Breaking News

ಐತಿಹಾಸಿಕ ತಾಣ ಹಂಪಿಗೆ ಒಲಿದ ಅತ್ಯುತ್ತಮ ಪ್ರವಾಸೋದ್ಯಮ ಗ್ರಾಮ ರಾಷ್ಟ್ರೀಯ ಪ್ರಶಸ್ತಿ

ವಿಜಯನಗರ: ರಾಜ್ಯದ ಹೆಮ್ಮೆಯ ಐತಿಹಾಸಿಕ ತಾಣ ಹಂಪಿಯ ಪ್ರವಾಸೋದ್ಯಮಕ್ಕೆ ಮತ್ತೊಂದು ಗೌರವ ಸಂದಿದೆ. ಕೇಂದ್ರ ಸರ್ಕಾರದ ಅತ್ಯುತ್ತಮ ಪ್ರವಾಸೋದ್ಯಮ ಗ್ರಾಮ ರಾಷ್ಟ್ರೀಯ ಪ್ರಶಸ್ತಿಗೆ ಹಂಪಿ ಆಯ್ಕೆಯಾಗಿದೆ. ಹಂಪಿ ಗ್ರಾಮ ಪಂಚಾಯಿತಿಗೆ ರಾಷ್ಟ್ರೀಯ ಮಾನ್ಯತೆಯ ಗೌರವ ಒಲಿದಿದೆ. ನವದೆಹಲಿಯ ಭಾರತ್ ಮಂಟಪದಲ್ಲಿ ಪ್ರವಾಸೋದ್ಯಮ ರಾಜ್ಯ ಖಾತೆ ಸಚಿವ ಅಜಯ್ ಭಟ್ ಈ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಹಂಪಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರಜನಿ ಷಣ್ಮುಖ ಗೌಡ ಪ್ರಶಸ್ತಿ ಸ್ವೀಕಾರ‌ ಮಾಡಿದರು. ಪ್ರಶಸ್ತಿಗೆ 15 …

Read More »

ರಾಯಚೂರು ಜಿಲ್ಲೆಯ ಹಟ್ಟಿ ಪಟ್ಟಣದಲ್ಲಿ ಆಫ್ರಿಕನ್ ಸ್ವೈನ್ ಫ್ಲೂ ಪತ್ತೆ

ರಾಯಚೂರು: ಬಿಸಿಲೂರು ರಾಯಚೂರು ಜಿಲ್ಲೆಯಲ್ಲಿ ಆಫ್ರಿಕನ್ ಸ್ವೈನ್ ಫ್ಲೂ ಜ್ವರ ಕಾಣಿಸಿಕೊಂಡಿದ್ದು, ಸಾರ್ವಜನಿಕರಲ್ಲಿ ಆತಂಕವನ್ನು ಮೂಡಿಸಿದೆ. ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಹಟ್ಟಿ(ಚಿನ್ನದ ಗಣಿ)ಯಲ್ಲಿ ಹಂದಿಗಳಲ್ಲಿ ಆಫ್ರಿಕನ್ ಸ್ವೈನ್ ಫ್ಲೂ ಕಾಣಿಸಿಕೊಂಡ ಪರಿಣಾಮ, ಅವು ಸಾವನ್ನಪ್ಪುತ್ತಿವೆ. ಹೀಗಾಗಿ ಅಲ್ಲಿನ ಸ್ಥಳೀಯರಿಗೆ ಜ್ವರ ಆವರಿಸುತ್ತಾ ಎಂಬ ಭೀತಿಯಲ್ಲಿ ಜನರು ಕಾಲ ಕಳೆಯುತ್ತಿದ್ದಾರೆ. ಕಳೆದ ತಿಂಗಳಿನಿಂದ ಇಲ್ಲಿಯವರೆಗೆ ಸುಮಾರು 100ಕ್ಕೂ ಹಂದಿಗಳು ಆಫ್ರಿಕನ್ ಸ್ವೈನ್ ಫ್ಲೂದಿಂದ ಮೃತಪಟ್ಟಿವೆ. ಹಂದಿಗಳ ಸಾವು ಕುರಿತಂತೆ ಮಾದರಿ ಪರೀಕ್ಷೆಗೆ ಒಳಪಡಿಸಿದ …

Read More »

