Breaking News

‘ಬರ’ ಸಿಡಿಲು: ಬೆಳೆ ಸಂರಕ್ಷಣೆಗೆ ಟ್ಯಾಂಕರ್‌ ನೀರಿನ ಮೊರೆ ಹೋದ ರೈತರು

ಕೊಪ್ಪಳ: ಕೊಪ್ಪಳ ಜಿಲ್ಲೆಯಾದ್ಯಂತ ಸಕಾಲಕ್ಕೆ ಮಳೆಯಾಗದೇ ಬರ ತಾಂಡವವಾಡುತ್ತಿದೆ. ರೈತರು ಸಂಕಷ್ಟದಲ್ಲಿದ್ದಾರೆ. ಅಲ್ಪಸ್ವಲ್ಪ ತೇವಾಂಶದಿಂದ ಜೀವ ಹಿಡಿದುಕೊಂಡಿದ್ದ ಬೆಳೆಗಳು ಒಣಗುತ್ತಿವೆ. ಅಳಿದುಳಿದಿರುವ ಈ ಬೆಳೆ ಉಳಿಸಿಕೊಳ್ಳಲು ರೈತರು ಹರಸಾಹಸ ಮಾಡುತ್ತಿದ್ದಾರೆ. ಟ್ಯಾಂಕರ್ ಮೂಲಕ ನೀರು: ಜಿಲ್ಲೆಯ ಕುಕನೂರು ತಾಲೂಕಿನ ಬಿನ್ನಾಳ, ಯರೇಹಂಚಿನಾಳ, ಸೊಂಪುರ ಸೇರಿದಂತೆ ವಿವಿಧ ಗ್ರಾಮದಲ್ಲಿ ರೈತರು ಬೆಳೆ ಸಂರಕ್ಷಿಸಲು ಟ್ಯಾಂಕರ್‌ ನೀರಿನ ಮೊರೆ ಹೋಗುತ್ತಿದ್ದಾರೆ. ಟ್ಯಾಂಕರ್ ಮೂಲಕ ನೀರುಣಿಸುವುದು ಸರಳ ಕೆಲಸವಲ್ಲ. ಹೀಗಿದ್ದರೂ ಇರುವ ಒಂದಿಷ್ಟು ಬೆಳೆಯನ್ನಾದರೂ ಉಳಿಸಿಕೊಳ್ಳೋಣ ಎಂದು …

Read More »

ಬೆಳಗಾವಿ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ ದರೋಡೆಕೋರರು ಚಿನ್ನದಂಗಡಿಗೆ ನುಗ್ಗಿ ಕಳ್ಳತನ ಮಾಡಲೆತ್ನ

ಬೆಳಗಾವಿ: ಇಬ್ಬರುಮುಸುಕುಧಾರಿಗಳು ಪಿಸ್ತೂಲ್​ ತೋರಿಸಿ ಬಂಗಾರದ ಅಂಗಡಿಯಲ್ಲಿ ಕಳ್ಳತ‌ನಕ್ಕೆ ಯತ್ನಿಸಿದ ಘಟನೆ ಬೆಳಗಾವಿಯ ಶಾಹುನಗರದಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ. ಪ್ರಶಾಂತ ಹೊನರಾವ್ ಎಂಬವರಿಗೆ ಸೇರಿದ ಸಂತೋಷಿ ಜ್ಯುವೆಲ್ಲರಿಯಲ್ಲಿ ಘಟನೆ ನಡೆದಿದೆ. ಎಂದಿನಂತೆ ಬಾಗಿಲು ತೆರೆದು ಪ್ರಶಾಂತ ಅಂಗಡಿಯಲ್ಲಿ ಕುಳಿತಿದ್ದರು. ಈ ಸಂದರ್ಭದಲ್ಲಿ ಇಬ್ಬರು ಅಂಗಡಿಗೆ ನುಗ್ಗಿದ್ದಾರೆ. ಒಬ್ಬ ಪಿಸ್ತೂಲಿನಿಂದ ಹೆದರಿಸಿ, ಚಿನ್ನಾಭರಣ ನೀಡುವಂತೆ ಒತ್ತಾಯಿಸಿದ್ದಾನೆ. ಪ್ರಶಾಂತ ಪ್ರತಿರೋಧ ತೋರುತ್ತಿದ್ದಂತೆ ದರೋಡೆಕೋರರು ಹಲ್ಲೆಗೆ ಮುಂದಾಗಿದ್ದಾರೆ. ಇದಕ್ಕೆ ಪ್ರಶಾಂತ ತೀವ್ರ ಪ್ರತಿರೋಧ ಒಡ್ಡಿದ್ದು ಕಳ್ಳರು …

