ಬೆಂಗಳೂರು : ಪ್ರಿಯಕರನೊಂದಿಗೆ ಸೇರಿ ಅತ್ತೆಯನ್ನು ಹತ್ಯೆಗೈದಿದ್ದ ಸೊಸೆ ಸಹಿತ ಮೂವರನ್ನು ಬ್ಯಾಡರಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ರಶ್ಮಿ, ಅಕ್ಷಯ್ ಹಾಗೂ ಪುರುಷೋತ್ತಮ್ ಎಂದು ಗುರುತಿಸಲಾಗಿದೆ. ಕಳೆದ ಅಕ್ಟೋಬರ್ 5ರಂದು ಲಕ್ಷ್ಮಮ್ಮ (50) ಎಂಬವರನ್ನು ಉಸಿರುಗಟ್ಟಿಸಿ ಕೊಲೆಗೈದಿದ್ದ ಆರೋಪಿಗಳು, ಹೃದಯಾಘಾತವೆಂದು ಕಥೆ ಸೃಷ್ಟಿಸಿದ್ದರು. ಆರೋಪಿ ರಶ್ಮಿಗೆ ಮಂಜುನಾಥ್ ಎಂಬಾತನೊಂದಿಗೆ ಮದುವೆಯಾಗಿತ್ತು. ಆದರೆ ತಮ್ಮ ಮನೆಯ ಮೇಲೆ ಬಾಡಿಗೆಗೆ ಇದ್ದ ಅಕ್ಷಯ್ ಜೊತೆ ರಶ್ಮಿ ಸಂಪರ್ಕ ಹೊಂದಿದ್ದಳು. ಮನೆಯ ಹಣದ ವ್ಯವಹಾರಕ್ಕೆ …
Read More »ಮಂಡಿ ಶಸ್ತ್ರ ಚಿಕಿತ್ಸೆಗೆ ತೆರಳಿ ಹೃದಯ ಶಸ್ತ್ರ ಚಿಕಿತ್ಸೆಗೆ ಒಳಗಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ
ಬೆಂಗಳೂರು: ಹೃದಯದಲ್ಲಿ ರಂಧ್ರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೃದಯದ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ. ಕಳೆದ ಕೆಲ ವರ್ಷಗಳಿಂದ ಮಂಡಿನೋವಿನಿಂದ ಬಳಲುತ್ತಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿ ಶಸ್ತ್ರಚಿಕಿತ್ಸೆಗೆ ಒಳಗಾಗಲು ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿನ ಫೋರ್ಟಿಸ್ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ವೈದ್ಯಕೀಯ ತಪಾಸಣೆ ಮಾಡುವಾಗ ಹೃದಯದಲ್ಲಿ ರಂಧ್ರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಂಡಿ ಶಸ್ತ್ರ ಚಿಕಿತ್ಸೆಗೂ ಮುನ್ನ ಹೃದಯದ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಮೊಣಕಾಲು ನೋವು …
Read More »ಇಂಡಿಯಾ’ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಖರ್ಗೆ ಅಥವಾ ರಾಹುಲ್ ಪ್ರಧಾನಿ ಸಾಧ್ಯತೆ: ಶಶಿ ತರೂರ್
ತಿರುವನಂತಪುರಂ (ಕೇರಳ): 2024ರ ಲೋಕಸಭಾ ಚುನಾವಣೆಯಲ್ಲಿ ಪ್ರತಿಪಕ್ಷಗಳ ‘ಇಂಡಿಯಾ’ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಥವಾ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಪ್ರಧಾನಿಯನ್ನಾಗಿ ಆಯ್ಕೆ ಮಾಡಬಹುದು ಎಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯ, ಕೇರಳದ ತಿರುವನಂತಪುರಂ ಸಂಸದ ಶಶಿ ತರೂರ್ ಹೇಳಿದ್ದಾರೆ. ತಿರುವನಂತಪುರಂನ ಟೆಕ್ನೋಪಾರ್ಕ್‌ನಲ್ಲಿ ಸೋಮವಾರ ಅಮೆರಿಕ ಮೂಲದ ಮತ್ತು ಸಿಲಿಕಾನ್ ವ್ಯಾಲಿ-ಇನ್‌ಕ್ಯುಬೇಟೆಡ್ ಡಿ2ಸಿ (ಡೈರೆಕ್ಟ್-ಟು-ಕನ್ಸ್ಯೂಮರ್)ಯ ವೇ.ಕಾಮ್‌ನ ಕಚೇರಿ ಉದ್ಘಾಟಿಸಿದ ನಂತರ ವೃತ್ತಿಪರರೊಂದಿಗೆ ಶಶಿ ತರೂರ್ …
Read More »ಪಾಸ್ವರ್ಡ್ ರಹಿತ ಲಾಗಿನ್; ಇದು ವಾಟ್ಸ್ಆಯಪ್ನ ಹೊಸ ಪಾಸ್ ಕೀ ವೈಶಿಷ್ಟ್ಯ!
