆ. 13 ಸರ್ಕಾರಿ ಅಧಿಕಾರಿಗಳಿಗೆ ಸೇರಿದ 68 ಕಡೆ ಲೋಕಾ …
Read More »ಚಿಕ್ಕಮಗಳೂರು ವಕೀಲನ ಮೇಲೆ ಪೊಲೀಸರ ಹಲ್ಲೆ ಪ್ರಕರಣ ಸಿಐಡಿಗೆ ಹಸ್ತಾಂತರ
ಬೆಂಗಳೂರು: ಚಿಕ್ಕಮಗಳೂರಿನ ವಕೀಲ ಪ್ರೀತಮ್ ಅವರ ಮೇಲಿನ ಪೊಲೀಸರ ಹಲ್ಲೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್ಗೆ ಮಾಹಿತಿ ನೀಡಿದೆ. ಘಟನೆಗೆ ಸಂಬಂಧಿಸಿದಂತೆ ಹೈಕೋರ್ಟ್ ಸ್ವಯಂ ಪ್ರೇರಿತವಾಗಿ ದಾಖಲಿಸಿಕೊಂಡಿರುವ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ನೇತೃತ್ವದ ವಿಭಾಗೀಯ ಪೀಠಕ್ಕೆ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರು ಮಾಹಿತಿ ನೀಡಿದರು. ವಿಚಾರಣೆ ಆರಂಭವಾಗುತ್ತಿದ್ದಂತೆ ಚಿಕ್ಕಮಗಳೂರು …
Read More »ಸಾರಿಗೆ ಇಲಾಖೆಗೆ 9 ಸಾವಿರ ಸಿಬ್ಬಂದಿ ನೇಮಕ..5500 ಹೊಸ ಬಸ್ ಖರೀದಿ : ಸಚಿವ ರಾಮಲಿಂಗಾರೆಡ್ಡಿ
ಬೆಳಗಾವಿ : ನಾನು ಸಾರಿಗೆ ಮಂತ್ರಿ ಆಗಿದ್ದಾಗ ನೇಮಕಾತಿ ಆಗಿದ್ದೇ ಕೊನೆ. ಕಳೆದ ಏಳು ವರ್ಷಗಳಲ್ಲಿ 13,888 ಸಿಬ್ಬಂದಿ ನಿವೃತ್ತಿ ಹೊಂದಿದ್ದಾರೆ. ಈಗ 9 ಸಾವಿರ ಜನರನ್ನು ಹೊಸದಾಗಿ ನೇಮಕ ಮಾಡಿಕೊಳ್ಳುತ್ತಿದ್ದು, ಇದಕ್ಕೆ ಅನುಮತಿ ಸಿಕ್ಕಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಬೆಳಗಾವಿಯ ಸುವರ್ಣ ಗಾರ್ಡನ್ ಬಳಿಯ ಟೆಂಟ್ನಲ್ಲಿ ನಡೆದ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಮನವಿ ಸ್ವೀಕರಿಸಿದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಉತ್ತರ ಕರ್ನಾಟಕ ಮತ್ತು …
Read More »ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಹೋದರ ಚನ್ನರಾಜ್ ಹಟ್ಟಿಹೊಳಿ ಮತ್ತು ಅವರ ಆಪ್ತರ ವಿರುದ್ಧ ಪ್ರಕರಣ ದಾಖಲಾ
ಬೆಳಗಾವಿ: ಬಿಜೆಪಿ ಕಾರ್ಯಕರ್ತ ಪೃಥ್ವಿ ಸಿಂಗ್ ಮೇಲೆ ಚಾಕು ಇರಿತ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ ಮತ್ತು ಅವರ ಇಬ್ಬರು ಆಪ್ತರ ವಿರುದ್ಧ ಜಾತಿ ನಿಂದನೆ ಕೇಸ್ ದಾಖಲಾಗಿದೆ. ಬೆಳಗಾವಿಯ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 1860(U/s 143, 147, 148, 323, 324, 379, 504, 506), ಅಟ್ರಾಸಿಟಿ ಕೇಸ್ ಮತ್ತು ಐಪಿಸಿ ಸೆಕ್ಷನ್ 1989(u/s-3(1), (r)(s), 3(2)(v-a), IPC 1860(u/s-149ರಡಿ ಕೇಸ್ ಎಂಎಲ್‌ಸಿ …
Read More »ಮಡಿವಾಳ ಸಮಾಜಕ್ಕೆ ಎಸ್ಸಿ ಮೀಸಲಾತಿ ನೀಡದಿದ್ದರೆ ಆತ್ಮಹತ್ಯೆ ಎಚ್ಚರಿಕೆ