Read More »

ದಸರಾ ಹಬ್ಬ: ವಾಯವ್ಯ ಸಾರಿಗೆಯಿಂದ 500ಕ್ಕೂ ಹೆಚ್ಚು ವಿಶೇಷ ಬಸ್‌ಗಳ ವ್ಯವಸ್ಥೆ

ಹುಬ್ಬಳ್ಳಿ: ದಸರಾ ಹಬ್ಬಕ್ಕೆ ರಾಜ್ಯ ಹಾಗೂ ಹೊರ ರಾಜ್ಯಗಳ ವಿವಿಧ ಸ್ಥಳಗಳಿಂದ ಆಗಮಿಸುವ ಹಾಗೂ ಹಬ್ಬ ಮುಗಿಸಿಕೊಂಡು ಹಿಂದಿರುಗುವ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ 500ಕ್ಕೂ ಹೆಚ್ಚು ವಿಶೇಷ ಬಸ್​ಗಳ ವ್ಯವಸ್ಥೆ ಮಾಡಲಾಗಿದೆ. ಅಕ್ಟೋಬರ್ 21ರಂದು ವಾರಾಂತ್ಯ ಶನಿವಾರ, 22 ರಂದು ಭಾನುವಾರ, 23 ರಂದು ಸೋಮವಾರ ಮಹಾನವಮಿ, ಆಯುಧಪೂಜೆ ಹಾಗೂ 24ರಂದು ಮಂಗಳವಾರ ವಿಜಯದಶಮಿ ಇದೆ. ಹಬ್ಬ ಆಚರಿಸಲು ಅ.20ರಂದು ಶುಕ್ರವಾರ ಮತ್ತು 21 …

Read More »

ತನ್ನ ನಾಲಿಗೆಯಿಂದ ಚಿತ್ರ ಅರಳಿಸುತ್ತಾನೆ ಕಲಾವಿದ

ಹಾವೇರಿ: ಸಾಮಾನ್ಯವಾಗಿ ಚಿತ್ರಕಲಾವಿದರು ಬೆರಳುಗಳ ಸಹಾಯದಿಂದ ಕುಂಚದಲ್ಲಿ ಚಿತ್ರಗಳನ್ನ ಬಿಡಿಸುವುದನ್ನು ನೋಡಿದ್ದೇವೆ. ಕೆಲವರು ಬೆರಳುಗಳಲ್ಲಿ ಕುಂಚ ಕಟ್ಟಿಕೊಂಡು ಚಿತ್ರಬಿಡಿಸುವುದು ಉಂಟು. ಇನ್ನೂ ಕೆಲವರು ತಮ್ಮ ಮೂಗಿನ ಸಹಾಯದಿಂದ ಸಹ ಚಿತ್ರ ಬಿಡಿಸುತ್ತಾರೆ. ಆದರೆ ಹಾವೇರಿ ತಾಲೂಕಿನ ಹೊಸರಿತ್ತಿಯಲ್ಲಿ ವಿಭಿನ್ನ ಯುವ ಕಲಾವಿದನಿದ್ದಾನೆ.. ಚೆನ್ನಬಸಪ್ಪ ತೊಪ್ಪಲದ ಹೆಸರಿನ ಈ ಕಲಾವಿದ ಎಲ್ಲರಂತೆ ಕುಂಚದಿಂದ ಚಿತ್ರ ಬಿಡಿಸುವುದಿಲ್ಲ. ಬದಲಿಗೆ ತನ್ನ ನಾಲಿಗೆಯನ್ನೇ ಕುಂಚವನ್ನಾಗಿ ಮಾಡಿಕೊಂಡು ಚಿತ್ರ ಬಿಡಿಸುತ್ತಾನೆ. 18 ವರ್ಷದ ಈ ಯುವಕ ಹೆಚ್ಚು …

