Breaking News

ರಾಜ್ಯದ ಹಲವು ಭಾಗಗಳಲ್ಲಿ ಇನ್ನು ಐದು ದಿನ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳು ಸೇರಿದಂತೆ ಹಲವು ಭಾಗಗಳಲ್ಲಿ ಇನ್ನು ಐದು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಐದು ಜಿಲ್ಲೆಗಳಲ್ಲಿ ರೆಡ್​ ಅಲರ್ಟ್​: ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಗಾಳಿಯ ವೇಗ ಗಂಟೆಗೆ 40-50ಕಿ.ಮೀ ಬೀಸಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. 11 ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಆರೆಂಜ್​ ಅಲರ್ಟ್​ …

Read More »

ಕಂಪ್ಲಿ ಸೇತುವೆ ಮುಳುಗಡೆ; ಬಳ್ಳಾರಿ – ಗಂಗಾವತಿ ಸಂಪರ್ಕ ಸ್ಥಗಿತ –

ಬಳ್ಳಾರಿ: ಮಲೆನಾಡು ಭಾಗದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತುಂಗಭದ್ರಾ ಜಲಾಶಯದಿಂದ 1 ಲಕ್ಷ ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಲಾಗಿದೆ. ಪರಿಣಾಮ ಕಂಪ್ಲಿ ಸೇತುವೆ ಮುಳುಗಡೆಯಾಗಿದ್ದು, ಬಳ್ಳಾರಿ – ಗಂಗಾವತಿ ಸಂಪರ್ಕ ಸ್ಥಗಿತಗೊಂಡಿದೆ. ಮಲೆನಾಡು ಪ್ರದೇಶ ಸೇರಿದಂತೆ ತುಂಗಭದ್ರಾ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದೆ. ಮಳೆ ಪ್ರಮಾಣ ಹೆಚ್ಚಾದ ಹಿನ್ನೆಲೆಯಲ್ಲಿ ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಕೂಡ ಗಣನೀಯವಾಗಿ ಹೆಚ್ಚಾಗಿದೆ. ಸದ್ಯ 1,07,500 ಕ್ಯೂಸೆಕ್ ನೀರಿನ ಒಳ ಹರಿವು ಇದೆ. ಜಲಾಶಯದ ಸುರಕ್ಷತಾ ದೃಷ್ಟಿಯಿಂದ …

Read More »

ಪಿಒಪಿ ಮೂರ್ತಿ ಬ್ಯಾನ್ ವಿಚಾರಕ್ಕೆ ಡಿಸಿ ರೋಷನ್ ಹೇಳಿದ್ದೇನು?

ಬೆಳಗಾವಿ: ಪಿಒಪಿ ಗಣೇಶ ಮೂರ್ತಿಗಳನ್ನು ಕಟ್ಟುನಿಟ್ಟಾಗಿ ಬ್ಯಾನ್ ಮಾಡುತ್ತೇವೆ. ಅದೇ ರೀತಿ ನಮ್ಮ ಜಿಲ್ಲೆಯ ಮೂಲಕ ಬೇರೆ ರಾಜ್ಯಗಳಿಗೆ ಸಾಗಿಸುವುದನ್ನು ನಿಲ್ಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸ್ಪಷ್ಟಪಡಿಸಿದರು. ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳ ಜೊತೆಗೆ ಇಂದು ನಗರದಲ್ಲಿ ಸಭೆ ನಡೆಸಿದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಎರಡು ತಿಂಗಳ ಹಿಂದೆ ಪಿಒಪಿ ಮೂರ್ತಿಗಳ ವಿಚಾರಕ್ಕೆ ಸಭೆ ಮಾಡಿದ್ದೇವೆ. ನಮ್ಮ ಜಿಲ್ಲೆಯಿಂದ ಬೇರೆ ರಾಜ್ಯಗಳಿಗೆ ಪಿಒಪಿ ಮೂರ್ತಿಗಳನ್ನು ಸಾಗಿಸುತ್ತಿರುವುದು ನಮ್ಮ ಗಮನಕ್ಕೆ …

