Breaking News

ಚಿಕ್ಕೋಡಿಯ ಕೃಷ್ಣ ಸಹಕಾರಿ ಸಕ್ಕರೆ ಕಾರ್ಖಾನೆಯ ಸರ್ವ ಸಾಧಾರಣ ಸಭೆಯಲ್ಲಿ ರೈತರು ಮತ್ತು ಆಡಳಿತ ಮಂಡಳಿ ನಡುವೆ ಮಾತಿನ ಚಕಮಕಿ

ಚಿಕ್ಕೋಡಿ (ಬೆಳಗಾವಿ) : ಇಲ್ಲಿನ ಕೃಷ್ಣ ಸಹಕಾರಿ ಸಕ್ಕರೆ ಕಾರ್ಖಾನೆಯ ಸರ್ವ ಸಾಧಾರಣ ಸಭೆಯಲ್ಲಿ ಆಡಳಿತ ಮಂಡಳಿ ಮತ್ತು ರೈತರ ನಡುವೆ ಮಾತಿನ ಚಕಮಕಿ ನಡೆದಿರುವ ಘಟನೆ ಜಿಲ್ಲೆಯ ಅಥಣಿ ತಾಲೂಕಿನ ಹಲ್ಯಾಳ ಗ್ರಾಮದಲ್ಲಿ ಇಂದು ನಡೆದಿದೆ. ಕಬ್ಬು ಕಟಾವು ಮಾಡಿದ 15 ದಿನದೊಳಗೆ ರೈತರ ಖಾತೆಗೆ ಹಣ ಬಿಡುಗಡೆ ಮಾಡುವಂತೆ ಒತ್ತಾಯಿಸುತ್ತಿದ್ದಂತೆ ಸಭೆಯಲ್ಲಿ ಇಬ್ಬರ ನಡುವೆ ವಾಗ್ವಾದ ನಡೆಯಿತು. ಇಲ್ಲಿನ ಹಳ್ಯಾಳ ಗ್ರಾಮದಲ್ಲಿ ಕೃಷ್ಣ ಸಹಕಾರಿ ಸಕ್ಕರೆ ಕಾರ್ಖಾನೆಯ ಸರ್ವ …

Read More »

ಮೂರು ಡಿಸಿಎಂ ಹುದ್ದೆ ವಿಚಾರ.. ಸಚಿವ ರಾಜಣ್ಣ ಹೇಳುವುದರಲ್ಲಿ ತಪ್ಪಿಲ್ಲ: ಸಚಿವ ಜಿ ಪರಮೇಶ್ವರ್

ಬೆಂಗಳೂರು: ಮೂವರು ಡಿಸಿಎಂ ಹುದ್ದೆ ಸೃಷ್ಟಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಕೆ ಎನ್​ ರಾಜಣ್ಣ ತಮ್ಮ ಅಭಿಪ್ರಾಯ ಹೇಳೋದರಲ್ಲಿ ತಪ್ಪಿಲ್ಲ ಎ‌ಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ಸಮರ್ಥಿಸಿಕೊಂಡಿದ್ದಾರೆ. ಸದಾಶಿವನಗರ ನಿವಾಸದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆ ದೃಷ್ಟಿಯಿಂದ ಅವರು ಹೇಳಿದ್ದಾರೆ. ಪಕ್ಷ ಇನ್ನಷ್ಟು ಸದೃಢವಾಗಬೇಕು, ಆ‌ ನಿರ್ದಿಷ್ಟ ಸಮುದಾಯಗಳನ್ನು ಸೆಳೆಯಬೇಕು ಎಂಬ ದೃಷ್ಟಿಯಿಂದ ಹೇಳಿದ್ದಾರೆ ಎಂದು ತಿಳಿಸಿದರು. ರಾಜಣ್ಣ ಅವರು ತಪ್ಪು ಮಾಡಿದರು, ತಪ್ಪು ಹೇಳಿದರು …

Read More »