ನವದೆಹಲಿ: ತನ್ನ ಪ್ಲಾಟ್ಫಾರ್ಮ್ನಲ್ಲಿ ಪಾಸ್ವರ್ಡ್ ಬದಲಾಗಿ ಪಾಸ್ ಕೀ ವೈಶಿಷ್ಟ್ಯವನ್ನು ಶೀಘ್ರದಲ್ಲೇ ಜಾರಿಗೊಳಿಸುವುದಾಗಿ ವಾಟ್ಸ್ಆಯಪ್ ಘೋಷಿಸಿದೆ. ಈ ಬದಲಾವಣೆಯಿಂದ ಬಳಕೆದಾರರು ಕಿರಿಕಿರಿ ಉಂಟು ಮಾಡುವ ಹಾಗೂ ಅಸುರಕ್ಷಿತವಾದ ಟು – ಸ್ಟೆಪ್ ಎಸ್ಎಂಎಸ್ ದೃಢೀಕರಣದ ಪ್ರಕ್ರಿಯೆಯಿಂದ ಪಾರಾಗಲಿದ್ದಾರೆ. “ಆಂಡ್ರಾಯ್ಡ್ ಬಳಕೆದಾರರು ಸುಲಭವಾಗಿ ಮತ್ತು ಸುರಕ್ಷಿತವಾಗಿ ಪಾಸ್ ಕೀಗಳೊಂದಿಗೆ ಲಾಗ್ ಇನ್ ಮಾಡಬಹುದು. ನಿಮ್ಮ ಮುಖ, ಬೆರಳಚ್ಚು ಅಥವಾ ಪಿನ್ ಮಾತ್ರ ನಿಮ್ಮ ವಾಟ್ಸ್ಆಯಪ್ ಖಾತೆಯನ್ನು ಅನ್ಲಾಕ್ ಮಾಡುತ್ತದೆ” ಎಂದು ಕಂಪನಿ ಸೋಮವಾರ …
Read More »ದಸರಾ ದರ್ಶಿನಿ: ನವರಾತ್ರಿ ಹಿನ್ನೆಲೆ ದೇವಾಲಯ ದರ್ಶನಕ್ಕೆ ಕೆಎಸ್ಆರ್ಟಿಸಿಯಿಂದ ವಿಶೇಷ ಪ್ಯಾಕೇಜ್
ಮಂಗಳೂರು : ನವರಾತ್ರಿ ಹಬ್ಬದ ಸಂದರ್ಭದಲ್ಲಿ ಭಕ್ತರಿಗೆ ದೇವಾಲಯ ದರ್ಶನಕ್ಕೆ ಕಳೆದ ವರ್ಷ ಕೆಎಸ್ಆರ್ಟಿಸಿಯಿಂದ ದಸರಾ ದರ್ಶಿನಿ ಎಂಬ ಪ್ಯಾಕೇಜ್ ಆರಂಭಿಸಲಾಗಿತ್ತು. ಇದಕ್ಕೆ ಜನರ ಅದ್ಬುತ ಪ್ರತಿಕ್ರಿಯೆ ವ್ಯಕ್ತವಾದ ಹಿನ್ನೆಲೆಯಲ್ಲಿ ಮಂಗಳೂರಿನ ಕೆಎಸ್ಆರ್ಟಿಸಿ ಈ ಬಾರಿಯು ದಸರಾ ದರ್ಶಿನಿ ಆರಂಭಿಸಿದೆ. ದೇವಾಲಯ ದರ್ಶನಕ್ಕೆ ಕೆಎಸ್ಆರ್ಟಿಸಿಯಿಂದ ವಿಶೇಷ ಪ್ಯಾಕೇಜ್ : ನವರಾತ್ರಿ ಸಮಯದಲ್ಲಿ ದೇವಿ ದೇವಾಲಯಗಳ ದರ್ಶನ ಮಾಡುವುದು ಸಾಮಾನ್ಯ. ದೇಗುಲ ದರ್ಶನ ಮಾಡುವ ಭಕ್ತರಿಗೆ ಎಂದೇ ಮಂಗಳೂರಿನಲ್ಲಿ ಕೆಎಸ್ಆರ್ಟಿಸಿ ಇದೀಗ ದಸರಾ ದೇಗುಲ …
Read More »ಐಸಿಸಿ ಏಕದಿನ ವಿಶ್ವಕಪ್: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದಿನಿಂದ ಟಿಕೆಟ್ ಮಾರಾಟ
ಬೆಂಗಳೂರು : ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ ಮೊದಲ ಪಂದ್ಯದ ಆತಿಥ್ಯಕ್ಕೆ ಸಜ್ಜಾಗಿರುವ ಬೆಂಗಳೂರಿನ ಎಂ ಚಿನ್ನಸ್ವಾಮಿ ಮೈದಾನದಲ್ಲಿ ನಡೆಯಲಿರುವ 4 ಪಂದ್ಯಗಳ ಟಿಕೆಟ್ ಮಾರಾಟದ ದಿನಾಂಕವನ್ನ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ಪ್ರಕಟಿಸಿದೆ. ಆತಿಥೇಯ ಭಾರತ ಹಾಗೂ ನೆದರ್‌ಲ್ಯಾಂಡ್ಸ್ ನಡುವಿನ ಪಂದ್ಯ ಹೊರತುಪಡಿಸಿ ಉಳಿದ ಮೂರು ಪಂದ್ಯಗಳ ಟಿಕೆಟ್ ಮಾರಾಟ ಪ್ರಕ್ರಿಯೆ ಇಂದಿನಿಂದ ಆರಂಭವಾಗಿದೆ. ಈಗಾಗಲೇ ಕ್ರಿಕೆಟ್ ಅಭಿಮಾನಿಗಳು ಟಿಕೆಟ್ ಪಡೆಯಲು ಕ್ರೀಂಡಾಂಗಣದ ಮುಂದೆ ಸಾಲುಗಟ್ಟಿ ನಿಂತಿದ್ದಾರೆ. ಈಗಾಗಲೇ …
