ಬೆಂಗಳೂರು : ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಪಡಿತರ ಚೀಟಿದಾರರ ಹೆಸರು ಸೇರ್ಪಡೆ ಸೇರಿದಂತೆ ಅಗತ್ಯ ತಿದ್ದುಪಡಿಗಳಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಮತ್ತೊಂದು ಅವಕಾಶ ನೀಡಿದೆ. ಇಂದಿನಿಂದ ಮೂರು ದಿನಗಳ ಕಾಲ ಬಿಪಿಎಲ್ ಕಾರ್ಡ್ಗಳ ಪರಿಷ್ಕರಣೆ ಮಾಡಬಹುದಾಗಿದೆ. ಆದರೆ, ಹೊಸ ಕಾರ್ಡ್ ಪಡೆಯಲು ಮತ್ತಷ್ಟು ಕಾಯಬೇಕಿದೆ. ರಾಜ್ಯದಲ್ಲಿ ಮತ್ತೊಮ್ಮೆ ಬಿಪಿಎಲ್ ಕಾರ್ಡ್ಗಳ ಪರಿಷ್ಕರಣೆಗೆ ಅವಕಾಶ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅದರಂತೆ ಕರ್ನಾಟಕ ಒನ್, ಬೆಂಗಳೂರು ಒನ್, …
Read More »ಕಾಂಗ್ರೆಸ್ಗೆ ಲಿಂಗಾಯತರು ಮತ ಹಾಕಿಲ್ಲ ಎನ್ನುವವರು ಮೂರ್ಖರು: ವಿನಯ್ ಕುಲಕರ್ಣಿ
ಬೆಂಗಳೂರು: ಹಿರಿಯ ನಾಯಕ, ದಾವಣಗೆರೆ ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿಕೆಯನ್ನು ಸಮರ್ಥಿಸಿಕೊಂಡಿರುವ ಧಾರವಾಡ ಶಾಸಕ ವಿನಯ್ ಕುಲಕರ್ಣಿ ಅವರು, ಕಾಂಗ್ರೆಸ್ಗೆ ಲಿಂಗಾಯತರು ಓಟು ಹಾಕಿಲ್ಲ ಎನ್ನುವವರು ಮೂರ್ಖರು. ವೀರೇಂದ್ರ ಪಾಟೀಲ್ ಬಳಿಕ ಹೆಚ್ಚಿನ ಸಂಖ್ಯೆಯಲ್ಲಿ ಲಿಂಗಾಯತರು ಕಾಂಗ್ರೆಸ್ ಪರ ನಿಂತಿದ್ದಾರೆ ಎಂದು ಹೇಳಿದ್ದಾರೆ. ವಿಧಾನಸೌಧದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಾಮನೂರು ಅವರ ವಿರುದ್ಧ ಯಾರು ಕೌಂಟರ್ ಕೊಡೋದು ಬೇಡ. ಅವರು ಹಿರಿಯರು, ನಮ್ಮ ಯಜಮಾನರು ಅವರು, ಅವರಿಗೆ 92 …
Read More »10 ಸಾವಿರ ಸುಪಾರಿ ಕೊಟ್ಟು ತನ್ನ ಗಂಡನನ್ನು ಕೊಲೆ ಮಾಡಿಸಿದ ಸುಂದರಿ..
