Breaking News

ಭಾರತ – ಪಾಕಿಸ್ತಾ‌ನ ಪಂದ್ಯ: ಭಾರತದ ಗೆಲುವಿಗೆ ಕ್ರಿಕೆಟ್​ ಅಭಿಮಾನಿಗಳಿಂದ ವಿಶೇಷ ಪೂಜೆ

ಬೆಳಗಾವಿ : ಭಾರತ ಮತ್ತು ಪಾಕಿಸ್ತಾನ ನಡುವಣ ವಿಶ್ವಕಪ್​ ಪಂದ್ಯದಲ್ಲಿ ಭಾರತ ತಂಡವು ದಿಗ್ವಿಜಯ ಸಾಧಿಸಲಿ ಎಂದು ಬೆಳಗಾವಿಯಲ್ಲಿ ಕ್ರಿಕೆಟ್ ಅಭಿಮಾನಿಗಳು ಗಣೇಶನಿಗೆ ವಿಶೇಷ ಪೂಜೆ ಸಲ್ಲಿಸಿದರು. ನಗರದ ರಾಣಿ ಚನ್ನಮ್ಮ ವೃತ್ತದ ಬಳಿ ಇರುವ ಗಣಪತಿ ಮಂದಿರದಲ್ಲಿ ಕ್ರಿಕೆಟ್​ ಪ್ರೇಮಿಗಳು ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು. ಕಳೆದ 31 ವರ್ಷಗಳಲ್ಲಿ ನಡೆದ ವಿಶ್ವಕಪ್ ಟೂರ್ನಿಗಳಲ್ಲಿ ಭಾರತ- ಪಾಕಿಸ್ತಾನ ಏಳು ಬಾರಿ ಮುಖಾಮುಖಿಯಾಗಿದೆ. ಏಳು ಪಂದ್ಯಗಳಲ್ಲೂ ಭಾರತವೇ ಗೆಲುವು ಸಾಧಿಸಿದೆ. ಹಾಗಾಗಿ, …

Read More »

ಘಟಪ್ರಭಾದಲ್ಲಿ ಅಮಾನವೀಯ ಘಟನೆ: ಮಹಿಳೆಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ

ಬೆಳಗಾವಿ: ಬಡಾವಣೆಯ ಕೆಲವರ ಗುಂಪೊಂದು ಓರ್ವ ಮಹಿಳೆಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ನಡೆಸಿದ ಅಮಾನವೀಯ ಘಟನೆ ಗೋಕಾಕ ತಾಲೂಕಿನ ಘಟಪ್ರಭಾ ಪಟ್ಟಣದಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಘಟಪ್ರಭಾದ ಮೃತ್ಯುಂಜಯ ಸರ್ಕಲ್​​ನಲ್ಲಿ ಮಹಿಳೆಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ್ದಾರೆ. ಈ ಮಹಿಳೆ ಹನಿಟ್ರ್ಯಾಪ್ ಹಾಗೂ ಬ್ಲಾಕ್​ಮೇಲ್ ಮಾಡಿ ಹಣ ಸುಲಿಗೆ ಮಾಡುತ್ತಿದ್ದಾಳೆ ಎಂದು ಆರೋಪಿಸಿರುವ ಬಡಾವಣೆಯ ಕೆಲವರ ಗುಂಪು ಈ ರೀತಿ ದೌರ್ಜನ್ಯ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಕೆಲ ದಿನಗಳ …

Read More »

K.P.C.C. ಕಾರ್ಯಾಧ್ಯಕ್ಷ ಸ್ಥಾನಕ್ಕೆ ಅಂಜಲಿ ನಿಂಬಾಳ್ಕರ್ ಹೆಸರು

ಖಾನಾಪೂರ ಕ್ಷೇತ್ರದ ಮಾಜಿ ಶಾಸಕಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಅವರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷರ ಸ್ಥಾನಕ್ಕೆ ಮಹಿಳಾ ಕೋಟಾದಡಿ ಅವರ ಹೆಸರು ಶಿಫಾರಸು ಮಾಡಲಾಗಿದೆ ಎಂದು ಖಚಿತ ಮಾಹಿತಿ ತಿಳಿದು ಬಂದಿದೆ. ಇದರ ಮೊದಲು ಮಾಜಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಅವರು ಕೆಪಿಸಿಸಿ ಸದಸ್ಯರಾಗಿ, ಕೆಪಿಸಿಸಿ ವಕ್ತಾರೆಯಾಗಿ ಕಾರ್ಯ ನಿರ್ವಹಿಸಿದ್ದಾರೆ.ಪಕ್ಷ ನೀಡಿದ ಜವಾಬ್ದಾರಿಯನ್ನು ಅತ್ಯಂತ ದಕ್ಷತೆಯಿಂದ ನಿಭಾಯಿಸಿರುವ ಅನುಭವ ಹೊಂದಿರುವ ಕಾರಣ ಅವರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷರ ಸ್ಥಾನಕ್ಕೆ ಮಹಿಳಾ ಕೋಟಾದಡಿ ಶಿಫಾರಸು …