ಬೆಳಗಾವಿ: ಮಡಿವಾಳ ಸಮಾಜವನ್ನು ಕೂಡಲೇ ಪರಿಶಿಷ್ಟ ಜಾತಿಗೆ ಸೇರಿಸಬೇಕು. ಡಾ ಅನ್ನಪೂರ್ಣಮ್ಮನವರ ವರದಿಯನ್ನು ಕೇಂದ್ರಕ್ಕೆ ಶಿಫಾರಸ್ಸು ಮಾಡಿ ಕೂಡಲೇ ಅನುಷ್ಠಾನಕ್ಕೆ ತರಬೇಕು. ಇಲ್ಲದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳಬೇಕಾಗುತ್ತದೆ ಎಂದು ಮಡಿವಾಳ ಸಮಾಜ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ. ಉತ್ತರಕರ್ನಾಟಕ ಮಡಿವಾಳರ ಸಂಘದ ಬಾಗಲಕೋಟೆ ಪದಾಧಿಕಾರಿಗಳು ಇಂದು ಬೆಳಗಾವಿಯ ಸುವರ್ಣ ಗಾರ್ಡನ್ ಬಳಿ ಪ್ರತಿಭಟನೆ ನಡೆಸಿದರು. ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರ್ಪಡೆಗೊಳಿಸಲು 2008ರಲ್ಲಿ ಅಂದಿನ ಸರ್ಕಾರಕ್ಕೆ ಡಾ ಅನ್ನಪೂರ್ಣಮ್ಮನವರ ನೇತೃತ್ವದ ಸಮಿತಿ ವರದಿ ಸಲ್ಲಿಸಿದೆ. …
Read More »ಸೀಲಿಂಗ್ ತುಂಡಾಗಿ ಕಾರ್ಮಿಕ ಸಾವು
ಚಿಕ್ಕೋಡಿ: ಕ್ರೇನ್ ಸೀಲಿಂಗ್ ತುಂಡಾಗಿ ಬಿದ್ದು ಓರ್ವ ಕಾರ್ಮಿಕ ಮೃತಪಟ್ಟು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಜಂಬಗಿ ಗ್ರಾಮದಲ್ಲಿ ಇಂದು ನಡೆದಿದೆ. ಮಧ್ಯಪ್ರದೇಶದ ಸಂತೋಷ ಮುಣ್ಣಾ ವಿಶ್ವಕರ್ಮ (28) ಮೃತಪಟ್ಟಿದ್ದಾರೆ. ಜಂಬಗಿ ಗ್ರಾಮದ ಶಾವಂತ ಪಾಟೀಲ್ ಎಂಬ ರೈತನ ಜಮೀನಿನಲ್ಲಿ ಮಧ್ಯಪ್ರದೇಶದ ಐವರು ಕಾರ್ಮಿಕರು ಬಾವಿ ಕೊರೆಯುವ ಕೆಲಸ ಮಾಡುತ್ತಿದ್ದರು. ಇಬ್ಬರು ಬಾವಿಗಿಳಿಯುತ್ತಿದ್ದ ಸಂದರ್ಭದಲ್ಲಿ ಕ್ರೇನ್ ಸೀಲಿಂಗ್ ತುಂಡಾಗಿದೆ. ಅಂದಾಜು ನೂರು ಅಡಿ ಆಳದ ಬಾವಿಗೆ …
Read More »ಪೊಲೀಸ್ ಇಲಾಖೆಗೆ ಹೊಸ ವಾಹನಗಳ ಖರೀದಿಗೆ ತೀರ್ಮಾನ
ಬೆಳಗಾವಿ/ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ 1,700ಕ್ಕೂ ಹೆಚ್ಚು ವಾಹನಗಳನ್ನು ಸ್ಕ್ರಾಂಪ್‌ಗೊಳಿಸಲು (ನಿರುಪಯುಕ್ತ) ತೀರ್ಮಾನಿಸಲಾಗಿದ್ದು, ಹಂತಹಂತವಾಗಿ ನಿರುಪಯುಕ್ತಗೊಳಿಸುವುದರ ಜೊತೆಗೆ 100 ಕೋಟಿ ರೂ.ವೆಚ್ಚದಲ್ಲಿ ಹೊಸ ವಾಹನಗಳನ್ನು ಖರೀದಿಸಲು ಉದ್ದೇಶಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ವಿಧಾನಸಭೆಯಲ್ಲಿ ಇಂದು ಹೇಳಿದರು. ಪ್ರಶ್ನೋತ್ತರ ಕಲಾಪದ ವೇಳೆ ಸದಸ್ಯ ಶ್ರೀನಿವಾಸ ಜಿ.ಎಚ್. ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಅಗ್ನಿಶಾಮಕ ಠಾಣೆ ಮತ್ತು ತುರ್ತು ಸೇವಾ ಇಲಾಖೆಯಲ್ಲಿ 15 ವರ್ಷಗಳ ಹಳೆಯ ವಾಹನಗಳನ್ನು ಅನುಪಯುಕ್ತಗೊಳಿಸುವ ಹಾಗೂ ಬದಲಿಗೆ ಹೊಸ ವಾಹನಗಳನ್ನು …
Read More »
Laxmi News 24×7