ಕಾರವಾರ(ಉತ್ತರಕನ್ನಡ): ಗಂಡನ ಸ್ನೇಹಿತನೊಂದಿಗೆ ಸಲುಗೆ ಬೆಳೆಸಿಕೊಂಡಿದ್ದ ಮಹಿಳೆಯೊಬ್ಬಳು ಕೊನೆಗೂ ಅಂದರ್ ಆಗಿದ್ದಾಳೆ. ಪ್ರಿಯಕರನಿಗೆ ಕೇವಲ 10 ಸಾವಿರ ಸುಪಾರಿ ಕೊಟ್ಟು ತನ್ನ ಗಂಡನನ್ನು ಕುಮಟಾದ ನಿರ್ಜನ ಪ್ರದೇಶದಲ್ಲಿ ಕೊಲೆ ಮಾಡಿಸಿರುವ ಪ್ರಕರಣವನ್ನು ಕುಮಟಾ ಪೊಲೀಸರು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಕೊಲೆಗಾರರ ಸುಳಿವು ನೀಡಿದ ಕೆಎಸ್ಆರ್ಟಿಸಿ ಬಸ್ ಟಿಕೆಟ್: ಹಿಂದಿನ ಸೆ.30 ರಂದು ಕುಮಟಾ ತಾಲೂಕಿನ ದೇವಿಮನೆ ಘಟ್ಟದ ದೇವಸ್ಥಾನವೊಂದರ ಹಿಂಬದಿ ಪ್ರದೇಶದಲ್ಲಿ ಅಪರಿಚಿತ ಶವವೊಂದು ಪತ್ತೆಯಾದಾಗ, ಕುಮಟಾ ಪೊಲೀಸರು ತೆರಳಿ ಪರಿಶೀಲಿಸಿದ್ದರು. …
Read More »ಓವರ್ ಟೇಕ್ ಭರದಲ್ಲಿ ಡಿಕ್ಕಿ ಹೊಡೆದು ಕೆಳಗೆ ಬಿದ್ದ ಸವಾರ: ಬಿಎಂಟಿಸಿ ಬಸ್ ಹರಿದು ಸಾವು
ಬೆಂಗಳೂರು: ಓವರ್ ಟೇಕ್ ಮಾಡುವ ಭರದಲ್ಲಿ ಬಿಎಂಟಿಸಿ ಬಸ್ಗೆ ಡಿಕ್ಕಿ ಹೊಡೆದು ಕೆಳಗೆ ಬಿದ್ದ ಸವಾರನ ಮೇಲೆ ಬಸ್ ಹರಿದಿದೆ. ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಯಲಹಂಕ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ಸಂಜೆ ನಡೆದಿದ್ದು, ಇದೀಗ ತಡವಾಗಿ ಬೆಳಕಿಗೆ ಬಂದಿದೆ. ಅಟ್ಟೂರಿನ ಮದರ್ ಡೈರಿ ಬಳಿ ದುರಂತ ಸಂಭವಿಸಿದ್ದು, ಅವಘಡದಲ್ಲಿ ಸ್ಕೂಟರ್ ಸವಾರ ಭರತ್ ರೆಡ್ಡಿ ಸಾವನ್ನಪ್ಪಿದ್ದಾರೆ. ಅಪಘಾತಕ್ಕೀಡಾದ ಸ್ಕೂಟಿಎಂಜಿನಿಯರಿಂಗ್ ಮುಗಿಸಿದ್ದ ಭರತ್, ಸಿವಿಲ್ ಕಂಟ್ರಾಕ್ಟರ್ …
Read More »ರೈತ ಸಮುದಾಯಕ್ಕೆ ಗುಡ್ ನ್ಯೂಸ್ : `ಪಿಎಂ ಕಿಸಾನ್ ಯೋಜನೆ’ ಹಣ 3,000 ರೂ.ಗೆ ಏರಿಕೆ ಸಾಧ್ಯತೆ!
ನವದೆಹಲಿ : ಲೋಕಸಭಾ ಚುನಾವಣೆಗೆ ಮುಂಚಿತವಾಗಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆಯ ಕಂತು ಹೆಚ್ಚಾಗಬಹುದು. ಪ್ರಸ್ತುತ, ಈ ಯೋಜನೆಯಡಿ, ಸರ್ಕಾರವು ರೈತರಿಗೆ ವಾರ್ಷಿಕವಾಗಿ 6000 ರೂಪಾಯಿಗಳನ್ನು ನೀಡುತ್ತದೆ.ಈ ಮೊತ್ತವನ್ನು 2000 ರೂ.ಗಳ ಮೂರು ಸಮಾನ ಕಂತುಗಳಲ್ಲಿ ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಕಳುಹಿಸಲಾಗುತ್ತದೆ. ವರದಿಯ ಪ್ರಕಾರ, ಕಳೆದ ವರ್ಷ ರೈತರ ಈ ಯೋಜನೆಯಡಿ ಕೇಂದ್ರ ಸರ್ಕಾರ 10,000 ಕೋಟಿ ರೂ.ಗಳನ್ನು ಉಳಿಸಿದೆ. ಅನರ್ಹ ಫಲಾನುಭವಿಗಳನ್ನು …
Read More »ಧಾರವಾಡ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಆಕಾಂಕ್ಷಿತರ ಪಟ್ಟಿ ಹೆಚ್ಚಾಗುತ್ತಿದೆ.
