Breaking News

ಹಾವೇರಿ: ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಸಿ ಗ್ರಾಪಂ ಸದಸ್ಯೆಯಾಗಿದ್ದ ಮಹಿಳೆಗೆ 7 ವರ್ಷ ಜೈಲು ಶಿಕ್ಷೆ

ಹಾವೇರಿ: ಸುಳ್ಳು ದಾಖಲಾತಿ ಸೃಷ್ಟಿಸಿ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಪಡೆದು ಗ್ರಾಮ ಪಂಚಾಯತ್ ಸದಸ್ಯೆಯಾಗಿದ್ದ ಹಾವೇರಿ ತಾಲೂಕಿನ ಗುತ್ತಲ ಗ್ರಾಮದ ಮುಕ್ತಾಬಾಯಿ ಬೀಸೆಗೆ ಹಾವೇರಿ ಒಂದನೇ ಅಧಿಕ ಜಿಲ್ಲಾ ಮತ್ತ ಸತ್ರ ನ್ಯಾಯಾಲಯ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ. ಗ್ರಾಪಂ ಸದಸ್ಯೆ ಮುಕ್ತಾಬಾಯಿಗೆ ಏಳು ವರ್ಷ ವರ್ಷಗಳ ಕಾರಾಗೃಹ ಶಿಕ್ಷೆ ಮತ್ತು 37 ಸಾವಿರ ರೂಪಾಯಿ ದಂಡ ವಿಧಿಸಿ ಕೋರ್ಟ್ ತೀರ್ಪು ನೀಡಿದೆ. ಇನ್ನು ಮುಕ್ತಾಬಾಯಿಗೆ ಸಹಾಯ ಮಾಡಿದ ಆರೋಪದ …

Read More »

ಬರುವ ರವಿವಾರದಿಂದಲೇ ದೇವಸ್ಥಾನದ ಜೀರ್ಣೋದ್ಧಾರ ಕೆಲಸಗಳನ್ನು ಆರಂಭಿಸಿ – ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ ಮಹಾಲಕ್ಷ್ಮೀ ದೇವಸ್ಥಾನದ ಜಾತ್ರಾ ಕಮೀಟಿ ಸದಸ್ಯರ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ ಗೋಕಾಕ- ಗೋಕಾವಿ ನೆಲದ ಇತಿಹಾಸ ಪ್ರಸಿದ್ಧ ಮಹಾಲಕ್ಷ್ಮೀ ಎರಡೂ ದೇವಸ್ಥಾನಗಳ ಜೀರ್ಣೋದ್ಧಾರ ಕಾಮಗಾರಿಗಳನ್ನು ತ್ವರಿತವಾಗಿ ಕೈಗೊಳ್ಳುವಂತೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಜಾತ್ರಾ ಕಮೀಟಿಗೆ ಸೂಚನೆ ನೀಡಿದರು. ಗುರುವಾರ ಸಂಜೆ ತಮ್ಮ ಗೃಹ ಕಚೇರಿಯಲ್ಲಿ ಮಹಾಲಕ್ಷ್ಮೀ ದೇವಸ್ಥಾನದ ಜಾತ್ರಾ ಕಮೀಟಿ ಸದಸ್ಯರನ್ನು ಉದ್ದೇಶಿಸಿ ಮಾತನಾಡಿದ ಅವರು, ಜೀರ್ಣೋದ್ಧಾರಕ್ಕೆ ಸಂಬಂಧಿಸಿದಂತೆ ಅಗತ್ಯವಿರುವ ಎಲ್ಲ ಕೆಲಸ- ಕಾರ್ಯಗಳನ್ನು …

Read More »

ಸ್ಟ್ಯಾನ್‍ಫೋರ್ಡ್ ವಿಶ್ವವಿದ್ಯಾಲಯದ ಅಗ್ರಮಾನ್ಯ ವಿಜ್ಞಾನಿಗಳ ಪಟ್ಟಿಯಲ್ಲಿ ಧಾರವಾಡದ ಇಬ್ಬರು ವಿಜ್ಞಾನಿಗಳಿಗೆ ಸ್ಥಾನ

