Breaking News

ಜೆಡಿಎಸ್-ಬಿಜೆಪಿ ಮೈತ್ರಿಗೆ ಪಕ್ಷದ ಮುಖಂಡರಿಂದ ಬೆಂಬಲ: ‘ರಾಜ್ಯದ ಜ್ವಲಂತ ಸಮಸ್ಯೆಗೆ ಮೈತ್ರಿಯಿಂದ ಪರಿಹಾರ’- ಕುಮಾರಸ್ವಾಮಿ

ರಾಮನಗರ: ಬಿಜೆಪಿ ಜತೆ ಮೈತ್ರಿ ಸಂಬಂಧಿಸಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರಲ್ಲಿ ಉಂಟಾಗಿದ್ದ ಕೆಲವು ಗೊಂದಲಗಳನ್ನು ಜೆಡಿಎಸ್ ವರಿಷ್ಠ ನಾಯಕ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ನಿವಾರಿಸಿದರು. ಪಕ್ಷದ ಹಿತಕ್ಕಾಗಿ ವರಿಷ್ಠರು ತೆಗೆದುಕೊಂಡಿರುವ ನಿರ್ಧಾರ ಸರಿ ಇದೆ. ಅವರ ನಿರ್ಧಾರಕ್ಕೆ ನಾವು ಬದ್ಧ ಎಂದು ಎಲ್ಲಾ ಮುಖಂಡರು ‌ಒಕ್ಕೊರಲ ಬೆಂಬಲ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಬಿಜೆಪಿಯೊಂದಿಗೆ ಮೈತ್ರಿ ವಿಚಾರದಲ್ಲಿ ಯಾರನ್ನೂ ಕತ್ತಲೆಯಲ್ಲಿ ಇಟ್ಟಿಲ್ಲ, …

Read More »

ಗಾಂಧಿ ಜಯಂತಿ 2023: ‘ಬಾಪು’ ನೆನಪು.. ಭಾರತದ ಸ್ವಾತಂತ್ರ್ಯ ಹೋರಾಟದ ಸಂಕೇತ

ಹೈದರಾಬಾದ್: ಅಕ್ಟೋಬರ್ 2, 1869 ರಂದು ಗುಜರಾತ್‌ನ ಪೋರಬಂದರ್‌ನಲ್ಲಿ ಜನಿಸಿದ ಮೋಹನ್​ದಾಸ ಕರಮಚಂದ್​ ಗಾಂಧಿ ಬ್ರಿಟಿಷ್ ಆಳ್ವಿಕೆಯ ವಿರುದ್ಧ ಹೋರಾಟ ಮಾಡಿ ಭಾರತಕ್ಕೆ ಸ್ವಾತಂತ್ರ್ಯ ತಂದು ಕೊಡುವಲ್ಲಿ ತಮ್ಮ ಜೀವನವನ್ನು ಮುಡಿಪಾಗಿಟ್ಟವರು. ಅಹಿಂಸಾತ್ಮಕವಾಗಿ ಹೋರಾಟ ಮಾಡಿ ಒಂದು ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಮಹಾನ್ ಸಂತ. ಅವರ ಈ ಹೋರಾಟ ಜನಮಾನಸದಲ್ಲಿ ಎಂದೂ ಅಳಿಸಲಾಗದ ಒಂದು ಹೆಜ್ಜೆ ಗುರುತು. ಮಹಾತ್ಮ ಗಾಂಧಿ ಅಥವಾ ಬಾಪು ಎಂದು ಪ್ರೀತಿಯಿಂದ ಕರೆಯಲ್ಪಡುವ ಮೋಹನ್‌ದಾಸ್ ಕರಮಚಂದ್ …

Read More »

