Breaking News

ಪಂಚ ಗ್ಯಾರಂಟಿ: ಇಲ್ಲಿವರೆಗೆ ರಾಜ್ಯ ಸರ್ಕಾರ ಬಿಡುಗಡೆ ಮಾಡಿದ ಅನುದಾನದ ಸಂಪೂರ್ಣ ವಿವರ

ಬೆಂಗಳೂರು: ಪಂಚ ಗ್ಯಾರಂಟಿಗಳ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಪ್ರಮುಖ ಆದ್ಯತೆ ನೀಡಿದೆ.‌ ಗ್ಯಾರಂಟಿಗಳ ಜಾರಿಗೆ ತೊಡಕಾಗದಂತೆ ಅನುದಾನ ಬಿಡುಗಡೆ ಮಾಡುತ್ತಿದೆ. ಆಗಸ್ಟ್​ವರೆಗೆ ಜಾರಿಯಾಗಿರುವ 4 ಗ್ಯಾರಂಟಿಗಳಿಗೆ ನೀಡಿರುವ ಅನುದಾನದ ಮಾಹಿತಿ ನೋಡೋಣ. 2023-24ರ ಸಾಲಿನಲ್ಲಿ ಪಂಚ ಗ್ಯಾರಂಟಿಗಳಿಗಾಗಿ ಸರ್ಕಾರ ಸುಮಾರು 40,000 ಕೋಟಿ ರೂ.‌ ಅನುದಾನ ಹಂಚಿಕೆ ಮಾಡಿದೆ. ಈ ಗ್ಯಾರಂಟಿಗಳಿಗಾಗಿ ಎಸ್‌ಸಿಎಸ್ ಪಿಟಿಎಸ್‌ಪಿಯಡಿ 11,144 ಕೋಟಿ ರೂ. ಅನುದಾನ ಹಂಚಿದೆ. ಉಳಿದಂತೆ, ಇತರೆ ಇಲಾಖೆಗಳ ಅನುದಾನಗಳನ್ನು ಹೊಂದಿಸಿ 5 ಗ್ಯಾರಂಟಿಗಳಿಗೆ …

Read More »

ಗಣಪನ ಕೊರಳೇರಲು ಸಿದ್ಧಗೊಳ್ತಿವೆ ಬಗೆಬಗೆ ಏಲಕ್ಕಿ ಮಾಲೆ

ಹಾವೇರಿ: ಗಣೇಶೋತ್ಸವಕ್ಕೆ ಇಲ್ಲಿಯ ಉಸ್ಮಾನಸಾಬ್​ ಎಂಬವರು ವಿವಿಧ ಬಗೆಯ ಏಲಕ್ಕಿ ಮಾಲೆಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದಾರೆ. ಒಂದೆಳೆಯ ಮಾಲೆಗಳಿಂದ ಹಿಡಿದು 25 ಎಳೆಗಳಿರುವ ಮಾಲೆಗಳನ್ನು ಇವರು ತಯಾರಿಸುತ್ತಾರೆ. ಕಳೆದ ಹಲವು ವರ್ಷಗಳಿಂದ ಈ ಕೆಲಸದಲ್ಲಿ ತೊಡಗಿದ್ದಾರೆ. ತಾಯಿಯಿಂದ ಬಂದ ಕಲೆಯನ್ನು ಉಳಿಸಿ, ಬೆಳೆಸಿಕೊಂಡು ಬರುತ್ತಿದ್ದಾರೆ. ವಿಶಿಷ್ಠ ಏಲಕ್ಕಿ ಮಾಲೆ ತಯಾರಿಕೆಗಾಗಿ ಇವರ ತಾಯಿಗೆ ‘ಕರ್ನಾಟಕ ರಾಜ್ಯೋತ್ಸವ’ ಪ್ರಶಸ್ತಿ ಲಭಿಸಿತ್ತು. ಉಸ್ಮಾನಸಾಬ್ ಮಾತನಾಡಿ​, “ಸಾರ್ವಜನಿಕ ಗಣೇಶೋತ್ಸವಗಳಿಗಾಗಿ ಮುಂಚಿತವಾಗಿ ಆರ್ಡರ್‌ಗಳು ಬಂದಿವೆ. ಈಗಾಗಲೇ ದೊಡ್ಡ …

Read More »

