ಚಿಕ್ಕೋಡಿ (ಬೆಳಗಾವಿ): ವಿದ್ಯುತ್ ತಂತಿ ಸ್ಪರ್ಶಿಸಿ 26 ಎಕರೆ ಪ್ರದೇಶದಲ್ಲಿ ಬೆಳೆದ ಕಬ್ಬು ಸಂಪೂರ್ಣವಾಗಿ ಸುಟ್ಟು ಹೋದ ಘಟನೆ ಅಥಣಿ ತಾಲೂಕಿನ ಶಿರಹಟ್ಟಿ ಗ್ರಾಮದ ಸರ್ವೆ ನಂಬರ್ 8 ಮತ್ತು 10ರಲ್ಲಿ ಸೋಮವಾರ ಮಧ್ಯಾಹ್ನ ಸಂಭವಿಸಿತು. ಹೈವೋಲ್ಟೇಜ್ ವಿದ್ಯುತ್ ತಂತಿ ತುಂಡಾಗಿ ಬಿದ್ದು ಬೆಂಕಿ ಹೊತ್ತಿಕೊಂಡಿತು ಎಂದು ತಿಳಿದುಬಂದಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ರೈತರಾದ ಪಾರೀಸ್ ವಾಳ್ವೆ ಹಾಗೂ ನಿಗಂಪ್ಪಾ ಮನಗೋಳಿ ಮಾತನಾಡಿ, “ಇನ್ನೇನು ಕೆಲವೇ ದಿನಗಳಲ್ಲಿ ಕಬ್ಬು ಕಾರ್ಖಾನೆಗೆ …
Read More »ರೈತರ ಜಮೀನಿನಲ್ಲಿ ಕೆರೆ ನಿರ್ಮಿಸಿ 14 ವರ್ಷಗಳೇ ಕಳೆದಿವೆ. ಭೂಮಿ ಕೊಟ್ಟ ರೈತರಿಗೆ ಪರಿಹಾರ ಸಿಕ್ಕಿಲ್ಲ. ಕೆರೆಯಲ್ಲಿ ಮುಳುಗಿ ಪ್ರಾಣ ಬಿಡುವ ಎಚ್ಚರಿಕೆ!
ಬೆಳಗಾವಿ: ಊರಲ್ಲಿ ಕುಡಿಯುವ ನೀರಿಗೆ ಹಾಹಾಕಾರವಿತ್ತು. ನೀರಿನ ಬವಣೆ ನೀಗಿಸಲು ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ಗ್ರಾಮದ ರೈತರ ಜಮೀನಿನಲ್ಲಿ ಕೆರೆ ನಿರ್ಮಿಸಿ 14 ವರ್ಷಗಳೇ ಕಳೆದಿವೆ. ಆದರೆ, ಈವರೆಗೂ ಭೂಮಿ ಕೊಟ್ಟ ರೈತರಿಗೆ ಪರಿಹಾರ ಸಿಕ್ಕಿಲ್ಲ. ಇದರಿಂದ ಆಕ್ರೋಶಗೊಂಡ ಸಂತ್ರಸ್ಥರು ಪರಿಹಾರ ಕೊಡದಿದ್ದರೆ, ಇದೇ ಕೆರೆಯಲ್ಲಿ ಮುಳುಗಿ ಜೀವ ಬಿಡುತ್ತೇವೆ ಎಂದು ಸರ್ಕಾರಕ್ಕೆ ಎಚ್ಚರಿಸಿದ್ದಾರೆ. ಹಾಗಾದರೆ ಯಾವ ಊರು? ಏನಿವರ ವ್ಯಥೆ? ಸಚಿವರ ತವರು ಕ್ಷೇತ್ರ ಬೆಳಗಾವಿ ಗ್ರಾಮೀಣ ವ್ಯಾಪ್ತಿಯ …
Read More »ಲಿಂಗ ವಿವಾಹ.. ಇಂದು ಸುಪ್ರೀಂ ಕೋರ್ಟ್ನಿಂದ ಮಹತ್ವದ ತೀರ್ಪು
ನವದೆಹಲಿ: ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ಕೋರಿ ಸಲ್ಲಿಸಿರುವ ಅರ್ಜಿಗಳ ಕುರಿತು ಸುಪ್ರೀಂ ಕೋರ್ಟ್ ಕಾಯ್ದಿರಿಸಿರುವ ತನ್ನ ಬಹುನಿರೀಕ್ಷಿತ ತೀರ್ಪನ್ನು ಇಂದು ಪ್ರಕಟಿಸಲಿದೆ. ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಐವರು ನ್ಯಾಯಾಧೀಶರ ಸಾಂವಿಧಾನಿಕ ಪೀಠವು ಮ್ಯಾರಥಾನ್ ವಿಚಾರಣೆ ಪೂರ್ಣಗೊಳಿಸಿದ ನಂತರ ಮೇ 11 ರಂದು ತೀರ್ಪು ಕಾಯ್ದಿರಿಸಿತ್ತು. ಮುುಖ್ಯ ನ್ಯಾಯಮೂರ್ತಿ ನೇತೃತ್ವದಲ್ಲಿ ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಎಸ್ ರವೀಂದ್ರ ಭಟ್, ಹಿಮಾ ಕೊಹ್ಲಿ ಮತ್ತು ಪಿ ಎಸ್ …
Read More »ಕಾಂಗ್ರೆಸ್‌ನ ಎಟಿಎಂ ಕಲೆಕ್ಷನ್ ಮಾಡೆಲ್ ಪ್ರದರ್ಶಿಸಿ ಜನರನ್ನು ಎಚ್ಚರಿಸುವ ಕೆಲಸ ಮಾಡುತ್ತೇವೆ: ಅಶ್ವತ್ಥನಾರಾಯಣ
ಬೆಂಗಳೂರು: ”ಅಮಾಯಕ, ಪ್ರಾಮಾಣಿಕ ಗುತ್ತಿಗೆದಾರರ ಹಣ ಲೂಟಿ ಮಾಡಿ, ಐದು ರಾಜ್ಯಗಳ ಚುನಾವಣೆಗೆ ಕೊಡುವ ಕೆಲಸವನ್ನು ರಾಜ್ಯ ಕಾಂಗ್ರೆಸ್ ನಾಯಕರು ಮಾಡುತ್ತಿದ್ದಾರೆ. ಇದರ ವಿರುದ್ಧ ಬಿಜೆಪಿ ಪ್ರತಿಭಟನೆ ಮಾಡುತ್ತಿದೆ. ಎಟಿಎಂ ಕಲೆಕ್ಷನ್ ಮಾಡೆಲ್ ಪ್ರದರ್ಶನ ಮಾಡಿ ಜನರನ್ನು ಎಚ್ಚರಿಸುವ ಕೆಲಸ ಮಾಡುತ್ತೇವೆ” ಎಂದು ಮಾಜಿ ಡಿಸಿಎಂ ಅಶ್ವತ್ಥನಾರಾಯಣ ಆರೋಪಿಸಿದ್ದಾರೆ. ಮಲ್ಲೇಶ್ವರದಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ”ಲೂಟಿಕೋರರು ಸೇರಿ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಆದರೆ, ಬೆಂಗಳೂರು …
Read More »*ಅರಭಾಂವಿಮಠದ ನೂತನ ಪೀಠಾಧಿಪತಿಗಳಾಗಿ ಶ್ರೀ ಮ.ನಿ.ಪ್ರ.ಸ್ವ. ಶ್ರೀ ಗುರು ಬಸವಲಿಂಗ ಮಹಾಸ್ವಾಮಿಗಳು ಪುಣ್ಯಾರಣ್ಯ!
ಗೋಕಾಕ : ಅರಭಾವಿ ಮಠಕ್ಕೆ ಶ್ರೀ ಮ.ನಿ.ಪ್ರ.ಸ್ವ. ಶ್ರೀ ಗುರು ಬಸವಲಿಂಗ ಮಹಾಸ್ವಾಮಿಜೀ ಅವರನ್ನು ಪೀಠಾಧಿಪತಿಗಳಾಗಿ ಮಾಡಲಾಗಿದೆ. ನಿನ್ನೆ ದಿನ ತಾಲೂಕಿನ ಅರಭಾವಿ ಮಠದ ಶ್ರೀ ದುರದುಂಡೇಶ್ವರ ಸಿದ್ಧಸಂಸ್ಥಾನ ಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿಯವರು ಲಿಂಗೈಕ್ಯ ಹೊಂದಿದ್ದರು. ಆದರಿಂದ ಅರಭಾವಿ ಮಠದ ಪೀಠಕ್ಕೆ ಯಮಕನಮರಡಿ ಮತಕ್ಷೇತ್ರದ ಶ್ರೀ ಮ.ನಿ.ಪ್ರ.ಸ್ವ. ಶ್ರೀ ಗುರು ಬಸವಲಿಂಗ ಮಹಾಸ್ವಾಮಿಜೀ ಅವರನ್ನು ಪೀಠಾಧಿಪತಿಗಳಾಗಿ ಮಾಡಲಾಗಿದೆ.
