ಬೆಂಗಳೂರು : ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ವಂಚಿಸಿರುವ ಆರೋಪದಡಿ ಬಂಧಿತರಾಗಿರುವ 8 ಮಂದಿ ಆರೋಪಿಗಳ ವಿಚಾರಣೆಯನ್ನ ಸಿಸಿಬಿ ತನಿಖಾಧಿಕಾರಿಗಳು ಚುರುಕುಗೊಳಿಸಿದ್ದಾರೆ. ಹಾಲಶ್ರೀ ಮಠಕ್ಕೆ ಹಣ ತಲುಪಿಸುವಂತೆ ಆರೋಪಿತ ಅಭಿನವ ಹಾಲಶ್ರೀ ಚಾಲಕ ರಾಜು ಎಂಬಾತ ತನಗೆ 56 ಲಕ್ಷವನ್ನ ನೀಡಿರುವ ಬಗ್ಗೆ ಪ್ರಣವ್ ಎಂಬುವರು ಮಠಕ್ಕೆ ಹಣ ತಲುಪಿಸಿರುವ ಕುರಿತು ನಿನ್ನೆ ವಿಡಿಯೋ ಮಾಡಿದ್ದರು. ಬಳಿಕ ಸಿಸಿಬಿಗೂ ಮಾಹಿತಿ ನೀಡಿದ್ದರು. ಈ ಬಗ್ಗೆ ಕಾರ್ಯಪ್ರವೃತ್ತಗೊಂಡ ಸಿಸಿಬಿ ಹಿರೇಹಡಗಲಿಯ ಹಾಲಶ್ರೀ ಮಠಕ್ಕೆ ತೆರಳಿ …
Read More »ಕಾವೇರಿ ಪ್ರಾಧಿಕಾರದ ಮುಂದೆ ರಾಜ್ಯ ಸರ್ಕಾರ ವಾಸ್ತವ ಸ್ಥಿತಿಯನ್ನು ತಿಳಿಸುವಲ್ಲಿ ವಿಫಲ
ಮೈಸೂರು: ಸುಪ್ರೀಂ ಕೋರ್ಟ್ನ ಬಗ್ಗೆ ನಮಗೆ ಗೌರವವಿದೆ. ಆದರೆ ನಮಗೆ ಮೊದಲು ನೀರು ಬೇಕು, ನಾವು ಬದುಕಬೇಕು. ಆನಂತರ ಬೇರೆಯವರಿಗೆ ನೀರು ಕೊಡಬೇಕು. ಆದರೆ ನಮ್ಮಲ್ಲೇ ನೀರಿಲ್ಲ. ಈ ಸಂದರ್ಭದಲ್ಲಿ ನೀರು ಕೊಡಿ ಎಂದು ಹೇಳಿದರೆ ಹೇಗೆ? ಈ ಕಾವೇರಿ ನೀರಿಗಾಗಿ ಹೋರಾಟವನ್ನು ಮುಂದುವರಿಸುತ್ತೇವೆ ಎಂದು ರೈತ ಸಂಘದ ಮುಖಂಡ ನಂಜುಂಡೇಗೌಡ ಹೇಳಿದರು. ನಗರದ ಕಾಡಾ ಕಚೇರಿಯ ಮುಂಭಾಗ ಪ್ರತಿಭಟನೆಯಲ್ಲಿ ಭಾಗವಹಿಸಿ ನಂತರ ಈಟಿವಿ ಭಾರತ ಜೊತೆ ಮಾತನಾಡಿದ ರೈತ ಸಂಘದ ಮುಖಂಡ ನಂಜುಂಡೇಗೌಡ …
Read More »ಅನಾರೋಗ್ಯದಿಂದ ಮೃತಪಟ್ಟ ಯೋಧ: ಸ್ವಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ
ಚಿಕ್ಕೋಡಿ: ಅನಾರೋಗ್ಯದಿಂದ ಮೃತಪಟ್ಟ ಯೋಧನ ಅಂತ್ಯ ಸಂಸ್ಕಾರವನ್ನು ಸ್ವಗ್ರಾಮ ಸಿದ್ದಾಪುರದಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಿಸಲಾಯಿತು. ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಸಿದ್ದಾಪುರ ಗ್ರಾಮದ ಯೋಧ ಸಂತೋಷ್ ಯಳಗೂಡ (30) ಸೆಪ್ಟೆಂಬರ್ 19ರಂದು ಮಧ್ಯರಾತ್ರಿ ಎರಡು ಗಂಟೆಗೆ ದೆಹಲಿಯ ಮಿಲಿಟರಿ ಆಸ್ಪತ್ರೆಯಲ್ಲಿ ಕಾಮಾಲೆ ರೋಗದಿಂದ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು. ಇಂದು ಅವರ ಹುಟ್ಟುರಾದ ಸಿದ್ದಾಪುರ ಗ್ರಾಮಕ್ಕೆ ಪಾರ್ಥಿವ ಶರೀರವನ್ನು ತಂದಿದ್ದು, ರಸ್ತೆ ಉದ್ದಕ್ಕೂ ಗ್ರಾಮದ ಜನರು ಮತ್ತು ಶಾಲೆ ಮಕ್ಕಳು ಪುಷ್ಪ …