ವೈದ್ಯಕೀಯ ವಿದ್ಯಾರ್ಥಿಗಳಿಗೆ ಗುಡ್​ನ್ಯೂಸ್.. ನೀಟ್​ ಪರೀಕ್ಷೆ ಕಟ್​ ಆಫ್​ ಅಂಕ ರದ್ದು

ಹೈದರಾಬಾದ್: ಮಹತ್ವದ ಬೆಳವಣಿಗೆಯೊಂದರಲ್ಲಿ ವೈದ್ಯಕೀಯ ಕೌನ್ಸೆಲಿಂಗ್ ಸಮಿತಿ (ಎಂಸಿಸಿ) ಮೂರನೇ ಸುತ್ತಿನ ನೀಟ್ ಪಿಜಿ ವೈದ್ಯಕೀಯ ಕೌನ್ಸೆಲಿಂಗ್‌ಗೆ ಇದ್ದ ಅರ್ಹತಾ ಅಂಕಗಳು (ಕಟ್​​ ಆಫ್​) ರದ್ದುಗೊಳಿಸುವುದಾಗಿ ಘೋಷಿಸಿದೆ. ಇದರಿಂದಾಗಿ ಪ್ರಸಕ್ತ ವರ್ಷ ನೀಟ್‌ ಪರೀಕ್ಷೆ ಬರೆಯುವ ಅಭ್ಯರ್ಥಿಗಳೆಲ್ಲರೂ ಕೌನ್ಸೆಲಿಂಗ್‌ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಅರ್ಹತೆ ಪಡೆಯಲಿದ್ದಾರೆ. ಕೇಂದ್ರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಈ ಕ್ರಮಕ್ಕೆ ಅನುಮೋದನೆ ನೀಡಿದ್ದು, ಕಟ್​ ಆಫ್​ ಅಂಕಗಳನ್ನು ಶೂನ್ಯಕ್ಕೆ ಇಳಿಸಿದ್ದರಿಂದ ಸ್ನಾತಕೋತ್ತರ ವೈದ್ಯಕೀಯ ಮತ್ತು ದಂತ …

Read More »

ತಡರಾತ್ರಿ ಪಾರ್ಟಿ ವೇಳೆ ಗುಂಡೇಟಿಗೆ ವಿದ್ಯಾರ್ಥಿನಿ ಬಲಿ: ಸ್ನೇಹಿತನ ಬಂಧನ

ಲಖನೌ (ಉತ್ತರ ಪ್ರದೇಶ): ಉತ್ತರ ಪ್ರದೇಶ ರಾಜಧಾನಿ ಲಖನೌದಲ್ಲಿ ತಡರಾತ್ರಿ ಪಾರ್ಟಿಯ ಸಂದರ್ಭದಲ್ಲಿ ಕಾಲೇಜು ವಿದ್ಯಾರ್ಥಿನಿಯೊಬ್ಬಳನ್ನು ಗುಂಡೇಟಿಗೆ ಬಲಿಯಾಗಿರುವ ಘಟನೆ ನಡೆದಿದೆ. ಇದು ಆಕಸ್ಮಿಕವಾಗಿ ನಡೆದ ಗುಂಡಿನ ದಾಳಿಯೋ ಅಥವಾ ಪಿತೂರಿಯ ಭಾಗವಾಗಿ ಗುಂಡಿನ ದಾಳಿ ನಡೆಸಲಾಗಿದೆಯೋ ಎಂದು ಕುರಿತು ಪೊಲೀಸರು ತನಿಖೆಯನ್ನು ಆರಂಭಿಸಿದ್ದಾರೆ. ಕೊಲೆಯಾದ ವಿದ್ಯಾರ್ಥಿನಿಯನ್ನು ನಿಷ್ಠಾ ತ್ರಿಪಾಠಿ (23) ಎಂದು ಗುರುತಿಸಲಾಗಿದೆ. ಹರ್ದೋಯ್‌ ಜಿಲ್ಲೆಯ ಮೂಲದ ನಿಷ್ಠಾ ಲಖನೌದ ಬಿಬಿಡಿ ವಿಶ್ವವಿದ್ಯಾಲಯದಲ್ಲಿ ಬಿ.ಕಾಂ ವ್ಯಾಸಂಗ ಮಾಡುತ್ತಿದ್ದರು. ಇಲ್ಲಿನ ಚಿನ್ಹಾಟ್ …

