Breaking News

ಭವ್ಯ ಮೆರವಣಿಗೆ ಮೂಲಕ ಈದ್ಗಾ ಮೈದಾನಕ್ಕೆ ಗಣಪತಿ ಮೂರ್ತಿ ಪ್ರತಿಷ್ಠಾಪನೆ

ಹುಬ್ಬಳ್ಳಿ: ಅದ್ದೂರಿ ಮೆರವಣಿಗೆಯ ಮೂಲಕ ಸಾಗಿ ಬಂದು ಇಂದು ಇಲ್ಲಿನ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಲಾಯಿತು. ನಗರದ ಮೂರುಸಾವಿರ ಮಠದ ಆವರಣದಿಂದ ಆರಂಭವಾದ ಮೆರವಣಿಗೆ ಮಹಾವೀರಗಲ್ಲಿ, ತುಳಜಾಭವಾನಿ ವೃತ್ತ, ದಾಜೀಬಾನ್ ಪೇಟೆ, ಅಂಚಟಗೇರಿ ಓಣಿ, ರಾಯಣ್ಣ ವೃತ್ತ ಮೂಲಕ ಈದ್ಗಾ ಮೈದಾನಕ್ಕೆ ಆಗಮಿಸಿತು. ಮೆರವಣಿಗೆಯುದ್ದಕ್ಕೂ ಪಂಚವಾದ್ಯ, ಡೋಲು, ನಾಶಿಕ್ ಜಾಂಝ್ ಮೇಳ ಕಂಡುಬಂತು. ಶಾಸಕ ಅರವಿಂದ ಬೆಲ್ಲದ ನೃತ್ಯ ಮಾಡುವ ಮೂಲಕ ಗಮನ ಸೆಳೆದರು. ಭಾರತ ಮಾತೆಯ ಆಳೆತ್ತರದ ಭಾವಚಿತ್ರ, …

Read More »

ಯುನೆಸ್ಕೋ ವಿಶ್ವಪಾರಂಪರಿಕ ತಾಣಗಳ ಪಟ್ಟಿಗೆ ರಾಜ್ಯದ ಹೊಯ್ಸಳರ ದೇವಾಲಯ: ಪಿಎಂ ಮೋದಿ, ಸಿಎಂ ಸಿದ್ದರಾಮಯ್ಯ ಹರ್ಷ

ಬೆಂಗಳೂರು: ವಿಶ್ವಸಂಸ್ಥೆಯ ಶೈಕ್ಷಣಿಕ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಸಂಸ್ಥೆ (ಯುನೆಸ್ಕೋ)ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಕರುನಾಡಿನ ಪ್ರಸಿದ್ಧ ಹೊಯ್ಸಳರ ಕಾಲದ ದೇವಾಲಯಗಳು ಸೇರ್ಪಡೆಗೊಂಡಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಹರ್ಷ ವ್ಯಕ್ತಪಡಿಸಿದ್ದಾರೆ.       ವಿಶ್ವಮಟ್ಟದ ಮೂಲಸೌಲಭ್ಯ, ಸುರಕ್ಷತೆ ಒದಗಿಸಲು ಬದ್ಧ: ಈ ಸಂಬಂಧ ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಪೋಸ್ಟ್ ಮಾಡಿರುವ ಸಿಎಂ, “ಇದು ಖುಷಿ, ಹೆಮ್ಮೆಯ ಸಂಗತಿ. ನಾಡಿನ ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ಪ್ರವಾಸಿಗರಿಗೆ ವಿಶ್ವಮಟ್ಟದ …

Read More »

