Breaking News

ಮಹಿಳಾ ಮೀಸಲಾತಿ.. ದಿಕ್ಕು ತಪ್ಪಿಸುವ ತಂತ್ರ ಅನುಸರಿಸಿದ ಸರ್ಕಾರ: ರಾಹುಲ್ ಗಾಂಧಿ

ನವದೆಹಲಿ: ಮಹಿಳಾ ಮೀಸಲಾತಿ ಮಸೂದೆಯನ್ನು ತಕ್ಷಣವೇ ಜಾರಿಗೆ ತರಬೇಕು ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಬಲವಾಗಿ ಪ್ರತಿಪಾದಿಸಿದರು. ಜನಗಣತಿ ಮತ್ತು ಸೀಮಾರೇಖೆಯ ಷರತ್ತುಗಳನ್ನು ಸೇರಿಸುವುದನ್ನು ಟೀಕಿಸಿದರು. ಈ ಷರತ್ತುಗಳು ಮಸೂದೆಯ ಅನುಷ್ಠಾನವನ್ನು ಅನಗತ್ಯವಾಗಿ ವಿಳಂಬಗೊಳಿಸುತ್ತವೆ ಎಂದು ಕಿಡಿಕಾರಿದರು. ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ”ಸರ್ಕಾರ ಜಾತಿವಾರು ಜನಗಣತಿ ನಡೆಸಬೇಕು. ಹಿಂದಿನ ಯುಪಿಎ ಸರ್ಕಾರದ ಅವಧಿಯಲ್ಲಿ ನಡೆದ ಜಾತಿ ಗಣತಿ ಮಾಹಿತಿ ಬಿಡುಗಡೆ ಮಾಡಬೇಕು” ಎಂದು ಒತ್ತಾಯಿಸಿದರು. ”ಮಹಿಳೆಯರಿಗೆ ಇಂದೇ …

Read More »

ಕೈಕೊಟ್ಟ ಮುಂಗಾರು ಬೆಳೆ ಹಾನಿ: ರೈತರ ನೆರವಿಗೆ ಧಾವಿಸಿದ ಸಚಿವ ಸತೀಶ ಜಾರಕಿಹೊಳಿ.. ಮೋಡ ಬಿತ್ತನೆಗೆ ಸಿದ್ಧತೆ

ಬೆಳಗಾವಿ: ಮುಂಗಾರು ಮಳೆ ತೀವ್ರ ಕೊರತೆಯಿಂದ ಬೆಳಗಾವಿ‌ ಜಿಲ್ಲೆಯ ಜನ ಸಂಕಷ್ಟ ಅನುಭವಿಸುತ್ತಿದ್ದಾರೆ. ಕಷ್ಟಪಟ್ಟು ಬಿತ್ತಿದ್ದ ಬೆಳೆಗಳು ಈಗ ಹಾನಿಗೆ ಒಳಗಾಗಿದ್ದು ರೈತರಲ್ಲಿ ಆತಂಕ ಶುರುವಾಗಿದೆ. ಈ ವೇಳೆ ರೈತರ ನೆರವಿಗೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ‌ ಜಾರಕಿಹೊಳಿ ಧಾವಿಸಿದ್ದು, ತಮ್ಮದೇ ಒಡೆತನದ ಬೆಳಗಾಂ ಶುಗರ್ಸ್​ದಿಂದ ಮೋಡ ಬಿತ್ತನೆಗೆ ಸಿದ್ಧತೆ ಆರಂಭಿಸಿದ್ದಾರೆ. ಈ ಕಾರ್ಯಕ್ಕೆ ರಾಜ್ಯ ಸರ್ಕಾರ ಕೂಡ ಗ್ರೀನ್ ಸಿಗ್ನಲ್ ನೀಡಿದೆ. ಒಂದು ತಿಂಗಳು ವಿಳಂಬವಾಗಿ ಆರಂಭವಾದ ಮುಂಗಾರು …

Read More »

