ಅಮೃತಸರ (ಪಂಜಾಬ್): ಕೇಂದ್ರ ಗುಪ್ತಚರ ಸಂಸ್ಥೆಗಳ ನೆರವಿನಿಂದ ಪಂಜಾಬ್ನ ಎಸ್ಎಸ್ಒಸಿ ತಂಡವು ಲಷ್ಕರ್-ಎ-ತೊಯ್ಬಾ ಸಂಘಟನೆಯ ಇಬ್ಬರು ಭಯೋತ್ಪಾದಕರನ್ನು ಅಮೃತಸರದಲ್ಲಿ ಬಂಧಿಸಿದೆ. ಬಂಧಿತ ಭಯೋತ್ಪಾದಕರಿಂದ 2 ಐಇಡಿಗಳು, 2 ಹ್ಯಾಂಡ್ ಗ್ರೆನೇಡ್‌ಗಳು, 1 ಪಿಸ್ತೂಲ್, 2 ಮ್ಯಾಗಜೀನ್‌ಗಳು, 24 ಕಾರ್ಟ್ರಿಡ್ಜ್‌ಗಳು, 1 ಟೈಮರ್ ಸ್ವಿಚ್, 8 ಡಿಟೋನೇಟರ್‌ಗಳು ಮತ್ತು 4 ಬ್ಯಾಟರಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಕುರಿತಂತೆ ಪಂಜಾಬ್ ಡಿಜಿಪಿ ಗೌರವ್ ಯಾದವ್ ಸಾಮಾಜಿಕ ಜಾಲತಾಣವಾದ ‘ಎಕ್ಸ್’ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಪಂಜಾಬ್ …
Read More »ಬಿಗ್ ಬಾಸ್ ಸೀಸನ್ 10ರಲ್ಲಿ ಉರಗ ತಜ್ಞ ಸ್ನೇಕ್ ಶ್ಯಾಮ್ ಹಾವುಗಳ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ.
ಅಭಿನಯ ಚಕ್ರವರ್ತಿ ಸುದೀಪ್ ನಡೆಸಿಕೊಡುವ ಜನಪ್ರಿಯ ಬಿಗ್ ಬಾಸ್ ಸೀಸನ್ 10 ನಾನಾ ವಿಷಯಗಳಿಂದ ಸದ್ದು ಮಾಡುತ್ತಿದೆ. ಸಾವಿರಾರು ಹಾವುಗಳನ್ನು ರಕ್ಷಿಸಿ ಸುರಕ್ಷಿತ ಜಾಗಕ್ಕೆ ರವಾನಿಸಿರುವ ಸ್ನೇಕ್ ಶ್ಯಾಮ್ ಈ ಬಾರಿ ಬಿಗ್ ಬಾಸ್ ಮನೆಯಲ್ಲಿ ‘ಅಸಮರ್ಥ’ರ ಗುಂಪಿನಲ್ಲಿರುವ ಸ್ಪರ್ಧಿ. ಆದ್ರೆ ಪ್ರಾಣಿಪ್ರಪಂಚದ, ಅದರಲ್ಲಿಯೂ ಹಾವುಗಳ ಕುರಿತಾದ ಜ್ಞಾನದಲ್ಲಿ ಅವರೆಂಥ ಸಮರ್ಥರು ಎಂಬುದನ್ನು ತಿಳಿದುಕೊಳ್ಳಬೇಕಾದರೆ ‘JioCinema’ದಲ್ಲಿ ಲಭ್ಯವಿರುವ ಬಿಗ್ ಬಾಸ್ ಕನ್ನಡದ ‘Live Shorts’ ಸೆಗ್ಮೆಂಟ್‌ನಲ್ಲಿರುವ ಈ ವಿಡಿಯೋ …
Read More »40 ವರ್ಷಗಳ ನಂತರ ಭಾರತ – ಶ್ರೀಲಂಕಾ ನಡುವೆ ಪ್ರಯಾಣಿಕರ ಹೈಸ್ಪೀಡ್ ದೋಣಿ ಶುರು
ಚೆನ್ನೈ (ತಮಿಳುನಾಡು): ತಮಿಳುನಾಡಿನ ನಾಗಪಟ್ಟಣಂ ಹಾಗೂ ಶ್ರೀಲಂಕಾದ ಕಂಕಸಂತುರೈ ನಡುವಿನ ಪ್ರಯಾಣಿಕರ ಹೈಸ್ಪೀಡ್ ದೋಣಿ ಸೇವೆ 40 ವರ್ಷಗಳ ನಂತರ ಪುನರಾರಂಭಗೊಂಡಿದೆ. ಕೇಂದ್ರ ಬಂದರು, ಹಡಗು ಮತ್ತು ಜಲಮಾರ್ಗಗಳ ಸಚಿವ ಸರ್ಬಾನಂದ ಸೋನೊವಾಲ್, ತಮಿಳುನಾಡು ಲೋಕೋಪಯೋಗಿ ಮತ್ತು ಬಂದರು ಸಚಿವ ಇ.ವಿ. ವೇಲು ಶನಿವಾರ ನಾಗಪಟ್ಟಣಂ ಬಂದರಿನಿಂದ ದೋಣಿ ಸೇವೆಗೆ ಚಾಲನೆ ನೀಡಿದರು. ತಮಿಳುನಾಡು ಮತ್ತು ಶ್ರೀಲಂಕಾದ ಉತ್ತರ ಪ್ರಾಂತ್ಯದ ನಡುವಿನ ಸಾಂಸ್ಕೃತಿಕ ಬಾಂಧವ್ಯವನ್ನು ಈ ದೋಣಿ ಸೇವೆಯ ಕಾರ್ಯಾಚರಣೆ ಹೆಚ್ಚಿಸುತ್ತದೆ. …