ಚೈತ್ರಾ ಕುಂದಾಪುರ ವಂಚನೆ ಪ್ರಕರಣ: ಆರೋಪಿಗಳ ಬ್ಯಾಂಕ್ ಖಾತೆ ಸ್ಥಗಿತ, ಕಾರು ಜಪ್ತಿ

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಅಭ್ಯರ್ಥಿಯೊಬ್ಬರಿಗೆ ಟಿಕೆಟ್ ಕೊಡಿಸುವುದಾಗಿ ಹೇಳಿ ಹಂತ-ಹಂತವಾಗಿ ಕೋಟ್ಯಂತರ ರೂಪಾಯಿ ಪಡೆದು ವಂಚಿಸಿದ್ದ ಪ್ರಕರಣದ ಆರೋಪಿಗಳ ಆಸ್ತಿ ಶೋಧ ಪ್ರಕ್ರಿಯೆಯನ್ನು ಸಿಸಿಬಿ ಪೊಲೀಸರು ಮುಂದುವರಿಸಿದ್ದಾರೆ. ಆರೋಪಿಗಳ ಬ್ಯಾಂಕ್‌ ಖಾತೆಯಲ್ಲಿದ್ದ ಠೇವಣಿ ಹಾಗೂ ಕಾರು ಜಪ್ತಿ ಮಾಡಲಾಗಿದೆ. ಶನಿವಾರ, 81 ಲಕ್ಷ ನಗದು ಜಪ್ತಿ ಮಾಡಲಾಗಿದ್ದು, ನಂತರ ಆರೋಪಿಗಳ ಎಫ್.ಡಿ ಖಾತೆಯಲ್ಲಿ ಒಟ್ಟು 1.08 ಕೋಟಿ ಠೇವಣಿ ಪತ್ತೆಯಾಗಿದೆ. ಬ್ಯಾಂಕ್‌ಗಳ ಮೂಲಕ ಠೇವಣಿಗಳ ವ್ಯವಹಾರವನ್ನು ಸ್ಥಗಿತಗೊಳಿಸಲಾಗಿದೆ ಎಂದು ಸಿಸಿಬಿ …

Read More »

ಮೂವರು ಡಿಸಿಎಂ ಬೇಡಿಕೆಗೆ ಮುಖ್ಯಮಂತ್ರಿಯೇ ಉತ್ತರ ಕೊಡಬೇಕು, :D.C.M.

ಬೆಂಗಳೂರು : ಸಚಿವ ಕೆ ಎನ್​ ರಾಜಣ್ಣ ಹೇಳಿರುವಂತೆ ಮೂವರು ಡಿಸಿಎಂ ಬೇಡಿಕೆ ಸಂಬಂಧ ಮುಖ್ಯಮಂತ್ರಿಗಳೇ ಇದಕ್ಕೆಲ್ಲಾ ಉತ್ತರ ಕೊಡಬೇಕು ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದ್ದಾರೆ. ಸದಾಶಿವನಗರದ ತಮ್ಮ ನಿವಾಸದ ಬಳಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಕೆ ಎನ್​ ರಾಜಣ್ಣ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, ಬಹಳ ಸಂತೋಷ. ಎಲ್ಲರ ಮನಸ್ಸಿಗೂ ಸಮಾಧಾನ. ನನ್ನನ್ನು ಡಿಸಿಎಂ ಆಗಿ ನೇಮಕ ಮಾಡಿರುವುದು ಮುಖ್ಯಮಂತ್ರಿಗಳು ಮತ್ತು ಗವರ್ನರ್​. ಇದಕ್ಕೆಲ್ಲಾ ಮುಖ್ಯಮಂತ್ರಿಗಳೇ …

Read More »

ಹಣದ ಆಸೆಗೆ ಮಾಲೀಕನನ್ನೇ ಹತ್ಯೆ ಮಾಡಿದ್ದ ಮೂವರು ಆರೋಪಿಗಳನ್ನು ಬನವಾಸಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಶಿರಸಿ(ಉತ್ತರ ಕನ್ನಡ): ಹಣದ ಆಸೆಗಾಗಿ ಕೆಲಸ ನೀಡಿದ ಮಾಲೀಕನನ್ನೇ ಬರ್ಬರವಾಗಿ ಹತ್ಯೆ ಮಾಡಿದ್ದ ಮೂವರು ಆರೋಪಿಗಳನ್ನು ಶಿರಸಿಯ ಬನವಾಸಿ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆ ನಡೆದ 48 ಗಂಟೆಯೊಳಗೆ ಆರೋಪಿಗಳನ್ನು ಬಂಧಿಸಲಾಗಿದೆ. ಕಳೆದ ಎರಡು ದಿನಗಳ ಹಿಂದೆ ಅಪರಿಚಿತ ವ್ಯಕ್ತಿಯ ಶವ ಶಿರಸಿಯ ವಡ್ಡಿನಕೊಪ್ಪ ಅರಣ್ಯ ಭಾಗದಲ್ಲಿ ಪತ್ತೆಯಾಗಿತ್ತು. ಕೊಲೆ ಎಂದು ಪ್ರಾಥಮಿಕ ವರದಿಯಲ್ಲಿ ಉಲ್ಲೇಖಿಸಲಾಗಿತ್ತು. ನಂತರ ತನಿಖೆ ಕೈಗೊಂಡ ಬನವಾಸಿ ಠಾಣೆ ಪೊಲೀಸರು ಕೊಲೆಯಾದ ವ್ಯಕ್ತಿಯ ಗುರುತು ಪತ್ತೆ …

