Breaking News

ಕರ್ನಾಟಕ ಬಂದ್​: ಹುಬ್ಬಳ್ಳಿ ಧಾರವಾಡದಲ್ಲಿ ಮಿಶ್ರ ಪ್ರತಿಕ್ರಿಯೆ… ಶಾಲಾ ಕಾಲೇಜಿಗಿಲ್ಲ ರಜೆ, ಎಂದಿನಂತೆ ಆಟೋ ಬಸ್ ಸಂಚಾರ

ಹುಬ್ಬಳ್ಳಿ-ಧಾರವಾಡ/ಹಾವೇರಿ: ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವದನ್ನು ಖಂಡಿಸಿ ಕರ್ನಾಟಕ ಬಂದ್​​ಗೆ ಹುಬ್ಬಳ್ಳಿ, ಧಾರವಾಡ ಮತ್ತು ಹಾವೇರಿಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಹುಬ್ಬಳ್ಳಿಯಲ್ಲಿ ವಿವಿಧ ಕನ್ನಡಪರ ಸಂಘಟನೆಗಳು ಹಾಗೂ ಮಹದಾಯಿ ಹೋರಾಟಗಾರರು ಪ್ರತಿಭಟನೆ ನಡೆಸಿದರು. ಹುಬ್ಬಳ್ಳಿಯ ಹೊಸೂರ ವೃತ್ತದಲ್ಲಿ ನಮ್ಮ ಕರ್ನಾಟಕ ಸೇನೆ ಕಾರ್ಯಕರ್ತರು ಸೇರಿದಂತೆ ರೈತ ಮುಖಂಡರು ಪ್ರತಿಭಟನೆ ನಡೆಸಿದರು. ಕಾವೇರಿ ನಮ್ಮದು, ಕಾವೇರಿ ಹೋರಾಟಕ್ಕೆ ಜಯವಾಗಲಿ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಆದರೇ ಆಟೋ ಸಂಚಾರ, ಬಸ್ ಸಂಚಾರ …

Read More »

ಅದ್ಧೂರಿ ಕಿಚಡಿ ಜಾತ್ರೆಗೆ ಹರಿದು ಬಂದ ಭಕ್ತ ಸಾಗರ

ಬಾಗಲಕೋಟೆ: ಕಿಚಡಿ ಜಾತ್ರೆ ಎಂದೇ ಉತ್ತರ ಕರ್ನಾಟಕದಲ್ಲಿ ಪ್ರಸಿದ್ಧಿ ಪಡೆದುಕೊಂಡಿರುವ ಚಿಮ್ಮಡ ಗ್ರಾಮದ ಪ್ರಭುಲಿಂಗೇಶ್ವರ ಜಾತ್ರೆಯು ವಿಶೇಷವಾಗಿ ಗಮನ ಸೆಳೆಯುತ್ತಿದೆ. ಐತಿಹಾಸಿಕ ಹಿನ್ನೆಲೆ ಹಾಗೂ ಆಧ್ಯಾತ್ಮಿಕವಾಗಿ ಬೆಳೆದು‌ ಬಂದಿರುವ ಈ ಜಾತ್ರೆಯಲ್ಲಿ ಲಕ್ಷಾಂತರ ಭಕ್ತರು ಆಗಮಿಸಿ ಪ್ರಸಾದ ಸೇವನೆ ಮಾಡುತ್ತಾರೆ. ಈ ಮೂಲಕ ಕಿಚಡಿ ಜಾತ್ರೆ ಜಾತ್ಯಾತೀತವಾಗಿ ಹಾಗೂ ಧಾರ್ಮಿಕವಾಗಿ ಬೆಳೆದು ಬಂದಿದೆ. ಗುರುವಾರ ನಡೆದ ಈ ಜಾತ್ರೆಗೆ ಭಕ್ತ ಸಾಗರ ಸಾಕ್ಷಿಯಾಯಿತು. ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಚಿಮ್ಮಡಿ …

