ಬೆಂಗಳೂರು: ಕಾಂಗ್ರೆಸ್ ಸರ್ಕಾರ ಬೆಂಗಳೂರಿನಲ್ಲಿ ಕಸ ಸಂಸ್ಕರಣೆ ಮಾಡುವ ನೆಪದಲ್ಲಿ 39,000 ಕೋಟಿ ರೂ. ಹಗರಣ ನಡೆಸಿದೆ. 35 ವರ್ಷಗಳ ಸುದೀರ್ಘ ಅವಧಿಗೆ ಎಂಎಸ್‌ಡಬ್ಲ್ಯು ಸೊಲ್ಯೂಶನ್ಸ್ ಲಿಮಿಟೆಡ್‌ಗೆ ನೀಡುತ್ತಿರುವ ಟೆಂಡರ್‌ನ ಒಟ್ಟು ಮೊತ್ತದಲ್ಲಿ 10,000 ಕೋಟಿ ರೂ. ಕಿಕ್‌ಬ್ಯಾಕ್ ಪಡೆಯಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆರೋಪಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಬಿಜೆಪಿ ಸರ್ಕಾರವಿದ್ದಾಗ ಸ್ವಚ್ಛತೆಯಲ್ಲಿ ಅತ್ಯುತ್ತಮ ನಗರ ಎಂಬ ಹೆಗ್ಗಳಿಕೆ ಬೆಂಗಳೂರಿಗೆ ಸಿಕ್ಕಿತ್ತು. ಈಗ ಬೆಂಗಳೂರೇ …
Read More »ಅಪ್ರಾಪ್ತೆಗೆ ಬ್ಲ್ಯಾಕ್‌ಮೇಲ್ ಮಾಡಿ ಸಾಮೂಹಿಕ ಅತ್ಯಾಚಾರ ಆರೋಪ – ಐವರ ಬಂಧನ
ಚಿಕ್ಕಮಗಳೂರು: ಅಪ್ರಾಪ್ತೆಗೆ ಬ್ಲ್ಯಾಕ್‌ಮೇಲ್ ಮಾಡಿ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ ಐವರು ಆರೋಪಿಗಳನ್ನು ಚಿಕ್ಕಮಗಳೂರಿನ ಗೋಣಿಬೀಡು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ಪ್ರಮುಖ ಆರೋಪಿ ನ್ಯಾಯಾಲಯಕ್ಕೆ ಶರಣಾಗಿದ್ದಾನೆ. ಈತ ಈ ಹಿಂದೆಯೂ ಪೋಕ್ಸೋ ಪ್ರಕರಣದಲ್ಲಿ ಜೈಲು ಸೇರಿದ್ದ ಎಂದು ತಿಳಿದುಬಂದಿದೆ. ಫೋಟೋ ಒಂದನ್ನು ತೋರಿಸಿ ಅಪ್ರಾಪ್ತೆಗೆ ಬೆದರಿಸಿ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಆರೋಪಿಸಲಾಗಿದೆ. ಈ ಸಂಬಂಧ 5 ಮಂದಿ ವಿರುದ್ಧ ಗೋಣಿಬೀಡು ಠಾಣೆಗೆ ಆಕೆ ದೂರು ನೀಡಿದ್ದಳು. ಇನ್ನೂ …
Read More »ರೇಣುಕಾಸ್ವಾಮಿ ಕೊಲೆ ಕೇಸ್ – ದರ್ಶನ್ ಅರೆಸ್ಟ್ ಆಗಿ 2 ವರ್ಷ
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ನಟ ದರ್ಶನ್ ಅರೆಸ್ಟ್ ಆಗಿ (ಜೂ.11) 2 ವರ್ಷ ಪೂರೈಸಲಿದೆ. ಕೊಲೆ ಕೇಸಲ್ಲಿ 2024 ಜೂನ್ 11ರಂದು ಮೈಸೂರಿನಲ್ಲಿ ಹೋಟೆಲ್‌ನಲ್ಲಿದ್ದಾಗಲೇ ಅರೆಸ್ಟ್ ಮಾಡಲಾಗಿತ್ತು. 1 ಬಾರಿ ಮಧ್ಯಂತರ ಜಾಮೀನು ಪಡೆದು ಹೊರಬಂದಿದ್ದರು. ಅದಾದ ಬಳಿಕ ಸುಪ್ರೀಂನಲ್ಲಿ ಜಾಮೀನು ರದ್ದಾದ ಹಿನ್ನೆಲೆ ದರ್ಶನ್ ಸೇರಿ 7 ಆರೋಪಿಗಳು ಮತ್ತೆ ಜೈಲುಪಾಲಾಗಿದ್ದಾರೆ. ಇನ್ನು, ದರ್ಶನ್ ಸಹಚರರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ …
Read More »ಅಶೋಕ್ ಕಸ ಮಾಫಿಯಾ ಗ್ಯಾಂಗ್‌ನ ಏಜೆಂಟ್ ಆಗಿ ಮಾತನಾಡ್ತಿದ್ದಾರೆ: ಸಿಎಂ ಡಿಕೆಶಿ
ನವದೆಹಲಿ: ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ್ ಅವರು ಬೆಂಗಳೂರು ಕಸದ ಮಾಫಿಯಾ ಗ್ಯಾಂಗಿನ ಏಜೆಂಟರಾಗಿ ಮಾತನಾಡುತ್ತಿದ್ದಾರೆ. ಈ ಮಾಫಿಯಾ ನಿಯಂತ್ರಿಸಬೇಕು ಎಂದು ನಾನು ಈ ಹಿಂದೆ ಅವರೊಂದಿಗೆ ಚರ್ಚೆ ಮಾಡಿದ್ದೆ. ಈಗ ಅಶೋಕ್ ಅವರು ಮಾಫಿಯಾದ ವಕ್ತಾರರಾಗಿರುವುದು ನನಗೆ ಆಶ್ಚರ್ಯವಾಗಿದೆ ಎಂದು ಸಿಎಂ ಡಿ.ಕೆ ಶಿವಕುಮಾರ್ ಅವರು ತಿರುಗೇಟು ನೀಡಿದರು. ದೆಹಲಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಬುಧವಾರ ಪ್ರತಿಕ್ರಿಯೆ ನೀಡಿದರು. ಕಸದ ಟೆಂಡರ್ ನಲ್ಲಿ 10 ಸಾವಿರ …
Read More »ಮೇಲುಕೋಟೆ ದೇವಸ್ಥಾನದಲ್ಲಿ ಕಳ್ಳತನ – ಅರ್ಚಕ, ಸಿಬ್ಬಂದಿ ವಿರುದ್ಧ ಕೇಸ್
ಮಂಡ್ಯ: ಐತಿಹಾಸಿಕ ಹಾಗೂ ಪ್ರಸಿದ್ಧ ಪುಣ್ಯಕ್ಷೇತ್ರವಾದ ಮಂಡ್ಯ ಜಿಲ್ಲೆಯ ಮೇಲುಕೋಟೆಯ ಯೋಗನರಸಿಂಹಸ್ವಾಮಿ ದೇವಸ್ಥಾನದಲ್ಲಿ ಭಾರಿ ಕಳ್ಳತನ ನಡೆದಿರುವ ಶಂಕೆ ವ್ಯಕ್ತವಾಗಿದೆ. ದೇವಸ್ಥಾನದ ಅರ್ಚಕರು ಹಾಗೂ ಸಿಬ್ಬಂದಿ ವಿರುದ್ಧವೇ ಮೇಲುಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೇವಸ್ಥಾನದ ಹುಂಡಿಯಲ್ಲಿದ್ದ ಚಿನ್ನ, ಬೆಳ್ಳಿ ಹಾಗೂ ನಗದು ಕಳ್ಳತನವಾಗಿದೆ ಎಂದು ಆರೋಪಿಸಿ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಶೀಲಾ ಅವರು ಪೊಲೀಸರಿಗೆ ಅಧಿಕೃತವಾಗಿ ದೂರು ನೀಡಿದ್ದಾರೆ. ಹಿಂದೆ ನಡೆದಿದ್ದ ಪ್ರಸಿದ್ಧ ವಜ್ರಾಂಗಿ ಆಭರಣ ಕಳ್ಳತನದ ಬಳಿಕ, …
Read More »ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಪರ್ವ: 2.50 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಚಾಲನೆ
ಚಿಕ್ಕೋಡಿ: ಗ್ರಾಮೀಣ ಭಾಗದ ಸಮಗ್ರ ಪ್ರಗತಿ ಮತ್ತು ಮೂಲಭೂತ ಸೌಕರ್ಯಗಳ ಬಲವರ್ಧನೆಗೆ ಮುಂಚೂಣಿ ಆದ್ಯತೆ ನೀಡಿರುವ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಜನಪ್ರಿಯ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ಬುಧವಾರ ರಾಯಬಾಗ ಮತಕ್ಷೇತ್ರದಲ್ಲಿ ಮಹತ್ತರ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದರು. ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಮೊರಬ ಗ್ರಾಮ ಸೇರಿದಂತೆ, ಕುಡಚಿ ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮೀಣ ಪ್ರದೇಶಗಳಲ್ಲಿ 2025-26ನೇ ಸಾಲಿನ ಎಸ್‌ಸಿಪಿ ಹಾಗೂ ಟಿಎಸ್ಪಿ ಯೋಜನೆಯಡಿ ಮಂಜೂರಾಗಿರುವ ಒಟ್ಟು ಅಂದಾಜು 2.50 …
Read More »ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು – ರೌಡಿಶೀಟರ್ ಕಾಲಿಗೆ ಗುಂಡೇಟು
ಬೆಂಗಳೂರು: ಬೆಳ್ಳಂಬೆಳಗ್ಗೆ ನಗರದಲ್ಲಿ ಗುಂಡಿನ ಸದ್ದು ಕೇಳಿಬಂದಿದೆ. ರೌಡಿಶೀಟರ್ ಕಾಲಿಗೆ ಪೊಲೀಸರು ಗುಂಡೇಟು ನೀಡಿದ್ದಾರೆ. ಜೀವ (19) ಗುಂಡೇಟು ತಿಂದ ಆರೋಪಿ. ಸಿಂಗೇನಾ ಅಗ್ರಹಾರದ ತೋಪಿನಲ್ಲಿ ಹೆಬ್ಬಗೋಡಿ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಗಾಯಗೊಂಡಿರುವ ಆರೋಪಿಯನ್ನು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಿದ್ದಾರೆ. ಹೆಬ್ಬಗೋಡಿಯ ತಿರುಪಾಳ್ಯದಲ್ಲಿ ರೌಡಿಶೀಟರ್ ಜೀವ ವಾಸವಾಗಿದ್ದಾನೆ. ಕೊಲೆ, ಸುಲಿಗೆ, ದರೋಡೆ ಪ್ರಕರಣಗಳ ಪ್ರಮುಖ ಆರೋಪಿಯಾಗಿದ್ದಾನೆ. ಸಬ್ ಇನ್‌ಸ್ಪೆಕ್ಟರ್ ಅಯ್ಯಪ್ಪ ಅವರು ಆರೋಪಿ ಕಾಲಿಗೆ ಗುಂಡು ಹಾರಿಸಿದ್ದಾರೆ. ಕಳೆದ ವಾರ ಹೆಬ್ಬಗೋಡಿ …
Read More »ಕಾಂಗ್ರೆಸ್ ಚುನಾವಣಾ ಚಾಣಕ್ಯ ಸುನೀಲ್ ಕನುಗೋಳು ಈಗ ಸಿಎಂಗೆ ಮುಖ್ಯ ಸಲಹೆಗಾರ
