ಚಿಕ್ಕೋಡಿ : ಕೂದಲು ಆರಿಸುವ ವಿಚಾರಕ್ಕೆ ದುಷ್ಕರ್ಮಿಗಳು ಬಾಲಕನನ್ನು ಕೊಲೆ ಮಾಡಿ ಬಾವಿಯಲ್ಲಿ ಎಸೆದಿರುವ ಪ್ರಕರಣ ರಾಯಬಾಗ ತಾಲೂಕಿನ ಹಾರೂಗೇರಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಹಾರೂಗೇರಿ ಪಟ್ಟಣದ ಹೊರವಲಯದ ಲಾಲ್ಯಾನಕೋಡಿಯಲ್ಲಿ ಘಟನೆ ನಡೆದಿದೆ. ಕಾಮಪ್ಪ ಕುಂಚಿಕೊರವ (17) ಕೊಲೆಗೀಡಾದ ಬಾಲಕ ಎಂದು ಗುರುತಿಸಲಾಗಿದೆ. ಮೃತ ಬಾಲಕ ಮೂಲತಃ ವಿಜಯಪುರ ಜಿಲ್ಲೆಯ ನಿವಾಸಿ, ಈತ ಕೂದಲು ಆರಿಸುತ್ತ ಹಾರೂಗೇರಿ ಪಟ್ಟಣಕ್ಕೆ ಆಗಮಿಸಿದ್ದಾನೆ. ಆಗ ಸ್ಥಳೀಯವಾಗಿ ಕೂದಲು …
Read More »ಪ್ರೀತಿಸಲು ನಿರಾಕರಿಸಿದ ಹಿನ್ನೆಲೆ ವಿದ್ಯಾರ್ಥಿನಿ ಮೇಲೆ ಬ್ಲೇಡ್ ನಿಂದ ಹಲ್ಲೆ ಮಾಡಿರುವ ಪಾಗಲ್ ಪ್ರೇಮಿ
ಕೋಲಾರ: ಪ್ರೀತಿಸಲು ನಿರಾಕರಿಸಿದ ಹಿನ್ನೆಲೆ ಪಾಗಲ್ ಪ್ರೇಮಿಯೊಬ್ಬ ಕಾಲೇಜು ವಿದ್ಯಾರ್ಥಿನಿ ಮೇಲೆ ಬ್ಲೇಡ್ ನಿಂದ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ಕೆಜಿಎಫ್ನ ಚಾಂಪಿಯನ್ ರೀಫ್ ನಗರದಲ್ಲಿರುವ ಖಾಸಗಿ ಕಾಲೇಜು ಕ್ಯಾಂಪಸ್ನಲ್ಲಿ ನಡೆದಿದೆ. ದ್ವಿತೀಯ ವರ್ಷದ ಮೆಕಾನಿಕಲ್ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿರುವ ಪ್ರೀತಮ್ ಪ್ರಭು ಎಂಬ ಯುವಕ, ಪ್ರಥಮ ವರ್ಷದ ಮೆಕಾನಿಕಲ್ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಗೆ ಪ್ರೀತಿಸುವಂತೆ ಪೀಡಿಸುತ್ತಿದ್ದ. ಅದರಂತೆ ಇಂದು ಸಹ ಆಕೆಯನ್ನು ಹಿಂಬಾಲಿಸಿಕೊಂಡು ಬಂದು ಪ್ರೀತಿ ಮಾಡುವಂತೆ …
Read More »ತಮಿಳುನಾಡಿಗೆ ನಿತ್ಯ 5 ಸಾವಿರ ಕ್ಯೂಸೆಕ್ ನೀರು: ಸಿಡಬ್ಲ್ಯೂಎಂಎ ಆದೇಶ ಮರುಪರಿಶೀಲನೆ ಕೋರಿ ಸುಪ್ರೀಂಕೋರ್ಟ್ ಮೊರೆ ಹೋದ ರಾಜ್ಯ ಸರ್ಕಾರ
ನವದೆಹಲಿ: ನೀರಿನ ತೀವ್ರ ಕೊರತೆ ಇದ್ದರೂ, ತಮಿಳುನಾಡಿಗೆ ನಿತ್ಯ 5 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಲ್ಯುಎಂಎ) ಆದೇಶಿಸಿದ್ದು, ಅದನ್ನು ಮರುಪರಿಶೀಲನೆ ನಡೆಸಲು ನಿರ್ದೇಶಿಸಬೇಕು ಎಂದು ಕೋರಿ ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್ಗೆ ಬುಧವಾರ ಅರ್ಜಿ ಸಲ್ಲಿಸಿದೆ. ಜೊತೆಗೆ ಇದೊಂದು ವಿಕೃತ ಮತ್ತು ಕಾನೂನುಬಾಹಿರ ಆದೇಶವಾಗಿದೆ ಎಂದೂ ಅಸಮಾಧಾನ ವ್ಯಕ್ತಪಡಿಸಿದೆ. ಮುಂಗಾರು ಮಳೆಯ ಕೊರತೆಯಿಂದಾಗಿ ಅಣೆಕಟ್ಟೆಗಳಲ್ಲಿ ನೀರು ಸಂಗ್ರಹವಾಗಿಲ್ಲ. ಕಾವೇರಿ ಜಲಾನಯನ ಪ್ರದೇಶ ಸೇರಿದಂತೆ ರಾಜ್ಯದೆಲ್ಲೆಡೆ ವರುಣನ …
Read More »ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭೇಟಿ ಮಾಡಿದರು.