Read More »

4 ನೇ ಕರ್ನಾಟಕ ರ್ಯಾಂಕಿಂಗ್ ಓಪನ್ ಸ್ಟೇಟ್ ರೋಲರ್ ಸ್ಕೇಟಿಂಗ್ ಚಾಂಪಿಯನ್‌ಶಿಪ್ 2023 ರಲ್ಲಿ ಭಾಗವಹಿಸಿದ್ದಾರೆ ಬೆಳಗಾವಿಯ ಸ್ಕೇಟರ್ ಗಳು

ಸ್ಟೇಟ್ ರೋಲರ್ ಸ್ಕೇಟಿಂಗ್ ಚಾಂಪಿಯನ್‌ಶಿಪ್ ನಲ್ಲಿ 13 ಜಿಲ್ಲೆಗಳಿಂದ 400 ಸ್ಕೇಟರ್‌ಗಳು ಭಾಗವಹಿಸಿದ್ದರು. ಈ ಸ್ಪರ್ಧೆಯಲ್ಲಿ ಬೆಳಗಾವಿಯ ಸ್ಕೇಟರ್‌ಗಳು 2 ಚಿನ್ನ, 5 ಬೆಳ್ಳಿ ಮತ್ತು 2 ಕಂಚು ಸೇರಿದಂತೆ ಒಟ್ಟು 9 ಪದಕಗಳನ್ನು ಗೆದ್ದಿದ್ದಾರೆ. ಸ್ಪೀಡ್ ಸ್ಕೇಟಿಂಗ್: ಸೌರಭ್ ಸಲೋಖೆ 2 ಚಿನ್ನ 1 ಬೆಳ್ಳಿ, ಜಾನ್ವಿ ತೆಂಡೂಲ್ಕರ್ 2 ಬೆಳ್ಳಿ, ದೂರ್ವಾ ಪಾಟೀಲ್ 2 ಬೆಳ್ಳಿ, ಸಾನ್ವಿ ಎಟ್ಗಿಕರ್ 2 ಕಂಚು. ಗೆದ್ದಿದ್ದಾರೆ ಈ ಎಲ್ಲ ಸ್ಕೇಟರ್‌ಗಳು …

Read More »

ಅರಮನೆಯಲ್ಲಿ ಶರನ್ನವರಾತ್ರಿ: ರಕ್ತ ಚಿಮ್ಮುವ ‘ವಜ್ರಮುಷ್ಠಿ ಕಾಳಗ’ ಹೇಗೆ ನಡೆಯುತ್ತೆ ಗೊತ್ತೇ?

ಮೈಸೂರು: ರಾಜಪರಂಪರೆಯ ಶರನ್ನವರಾತ್ರಿ ವಿಜಯದಶಮಿಯ ದಿನ ರಾಜವಂಶಸ್ಥರು ವಿಜಯ ಯಾತ್ರೆಗೆ ಹೋಗುವ ಮುನ್ನ ಅರಮನೆಯ ಕನ್ನಡಿ ತೊಟ್ಟಿಯಲ್ಲಿ ಜಟ್ಟಿಗಳಿಂದ ಆಯೋಜಿಸುವ ‘ಜಟ್ಟಿ ಕಾಳಗ’ ಅಥವಾ ‘ವಜ್ರಮುಷ್ಠಿ ಕಾಳಗ’ಕ್ಕೆ ತನ್ನದೇ ಆದ ವೈಶಿಷ್ಟ್ಯತೆ ಇದೆ.   ಜಟ್ಟಿ ಕಾಳಗದ ಇತಿಹಾಸ: ಜಟ್ಟಿ ಕಾಳಗಕ್ಕೆ ವಜ್ರಮುಷ್ಟಿ ಕಾಳಗ ಎನ್ನಲಾಗುತ್ತದೆ. ಜಟ್ಟಿಗಳು ನಡೆಸಿಕೊಡುವ ವಜ್ರಮುಷ್ಟಿ ಕಾಳಗ ಮಹಾಭಾರತದ ಕೃಷ್ಣನ ಕಾಲದಿಂದಲೂ ಇದೆ. ಈಗಲೂ ಅದನ್ನು ರಾಜವಂಶಸ್ಥರು ಆಚರಿಸಿಕೊಂಡು ಬರುತ್ತಿದ್ದಾರೆ. ಶರನ್ನವರಾತ್ರಿಯ ವಿಜಯದಶಮಿಯ ದಿನ ವಿಜಯಯಾತ್ರೆಗೆ …