Read More »

ಸರ್ಕಾರಿ ಬಸ್ -ಟಾಟಾ ಸುಮೋ ನಡುವೆ ಡಿಕ್ಕಿ: ಐದು ಜನ ಸ್ಥಳದಲ್ಲೇ ಸಾವು

ಗದಗ: ಸಾರಿಗೆ ಸಂಸ್ಥೆಯ ಬಸ್ ಹಾಗೂ ಟಾಟಾ ಸುಮೋ ನಡುವೆ ಡಿಕ್ಕಿಯಾಗಿ ಐದು ಜನ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೂ ನಾಲ್ವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಗದಗ ಜಿಲ್ಲೆಯ ನರೇಗಲ್ ಪಟ್ಟಣದ ಹೊರವಲಯದಲ್ಲಿ ಸಂಭವಿಸಿದೆ.   ಗಂಭೀರ ಗಾಯಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಮೂಲಗಳ ಪ್ರಕಾರ, ಕಲಬುರಗಿಯಿಂದ ಗಜೇಂದ್ರಗಡ ಮಾರ್ಗವಾಗಿ ಶಿರಹಟ್ಟಿ ಫಕ್ಕಿರೇಶ್ವರ ಮಠಕ್ಕೆ ಟಾಟಾ ಸುಮೋ ಹೊರಟಿತ್ತು. ಗದಗದಿಂದ ಗಜೇಂದ್ರಗಡಕ್ಕೆ ಬಸ್ ಹೊರಟಿತ್ತು. ಮುಖಾಮುಖಿ ಡಿಕ್ಕಿ ಪರಿಣಾಮ ಬಸ್​ನಲ್ಲಿದ್ದ ಕೆಲವರಿಗೆ ಸಣ್ಣಪುಟ್ಟ …

Read More »

ಸೂಳೆಕೆರೆಗೆ ಜಿಗಿದು ತಾಯಿ ಮಗಳು ಆತ್ಮಹತ್ಯೆ: ಕಾರಣ ಮಾತ್ರ ನಿಗೂಢ!

ದಾವಣಗೆರೆ: ಐದು ವರ್ಷದ ಮಗಳೊಂದಿಗೆ ತಾಯಿಯೊಬ್ಬಳು ಸೂಳೆಕೆರೆಗೆ (ಶಾಂತಿಸಾಗರ) ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ‌ಕೆರೆಬಿಳಚಿ ಬಳಿ ಇರುವ ಐತಿಹಾಸಿಕ ಪ್ರವಾಸಿ ತಾಣ ಸೂಳೆಕೆರೆಯಲ್ಲಿ ನಡೆದಿದೆ. ಕವಿತಾ (27) ಹಾಗೂ ನಿಹಾರಿಕಾ (5) ಆತ್ಮಹತ್ಯೆ ಮಾಡಿಕೊಂಡ ತಾಯಿ ಹಾಗೂ ಮಗಳು. ಮೃತ ಕವಿತಾ ಚನ್ನಗಿರಿ ತಾಲೂಕಿನ ಹೊನ್ನೆಬಾಗಿ ಗ್ರಾಮದ ನಿವಾಸಿ ಮಂಜುನಾಥ ಎಂಬುವರ ಪತ್ನಿ ಎಂದು ತಿಳಿದು ಬಂದಿದೆ. ಕಳೆದ ಶುಕ್ರವಾರ ಮೃತ ಮಗಳು ನಿಹಾರಿಕಾಳೊಂದಿಗೆ …