Read More »ನೆಲಕ್ಕೆ ಎಸೆದು ನಾಲ್ಕು ತಿಂಗಳ ಮಗುವನ್ನು ಕೊಂದ ಪೊಲೀಸ್ ಕಾನ್ಸ್ಟೇಬಲ್
ಚಿಕ್ಕೋಡಿ: ವೃತ್ತಿಯಲ್ಲಿ ಪೊಲೀಸ್ ಕಾನ್ಸ್ಟೇಬಲ್ ಆಗಿರುವ ವ್ಯಕ್ತಿಯೊಬ್ಬ ತನ್ನ 4 ತಿಂಗಳ ಮಗುವನ್ನು ಡಾಂಬರು ರಸ್ತೆಗೆಸೆದು ಕೊಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಬೆಳಗಾವಿ ಜಿಲ್ಲೆಯ ಮುಡಲಗಿ ತಾಲೂಕಿನ ದುರದುಂಡಿ ಗ್ರಾಮದಲ್ಲಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಪೊಲೀಸ್ ಕಾನ್ಸ್ಟೆಬಲ್ ಬಸಪ್ಪ ಬಳುಣಕಿ ತನ್ನ ಮಗುವನ್ನೇ ಕೊಂದ ಆರೋಪಿ. ಈತ ಡಾಂಬರು ರಸ್ತೆಗೆಸೆದು ಕೊಲೆ ಮಾಡಿರುವ ಆರೋಪ ಎದುರಿಸುತ್ತಿದ್ದಾರೆ. ಈ ಕುರಿತು ಕುಡಚಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯ …
Read More »ಒಪಿಎಸ್ ಜಾರಿಗೆ ಆಗ್ರಹಿಸಿ ಬೆಳಗಾವಿಯಲ್ಲಿ ಶಿಕ್ಷಕರಿಂದ ಬೈಕ್ ರ್ಯಾಲಿ
ಬೆಳಗಾವಿ: ಹೊಸ ಪಿಂಚಣಿ ಬದಲಾಗಿ ಹಳೆ ಪಿಂಚಣಿ ಜಾರಿ ಸೇರಿದಂತೆ ಶಿಕ್ಷಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇಂದು ಬೆಳಗಾವಿಯಲ್ಲಿ ಶಿಕ್ಷಕರು ಬೈಕ್ ರ್ಯಾಲಿ ನಡೆಸಿದರು. ಐದು ವರ್ಷ ಜನಪ್ರತಿನಿಧಿಗಳಾಗುವ ಶಾಸಕರು, ಸಂಸದರಿಗೆ ಇರುವ ಪಿಂಚಣಿ ನಮಗೆ ಯಾಕಿಲ್ಲ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅಖಿಲ ಭಾರತ ಶಿಕ್ಷಕರ ಫೆಡರೇಶನ್ದಿಂದ ಶಿಕ್ಷಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಭಾರತ ಯಾತ್ರೆಯು ಕನ್ಯಾಕುಮಾರಿಯಿಂದ ಪ್ರಾರಂಭವಾಗಿದ್ದು, ಬುಧವಾರ ಬೆಳಗಾವಿಗೆ ಯಾತ್ರೆಯು ಆಗಮಿಸಿತು. …
Read More »ಧಾರವಾಡದಲ್ಲಿ ಅಪರಿಚಿತ ವಾಹನ ಡಿಕ್ಕಿ: ಕಾನ್ಸ್ಟೇಬಲ್ ಸಾವು, ಮಹಿಳಾ ಸಿಬ್ಬಂದಿಗೆ ಗಂಭೀರ ಗಾಯ