Read More »

ಸತತ 26 ಗಂಟೆಗಳ ಕಾಲ ಸ್ಯಾಕ್ಸೋಫೋನ್ ನುಡಿಸಿ ಗಿನ್ನಿಸ್​ ದಾಖಲೆ ಬರೆದ ಗರ್ಭಿಣಿ

ಹೊಸಕೋಟೆ (ಬೆಂಗಳೂರು): 7 ತಿಂಗಳ ಗರ್ಭಿಣಿ ಸತತ 26 ಗಂಟೆ ಸ್ಯಾಕ್ಸೋಫೋನ್‌ ನುಡಿಸಿ ಗಿನ್ನಿಸ್ ವರ್ಲ್ಡ್ ರೆಕಾರ್ಡ್ ಮಾಡಿ ವಿಶೇಷ ಮನ್ನಣೆ ತನ್ನದಾಗಿಸಿಕೊಂಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಸಮೀಪದ ಆವಲಹಳ್ಳಿ ನಿವಾಸಿ ಸುಬ್ಬಲಕ್ಷ್ಮೀ ಈ ಸಾಧಕಿ. ಕಳೆದ ಪೆಬ್ರವರಿಯಲ್ಲಿ ಇವರು ಆವಲಹಳ್ಳಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 26 ಗಂಟೆ 23 ನಿಮಿಷ ಸ್ಯಾಕ್ಸೊಫೋನ್ ನುಡಿಸಿದ್ದಾರೆ. ಇಷ್ಟು ಸಮಯ ನಿರಂತರವಾಗಿ ಸ್ಯಾಕ್ಸೊಪೋನ್ ನುಡಿಸಿದ ಮೊದಲ ಮಹಿಳೆ ಅನ್ನೋ ಹೆಗ್ಗಳಿಕೆಯೂ ಇವರದ್ದಾಗಿದೆ. ಇದೀಗ ಅಪರೂಪದ …

Read More »

ತಾಕತ್ತಿದ್ದರೆ ಸಿದ್ದರಾಮಯ್ಯಮೂವರು ಡಿಸಿಎಂಗಳನ್ನು ಮಾಡಲಿ: ಎನ್​ ರವಿಕುಮಾರ್

ಬೆಂಗಳೂರು: ಬರ, ಕಾವೇರಿ ವಿಷಯಾಂತರಕ್ಕೆ ಮೂರು ಡಿಸಿಎಂ ಹುದ್ದೆ ಚರ್ಚೆ ಹರಿಬಿಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಾಕತ್ತಿದ್ದರೆ ಮೂವರು ಡಿಸಿಎಂಗಳನ್ನು ಮಾಡಲಿ. ನಾವು ಮೂವರನ್ನು ಡಿಸಿಎಂ ಮಾಡಿದ್ದೆವು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಸಿಎಂಗೆ ಸವಾಲೆಸೆದಿದ್ದಾರೆ. ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಮಧ್ಯಮದರೊಂದಿಗೆ ಅವರು ಮಾತನಾಡಿದರು. ಕಾವೇರಿ, ಬರ ವಿಚಾರ ಡೈವರ್ಟ್ ಮಾಡಲು ಮೂರು ಡಿಸಿಎಂ ಹುದ್ದೆಯ ಚರ್ಚೆ ಬಿಟ್ಟಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ …

Read More »

ಮಹಾರಾಷ್ಟ್ರ ಸಿಎಂ ಏಕನಾಥ್​ ಶಿಂಧೆ ಮತ್ತು 16 ಶಾಸಕರ ಅನರ್ಹತೆ ಅರ್ಜಿಯನ್ನು ಎರಡು ವಾರದಲ್ಲಿ ಇತ್ಯರ್ಥಪಡಿಸಿ ಎಂದು ಸುಪ್ರೀಂಕೋರ್ಟ್​ ಸ್ಪೀಕರ್​ಗೆ ಸೂಚಿಸಿದೆ.