Read More »

ಶಕ್ತಿಸೌಧಕ್ಕೆ ತಟ್ಟಿದ ಕರ್ನಾಟಕ ಬಂದ್ ಬಿಸಿ: ಪ್ರತಿಭಟನೆಗೆ ಬೆಂಬಲ ಸೂಚಿಸಿದ 89ರ ವೃದ್ಧ

ಬೆಂಗಳೂರು : ಕರ್ನಾಟಕ ಬಂದ್ ಹಿನ್ನೆಲೆ ವಿಧಾನಸೌಧದಲ್ಲಿ ಸರ್ಕಾರಿ ನೌಕರರ ಸಂಖ್ಯೆ ವಿರಳವಾಗಿದೆ. ಹೀಗಾಗಿ, ಬಂದ್ ಬಿಸಿ ಶಕ್ತಿಸೌಧಕ್ಕೂ ತಟ್ಟಿದ್ದು, ಸಚಿವಾಲಯದ ಹಲವು ಸಿಬ್ಬಂದಿ ಇಂದು ಕೆಲಸಕ್ಕೆ ಗೈರಾಗಿದ್ದಾರೆ. ವಾರದಲ್ಲಿ ಎರಡನೇ ಬಂದ್ ಇದಾಗಿದ್ದು, ವಿಧಾನಸೌಧದ ಕಾರಿಡಾರ್​ಗಳು ಖಾಲಿ ಖಾಲಿ ಇವೆ. ಕರ್ನಾಟಕ ಬಂದ್ ಹಿನ್ನೆಲೆ ಹಲವು ಸಿಬ್ಬಂದಿ ಕೆಲಸಕ್ಕೆ ಆಗಮಿಸಿಲ್ಲ. ನಿನ್ನೆ ಈದ್ ಮಿಲಾದ್ ಇದ್ದ ಕಾರಣ ಸರ್ಕಾರಿ ರಜೆ ಇದ್ದು, ಇಂದು ಬಂದ್ ಇರುವುದರಿಂದ ಸಚಿವಾಲಯದ ಸಿಬ್ಬಂದಿ ಕೆಲಸಕ್ಕೆ …

Read More »

ಕಾವೇರಿ ವಿಚಾರದಲ್ಲಿ ಪ್ರಧಾನಿ ಮೋದಿ ವಿರುದ್ದ ವಿಡಂಬನಾತ್ಮಕ ಪೋಸ್ಟರ್​​ವೊಂದನ್ನು ಸಿಎಂ ಸಿದ್ದರಾಮಯ್ಯ ಪೋಸ್ಟ್ ಮಾಡಿದ್ದಾ

ಬೆಂಗಳೂರು: ಕಾವೇರಿ ವಿವಾದ ಹಿನ್ನೆಲೆ ಪ್ರಧಾನಿ ಮೋದಿ ನಡೆದುಕೊಂಡು ಹೋಗುತ್ತಿರುವ ಪಯಣದ ದಿಕ್ಕಿನ ವಿಡಂಬನಾತ್ಮಕ ಪೋಸ್ಟರ್ ಪೋಸ್ಟ್ ಮಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.   ಸಿಎಂ ಸಿದ್ದರಾಮಯ್ಯ ಅವರು ತಮ್ಮ ಸಾಮಾಜಿಕ ಜಾಲತಾಣದ ಪೋಸ್ಟ್​ನಲ್ಲಿ ಪ್ರಧಾನಿ ಮೋದಿ ಎಂದೂ ತುಳಿಯದ ಹಾದಿ ಎಂಬ ಶೀರ್ಷಿಕೆಯಡಿ ಚುನಾವಣೆ ಪ್ರಚಾರ ಮತ್ತು ಕಾವೇರಿ ಸಮಸ್ಯೆ ಇತ್ಯರ್ಥ ಎಂಬ ಪಯಣದ ದಿಕ್ಕಿನ ನಾಮಫಲಕ ಬಿಂಬಿಸುವ ಪೋಸ್ಟರ್​ ಹಾಕಿದ್ದಾರೆ.‌ ಪ್ರಧಾನಿ …

Read More »

ಕಾವೇರಿ’ದ ಬಂದ್: ಸ್ಯಾಂಡಲ್​ವುಡ್​ ನಟ-ನಟಿಯರಿಂದ ಪ್ರತಿಭಟನೆ.

ಬೆಂಗಳೂರು: ರಾಜ್ಯದೆಲ್ಲೆಡೆ ವಿವಿಧ ಸಂಘಟನೆಗಳಿಂದ ಕಾವೇರಿ ನೀರಿಗಾಗಿ ನಡೆಯುತ್ತಿರುವ ಬಂದ್​ಗೆ ಚಿತ್ರರಂಗ ಕೂಡ ಬೆಂಬಲ ನೀಡಿದೆ. ಕಾವೇರಿಗಾಗಿ ಬೀದಿಗಿಳಿಯಲಿರುವ ಸ್ಯಾಂಡಲ್​ವುಡ್ ತಾರೆಯರು, ನಟ ಶಿವರಾಜ್ ಕುಮಾರ್ ನೇತೃತ್ವದಲ್ಲಿ ಗುರುರಾಜ್ ಕಲ್ಯಾಣ ಮಂಟಪದಲ್ಲಿ ನಡೆಯುತ್ತಿರುವ ಹೋರಾಟಕ್ಕೆ ಸಾಥ್​ ನೀಡಿದರು. ಈಗಾಗಲೇ ನಟರಾದ ಶಿವರಾಜ್​ ಕುಮಾರ್, ಉಪೇಂದ್ರ, ಶ್ರೀಮುರಳಿ, ದರ್ಶನ್, ಲೂಸ್ ಮಾದ ಯೋಗಿ, ಚಿಕ್ಕಣ್ಣ, ಶ್ರೀನಾಥ್, ಓಂ ಸಾಯಿ ಪ್ರಕಾಶ್, ರಘು ಮುಖರ್ಜಿ, ತಬಲ ನಾಣಿ, ಶ್ರೀಮುರಳಿ ವಿಜಯರಾಘವೇಂದ್ರ, ಶ್ರೀನಿವಾಸ್ ಮೂರ್ತಿ, ನಟಿಯರಾದ …

Read More »

ಬುರ್ಖಾ ಧರಿಸಿ, ಖಾಲಿ ಬಿಂದಿಗೆ ಹೊತ್ತು ಪ್ರತಿಭಟನೆಗೆ ಬಂದ ವಾಟಾಳ್ ನಾಗರಾಜ್..

ಬೆಂಗಳೂರು: ಕಾವೇರಿ ನೀರಿಗಾಗಿ ನಡೆಯುತ್ತಿರುವ ಕರ್ನಾಟಕ ಬಂದ್​ ಹಿನ್ನೆಲೆಯಲ್ಲಿ ಟೌನ್​ ಹಾಲ್​ ಬಳಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ವಾಟಾಳ್​ ನಾಗರಾಜ್​, ಸಾ ರಾ ಗೋವಿಂದು ಮತ್ತಿತರರನ್ನು ಪೊಲೀಸರು ವಶಕ್ಕೆ ಪಡೆದು ಫ್ರೀಡಂ ಪಾರ್ಕ್​​ಗೆ ಕರೆದೊಯ್ದಿದ್ದಾರೆ. ಫ್ರೀಡಂ ಪಾರ್ಕ್​ನಲ್ಲಿ ಪ್ರತಿಭಟನೆ ಮುಂದುವರಿಯಲಿದೆ. ಪ್ರತಿಭಟನೆಯಲ್ಲಿ ಭಾಗಿಯಾಗುವ ಮುನ್ನ ಡಾಲರ್ಸ್ ಕಾಲೋನಿಯ ತಮ್ಮ ನಿವಾಸದ ಬಳಿ ಬುರ್ಖಾ ಧರಿಸಿ ಮಾಧ್ಯಮಗಳೊಂದಿಗೆ ಮಾತನಾಡಿರುವ ವಾಟಾಳ್ ನಾಗರಾಜ್, “ಇವತ್ತು ಎರಡು ಬಂದ್ ನಡೆಯುತ್ತಿದೆ. ಒಂದು ಕಾವೇರಿಗಾಗಿ ನಾವು ಕರೆ ಕೊಟ್ಟಿರುವ …