ಧಾರವಾಡ: ವಿಧಾನಸಭೆ ಚುನಾವಣೆ ಮುಗಿದು ಕಾಂಗ್ರೆಸ್ ಅಧಿಕಾರದ ಗದ್ದುಗೆ ಏರಿದೆ. ಇನ್ನೇನಿದ್ರು ಲೋಕಸಭಾ ಚುನಾವಣೆ ಮೇಲೆ ಎಲ್ಲ ಪಕ್ಷಗಳ ಕಣ್ಣುಗಳು ನೆಟ್ಟಿವೆ. ಜೊತೆಗೆ ಎಲ್ಲ ಪಕ್ಷಗಳಲ್ಲಿಯೂ ಟಿಕೆಟ್ಗಾಗಿ ಆಕಾಂಕ್ಷಿತರು ಈಗಲೇ ತಮ್ಮ ಇಂಗಿತ ವ್ಯಕ್ತಪಡಿಸುತ್ತಿದ್ದಾರೆ. ಹಾಗೆಯೇ ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ಗಾಗಿ ಕೂಡ ಆಕಾಂಕ್ಷಿಗಳು ಬಹಿರಂಗವಾಗಿಯೇ ಸ್ಪರ್ಧಿಸುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ. ಈಗಿನಿಂದಲೇ ಸಂಸತ್ ಚುನಾವಣೆಗೆ ಸಿದ್ಧತೆಗಳು ಶುರುವಾಗಿವೆ. ಹೀಗಾಗಿ ಸಹಜವಾಗಿ ಆಕಾಂಕ್ಷಿಗಳು ಮುನ್ನಲೆಗೆ ಬರುತ್ತಿದ್ದಾರೆ. ಧಾರವಾಡ ಲೋಕಸಭಾ ಕ್ಷೇತ್ರದಲ್ಲಿಯೂ ಸ್ಪರ್ಧೆಗಿಳಿಯಲು …
Read More »ಹಾಲಶ್ರೀ ಸ್ವಾಮೀಜಿಯ ಮತ್ತೊಂದು ಬಿಜೆಪಿ ಟಿಕೆಟ್ ಹಗರಣ ಬಯಲಿಗೆ:
ಗದಗ, (ಅಕ್ಟೋಬರ್ 05): ವಿಧಾನಸಭೆ ಚುನಾವಣೆಯಲ್ಲಿ (Karnataka Assembly Elections 2023) ಟಿಕೆಟ್ ಕೊಡಿಸುವುದಾಗಿ ಕೋಟಿ ಕೋಟಿ ರೂ. ವಂಚನೆ ಮಾಡಿದ ಪ್ರಕರಣ ರಾಜ್ಯದಲ್ಲಿ ಭಾರಿ ಸುದ್ದಿ ಮಾಡಿದೆ. ಮಂಗಳೂರು ಮೂಲದ ಉದ್ಯಮಿಗೆ ವಂಚನೆ ಬೆನ್ನಲ್ಲೇ ಗದಗ ಜಿಲ್ಲೆಯಲ್ಲೂ ಅಭಿನವ ಹಾಲಶ್ರೀ(Abhinava Halashri) ವಿರುದ್ಧ ವಂಚನೆ ಕೇಸ್ ದಾಖಲಾಗಿತ್ತು. ಈಗ ಬೆಂಗಳೂರಿನ ಜೈಲಿನಲ್ಲಿದ್ದ ಹಾಲಶ್ರೀ ಸ್ವಾಮೀಯನ್ನು ಮುಂಡರಗಿ ಪೊಲೀಸ್ರು ಬಾಡಿ ವಾರಂಟ್ ಮೇಲೆ ಆಚೆ ಕರೆದುಕೊಂಡು ಬಂದು ಎಲ್ಲೆಡೆ ಸ್ಥಳ ಮಹಜರು …
Read More »ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರ ಸಾವು, ಮೆಡಿಕಲ್ ಶಾಪ್ಗೆ ಬಂದಿದ್ದ ವ್ಯಕ್ತಿಗೆ ಹೃದಯಾಘಾತ