ನವದೆಹಲಿ/ಬೆಂಗಳೂರು: ಕಾವೇರಿ ನದಿ ಹಂಚಿಕೆ ವಿವಾದವಾಗಿ ದೆಹಲಿ ಪ್ರವಾಸ ಕೈಗೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾದರು. ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಸಮಾಜ ಕಲ್ಯಾಣ ಸಚಿವ ಡಾ. ಎಚ್ ಸಿ ಮಹದೇವಪ್ಪ ಕೂಡ ಇದ್ದರು. ತಮಿಳುನಾಡಿಗೆ ನಿತ್ಯ 5 ಸಾವಿರ ಕ್ಯೂಸೆಕ್ ನೀರು ಬಿಡಲು ಕಾವೇರಿ ನೀರು ನಿಯಂತ್ರಣ ಪ್ರಾಧಿಕಾರ ಆದೇಶಿಸಿರುವ ಹಿನ್ನೆಲೆಯಲ್ಲಿ ದೆಹಲಿ ಮಟ್ಟದಲ್ಲಿ ಮಾತುಕತೆ ನಡೆಸಲು …
Read More »ಕಡಿಮೆ ವೇತನ, ಒತ್ತಡದ ಕೆಲಸ ಹೊಂದಿರುವ ಪುರುಷರಲ್ಲಿ ಹೃದಯಾಘಾತ ಅಪಾಯ ಹೆಚ್ಚು!
ಒತ್ತಡದಾಯಕ ಉದ್ಯೋಗ ನಿರ್ವಹಣೆಯ ಜೊತೆಗೆ ಕಡಿಮೆ ಸಂಬಳ ಪಡೆಯುವ ಪುರುಷರು ಒತ್ತಡದಾಯಕವಲ್ಲದ ಕೆಲಸ ಮಾಡುವ ವ್ಯಕ್ತಿಗಳಿಗಿಂತ ಹೃದಯಾಘಾತದ ಅಪಾಯವನ್ನು ಎರಡು ಪಟ್ಟು ಹೆಚ್ಚು ಹೊಂದಿರುತ್ತಾರೆ ಎಂದು ಹೊಸ ಅಧ್ಯಯನ ತಿಳಿಸಿದೆ. ಸರ್ಕ್ಯೂಲೇಷನ್: ಕಾರ್ಡಿಯೋವಸ್ಕ್ಯೂಲರ್ ಕ್ವಾಲಿಟಿ ಆಯಂಡ್ ಔಟ್ಕಮ್ ಜರ್ನಲ್ನಲ್ಲಿ ಈ ಕುರಿತು ವರದಿ ಪ್ರಕಟಿಸಲಾಗಿದೆ. ಉದ್ಯೋಗದ ಒತ್ತಡ ಮತ್ತು ಅವರ ಕೆಲಸದ ಸ್ಥಳದಲ್ಲಿನ ಶ್ರಮದ ಅಸಮತೋಲನವು ಹೃದಯಾಘಾತದ ಅಪಾಯ ಹೆಚ್ಚಿಸುತ್ತದೆ. ಕೆಲಸದ ಸ್ಥಳದಲ್ಲಿ ಗಮನಾರ್ಹ ಸಮಯ ಕಳೆಯುವುದನ್ನು ಗಮನಿಸಿದಾಗ ಕೆಲಸದೊತ್ತಡ …
Read More »ಕುಡಿಯುವ ನೀರು ಬಿಡುಗಡೆಗೆ ನಿರ್ಧಾರ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಬೆಳಗಾವಿ, ಮಲಪ್ರಭಾ ಅಚ್ಚುಕಟ್ಟು ಪ್ರದೇಶದಿಂದ ಶುಕ್ರವಾರ(ಸೆ.22)ದಿಂದ ಹದಿನೈದು ದಿನಗಳ ಕಾಲ ಕುಡಿಯುವ ನೀರು ಬಿಡುಗಡೆ ಮಾಡಲು ಸಲಹಾ ಸಮಿತಿಯ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರು ಹಾಗೂ ಮಲಪ್ರಭಾ ಯೋಜನಾ ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ(ಸೆ.20) ನಡೆದ ಮಲಪ್ರಭಾ ಯೋಜನಾ ನೀರಾವರಿ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನೀರಾವರಿ …
Read More »ಗಣೇಶ ಹಬ್ಬದಲ್ಲಿ ಚಂದ್ರಯಾನ 3 ಪ್ರಾತ್ಯಕ್ಷಿಕೆಯ ಪ್ರದರ್ಶನ
ಹಾವೇರಿ : ಒಂದು ಕಾಲದಲ್ಲಿ ಗಣೇಶ ಹಬ್ಬ ಬಂದರೆ ಸಾಕು ಹಲವು ಪ್ರಾತ್ಯಕ್ಷಿಕೆಗಳನ್ನ ಸಾರ್ವಜನಿಕ ಗಣೇಶ ಸಮಿತಿಗಳು ಏರ್ಪಡಿಸುತ್ತಿದ್ದವು. ಪೌರಾಣಿಕ ಕಥೆಗಳು, ಸತ್ಯಹರಿಶ್ಚಂದ್ರ, ಮಹಾಭಾರತ, ರಾಮಾಯಣ ಸನ್ನಿವೇಶಗಳನ್ನ ಗಜಾನನ ಸಮಿತಿಗಳು ಏರ್ಪಡಿಸುವ ಮೂಲಕ ಭಕ್ತರಿಗೆ ಪೌರಾಣಿಕ ಕಥನಗಳನ್ನ ಕಣ್ಣುಮುಂದೆ ಸೃಷ್ಠಿಸುತ್ತಿದ್ದವು. ಉತ್ತರಕರ್ನಾಟದಲ್ಲಿ ಬೆಳಗಾವಿ ಮತ್ತು ಹುಬ್ಬಳ್ಳಿ ನಗರಗಳಲ್ಲಿ ಪೂರ್ತಿರಾತ್ರಿ ಈ ರೀತಿಯ ಪ್ರದರ್ಶನಗಳನ್ನು ಏರ್ಪಡಿಸಲಾಗುತ್ತಿತ್ತು. ಭಕ್ತರು ರಾತ್ರಿಪೂರ್ತಿ ಈ ರೀತಿಯ ಪ್ರದರ್ಶನಗಳನ್ನ ವೀಕ್ಷಿಸುತ್ತಿದ್ದರು. ಆದರೆ ಟಿವಿ ಮೊಬೈಲ್ ಬಂದ ನಂತರ ಈ …
Read More »ಇದೇ ಮೊದಲು! ಲೋಕಸಭೆ ಚುನಾವಣೆಗೆ ಮತದಾನದ ಅವಕಾಶ ಪಡೆದ 997 ಲೈಂಗಿಕ ಕಾರ್ಯಕರ್ತೆಯರು
ಕಾನ್ಪುರ (ಉತ್ತರ ಪ್ರದೇಶ): ಈ ಬಾರಿ ಲೈಂಗಿಕ ಕಾರ್ಯಕರ್ತೆಯರೂ ಕೂಡ ಲೋಕಸಭೆ ಚುನಾವಣೆಯಲ್ಲಿ ತಮ್ಮ ಹಕ್ಕು ಚಲಾಯಿಸಲು ಸಾಧ್ಯವಾಗುತ್ತಿದೆ. ಕಾನ್ಪುರ ಜಿಲ್ಲಾಡಳಿತ 997 ಮಂದಿ ಲೈಂಗಿಕ ಕಾರ್ಯಕರ್ತೆಯರ ಹೆಸರನ್ನು ಮತದಾರರ ಪಟ್ಟಿಯಲ್ಲಿ ಸೇರಿಸಿದೆ. ಉತ್ತರ ಪ್ರದೇಶದಲ್ಲಿ ಈವರೆಗೆ, ಮತದಾರರ ಪಟ್ಟಿಗಳು ಪುರುಷ, ಮಹಿಳೆ ಮತ್ತು ತೃತೀಯ ಲಿಂಗಿ ಎಂಬ ಮೂರು ವರ್ಗದ ಮತದಾರರನ್ನು ಮಾತ್ರ ಒಳಗೊಂಡಿದ್ದವು. ಆದರೆ ಸುಪ್ರೀಂ ಕೋರ್ಟ್‌ನ ಆದೇಶದ ಮೇರೆಗೆ ಲೈಂಗಿಕ ಕಾರ್ಯಕರ್ತೆಯರ ಹೆಸರನ್ನೂ ಮತದಾರರ ಪಟ್ಟಿಗೆ …
Read More »ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿಚಾರವಾಗಿ ದೆಹಲಿಯಲ್ಲಿಂದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ
ನವದೆಹಲಿ/ಬೆಂಗಳೂರು:ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ 5,000 ಕ್ಯೂಸೆಕ್ ನೀರು ಬಿಡುವಂತೆ ಕರ್ನಾಟಕ ಸರ್ಕಾರಕ್ಕೆ ಆದೇಶ ನೀಡಿದ್ದು, ಈ ವಿಚಾರವಾಗಿ ನವದೆಹಲಿಯಲ್ಲಿಂದು ರಾಜ್ಯವನ್ನು ಪ್ರತಿನಿಧಿಸುವ ಕೇಂದ್ರ ನಾಯಕರ ಸಮ್ಮುಖದಲ್ಲಿ ಮಹತ್ವದ ಸಭೆ ನಡೆಯುತ್ತಿದೆ. ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ರಾಜ್ಯ ಪ್ರತಿನಿಧಿಸುವ ಕೇಂದ್ರದ ಸಚಿವರುಗಳು, ಲೋಕಸಭಾ ಸದಸ್ಯರು ಹಾಗೂ ರಾಜ್ಯಸಭಾ ಸದಸ್ಯರುಗಳು ಸೇರಿ ಹಲವು ನಾಯಕರು ಭಾಗಿಯಾಗಿದ್ದಾರೆ. ಸಭೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಸಿದ್ದರಾಮಯ್ಯ, ನೀರು ಬಿಡಲು …
Read More »ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಅಭ್ಯರ್ಥಿಯೊಬ್ಬರಿಗೆ ಟಿಕೆಟ್ ಕೊಡಿಸುವುದಾಗಿ ಭರವಸೆ ನೀಡಿ ಕೋಟ್ಯಂತರ ರೂಪಾಯಿ ವಂಚಿಸಿದ ಪ್ರಕರಣದ ಮೂರನೇ ಆರೋಪಿ ಹೊಸಪೇಟೆ ಸಂಸ್ಥಾನ ಮಠದ ಅಭಿನವ ಹಾಲಶ್ರೀ ಸ್ವಾಮೀಜಿಯನ್ನು ಇಂದು ನಗರದ 19ನೇ ಎಸಿಎಂಎಂ ನ್ಯಾಯಾಲಯಕ್ಕೆ ಸಿಸಿಬಿ ಪೊಲೀಸರು ಹಾಜರುಪಡಿಸಿದರು. ನ್ಯಾಯಾಲಯವು ಆರೋಪಿಯನ್ನು ಸೆಪ್ಟೆಂಬರ್ 29ರವರೆಗೆ ಸಿಸಿಬಿ ಕಸ್ಟಡಿಗೆ ನೀಡಿ ಆದೇಶಿಸಿತು. ಅಭಿನವ ಹಾಲಶ್ರಿ ಪರ ವಕೀಲ ಲೋಕೇಶ್ ಮಧ್ಯಂತರ ಜಾಮೀನಿಗೆ ಅರ್ಜಿ ಸಲ್ಲಿಸಿದರು. ಸರ್ಕಾರಿ ವಕೀಲರಿಗೆ ಸೆಪ್ಟೆಂಬರ್ 29ರಂದು ಆಕ್ಷೇಪಣೆ ಸಲ್ಲಿಸಲು ಸೂಚಿಸಿ ಜಾಮೀನು ಅರ್ಜಿಯನ್ನು ಕೋರ್ಟ್ ಮುಂದೂಡಿತು. ಹೀಗಾಗಿ, ಅಲ್ಲಿಯವರೆಗೂ ಆರೋಪಿಯನ್ನು ನ್ಯಾಯಾಲಯ ಪೊಲೀಸರ ವಶಕ್ಕೆ ಒಪ್ಪಿಸಿದೆ. ನಿನ್ನೆಯಿಂದ ಸ್ಚಾಮೀಜಿಯನ್ನು ಸಿಸಿಬಿ ಅಧಿಕಾರಿಗಳು ತೀವ್ರ ವಿಚಾರಣೆಗೆ ಒಳಪಡಿಸಿದ್ದರು. ಈ ವೇಳೆ ಒಂದಿಷ್ಟು ಮಹತ್ವದ ವಿಚಾರಗಳನ್ನು ಅವರು