ರಾಜ್ಯ ಸರ್ಕಾರ ಪತನವಾಗುತ್ತದೆ. ಅವರ ಪಕ್ಷದವರೇ ಅವರ ಸರ್ಕಾರವನ್ನು ಬೀಳಿಸಲಿದ್ದಾರೆ: ಯತ್ನಾಳ್

ಹುಬ್ಬಳ್ಳಿ : ಜನವರಿಯಲ್ಲಿ ರಾಜ್ಯದಲ್ಲಿ ಬದಲಾವಣೆಯಾಗಲಿದೆ.‌ ರಾಜ್ಯ ಸರ್ಕಾರ ಪತನವಾಗುತ್ತದೆ. ಅವರ ಪಕ್ಷದವರೇ ಅವರ ಸರ್ಕಾರವನ್ನು ಬೀಳಿಸಲಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ ಭವಿಷ್ಯ ನುಡಿದಿದ್ದಾರೆ. ನಗರದಲ್ಲಿಂದು ಮಾತನಾಡಿದ ಅವರು, ನಾವೇ ನೇರವಾಗಿ ಸಿಎಂ ಆಗಬಹುದು ಅಂತಾ ವಿರೋಧ ಪಕ್ಷದ ನಾಯಕನನ್ನ ಇದುವರೆಗೂ ಆಯ್ಕೆ ಮಾಡಿಲ್ಲ. ವಿರೋಧ ಪಕ್ಷದ ಬದಲು ಸಿಎಂ ಆಗಬಹುದು ಅಂತಾ ವಿಪಕ್ಷ ನಾಯಕರ ಆಯ್ಕೆ ಮಾಡಿಲ್ಲ. ನೇರವಾಗಿ ನಮ್ಮ ಪಕ್ಷದವರೇ ಸಿಎಂ ಯಾಕಾಗಬಾರದು ಎಂದು …

Read More »

ನಾನಂತೂ ಡಿಸಿಎಂ ಸ್ಥಾನದ ಆಕಾಂಕ್ಷಿ ಅಲ್ಲ. ಪಕ್ಷ ಒಂದು ವೇಳೆ ನಿರ್ಧರಿಸಿದರೆ ಅವರ ಸಾಮರ್ಥ್ಯ ನೋಡಿ ಡಿಸಿಎಂ ಮಾಡುತ್ತದೆ

ಬೆಳಗಾವಿ: ಮೂರು ಡಿಸಿಎಂ ಹುದ್ದೆ ಸೃಷ್ಟಿಸುವಂತೆ ಸಚಿವ ಕೆ.ಎನ್.ರಾಜಣ್ಣ ತಮ್ಮ ವಯಕ್ತಿಕ ಹೇಳಿಕೆ ನೀಡಿದ್ದಾರೆ. ಈ ವಿಚಾರದಲ್ಲಿ ಪಕ್ಷ ಅಂತಿಮವಾಗಿ ನಿರ್ಧರಿಸಬೇಕು ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್​ ಜಾರಕಿಹೊಳಿ ಹೇಳಿದರು. ಇಲ್ಲಿನ ಕುಮಾರ ಗಂಧರ್ವ ರಂಗಮಂದಿರ ಆವರಣದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈಗಂತೂ ಅದರ ಚರ್ಚೆಯ ಅವಶ್ಯಕತೆ ಇಲ್ಲ. ನಾನಂತೂ ಡಿಸಿಎಂ ಸ್ಥಾನದ ಆಕಾಂಕ್ಷಿ ಅಲ್ಲ. ಸಚಿವ ಕೆ ಎನ್​ ರಾಜಣ್ಣ ತಮ್ಮ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ …

Read More »

ಇತಿಹಾಸ ಸೃಷ್ಟಿಸಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ.

ರಾಯಬಾಗದಲ್ಲಿ 400 ಕೆ.ವಿ. ವಿತರಣಾ ಕೇಂದ್ರ ಸ್ಥಾಪಿಸಲು ಮಂಜೂರಾತಿ: ಸಚಿವ ಸತೀಶ್‌ ಜಾರಕಿಹೊಳಿ ಬೆಳಗಾವಿ : ಇತ್ತೀಚೆಗೆ ಬೆಂಗಳೂರಿನಲ್ಲಿ ಜರುಗಿದ ಕವಿಪ್ರನಿನಿಯ 90 ನೇ ತಾಂತ್ರಿಕ ಸಮನ್ವಯ ಸಮಿತಿ ಸಭೆಯಲ್ಲಿ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಮೇಖಳಿ ಗ್ರಾಮದ ವ್ಯಾಪ್ತಿಯಲ್ಲಿ ಹೊಸದಾಗಿ ಅಂದಾಜು 800 ಕೋಟಿ ವೆಚ್ಚದಲ್ಲಿ 400 ಕೆ.ವ್ಹಿ ವಿತರಣಾ ಕೇಂದ್ರವನ್ನು ಸ್ಥಾಪಿಸುವ ಸಂಬಂಧ ಸಲ್ಲಸಲಾದ ಪ್ರಸ್ತಾವನೆಗೆ ಮಂಜೂರು ದೊರಕಿದೆ ಲೋಕೋಪಯೋಗಿ ಸಚಿವರು , ಬೆಳಗಾವಿ ಜಿಲ್ಲಾ ಉಸ್ತುವಾರಿ …

Read More »

ಗಣಪತಿ ಹಬ್ಬದ ನಂತರ ರಾಜ್ಯ ಪ್ರವಾಸ ಆರಂಭಿಸುತ್ತೇನೆ.:B.S.Y.