Read More »ಕರ್ನಾಟಕದಲ್ಲಿ ಮಾರ್ಗದರ್ಶಿ ಚಿಟ್ಸ್ನ ಮತ್ತೊಂದು ಶಾಖೆ ಉದ್ಘಾಟನೆ
ಹಾವೇರಿ: ಕರ್ನಾಟಕದಲ್ಲಿ ಮಾರ್ಗದರ್ಶಿ ಚಿಟ್ಸ್ನ ಮತ್ತೊಂದು ಶಾಖೆ ಉದ್ಘಾಟನೆಗೊಂಡಿದೆ. ರಾಜ್ಯದಲ್ಲಿ ಇದು 23ನೇ ಶಾಖೆಯಾಗಿದ್ದು, ದೇಶಾದ್ಯಂತ 110ನೇ ಶಾಖೆಯಾಗಿದೆ. ಮಾರ್ಗದರ್ಶಿ ಚಿಟ್ಸ್ (ಕರ್ನಾಟಕ) ಪ್ರೈವೇಟ್ ಲಿಮಿಟೆಡ್ ನಿರ್ದೇಶಕ ಪಿ ಲಕ್ಷಣರಾವ್, ಈ ಶಾಖೆಯನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಶಾಖೆಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ಚಂದಾದಾರರು ಭಾಗವಹಿಸಿದ್ದರು. ಇಲ್ಲಿನ ಪಿಬಿ ರೋಡ್ನಲ್ಲಿರುವ ಜಿಜಿ ಮಾಗಾವಿ ಚೇಂಬರ್ಸ್ ಕಾಂಪ್ಲೆಕ್ಸ್ನ ಎರಡನೇ ಮಹಡಿಯಲ್ಲಿ ಮಾರ್ಗದರ್ಶಿ ಚಿಟ್ಸ್ನ ಶಾಖೆ ಆರಂಭವಾಗಿದೆ. ನೂತನ ಶಾಖೆಯ ಮೂಲಕ ಹಾವೇರಿ ಜಿಲ್ಲೆಯ ಜನರು …
Read More »ರಾಜ್ಯದಲ್ಲಿ ”ಶಿವಕುಮಾರ್ ಬ್ಯಾಂಕ್ ಆಫ್ ಇಂಡಿಯಾ” ಬ್ರಾಂಚ್ ಒಪನ್ ಆಗಿದೆ: ಬಿ.ವೈ ವಿಜಯೇಂದ್ರ
ಬೆಂಗಳೂರು: ದೇಶದಲ್ಲಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಇದೆ. ಆದರೆ, ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ನವರು ‘ಶಿವಕುಮಾರ್ ಬ್ಯಾಂಕ್ ಆಫ್ ಇಂಡಿಯಾ’ ಎಂಬ ಬ್ರಾಂಚ್ ಒಪನ್ ಮಾಡಿದ್ದಾರೆ. ರಾಜ್ಯದಲ್ಲಿ ಹಣ ವಸೂಲಿ ಮಾಡಿ ಬೇರೆ ಬೇರೆ ರಾಜ್ಯಗಳಿಗೆ ಕಳುಹಿಸುತ್ತಿದ್ದಾರೆ. ಪಂಚ ರಾಜ್ಯ ಮತ್ತು ಲೋಕಸಭೆ ಚುನಾವಣೆಗೆ ಈ ರೀತಿ ಹಣ ಸಂಗ್ರಹಿಸಲಾಗುತ್ತಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಗಂಭೀರ ಆರೋಪ ಮಾಡಿದ್ದಾರೆ. ಡಾಲರ್ಸ್ ಕಾಲೋನಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, …
Read More »ಐಟಿ ರೇಡ್ನಲ್ಲಿ ಸಿಕ್ಕ ಹಣ ಎಸ್ಎಸ್ಟಿ ಟ್ಯಾಕ್ಸ್ಗೆ ಸೇರಿದ್ದು”:H.D.K.
