Breaking News

ಸಿಎಂ ಭೇಟಿಯಾದ ಅಶ್ವಿನಿ ಪುನೀತ್ ರಾಜಕುಮಾರ್;

ಬೆಂಗಳೂರು : ಖಾಸಗಿ ಕಾರ್ಯಕ್ರಮಕ್ಕೆ ಆಹ್ವಾನಿಸಲು ಅಶ್ವಿನಿ ಪುನೀತ್ ರಾಜ್​ಕುಮಾರ್ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದರು. ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚಿಸಿದರು. ಈ ವೇಳೆ ಖಾಸಗಿ ಕಾರ್ಯಕ್ರಮವೊಂದಕ್ಕೆ ಮುಖ್ಯಮಂತ್ರಿಗಳನ್ನು ಆಹ್ವಾನಿಸಿದರು. ಈ ವೇಳೆ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಮಾಜಿ ಸಚಿವ ಹೆಚ್.ಎಂ ರೇವಣ್ಣ ಜೊತೆಗಿದ್ದರು. ಪವರ್​ ಸ್ಟಾರ್​ ದಿ. ಪುನೀತ್ ರಾಜಕುಮಾರ್ ಅವರ ಶಿಲ್ಪದ ಸಂಗ್ರಹದ ಅನಾವರಣ ಕಾರ್ಯಕ್ರಮಕ್ಕೆ ಅಶ್ವಿನಿ ಪುನೀತ್ ರಾಜಕುಮಾರ್ ಸಿಎಂಗೆ …

Read More »

ಗೆಲುವಿನ ದಡ ಸೇರಿಸಿದ ವಿರಾಟ್​ – ರಾಹುಲ್ ತಾಳ್ಮೆಯ ಆಟ.​. ಆಸ್ಟ್ರೇಲಿಯಾ ವಿರುದ್ಧ ಆರು ವಿಕೆಟ್​ ಜಯ

ವಿಶ್ವಕಪ್​​​ನ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ವಿರಾಟ್​ ಮತ್ತು ರಾಹುಲ್​ ಟೀಮ್​ ಇಂಡಿಯಾಕ್ಕೆ ಗೆಲುವಿಗೆ ಆಸರೆ ಆದರು. ಚೆನ್ನೈ (ತಮಿಳುನಾಡು): 2 ರನ್​ಗೆ 3 ವಿಕೆಟ್​ ಕಳೆದುಕೊಂಡು ಆರಂಭಿಕ ಆಘಾತಕ್ಕೆ ಒಳಗಾದ ಭಾರತಕ್ಕೆ ಮಧ್ಯಮ ಕ್ರಮಾಂಕದಲ್ಲಿ ವಿರಾಟ್​ ಮತ್ತು ಕೆ ಎಲ್​ ರಾಹುಲ್​ ಅವರ ಬ್ಯಾಟಿಂಗ್​ ತಂಡಕ್ಕೆ ಆಸರೆ ಆಯಿತು. ಇದರಿಂದ ಆಸ್ಟ್ರೇಲಿಯಾ ವಿರುದ್ಧ ಭಾರತ ಮೊದಲ ಪಂದ್ಯದಲ್ಲಿ 8.4 ಓವರ್​ ಉಳಿಸಿಕೊಂಡು 6 ವಿಕೆಟ್​ಗಳ ಜಯ ದಾಖಲಿಸಿದೆ.

Read More »

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮಾಜಿ ಪ್ರಧಾನಿ ದೇವೇಗೌಡ- ಸಿಎಂ ಸಿದ್ದರಾಮಯ್ಯ ಭೇಟಿ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡ ಅವರನ್ನು ಅನಿರೀಕ್ಷಿತವಾಗಿ ಭೇಟಿಯಾದರು.   ಸಿಡಬ್ಲ್ಯೂಸಿ ಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ತೆರಳಲು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ, ಮಂಗಳೂರಿಗೆ ತೆರಳಲು ಆಗಮಿಸಿದ್ದ ಮಾಜಿ ಪ್ರಧಾನಿ ದೇವೇಗೌಡರು ಮತ್ತು ಇವರ ಧರ್ಮಪತ್ನಿ ಚನ್ನಮ್ಮ ಅವರು ಅನಿರೀಕ್ಷಿತವಾಗಿ ಮುಖಾಮುಖಿಯಾದರು. ಈ ವೇಳೆ ಮುಖ್ಯಮಂತ್ರಿಗಳು ದೇವೇಗೌಡರು ಮತ್ತು ಚನ್ನಮ್ಮ ಅವರ …

Read More »

ಇಂದಿನಿಂದ ಬಿಗ್​ ಬಾಸ್​ ಸೀಸನ್​ 10 ಶುರುವಾಗಿದೆ. ಬಿಗ್​ಬಾಸ್​ ಮನೆಗೆ ಎಂಟ್ರಿ ಕೊಟ್ಟ ಸ್ಫರ್ಧಿಗಳ ಪಟ್ಟಿ ಇಂತಿದೆ..