Read More »

ವಿಜೃಂಭಣೆಯಿಂದ ಜರುಗಿದ ಗಣೇಶೋತ್ಸವಕ್ಕೆ ತೆರೆ ಬಿದ್ದಿದೆ.

ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿಯಲ್ಲಿ 10 ದಿನಗಳ ಕಾಲ ವಿಜೃಂಭಣೆಯಿಂದ ಜರುಗಿದ ಗಣೇಶೋತ್ಸವಕ್ಕೆ ತೆರೆ ಬಿದ್ದಿದೆ. ಗುರುವಾರ ಸಾರ್ವಜನಿಕ ಗಣೇಶ ಮಂಡಳಿಗಳ ಗಣೇಶ ಮೂರ್ತಿಗಳ ನಿಮಜ್ಜನ ಮೆರವಣಿಗೆಗೆ ಅಧಿಕೃತವಾಗಿ ಚಾಲನೆ ಸಿಕ್ಕಿದೆ. ನಗರದ ಕಿರ್ಲೋಸ್ಕರ್ ರಸ್ತೆಯಲ್ಲಿರುವ ಹುತಾತ್ಮ ಚೌಕ್​​ನಲ್ಲಿ ಮೆರವಣಿಗೆಗೆ ದಕ್ಷಿಣ ಕ್ಷೇತ್ರದ ಶಾಸಕ ಅಭಯ್ ಪಾಟೀಲ್ ಹಾಗೂ ಉತ್ತರ ಕ್ಷೇತ್ರದ ಶಾಸಕ ಆಸೀಫ್ ಸೇಠ್ ಅವರು ಗಣೇಶನಿಗೆ ಪೂಜೆ ಸಲ್ಲಿಸಿ, ಡೊಳ್ಳು ಬಾರಿಸಿ ಚಾಲನೆ ನೀಡಿದರು. ಇದೇ ವೇಳೆ ಗಣೇಶ …

Read More »

ಬೆಳಗಾವಿಯಲ್ಲಿ ತಟ್ಟದ ಬಂದ್ ಬಿಸಿ, ಪ್ರತಿಭಟನಾಕಾರರು ಪೊಲೀಸ್ ವಶಕ್ಕೆ

ಬೆಳಗಾವಿ: ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುಗಡೆ ವಿರೋಧಿಸಿ ಇಂದು ಕೆಲ ಸಂಘಟನೆಗಳು ಕರ್ನಾಟಕ ಬಂದ್​ಗೆ ಕರೆ ನೀಡಿದ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಕರವೇ ಶಿವರಾಮೇಗೌಡ ಬಣದಿಂದ ಕೂಡ ಬೆಳ್ಳಂಬೆಳಗ್ಗೆ ಪ್ರತಿಭಟನೆ ನಡೆಸಲಾಯಿತು. ಬೆಳಗಾವಿಯ ಕೇಂದ್ರ ಬಸ್ ನಿಲ್ದಾಣದಲ್ಲಿ ಕರವೇ ಜಿಲ್ಲಾಧ್ಯಕ್ಷ ವಾಜೀದ ಹಿರೇಕೂಡಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ತಮಿಳುನಾಡಿಗೆ ನೀರು ಬಿಡುವುದನ್ನು ವಿರೋಧಿಸಿ ಆಕ್ರೋಶ ವ್ಯಕ್ತಪಡಿಸಲಾಯಿತು. “ನಮ್ಮದು ನಮ್ಮದು ಕಾವೇರಿ ನಮ್ಮದು” ಎಂದು ಘೋಷಣೆ ಕೂಗಿದ ಕರವೇ ಕಾರ್ಯಕರ್ತರ ಪ್ರತಿಭಟನೆಗೆ ರೈತ …