ಧಾರವಾಡ: ಅಪರಿಚಿತ ವಾಹನ ಡಿಕ್ಕಿಯಾಗಿ ಪೊಲೀಸ್ ಕಾನ್ಸ್ಟೇಬಲ್ವೊಬ್ಬರು ಸ್ಥಳದಲ್ಲೇ ಸಾನ್ನಪ್ಪಿರುವ ಘಟನೆ ಧಾರವಾಡ ಹೊರವಲಯದ ಇಟ್ಟಿಗಟ್ಟಿ ಬೈಪಾಸ್‌ನಲ್ಲಿ ಬುಧವಾರ ನಡೆದಿದೆ. ಹುಚ್ಚೇಶ ಹಿರೇಗೌಡರ (37) ಮೃತ ಕಾನ್ಸ್ಟೇಬಲ್. ಬೈಕ್ ಹಿಂಬದಿ ಕುಳಿತಿದ್ದ ಮಹಿಳಾ ಕಾನ್ಸ್ಟೇಬಲ್ ಲಕ್ಷ್ಮೀ ಎಂಬುವರು ಗಂಭೀರ ಗಾಯಗೊಂಡಿದ್ದು, ಅವರನ್ನು ಹುಬ್ಬಳ್ಳಿಯ ಕಿಮ್ಸ್‌ಗೆ ರವಾನಿಸಲಾಗಿದೆ. ಛಬ್ಬಿ ಗಣೇಶೋತ್ಸವ ಬಂದೋಬಸ್ತ್ ಕರ್ತವ್ಯ ಮುಗಿಸಿಕೊಂಡು ಬೈಕ್ನಲ್ಲಿ ಮರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಧಾರವಾಡ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಕಾರು ಪಲ್ಟಿ.. …
Read More »ಹಾವೇರಿಯಲ್ಲಿ ಅನಾವೃಷ್ಠಿಯಿಂದ ಬೆಳೆ ಹಾಳು.. ಕೇಳುವವರಿಲ್ಲ ರೈತರ ಗೋಳು
ಹಾವೇರಿ : ಜಿಲ್ಲೆಯ ಅನ್ನದಾತರ ಗೋಳು ಕೇಳುವವರಿಲ್ಲದಂತಾಗಿದೆ. ಅನಾವೃಷ್ಠಿಯಿಂದ ಬೆಳೆಗಳು ಹಾಳಾಗಿದ್ದು, ರೈತರು ಅವುಗಳನ್ನ ಹರಗಿ ನಾಶಪಡಿಸುತ್ತಿದ್ದಾರೆ. ಇತ್ತ ಕೆಲ ರೈತರು ಕಬ್ಬನ್ನೇ ನಂಬಿದ್ದು ಮುಂಗಾರು ಕೈಕೊಟ್ಟಿದ್ದರಿಂದ ಕಬ್ಬು ಸಹ ನಿರೀಕ್ಷಿಸಿದ ಪ್ರಮಾಣದಲ್ಲಿ ಇಳುವರಿ ಬರದಂತಾಗಿದೆ. ಜಿಲ್ಲೆಯಲ್ಲಿ ಎರಡು ಸಕ್ಕರೆ ಕಾರ್ಖಾನೆಗಳಿದ್ದು, ಶಿಗ್ಗಾಂವಿ ತಾಲೂಕು ಕೋಣನಕೆರೆ ಬಳಿ ಇರುವ ಸಕ್ಕರೆ ಕಾರ್ಖಾನೆಯಲ್ಲಿ ಈಗಾಗಲೇ ಟನ್ ಕಬ್ಬಿಗೆ 3070 ರೂಪಾಯಿ ನಿಗದಿ ಮಾಡಿದೆ. ಆದರೆ, ತಮ್ಮ ಕಬ್ಬಿಗೆ ಕನಿಷ್ಠ ಟನ್‌ಗೆ 3500 ರೂಪಾಯಿ …
Read More »ಮಂಡ್ಯದಲ್ಲಿ ಮುಂದುವರೆದ ಕಾವೇರಿ ಹೋರಾಟ
ಮಂಡ್ಯ: ಸಕ್ಕರೆನಾಡು ಮಂಡ್ಯದಲ್ಲಿ ಕಾವೇರಿ ಕಿಚ್ಚು ಜೋರಾಗಿದೆ. ತಮಿಳುನಾಡಿಗೆ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ರೈತರು, ವಿವಿಧ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ರಸ್ತೆಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಮಧ್ಯೆ ಕಾವೇರಿ ಹೋರಾಟಕ್ಕೆ ಬೆಂಬಲ ನೀಡದ ಸ್ಯಾಂಡಲ್ವುಡ್ ನಟರ ವಿರುದ್ಧವೂ ಆಕ್ರೋಶ ವ್ಯಕ್ತವಾಗಿದೆ. ತಮಿಳುನಾಡಿಗೆ ನೀರು ಹರಿಸುವಂತೆ ಆದೇಶಿಸಿರುವ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶಕ್ಕೆ ಮಣಿದು ನೀರು ಹರಿಸುತ್ತಿರುವ ಸರ್ಕಾರದ ನಡೆಯನ್ನು ಖಂಡಿಸಿ ಅನ್ನದಾತರು ಹಾಗೂ ವಿವಿಧ ಸಂಘಟನೆಗಳ …