ಅರಿಶಿನ ಮಂಡಳಿ ಸ್ಥಾಪಿಸುವುದಾಗಿ ಪ್ರಧಾನಿ ಮೋದಿ ಘೋಷಣೆ.. 12 ವರ್ಷದ ಬಳಿಕ ಚಪ್ಪಲಿ ಧರಿಸಿದ ರೈತ

ನಿಜಾಮಾಬಾದ್ (ತೆಲಂಗಾಣ): ತೆಲಂಗಾಣದಲ್ಲಿ ಅರಿಶಿನ ಮಂಡಳಿ ಸ್ಥಾಪಿಸುವುದಾಗಿ ಭಾನುವಾರ ಮಹಬೂಬ್‌ನಗರದ ಸಾರ್ವಜನಿಕ ಸಭೆಯಲ್ಲಿ ಪ್ರಧಾನಿ ಮೋದಿ ಘೋಷಿಸಿದ ಬೆನ್ನಲ್ಲೇ ಸುಮಾರು 12 ವರ್ಷಗಳ ನಂತರ ರೈತರೊಬ್ಬರು ಕಾಲಿಗೆ ಚಪ್ಪಲಿ ಹಾಕಿದ್ದಾರೆ. ಉತ್ತಮ ಬೆಲೆಯಿಲ್ಲದೆ ಅರಿಶಿನ ಬೆಳೆದ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಬೆಂಬಲ ಬೆಲೆ ಪಡೆಯಲು ರಾಜ್ಯದಲ್ಲಿ ಮಂಡಳಿ ಸ್ಥಾಪಿಸಬೇಕು ಎಂದು ನಿಜಾಮಾಬಾದ್ ಜಿಲ್ಲೆಯ ಮೋರ್ತಾಡ್ ಮಂಡಲದ ಪಾಲೆಂ ಗ್ರಾಮದ ರೈತ ಮುತ್ಯಾಲ ಮನೋಹರರೆಡ್ಡಿ ಆಗ್ರಹಿಸಿದ್ದಾರೆ. ರಾಜ್ಯದಲ್ಲಿ ಅರಿಶಿನ ಮಂಡಳಿ ಸ್ಥಾಪನೆ ಮಾಡಬೇಕೆಂಬ …

Read More »

ಬೆಳಗಾವಿ: ಇದು ಮಹಾತ್ಮ ಗಾಂಧೀಜಿ ಕಾಲಿಟ್ಟ ಊರು. ಖಾದಿ ಇಲ್ಲಿನ ಜನರ ಉಸಿರು. ಇಲ್ಲಿನ ಮನೆ – ಮನದಲ್ಲೂ ಪಠಿಸುತ್ತಿದೆ ಗಾಂಧಿ ಮಂತ್ರ.

ಬೆಳಗಾವಿ: ಇದು ಮಹಾತ್ಮ ಗಾಂಧೀಜಿ ಕಾಲಿಟ್ಟ ಊರು. ಖಾದಿ ಇಲ್ಲಿನ ಜನರ ಉಸಿರು. ಇಲ್ಲಿನ ಮನೆ – ಮನದಲ್ಲೂ ಪಠಿಸುತ್ತಿದೆ ಗಾಂಧಿ ಮಂತ್ರ. ಅಷ್ಟಕ್ಕೂ ಆ ಗಾಂಧಿ ಗ್ರಾಮ ಯಾವುದು? ರಾಷ್ಟ್ರಪಿತ ಅಲ್ಲಿಗೆ ಬಂದಿದ್ದೇಕೆ? ಎಷ್ಟು ದಿನ ತಂಗಿದ್ದರು? ಎಂಬುದನ್ನು ತಿಳಿಯುವ ಕುತೂಹಲವೇ. ಹಾಗಾದರೆ ಓದಿ ಈ ಅಪರೂಪದ ಊರಿನ ಹೆಸರು ಹುದಲಿ. ಬೆಳಗಾವಿಯಿಂದ 22 ಕಿ.ಮೀ. ಅಂತರದಲ್ಲಿರುವ ಇದು ಕ್ರಾಂತಿಯ ನೆಲ, ಸ್ವಾತಂತ್ರ್ಯ ಹೋರಾಟಗಾರರ ತವರು, ಖಾದಿಗೆ ಪುನಶ್ಚೇತನ ನೀಡಿದ …

Read More »

ಗಾಂಧಿ ಜಯಂತಿ: ರಾಜ್​ಘಾಟ್​ನಲ್ಲಿ ಪುಷ್ಪನಮನ ಸಲ್ಲಿಸಿದ ಪ್ರಧಾನಿ ಮೋದಿ, ಖರ್ಗೆ

ನವದೆಹಲಿ: ದೇಶದೆಲ್ಲೆಡೆ ಇಂದು ಮಹಾತ್ಮ ಗಾಂಧೀಜಿ ಅವರ ಹುಟ್ಟುಹಬ್ಬವನ್ನು ಆಚರಿಸಲಾಗುತ್ತಿದ್ದು, ಗಾಂಧಿ ಜಯಂತಿ ಹಿನ್ನೆಲೆ ಇಂದು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ರಾಜ್​ಘಾಟ್​ನಲ್ಲಿ ಮಹಾತ್ಮ ಗಾಂಧೀಜಿ ಅವರಿಗೆ ಪುಷ್ಪನಮನ ಸಲ್ಲಿಸಿದರು.       ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್​ ಧನ್​ಕರ್​, ಕಾಂಗ್ರೆಸ್​ ರಾಷ್ಟ್ರೀಯ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಮತ್ತು ದೆಹಲಿ ಲೆಫ್ಟಿನೆಂಟ್ ಗವರ್ನರ್ …

Read More »

