ಬೆಂಗಳೂರು : ಲೈಂಗಿಕ ದೌರ್ಜನ್ಯ ಸಂಬಂಧ ಪ್ರತ್ಯೇಕ ಮೂರು ಪೊಕ್ಸೋ ಪ್ರಕರಣಗಳಲ್ಲಿ ಮೂವರು ಅಪರಾಧಿಗಳಿಗೆ ತ್ವರಿತಗತಿ ವಿಶೇಷ ನ್ಯಾಯಾಲಯ (ಎಫ್ಟಿಎಸ್ಸಿ) ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿತು. ನ್ಯಾಯಾಧೀಶರಾದ ಕೆ.ಎನ್.ರೂಪ ಅವರು ಅಪರಾಧಿಗಳಾದ ಬಾಬು, ದಿವಾಕರ ಹಾಗೂ ಚಿದಾನಂದ ಎಂಬವರಿಗೆ ಜೈಲುಶಿಕ್ಷೆ ವಿಧಿಸಿದರು. ಮಾರತ್ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ದೇವರಬೀಸನಹಳ್ಳಿ ನಿವಾಸಿ ಬಾಬು ಎಂಬಾತನಿಗೆ 5 ವರ್ಷ ಕಾರಾಗೃಹ ಶಿಕ್ಷೆ ಹಾಗೂ 25 ಸಾವಿರ ದಂಡ ವಿಧಿಸಲಾಗಿದೆ. ಬಾಬು ತಮಿಳುನಾಡು ಮೂಲದವನಾಗಿದ್ದು, ನಗರದಲ್ಲಿ …
Read More »ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯನ್ನು 2023-24ನೇ ಸಾಲಿನಲ್ಲಿ ಅನುಷ್ಠಾನಗೊಳಿಸಲು ಪೂರ್ವಭಾವಿ ಪ್ರಕ್ರಿಯೆ ಪ್ರಾರಂಭಿಸಲಾಗಿದೆ.
ಬೆಂಗಳೂರು: ರಾಜ್ಯದ ರೈತರು, ಬಡವರು, ಆರ್ಥಿಕ ದುರ್ಬಲರಿಗೆ ಕೈಗೆಟುಕುವ ದರದಲ್ಲಿ ಆರೋಗ್ಯ ಸೇವೆ ಸಿಗಬೇಕೆಂಬ ದೃಷ್ಟಿಯಿಂದ ಯಶಸ್ವಿನಿ ಆರೋಗ್ಯ ವಿಮಾ ಯೋಜನೆಯನ್ನು 2002ರಲ್ಲಿ ಅಂದಿನ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಆರಂಭಿಸಿದ್ದರು. ಈ ಯೋಜನೆಯು ಜೂನ್ 1, 2003 ರಂದು ಕಾರ್ಯರೂಪಕ್ಕೆ ಬಂದಿದೆ. ಕಾಲಾನಂತರದಲ್ಲಿ ಸ್ಥಗಿತಗೊಂಡಿತ್ತು. ರಾಜ್ಯದ ಸಹಕಾರಿಗಳು ಹಾಗೂ ರೈತರ ನಿರಂತರ ಒತ್ತಾಯ ಮತ್ತು ಬೇಡಿಕೆ ಪರಿಗಣಿಸಿ 2018ರಲ್ಲಿ ಸ್ಥಗಿತಗೊಳಿಸಿದ್ದ ಯಶಸ್ವಿನಿ ಯೋಜನೆಯನ್ನು ಪುನರ್‌ಜಾರಿಗೊಳಿಸಲು ಅಂದಿನ ರಾಜ್ಯ ಸರ್ಕಾರ ತೀರ್ಮಾನಿಸಿತು. 2022-23 ನೇ …
Read More »ಹುಬ್ಬಳ್ಳಿ ದಲಿತರ ಕೇರಿಯಲ್ಲಿ ಪೇಜಾವರ ಶ್ರೀ ಪಾದಯಾತ್ರೆ
ಹುಬ್ಬಳ್ಳಿ: ಇಲ್ಲಿನ ಭುವನೇಶ್ವರಿ ನಗರದ ದಲಿತರ ಕಾಲೋನಿಯಲ್ಲಿ ಉಡುಪಿಯ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಪಾದಯಾತ್ರೆ ನಡೆಸಿದರು. ವಿಶ್ವ ಹಿಂದೂ ಪರಿಷತ್, ಹುಬ್ಬಳ್ಳಿ ಮಹಾನಗರದ ಧರ್ಮಚಾರಿ ಸಂಪರ್ಕ ಪ್ರಮುಖ ಯಲ್ಲಪ್ಪ ಬಾಗಲೋಟಿ ಅವರ ಮನೆಗೆ ಶ್ರೀಗಳು ಭೇಟಿ ನೀಡಿದರು. ವಿಶ್ವ ಹಿಂದೂ ಪರಿಷತ್ ಉತ್ತರ ಪ್ರಾಂತ ಪ್ರಚಾರಕ ಬಸವರಾಜ್ ಅವರು ಕುಟುಂಬ ಸದಸ್ಯರನ್ನು ಶ್ರೀಗಳಿಗೆ ಪರಿಚಯಿಸಿದರು. ಕಾಲೋನಿಯ ಭುವನೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ ಶ್ರೀಗಳು ಪೂಜೆ ಸಲ್ಲಿಸಿ, ಆರತಿ ಬೆಳಗಿದರು. ದೇವಸ್ಥಾನದಲ್ಲಿ …
Read More »ಬಹುಬೇಡಿಕೆ ನಟ ಡಾಲಿ ಧನಂಜಯ್ ನಿರ್ಮಾಣದ ಟಗರು ಪಲ್ಯ ಸಿನಿಮಾ ಇದೇ ತಿಂಗಳಾಂತ್ಯಕ್ಕೆ ಬಿಡುಗಡೆ ಆಗಲಿದೆ.