ಬೆಂಗಳೂರು: ಕಾಂಗ್ರೆಸ್‌ನ ಚುನಾವಣಾ ಚಾಣಕ್ಯ ಎಂದೇ ಹೆಸರಾಗಿರುವ ಸುನೀಲ್ ಕನುಗೋಳು ಅವರನ್ನು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಮುಖ್ಯ ಸಲಹೆಗಾರರಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ. ಬಳ್ಳಾರಿ ಜಿಲ್ಲೆಯ ಸುನೀಲ್ ಕನುಗೋಳು ಅವರಿಗೆ ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ಲಭ್ಯವಿರುವ ಎಲ್ಲಾ ಸೌಲಭ್ಯಗಳನ್ನು ಒದಗಿಸಿ ತಮ್ಮ ಸಲಹೆಗಾರರಾಗಿಸಿ ಸಿಎಂ ನೇಮಕ ಮಾಡಿದ್ದಾರೆ. ಈ ಹಿಂದೆ ಸಿಎಂ ಸಿದ್ದರಾಮಯ್ಯನವರು ಸುನೀಲ್ ಕನುಗೋಳು ಅವರನ್ನು ಮುಖ್ಯ ಸಲಹೆಗಾರರನ್ನಾಗಿ ನೇಮಿಸಿದ್ದರು. ಕರ್ನಾಟಕ ವಿಧಾನಸಭಾ ಚುನಾವಣೆ ಸಂದರ್ಭದ ಪೇಸಿಎಂ, …
Read More »ಭದ್ರಾವತಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ
ಶಿವಮೊಗ್ಗ: ಕಾಂಗ್ರೆಸ್ ಕಾರ್ಯಕರ್ತನ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆ ಭದ್ರಾವತಿಯ ಅನ್ವರ್ ಕಾಲೋನಿಯಲ್ಲಿ ನಡೆದಿದೆ. ನಗರದ ಹಳದಮ್ಮ ಬೀದಿ ನಿವಾಸಿ ವಿಶ್ವನಾಥ್ ಅಲಿಯಾಸ್ ಮುದ್ದೆ (35) ಹಲ್ಲೆಗೊಳಗಾದ ಯುವಕ. ಅಂಗಡಿಗೆ ಟೀ ಕುಡಿಯಲು ಹೋಗಿದ್ದ ವೇಳೆ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿ, ಸ್ಥಳದಿಂದ ಪರಾರಿಯಾಗಿದ್ದಾರೆ. ಮಾರಕಾಸ್ತ್ರಗಳಿಂದ ಏಕಾಏಕಿ ದಾಳಿ ಮಾಡಿದ ಪರಿಣಾಮ ಎರಡು ಕೈಗಳು ತುಂಡಾಗುವ ಹಂತಕ್ಕೆ ತಲುಪಿವೆ. ಗಂಭೀರವಾಗಿ ಗಾಯಗೊಂಡಿದ್ದ ಆತನಿಗೆ …
Read More »ಕರ್ನಾಟಕದಲ್ಲಿ ಮುಂಗಾರು ಆರ್ಭಟ – 6 ದಿನ ಹಲವೆಡೆ ರೆಡ್ ಅಲರ್ಟ್
ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಅಬ್ಬರಿಸುತ್ತಿದ್ದು, ಮುಂದಿನ 6 ದಿನಗಳ ಕಾಲ ರಾಜ್ಯದ ಹಲವೆಡೆ ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ಅತಿಯಾದ ಮಳೆಯಾಗುವ ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಇಂದಿನಿಂದ ಜೂನ್ 13ರವರೆಗೆ ಮಹಾ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿರುಗಾಳಿ ಸಮೇತ ಮಳೆಯ ಮುನ್ನೆಚ್ಚರಿಕೆ ನೀಡಲಾಗಿದೆ. ಇನ್ನು ಉಡುಪಿ ಜಿಲ್ಲೆಗೆ ಮೂರು ದಿನಗಳ ಕಾಲ ರೆಡ್ ಅಲರ್ಟ್ ಘೋಷಿಸಲಾಗಿದೆ. ಇನ್ನೂ ಎರಡು …
Read More »
Laxmi News 24×7