ಮತ್ತೆ ಮುನ್ನೆಲೆಗೆ ಬಂದ ಕುರುಬ ಸಮುದಾಯದ ಎಸ್​ಟಿ ಮೀಸಲಾತಿ ಹೊರಾಟ: ನಾಳೆ ಬೃಹತ್ ಸಮಾವೇಶ – ಲಕ್ಷ್ಮಣ್ ರಾಮ ಚಿಂಗಳೆ

ಚಿಕ್ಕೋಡಿ(ಬೆಳಗಾವಿ): ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಕುರುಬ ಸಮುದಾಯದ ಎಸ್‌ಟಿ ಮೀಸಲಾತಿ ಹೋರಾಟ ಮತ್ತೆ ಮುನ್ನಲೆಗೆ ಬಂದಿದೆ. ಈ ಹಿನ್ನೆಲೆ ನಾಳೆ ರಾಜಕೀಯ ಪವರ್ ಪಾಯಿಂಟ್ ಬೆಳಗಾವಿ ನಗರದಲ್ಲಿ ಅಖಿಲ ಭಾರತ ರಾಷ್ಟ್ರೀಯ ಕುರುಬ ಸಮುದಾಯದ ಮಹಾಧಿವೇಶನ ಬೃಹತ್ ಸಮಾವೇಶ ಏರ್ಪಡಿಸಲಾಗಿದೆ. ಈ ಸಮಾವೇಶಕ್ಕೆ ದೇಶದ ಮೂಲೆ ಮೂಲೆಗಳಿಂದ ರಾಜಕೀಯ ನಾಯಕರು ಆಗಮಿಸಲಿದ್ದು ಅವರುಗಳ ನೇತೃತ್ವದಲ್ಲಿ ಕೇಂದ್ರ ಸರ್ಕಾರ ಎಸ್​ಟಿ ಮೀಸಲಾತಿ ನೀಡಬೇಕು, ಹಕ್ಕು ಮಂಡನೆ ಮಾಡಲಾಗುವುದು ಎಂದು ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ …

Read More »

ಕೆಲಸ ಮುಗಿಸಿ ಮಲಗಿದ್ದ ಕಾರ್ಮಿಕರು.. ಗುಡಿಸಲಿಗೆ ನುಗ್ಗಿ ಮೂವರ ಪ್ರಾಣ ಪಡೆದ ವಾಹನ!

ಅಮರಾವತಿ, ಮಹಾರಾಷ್ಟ್ರ: ಅಮರಾವತಿ ಜಿಲ್ಲೆಯಿಂದ ಭೀಕರ ರಸ್ತೆ ಅಪಘಾತದ ಸುದ್ದಿಯೊಂದು ಹೊರಬಿದ್ದಿದೆ. ಸೋಮವಾರ (ಇಂದು) ಮುಂಜಾನೆ 5.30ಕ್ಕೆ ರಸ್ತೆ ಕಾಮಗಾರಿಗೆ ಎಂದು ಮೆಲ್ಘಾಟ್‌ಗೆ ತೆರಳಿದ್ದ ಬುಡಕಟ್ಟು ಕಾರ್ಮಿಕರ ಮೇಲೆ ಟ್ರಕ್‌ ಹರಿದಿದ್ದು, ಹಲವಾರು ಸಾವು ನೋವುಗಳು ಸಂಭವಿಸಿವೆ. ಬಂದಿರುವ ಮಾಹಿತಿ ಪ್ರಕಾರ ಬುಲ್ಧಾನ ತಾಲೂಕಿನ ಮಲ್ಕಾಪುರದಿಂದ ನಂದೂರ ರಸ್ತೆಯ ರಾಷ್ಟ್ರೀಯ ಹೆದ್ದಾರಿ ನಂ.6ರಲ್ಲಿ ಈ ಅಪಘಾತ ಸಂಭವಿಸಿದೆ. ರಸ್ತೆ ಕಾಮಗಾರಿ ನಿಮಿತ್ತ ನಂದೂರಕ್ಕೆ ತೆರಳಿ ರಸ್ತೆ ಬದಿ ನಿರ್ಮಿಸಿದ್ದ ಗುಡಿಸಲಿನಲ್ಲಿ ಮೊರಗಡ …

Read More »