ಮೈಸೂರು: ಬೆಂಗಳೂರಿನ ಐಟಿ ರೇಡ್ನಲ್ಲಿ ಸಿಕ್ಕ ಹಣ ಎಸ್ಎಸ್ಟಿ (ಡಿ ಕೆ.ಶಿವಕುಮಾರ್, ಸುರೇಶ್ ಟ್ಯಾಕ್ಸ್) ಟ್ಯಾಕ್ಸ್ಗೆ ಸೇರಿದ್ದಾಗಿದೆ. ಈ ಮೂಲಕ ರಾಜ್ಯದಲ್ಲಿ ಹೊಸ ಕಲೆಕ್ಷನ್ ಆರಂಭವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಚಾಮುಂಡಿ ಬೆಟ್ಟದಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಇಂದು ಕುಟುಂಬ ಸಮೇತ ಮೈಸೂರಿನ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ನಾಡ ಅಧಿದೇವತೆ ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿ ನಂತರ ಮಾಧ್ಯಮಗಳ ಜೊತೆ ಮಾತನಾಡಿದರು. ‘ರಾಜ್ಯದಲ್ಲಿ ಕೃಷಿ …
Read More »ಲಂಡನ್ನಲ್ಲಿ ಬಸವೇಶ್ವರ ಪ್ರತಿಮೆಗೆ ಯು.ಟಿ.ಖಾದರ್, ಬಸವರಾಜ ಹೊರಟ್ಟಿ ನಮನ
ಲಂಡನ್: ಕರ್ನಾಟಕ ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಮತ್ತು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಲಂಡನ್ಗೆ ಭೇಟಿ ನೀಡಿದ್ದು, ಭಾನುವಾರ ಲ್ಯಾಂಬೆತ್ ನಗರದ ಥೇಮ್ಸ್ ನದಿ ದಂಡೆ ಮೇಲಿರುವ ಜಗಜ್ಯೋತಿ ಬಸವೇಶ್ವರರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಲ್ಯಾಂಬೆತ್‌ನ ಮಾಜಿ ಮೇಯರ್ ಡಾ.ನೀರಜ್ ಪಾಟೀಲ್ ಅವರು ಖಾದರ್ ಹಾಗೂ ಹೊರಟ್ಟಿ ಅವರನ್ನು ಸ್ವಾಗತಿಸಿದರು. ಖಾದರ್ ಬಸವಣ್ಣನವರ ಪ್ರತಿಮೆಗೆ ವಿಭೂತಿ ಹಚ್ಚಿದರು. ಈ ಸಂದರ್ಭದಲ್ಲಿ ಭಾರತೀಯ ಸಾಗರೋತ್ತರ ಕಾಂಗ್ರೆಸ್‌ನ …
Read More »4 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿ: ವಿದೇಶದಿಂದ ಬರುತ್ತಿದ್ದಂತೆಯೇ ಬಂಧನ
ಮಂಗಳೂರು: ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ದೇಶಕ್ಕೆ ಬರುತ್ತಿದ್ದಂತೆ ವಿಮಾನ ನಿಲ್ದಾಣದಲ್ಲಿ ಪೊಲೀಸರಿಂದ ಬಂಧನಕ್ಕೊಳಗಾಗಿದ್ದಾನೆ. ನಗರದ ಬಜಾಲ್, ಫೈಜಲ್ ನಗರ ನಿವಾಸಿ ತೌಸೀಫ್(27) ಬಂಧಿತ ಆರೋಪಿ ಎಂಬುದಾಗಿ ತಿಳಿದು ಬಂದಿದೆ. ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2016ರಲ್ಲಿ ನಡೆದ ಗಲಾಟೆ, ದೊಂಬಿ ಹಾಗೂ ಮಾರಣಾಂತಿಕ ಹಲ್ಲೆ ಪ್ರಕರಣದಲ್ಲಿ ಈತ ಭಾಗಿಯಾಗಿದ್ದನು. ಜಾಮೀನು ಪಡೆದ ಬಳಿಕ ನ್ಯಾಯಾಲಯಕ್ಕೆ ಹಾಜರಾಗದೇ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ. ಈತ ಕಳೆದ 4 ವರ್ಷಗಳಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ, …
Read More »