Read More »

‘ವಿಕಲತೆ ಮೆಟ್ಟಿ ನಿಂತು ಅದ್ಭುತ ಸಾಧನೆ ಮಾಡಿರುವ ನಿಮಗೆ ನಾವು ಚಿರಋಣಿ”: ಅಶ್ವಿನಿ ಪುನೀತ್ ರಾಜಕುಮಾರ್

ತಮ್ಮ ಜಮೀನಿನಲ್ಲಿ ಅಪ್ಪು ಭಾವಚಿತ್ರ ಮೂಡಿಸಿದ ರಾಯಚೂರು ರೈತ ಸತ್ಯನಾರಾಯಣ ಅವರಿಗೆ ಅಶ್ವಿನಿ ಪುನೀತ್ ರಾಜಕುಮಾರ್ ಧನ್ಯವಾದ ಅರ್ಪಿಸಿದ್ದಾರೆ. ಕನ್ನಡ ಚಿತ್ರರಂಗ ಕಂಡ ಶ್ರೇಷ್ಠ ನಟ ಪುನೀತ್​ ರಾಜ್​ಕುಮಾರ್​ ಇಹಲೋಕ ತ್ಯಜಿಸಿ ಹಲವು ದಿನಗಳು ಉರುಳುತ್ತಿದ್ದು, ಅವರ ನೆನಪು ಮಾತ್ರ ಸದಾ ಜೀವಂತ. ಅಪ್ಪು ದೈಹಿಕವಾಗಿ ನಮ್ಮೊಂದಿಗೆ ಇಲ್ಲದಿದ್ದರೂ, ಅಭಿಮಾನಿಗಳ ಹೃದಯದಲ್ಲಿ ಅಚ್ಚಳಿಯದೇ ಉಳಿದಿದ್ದಾರೆ. ಚಿತ್ರರಂಗ, ಅಭಿಮಾನಿಗಳು, ಜನಸಾಮಾನ್ಯರು ಒಂದಲ್ಲ ಒಂದು ರೀತಿಯಲ್ಲಿ ಅಪ್ಪು ಸ್ಮರಣೆ ಮಾಡುತ್ತಿದ್ದಾರೆ.     …

Read More »

ಭಾರತ ಪಾಕಿಸ್ತಾನ ಪಂದ್ಯ: ಅಹಮದಾಬಾದ್‌ ತಲುಪಿದ ಸಚಿನ್​ ತೆಂಡೂಲ್ಕರ್, ಅನುಷ್ಕಾ ಶರ್ಮಾ, ಅರಿಜಿತ್ ಸಿಂಗ್​ – ವಿಡಿಯೋ!

ಭಾರತ ಪಾಕಿಸ್ತಾನ ಪಂದ್ಯ ಹಿನ್ನೆಲೆ ಕ್ರಿಕೆಟ್​ ದಿಗ್ಗಜ ಸಚಿನ್​ ತೆಂಡೂಲ್ಕರ್, ನಟಿ ಅನುಷ್ಕಾ ಶರ್ಮಾ, ಗಾಯಕ ಅರಿಜಿತ್ ಸಿಂಗ್, ಮಾಜಿ ಕ್ರಿಕೆಟಿಗ ದಿನೇಶ್ ಕಾರ್ತಿಕ್ ಈಗಾಗಲೇ ಅಹಮದಾಬಾದ್​ ತಲುಪಿದ್ದಾರೆ. ಇಂದು ಅಕ್ಟೋಬರ್ 14…. ಕ್ರಿಕೆಟ್ ಮಹಾಯುದ್ಧ ನಡೆಯಲಿದೆ. ವಿಶ್ವಕಪ್ 2023ರ 12ನೇ ಪಂದ್ಯ ಇಂದು ಅಹಮದಾಬಾದ್​​ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಇಂಡೋ ಪಾಕ್​​ ತಂಡಗಳು ಮೈದಾನದಲ್ಲಿ ಮುಖಾಮುಖಿ ಆಗಲಿದೆ. ಎರಡೂ ತಂಡಗಳು ಭರ್ಜರಿ ಪೈಪೋಟಿ ನಡೆಸಲಿವೆ.     …