ನವದೆಹಲಿ: ಶಿವಸೇನೆಯಿಂದ ಬಂಡೆದ್ದಿರುವ ಮಹಾರಾಷ್ಟ್ರದ ಈಗಿನ ಸಿಎಂ ಏಕನಾಥ್​ ಶಿಂಧೆ ಮತ್ತು ಅವರ ಬಣದ 16 ಶಾಸಕರ ವಿರುದ್ಧದ ಅನರ್ಹತೆ ಅರ್ಜಿಯನ್ನು ಒಂದು ವಾರದೊಳಗೆ ಕೈಗೆತ್ತಿಕೊಂಡು ವಿಚಾರಣೆ ನಡೆಸಿ, ಎರಡು ವಾರದೊಳಗೆ ಮಾಹಿತಿ ನೀಡುವಂತೆ ಸುಪ್ರೀಂಕೋರ್ಟ್​ ಸ್ಪೀಕರ್​ಗೆ ಸೂಚಿಸಿದೆ.   ಶಿವಸೇನೆ ಬಂಡಾಯ ಶಾಸಕರ ಅನರ್ಹತೆ ಅರ್ಜಿಯ ವಿಚಾರಣೆಯನ್ನು ಸೋಮವಾರ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು, ಪಕ್ಷ ವಿರೋಧಿ …

Read More »

ಸದ್ಯ ಬಿಜೆಪಿ ಜೊತೆ ಯಾವುದೇ ಮೈತ್ರಿ ಇಲ್ಲ: ಎಐಎಡಿಎಂಕೆ

ಚೆನ್ನೈ(ತಮಿಳುನಾಡು) : ಲೋಕಸಭೆ ಚುನಾವಣೆ ಹಿನ್ನೆಲೆ ಬಿಜೆಪಿ, ಕಾಂಗ್ರೆಸ್ ಸೇರಿದಂತೆ ವಿವಿಧ ಪಕ್ಷಗಳು ಭರದ ಸಿದ್ಧತೆ ನಡೆಸುತ್ತಿವೆ. ಈ ನಡುವೆ ವಿವಿಧ ಪಕ್ಷಗಳ ಮೈತ್ರಿ ಬಗ್ಗೆಯೂ ಸುದ್ದಿಗಳು ಹರದಾಡುತ್ತಿದೆ. ಇದರ ಬೆನ್ನಲ್ಲೇ ಬಿಜೆಪಿಯ ಮಿತ್ರ ಪಕ್ಷ ಎಐಎಡಿಎಂಕೆ(ಅಲ್​ ಇಂಡಿಯಾ ದ್ರಾವಿಡ ಮುನ್ನೇತ್ರ ಕಳಗಂ) ಭಾರತೀಯ ಜನತಾ ಪಕ್ಷದೊಂದಿಗೆ ಸದ್ಯ ಯಾವುದೇ ಮೈತ್ರಿ ಇಲ್ಲ ಎಂದು ಹೇಳಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಎಐಎಡಿಎಂಕೆ ನಾಯಕ ಡಿ. ಜಯಕುಮಾರ್​, ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ …

Read More »

ಅಂದು ತಂದೆ-ತಾಯಿ, ಇಂದು ಮಗನ ಬರ್ಬರ ಹತ್ಯೆ

ಬೆಳಗಾವಿ : ಹಳೆ ವೈಷಮ್ಯದ ಹಿನ್ನೆಲೆ ಮಾರಕಾಸ್ತ್ರಗಳಿಂದ ಕೊಚ್ಚಿ ದುಷ್ಕರ್ಮಿಗಳು ವ್ಯಕ್ತಿಯೋರ್ವನ ಕೊಲೆ ಮಾಡಿರುವ ಘಟನೆ ಚೆನ್ನಮ್ಮ ಕಿತ್ತೂರು ತಾಲೂಕಿನ ತಿಗಡೊಳ್ಳಿ ಗ್ರಾಮದಲ್ಲಿ ಭಾನುವಾರ ತಡರಾತ್ರಿ ನಡೆದಿದೆ.   ತಿಗಡೊಳ್ಳಿ ಗ್ರಾಮದ ವಿಜಯ್ ರಾಮಚಂದ್ರಪ್ಪ ಆರೇರ್(35) ಕೊಲೆಯಾದ ವ್ಯಕ್ತಿ. ಅದೇ ಗ್ರಾಮದ ಕಲ್ಲಪ್ಪ ಕ್ಯಾತಣ್ಣವರ್ ನಡುವೆ ನಿನ್ನೆ ರಾತ್ರಿ ಮಾತಿನ ಚಕಮಕಿ ನಡೆದು, ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಇಬ್ಬರು ಮಾರಕಾಸ್ತ್ರಗಳಿಂದ ಹೊಡೆದಾಡಿಕೊಂಡಿದ್ದಾರೆ. ತೀವ್ರ ಗಾಯಗೊಂಡಿದ್ದ ವಿಜಯ್​ನನ್ನು ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ಕುಟುಂಬಸ್ಥರು …

Read More »