ಬೆಂಗಳೂರು: ಸಾರ್ವಜನಿಕ ಹಿತದೃಷ್ಟಿಯಿಂದ ರಾಜ್ಯದ ಎಲ್ಲಾ ಉಪನೋಂದಣಿ ಕಚೇರಿಗಳ ಕೆಲಸದ ಅವಧಿಯನ್ನು ಬೆಳಿಗ್ಗೆ 8 ಗಂಟೆಯಿಂದ ರಾತ್ರಿ 8 ಗಂಟೆವರೆಗೆ ವಿಸ್ತರಿಸಲಾಗಿದೆ. ಸೆ.23 ರಿಂದ 30ರವರೆಗೆ ಈ ಆದೇಶ ಜಾರಿಗೆಯಲ್ಲಿರಲಿದ್ದು, ಒಂದು ವಾರ ಸಾರ್ವಜನಿಕರು 12 ಗಂಟೆಗಳ ಕಾಲ ಸೇವೆ ಪಡೆಯಬಹುದಾಗಿದೆ. ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕೇಂದ್ರ ಮೌಲ್ಯ ಮಾಪನ ಸಮಿತಿಯ (Valuation Committee) 2023-24ನೇ ಸಾಲಿನಲ್ಲಿ ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯ ಮಾರ್ಗಸೂಚಿ ದರಗಳನ್ನು ಪರಿಷ್ಕರಣೆ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ …
Read More »ಪತ್ನಿ ಜೊತೆ ಸಂಬಂಧ ಶಂಕೆ: ವ್ಯಕ್ತಿಯ ಕತ್ತರಿಸಿದ ತಲೆ ಹಿಡಿದು ಪತ್ನಿಯ ತವರು ಮನೆಗೆ ಬಂದ ಪತಿ!
ಚೆನ್ನೈ(ತಮಿಳುನಾಡು): ಪತಿಯೊಬ್ಬತನ್ನ ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿರುವ ಅನುಮಾನದ ಮೇರೆಗೆ ವ್ಯಕ್ತಿಯೋರ್ವನ ಶಿರಚ್ಛೇದ ಮಾಡಿರುವ ಆಘಾತಕಾರಿ ಘಟನೆ ಗುರುವಾರ ಸಂಜೆ ತಮಿಳುನಾಡಿನ ತೆಂಕಶಿ ಜಿಲ್ಲೆಯಲ್ಲಿ ನಡೆದಿದೆ. ಶಿರಚ್ಛೇದ ಮಾಡಿದ್ದಲ್ಲದೇ ಕತ್ತರಿಸಿದ ತಲೆಯನ್ನು ಟುಟಿಕೋರಿನ್ ಜಿಲ್ಲೆಯಲ್ಲಿರುವ ಪತ್ನಿಯ ತವರು ಮನೆ ಮುಂದೆ ಇಟ್ಟಿದ್ದ. ಕೃತ್ಯ ಎಸಗಿದ ಎಸ್.ವೇಲುಸಾಮಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೃತ ವ್ಯಕ್ತಿಯನ್ನು ಮುರುಗನ್ ಎಂದು ಗುರುತಿಸಲಾಗಿದೆ. ಘಟನೆ ಹಿನ್ನೆಲೆ: ಆಲಂಕುಳಂ ಸಮೀಪದ ರೆಡಿಯಾರಪಟ್ಟಿ ಗಿಮ್ಕುಳಂ ಗ್ರಾಮಕ್ಕೆ ಸೇರಿದ ಆರೋಪಿ ವೇಲುಸಾಮಿಯು ತೂತುಕುಡಿ ಜಿಲ್ಲೆಯ …
Read More »ಕಾವೇರಿ ವಿವಾದದ ಬಗ್ಗೆ ಅಮಿತ್ ಶಾ ಜೊತೆ ಚರ್ಚಿಸಿರುವೆ,
