Breaking News

ಕಾವೇರಿ ನೀರು ಹಂಚಿಕೆ ವಿವಾದ: ತಮಿಳುನಾಡಿನ 8 ಜಿಲ್ಲೆಗಳಲ್ಲಿ ಬಂದ್​ಗೆ ಕರೆ

ನಾಗಪಟ್ಟಣಂ (ತಮಿಳುನಾಡು) : ಕರ್ನಾಟಕ ಮತ್ತು ತಮಿಳುನಾಡು ನಡುವಿನ ಕಾವೇರಿ ನದಿ ನೀರು ಹಂಚಿಕೆ ಸಮಸ್ಯೆ ಬಗೆಹರಿಯುವಂತೆ ಕಾಣುತ್ತಿಲ್ಲ. ಇಂದು ತಮಿಳುನಾಡಿನ 8 ಜಿಲ್ಲೆಗಳಲ್ಲಿ ಬಂದ್​ಗೆ ಕರೆ ನೀಡಲಾಗಿದೆ. ನಾಗಪಟ್ಟಣಂ ಜಿಲ್ಲೆಯಲ್ಲಿ ಸುಮಾರು 12,000 ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆಗಳನ್ನು ಬಂದ್​ ಮಾಡಿರುವ ವ್ಯಾಪಾರಿಗಳು ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಕುರುವಾಯಿ ಭತ್ತದ ಕೃಷಿ ಉಳಿಸಲು ಮತ್ತು ಸಾಂಬಾ ಕೃಷಿ ಪ್ರಾರಂಭಿಸಲು ಕರ್ನಾಟಕ ಸರ್ಕಾರವು ಕಾವೇರಿ ನೀರನ್ನು ಸಮರ್ಪಕವಾಗಿ ಬಿಡುವಂತೆ …

Read More »

ಗೂಗಲ್​ ಸೈನ್​ಇನ್​ಗೆ ಕಡ್ಡಾಯವಾಗಲಿದೆ ಪಾಸ್​ ಕೀ.. ಏನಿದು ಹೊಸ ವಿಧಾನ?

ನವದೆಹಲಿ : ಬರುವ ದಿನಗಳಲ್ಲಿ ಗೂಗಲ್ ಸೇವೆಗಳಿಗೆ ಸೈನ್ ಇನ್ ಮಾಡಲು ಪಾಸ್​ವರ್ಡ್​ ಬದಲಾಗಿ ಪಾಸ್​ಕೀ ಬಳಕೆ ಕಡ್ಡಾಯವಾಗಲಿದೆ. ಪಾಸ್​ಕೀ (ಪಾಸ್ ವರ್ಡ್ ಗಳಿಗೆ ಪರ್ಯಾಯ) ಮೂಲಕವೇ ಸೈನ್​ ಇನ್ ಮಾಡುವುದು ಡೀಫಾಲ್ಟ್ ಸೈನ್ – ಇನ್ ಪ್ರಕ್ರಿಯೆ ಆಗಲಿದೆ ಎಂದು ಗೂಗಲ್ ಹೇಳಿದೆ. ಪಾಸ್ ಕೀ ಬಳಸಿ ಬಳಕೆದಾರರು ಬಯೋಮೆಟ್ರಿಕ್ ಸೆನ್ಸರ್ (ಫಿಂಗರ್ ಪ್ರಿಂಟ್ ಅಥವಾ ಮುಖ ಗುರುತಿಸುವಿಕೆಯಂತಹ), ಪಿನ್ ಅಥವಾ ಪ್ಯಾಟರ್ನ್​ಗಳ ಮೂಲಕ ಅಪ್ಲಿಕೇಶನ್ ಗಳು ಮತ್ತು ವೆಬ್ …

Read More »

2ಎ ಮೀಸಲಾತಿ ಹೋರಾಟ: ಅ.13 ರಂದು ಗಬ್ಬೂರು ಬೈಪಾಸ್​ನಲ್ಲಿ ಇಷ್ಟಲಿಂಗ ಮಹಾಪೂಜೆ: ಬಸವಜಯ ಮೃತ್ಯಂಜಯ ಶ್ರೀ