ಈದ್ ಮಿಲಾದ್ ಮೆರವಣಿಗೆ ಸಂದರ್ಭದಲ್ಲಿ ಕಲ್ಲು ತೂರಾಟ

ಶಿವಮೊಗ್ಗ: ಈದ್ ಮಿಲಾದ್ ಮೆರವಣಿಗೆ ಸಂದರ್ಭದಲ್ಲಿ ಕಲ್ಲು ತೂರಿರುವ ಘಟನೆ ಶಿವಮೊಗ್ಗ ನಗರದ ರಾಗಿಗುಡ್ಡದಲ್ಲಿ ಇಂದು ನಡೆದಿದೆ. ಮೂವರು ಗಾಯಗೊಂಡಿದ್ದಾರೆ. ಘಟನೆಯ ನಂತರ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ಮಾಡಿದ್ದಾರೆ. ಘಟನಾ ಸ್ಥಳದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಸೆಕ್ಷನ್ 144ರಡಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಮೆರವಣಿಗೆ ಸಂದರ್ಭದಲ್ಲಿ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ. ನಂತರ ಸ್ಥಳದಲ್ಲಿದ್ದ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು. ನೆರೆದಿದ್ದ ಜನರನ್ನು ಚದುರಿಸಿದರು. ಪೊಲೀಸರ ಮೇಲೂ ಕಲ್ಲು …

Read More »

ಅ.2 ಮತ್ತು 3 ರಂದು ಎರಡು ದಿನಗಳ ಕಾಲ ಬೆಳಗಾವಿಯಲ್ಲಿ ಶಫರ್ಡ್ಸ್‌ ಇಂಡಿಯಾ ಇಂಟರ್ನ್ಯಾಷನಲ್ ರಾಷ್ಟ್ರೀಯ ಅಧಿವೇಶನ

ಬೆಳಗಾವಿ: ದೇಶಕ್ಕೆ ಸ್ವಾತಂತ್ರ್ಯ ಸಿಕ್ಕ ಬಳಿಕ ಮೊದಲ ಬಾರಿಗೆ ಕುರುಬ ಸಮಾಜದಿಂದ ಅ.2 ಮತ್ತು 3 ರಂದು ಎರಡು ದಿನಗಳ ಕಾಲ ಬೆಳಗಾವಿಯಲ್ಲಿ ಶಫರ್ಡ್ಸ್‌ ಇಂಡಿಯಾ ಇಂಟರ್ನ್ಯಾಷನಲ್ ರಾಷ್ಟ್ರೀಯ ಅಧಿವೇಶನ ನಡೆಯುತ್ತಿದೆ ಎಂದು ಶಫರ್ಡ್ಸ್‌ ಇಂಡಿಯಾ ಇಂಟರ್ನ್ಯಾಷನಲ್ ಸಂಸ್ಥಾಪಕ ಅಧ್ಯಕ್ಷರೂ ಆಗಿರುವ ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ ಮಾಹಿತಿ ನೀಡಿದ್ದಾರೆ.   ಕಾರ್ಯಕ್ರಮ ನಡೆಯಲಿರುವ ಬೆಳಗಾವಿ ಜಿಲ್ಲಾ ಕ್ರೀಡಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕುರುಬ ಸಮಾಜದ ಭವಿಷ್ಯದ ದೃಷ್ಟಿಯಿಂದ ಕೇಂದ್ರ ಮತ್ತು …

Read More »

ಈದ್ ಮಿಲಾದ್​ ಮೆರವಣಿಗೆಗೆ ಗಣೇಶ ಮಂಡಳಿಗಳ ಮುಖಂಡರ ಸಾಥ್

ಬೆಳಗಾವಿ : ಬೆಳಗಾವಿಯಲ್ಲಿಂದು ಪ್ರವಾದಿ ಮೊಹಮ್ಮದ್ ಪೈಗಂಬರ್​ ಅವರ ಜನ್ಮದಿನ ನಿಮಿತ್ತ ಆಯೋಜಿಸಿದ್ದ ಈದ್‌-ಮಿಲಾದ್‌ ಮೆರವಣಿಗೆ ವಿಜೃಂಭಣೆಯಿಂದ ಜರುಗಿದ್ದು, ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳ ಮುಖಂಡರೂ ಕೂಡ ಸಾಥ್ ನೀಡುವ ಮೂಲಕ ಭಾವೈಕ್ಯತೆ ಮೆರೆದರು.   ಪ್ರತಿ ವರ್ಷ ಈದ್‌-ಮಿಲಾದ್‌ ದಿನವೇ ಮೆರವಣಿಗೆ ನಡೆಯುತ್ತಿತ್ತು. ಈ ಬಾರಿಯೂ ಸೆಪ್ಟೆಂಬರ್ 28ರಂದು ಹಬ್ಬದ ದಿನವೇ ಮೆರವಣಿಗೆಗೆ ಎಲ್ಲ ರೀತಿ ಸಿದ್ಧತೆಯನ್ನು ಮುಸ್ಲಿಂ ಸಮುದಾಯದವರು ಮಾಡಿಕೊಂಡಿದ್ದರು. ಆದರೆ, ಅದೇ ದಿನ ಸಾರ್ವಜನಿಕ ಗಣೇಶ ಮೂರ್ತಿಗಳ ನಿಮಜ್ಜನೆ …

Read More »