Read More »

ಹೋರಿಗಳ ಕತ್ತು ಕೊಯ್ದು ಪರಾರಿಯಾಗಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ನೆಲಮಂಗಲ : ಇಲ್ಲಿಯ ಅರಳಸಂದ್ರ ಗ್ರಾಮದಲ್ಲಿ ಹಳ್ಳಿಕಾರ್ ತಳಿಯ ಎರಡು ಹೋರಿಗಳ ಕತ್ತು ಕೊಯ್ದು ನಡುರಸ್ತೆಯಲ್ಲಿ ಎಸೆದ ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರು ಆರೋಪಿಗಳನ್ನು ನೆಲಮಂಗಲ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಎಂಎಸ್ ಪಾಳ್ಯದ ನಿವಾಸಿ ಇಮ್ರಾನ್ (30), ಮಹಮ್ಮದ್ ಸಾಬ್ ಪಾಳ್ಯದ ನಿವಾಸಿ ಸಯ್ಯದ್ ನವಾಜ್ (35), ಶ್ರೀನಿಧಿ ಬಡಾವಣೆಯ ನಿವಾಸಿ ವೆಂಕಟೇಶ್ ಅಲಿಯಾಸ್ ಮಹಮ್ಮದ್ ಶುಯಾಬ್ (20) ಬಂಧಿತ ಆರೋಪಿಗಳು. ಬಂಧನದ ಬಗ್ಗೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಘಟನೆ …

Read More »

ಯೋಗೀಶ್‌ಗೌಡ ಕೊಲೆ ಪ್ರಕರಣ : ಆರೋಪಿ ಅಶ್ವತ್ಥ್‌ ಜಾಮೀನು ರದ್ದುಪಡಿಸಿದ ಹೈಕೋರ್ಟ್‌

ಬೆಂಗಳೂರು : ಧಾರವಾಡ ಜಿಲ್ಲೆಯ ಹೆಬ್ಬಳ್ಳಿಯ ಜಿಲ್ಲಾ ಪಂಚಾಯತ್​ ಸದಸ್ಯರಾಗಿದ್ದ ಯೋಗೀಶ್‌ಗೌಡ ಗೌಡರ ಕೊಲೆ ಪ್ರಕರಣದ ಆರೋಪಿಯಾಗಿದ್ದ ಅಶ್ವತ್ಥ್​ ಅವರ ಜಾಮೀನನ್ನು ಹೈಕೋರ್ಟ್​ ತಾತ್ಕಾಲಿಕವಾಗಿ ರದ್ದುಪಡಿಸಿ ಆದೇಶ ಹೊರಡಿಸಿದೆ. ಬಿಜೆಪಿ ಸದಸ್ಯ ಯೋಗೀಶ್‌ಗೌಡ ಕೊಲೆ ಪ್ರಕರಣದ ಒಂಬತ್ತನೇ ಆರೋಪಿ ಅಶ್ವತ್ಥ್‌ ಎಂಬುವರು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ಐ. ಅರುಣ್‌ ಅವರ ಏಕಸದಸ್ಯ ಪೀಠ ಈ ಆದೇಶ ನೀಡಿದೆ. ಅಲ್ಲದೆ, ಪ್ರಕರಣ ಸಂಬಂಧ ಇತರೆ ಸಾಕ್ಷಿಗಳ …

Read More »

ಅಮೆರಿಕದ ಐಸಿಎಸ್ ಇಂಟರ್‌ನ್ಯಾಷನಲ್‌ನಿಂದ ಉಡುಪಿಯ ಛಾಯಾಚಿತ್ರ ಪತ್ರಕರ್ತ ಆಸ್ಟ್ರೋ ಮೋಹನ್​ಗೆ ಗೌರವ ಫೆಲೋಶಿಪ್‌