ಪ್ರಮೋದ್​ ಮುತಾಲಿಕ್​ ವಿರುದ್ಧ ದೂರು ನೀಡಿದ ಮುಸ್ಲಿಂ ಮುಖಂಡರು

ಹುಬ್ಬಳ್ಳಿ: ಅನ್ಯ ಧರ್ಮಗಳ ಭಾವನೆಗಳಿಗೆ ಧಕ್ಕೆ ಉಂಟಾಗುವಂತೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆಂಬ ಆರೋಪದ ಮೇಲೆ ಶ್ರೀರಾಮಸೇನೆ ಸಂಘಟನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹಾಗೂ ಅವರ ಕಾರ್ಯಕರ್ತರನ್ನು ಗಡಿಪಾರು ಮಾಡಬೇಕು ಎಂದು ಆಗ್ರಹಿಸಿ ಮುಸ್ಲಿಂ ನಾಯಕರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಇಂದು ಹುಬ್ಬಳ್ಳಿ- ಧಾರವಾಡ ಪೊಲೀಸ್ ಕಮಿಷನರ್​ ರೇಣುಕಾ ಸುಕುಮಾರ್​ ಅವರಿಗೆ ದೂರು ನೀಡಿದರು. ಹುಬ್ಬಳ್ಳಿ ರಾಣಿ ಚೆನ್ನಮ್ಮ ಈದ್ಗಾ ಮೈದಾನದ ಗಣೇಶ ವಿಸರ್ಜನೆ ಕಾರ್ಯಕ್ರಮಕ್ಕೆ ಗುರುವಾರ ಭೇಟಿ ನೀಡಿದ್ದ ಪ್ರಮೋದ್ ಮುತಾಲಿಕ್​​, …

Read More »

ಈಗ ಬಿಜೆಪಿಗೆ, ರಾಜ್ಯಕ್ಕೆ ಅನಂತಕುಮಾರ್​ ಅಗತ್ಯವಿತ್ತು: ಬಸವರಾಜ ಬೊಮ್ಮಾಯಿ

ಬೆಂಗಳೂರು : ಕೇಂದ್ರ ಸರ್ಕಾರದ ಮಟ್ಟದಲ್ಲಿ ಕರ್ನಾಟಕದ ವಿಚಾರ ಬಂದಾಗ ಅನಂತಕುಮಾರ್ ಅವರು ಆಪದ್ಬಾಂಧವರಾಗಿದ್ದರು. ಈಗ ರಾಜ್ಯಕ್ಕೆ ಮತ್ತು ಬಿಜೆಪಿಗೆ ಅವರ ಅಗತ್ಯವಿತ್ತು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟಿದ್ದಾರೆ.   ಕೇಂದ್ರದ ಮಾಜಿ ಸಚಿವ ದಿ ಅನಂತಕುಮಾರ್​ ಜನ್ಮದಿನದ ಅಂಗವಾಗಿ ಏರ್ಪಡಿಸಿದ್ದ ಅನಂತಕುಮಾರ್​ 64 ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಅನಂತಕುಮಾರ್ ಅವರು ಅನಂತವಾದ ಬದುಕನ್ನು ಅಲ್ಪ ಸಮಯದಲ್ಲಿ ಇದ್ದು, ಯಶಸ್ಸು ಸಾಧನೆಗಳನ್ನು ಮಾಡಿ ಅತಿ ಚಿಕ್ಕ ವಯಸ್ಸಿನಲ್ಲಿ …

Read More »

ಮುಕ್ತ ವಿವಿಯ ಪ್ರಶ್ನೆಪತ್ರಿಕೆ ಸೋರಿಕೆಯ ಪ್ರಕರಣ : ಇಬ್ಬರು ವಿದ್ಯಾರ್ಥಿಗಳ ಬಂಧನ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಅಂತಿಮ ವರ್ಷದ ಬಿಕಾಂ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ವಿದ್ಯಾರ್ಥಿ ನೀಡಿದ ದೂರಿನ ಮೇಲೆ ಇಬ್ಬರು ವಿದ್ಯಾರ್ಥಿಗಳನ್ನು ಜಯಲಕ್ಷ್ಮಿಪುರಂ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ಈ ಪರೀಕ್ಷೆಯನ್ನು ಮರು ಪರೀಕ್ಷೆ ನಡೆಸಲು ಮುಕ್ತ ವಿವಿ ನಿರ್ಧರಿಸಿದೆ. ಬಿಕಾಂ ಅಂತಿಮ ವರ್ಷದ ಇಬ್ಬರು ವಿದ್ಯಾರ್ಥಿಗಳು ಬಂಧಿತರಾಗಿದ್ದು, ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ. ಸೆ. 4ರಿಂದ ಪದವಿ ವಿಭಾಗದ ಪರೀಕ್ಷೆಗಳು ಆರಂಭವಾಗಿವೆ. ಪ್ರಶ್ನೆಪತ್ರಿಕೆ ಸೋರಿಕೆ ಬಗ್ಗೆ …