Read More »ಹಳಿ ತಪ್ಪಿದ ಕಾರಟಗಿ – ಯಶವಂತಪುರ ರೈಲು:
ಗಂಗಾವತಿ (ಕೊಪ್ಪಳ): ಕಾರಟಗಿ – ಯಶವಂತರಪುರ ರೈಲು ಹಳಿ ತಪ್ಪಿದ ಘಟನೆ ಇಂದು ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಕಾರಟಗಿ ರೈಲ್ವೆ ನಿಲ್ದಾಣದ ಸಮೀಪ ನಡೆದಿದೆ. ಚಾಲಕನ ಸಮಯ ಪ್ರಜ್ಞೆಯಿಂದಾಗಿ ರೈಲಿನಲ್ಲಿದ್ದ ನೂರಾರು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತಾಂತ್ರಿಕ ಕಾರಣದಿಂದ ಎಂಜಿನ್ ಮುಂಭಾಗದಲ್ಲಿನ ಚಕ್ರ ಹಳಿ ತಪ್ಪಿದ್ದು ಗಮನಕ್ಕೆ ಬರುತ್ತಿದ್ದಂತೆಯೆ ತಕ್ಷಣ ಎಚ್ಚೆತ್ತುಕೊಂಡ ಲೋಕೋ ಪೈಲಟ್ ಕೂಡಲೇ ವೇಗವನ್ನು ಶೂನ್ಯಕ್ಕೆ ಇಳಿಸಿ ಅಪಾಯ ತಪ್ಪಿಸಿದ್ದಾರೆ. ಹೀಗಾಗಿ ರೈಲಿನ ಎಂಜಿನ್ ಮಾತ್ರ …
Read More »ನಮ್ಮದೇ ಒರಿಜಿನಲ್ ಜಾತ್ಯತೀತ ಜನತಾದಳ, ನಾನೇ ಅದರ ಅಧ್ಯಕ್ಷ.: ಸಿ.ಎಂ.ಇಬ್ರಾಹಿಂ ‘ದಳ’ಪತಿಗಳಿಗೆ ಖಡಕ್ ಸಂದೇಶ
ಬೆಂಗಳೂರು: ನಮ್ಮದೇ ಒರಿಜಿನಲ್ ಜಾತ್ಯತೀತ ಜನತಾದಳ. ನಾನೇ ಅದರ ಅಧ್ಯಕ್ಷ. ಇದು ನನ್ನ ಮನೆ. ಮುಂದೇನಾಗುತ್ತದೆ ಎಂಬುದನ್ನು ಪರದೆ ಮೇಲೆ ನೋಡಿ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ‘ದಳ’ಪತಿಗಳಿಗೆ ಖಡಕ್ ಸಂದೇಶ ರವಾನಿಸಿದರು. ನಗರದ ನಾಗವಾರ ಮುಖ್ಯ ರಸ್ತೆಯಲ್ಲಿರುವ ಸಿಎಂಎ ಕಲ್ಯಾಣ ಮಂಟಪದಲ್ಲಿ ಇಂದು ಆಯೋಜಿಸಿದ್ದ ‘ಜೆಡಿಎಸ್ ಚಿಂತನ ಮಂಥನ’ ಸಭೆಯಲ್ಲಿ ಮಾತನಾಡಿದ ಅವರು, ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದಿಂದ ನನ್ನನ್ನು ಯಾರಿಂದಲೂ ತೆಗೆಯಲು ಸಾಧ್ಯವಿಲ್ಲ. ಅದಕ್ಕೆ ಸಭೆ ನಡೆಸಿ ತೀರ್ಮಾನ ಮಾಡಬೇಕು. …
Read More »ಪೋಷಕರ ಒಪ್ಪಿಗೆ ಇಲ್ಲದೆ ಆಗುವ ಪ್ರೇಮ ವಿವಾಹಗಳನ್ನು ಸರ್ಕಾರ ನಿಷೇಧಿಸಬೇಕು……..