  ಕನ್ನಡದ ಅತ್ಯಂತ ಜನಪ್ರಿಯ ರಿಯಾಲಿಟಿ ಶೋ ಬಿಗ್​ ಬಾಸ್ ಭಾನುವಾರದಿಂದ ಆರಂಭವಾಗಿದೆ. ಕಿಚ್ಚ ಸುದೀಪ್ ಸಾರಥ್ಯದಲ್ಲಿ ನಡೆಯಲಿರುವ​ ಬಿಗ್​ ಬಾಸ್​ ಸೀಸನ್​ 10ಗೆ ಅಧಿಕೃತವಾಗಿ ಚಾಲನೆ ಸಿಕ್ಕಿದೆ. ಈ ಸೀಸನ್​ನ​​ ಗ್ರಾಂಡ್​ ಇವೆಂಟ್​ ಭಾನುವಾರದಿಂದ ಕಲರ್ಸ್​ ಕನ್ನಡದಲ್ಲಿ ಪ್ರಸಾರ ಶುರುವಾಗಿದೆ. ಬಿಗ್​ ಬಾಸ್​ ರಿಯಾಲಿಟಿ ಶೋನ ಒಂಭತ್ತು ಆವೃತ್ತಿಗಳು ಯಶಸ್ವಿಯಾಗಿದ್ದು, ಅಪಾರ ಸಂಖ್ಯೆಯ ವೀಕ್ಷಕರನ್ನು ಪಡೆದಿದೆ. ಬಿಗ್​ ಬಾಸ್​ನಲ್ಲಿನ ಸುದೀಪ್​ ನಿರೂಪಣೆ ಅತಿ ಹೆಚ್ಚು ಜನರನ್ನು ಕಾರ್ಯಕ್ರಮ ವೀಕ್ಷಿಸುವಂತೆ …

Read More »

ಅತ್ತಿಬೆಲೆ ಪಟಾಕಿ ದುರಂತ ಪ್ರಕರಣ ಸಿಐಡಿಗೆ ಹಸ್ತಾಂತರ: ಸಿಎಂ ಸಿದ್ದರಾಮಯ್ಯ

ಆನೇಕಲ್​ (ಬೆಂಗಳೂರು) : ಅತ್ತಿಬೆಲೆ ಪಟಾಕಿ ಗೋದಾಮಿನಲ್ಲಿ ಶನಿವಾರ ನಡೆದ ಅಗ್ನಿ ಅವಘಡ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್​ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಪಟಾಕಿ ದುರಂತ ಪ್ರಕರಣವನ್ನು ಸಿಐಡಿಗೆ ವಹಿಸುವುದಾಗಿ ಎಂದು ಹೇಳಿದರು. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅತ್ತಿಬೆಲೆಯ ಪಟಾಕಿ ಗೋದಾಮಿನಲ್ಲಿ ನಡೆದ ಅಗ್ನಿ ಅವಘಡ ಪ್ರಕರಣದಲ್ಲಿ ಒಟ್ಟು 14 ಮಂದಿ ಸಾವನ್ನಪ್ಪಿದ್ದು, 7 …

Read More »

