ಚಿತ್ರದುರ್ಗ: ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಮತ್ತು ಸಿಬ್ಬಂದಿ ಕೊರತೆ, ಔಷಧಗಳು ಸಮರ್ಪಕವಾಗಿ ನೀಡುತ್ತಿಲ್ಲ, ಚಿಕಿತ್ಸೆ ಸರಿ ಇಲ್ಲವೆಂಬ ದೂರುಗಳು ಕೇಳಿಬರುವುದು ಸಾಮಾನ್ಯ. ಆದರೆ, ನಗರದ ಜಿಲ್ಲಾಸ್ಪತ್ರೆಯೊಳಗೆ ಕೆಲ ದಿನಗಳಿಂದ ಮಂಗಗಳ ಉಪಟಳ ಹೆಚ್ಚಾಗಿದ್ದು, ರೋಗಿಗಳು ತಳಮಳಗೊಂಡಿದ್ದಾರೆ. ಐತಿಹಾಸಿಕ ಕಲ್ಲಿನ ಕೋಟೆ, ನಲ್ಲಿಕಾಯಿ ಸಿದ್ದಪ್ಪನ ಬೆಟ್ಟ, ಚಂದ್ರವಳ್ಳಿ, ಆಡುಮಲ್ಲೇಶ್ವರ ಕಿರು ಮೃಗಾಲಯ ಆವರಣ ಸಾಮಾನ್ಯವಾಗಿ ಕೋತಿಗಳಿಗೆ ಆಶ್ರಯ ತಾಣಗಳಾಗಿವೆ. ಆಹಾರ, ನೀರು ಸಿಗದ ಸಂದರ್ಭ ಎದುರಾದಾಗ ನಗರ ಪ್ರವೇಶಿಸುತ್ತಿವೆ. ಈ …
Read More »ಶಾಲಾ ಮಕ್ಕಳ ಪೋಷಕರು ಆತಂಕಪಡಬೇಕಾದ ಅಗತ್ಯವಿಲ್ಲ, ದುಷ್ಟಶಕ್ತಿಗಳನ್ನು ಆದಷ್ಟು ಬೇಗ ಪತ್ತೆಹಚ್ಚುತ್ತೇವೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಬೆಂಗಳೂರಿನ ಖಾಸಗಿ ಶಾಲೆಗಳಲ್ಲಿ ವಿದ್ವಂಸಕ ಕೃತ್ಯ ನಡೆಸುವುದಾಗಿ ಬೆದರಿಕೆ ಬಂದಿರುವ ಹಿನ್ನೆಲೆಯಲ್ಲಿ ಬಾಂಬ್ ಪತ್ತೆ ದಳ ಮತ್ತು ಬಾಂಬ್ ನಿಷ್ಕ್ರಿಯ ದಳಗಳು ಈಗಾಗಲೇ ಶಾಲೆಗಳಲ್ಲಿ ಪರಿಶೀಲನೆ ನಡೆಸುತ್ತಿವೆ. ಸಾರ್ವಜನಿಕರು ಮತ್ತು ಶಾಲಾ ಮಕ್ಕಳ ಪೋಷಕರು ಆತಂಕಪಡಬೇಕಾದ ಅಗತ್ಯವಿಲ್ಲ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಪ್ರಕರಣವನ್ನು ನಮ್ಮ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಪೊಲೀಸ್ ಅಧಿಕಾರಿಗಳ ಜೊತೆ ಮಾತನಾಡಿ ಶಾಲೆಗಳು ಮತ್ತು ದೇವಾಲಯಗಳಿಗೆ ಸೂಕ್ತ ಭದ್ರತೆ ಒದಗಿಸುವಂತೆ ಸೂಚನೆ ನೀಡಿದ್ದೇನೆ. ನಾಡಿನ …
Read More »ದ್ವಿತೀಯ ಪಿಯುಸಿ, ಎಸ್ಎಸ್ಎಲ್ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ
ಬೆಂಗಳೂರು: 2023-24ನೇ ಸಾಲಿನ ದ್ವಿತೀಯ ಪಿಯುಸಿ ಹಾಗೂ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆ-1ರ ತಾತ್ಕಾಲಿಕ ವೇಳಾಪಟ್ಟಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯ ಜಾಲತಾಣದಲ್ಲಿ ಇಂದು ಪ್ರಕಟಿಸಲಾಗಿದೆ. 2024 ಮಾರ್ಚ್ 02ರಿಂದ ಮಾರ್ಚ್ 22ರವರೆಗೆ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಯಲಿದೆ. ಇನ್ನು ಮಾರ್ಚ್ 25 ರಿಂದ ಏಪ್ರಿಲ್ 06 ರವರೆಗೆ ಎಸ್‌ಎಸ್‌ಎಲ್ ಸಿ ವಾರ್ಷಿಕ ಪರೀಕ್ಷೆ ನಡೆಯಲಿದೆ. ಮಂಡಲಿ ಮೂರು ತಿಂಗಳ ಮುಂಚಿತವಾಗಿಯೇ ತಾತ್ಕಲಿಕ ವೇಳಾಪಟ್ಟಿ ಪ್ರಕಟ ಮಾಡಿದೆ. ಮಂಡಲಿಯಿಂದ …
Read More »ಸಿಲಿಂಡರ್ ಬೆಲೆಯಲ್ಲಿ 21 ರೂ.ಹೆಚ್ಚಳ
ನವದೆಹಲಿ : ಪಂಚ ರಾಜ್ಯಗಳ ಚುನಾವಣೆ ಮುಗಿದ ಕೂಡಲೇ ಎಲ್ಪಿಜಿ ವಾಣಿಜ್ಯ ಸಿಲಿಂಡರ್ಗಳು ದುಬಾರಿಯಾಗಿವೆ. ಡಿಸೆಂಬರ್ 1, 2023 ರಿಂದ 19 ಕೆಜಿ ಎಲ್ ಪಿಜಿ ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ 21 ರೂ. ಹೆಚ್ಚಳ ಮಾಡಲಾಗಿದೆ. ಇಂದು 19 ಕೆಜಿ ಎಲ್ಪಿಜಿ ಸಿಲಿಂಡರ್ ಬೆಲೆಯ ನ್ನು 21 ರೂ.ಗೆ ಹೆಚ್ಚಿಸಲಾಗಿದೆ. ದೆಹಲಿಯಲ್ಲಿ, 19 ಕೆಜಿ ಎಲ್ಪಿಜಿ ಸಿಲಿಂಡರ್ 1775.50 ರೂ.ಗಳ ಬದಲು 1796.50 ರೂ.ಗೆ ಲಭ್ಯವಿದೆ. ಕೋಲ್ಕತ್ತಾದಲ್ಲಿ, ಇದು 1885.50 …
Read More »ಸುವರ್ಣ ವಿಧಾನಸೌಧದ ಅಂದ ಹೆಚ್ಚಿಸಲಿವೆ ಚನ್ನಮ್ಮ, ರಾಯಣ್ಣ, ಅಂಬೇಡ್ಕರ್ ಪ್ರತಿಮೆಗಳು!
ಬೆಳಗಾವಿ: ಬೆಳಗಾವಿ ಚಳಿಗಾಲದ ಅಧಿವೇಶನಕ್ಕೆ ದಿನಗಣನೆ ಶುರುವಾಗಿದ್ದು, ಸುವರ್ಣ ವಿಧಾನಸೌಧದ ಮುಂದೆ ತಲೆ ಎತ್ತಿರುವ ಮೂರು ಮಹನೀಯರ ಪ್ರತಿಮೆಗಳ ಸೌಂದರ್ಯೀಕರಣ ಕಾಮಗಾರಿ ಭರದಿಂದ ಸಾಗಿದೆ. ಹೌದು ವೀರರಾಣಿ ಕಿತ್ತೂರು ಚೆನ್ನಮ್ಮ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಸಂವಿಧಾನ ಶಿಲ್ಪಿ ಡಾ ಬಿಆರ್ ಅಂಬೇಡ್ಕರ್ ಅವರ ಪ್ರತಿಮೆಗಳನ್ನು ಈ ಹಿಂದಿನ ಬಿಜೆಪಿ ಸರ್ಕಾರ ಚುನಾವಣೆಗೂ ಮುನ್ನ ತರಾತುರಿಯಲ್ಲಿ ನಿಲ್ಲಿಸಿ ಲೋಕಾರ್ಪಣೆಗೊಳಿಸಿತ್ತು. ಪ್ರತಿಮೆಗಳ ಸುತ್ತಲೂ ಯಾವುದೇ ರೀತಿ ರಕ್ಷಣಾ ಗೋಡೆ, ಹುಲ್ಲುಹಾಸು, ಬೆಳಕಿನ ವ್ಯವಸ್ಥೆ …