Read More »

ಚುನಾವಣಾ ಬಾಂಡ್​ಗಳ ವಿಚಾರ.. ಸುಪ್ರೀಂ ಪಂಚ ಪೀಠದಿಂದ ನಡೆಯಲಿದೆ ವಿಚಾರಣೆ

ನವದೆಹಲಿ: ಚುನಾವಣಾ ಬಾಂಡ್‌ಗಳ ಯೋಜನೆಗೆ ಸಂಬಂಧಿಸಿದಂತೆ ಸಲ್ಲಿಕೆ ಆಗಿರುವ ಎಲ್ಲ ಅರ್ಜಿಗಳನ್ನು ಸುಪ್ರೀಂಕೋರ್ಟ್​​ನ ಪಂಚ ಪೀಠ ವಿಚಾರಣೆ ನಡೆಸಲಿದೆ ಎಂದು ಸುಪ್ರೀಂಕೋರ್ಟ್​ ಸೋಮವಾರ ಹೇಳಿದೆ. ಸುಪ್ರೀಂಕೋರ್ಟ್​ನ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಪೀಠವು ಈ ವಿಷಯವನ್ನು ಕನಿಷ್ಠ ಐವರು ನ್ಯಾಯಮೂರ್ತಿಗಳನ್ನು ಒಳಗೊಂಡ ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸುವ ನಿರ್ಧಾರವನ್ನು ಇಂದು ಪ್ರಕಟಿಸಿದೆ. ಚೀಫ್​ ಜಸ್ಟಿಸ್​​ ಪ್ರಸ್ತಾಪಿಸಿದ ವಿಷಯದ ಪ್ರಾಮುಖ್ಯತೆಯನ್ನು ಗಮನದಲ್ಲಿಟ್ಟುಕೊಂಡು, ಸಂವಿಧಾನದ 145 (4) ನೇ ವಿಧಿಗೆ ಸಂಬಂಧಿಸಿದಂತೆ ಈ …

Read More »

ಪೋಕ್ಸೋ ಪ್ರಕರಣದಲ್ಲಿ ಆರೋಪಿಗೆ ಜಾಮೀನು ನೀಡುವ ಮುನ್ನ ಸಂತ್ರಸ್ತೆಯ ಕಡೆಯವರಿಗೆ ತಿಳಿಸಬೇಕು: ಹೈಕೋರ್ಟ್

ಬೆಂಗಳೂರು: ಪೋಕ್ಸೋ ಕಾಯ್ದೆಯಡಿ ದಾಖಲಾದ ಅಪ್ರಾಪ್ತರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳ ಸಂಬಂಧ ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ಸಮಯದಲ್ಲಿ ಸಂತ್ರಸ್ತರು ಬದುಕುಳಿದಿದ್ದರೆ ಅವರಿಗೆ ಅಥವಾ ದೂರುದಾರರಿಗೆ ವಿಚಾರಣೆಯ ಮಾಹಿತಿ ನೀಡುವುದು ಕಡ್ಡಾಯ ಎಂದು ಹೈಕೋರ್ಟ್‌ ಸ್ಪಷ್ಟಪಡಿಸಿದೆ. ಪೋಕ್ಸೋ ಪ್ರಕರಣವೊಂದರಲ್ಲಿ ಆರೋಪಿಗೆ ಅಧೀನ ನ್ಯಾಯಾಲಯ ನೀಡಿದ್ದ ಜಾಮೀನು ರದ್ದುಪಡಿಸಿದ ನ್ಯಾಯಮೂರ್ತಿ ಎಸ್‌.ವಿಶ್ವಜಿತ್‌ ಶೆಟ್ಟಿ ಅವರ ಪೀಠ ಈ ಆದೇಶ ನೀಡಿದೆ. ಅಲ್ಲದೇ, ಪೋಕ್ಸೋ ಪ್ರಕರಣಗಳಲ್ಲಿನ ಆರೋಪಿಯ ಜಾಮೀನು ಅರ್ಜಿ ವಿಚಾರಣೆ ವೇಳೆ …