Read More »ವಿದ್ಯುತ್ ತಂತಿ ಸ್ಪರ್ಶಿಸಿ ಬೆಳಗಾವಿಯ ಭಾಗ್ಯನಗರದ 10ನೇ ಕ್ರಾಸ್ನಲ್ಲಿ ಬಾಲಕ ಸಾವು
ಬೆಳಗಾವಿ: ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕನೋರ್ವ ಸಾವನ್ನಪ್ಪಿರುವ ದಾರುಣ ಘಟನೆ ಬೆಳಗಾವಿಯ ಭಾಗ್ಯನಗರದ 10ನೇ ಕ್ರಾಸ್ನಲ್ಲಿ ಇಂದು ಬೆಳಗ್ಗೆ ನಡೆದಿದೆ. ಉತ್ತರ ಪ್ರದೇಶ ಮೂಲದ ಕುಟುಂಬದ 14 ವರ್ಷದ ರಜತ್ ಗೌರವ ಮೃತ ಬಾಲಕ. ಕಾರು ತೊಳೆಯುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ಈ ಅವಘಡ ಸಂಭವಿಸಿದೆ. 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ರಜತ್ ಶಾಲೆಗೆ ರಜೆ ಇದ್ದ ಕಾರಣ, ಬೆಳಗ್ಗೆ ಮನೆ ಮನೆಗೆ ದಿನಪತ್ರಿಕೆ ಹಾಕುವ ಕೆಲಸ ಮಾಡುತ್ತಿದ್ದ. ಇಂದು …
Read More »ಅರಣ್ಯ ಇಲಾಖೆಯಿಂದ ವೀಕ್ಷಕರ ಹುದ್ದೆಗೆ ನೇಮಕಾತಿ; ಅಕ್ಟೋಬರ್ 26 ಅರ್ಜಿ ಸಲ್ಲಿಕೆಗೆ ಕಡೆಯ ದಿನ
ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 13 ವೃತ್ತಗಳ ಹಂತದಲ್ಲಿ ಒಟ್ಟು 310 ಹುದ್ದೆಗಳ ಭರ್ತಿಗೆ ಅರ್ಜಿಗೆ ಆಹ್ವಾನಿಸಲಾಗಿದೆ. ರಾಜ್ಯ ಅರಣ್ಯ ಇಲಾಖೆಯಲ್ಲಿ ವಿವಿಧ ವೃತ್ತಗಳಲ್ಲಿ ಹಂತದಲ್ಲಿ ಖಾಲಿ ಇರುವ ಅರಣ್ಯ ವೀಕ್ಷಕ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಒಟ್ಟು 310 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 13 ವೃತ್ತಗಳ ಹಂತದಲ್ಲಿ ಈ ಹುದ್ದೆಗೆ ನೇಮಕಾತಿ ನಡೆಯಲಿದೆ. ಎಸ್ಎಸ್ಎಲ್ಸಿ ಓದಿರುವ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆ ಕುರಿತು ನೇಮಕಾತಿ, …
Read More »ಬಳ್ಳಾರಿ: ಕಾಲೇಜಿನಿಂದ ವಿದ್ಯಾರ್ಥಿನಿ ಅಪಹರಿಸಿ ಗ್ಯಾಂಗ್ ರೇಪ್