ಕಾವೇರಿ ಕಿಚ್ಚು : ಮಂಡ್ಯ ರೈತರಿಗೆ ಚಿತ್ರದುರ್ಗದಿಂದ ಟ್ಯಾಂಕರ್ ನೀರು

ಮಂಡ್ಯ : ಮಂಡ್ಯದಲ್ಲಿ ಕಾವೇರಿ ಕಿಚ್ಚು ಆರುವ ಲಕ್ಷಣ ಕಾಣುತ್ತಿಲ್ಲ. ಪ್ರತಿದಿನ ಒಂದಿಲ್ಲೊಂದು ರೀತಿಯಲ್ಲಿ ಹೋರಾಟ ನಡೆಯುತ್ತಲೇ ಇದೆ. ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಧರಣಿ ಮುಂದುವರೆದಿದ್ದು, ಹಲವಾರು ಸಂಘಟನೆಗಳು ಬೆಂಬಲ ಸೂಚಿಸುತ್ತಿವೆ. ಮೈಸೂರು, ಬೆಂಗಳೂರು ಹೆದ್ದಾರಿ ತಡೆದು ಆಕ್ರೋಶ ಹೊರಹಾಕುತ್ತಿದ್ದಾರೆ. ಸರ್ಕಾರ ಮಾತ್ರ ಈವರೆಗೆ ಯಾವುದೇ ತೀರ್ಮಾನ ಮಾಡದೆ, ಅನ್ನದಾತರ ಆಕ್ರೋಶಕ್ಕೆ ಕಾರಣವಾಗಿದೆ. ಹಾಗಾದ್ರೆ ಈವತ್ತಿನ ಹೋರಾಟಗಳು ಹೇಗೆಲ್ಲಾ ನಡೀತು ಅನ್ನೋದರ ಮಾಹಿತಿ ಇಲ್ಲಿದೆ. ಇವತ್ತು ಜಿಲ್ಲಾ ರೈತ ಹಿತರಕ್ಷಣಾ …

Read More »

ಫೆಸ್ಟಿವಲ್ ಸೇಲ್ ಆರಂಭಿಸಿದ ಅಮೆಜಾನ್, ಫ್ಲಿಪ್​ಕಾರ್ಟ್; 90 ಸಾವಿರ ಕೋಟಿ ರೂ. ಇ-ಕಾಮರ್ಸ್​ ವಹಿವಾಟು ನಿರೀಕ್ಷೆ

ನವದೆಹಲಿ : ಇ-ಕಾಮರ್ಸ್ ದೈತ್ಯ ಕಂಪನಿಗಳಾದ ಅಮೆಜಾನ್, ಫ್ಲಿಪ್​ಕಾರ್ಟ್, ಮಿಂತ್ರಾ ಮತ್ತು ಇತರ ಕಂಪನಿಗಳು ಭಾನುವಾರದಿಂದ ಭಾರತದಲ್ಲಿ ಹಬ್ಬದ ಋತುವಿನ ಮಾರಾಟ ಪ್ರಾರಂಭಿಸಿವೆ. ಈ ಹಬ್ಬದ ಸೀಸನ್​​ನಲ್ಲಿ ಇವು ಒಟ್ಟಾರೆಯಾಗಿ 90 ಸಾವಿರ ಕೋಟಿ ರೂಪಾಯಿ ವಹಿವಾಟು ನಡೆಸುವ ನಿರೀಕ್ಷೆಯಿದೆ. ಮಾರುಕಟ್ಟೆ ವಿಶ್ಲೇಷಕ ಸಂಸ್ಥೆ ರೆಡ್ ಸೀರ್ ಸ್ಟ್ರಾಟಜಿ ಕನ್ಸಲ್ಟೆಂಟ್ಸ್ ಪ್ರಕಾರ, ಸುಮಾರು 140 ಮಿಲಿಯನ್​ನಷ್ಟಿರುವ ಆನ್ ಲೈನ್ ಮಾರಾಟಗಾರರು, ಅದರಲ್ಲೂ ವಿಶೇಷವಾಗಿ ಸಣ್ಣ ವ್ಯಾಪಾರಿಗಳು, ವರ್ಷದಿಂದ ವರ್ಷಕ್ಕೆ ಹಬ್ಬದ ಮಾರಾಟದಲ್ಲಿ …

Read More »