ದೇವನಹಳ್ಳಿ(ಬೆಂ.ಗ್ರಾಮಂತರ): “ನಾನು ಕೂಡ ಮಂಡ್ಯಗೆ ಹೋಗುತ್ತಿದ್ದೇನೆ. ರೈತರ ಹೋರಾಟಕ್ಕೆ ಬಿಜೆಪಿ ಮತ್ತು ಜೆಡಿಎಸ್ ಬೆಂಬಲ ಕೊಟ್ಟಿದೆ. ಈಗ ನಾನು ರೈತರ ಹೋರಾಟಕ್ಕೆ ಸಾಂಕೇತಿಕವಾಗಿ ಬೆಂಬಲ ಸೂಚಿಸಲು ಹೊರಟಿದ್ದೇನೆ ಎಂದು ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ಖಂಡಿಸಿಮಂಡ್ಯ ಬಂದ್ ವಿಚಾರಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಅವರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರತಿಕ್ರಿಯಿಸಿದ್ದಾರೆ. ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಜೊತೆ ಜನತಾ ದಳ (ಜಾತ್ಯತೀತ) ಮೈತ್ರಿ ಮಾಡಿಕೊಂಡ ಬಳಿಕ …
Read More »ಕಾವೇರಿ ಬಿಕ್ಕಟ್ಟು: ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪ್ರತಿಭಟನೆ.
ಬೆಂಗಳೂರು: ಕಾವೇರಿ ನೀರಿನ ವಿಚಾರವೂ ಸೇರಿ ವಿವಿಧ ರಂಗಗಳಲ್ಲಿ ರಾಜ್ಯ ಸರ್ಕಾರದ ವೈಫಲ್ಯವನ್ನು ಖಂಡಿಸಿ ಬಿಜೆಪಿ ವತಿಯಿಂದ ಇಂದು ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುತ್ತಿದೆ. ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಯಡಿಯೂರಪ್ಪ, ಡಿ.ವಿ.ಸದಾನಂದ ಗೌಡ, ಸಂಸದ ಪಿ.ಸಿ.ಮೋಹನ್, ಮಾಜಿ ಸಚಿವರಾದ ಡಾ.ಸಿ.ಎನ್.ಅಶ್ವತ್ಥನಾರಾಯಣ, ಗೋವಿಂದ ಕಾರಜೋಳ, ಕೆ.ಗೋಪಾಲಯ್ಯ, ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಮಾಜಿ ವಿಧಾನ ಪರಿಷತ್ ಸದಸ್ಯ ಅಶ್ವಥ್ ನಾರಾಯಣ, …
Read More »ಪ್ರತಿ ಶನಿ ವಾರ ದಂತೆ ಈ ವಾರ ಕೂಡ್ ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನ ಸಂತರ್ಪಣೆ
ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲೂಕಿನ ಕೈ ಹೊಸೂರ್ ಗ್ರಾಮದಲ್ಲಿ ಶ್ರೀ ಹನುಮಾನ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಈ ಸಂದರ್ಭದಲ್ಲಿ ಸಿದ್ದಲಿಂಗಪ್ಪ ಬಡಕೂರಿ, ಸಿಂಗಪ್ಪ ಮರಕಟ್ಟಿ, …