ಉಡುಪಿ: ವಿಶ್ವ ಛಾಯಾಗ್ರಹಣ ದಿನದಂದು ಖ್ಯಾತ ಛಾಯಾಚಿತ್ರ ಪತ್ರಕರ್ತ ಆಸ್ಟ್ರೋ ಮೋಹನ್ ಅವರಿಗೆ ಅಮೆರಿಕದ ಇಮೇಜ್‌ ಕಾಲಿಗ್‌ ಸೊಸೈಟಿ ಇಂಟರ್‌ನ್ಯಾಷನಲ್‌ (ICS) ವತಿಯಿಂದ ಅತ್ಯುನ್ನತ ಗೌರವಗಳಲ್ಲಿ ಒಂದಾದ ಆನರರಿ ಫೆಲೋಶಿಪ್‌ (Hon.FICS) ಅನ್ನು ಪ್ರದಾನ ಮಾಡಲಾಗಿದೆ. ಟೋನಿ ಲೀ ಕಿಮ್ ಥುವಾನ್ APSA, Hon.EFIAP, ಕು. ಸಾರಾ ತೈ ಮೇ ಲಿನ್ ARPS ಹಾಗೂ ICS ಗೌರವ ಸಮಿತಿ ಅವರ ನೇತೃತ್ವದಲ್ಲಿ ನೀಡಲಾದ ಈ ಪ್ರಶಸ್ತಿ, ಛಾಯಾಗ್ರಹಣ ಕಲೆ ಹಾಗೂ ಸಂಸ್ಕೃತಿಯ …

Read More »

ಈ ವರ್ಷ 5 ಸಾವಿರ ಸರ್ಕಾರಿ ಶಾಲೆಗಳಲ್ಲಿ ಎಲ್​​ಕೆಜಿ, ಯುಕೆಜಿ ಕಾರ್ಯಾರಂಭ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಪ್ರಮಾಣ ಹೆಚ್ಚಿಸಲು ಹಾಗೂ ಗುಣಮಟ್ಟದ ಶಿಕ್ಷಣ ನೀಡುವುದು ಸರ್ಕಾರದ ಆದ್ಯತೆಯಾಗಿದ್ದು, ಈ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಿದ್ದೇವೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ತಿಳಿಸಿದರು. ವಿಧಾನಪರಿಷತ್​​ನಲ್ಲಿ ಪ್ರಶ್ನೋತ್ತರ ಅವಧಿಯ ವೇಳೆ ಕಾಂಗ್ರೆಸ್ ಸದಸ್ಯ ಅನಿಲ್ ಕುಮಾರ್ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕಳೆದ ಮೂರು ವರ್ಷಗಳಲ್ಲಿ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಪ್ರಮಾಣ ಕಡಿಮೆಯಾಗಿದೆ. ಗುಣಮಟ್ಟದ ಶಿಕ್ಷಣ ಕೊಡುವ ಪ್ರಯತ್ನ …

Read More »