ಹುಬ್ಬಳ್ಳಿ: ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜದ ಧಾರವಾಡ ಜಿಲ್ಲಾ ಘಟಕದ ಆಶ್ರಯದಲ್ಲಿ ಲಿಂಗಾಯತ ಪಂಚಮಸಾಲಿ 2ಎ ಮೀಸಲಾತಿಗಾಗಿ ಒತ್ತಾಯಿಸಿ 6 ನೇ ಹಂತದ ಚಳವಳಿಯನ್ನು ಅಕ್ಟೋಬರ್ 13 ರಂದು ಬೆಳಗ್ಗೆ 10ಕ್ಕೆ ನಗರದ ಹೊರವಲಯದ ಗಬ್ಬೂರು ಬೈಪಾಸ್ ಪಕ್ಕದ ಮೈದಾನದಲ್ಲಿ ಆಯೋಜನೆ ಮಾಡಲಾಗಿದೆ ಎಂದು ಕೂಡಲಸಂಗಮ ಪೀಠದ ಬಸವಜಯ ಮೃತ್ಯಂಜಯ ಸ್ವಾಮೀಜಿ ತಿಳಿಸಿದರು. ಹೋರಾಟ ಯಾತ್ರೆ: ನಗರದಲ್ಲಿ ಇಂದು (ಬುಧವಾರ) ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ”ಈಗಾಗಲೇ ಬೆಳಗಾವಿ‌ ಜಿಲ್ಲೆಯ ನಿಪ್ಪಾಣಿಯಲ್ಲಿ ಹೋರಾಟ …

Read More »

‘ಯುವ ಪೀಳಿಗೆಯನ್ನು ಪ್ರೋತ್ಸಾಹಿಸಲು ಬಿಗ್ ಬಾಸ್​ಗೆ ಹೋಗಿದ್ದೆ’: ಶಾಸಕ‌ ಪ್ರದೀಪ್ ಈಶ್ವರ್

ಕನ್ನಡ ಬಿಗ್ ಬಾಸ್‍ ಸೀಸನ್‍ 10ಕ್ಕೆ ಎಂಟ್ರಿ ಕೊಟ್ಟು ಬಂದಿರುವ ಶಾಸಕ‌ ಪ್ರದೀಪ್ ಈಶ್ವರ್, ದೊಡ್ಮನೆಗೆ ಹೋದ ಹಿಂದಿನ ಕಾರಣವನ್ನು ಬಹಿರಂಗಪಡಿಸಿದ್ದಾರೆ. ಬಹುನಿರೀಕ್ಷಿತ ಕನ್ನಡ ಬಿಗ್ ಬಾಸ್‍ ಸೀಸನ್‍ 10 ಪಾರಂಭಗೊಂಡಿದೆ. ಜನಪ್ರಿಯ ರಿಯಾಲಿಟಿ ಶೋ ಆರಂಭದಲ್ಲೇ ಸದ್ದು ಮಾಡುತ್ತಿದೆ. ಚಿಕ್ಕಬಳ್ಳಾಪುರದ ಶಾಸಕ ಪ್ರದೀಪ್‍ ಈಶ್ವರ್ ಬಿಗ್ ಬಾಸ್ ಮನೆಗೆ ಹೋಗಿ ಬಂದಿದ್ದಾರೆ. ಅಷ್ಟಕ್ಕೂ ಒಂದು ದಿನದ ಮಟ್ಟಿಗೆ ಬಿಗ್ ಬಾಸ್ ‌ಮನೆಗೆ ಹೋಗಿದ್ದ ಕಾರಣವೇನು? ಎಂಬುದರ ಬಗ್ಗೆ ಸ್ವತಃ …

Read More »

ಸಿಎಂಗೆ ದಸರಾ ಆಹ್ವಾನ ಪತ್ರಿಕೆ ನೀಡಿದ ಸಚಿವ ಹೆಚ್‌.ಸಿ.ಮಹದೇವಪ್ಪ

ಬೆಂಗಳೂರು: ಅಪ್ಪನ ಹೆಗಲ ಮೇಲೆ ಕುಳಿತು ದಸರಾ ನೋಡುತ್ತಿದ್ದ ನನಗೆ ಮತ್ತೊಮ್ಮೆ ಮುಖ್ಯಮಂತ್ರಿಯಾಗಿ ದಸರಾದಲ್ಲಿ ಪಾಲ್ಗೊಳ್ಳುವ ಅವಕಾಶ ಸಿಕ್ಕಿದ್ದು ಸೌಭಾಗ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಂದಿನ ನೆನಪುಗಳನ್ನು ಸ್ಮರಿಸಿದರು. ದಸರಾದಲ್ಲಿ ಭಾಗವಹಿಸಲು ನೀಡಿದ ಆಹ್ವಾನ ಪತ್ರಿಕೆಯನ್ನು ಅವರು ಸಂತೋಷದಿಂದ ಸ್ವೀಕರಿಸಿದರು. ಸಿಎಂ ಸಿದ್ದರಾಮಯ್ಯನವರಿಗೆ ಇಂದು ಮೈಸೂರು ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ ನೇತೃತ್ವದ ಜಿಲ್ಲಾಡಳಿತದ ನಿಯೋಗ ದಸರಾ ಆಹ್ವಾನಪತ್ರಿಕೆ ನೀಡಿತು. ಗೃಹ ಕಚೇರಿ ಕೃಷ್ಣಾಗೆ ಆಗಮಿಸಿದ ನಿಯೋಗದಲ್ಲಿ ಮೇಯರ್ ಶಿವಕುಮಾರ್, ಶಾಸಕ ರವಿಶಂಕರ್, …