ಧಾರವಾಡ: ವಿಶ್ವದ ಉನ್ನತ ವಿಜ್ಞಾನಿಗಳ ಕುರಿತು ಅಮೆರಿಕಾದ ಪ್ರತಿಷ್ಠಿತ ಸ್ಟ್ಯಾನ್‍ಫೋರ್ಡ್​ ವಿಶ್ವವಿದ್ಯಾನಿಲಯ ಬಿಡುಗಡೆ ಮಾಡಿರುವ ವಿಶ್ವದ ಟಾಪ್ ವಿಜ್ಞಾನಿಗಳ ಪಟ್ಟಿಯಲ್ಲಿ ಧಾರವಾಡ ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ)ಯ ವಿಜ್ಞಾನಿಗಳಿಬ್ಬರು ಸ್ಥಾನ ಪಡೆದುಕೊಂಡಿದ್ದಾರೆ.   ಡಾ. ಎಸ್​. ಬಸವರಾಜಪ್ಪ ಮತ್ತು ಡಾ. ಅಮರನಾಥ ಹೆಗಡೆ ಅವರು ಸ್ಥಾನಗಿಟ್ಟಿಸಿಕೊಂಡಿದ್ದು, ಅವರ ಮೌಲ್ಯಿಕ ಸಂಶೋಧನೆಗಳ ಸಾಧನೆಯಿಂದ ಧಾರವಾಡ ಐಐಟಿಗೆ ಕೀರ್ತಿ ಬಂದಿದ್ದು, ಅವರನ್ನು ಧಾರವಾಡ ಐಐಟಿಯ ಎಲ್ಲ ಸಿಬ್ಬಂದಿಗಳು ಅಭಿನಂದಿಸಿದ್ದಾರೆ. ಸ್ಟ್ಯಾನ್‍ಫೋರ್ಡ್ ವಿಶ್ವವಿದ್ಯಾನಿಲಯ ಮತ್ತು ಎಲ್ಸೆವಿಯ …

Read More »

ಮಾಜಿ ಕಾರ್ಪೊರೇಟರ್ ಸಂಬಂಧಿ ಮನೆಯಲ್ಲಿ ಐಟಿ ದಾಳಿ.. 40 ಕೋಟಿಗೂ ಹೆಚ್ಚು ನಗದು ಪತ್ತೆ!

ಬೆಂಗಳೂರು : ನಗರದಲ್ಲಿ ಗುತ್ತಿಗೆದಾರರು, ಜ್ಯುವೆಲ್ಲರಿ ಶಾಪ್​ ಮಾಲೀಕರು ಹಾಗೂ ಮಾಜಿ ಕಾರ್ಪೊರೇಟರ್​ಗಳ ಮನೆಗಳ ಮೇಲೆ ತಡರಾತ್ರಿ ಆದಾಯ ತೆರಿಗೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ದಾಳಿ ವೇಳೆ, ಮಾಜಿ ಕಾರ್ಪೊರೇಟರ್ ಅವರ ಸಂಬಂಧಿಯ ಫ್ಲ್ಯಾಟ್​ನಲ್ಲಿ 42 ಕೋಟಿ ರೂಪಾಯಿ ನಗದು ಪತ್ತೆಯಾಗಿದೆ ಎಂದು ಐಟಿ ಮೂಲಗಳು ತಿಳಿಸಿವೆ. ಆರ್​ಟಿ ನಗರದ ಆತ್ಮಾನಂದ ಕಾಲೋನಿಯಲ್ಲಿರುವ ಫ್ಲ್ಯಾಟ್​ನಲ್ಲಿ ಈ ದಾಳಿ ನಡೆದಿದೆ. ಫ್ಲ್ಯಾಟ್​ನಲ್ಲಿನ ಮಂಚದ ಕೆಳಗಡೆ ಬಾಕ್ಸ್​ನಲ್ಲಿ ಹಣ ಕಂಡುಬಂದಿದೆ ಎಂದು ಆದಾಯ ತೆರಿಗೆ …

Read More »

ಮುರುಘಾ ಶರಣರ ವಿರುದ್ಧದ ಫೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿ ಪರಮಶಿವಯ್ಯಗೆ ಜಾಮೀನು ನೀಡಿದ ಹೈಕೋರ್ಟ್.

ಬೆಂಗಳೂರು: ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧದ ದಾಖಲಾಗಿದ್ದ ಮೊದಲನೇ ಪೋಕ್ಸೋ ಪ್ರಕರಣದಲ್ಲಿ ಮೂರನೇ ಆರೋಪಿಯಾಗಿರುವ ಮಠದ ವಿದ್ಯಾಪೀಠಗಳ ಕಾರ್ಯದರ್ಶಿ ಪರಮಶಿವಯ್ಯ ಅವರಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.   ಪರಮಶಿವಯ್ಯ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಮೂರ್ತಿ ಶಿವಶಂಕರ್ ಅಮರಣ್ಣವರ್ ಅವರ ನೇತೃತ್ವದ ಏಕಸದಸ್ಯ ಅರ್ಜಿಯನ್ನು ಪುರಸ್ಕರಿಸಿದ್ದು, ಜಾಮೀನು ನೀಡಿದೆ. ವಿಸ್ತೃತ ಆದೇಶ ಪ್ರತಿ ಇನ್ನಷ್ಟೇ ಲಭ್ಯವಾಗಬೇಕಿದೆ. ಅಲ್ಲದೇ, ಅರ್ಜಿದಾರರು ಎರಡು ಲಕ್ಷ ರೂಪಾಯಿ ಮೌಲ್ಯದ ಬಾಂಡ್, …

Read More »

ವಿಶ್ವಕಪ್​ನಲ್ಲಿ ಪಾಕ್​ ವಿರುದ್ಧ ಭಾರತದ್ದೇ ಮೇಲುಗೈ.. ಹೀಗಿದೆ ಟೀಂ ಇಂಡಿಯಾ ವಿಜಯ ಯಾತ್ರೆ !