Read More »ಧಾರವಾಡ ಜಿಲ್ಲಾಸ್ಪತ್ರೆಗೆ ದಿಢೀರ್ ಭೇಟಿ ನೀಡಿ ವ್ಯವಸ್ಥೆ ಪರಿಶೀಲಿಸಿದ ಲೋಕಾಯುಕ್ತ ನ್ಯಾಯಮೂರ್ತಿ
ಧಾರವಾಡ : ಎರಡು ದಿನಗಳ ಕಾಲ ಜಿಲ್ಲಾ ಪ್ರವಾಸದಲ್ಲಿರುವ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಅವರು ಇಂದು (ಗುರುವಾರ) ಧಾರವಾಡ ಜಿಲ್ಲಾಸ್ಪತ್ರೆಗೆ ದಿಢೀರ್ ಭೇಟಿ ನೀಡಿ ವ್ಯವಸ್ಥೆ ಪರಿಶೀಲಿಸಿದರು. ಜಿಲ್ಲಾಸ್ಪತ್ರೆಯ ಔಷಧ ವಿತರಣಾ ವಿಭಾಗ ಸೇರಿದಂತೆ ವಿವಿಧ ವಿಭಾಗಗಳಿಗೆ ಭೇಟಿ ನೀಡಿದ ಲೋಕಾಯುಕ್ತ ನ್ಯಾಯಮೂರ್ತಿಗಳು ಔಷಧ ವಿತರಣಾ ವಿಭಾಗದಲ್ಲಿನ ದಾಖಲೆಗಳನ್ನು ಕೇಳಿದರು. ಯಾರಿಗೆ ಎಷ್ಟು ಔಷಧ, ಮಾತ್ರ ಕೊಟ್ಟಿದ್ದೀರಿ ಎಂಬ ಮಾಹಿತಿ ಇದೆಯಾ ಎಂದು ಲೋಕಾಯುಕ್ತರು ಕೇಳಿದಾಗ ಮ್ಯಾನುವಲ್ನಲ್ಲಿ ಮಾತ್ರ ದಾಖಲಿಸಿದ …
Read More »ಸಿಎಂ ಸಿದ್ದರಾಮಯ್ಯ ಅವರು ಭ್ರೂಣ ಹತ್ಯೆ ಪ್ರಕರಣದ ಬಗ್ಗೆ ಸಿಐಡಿ ತನಿಖೆಗೆ ಆದೇಶಿಸಿದ್ದಾರೆ.
ಬೆಂಗಳೂರು : ಇತ್ತೀಚೆಗೆ ಮಂಡ್ಯದಲ್ಲಿ ಬೆಳಕಿಗೆ ಬಂದ ಭ್ರೂಣ ಹತ್ಯೆ ಪ್ರಕರಣದ ಬಗ್ಗೆ ಸಿಐಡಿ ತನಿಖೆಗೆ ಸಿಎಂ ಆದೇಶ ಮಾಡಿದ್ದು, ಈ ಕುರಿತಂತೆ ಗೃಹ ಸಚಿವರಿಗೆ ನಿರ್ದೇಶನ ನೀಡಿದ್ದಾರೆ. ಇತ್ತೀಚೆಗೆ ಹೆಣ್ಣು ಭ್ರೂಣ ಪತ್ತೆ ಹಾಗೂ ಗರ್ಭಪಾತ ಪ್ರಕರಣ ಭೇದಿಸಿದ್ದ ಬೆಂಗಳೂರಿನ ಬೈಯಪ್ಪನಹಳ್ಳಿ ಠಾಣೆ ಪೊಲೀಸರು ಮೈಸೂರಿನ ಖಾಸಗಿ ಆಸ್ಪತ್ರೆ ವೈದ್ಯ ದಂಪತಿ ಹಾಗೂ ಇತರ ಮೂವರು ಸೇರಿದಂತೆ ಐವರನ್ನು ಬಂಧಿಸಿದ್ದರು. ಇದಕ್ಕೂ ಮುನ್ನ ಕಳೆದ ಅಕ್ಟೋಬರ್‌ನಲ್ಲಿ ಶಿವನಂಜೇಗೌಡ, ವೀರೇಶ್, …
Read More »ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಭಾರತ ತಂಡ ಪ್ರಕಟಗೊಂಡಿದ್ದು, ಆಟಗಾರರ ಪಟ್ಟಿ ಇಲ್ಲಿದೆ.