Read More »

ಉದ್ಯೋಗಕ್ಕಾಗಿ ಲಂಚ ಪ್ರಕರಣದಲ್ಲಿ ಭಾಗಿಯಾದ 16 ನೌಕರರನ್ನು ವಜಾಗೊಳಿಸಿದ T.C.S.

ಬೆಂಗಳೂರು : ಕೆಲಸಕ್ಕಾಗಿ ಲಂಚ ಪಡೆದ ಆರೋಪಗಳ ಬಗ್ಗೆ ತನಿಖೆ ನಡೆಸಿದ ನಂತರ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (ಟಿಸಿಎಸ್) 16 ಉದ್ಯೋಗಿಗಳನ್ನು ವಜಾಗೊಳಿಸಿದೆ ಮತ್ತು ಆರು ಸಿಬ್ಬಂದಿ ನೇಮಕಾತಿ ಸಂಸ್ಥೆಗಳನ್ನು ಕಪ್ಪುಪಟ್ಟಿಗೆ ಸೇರಿಸಿದೆ. ಈ ಬಗ್ಗೆ ಎಕ್ಸ್​ಚೇಂಜ್ ಫೈಲಿಂಗ್​ನಲ್ಲಿ ಮಾಹಿತಿ ನೀಡಿರುವ ಕಂಪನಿ, “ತನಿಖೆಯಲ್ಲಿ 19 ಉದ್ಯೋಗಿಗಳು ಲಂಚ ಪ್ರಕರಣದಲ್ಲಿ ಭಾಗಿಯಾಗಿರುವುದು ಕಂಡು ಬಂದಿದೆ ಮತ್ತು ಇಲ್ಲಿ ವಿವರಿಸಿದಂತೆ ಎಲ್ಲರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗಿದೆ. ಕಂಪನಿಯ ನಿಯಮಾವಳಿಗಳ ಉಲ್ಲಂಘನೆಗಾಗಿ 16 ಉದ್ಯೋಗಿಗಳನ್ನು …

Read More »

ಕೋಟಿ ಕೋಟಿ ಹಣ ಪತ್ತೆ ಕೇಸ್ ಇಡಿಗೆ ವಹಿಸಿ: ಯಡಿಯೂರಪ್ಪ ಆಗ್ರಹ

ಬೆಂಗಳೂರು: ಗುತ್ತಿಗೆದಾರರ ನಿವಾಸದಲ್ಲಿ ಪತ್ತೆಯಾದ ಕೋಟಿ ಕೋಟಿ ನಗದು ಹಣ ಪ್ರಕರಣವನ್ನು ಇಡಿ ಮತ್ತು ಸಿಬಿಐ ತನಿಖೆಗೆ ವಹಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಆಗ್ರಹಿಸಿದ್ದಾರೆ. ಡಾಲರ್ಸ್ ಕಾಲೊನಿಯಲ್ಲಿರುವ ಖಾಸಗಿ ನಿವಾಸ ದವಳಗಿರಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಐಟಿ ದಾಳಿಯಲ್ಲಿ ಹಣ ಸಿಕ್ಕಿದ್ದ ಪ್ರಕರಣದಲ್ಲಿ ತನಿಖೆ ಬಳಿಕ ಹಣದ ಮೂಲ ಗೊತ್ತಾಗಲಿದೆ. ಚುನಾವಣೆಗೆ ಹಣ ಸಂಗ್ರಹ ಮಾಡಿರೋದು ನಿಜ ಅಂತ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ …

Read More »