Read More »ತಮಿಳುನಾಡಿಗೆ ಕಾವೇರಿ ನದಿ ನೀರನ್ನು ಹರಿಸುವ ಅನಿವಾರ್ಯತೆ ಸೃಷ್ಟಿಯಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಆಡಳಿತಾತ್ಮಕವಾಗಿ ನಡೆಸಬಹುದಾದ ಪ್ರಯತ್ನಗಳನ್ನು ಮಾಡುತ್ತಿದೆ
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನದಿ ನೀರನ್ನು ಹರಿಸುವ ಅನಿವಾರ್ಯತೆ ಸೃಷ್ಟಿಯಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಆಡಳಿತಾತ್ಮಕವಾಗಿ ನಡೆಸಬಹುದಾದ ಪ್ರಯತ್ನಗಳನ್ನು ಮಾಡುತ್ತಿದೆ. ಈ ನಡುವೆ ಕನ್ನಡ ಚಲನಚಿತ್ರರಂಗದ ಸ್ಟಾರ್ ನಟರು ಕೂಡ ಈ ವಿಚಾರವಾಗಿ ದನಿ ಎತ್ತಿದ್ದಾರೆ. ಇಂದು ಸೆಂಚುರಿ ಸ್ಟಾರ್ ಶಿವರಾಜಕುಮಾರ್, ಕಿಚ್ಚ ಸುದೀಪ್, ಚಾಲೆಂಜಿಂಗ್ ಸ್ಟಾರ್ ದರ್ಶನ್, ನಟಿ ಪೂಜಾ ಗಾಂಧಿ ಹಾಗೂ ನಿನ್ನೆ ನಟ ಜಗ್ಗೇಶ್ ಕಾವೇರಿ ಪರವಾಗಿ ಮಾತನಾಡಿದ್ದರು. ಈ ಸಮಸ್ಯೆಯ ಪರಿಹಾರಕ್ಕೆ ಸೂಕ್ತ ಕ್ರಮ …
Read More »ಸನಾತನ ಧರ್ಮದ ಕುರಿತು ಮತ್ತೊಮ್ಮೆ ಅವಹೇಳನಕಾರಿಯಾಗಿ ಮಾತಾಡಿದ ಉದಯನಿಧಿ!
ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಪುತ್ರ, ಅಲ್ಲಿನ ಸಚಿವ ಉದಯನಿಧಿ ಸ್ಟಾಲಿನ್ ಇದೀಗ ಇನ್ನೊಮ್ಮೆ ಸನಾತನ ಧರ್ಮದ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಈ ಮೂಲಕ ಅವರು ಮತ್ತೊಮ್ಮೆ ಹಿಂದೂಗಳ ಕೆಂಗಣ್ಣಿಗೆ ಗುರಿ ಆಗುವಂತಾಗಿದೆ. ಜನ್ಮದಿನ ಆಚರಿಸಿಕೊಳ್ಳುವವರಿಗೆ ವಂಡರ್ಲಾದಲ್ಲಿ ಉಚಿತ ಟಿಕೆಟ್; ಇಲ್ಲಿದೆ ವಿವರ.. ಸನಾತನ ಧರ್ಮ ಡೆಂಘಿ-ಮಲೇರಿಯಾ ಇದ್ದ ಹಾಗೆ ಎಂದು ಕೆಲವು ದಿನಗಳ ಹಿಂದೆ ಹೇಳಿದ್ದ ಉದಯನಿಧಿ, ಆ ಬಳಿಕ ಅದನ್ನು ಸಮರ್ಥಿಸಿಕೊಂಡಿದ್ದರು. ಸನಾತನ ಧರ್ಮದ ಕುರಿತು ಉದಯನಿಧಿ ಹೀಗೆ …
Read More »