ಹೈದರಾಬಾದ್: ದಕ್ಷಿಣ ಆಫ್ರಿಕಾ ವಿರುದ್ಧ ನಡೆಯಲಿರುವ ಮೂರು ಮಾದರಿಯ ಸರಣಿಗಾಗಿ ಭಾರತ ತಂಡ ಪ್ರಕಟವಾಗಿದೆ. ಬಿಸಿಸಿಐ ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಟೀಂ ಇಂಡಿಯಾವನ್ನು ಘೋಷಿಸಿದರು. ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಭಾರತ ಮೂರು ಏಕದಿನ, ಮೂರು ಟಿ20, ಎರಡು ಟೆಸ್ಟ್ ಪಂದ್ಯಗಳ ಸರಣಿಯನ್ನು ಆಡಲಿದೆ. ಸೂರ್ಯಕುಮಾರ್ ಯಾದವ್ಗೆ ಟಿ20 ನಾಯಕತ್ವವ ಹಸ್ತಾಂತರಿಸಲಾಗಿದ್ದು, ಕೆಎಲ್ ರಾಹುಲ್ಗೆ ಏಕದಿನ ಸರಣಿ ನಾಯಕತ್ವ, ಟೆಸ್ಟ್ ತಂಡಕ್ಕೆ ರೋಹಿತ್ ಶರ್ಮಾಗೆ ನಾಯಕತ್ವ ವಹಿಸಲಾಗಿದೆ. ಟಿ20 ಮತ್ತು …
Read More »ವುಮೆನ್ ಸೇಫ್ಟಿ’ ಆಯಪ್; ಅಪಾಯದ ವೇಳೆ ಒಂದು ಬಟನ್ ಒತ್ತಿದ್ರೆ, ಲೊಕೇಶನ್ ಸಹಿತ ಬರುತ್ತೆ ಸಂದೇಶ
ವುಮೆನ್ ಸೇಫ್ಟಿ’ ಆಯಪ್; ಅಪಾಯದ ವೇಳೆ ಒಂದು ಬಟನ್ ಒತ್ತಿದ್ರೆ, ಲೊಕೇಶನ್ ಸಹಿತ ಬರುತ್ತೆ ಸಂದೇಶ ಬೆಂಗಳೂರು: ನೀವೇನಾದರೂ ಅಪರಿಚಿತ ಸ್ಥಳಕ್ಕೆ ಹೋದಾಗ ಅಪಾಯವಿದೆ ಎಂದು ನಿಮಗೆ ಅನ್ನಿಸಿದೆಯಾ? ಪ್ರಯಾಣದ ವೇಳೆ ಸಹ ಪ್ರಯಾಣಿಕರು ಕಿರುಕುಳ ಕೊಡುತ್ತಿದ್ದಾರೆ ಅನ್ನೋದು ಮನವರಿಕೆಯಾದರೆ ಕೂಡಲೇ ಪ್ಯಾನಿಕ್ ಬಟನ್ ಒತ್ತಿದರೆ ಸಾಕು ನೀವು ಕಳುಹಿಸಬೇಕಾದ ವ್ಯಕ್ತಿಗಳಿಗೆ ಅಲರ್ಟ್ ಸಂದೇಶ ರವಾನೆಯಾಗುವಂತಹ ನೂತನ ಅಪ್ಲಿಕೇಶನ್ವೊಂದನ್ನು ಕಾಲೇಜು ವಿದ್ಯಾರ್ಥಿನಿಯೊಬ್ಬರು ಅಭಿವೃದ್ಧಿ ಪಡಿಸಿದ್ದಾರೆ. ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಟೆಕ್ ಸಮ್ಮಿಟ್ನಲ್ಲಿ …
Read More »2ಎ ಮೀಸಲಾತಿ ಫೈಟ್.. ಡಿ.5ರಂದು ಬೆಳಗಾವಿಯಲ್ಲಿ
ಬೆಳಗಾವಿ: ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ಚಳಿಗಾಲ ಅಧಿವೇಶನ ವೇಳೆ ಸರ್ಕಾರದ ಗಮನ ಸೆಳೆಯಲು ಡಿ.5ರಂದು ಬೆಳಗಾವಿಯಲ್ಲಿ ಸಮಾಜದ ಹಾಲಿ – ಮಾಜಿ ಶಾಸಕರ ಸಭೆ ಕರೆದಿದ್ದೇವೆ. ಈ ಸಭೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಮಂತ್ರಿಸಲು ನಿರ್ಧರಿಸಿದ್ದೇವೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು. ಬೆಳಗಾವಿಯಲ್ಲಿ ಪಂಚಮಸಾಲಿ ಸಮಾಜದ ರಾಜ್ಯ ಕಾರ್ಯ ಕಾರಿಣಿ ಸಭೆ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳನ್ನು ಸಭೆಗೆ …
Read More »
Laxmi News 24×7