ಕಲಬುರಗಿ: ಪೋಷಕರ ಒಪ್ಪಿಗೆ ಇಲ್ಲದೆ ಆಗುವ ಪ್ರೇಮ ವಿವಾಹಗಳನ್ನು ಸರ್ಕಾರ ನಿಷೇಧಿಸಬೇಕು ಎಂದು ಇಲ್ಲಿನ ಕಮಲಾಪುರ ತಾಲೂಕಿನ ಡೊಂಗರಗಾಂವ ಗ್ರಾಮ ಪಂಚಾಯಿತಿ ಅಧ್ಯಕ್ಷ ಶಾಂತಕುಮಾರ ಕೆ. ಮೂಲಗೆ ಹಾಗೂ ಸದಸ್ಯರು ಸಭೆ ನಡೆಸಿ ಠರಾವು ಪಾಸ್ ಮಾಡಿದ್ದಾರೆ. ಅಕ್ಟೋಬರ್ 10 ರಂದು ಶಾಂತಕುಮಾರ್ ಮೂಲಗೆ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತಿಯಲ್ಲಿ ಸಾಮಾನ್ಯ ಸಭೆ ನಡೆದಿತ್ತು. ವಿಶೇಷವಾಗಿ, ಪ್ರೇಮ ವಿವಾಹಗಳ ಬಗ್ಗೆ ಚರ್ಚಿಸಲೆಂದೇ ಈ ಸಭೆ ಕರೆಯಲಾಗಿತ್ತು. ಶಾಂತಕುಮಾರ ಕೆ. ಮೂಲಗೆ ಮಾತನಾಡಿ, “ನಮ್ಮ …
Read More »ನಗರಸಭೆ ಆಯುಕ್ತರ ಕುರ್ಚಿಗಾಗಿ ಬಾಗಲಕೋಟೆ ನಗರದಲ್ಲಿ ಗೊಂದಲ 2ರು ಒಂದೇ ಚೇಂಬರ್ನಲ್ಲಿ ಕುಳಿತು ಆಡಳಿತ
ಬಾಗಲಕೋಟೆ : ನಗರಸಭೆ ಆಯುಕ್ತರ ಕುರ್ಚಿಗಾಗಿ ಬಾಗಲಕೋಟೆ ನಗರದಲ್ಲಿ ಗೊಂದಲ ಮುಂದುವರೆದಿದೆ. ಇತ್ತೀಚೆಗಷ್ಟೇ ಆರೋಗ್ಯ ಇಲಾಖೆ ಜಿಲ್ಲಾ ಮಟ್ಟದ ಅಧಿಕಾರಿ ಕುರ್ಚಿಗಾಗಿ ಇಬ್ಬರು ಅಧಿಕಾರಿಗಳು ಗೊಂದಲ ಮಾಡಿಕೊಂಡಿದ್ದರು. ಅದು ಮಾಸುವ ಮುಂಚೆ ಈಗ ನಗರಸಭೆ ಆಯುಕ್ತರ ಕುರ್ಚಿಗಾಗಿ ಇಬ್ಬರು ಅಧಿಕಾರಿಗಳ ಮಧ್ಯೆ ಪೈಪೋಟಿ ನಡೆದಿರುವುದು ಚರ್ಚೆಗೆ ಗ್ರಾಸವಾಗಿದೆ. ಹಿಂದಿನ ಆಯುಕ್ತ ಹಾಗೂ ಹಾಲಿ ಆಯುಕ್ತರ ಮಧ್ಯೆ ಕುರ್ಚಿಗಾಗಿ ಸ್ಪರ್ಧೆ ಏರ್ಪಟ್ಟಿದ್ದು, ಒಂದೇ ಚೇಂಬರ್ನಲ್ಲಿ ಕುಳಿತ ಇಬ್ಬರೂ ಆಯುಕ್ತರು, ಆಡಳಿತ ನಡೆಸಲು ಮುಂದಾಗಿದ್ದಾರೆ. …
Read More »