ಶೀರ್ಷಿಕೆ ಹಾಗೂ ಹಾಡುಗಳಿಂದ ಕನ್ನಡ ಚಿತ್ರರಂಗದಲ್ಲಿ ಟಾಕ್ ಆಗುತ್ತಿರುವ ಸಿನಿಮಾ ‘ಟಗರು ಪಲ್ಯ’. ಇಕ್ಕಟ್ ಚಿತ್ರ ಖ್ಯಾತಿಯ ನಾಗಭೂಷಣ್ ಹಾಗೂ ನೆನಪಿರಲಿ ಪ್ರೇಮ್ ಪುತ್ರಿ ಅಮೃತಾ ಪ್ರೇಮ್ ಮುಖ್ಯಭೂಮಿಕೆಯಲ್ಲಿ ಅಭಿನಯಿಸಿರುವ ಬಹುನಿರೀಕ್ಷಿತ ಸಿನಿಮಾ ‘ಟಗರು ಪಲ್ಯ’ ಚಿತ್ರದ ಬಿಡುಗಡೆ ದಿನಾಂಕವನ್ನು ನಿರ್ಮಾಪಕ ಡಾಲಿ ಧನಂಜಯ್ ಇಂದು ಅನೌನ್ಸ್ ಮಾಡಿದ್ದಾರೆ. ಡಾಲಿ ಧನಂಜಯ್ ಟ್ವೀಟ್: ಸದ್ಯ ಮೇಕಿಂಗ್ನಿಂದ ಗಮನ ಸೆಳೆಯುತ್ತಿರುವ ಟಗರು ಪಲ್ಯ ಸಿನಿಮಾ ಬಿಡುಗಡೆ ದಿನಾಂಕವನ್ನು …
Read More »ಲೋಡ್ ಶೆಡ್ಡಿಂಗ್ ಟೀಕಿಸುವ ಬಿಜೆಪಿ ಎಷ್ಟು ಪ್ರಮಾಣದಲ್ಲಿ ವಿದ್ಯುತ್ ಉತ್ಪಾದನೆ ಹೆಚ್ಚಿಸಿತ್ತು?: ಡಿ.ಕೆ.ಶಿವಕುಮಾರ್
ಬೆಂಗಳೂರು : ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದಾಗಿ ವಿದ್ಯುತ್ ಕೊರತೆಯಾಗಿದೆ. ಈ ವಿಚಾರವಾಗಿ ಟೀಕೆ ಮಾಡುವ ಬಿಜೆಪಿ ನಾಯಕರು ತಮ್ಮ ಅಧಿಕಾರಾವಧಿಯಲ್ಲಿ ಎಷ್ಟು ಪ್ರಮಾಣದಲ್ಲಿ ವಿದ್ಯುತ್ ಉತ್ಪಾದನೆ ಹೆಚ್ಚಿಸಿದ್ದರು ಎಂಬುದನ್ನು ಹೇಳಲಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಳೆ ಬಿದ್ದಿದ್ದರೆ ಸಮಸ್ಯೆ ಇರುತ್ತಿರಲಿಲ್ಲ. ಮಳೆ ಪ್ರಮಾಣ ಕಡಿಮೆಯಾಗಿರುವುದರಿಂದ ಈ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿಂದೆ ನಮ್ಮ ಸರ್ಕಾರ ಇದ್ದಾಗ ಇದೇ ಪರಿಸ್ಥಿತಿ …
Read More »ಸ್ವಯಂಪ್ರೇರಿತವಾಗಿ ಬಿಜೆಪಿ ನಾಯಕರು ನಮ್ಮನ್ನು ಸಂಪರ್ಕಿಸುತ್ತಿದ್ದಾರೆ: ಜಗದೀಶ್ ಶೆಟ್ಟರ್
ಬೆಂಗಳೂರು: ಸ್ವಯಂಪ್ರೇರಿತವಾಗಿ ಬಿಜೆಪಿ ನಾಯಕರು ನಮ್ಮನ್ನು ಸಂಪರ್ಕಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಮತ್ತಷ್ಟು ರಾಜಕೀಯ ಧ್ರುವೀಕರಣ ಆಗಲಿದೆ. ರಾಜಕೀಯ ವ್ಯವಸ್ಥೆಯಲ್ಲಿ ಕಾಂಗ್ರೆಸ್ ಜನಮನ್ನಣೆ ಗಳಿಸ್ತಿದೆ. ಬೇರೆ ರಾಜ್ಯಗಳಲ್ಲೂ ಪ್ರಭಾವ ಬೀರುತ್ತಿದೆ. ಚುನಾವಣೆಯ ಫಲಿತಾಂಶ ಪ್ರಭಾವ ಬೀರುತ್ತಿದೆ. ನಾವು ಘೋಷಿಸಿದ್ದ ಐದು ಗ್ಯಾರಂಟಿಗಳನ್ನು ಯಾರೂ ನಿರೀಕ್ಷಿಸಿದ ರೀತಿಯಲ್ಲಿ ಈಡೇರಿಸಿದ್ದೇವೆ. ಇದು ಇಡೀ ರಾಷ್ಟ್ರಕ್ಕೆ ಮಾದರಿಯಾಗಿದೆ ಎಂದು ಜಗದೀಶ್ ಶೆಟ್ಟರ್ ತಿಳಿಸಿದರು. ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಮುಂದಿನ ಪಂಚ ರಾಜ್ಯಗಳ ಚುನಾವಣೆ ಸೆಮಿಫೈನಲ್. ಲೋಕಸಭೆ …
Read More »ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಜೆ.ಪಿ.ನಡ್ಡಾ ಪ್ರಕರಣಕ್ಕೆ ಹೈಕೋರ್ಟ್ ತಡೆ
ಧಾರವಾಡ : ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಧಾರವಾಡ ಹೈಕೋರ್ಟ್ ಪೀಠ ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶಿಸಿದೆ. ಕಳೆದ ವಿಧಾನಸಭೆ ಚುನಾವಣೆ ವೇಳೆ ನಡ್ಡಾ ಅವರು ಮತದಾರರಿಗೆ ಆಮಿಷ ಒಡ್ಡಿದ್ದಾರೆಂದು ದೂರು ದಾಖಲಿಸಲಾಗಿತ್ತು. ಹಾವೇರಿ ಜಿಲ್ಲೆಯ ಶಿಗ್ಗಾಂವಿಯಲ್ಲಿ ಭಾಷಣ ಮಾಡುವಾಗ ಮತದಾರರ ಮೇಲೆ ಪ್ರಧಾನಿ ಮೋದಿ ಆಶೀರ್ವಾದ ಇರುತ್ತೆ ಎಂದು ಅವರು ಹೇಳಿದ್ದರು. ಈ ಸಂದರ್ಭದಲ್ಲಿ ಚುನಾವಣಾ ನೀತಿ …
Read More »ಸಿಲಿಕಾನ್ ಸಿಟಿಯಲ್ಲಿ ಹಾಡಹಗಲೇ ದುಷ್ಕರ್ಮಿಗಳು ಚಿನ್ನಾಭರಣ ಅಂಗಡಿ ಮಾಲೀಕನ ಮೇಲೆ ಗುಂಡಿನ ದಾಳಿ
ಬೆಂಗಳೂರು: ಸಿನಿಮೀಯ ಶೈಲಿಯಲ್ಲಿ ಬಂದ ನಾಲ್ವರು ದರೋಡೆಕೋರರ ತಂಡ ಹಾಡಹಗಲೇ ಜ್ಯುವೆಲ್ಲರಿ ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ದರೋಡೆ ಮಾಡಿರುವ ಘಟನೆ ಬ್ಯಾಡರಹಳ್ಳಿ ಠಾಣಾ ವ್ಯಾಪ್ತಿಯ ಪೈಪ್ ಲೈನ್ ರಸ್ತೆಯಲ್ಲಿ ನಡೆದಿದೆ. ಇಂದು ಬೆಳಗ್ಗೆ 10:45ರ ಸುಮಾರಿಗೆ ಘಟನೆ ನಡೆದಿದ್ದು, ಶಾಪ್ ಮಾಲೀಕ ಮನೋಜ್ ಲೋಹರ್ (30) ಮೇಲೆ ಗುಂಡು ಹಾರಿಸಿರುವ ದುಷ್ಕರ್ಮಿಗಳು 1 ಕೆ.ಜಿ ತೂಕದ ಚಿನ್ನಾಭರಣದೊಂದಿಗೆ ಪರಾರಿಯಾಗಿದ್ದಾರೆ. ಬೆಳಗ್ಗೆ 2 ದ್ವಿಚಕ್ರ ವಾಹನಗಳಲ್ಲಿ ಮಾರಕಾಸ್ತ್ರಗಳ ಸಹಿತ ಬ್ಯಾಡರಹಳ್ಳಿ …