Read More »

ಕಾವೇರಿ ಕಿಚ್ಚು ಹೆಚ್ಚಿದ್ದು ಪ್ರತಿಭಟನಕಾರರ ಆಕ್ರೋಶ

ಮಂಡ್ಯ: ಸಕ್ಕರೆ ನಗರಿ ಮಂಡ್ಯದಲ್ಲಿ ಕಾವೇರಿ ಕಿಚ್ಚು ಹೆಚ್ಚಿದ್ದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು. ಮಂಡ್ಯದ ಸಂಜಯ ವೃತ್ತದಲ್ಲಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ ಕಾರ್ಯಕರ್ತರು ಹೆದ್ದಾರಿಯಲ್ಲಿ ಕುಳಿತು ಪ್ರತಿಭಟನೆ ನಡೆಸಿದರು. ಇನ್ನು ಶ್ರೀರಂಗಪಟ್ಟಣದ ಚಂದ್ರವನ ಆಶ್ರಮದ ಬಳಿ ಬೆಳ್ಳಂಬೆಳಗ್ಗೆ ಕಾವೇರಿ ನದಿಗಿಳಿದು ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಕಸ್ತೂರಿ ಕನ್ನಡ ಜನಪರ ವೇದಿಕೆ ರಾಜ್ಯಾಧ್ಯಕ್ಷ ರಮೇಶ್ ಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ತಮಿಳುನಾಡಿಗೆ ನೀರು ಬಿಡಲು ಆದೇಶ ಕೊಟ್ಟ ಸುಪ್ರೀಂ ಕೋರ್ಟ್​ …

Read More »

ಮುಧೋಳ ರನ್ನ ಸಕ್ಕರೆ ಕಾರ್ಖಾನೆ ಪುನಃಶ್ಚೇತನಕ್ಕೆ ಟೆಂಡರ್ ಕರೆಯಲು ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ರನ್ನ ಸಹಕಾರಿ ಸಕ್ಕರೆ ಕಾರ್ಖಾನೆಯನ್ನು ಪುನಶ್ಚೇತನಗೊಳಿಸಲು ಅಲ್ಪಾವಧಿ ಟೆಂಡರ್ ಕರೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು. ಗೃಹ ಕಚೇರಿ ಕಷ್ಣಾದಲ್ಲಿ ನಡೆದ ಸಭೆಯಲ್ಲಿ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ರನ್ನ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ 2023-24ನೇ ಸಾಲಿಗೆ ಕಬ್ಬು ಅರೆಯುವ ಕಾರ್ಯವನ್ನು ಲೀಸ್ ಮೂಲಕ ಪುನರಾರಂಭಿಸುವ ಕುರಿತು ಚರ್ಚಿಸಿದರು. ಈ ವೇಳೆ ಮಾತನಾಡಿ, ಕಬ್ಬು ಅರೆಯುವ ಕಾರ್ಯ ಪ್ರಾರಂಭವಾಗಬೇಕು. ಪುನಶ್ಚೇತನದಿಂದ ರೈತರಿಗೂ ಅನುಕೂಲ ಆಗಬೇಕು. ಅಲ್ಪಮಟ್ಟದ ಹೂಡಿಕೆಗೆ ಸಿದ್ಧವಿರುವ ಸಂಸ್ಥೆಗಳು …

Read More »