ಬಳ್ಳಾರಿ: ಕಾಲೇಜು ವಿದ್ಯಾರ್ಥಿನಿಯೊಬ್ಬಳನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿರುವ ಆತಂಕಕಾರಿ ಘಟನೆ ಬಳ್ಳಾರಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಈ ಸಂಬಂಧ ಬಳ್ಳಾರಿ ಮಹಿಳಾ ಠಾಣೆಯಲ್ಲಿ ನಾಲ್ವರ ವಿರುದ್ಧ ಸಂತ್ರಸ್ತ ಯುವತಿಯ ತಂದೆ ದೂರು ದಾಖಲಿಸಿದ್ದಾರೆ. ಬಳ್ಳಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪ್ರಮುಖ ಆರೋಪಿ ನವೀನ್ ಎಂಬಾತನನ್ನು ಬಂಧಿಸಿ, ಉಳಿದವರಿಗಾಗಿ ಬಲೆ ಬೀಸಿದ್ದಾರೆ. ಸಂತ್ರಸ್ತ ಯುವತಿ ಬಳ್ಳಾರಿ ಕಾಲೇಜೊಂದರಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದಾರೆ. ಅಕ್ಟೋಬರ್ 11 ರಂದು ಕಾಲೇಜಿನಲ್ಲಿ ಪರೀಕ್ಷೆ ಬರೆಯುತ್ತಿದ್ದ ವೇಳೆ …
Read More »ಭಾರತದ ಬೌಲಿಂಗ್ ದಾಳಿಗೆ ನಲುಗಿದ ಪಾಕ್.. 191ಕ್ಕೆ ಸರ್ವಪತನ
ವಿಶ್ವಕಪ್ನ 12ನೇ ಲೀಗ್ ಪಂದ್ಯದಲ್ಲಿ ಭಾರತ – ಪಾಕಿಸ್ತಾನ ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಮುಖಾಮುಖಿ ಆಗಿದ್ದು, ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಅಹಮದಾಬಾದ್ (ಗುಜರಾತ್): ಭಾರತ ವಿಶ್ವಕಪ್ಗೂ ಮುನ್ನ ಏಷ್ಯಾಕಪ್ ಫೈನಲ್ನಲ್ಲಿ ತಾನು ಬೌಲಿಂಗ್ನಲ್ಲಿ ಸಮರ್ಥ ತಂಡ ಎಂದು ವಿಶ್ವಕ್ಕೆ ಸಂದೇಶ ನೀಡಿತ್ತು. ಅದರಂತೆ ವಿಶ್ವಕಪ್ನ ಎರಡು ಪಂದ್ಯದಲ್ಲಿ ನಿಯಂತ್ರಿತ ಬೌಲಿಂಗ್ ಪ್ರದರ್ಶನ ನೀಡಿತ್ತು. ಪಾಕಿಸ್ತಾನದ ವಿರುದ್ಧದ ಮೂರನೇ ಪಂದ್ಯದಲ್ಲಿ ಅದೇ ಲಯದ ಬೌಲಿಂಗ್ನ್ನು ಮುಂದುವರೆಸಿದೆ. ಸಿರಾಜ್ …
Read More »ʼನಟಿ ಲೀಲಾವತಿ ಕಟ್ಟಿಸಿರೋ ಆಸ್ಪತ್ರೆಗೆ ಸರ್ಕಾರದಿಂದ ಸಲ್ಲಬೇಕಾದ ಸೂಕ್ತ ನೆರವು ಕೊಡಿಸ್ತೇವೆʼ
ಬೆಂಗಳೂರು: ಹಿರಿಯ ನಟಿ ಲೀಲಾವತಿ ಆಸ್ಪತ್ರೆ ಉದ್ಘಾಟನೆಗೆ ಬನ್ನಿ ಎಂದು ಕರೆದಿದ್ದಾರೆ, ಡೇಟ್ ಕೇಳಿದ್ದಾರೆ, ನಾನೇ ಡೇಟ್ ಕೊಡ್ತೇನೆ ಆಸ್ಪತ್ರೆಗೆ ಸಹಾಯ ಕೂಡ ಮಾಡ್ತೇನೆ ಎಂದು ಡಿಸಿಎಂ ಡಿಕೆಶಿವಕುಮಾರ್ ಹೇಳಿದ್ದಾರೆ. ಹಿರಿಯ ನಟಿ ಲೀಲಾವತಿ ಭೇಟಿ ನಂತರ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಅವರು, ಹಿರಿಯ ನಟಿ ಅವರಿಗೆ ಸೈಟ್ ಕೊಡ್ತೇವೆ, ಆಸ್ಪತ್ರೆ ಸಿಬ್ಬಂದಿ ಸರ್ಕಾರದಿಂದ ಕೇಳಿದ್ದಾರೆ. ಸೈಟ್ಕೂಡ ಹೋಲ್ಡ್ ಆಗಿದೆ, ಏನು ಅಂತ ನೋಡ್ತೇನೆ. ಸರ್ಕಾರದಿಂದ ಅವರಿಗೆ ಸಲ್ಲಬೇಕಾದ ಸೂಕ್ತ ನೆರವನ್ನು ಕೊಡಿಸುತ್ತೇವೆ …
Read More »ಹೆಚ್‌ಡಿಕೆ ಆಲ್‌ಮೋಸ್ಟ್ ವಿಪಕ್ಷ ನಾಯಕ ಆಗಿದ್ದಾರೆ: ಪ್ರಿಯಾಂಕ್ ಖರ್ಗೆ ವ್ಯಂಗ್ಯ
ಬೆಂಗಳೂರು: ಹೆಚ್‌ಡಿಕೆ ಆಲ್‌ಮೋಸ್ಟ್ ವಿಪಕ್ಷ ನಾಯಕ ಆಗಿದ್ದಾರೆ, ಅದಕ್ಕೆ ಮಾತಾಡ್ತಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ವ್ಯಂಗ್ಯವಾಡಿದ್ದಾರೆ. ಐಟಿ ದಾಳಿ ಸಂಬಂಧ ಹೆಚ್‌ಡಿಕೆ ಆರೋಪ ಮಾಡಿರುವ ಕುರಿತು ನಗರದಲ್ಲಿ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ದಾಖಲೆಗಳಿದ್ದರೆ, ಪೆನ್‌ಡ್ರೈವ್, ಡೈರಿ ಎಲ್ಲಾ ಅಮಿತ್ ಶಾಗೆ ಕೊಡಿ ಎಂದು ಸಾಲು ಹಾಕಿದ್ದಾರೆ. ವಿಪಕ್ಷದಲ್ಲಿರೋರನ್ನು ಟಾರ್ಗೆಟ್ ಮಾಡುವ ಪ್ರವೃತ್ತಿ ಬೆಳೆಸಿಕೊಂಡಿದ್ದಾರೆ. ಗುಜರಾತ್ ಸೇರಿ ಎಲ್ಲಾ ಕಡೆ ವಿಪಕ್ಷಗಳ ಮೇಲೆ ರೇಡ್ ಮಾಡ್ತಿದ್ದಾರೆ. ಎಷ್ಟು ಜನಬಿಜೆಪಿಯವರ …
Read More »ಕಾಂಟ್ರಾಕ್ಟರ್ ಅಸೋಸಿಯೇಷನ್ ಸರ್ಕಾರಕ್ಕೆ ಕಮಿಷನ್ ಸಂಗ್ರಹಿಸುತ್ತಿದೆ: ಬೊಮ್ಮಾಯಿ
ಬೆಂಗಳೂರು: ರಾಜ್ಯ ಸರ್ಕಾರ ಮತ್ತು ಗುತ್ತಿಗೆದಾರರು ಜೊತೆಯಾಗಿ ಲೂಟಿ ಮಾಡುತ್ತಿದ್ದು, ಕಾಂಟ್ರಾಕ್ಟರ್ ಅಸೋಸಿಯೇಷನ್ ಸರ್ಕಾರದ ಕಮಿಷನ್ ಕಲೆಕ್ಷನ್ ಸೆಂಟರ್ ಆಗಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಿಡಿ ಕಾರಿದ್ದಾರೆ. ಅಕ್ರಮ ಹಣ ಪತ್ತೆಯಾಗಿರುವ ಕುರಿತು ಇಡಿ ಹಾಗೂ ಸಿಬಿಐ ಎರಡೂ ತನಿಖೆಯಾಗಲಿ ಎಂದು ಆಗ್ರಹಿಸಿದ ಅವರು, ರಾಜ್ಯ ಸರ್ಕಾರ ಬಂದಾಗಿನಿಂದ ವರ್ಗಾವಣೆಯಿಂದ ಹಿಡಿದು ಎಲ್ಲದರಲ್ಲೂ ಭ್ರಷ್ಟಾಚಾರ ಇದೆ. ಬಹಿರಂಗವಾಗಿಯೇ ಕಮಿಷನ್ ದಂಧೆ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ. ಗುತ್ತಿಗೆದಾರರ …
Read More »