ಜಂಬೂಸವಾರಿಗೆ ಗಜಪಡೆ ಸಿದ್ಧತೆ

ಮೈಸೂರು : ವಿಶ್ವವಿಖ್ಯಾತಿ ನಾಡಹಬ್ಬ ದಸರಾದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಗೆ ಅಭಿಮನ್ಯು ನೇತೃತ್ವದ ಗಜಪಡೆಯ ತಾಲೀಮು ನಡೆಸಲಾಗುತ್ತಿದೆ. ಜೊತೆಗೆ ವಿಶೇಷ ಆಹಾರ ಹಾಗೂ ಭಾರ ಹೊರುವ ತಾಲೀಮನ್ನು ನಡೆಸಲಾಗುತ್ತಿದ್ದು, ಈ ಸಿದ್ಧತೆ ಬಗ್ಗೆ ಡಿಸಿಎಫ್ ಸೌರವ್ ಕುಮಾರ್ ಅವರು ಈಟಿವಿ ಭಾರತಕ್ಕೆ ನೀಡಿದ ಸಂದರ್ಶನದಲ್ಲಿ ವಿವರಿಸಿದ್ದಾರೆ. ದಸರಾ ಜಂಬೂಸವಾರಿಗೆ ಗಜಪಡೆ ತಾಲೀಮು ಸೇರಿದಂತೆ ಎಲ್ಲಾ ರೀತಿಯಲ್ಲೂ ಸಿದ್ಧತೆಗಳು ನಡೆಯುತ್ತಿವೆ. ಈಗಾಗಲೇ 5 ಆನೆಗಳಿಗೆ ಭಾರ ಹಾಕಿ ತಾಲೀಮು ನಡೆಸಿದ್ದು, ಈ ವೇಳೆ ಬರುವ …

Read More »

ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ನಾನು ಕೂಡ ಪ್ರಬಲ ಆಕಾಂಕ್ಷಿ- ಮೋಹನ್​ ಲಿಂಬಿಕಾಯಿ

ಹುಬ್ಬಳ್ಳಿ: ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ನಾನು ಕೂಡ ಪ್ರಬಲ ಆಕಾಂಕ್ಷಿಯಾಗಿದ್ದು, ಕೆಪಿಸಿಸಿ ಅಧ್ಯಕ್ಷರ ಬಳಿ ಟಿಕೆಟ್ ಕೇಳಿದ್ದೇನೆ. ಕ್ಷೇತ್ರದಲ್ಲಿ ಕೆಲಸ ಮಾಡುವಂತೆ ಡಿಸಿಎಂ ಡಿ ಕೆ ಶಿವಕುಮಾರ್ ಸೂಚಿಸಿದ್ದಾರೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಮೋಹನ್ ಲಿಂಬಿಕಾಯಿ ಹೇಳಿದ್ದಾರೆ. ನಗರದಲ್ಲಿಂದು ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ನಮ್ಮ ಕಾಂಗ್ರೆಸ್​ ಪಕ್ಷದ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಅವರು ಕರೆಸಿದ್ದರು. ಅವರೊಂದಿಗೆ ಸುದೀರ್ಘವಾದ ಚರ್ಚೆಯೂ ಆಯಿತು. ಚರ್ಚೆಯಾಗಿ ಅವರು ಪೂರಕವಾಗಿ ಸ್ಪಂದಿಸುತ್ತೇವೆ ಎಂದು …

Read More »

ಬ್ಯಾರಲ್​ ಬಳಸಿ ಸೇತುವೆ ನಿರ್ಮಾಣ ಮಾಡಿದ ರೈತರು.

ಬಾಗಲಕೋಟೆ : ರೈತರು ಮನಸ್ಸು ಮಾಡಿದರೆ ಯಾವ ಸಮಸ್ಯೆಯನ್ನೂ ಬಗೆಹರಿಸಿಕೊಳ್ಳಬಹುದು ಎಂಬುದನ್ನು ಬಾಗಲಕೋಟೆಯ ಜಮಖಂಡಿ ರೈತರು ತೋರಿಸಿಕೊಟ್ಟಿದ್ದಾರೆ. ಇಲ್ಲಿನ ಕೃಷ್ಣಾ ನದಿಗೆ ಅಡ್ಡಲಾಗಿ ಬ್ಯಾರಲ್​ ಸೇತುವೆ ನಿರ್ಮಾಣ ಮಾಡುವ ಮೂಲಕ ಜನರಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ. ಈ ಮೂಲಕ ದಶಕಗಳಿಂದ ಜಮಖಂಡಿ ತಾಲೂಕಿನ ಕಂಕಣವಾಡಿ ಗ್ರಾಮಸ್ಥರು ಎದುರಿಸುತ್ತಿದ್ದ ಸಮಸ್ಯೆಗೆ ರೈತರು ಪರಿಹಾರ ಕಂಡುಕೊಂಡಿದ್ದಾರೆ. ರೈತರಿಂದ ಬ್ಯಾರಲ್​ ಸೇತುವೆ ನಿರ್ಮಾಣ : ಗ್ರಾಮದ ರೈತರು ಸ್ವತಃ ತಾವೇ ಹಣ ಸಂಗ್ರಹಿಸಿ ನದಿ ದಾಟಲು ಬ್ಯಾರಲ್ ಸೇತುವೆ …

Read More »