Read More »

ಈ ವಾರ ಯಾವುದೇ ಸ್ಟಾರ್​ ಸಿನಿಮಾಗಳಿಲ್ಲದೆ ಹೊಸ ಪ್ರತಿಭೆಗಳ ಚಿತ್ರಗಳು ಬಿಡುಗಡೆಯಾಗುತ್ತಿವೆ.

ಈ ವಾರ ಯಾವುದೇ ಸ್ಟಾರ್​ ಸಿನಿಮಾಗಳಿಲ್ಲದೆ ಹೊಸ ಪ್ರತಿಭೆಗಳ ಚಿತ್ರಗಳು ಬಿಡುಗಡೆಯಾಗುತ್ತಿವೆ. ಸ್ಯಾಂಡಲ್​ವುಡ್​ನಲ್ಲಿ ಕಳೆದ ಒಂದೆರಡು ತಿಂಗಳಿಂದ ಚಿತ್ರಗಳ ಬಿಡುಗಡೆ ಕೊಂಚ ಕಡಿಮೆ ಆಗಿತ್ತು. ವಾರಕ್ಕೆ ಮೂರೋ ಅಥವಾ ನಾಲ್ಕೋ ಚಿತ್ರಗಳು ಬಿಡುಗಡೆ ಆದರೆ ಅದೇ ಹೆಚ್ಚು ಎನ್ನುವಂತಿತ್ತು. ಆದರೆ, ಈ ವಾರ ಯಾವುದೇ ಸ್ಟಾರ್ ಸಿನಿಮಾಗಳಿಲ್ಲದೇ ಬೆಳ್ಳಿ ತೆರೆಯಲ್ಲಿ ಹೊಸ ಪ್ರತಿಭೆಗಳ ಚಿತ್ರಗಳ ಬಿಡುಗಡೆ ಸಂಖ್ಯೆ ಹೆಚ್ಚಾಗಿದೆ. ಹಾಗಾದ್ರೆ ಈ ಶುಕ್ರವಾರ ಎಷ್ಟು ಸಿನಿಮಾಗಳು ಬಿಡುಗಡೆ ಆಗುತ್ತಿವೆ ಎಂಬುದರ ಮಾಹಿತಿ …

Read More »

ದಾವಣಗೆರೆ: ನೂರು ದಿನ ನೀರು ಹರಿಸುವುದಾಗಿ ಹೇಳಿ ಸರ್ಕಾರ ಮಾತಿಗೆ ತಪ್ಪಿದೆ ಎಂದು ರೈತರ ಪ್ರತಿಭಟನೆ, ಆಕ್ರೋಶ

ದಾವಣಗೆರೆ : ಭದ್ರಾ ಡ್ಯಾಂನಿಂದ ನೂರು ದಿನ ನೀರು ಬಿಡುತ್ತೇವೆ ಎಂದು ಸರ್ಕಾರ ಆದೇಶ ಹೊರಡಿಸಿದ ಬೆನ್ನಲ್ಲೇ ದಾವಣಗೆರೆ ಜಿಲ್ಲೆಯ ರೈತರು ಭತ್ತ ನಾಟಿ ಮಾಡಿದ್ದರು. ದಾವಣಗೆರೆ ಅಚ್ಚುಕಟ್ಟು ಪ್ರದೇಶದಲ್ಲಿ ಬರೋಬ್ಬರಿ ಒಂದೂವರೆ ಲಕ್ಷ ಎಕರೆಯಲ್ಲಿ ಭತ್ತವನ್ನು ರೈತರು ನಾಟಿ ಮಾಡಿ ಈಗಾಗಲೇ ಎರಡು ಬಾರಿ ಗೊಬ್ಬರ ಹಾಕಿದ್ದಾರೆ. ಆದರೆ, ರಾಜ್ಯ ಸರ್ಕಾರ ಇದ್ದಕ್ಕಿದ್ದಂತೆ ನೀರು ನಿಲ್ಲಿಸಿರುವುದು ರೈತರನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಇದರಿಂದಾಗಿ ಆಕ್ರೋಶಗೊಂಡಿರುವ ರೈತರು ಬೀದಿಗಿಳಿದು ರಸ್ತೆ ತಡೆ ನಡೆಸಿ, …