Read More »ಬೆಳಗಾವಿ ಗಣೇಶ ಮಂಡಳಿಗೆ 75 ವರ್ಷ ,75ನೇ ವರ್ಷ ತಲುಪಿದ ಹಿನ್ನೆಲೆ ರಕ್ತದಾನ ಶಿಬಿರ
ಬೆಳಗಾವಿ: ಕುಂದಾನಗರಿಯ ಸಾರ್ವಜನಿಕ ಗಣೇಶ ಮಂಡಳಿಗಳು ಶ್ರೀಗಣೇಶನ ಆರಾಧನೆ ಜೊತೆಗೆ ಸಾಮಾಜಿಕ ಸೇವಾ ಕಾರ್ಯಗಳಲ್ಲಿಯೂ ತೊಡಗಿಕೊಂಡಿವೆ. ಆ ನಿಟ್ಟಿನಲ್ಲಿ ಮಹಾದ್ವಾರ ರೋಡ್ ಮಹಾದ್ವಾರ ಚೌಕ್ನ ಸಾರ್ವಜನಿಕ ಗಣೇಶೋತ್ಸವ ಮಂಡಳಿ ರಚನೆಗೊಂಡು 75ನೇ ವರ್ಷ ತಲುಪಿದ ಹಿನ್ನೆಲೆ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿತ್ತು. ಇಂದು ಯಶ್ ಆಸ್ಪತ್ರೆ, ಮಹಾವೀರ ಬ್ಲಡ್ ಬ್ಯಾಂಕ್ ಸಹಯೋಗದಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ ಪುರುಷರ ಜೊತೆಗೆ ಮಹಿಳೆಯರು ಕೂಡ ಸ್ವಯಂ ಪ್ರೇರಿತರಾಗಿ ಆಗಮಿಸಿ ರಕ್ತದಾನ ಮಾಡಿದರು. 70ಕ್ಕೂ ಅಧಿಕ …
Read More »ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಕಾಂಗ್ರೆಸ್ಗೆ ಯಾವುದೇ ತೊಂದರೆ ಇಲ್ಲ: ಸಚಿವ ಪರಮೇಶ್ವರ್
ಬೆಂಗಳೂರು: ಬಿಜೆಪಿ ಜೊತೆಗಿನ ಜೆಡಿಎಸ್ ಮೈತ್ರಿಯಿಂದ ಕಾಂಗ್ರೆಸ್ಗೆ ಯಾವುದೇ ರೀತಿಯ ತೊಂದರೆ ಆಗುವುದಿಲ್ಲ. ನಾವು ಈ ಬಾರಿ ಲೋಕಸಭೆ ಚುನಾವಣೆಯಲ್ಲಿ 20ಕ್ಕಿಂತ ಹೆಚ್ಚು ಸ್ಥಾನ ಗೆಲ್ಲುವ ವಿಶ್ವಾಸ ಇದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದರು. ವಿಧಾನಸೌಧದಲ್ಲಿ ಮಾತನಾಡಿದ ಅವರು, ವಿಧಾನಸಭೆ ಚುನಾವಣೆಯಲ್ಲಿ ನಾವು ಕಾಂಗ್ರೆಸ್ ಶೇ.45ರಷ್ಟು ಮತ ಪ್ರಮಾಣ ಗಳಿಸಿದ್ದೆವು. ಅದನ್ನು ಲೋಕಸಭೆ ಚುನಾವಣೆಯಲ್ಲೂ ಉಳಿಸುವ ಸಾಧ್ಯತೆ ಇದೆ. ಅದರಿಂದ ನಮಗೇನು ತೊಂದರೆ ಆಗಲ್ಲ. ಅವರು ಮೈತ್ರಿ ಮಾಡಿಕೊಳ್ಳಲಿ. …
Read More »ಖಾನಾಪುರ ತಾಲೂಕಿನಲ್ಲಿ ಎರಡು ಗುಂಪುಗಳ ಮಧ್ಯೆ ನಡೆದ ಗಲಾಟೆ,ಕಲ್ಲು ತೂರಾಟ !