ಹಿಂದಿನ ಸರ್ಕಾರಗಳೂ ತಮಿಳುನಾಡಿಗೆ ನೀರು ಬಿಟ್ಟಿವೆ. ಈಗ ಮಾತಾಡುವವವರೂ ಆಗ ನೀರು ಬಿಟ್ಟಿದ್ದರು.: ಸತೀಶ್​​ ಜಾರಕಿಹೊಳಿ

ಬೆಳಗಾವಿ: ಹಿಂದಿನ ಸರ್ಕಾರಗಳೂ ತಮಿಳುನಾಡಿಗೆ ನೀರು ಬಿಟ್ಟಿವೆ. ಈಗ ಮಾತಾಡುವವವರೂ ಆಗ ನೀರು ಬಿಟ್ಟಿದ್ದರು. ಹಾಗಾಗಿ, ಆದೇಶ ಯಾರು ಮಾಡಿದ್ದಾರೋ ಅವರ ವಿರುದ್ಧ ಪ್ರತಿಭಟನೆ ಮಾಡಬೇಕು. ಆದರೆ, ಇದಕ್ಕೆ ತದ್ವಿರುದ್ಧವಾಗಿ ನಮ್ಮ ವಿರುದ್ಧ ಪ್ರತಿಭಟನೆ ಮಾಡಲಾಗುತ್ತಿದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್​​ ಜಾರಕಿಹೊಳಿ ಹೇಳಿದರು. ನಗರದ ಕಾಂಗ್ರೆಸ್ ಭವನದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ತಮಿಳುನಾಡಿಗೆ ನೀರು ಬಿಡುವಂತೆ ಆದೇಶ ಮಾಡಿದೆ. 25 …

Read More »

ನಾಳೆ ಕರ್ನಾಟಕ ಬಂದ್: ಆಯಕಟ್ಟಿನ ಜಾಗಗಳಲ್ಲಿ ಪೊಲೀಸ್ ಬಂದೋಬಸ್ತ್.. ಯಾವ ಸೇವೆ ಇರುತ್ತೆ, ಯಾವುದಿರಲ್ಲ?

ಬೆಂಗಳೂರು : ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ಖಂಡಿಸಿ ಬೆಂಗಳೂರು ಬಂದ್​ಗೆ ಕರೆ ನೀಡಿದ ಬೆನ್ನಲ್ಲೇ ನಾಳೆ ಕರ್ನಾಟಕ ಬಂದ್​ಗೆ ಕನ್ನಡಪರ ಸಂಘಟನೆಗಳು ಕರೆ ನೀಡಿದ್ದು, ಬಹುತೇಕ ಸಂಘ-ಸಂಸ್ಥೆಗಳು ಬೆಂಬಲ ಸೂಚಿಸಿವೆ. ಈ ಹಿನ್ನೆಲೆ ಅಂಗಡಿ-ಮುಂಗಟ್ಟು, ಕೈಗಾರಿಕೆ ಹಾಗೂ ಸಿನಿಮಾ ಥಿಯೇಟರ್ ಸೇರಿದಂತೆ ಬಹುತೇಕ ಸೇವೆಗಳು ಸ್ತಬ್ಧವಾಗುವ ಸಾಧ್ಯತೆಯಿದೆ. ಕಾವೇರಿ ವಿಚಾರವಾಗಿ ರೈತಪರ ಸಂಘಟನೆಗಳು ಕರೆ ನೀಡಿದ್ದ ಬೆಂಗಳೂರು ಬಂದ್ ಯಶಸ್ವಿಯಾಗಿತ್ತು. ಇದಕ್ಕೂ ಮುನ್ನ ಮಂಡ್ಯ ಬಂದ್ ಸಹ ಯಶಸ್ವಿಯಾಗಿತ್ತು. ಕನ್ನಡ ಒಕ್ಕೂಟದ …

Read More »