Read More »

ಎನ್​ಡಿಎ ಮೈತ್ರಿಕೂಟ ಸೇರಿದ ಜೆಡಿಎಸ್​

ನವದೆಹಲಿ: ದೆಹಲಿಯಲ್ಲಿ ಇಂದು (ಶುಕ್ರವಾರ) ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್​ ನಾಯಕ ಹೆಚ್‌.ಡಿ. ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್ ನಾಯಕ ಹೆಚ್‌.ಡಿ. ಕುಮಾರಸ್ವಾಮಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ನವದೆಹಲಿಯಲ್ಲಿ ಭೇಟಿಯಾಗಿ ಔಪಚಾರಿಕ ಮಾತುಕತೆ ನಡೆಸುವ ಮೂಲಕ ರಾಜ್ಯದಲ್ಲಿ ಜೆಡಿಎಸ್​ ಹಾಗೂ ಬಿಜೆಪಿ ಮೈತ್ರಿಯನ್ನು ಖಚಿತ ಪಡಿಸಿದ್ದಾರೆ. ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ಗೋವಾ ಸಿಎಂ ಪ್ರಮೋದ್ ಸಾವಂತ್ ಹಾಗೂ ಜೆಡಿಎಸ್​ ಯುವ …

Read More »

ಅಯೋಧ್ಯೆಯ ಶ್ರೀರಾಮ ಮಂದಿರ ನಿರ್ಮಾಣದ ಕಮೀಟಿ ಸದಸ್ಯನಿಗೆ ಧಾರವಾಡದಲ್ಲಿ ಸನ್ಮಾನ

ಧಾರವಾಡ : ಅಯೋಧ್ಯೆಯ ಶ್ರೀರಾಮ ಮಂದಿರದ ಗರ್ಭಗುಡಿ ಹಾಗೂ ಮಂದಿರದ ಮೂರ್ತಿ ಪ್ರತಿಷ್ಠಾಪನೆ ಸಮಿತಿ ಸದಸ್ಯರಿಗೆ ಧಾರವಾಡದಲ್ಲಿ ಮಾಜಿ ಮೇಯರ್ ಹಾಗೂ ಪಾಲಿಕೆ ಸದಸ್ಯ ಈರೇಶ ಅಂಚಟಗೇರಿ ಸನ್ಮಾನಿಸಿ ಗೌರವಿಸಿದರು. ಕರ್ನಾಟಕದ ಕಲಬುರ್ಗಿ ಜಿಲ್ಲೆಯ ಮಾನಯ್ಯ ಬಡಿಗೇರ ಅವರು ಇಂದು ಧಾರವಾಡಕ್ಕೆ ಆಗಮಿಸಿದ ಸಂದರ್ಭದಲ್ಲಿ ಅವರನ್ನ ಮಾಜಿ ಮಹಾಪೌರರಾದ ಈರೇಶ ಅಂಚಟಗೇರಿ ರವರು ಭೇಟಿ ನೀಡಿ ಧಾರವಾಡ ಪೇಢಾ ನೀಡಿ ಆತ್ಮೀವಾಗಿ ಸನ್ಮಾನಿಸಿ, ಅಭಿನಂದಿಸಿ ಶುಭ ಕೋರಿದರು ಕೋಟ್ಯಾಂತರ ಹಿಂದುಗಳ …

Read More »