ವಿಶ್ವಕಪ್‌ನಲ್ಲಿ ಪಾಕಿಸ್ತಾನದ ಮೇಲೆ ಭಾರತ ಪ್ರಾಬಲ್ಯ ಸಾಧಿಸಿರುವುದು ಗೊತ್ತಿರುವ ಸಂಗತಿ.. ಆದರೆ ಆ ಪಂದ್ಯಗಳು ಯಾವಾಗ, ಎಲ್ಲಿ, ಗೆಲುವಿಗೆ ಮುಖ್ಯ ಪಾತ್ರ ವಹಿಸಿದ್ದು ಯಾರೆಂಬುದನ್ನು ತಿಳಿಯೋಣ ಬನ್ನಿ.. ಅಹಮದಾಬಾದ್​, ಗುಜರಾತ್​: ವಿಶ್ವಕಪ್​ನಲ್ಲಿ ಭಾರತ ಮತ್ತು ಪಾಕ್​ ನಡುವಿನ ಕದನಕ್ಕೆ ಕಾಲ ಕೂಡಿ ಬಂದಿದೆ. ಇಡೀ ಕ್ರಿಕೆಟ್ ಜಗತ್ತು ಕುತೂಹಲದಿಂದ ಕಾಯುತ್ತಿರುವ ಭಾರತ – ಪಾಕಿಸ್ತಾನ ಪಂದ್ಯ ನಾಳೆ ಅಹಮದಾಬಾದ್ ಮೈದಾನದಲ್ಲಿ ನಡೆಯಲಿದೆ. ಭಾರತ ಮತ್ತು ಪಾಕಿಸ್ತಾನ ಏಕದಿನ ವಿಶ್ವಕಪ್‌ನಲ್ಲಿ ಏಳು ಬಾರಿ …

Read More »

ಕಿತ್ತೂರು ಚೆನ್ನಮ್ಮ, ಟಿಪ್ಪು ಸುಲ್ತಾನ್​ ಸ್ವಾಭಿಮಾನದ ಹೋರಾಟ ನಮ್ಮೆಲ್ಲರಿಗೆ ಸ್ಫೂರ್ತಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಕಿತ್ತೂರು ರಾಣಿ ಚೆನ್ನಮ್ಮ, ಟಿಪ್ಪು ಸುಲ್ತಾನ್​​ ಸ್ವಾಭಿಮಾನಿ ಹೋರಾಟದ ಸ್ಫೂರ್ತಿಯಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಳಗಾವಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ವಿಧಾನಸೌಧದ ಬೃಹತ್ ಮೆಟ್ಟಿಲುಗಳ ಬಳಿ ಕಿತ್ತೂರು ರಾಣಿ ಚೆನ್ನಮ್ಮನ ಉತ್ಸವ-2023ರನ್ನು ಆಯೋಜಿಸಿದ್ದು, ಪೂರ್ವಭಾವಿಯಾಗಿ ಕಿತ್ತೂರು ಚೆನ್ನಮ್ಮಾಜಿಯ ವೀರ ವಿಜಯ ಜ್ಯೋತಿ ಯಾತ್ರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. ಚೆನ್ನಮ್ಮನ ಕಿತ್ತೂರು ಉತ್ಸವದ ಜ್ಯೋತಿ ಯಾತ್ರೆಗೆ ಚಾಲನೆ ನೀಡಿ ಮಾತನಾಡಿದ …

Read More »

ಬಜೆಟ್ ಪ್ರಗತಿ: 2023 – 24 ಬಜೆಟ್ ವರ್ಷದ ಆರು ತಿಂಗಳಲ್ಲಿ ಇಲಾಖಾವಾರು ಆರ್ಥಿಕ ಪ್ರಗತಿ ಏನಿದೆ..?