Read More »

ಅಕ್ರಮ ಜಾಹೀರಾತು ತಡೆಯುವಲ್ಲಿ ವಿಫಲವಾದ ಅಧಿಕಾರಿಗಳ ವಿರುದ್ಧ ಕ್ರಮ:

ಬೆಂಗಳೂರು: ರಾಜಧಾನಿ ಬೆಂಗಳೂರು ನಗರದಲ್ಲಿ ಅನಧಿಕೃತ ಜಾಹೀರಾತುಗಳ ಅಳವಡಿಕೆಯ ವಿರುದ್ಧ ಕ್ರಮ ಕೈಗೊಳ್ಳದ ಹಾಗೂ ಜಾಹೀರಾತು ಅಕ್ರಮ ಅಳವಡಿಕೆ ತಡೆಗೆ ವಿಫಲರಾದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಇಂದು ಹೈಕೋರ್ಟ್‌ಗೆ ತಿಳಿಸಿದೆ.   ನಗರದಲ್ಲಿ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಮತ್ತ ಹೋರ್ಡಿಂಗ್‌ ಹಾವಳಿ ತಡೆಯಲು ರಾಜ್ಯ ಸರ್ಕಾರ ಮತ್ತು ಬಿಬಿಎಂಪಿಗೆ ನಿರ್ದೇಶಿಸುವಂತೆ ಕೋರಿ ಮಾಯಿಗೇಗೌಡ ಮತ್ತಿತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ …

Read More »

ಮೈಸೂರು ದಸರಾ: 10 ಕಡೆ ಸಾಂಸ್ಕೃತಿಕ ಕಾರ್ಯಕ್ರಮಗಳು- ಸಂಪೂರ್ಣ ವಿವರ..

ಮೈಸೂರು : ಈ ಬಾರಿಯ ಸಾಂಪ್ರದಾಯಿಕ ದಸರಾದಲ್ಲಿ 10 ಕಡೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ಮುಖ್ಯವಾಗಿ, ಅಂಬಾವಿಲಾಸ ಅರಮನೆಯ ಮುಂಭಾಗದ ಸಾಂಸ್ಕೃತಿಕ ವೇದಿಕೆ ಸೇರಿದಂತೆ ನಗರದ ಇತರ 9 ಕಡೆಗಳಲ್ಲಿ ವಿವಿಧ ಕಾರ್ಯಕ್ರಮಗಳು ಏರ್ಪಾಡಾಗಿವೆ.   ಸುಗಮ ಹಾಗೂ ಶಾಸ್ತ್ರೀಯ ಸಂಗೀತ, ಭರತನಾಟ್ಯ, ಇತರೆ ಪ್ರಕಾರಗಳ ನೃತ್ಯ, ನಾಟಕ, ಜಾನಪದ, ನಿರೂಪಣೆ, ಜಾದು, ಹರಿಕಥೆ, ಭಕ್ತಿ ಗೀತೆಗಳು, ತತ್ವಪದಗಳು, ವಾದ್ಯ, ಸೂತ್ರ ಸಲಾಕೆ ಸೇರಿದಂತೆ ಇನ್ನೂ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. …

Read More »

ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಸ್ಟಾಫ್​ ನರ್ಸ್ ಹುದ್ದೆಗಳು;​ ನೇಮಕಾತಿಗೆ ಕೆಇಎ ಅಧಿಸೂಚನೆ

ಬೆಂಗಳೂರಿನ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಒಟ್ಟು 100 ಸ್ಟಾಫ್​ ನರ್ಸ್​​ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ಸ್ಟಾಫ್​ ನರ್ಸ್​​ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಿದೆ. ರಾಜ್ಯ ಸರ್ಕಾರದ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಗಳಲ್ಲಿ ಖಾಲಿ ಇರುವ ಒಟ್ಟು ಹುದ್ದೆಗಳನ್ನು ತುಂಬಲು ಅರ್ಜಿ ಆಹ್ವಾನಿಸಲಾಗಿದೆ. ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಅಧಿಸೂಚನೆಹುದ್ದೆಗಳ ವಿವರ: 100 ಸ್ಟಾಫ್​ ನರ್ಸ್​​ …