ಮೈಸೂರು, ಅ.05: ಬೈಕ್ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟ (Accident) ಘಟನೆ ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲೂಕಿನ ಗದ್ದಿಗೆ ಸುಂಕಲ್ ಮಂಟಿ ಬಳಿ ನಡೆದಿದೆ. ಅಪಘಾತದಲ್ಲಿ ಬೈಕ್ನಲ್ಲಿದ್ದ ಸೋಮಶೇಖರ್(30), ನಾಗೇಶ್(28) ಮೃತಪಟ್ಟಿದ್ದಾರೆ. ಮೈಸೂರಿನಿಂದ ಹೆಚ್.ಡಿ.ಕೋಟೆಗೆ ಬರುತ್ತಿದ್ದಾಗ ಅಪಘಾತ ಸಂಭವಿಸಿದೆ. ಈ ಸಂಬಂಧ ಹೆಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ (HD Kote Police Station) ಪ್ರಕರಣ ದಾಖಲಾಗಿದೆ. ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ ನಂಜನಗೂಡು ತಾಲೂಕಿನ ಈರೇಗೌಡನ ಹುಂಡಿ ಗ್ರಾಮದಲ್ಲಿ ನೇಣು ಬಿಗಿದುಕೊಂಡು ಯುವಕ …
Read More »ಬೆಳ್ಳಂಬೆಳಗ್ಗೆ ಡಿಸಿಸಿ ಬ್ಯಾಂಕ್ ಅಧ್ಯಕ್ಷನ ಮನೆಗಳ ಮೇಲೆ ಇಡಿ ದಾಳಿ
ಶಿವಮೊಗ್ಗ, (ಅಕ್ಟೋಬರ್ 05): ಶಿವಮೊಗ್ಗದಲ್ಲಿ (Shivamogga) ಡಿಸಿಸಿ ಬ್ಯಾಂಕ್ ಅಧ್ಯಕ್ಷ R.M.ಮಂಜುನಾಥಗೌಡ ನಿವಾಸದ ಮೇಲೆ ಇಡಿ ದಾಳಿ (ED Raid) ಮಾಡಿದೆ. ಇಂದು (ಅಕ್ಟೋಬರ್ 05) ಬೆಳ್ಳಂಬೆಳಗ್ಗೆಯೇ ಎರಡು ಕಾರುಗಳಲ್ಲಿ ಆಗಮಿಸಿರುವ ಇಡಿ ಅಧಿಕಾರಿಗಳು, ಶಿವಮೊಗ್ಗದ ಶರಾವತಿ ನಗರದ ನಿವಾಸ ಹಾಗೂ ತೀರ್ಥಹಳ್ಳಿಯ ಬೆಟ್ಟಮಕ್ಕಿಯಲ್ಲಿರುವ ಮಂಜುನಾಥಗೌಡ ಮನೆ ಮೇಲೂ ದಾಳಿ ಮಾಡಿದ್ದಾರೆ.
Read More »ನಾಳೆಯಿಂದ ಕೇಂದ್ರ ತಂಡದಿಂದ ಬರ ಪರಿಸ್ಥಿತಿ ಅಧ್ಯಯನ, ವಿವಿಧ ಜಿಲ್ಲೆಗಳಲ್ಲಿ ಪ್ರವಾಸ
ಬೆಂಗಳೂರು: ರಾಜ್ಯದ ಬರ ಪರಿಸ್ಥಿತಿ ಅಧ್ಯಯನಕ್ಕೆ ಕೇಂದ್ರದ ಮೂರು ತಂಡಗಳು ರಾಜ್ಯಕ್ಕೆ ಆಗಮಿಸುತ್ತಿದ್ದು, ಅಕ್ಟೋಬರ್ 5ರಿಂದ ನಾಲ್ಕು ದಿನಗಳ ಕಾಲ ರಾಜ್ಯದ ವಿವಿಧೆಡೆ ಜಿಲ್ಲಾ ಪ್ರವಾಸ ಕೈಗೊಂಡು ಪರಿಶೀಲನೆ ನಡೆಸಲಿವೆ. ಕೇಂದ್ರ ತಂಡ ಹತ್ತು ಸದಸ್ಯರನ್ನೊಳಗೊಂಡಿದ್ದು, ರಾಜ್ಯದ ಸ್ಥಳೀಯ ಅಧಿಕಾರಿಗಳೊಂದಿಗೆ ಕೃಷಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಲಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು. ಇಂದು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಅಕ್ಟೋಬರ್ 5ರಂದು ಮೂರು ತಂಡಗಳು ಬೆಳಗ್ಗೆ 9:30 ರಿಂದ 10:30ರ …
Read More »