ಬೆಂಗಳೂರು: 2023-24 ಬಜೆಟ್ ವರ್ಷದ ಅರ್ಧ ವರ್ಷ ಕಳೆದಿದೆ. ಹೊಸ ಕಾಂಗ್ರೆಸ್ ಸರ್ಕಾರ ರಾಜ್ಯದ ಚುಕ್ಕಾಣಿ ಹಿಡಿದಿದ್ದು, ಪಂಚ ಗ್ಯಾರಂಟಿ ಕೇಂದ್ರೀಕೃತ ಆಡಳಿತ ನಡೆಸುತ್ತಿದೆ. ಆರ್ಥಿಕ ವರ್ಷದ ಆರು ತಿಂಗಳಲ್ಲಿ ರಾಜ್ಯದ ಬಜೆಟ್ ಅನುಷ್ಠಾನದ ಆರ್ಥಿಕ ಪ್ರಗತಿಯ ಸ್ಥಿತಿಗತಿ ಕುರಿತ ಸಂಪೂರ್ಣ ವರದಿ ಇಲ್ಲಿದೆ. ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದು ನಾಲ್ಕುವರೆ ತಿಂಗಳು ಆಗಿದ್ದು, ರಾಜ್ಯಭಾರ ನಡೆಸುತ್ತಿದೆ. ಹೊಸ ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿಗಳೊಂದಿಗೆ ಹೊಸ ಆಡಳಿತ ನಡೆಸುತ್ತಿದೆ. ಪಂಚ ಗ್ಯಾರಂಟಿ …

Read More »

ದಾಂಡೇಲಿಗೆ ಕರೆದೊಯ್ದು ಯುವತಿ ಮೇಲೆ ಮಾರಣಾಂತಿಕ ಹಲ್ಲೆ: ಆರೋಪಿ ಅಂದರ್

ಧಾರವಾಡ: ಅಜ್ಞಾತ ಸ್ಥಳಕ್ಕೆ ಎಳೆದೊಯ್ದು ಯುವತಿ ಮೇಲೆ‌ ಮಾರಣಾಂತಿಕ ಹಲ್ಲೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಕಳೆದ ಅಕ್ಟೋಬರ್ 8 ರಂದು ಧಾರವಾಡ ತಾಲೂಕಿನ ಸಲಕಿನಕೊಪ್ಪ ಗ್ರಾಮದ‌ ಬಳಿ ಯುವತಿ ಮೇಲೆ ಮಾರಣಾಂತಿಕ ಹಲ್ಲೆ ನಡೆದಿತ್ತು. ಏನಿದು ಪ್ರಕರಣ?: ಯುವಕ ಹಾಗೂ ಯುವತಿ ಇಬ್ಬರೂ ಸೇರಿ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಗೆ ಹೋಗಿದ್ದರು. ಈ‌ ವೇಳೆ, ಇಬ್ಬರ ನಡುವೆ ಜಗಳ ನಡೆದಿತ್ತು. ಜಗಳ‌ ತಾರಕಕ್ಕೇರಿದ್ದು, ಆರೋಪಿ ಯುವಕ ಕಟರ್​ನಿಂದ ಯುವತಿಗೆ …

Read More »

ದೆಹಲಿಯಲ್ಲಿ ಇಸ್ರೇಲ್‌ನಿಂದ ಮರಳಿದ ಕನ್ನಡಿಗರನ್ನು ಬರಮಾಡಿಕೊಂಡ ಟಿ.ಬಿ.ಜಯಚಂದ್ರ

ಬೆಂಗಳೂರು/ನವದೆಹಲಿ: ಇಸ್ರೇಲ್-ಹಮಾಸ್ ಉಗ್ರರ ನಡುವೆ ಯುದ್ಧ ಮುಂದುವರಿದಿದೆ. ಇಸ್ರೇಲ್‌ನಿಂದ 212 ಭಾರತೀಯ ಪ್ರಜೆಗಳನ್ನು ಹೊತ್ತ ಚಾರ್ಟರ್ ವಿಮಾನ ದೆಹಲಿ ನಿಲ್ದಾಣದಲ್ಲಿ ಇಂದು ಬೆಳಗ್ಗೆ ಲ್ಯಾಂಡ್ ಆಯಿತು. ಇದರಲ್ಲಿ ಐವರು ಕನ್ನಡಿಗರೂ ಇದ್ದು ಬೆಂಗಳೂರು ವಿಮಾನ ನಿಲ್ದಾಣ ಬಂದು ತಲುಪಿದರು. ತಾಯ್ನಾಡಿಗೆ ಆಗಮಿಸಿದ ಮೊದಲ ಕನ್ನಡಿಗ ಈರಣ್ಣ ಮಾತನಾಡಿ, ”ಇಸ್ರೇಲ್​ನಲ್ಲಿ ಯಾವುದೇ ಆತಂಕದ ಪರಿಸ್ಥಿತಿ ಇಲ್ಲ. ಹಮಾಸ್ ಉಗ್ರರ ದಾಳಿ ಇಸ್ರೇಲ್ ಜನರ ಮೇಲೆ ಪ್ರಭಾವ ಬೀರಿಲ್ಲ. ಗಾಜಾ ಗಡಿ ಭಾಗದಲ್ಲಿ ಮಾತ್ರ …

Read More »