ಕಾವೇರಿ ವಿವಾದ: ಕೇಂದ್ರ ಜಲಶಕ್ತಿ ಸಚಿವರನ್ನ ಭೇಟಿಯಾದ ಸಿದ್ದರಾಮಯ್ಯ

ಕಾವೇರಿ ನದಿ ನೀರಿನ ವಿಚಾರಕ್ಕೆ ತಮಿಳುನಾಡು ಪದೇ ಪದೇ ಕ್ಯಾತೆ ತೆಗೆಯುತ್ತಿರುವುದಕ್ಕೆ ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಕಾವೇರಿ ನೀರು ಹರಿಸುವ ಸಂಬಂಧ ಬಗೆಹರಿಸಲು ಸಿದ್ದರಾಮಯ್ಯ ನವದೆಹಲಿಯಲ್ಲಿ ಇಂದು ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ ಮಾಡಿ ಕರ್ನಾಟಕದ ವಾಸ್ತವ ಪರಿಸ್ಥಿತಿಯನ್ನು ಗಮನಕ್ಕೆ ತಂದರು   ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕಾವೇರಿ ನದಿ ನೀರು ಹಂಚಿಕೆ ಸಂಬಂಧ ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ …

Read More »

ಸಿಲಿಂಡರಗಳನ್ನು ತುಂಬಿಕೊಂಡು ಹೋಗುತ್ತಿದ್ದ ಲಾರಿ ಪಲ್ಟಿ

ಸಿಲಿಂಡರಗಳನ್ನು ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಪಲ್ಟಿಯಾಗಿ ಚಾಲಕ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪುಣೆ-ಬೆಂಗಳೂರ ರಾಷ್ಟ್ರೀಯ ಹೆದ್ದಾರಿಯ ತಾವಂದಿ ಘಾಟನಲ್ಲಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದೆ.ತೀರ್ಥಸಿಂಗ್ (41) ಮೃತಪಟ್ಟ ಚಾಲಕ ಮೂಲತ ಪಂಜಾಬ ರಾಜ್ಯದವರು. ಲಾರಿಯಲ್ಲಿ ಖಾಲಿ ಸಿಲಿಂಡರಗಳನ್ನು ಇದ್ದ ಕಾರಣ ಯಾವುದೇ ಅಹಿತಕರ ಘಟನೆ ಸಂಭವಿಸಿಲ್ಲ.ಲಾರಿ ಪಲ್ಟಿಯಾದ ಪರಿಣಾಮ ರಸ್ತೆಯಲ್ಲಿ ಸಿಲಿಂಡರ್ ಗಳು ಚೆಲ್ಲಾಪಿಲ್ಲಿಗಳಾಗಿದವು.6 ಗಂಟೆಗಳ ಕಾಲ ಹೆದ್ದಾರಿಯಲ್ಲಿ ದ್ವಿಮುಖ ಸಂಚಾರವನ್ನು ಬಂದ್ …

Read More »

ಬೆಳಗಾವಿ ತಾಲೂಕು ಬರಪೀಡಿತ ಪ್ರದೇಶ ಎಂದು ಘೋಷಿಸಲು ೭ ದಿನ ಅವಧಿ ಕೊಟ್ಟ ರೈತ ಸಂಘ

ಬೆಳಗಾವಿ ತಾಲೂಕು ಬರಪೀಡಿತ ಪ್ರದೇಶ ಎಂದು ಘೋಷಿಸದಿದ್ದರೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಅಹೋ ರಾತ್ರಿ ಧರಣಿ ಮಾಡುತ್ತೇವೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಬೆಳಗಾವಿ ಜಿಲ್ಲಾ ಉಪಾಧ್ಯಕ್ಷ ಕಲಗೌಡಾ ಪಾಟೀಲ ಆಗ್ರಹಿಸಿದ್ದಾರೆ .   ಬೆಳಗಾವಿ ತಾಲೂಕಿನ ಅಗಸಗಿ ಮನ್ನಿಕೇರಿ ,ಕಡೋಲಿ ,ಕೆಟನೂರು ಹಂದಿಗನೂರು ,ಶಿವಾಪುರ ಹಳ್ಳಿಗಳ ರೈತರು ಇಂದು ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ಬೆಳಗಾವಿ ತಾಲೂಕು ಬರಪೀಡಿತ ಪ್ರದೇಶ ಎಂದು ಘೋಷಣೆ ಮಾಡಿ ಎಂದು ಮನವಿ …

Read More »