Read More »

ಚಲಿಸುತ್ತಿದ್ದ ಟ್ಯಾಕ್ಸಿಯಲ್ಲಿ 14 ವರ್ಷದ ಅಪ್ರಾಪ್ತೆ ಮೇಲೆ ಅತ್ಯಾಚಾರ ಆರೋಪ: ಇಬ್ಬರು ದುರುಳರು ಅರೆಸ್ಟ್​

ಮುಂಬೈ (ಮಹಾರಾಷ್ಟ್ರ) : ಅಪ್ರಾಪ್ತರ ಮೇಲೆ ಅತ್ಯಾಚಾರವೆಸಗಿದ ಪ್ರಕರಣದ ಆರೋಪಿಗಳ ವಿರುದ್ಧ ಕಠಿಣ ಕಾನೂನು ತರಲು ಕೇಂದ್ರ ಸರ್ಕಾರ ಉದ್ದೇಶಿಸಿದ್ದರ ನಡುವೆ, ಮುಂಬೈನಲ್ಲಿ ಚಲಿಸುವ ಟ್ಯಾಕ್ಸಿಯಲ್ಲಿಯೇ 14 ವರ್ಷದ ವಿಶೇಷಚೇತನ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ ಆರೋಪ ಕೇಳಿಬಂದಿದೆ. ಕೇಸ್​ಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಸೆಪ್ಟೆಂಬರ್​ 18 ರಂದು ಪ್ರಕರಣ ನಡೆದಿದೆ. ಆರೋಪಿಗಳಾದ ಸಲ್ಮಾನ್ ಶೇಖ್ (26) ಮತ್ತು ಟ್ಯಾಕ್ಸಿ ಚಾಲಕ ಪ್ರಕಾಶ್ ಪಾಂಡೆ ಎಂಬ ಇಬ್ಬರನ್ನು ಲೈಂಗಿಕ ಅಪರಾಧಗಳಿಂದ …

Read More »

ಮೈಸೂರು ದಸರಾ -2023.. ಅಂಬಾರಿ ಹೊರುವ ಆನೆಗೆ ಸಿದ್ಧವಾಗುತ್ತಿದೆ ನಮ್ದಾ

ಮೈಸೂರು : ಐತಿಹಾಸಿಕ ಮೈಸೂರು ದಸರಾಗೆ ಭರದ ಸಿದ್ಧತೆಗಳು ನಡೆಯುತ್ತಿವೆ. ದಸರಾ ಹಬ್ಬದ ಪ್ರಮುಖ ಕೇಂದ್ರ ಬಿಂದುವಾದ ಜಂಬೂಸವಾರಿಗೆ ಗಜಪಡೆಗಳನ್ನು ಸಿದ್ಧಪಡಿಸಲಾಗುತ್ತಿದೆ. ಗಜಪಡೆಗೆ ಭಾರ ಹೊರುವ ತಾಲೀಮು ಈಗಾಗಲೇ ಆರಂಭವಾಗಿದ್ದು, ಜಂಬೂಸವಾರಿ ದಿನ ಅಂಬಾರಿ ಹೊರುವ ಅಭಿಮನ್ಯು ಆನೆಯ ಬೆನ್ನಿನ ಮೇಲೆ ಹಾಕುವ ನಮ್ದಾವನ್ನು ಇಲ್ಲಿ ಸಿದ್ಧಪಡಿಸಲಾಗುತ್ತಿದೆ. ಜಂಬೂಸವಾರಿಯ ಪ್ರಮುಖ ಆಕರ್ಷಣೆ ಎಂದರೆ ಚಿನ್ನದ ಅಂಬಾರಿ ಮತ್ತು ಅಂಬಾರಿ ಹೊರುವ ಆನೆ. ಅಂಬಾರಿ ಹೊರುವ ಆನೆಯು 750 ಕೆಜಿ ಚಿನ್ನದ ಅಂಬಾರಿಯನ್ನು …