Read More »

ಹಲವು ವಿಶೇಷತೆಗಳಿಂದ ಕೂಡಿದ ತುಕ್ಕಾನಟ್ಟಿ ಹಸರಬ್ಬ- ಶಾಸಕ ಬಾಲಚಂದ್ರ ಜಾರಕಿಹೊಳಿ ಮೆಚ್ಚುಗೆ

* *ಲಕ್ಷ್ಮೀ ದೇವಿ ದರ್ಶನ ಪಡೆದ ನಂತರ ಸಾರ್ವಜನಿಕರನ್ನು ಭೇಟಿ ಮಾಡಿದ ಬಾಲಚಂದ್ರ ಜಾರಕಿಹೊಳಿ* ಮೂಡಲಗಿ- ತುಕ್ಕಾನಟ್ಟಿ ಲಕ್ಷ್ಮೀ ದೇವಿಯ ಜಾತ್ರೆಯ ನಿಮಿತ್ಯವಾಗಿ ನಡೆಯುವ ಹಸರಬ್ಬವು ತನ್ನದೇಯಾದ ಪ್ರಸಿದ್ಧಿಯನ್ನು ಪಡೆದಿದ್ದು, ಹಲವು ವಿಶೇಷತೆಗಳಿಂದ ಕೂಡಿರುವ ತುಕ್ಕಾನಟ್ಟಿ ಹಸರಬ್ಬ ಎಂದು ಶಾಸಕ, ಕಹಾಮ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಅವರು ತಮ್ಮ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ತಾಲೂಕಿನ ತುಕ್ಕಾನಟ್ಟಿ ಗ್ರಾಮದ ಲಕ್ಷ್ಮೀದೇವಿಯ ದರ್ಶನ ಪಡೆದು ಮಾತನಾಡಿದ ಅವರು, ಗ್ರಾಮದ ಎಲ್ಲ ಸಮಾಜ ಬಾಂಧವರು ದೇವಿಗೆ …

Read More »

ಗ್ರೇಮಿಂಗ್​ ಆಯಪ್​ನಲ್ಲಿ 1.5 ಕೋಟಿ ರೂ. ಬಹುಮಾನ ಗೆದ್ದ ಪಿಎಸ್​ಐ: ಒಂದೇ ದಿನದಲ್ಲಿ ಕೋಟ್ಯಧಿಪತಿಯಾದ ಅಧಿಕಾರಿ

Gaming app: ಮಹಾರಾಷ್ಟ್ರದ ಪಿಂಪ್ರಿ ಚಿಂಚ್‌ವಾಡ್ ಪೊಲೀಸ್ ಕಮಿಷನರೇಟ್‌ನ ಪೊಲೀಸ್ ಸಬ್-ಇನ್‌ಸ್ಪೆಕ್ಟರ್ (ಪಿಎಸ್‌ಐ) ಗೇಮಿಂಗ್​ ಆಯಪ್​​ನಲ್ಲಿ 1.5 ಕೋಟಿ ರೂಪಾಯಿ ಬಹುಮಾನ ಗೆದ್ದಿದ್ದಾರೆ. ಈ ಪೊಲೀಸ್ ಸಬ್ ಇನ್ಸ್​​ಪೆಕ್ಟರ್​​ ಹೆಸರು ಸೋಮನಾಥ್ ಝೆಂಡೆ. ಈ ಪಿಎಸ್​ಐ ಒಂದೇ ದಿನದಲ್ಲಿ ಕೋಟ್ಯಧಿಪತಿಯಾಗಿದ್ದಾರೆ.   ಪುಣೆ (ಮಹಾರಾಷ್ಟ್ರ): ದೇಶದೆಲ್ಲೆಡೆ ವಿಶ್ವಕಪ್ ಜ್ವರ ಕಾಣಿಸಿಕೊಂಡಿದೆ. ಕ್ರಿಕೆಟ್ ಪ್ರೇಮಿಗಳಿಗೆ ಇದು ಅತ್ಯಂತ ಸಂತಸದ ಕ್ಷಣ. ಕ್ರಿಕೆಟ್ ಎಲ್ಲರ ಅಚ್ಚುಮೆಚ್ಚಿನ ಆಟ. ಕೆಲವರು ಮೈದಾನದಲ್ಲಿ ಆಡುತ್ತಾರೆ ಮತ್ತು ಕೆಲವರು …

Read More »