ಬಾಯ್ಬಿಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇಂದು ಬೆಳಗ್ಗೆ 10:30ರ ವೇಳೆಗೆ ಸ್ವಾಮೀಜಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ಚಂದ್ರಾ ಲೇಔಟ್ ಬಳಿಯ ಮನೆಯೊಂದರಲ್ಲಿ ಸ್ವಾಮೀಜಿ ಹಣ ಪಡೆದಿದ್ದಾರೆ ಎನ್ನಲಾಗಿದ್ದು, ಅಲ್ಲಿಗೆ ಕರೆದೊಯ್ದು ಸಿಸಿಬಿ ಅಧಿಕಾರಿಗಳು ಸ್ಥಳ ಮಹಜರು ಪ್ರಕ್ರಿಯೆ ಮಾಡಲಿದ್ದಾರೆ. ಪಡೆದ ಹಣವನ್ನು ಮೈಸೂರಿನಲ್ಲಿ ಇರಿಟ್ಟಿರುವ ಮಾಹಿತಿಯಿದ್ದು, ನಂತರ ಮೈಸೂರಿಗೂ ಕರೆದೊಯ್ಯುವ ಸಾಧ್ಯತೆಯಿದೆ ಎಂದು ಪೊಲೀಸ್ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ವಂಚನೆ ಪ್ರಕರಣದಲ್ಲಿ ಚೈತ್ರಾ ಕುಂದಾಪುರ ಸೇರಿದಂತೆ 6 ಆರೋಪಿಗಳ ಬಂಧನವಾಗುತ್ತಿದ್ದಂತೆ ಅಭಿನವ ಹಾಲಶ್ರೀ ಸ್ವಾಮೀಜಿ ನಾಪತ್ತೆಯಾಗಿದ್ದರು. ತಲೆಮರೆಸಿಕೊಳ್ಳಲು ಸಂಚು ರೂಪಿಸಿದ್ದ ಆರೋಪಿ ಮೈಸೂರಿನಿಂದ ಒಡಿಶಾಗೆ ವಿವಿಧ ಮಾರ್ಗಗಳಲ್ಲಿ ತೆರಳಿ, ಭುವನೇಶ್ವರದಿಂದ ಭೋದ್ ಗಯಾಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದಾಗ ಒಡಿಶಾ ಕಟಕ್ ಬಳಿ ಬಂಧಿಸಲಾಗಿದೆ.
ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಅಭ್ಯರ್ಥಿಯೊಬ್ಬರಿಗೆ ಟಿಕೆಟ್ ಕೊಡಿಸುವುದಾಗಿ ಭರವಸೆ ನೀಡಿ ಕೋಟ್ಯಂತರ ರೂಪಾಯಿ ವಂಚಿಸಿದ ಪ್ರಕರಣದ ಮೂರನೇ ಆರೋಪಿ ಹೊಸಪೇಟೆ ಸಂಸ್ಥಾನ ಮಠದ ಅಭಿನವ ಹಾಲಶ್ರೀ ಸ್ವಾಮೀಜಿಯನ್ನು ಇಂದು ನಗರದ 19ನೇ ಎಸಿಎಂಎಂ ನ್ಯಾಯಾಲಯಕ್ಕೆ ಸಿಸಿಬಿ ಪೊಲೀಸರು ಹಾಜರುಪಡಿಸಿದರು. ನ್ಯಾಯಾಲಯವು ಆರೋಪಿಯನ್ನು ಸೆಪ್ಟೆಂಬರ್ 29ರವರೆಗೆ ಸಿಸಿಬಿ ಕಸ್ಟಡಿಗೆ ನೀಡಿ ಆದೇಶಿಸಿತು. ಅಭಿನವ ಹಾಲಶ್ರಿ ಪರ ವಕೀಲ ಲೋಕೇಶ್ ಮಧ್ಯಂತರ ಜಾಮೀನಿಗೆ ಅರ್ಜಿ ಸಲ್ಲಿಸಿದರು. ಸರ್ಕಾರಿ ವಕೀಲರಿಗೆ ಸೆಪ್ಟೆಂಬರ್ 29ರಂದು ಆಕ್ಷೇಪಣೆ ಸಲ್ಲಿಸಲು …
Read More »