Read More »

ಕಾವೇರಿ ವಿವಾದ: ನೀರಿನ ವಿಚಾರದಲ್ಲಿ ರಾಜಕೀಯ ಇಲ್ಲ- ಸಚಿವ ಜಿ ಪರಮೇಶ್ವರ್

ಬೆಂಗಳೂರು: ಇವತ್ತು ಕಾವೇರಿ ನೀರಿನ ವಿಚಾರದಲ್ಲಿ ತೀರ್ಪು ಬಂದಿದೆ. ನೀರೇ ಇಲ್ಲದೇ ಇರುವ ಸಂದರ್ಭದಲ್ಲಿ ನಮ್ಮ ಅಹವಾಲು ಸರಿಯಾದ ರೀತಿ ಕೇಳಿದ್ದರೂ ನ್ಯಾಯಾಲಯವು ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಪಾಲಿಸುವಂತೆ ಹೇಳಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡೆಡ್ ಸ್ಟೋರೇಜ್ ಹೊರತುಪಡಿಸಿ ಉಳಿಯುವ 10 ಟಿಎಂಸಿ ನೀರಿನಲ್ಲಿ ನಾವು ನೀರು ಬಿಡುವುದು ಹೇಗೆ? ಎಂದು ಪ್ರಶ್ನಿಸಿದರು. ಕಾವೇರಿ ನೀರು …

Read More »

5 ಗ್ಯಾರಂಟಿ ಯೋಜನೆಗಳನ್ನು ಸಿಎಂ ಸಿದ್ದರಾಮಯ್ಯ ಅವರು ಹೈಕೋರ್ಟ್​ನಲ್ಲಿ ಸಮರ್ಥಿಸಿಕೊಂಡಿದ್ದಾರೆ.

ಬೆಂಗಳೂರು : ರಾಜ್ಯದಲ್ಲಿ ಆರ್ಥಿಕವಾಗಿ ದುರ್ಬಲವಾಗಿರುವ ಹಾಗೂ ಅವಕಾಶ ವಂಚಿತ ವರ್ಗಗಳ ಕಲ್ಯಾಣಕ್ಕೆ ಜಾರಿಗೆ ತರಲಾಗಿರುವ 5 ಗ್ಯಾರಂಟಿ ಯೋಜನೆಗಳು ಸಂವಿಧಾನ ಮತ್ತು ಚುನಾವಣಾ ಆಯೋಗದ ನಿಯಮಗಳು ಹಾಗೂ ಮಾರ್ಗಸೂಚಿಗಳ ಪ್ರಕಾರವೇ ಘೋಷಣೆ ಮಾಡಿದ್ದು, ಯಾವುದೇ ನಿಯಮಗಳನ್ನು ಉಲ್ಲಂಘಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೈಕೋರ್ಟ್​ಗೆ ಲಿಖಿತ ಸ್ಪಷ್ಟನೆ ಸಲ್ಲಿಸಿದ್ದಾರೆ.   ಗ್ಯಾರಂಟಿಗಳ ಹೆಸರಲ್ಲಿ ಮತದಾರರಿಗೆ ಆಮಿಷವೊಡ್ಡುವ ಮೂಲಕ ಚುನಾವಣಾ ಅಕ್ರಮವೆಸಗಿ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಮೈಸೂರಿನ ವರುಣಾ ಕ್ಷೇತ್ರದಿಂದ ಆಯ್ಕೆಯನ್ನು ಅಸಿಂಧುಗೊಳಿಸಬೇಕು …

Read More »