Read More »ನವೆಂಬರ್ 1 ರಂದು ಕರಾಳ ದಿನಾಚರಣೆಗೆ ಅನುಮತಿ ಇಲ್ಲ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ
ಬೆಳಗಾವಿ : ಮಹಾತ್ಮಾ ಪುಲೆ ಆರೋಗ್ಯ ಯೋಜನೆಯನ್ನು ಕರ್ನಾಟಕದಲ್ಲಿ ಜಾರಿಗೊಳಿಸಲು ನಿರ್ಣಯ ಕೈಗೊಂಡಿರುವ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಕನ್ನಡಪರ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ಈ ಕುರಿತು ಕರ್ನಾಟಕ ಸರ್ಕಾರ ಗಂಭೀರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲಾಗುತ್ತಿದೆ. ಬೆಳಗಾವಿಯ ಜಿ.ಪಂ.ಸಭಾಭವನದಲ್ಲಿ ಇಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅಧ್ಯಕ್ಷತೆಯಲ್ಲಿ ನಡೆದ ಕರ್ನಾಟಕ ರಾಜ್ಯೋತ್ಸವದ ಪೂರ್ವಭಾವಿ ಸಭೆಯಲ್ಲಿ ಕನ್ನಡಪರ ಸಂಘಟನೆಗಳು ಮಹಾರಾಷ್ಟ್ರ ಸರ್ಕಾರದ ನಿರ್ಣಯ ಖಂಡಿಸಿದರು. ಕರ್ನಾಟಕದಲ್ಲಿ ಮಹಾರಾಷ್ಟ್ರ ಸರ್ಕಾರ ಆರೋಗ್ಯ ಯೋಜನೆ ಜಾರಿಗೊಳಿಸುತ್ತಿದೆ. …
Read More »ಬೆಳಗಾವಿ: ಎಣ್ಣೆ ಪಾರ್ಟಿ ಮಾಡಿದ್ದ 7 ಸಿಬ್ಬಂದಿ ಅಮಾನತು ಮಾಡಿ DHO ಆದೇಶ
ಬೆಳಗಾವಿ : ನಗರದ ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿಯಲ್ಲಿ ಎಣ್ಣೆ ಪಾರ್ಟಿ ಮಾಡಿದ್ದ ಆರೋಪಕ್ಕೆ ಸಂಬಂಧಪಟ್ಟಂತೆ ಏಳು ಸಿಬ್ಬಂದಿಯನ್ನು ಅಮಾನತು ಮಾಡಿ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಮಹೇಶ ಕೋಣಿ ಬುಧವಾರ ಆದೇಶ ಹೊರಡಿಸಿದ್ದಾರೆ. ಜಿಲ್ಲಾ ಆರೋಗ್ಯಾಧಿಕಾರಿ ಕಾರು ಚಾಲಕ ಮಂಜುನಾಥ ಪಾಟೀಲ್, ಸಿಬ್ಬಂದಿ ಮಹೇಶ ಹಿರೇಮಠ, ರಮೇಶ ನಾಯಿಕ, ಸತ್ಯಪ್ಪ ತಮ್ಮನ್ನವರ, ಅನಿಲ ತಿಪ್ಪನ್ನವರ, ದೀಪಕ ಗಾವಡೆ, ಯಲ್ಲಪ್ಪ ಮುನ್ನವಳ್ಳಿ ಎಂಬವರನ್ನು ಅಮಾನತು ಮಾಡಲಾಗಿದೆ. ನಗರದ ಟಿಳಕವಾಡಿಯಲ್ಲಿರುವ ಡಿಹೆಚ್ಒ ಕಚೇರಿ ಹಿಂಭಾಗದಲ್ಲಿರುವ …
Read More »