ಜಾತಿಗಣತಿ ವರದಿ ವಿಚಾರ ಇಟ್ಟುಕೊಂಡು ಸರ್ಕಾರ ರಾಜಕೀಯ ಮಾಡುತ್ತಿದೆ: ಹೆಚ್ ಡಿ ಕುಮಾರಸ್ವಾಮಿ

ರಾಮನಗರ : ಕಾಂಗ್ರೆಸ್​ನವರು ಒಂದು ಕಡೆ ಜಾತ್ಯತೀತ ಎನ್ನುತ್ತಾರೆ. ಇನ್ನೊಂದು ಕಡೆ ಜಾತಿಗಣತಿ ವರದಿ ಇಟ್ಟುಕೊಂಡು ಜಾತಿ ಜಾತಿಗಳ ನಡುವೆ ವಿಷಬೀಜ ಬಿತ್ತಲು ಹೊರಟಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.   ಬಿಡದಿಯ ತಮ್ಮ ತೋಟದಲ್ಲಿ ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಾತಿಗಣತಿ ವರದಿ ವಿಚಾರ ಇಟ್ಟುಕೊಂಡು ಸರ್ಕಾರವು ರಾಜಕೀಯ ಮಾಡುತ್ತಿದೆ. ಕಾಂತರಾಜು ಎಂಬುವರಿಂದ ವರದಿ ಕೊಡಿಸಿದ್ದೀವಿ. ಕುಮಾರಸ್ವಾಮಿ ಅವರು ಒಪ್ಪಲಿಲ್ಲ …

Read More »

ವಿದ್ಯಾರ್ಥಿಗಳಿಗೆ ಎರಡು ಮುಖ್ಯ ಪರೀಕ್ಷೆಗಳು ಕಡ್ಡಾಯವಲ್ಲ :ಕೇಂದ್ರ ಶಿಕ್ಷಣ ಸಚಿವ ಪ್ರಧಾನ್​

ನವದೆಹಲಿ: 10, 12 ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸದಾಗಿ ಪರಿಚಯಿಸಲಾಗುರುವ ‘ವರ್ಷಕ್ಕೆ ಎರಡು ಬಾರಿ ಪರೀಕ್ಷೆ’ಗೆ ನಿಯಮ ಕಡ್ಡಾಯವಲ್ಲ. ಅವರು 2 ಸಲ ಪರೀಕ್ಷೆ ಬರೆಯಲೇಬೇಕಿಲ್ಲ. ಬೇಕಾದಲ್ಲಿ ಅವರು ಎರಡರ ಪೈಕಿ ಒಂದು ಪರೀಕ್ಷೆಯಲ್ಲಿ ಗಳಿಸಿದ ಹೆಚ್ಚಿನ ಅಂಕಗಳನ್ನೇ ಅವರು ಉಳಿಸಿಕೊಳ್ಳಬಹುದು ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದರು. ಈ ನಿಯಮವು ಎಂಜಿನಿಯರಿಂಗ್​ ಪ್ರವೇಶ ಪರೀಕ್ಷೆಯ ಜೆಇಇ ಇರುವಂತೆ ವರ್ಷಕ್ಕೆ ಎರಡು ಬಾರಿ ಎಕ್ಸಾಂ ತೆಗೆದುಕೊಳ್ಳುವ ಆಯ್ಕೆಯನ್ನು ಹೊಂದಿರುತ್ತಾರೆ. …

Read More »

: ಶಾಮನೂರು ಶಿವಶಂಕರಪ್ಪ ಅವರು ನೀಡಿರುವ ಹೇಳಿಕೆ ಸತ್ಯಕ್ಕೆ ದೂರವಾಗಿಲ್ಲ:ಶ್ರೀಶೈಲ‌ ಜಗದ್ಗುರು

ಬೆಳಗಾವಿ : ಶಾಮನೂರು ಶಿವಶಂಕರಪ್ಪ ಅವರು ನೀಡಿರುವ ಹೇಳಿಕೆ ಸತ್ಯಕ್ಕೆ ದೂರವಾಗಿಲ್ಲ. ಯಾವ ಮಟ್ಟದಲ್ಲಿ ನಮ್ಮ ಸಮಾಜದ ಅಧಿಕಾರಿಗಳಿಗೆ ಉನ್ನತ ಸ್ಥಾನಮಾನಗಳು ಸಿಗಬೇಕಿತ್ತೋ ಆ ಮಟ್ಟದಲ್ಲಿ ಸಿಗ್ತಿಲ್ಲ. ಹೆಚ್ಚಿನ ಪ್ರಮಾಣದಲ್ಲಿ ವೀರಶೈವ ಲಿಂಗಾಯತ ಅಧಿಕಾರಿಗಳನ್ನು ಪರಿಗಣಿಸಬೇಕು ಎಂದು ಶ್ರೀಶೈಲದ ಡಾ ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಆಗ್ರಹಿಸಿದರು. ಶ್ರೀಶೈಲದ ಡಾ ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಇದನ್ನೆಲ್ಲ ತಿಳಿದುಕೊಳ್ಳಬೇಕು, ವೀರಶೈವ ಲಿಂಗಾಯತ ಅಧಿಕಾರಿಗಳಿಗೆ …

Read More »