Read More »

ಪಾಕಿಸ್ತಾನ ಜೊತೆ ಆಡುವುದೇ ಒಂದು ವಿಶೇಷ’.. ಭಾರತ ಪಾಕಿಸ್ತಾನ ಕದನಕ್ಕೂ ಮುನ್ನ ಅಭಿಪ್ರಾಯ ಹಂಚಿಕೊಂಡ ರಾಹುಲ್​, ಕೊಹ್ಲಿ, ಪಾಂಡ್ಯ

ಪಾಕಿಸ್ತಾನ ಜೊತೆ ಆಡುವುದೇ ಒಂದು ವಿಶೇಷ ಎಂದು ಭಾರತದ ರನ್​ ಮಷಿನ್​ ವಿರಾಟ್​ ಕೊಹ್ಲಿ ಹೇಳಿದ್ದಾರೆ. ಇದರೊಂದಿಗೆ ಆಲ್​ರೌಂಡರ್​ ಆಟಗಾರ ಹಾರ್ದಿಕ್​ ಪಾಂಡ್ಯ ಮತ್ತು ಕೋಚ್​ ರಾಹುಲ್​ ದ್ರಾವಿಡ್​ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ. ಅಹಮದಾಬಾದ್, ಗುಜರಾತ್: ಶನಿವಾರ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಏಕದಿನ ವಿಶ್ವಕಪ್ 2023 ರ ಬಹು ನಿರೀಕ್ಷಿತ ಪಂದ್ಯಕ್ಕೆ ಮುನ್ನ, ಮೆನ್ ಇನ್ ಬ್ಲೂ ವೈಸ್ ಕ್ಯಾಪ್ಟನ್ ಹಾರ್ದಿಕ್ ಪಾಂಡ್ಯ, ರನ್​ …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮದಲ್ಲಿ ಶ್ರೀ ಬಲಭೀಮ ದೇವಸ್ಥಾನದ ಆವರಣದಲ್ಲಿ

ಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.   ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮದಲ್ಲಿ ಶ್ರೀ ಬಲಭೀಮ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.     ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ …

Read More »

ಭೀಮಾತೀರದಲ್ಲಿ..: ಗ್ರಾಮ ಪಂಚಾಯತಿ ಅಧ್ಯಕ್ಷ, ಕಾಂಗ್ರೆಸ್‌ ಮುಖಂಡನ ಬರ್ಬರ ಹತ್ಯೆ

ಕಲಬುರಗಿ : ಕೆಲವು ತಿಂಗಳುಗಳ ಕಾಲ ತಣ್ಣಗಿದ್ದ ಕಲಬುರಗಿಯ ಭೀಮಾತೀರದಲ್ಲಿ ಹಳೆ ದ್ವೇಷಕ್ಕೆ ನೆತ್ತರು ಹರಿದಿದೆ. ಅಫಜಲಪುರ ತಾಲೂಕಿನ ಚೌಡಾಪುರ ಬಸ್ ನಿಲ್ದಾಣ ಬಳಿ ಮಾರಕಾಸ್ತ್ರಗಳಿಂದ ಕೊಚ್ಚಿ ಗ್ರಾಮ ಪಂಚಾಯತ್ ಅಧ್ಯಕ್ಷನ ಬರ್ಬರ ಹತ್ಯೆ ನಡೆದಿದೆ. ಅಫಜಲಪುರ ತಾಲೂಕಿನ ಮದರಾ (ಬಿ) ಗ್ರಾ.ಪಂ.ಅಧ್ಯಕ್ಷ ಗೌಡಪ್ಪಗೌಡ ಪಾಟೀಲ ಕೊಲೆಯಾಗಿದ್ದಾರೆ. ಹಂತಕರು ಪರಾರಿಯಾಗಿದ್ದಾರೆ. ಮದರಾ (ಬಿ) ಗ್ರಾಮದಿಂದ ಇಂದು ಬೆಳಗ್ಗೆ ಕೆಲಸದ ನಿಮಿತ್ತ ಚೌಡಾಪುರಕ್ಕೆ ಆಗಮಿಸಿದ್ದ ಗೌಡಪ್ಪಗೌಡ ಪಾಟೀಲ್, ಬಸ್ ನಿಲ್ದಾಣ ಮುಂಭಾಗದಲ್ಲಿರುವ ಗ್ಯಾರೇಜ್​ನಲ್ಲಿ …

Read More »