ಬೆಳಗಾವಿ: ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳು ಮಧ್ಯೆ ನಡೆದ ಗಲಾಟೆಯಲ್ಲಿ ಕಲ್ಲು ತೂರಾಟ ನಡೆಸಿ ಬಿಗುವಿನ ಸ್ಥಿತಿ ನಿರ್ಮಾಣವಾಗಿರುವ ಘಟನೆ ಖಾನಾಪುರ ತಾಲೂಕಿನ ತೋಪಿನಕಟ್ಟಿ ಗ್ರಾಮದಲ್ಲಿ ನಡೆದಿದೆ. ಈ ಹಿನ್ನೆಲೆ ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ. ಗುರುವಾರ ರಾತ್ರಿ ಎರಡು ಗುಂಪುಗಳ ಇಬ್ಬರು ಯುವಕರ ನಡುವೆ ಗಲಾಟೆ ನಡೆದಿದ್ದು, ಶುಕ್ರವಾರ ಎರಡು ಗುಂಪುಗಳ ನಡುವೆ ಶಾಸಕ ವಿಠ್ಠಲ ಹಲಗೇಕರ್ ಸಂಧಾನ ಸಭೆ ನಡೆಸಿದರು. ಈ ಸಂದರ್ಭದಲ್ಲಿ ದುಷ್ಕರ್ಮಿಗಳು ಕಲ್ಲು ತೂರಾಟ …
Read More »ಉತ್ತರಕನ್ನಡ ಜಿಲ್ಲೆಯ 34 ಜನರಲ್ಲಿ ಇಲಿಜ್ವರ ಪತ್ತೆ
ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಜೊತೆಗೆ ಇಲಿ ಜ್ವರವೂ ಜನರಲ್ಲಿ ತೀವ್ರಗತಿಯಲ್ಲಿ ಹರಡುತ್ತಿದೆ. ಕೆಲವೇ ದಿನಗಳಲ್ಲಿ ಸುಮಾರು 34 ಜನರಲ್ಲಿ ಕಾಣಿಸಿಕೊಂಡಿರುವ ಇಲಿ ಜ್ವರ ಜಿಲ್ಲೆಯಲ್ಲಿ ಆತಂಕ ಸೃಷ್ಟಿಸಿದೆ. ಇಲಿ ಜ್ವರದ ಬಗ್ಗೆ ಸಕಾಲದಲ್ಲಿ ಆರೋಗ್ಯ ಇಲಾಖೆ ಜಾಗೃತಿ ಮೂಡಿಸದೆ ಇದ್ದಿದ್ದರಿಂದ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಾಗಿದೆ ಎಂದು ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ಕುರಿತು ಒಂದು ವರದಿ ಇಲ್ಲಿದೆ. ಉತ್ತರಕನ್ನಡ ಜಿಲ್ಲಾದ್ಯಂತ ಕಳೆದ ಎರಡು ತಿಂಗಳಿನಿಂದ ಜ್ವರದ ಪ್ರಕರಣಗಳು …
Read More »ಜಾಮೀನಿನ ಮೇಲೆ ಹೊರಬಂದು ಮತ್ತೆ ಡ್ರಗ್ಸ್ ಮಾರಾಟ: ಮಂಗಳೂರಲ್ಲಿ ಇಬ್ಬರು ಅರೆಸ್ಟ್
ಮಂಗಳೂರು: ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡಿ ಬಂಧಿತನಾಗಿದ್ದ ಆರೋಪಿ ನ್ಯಾಯಾಲಯದಿಂದ ಜಾಮೀನು ಪಡೆದ 15 ದಿನದಲ್ಲಿ ಮತ್ತೆ ಎಂಡಿಎಂಎ ಮಾರಾಟ ಮಾಡಿ, ಮಂಗಳೂರಿನ ಸಿಸಿಬಿ ಪೊಲೀಸರಿಂದ ಬಂಧಿತನಾಗಿದ್ದಾನೆ. ಉಪ್ಪಿನಂಗಡಿಯ ಅಬ್ದುಲ್ ಅಜೀಜ್ ಯಾನೆ ಅಜೀಜ್ ಎಂಬಾತನ ವಿರುದ್ಧ ಈ ಹಿಂದೆ ಉಪ್ಪಿನಂಗಡಿ, ವಿಟ್ಲ ಹಾಗೂ ಉರ್ವಾ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಮಾರಾಟಕ್ಕೆ ಸಂಬಂಧಿಸಿದ ಮೂರು ಪ್ರಕರಣ ದಾಖಲಾಗಿತ್ತು. ಇತ್ತೀಚೆಗೆ ಸುಮಾರು 15 ದಿನಗಳ ಹಿಂದೆ ನ್ಯಾಯಾಲಯದಿಂದ ಜಾಮೀನು …
Read More »