ಕಾನೂನು ಮೀರಿ ಬಗರ್ ಹುಕುಂ ಅರ್ಜಿ ವಿಲೇವಾರಿ ಇಲ್ಲ:ಕೃಷ್ಣ ಬೈರೇಗೌಡ

ಬೆಂಗಳೂರು: ಬಗರ್ ಹುಕುಂ ಅರ್ಜಿಗಳ ವಿಲೇವಾರಿ ವಿಚಾರದಲ್ಲಿ ಸರ್ಕಾರ ಅಥವಾ ಅಧಿಕಾರಿಗಳು ಕಾನೂನು ಮೀರಿ ನಡೆದಿಲ್ಲ. ಒಂದು ವೇಳೆ ರೈತರಿಗೆ ಅನ್ಯಾಯವಾಗಿದ್ದರೆ ನಮ್ಮ ಗಮನಕ್ಕೆ ತನ್ನಿ ಸಮಸ್ಯೆಯನ್ನು ಬಗೆಹರಿಸುತ್ತೇನೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ವಿಧಾನಸಭೆಯಲ್ಲಿ ಭರವಸೆ ನೀಡಿದ್ದಾರೆ. ಇಂದು ಪ್ರಶ್ನೋತ್ತರ ವೇಳೆ ಜೆಡಿಎಸ್ ಶಾಸಕ ಎಂ.ಟಿ. ಕೃಷ್ಣಪ್ಪ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಬಗರ್ ಹುಕುಂ ಸಮಿತಿ ಮುಂದೆ ಅಧಿಕಾರಿಗಳು ಅರ್ಹ ಅರ್ಜಿಗಳನ್ನು ಮಾತ್ರ ಸಲ್ಲಿಸಬೇಕು ಎಂಬ ಕಾನೂನು ಇದೆ. …

Read More »

ತುಂಗಭದ್ರಾ ಜಲಾಶಯದಿಂದ ನೀರು ಬಿಡುಗಡೆ

ಗಂಗಾವತಿ (ಕೊಪ್ಪಳ): ತುಂಗಭದ್ರಾ ಜಲಾಶಯದಿಂದ ನದಿಗೆ ಒಂದು ಲಕ್ಷ ಕ್ಯೂಸೆಕ್‌ಗೂ ಅಧಿಕ ಪ್ರಮಾಣದ ನೀರು ಹರಿಬಿಡಲಾಗುತ್ತಿದೆ. ಹೀಗಾಗಿ, ಯಾವುದೇ ಕ್ಷಣದಲ್ಲಿ ತಾಲೂಕಿನ ಕಂಪ್ಲಿ ಸೇತುವೆ ಮುಳುಗಡೆಯಾಗುವ ಭೀತಿ ಎದುರಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ, ಸೇತುವೆ ಮೇಲೆ ಸಂಚಾರ ಸ್ಥಗಿತಗೊಳಿಸಲು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ಸಾರ್ವಜನಿಕ ಹಾಗೂ ರಸ್ತೆ ಸಂಚಾರದ ಹಿತದೃಷ್ಟಿಯಿಂದ ಸೇತುವೆ ಮೇಲಿನ ಸಂಚಾರ ಸ್ಥಗಿತಗೊಳಿಸುವಂತೆ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ವಿಶ್ವನಾಥ್ ಅವರು ಈಗಾಗಲೇ ಗಂಗಾವತಿ ಗ್ರಾಮೀಣ ಪೊಲೀಸರಿಗೆ …

Read More »

ವಿವಿಧ ಬೇಡಿಕೆ ಈಡೇರಿಕೆಗೆ ವಸತಿ ಶಾಲಾ ಹೊರಗುತ್ತಿಗೆ ನೌಕರರ ಪ್ರತಿಭಟನೆ!!

ವಿವಿಧ ಬೇಡಿಕೆ ಈಡೇರಿಕೆಗೆ ವಸತಿ ಶಾಲಾ ಹೊರಗುತ್ತಿಗೆ ನೌಕರರ ಪ್ರತಿಭಟನೆ!! ಕನಿಷ್ಠ ವೇತನ ತಿಂಗಳಿಗೆ 36 ಸಾವಿರಕ್ಕೆ ಆಗ್ರಹ ವಸತಿ ಶಾಲಾ ಹೊರಗುತ್ತಿಗೆ ನೌಕರರ ಪ್ರತಿಭಟನೆ ಹೊರಗುತ್ತಿಗೆ ನೌಕರರ ಬೆಳಗಾವಿ ಜಿಲ್ಲಾ ಘಟಕ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ರಾಜ್ಯ ಸರ್ಕಾರ ಹಾಗೂ ಕಾರ್ಮಿಕ ಇಲಾಖೆ ಜಾರಿಗೆ ತಂದಿರುವ ಕನಿಷ್ಠ ವೇತನ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಹೊರಗುತ್ತಿಗೆ ನೌಕರರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು. ಸೋಮವಾರ …

Read More »