ನಾಳೆ ಕರ್ನಾಟಕ ಬಂದ್​​ಗೆ ಸಕಲ ಸಿದ್ಧತೆ ನಡೆದಿದೆ. ಕನ್ನಡ ಚಿತ್ರರಂಗದಿಂದ ಹೋರಾಟಕ್ಕೆ ಬೆಂಬಲ

ನಾಳೆ ಕರ್ನಾಟಕ ಬಂದ್​​ಗೆ ಸಕಲ ಸಿದ್ಧತೆ ನಡೆದಿದೆ. ಕನ್ನಡ ಚಿತ್ರರಂಗದಿಂದ ಹೋರಾಟಕ್ಕೆ ಬೆಂಬಲ ಸಿಕ್ಕಿದೆ. ಕಳೆದ ಮಂಗಳವಾರ ಕಾವೇರಿಗಾಗಿ ನಮ್ಮ ರಾಜ್ಯ ರಾಜಧಾನಿ ಬಂದ್ ಆಗಿತ್ತು. ನಾಳೆ ಕರ್ನಾಟಕ ಬಂದ್​​ಗೆ ಸಕಲ ಸಿದ್ಧತೆ ನಡೆದಿದೆ. ಕನ್ನಡ ಒಕ್ಕೂಟಗಳು ಕರೆ ಕೊಟ್ಟಿರುವ ಕರ್ನಾಟಕ ಬಂದ್​​ಗೆ ಚಿತ್ರರಂಗ ಕೈ ಜೋಡಿಸಿದೆ. ಹಿರಿಯ ನಟ ಡಾ. ಶಿವರಾಜ್​ಕುಮಾರ್ ನೇತೃತ್ವದಲ್ಲಿ ಇಡೀ ಚಿತ್ರರಂಗ ನಾಳೆಯ ಹೋರಾಟದಲ್ಲಿ ಭಾಗಿಯಾಗಲಿದೆ. ಶೂಟಿಂಗ್ ಜೊತೆ ಥಿಯೇಟರ್ ಕೂಡ ಕ್ಲೋಸ್ ಆಗಲಿವೆ. …

Read More »

ಕಾವೇರಿ ನೀರು ಬಿಡುಗಡೆ ವಿರುದ್ಧ ಕರ್ನಾಟಕ ಬಂದ್ ಅಗತ್ಯವಿಲ್ಲ: ಗೃಹ ಸಚಿವ ಡಾ.‌ಜಿ ಪರಮೇಶ್ವರ್

ಬೆಂಗಳೂರು: ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಬಿಡುಗಡೆ ಮಾಡುತ್ತಿರುವುದನ್ನು ವಿರೋಧಿಸಿ ಕರ್ನಾಟಕ ಬಂದ್ ಮಾಡುವ ಅಗತ್ಯವಿಲ್ಲ ಎಂದು‌ ಗೃಹ ಸಚಿವ ಡಾ.‌ ಜಿ ಪರಮೇಶ್ವರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನ್ಯಾಯಾಲಯ ಕೂಡ ಬಂದ್ ಮಾಡಬಾರದು ಎಂದು ಹೇಳಿದೆ. ಆದರೆ, ಪ್ರತಿಭಟನೆ ಮಾಡಬಹುದು. ಪ್ರತಿಭಟನೆ ಅವರ ಹಕ್ಕು.‌ ಸಂಘಟನೆಗಳಿಗೆ ಕರ್ನಾಟಕ ಬಂದ್ ಬೇಡ ಎಂದು ಮನವಿ ಮಾಡಿದ್ದೇವೆ. ವಿರೋಧ ಪಕ್ಷಗಳು ರಾಜಕೀಯ ಕಾರಣಕ್ಕೆ ಬಂದ್​ಗೆ ಬೆಂಬಲ ಕೊಡುತ್ತಿದ್ದಾವೆ. ಇಂತಹ ಸಂದರ್ಭದಲ್ಲಿ ರಾಜಕೀಯ …

Read More »

ನಾಳೆ ಕರ್ನಾಟಕ ಬಂದ್​ ಹಿನ್ನೆಲೆ ಬೆಂಗಳೂರಲ್ಲಿ ಇಂದು ಮಧ್ಯರಾತ್ರಿಯಿಂದಲೇ 144 ಸೆಕ್ಷನ್​ ಜಾರಿ

ನಾಳೆ ಕರ್ನಾಟಕ ಬಂದ್​ ಹಿನ್ನೆಲೆ ಸಿಲಿಕಾನ್​ ಸಿಟಿ ಬೆಂಗಳೂರಲ್ಲಿ ಇಂದು ಮಧ್ಯರಾತ್ರಿಯಿಂದಲೇ 144 ಸೆಕ್ಷನ್​ ಜಾರಿಯಲ್ಲಿರಲಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ‌ ದಯಾನಂದ ಮಾಹಿತಿ ನೀಡಿದ್ದಾರೆ. ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿರುವುದನ್ನ ಖಂಡಿಸಿ ವಿವಿಧ ಸಂಘಟನೆಗಳು ಮಂಗಳವಾರ ಬೆಂಗಳೂರು ಬಂದ್​ಗೆ ಕರೆ ನೀಡಿದ್ದವು. ಯಾವುದೇ ಅಹಿತಕರ ಘಟನೆ ನಡೆಯದಂತೆ ನಗರ ಪೊಲೀಸರು ಬಿಗಿ ಪೊಲೀಸ್ ಭದ್ರತೆ ಕೈಗೊಂಡಿದ್ದರು. ತಮಿಳು ಭಾಷಿಕರು ವಾಸವಿರುವ ಪ್ರದೇಶ, ಚಿತ್ರಮಂದಿರ ಸೇರಿದಂತೆ ಸೂಕ್ಷ್ಮ ಹಾಗೂ …

Read More »