ಬೆಂಗಳೂರು: “ರಾಜ್ಯ ಸರ್ಕಾರದ ವೈಫಲ್ಯ, ಜನವಿರೋಧಿ ನೀತಿ ಖಂಡಿಸಿ ಜನಜಾಗೃತಿ ಮೂಡಿಸಲು ಗಣಪತಿ ಹಬ್ಬದ ನಂತರ ರಾಜ್ಯ ಪ್ರವಾಸ ಆರಂಭಿಸುತ್ತೇನೆ. ಇಂದು ಕುರುಡುಮಲೆ ಗಣಪತಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ವಾಪಸ್ ಬರುತ್ತೇನೆ” ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ತಿಳಿಸಿದರು. ಡಾಲರ್ಸ್ ಕಾಲೋನಿಯಲ್ಲಿರುವ ನಿವಾಸ ಧವಳಗಿರಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಾಡಿನ ಎಲ್ಲರಿಗೂ ಗೌರಿ ಗಣೇಶ ಹಬ್ಬದ ಶುಭಾಶಯ. ಇವತ್ತು ಕುರುಡುಮಲೆ ಗಣಪತಿ ದೇವಸ್ಥಾನದಲ್ಲಿ ದರ್ಶನ ಮಾಡಲು ನಾವೆಲ್ಲ ಒಟ್ಟಾಗಿ ಹೋಗುತ್ತಿದ್ದೇವೆ. …

Read More »

ಏಷ್ಯಾಕಪ್​ ಫೈನಲ್​ ಕದನ: ಟಾಸ್​ ಗೆದ್ದ ಲಂಕಾ ಬ್ಯಾಟಿಂಗ್​ ಆಯ್ಕೆ..

ಕೊಲಂಬೊ (ಶ್ರೀಲಂಕಾ): ಏಷ್ಯಾಕಪ್​ ಕೀರೀಟಕ್ಕಾಗಿ ಇಂದು ಆರ್​ ಪ್ರೇಮದಾಸ ಕ್ರೀಡಾಂಗಣದಲ್ಲಿ ಭಾರತ ಮತ್ತು ಶ್ರೀಲಂಕಾ ಸೆಣಸಾಡುತ್ತಿದ್ದು, ಟಾಸ್​ ಗೆದ್ದ ಲಂಕಾ ನಾಯಕ ಶನಕ ಬ್ಯಾಟಿಂಗ್​ ಆಯ್ಕೆ ಮಾಡಿಕೊಂಡಿದ್ದಾರೆ.   ಗಾಯಗೊಂಡ ಅಕ್ಷರ್ ಪಟೇಲ್​​ ಏಷ್ಯಾಕಪ್​ನಿಂದ ಹೊರಗುಳಿದಿದ್ದು ಅವರ ಜಾಗಕ್ಕೆ ವಾಷಿಂಗ್ಟನ್ ಸುಂದರ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಉಳಿದಂತೆ ಬಾಂಗ್ಲಾದೇಶದ ಪಂದ್ಯಕ್ಕೆ ವಿಶ್ರಾಂತಿ ನೀಡಿದ್ದ ವಿರಾಟ್​ ಕೊಹ್ಲಿ, ಹಾರ್ದಿಕ್​ ಪಾಂಡ್ಯ, ಕುಲ್ದೀಪ್​​ ಯಾದವ್​, ಮೊಹಮ್ಮದ್ ಸಿರಾಜ್ ಮತ್ತು ಜಸ್ಪ್ರೀತ್ ಬುಮ್ರಾ ಅವರನ್ನು ಮತ್ತೆ …

Read More »

ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಸಿಎಂ ಭಾಗಿ

ಕಲಬುರಗಿ: ಕಲ್ಯಾಣ ಕರ್ನಾಟಕದ ಉತ್ಸವ ದಿನಾಚರಣೆ ಅಂಗವಾಗಿ ಕಲಬುರಗಿ ಪೊಲೀಸ್ ಪರೇಡ್ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ ನೆರವೇರಿಸಿದರು. ಇದಕ್ಕೂ ಮುನ್ನ ಹೈದ್ರಾಬಾದ್​ ಕರ್ನಾಟಕ ವಿಮೋಚನಾ ರೂವಾರಿ ಸರ್ಧಾರ್​ ವಲ್ಲಭಬಾಯಿ ಪಟೇಲ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಬಳಿಕ ಧ್ವಜಾರೋಹಣ ನೆರವೇರಿಸಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಅವರು, ಅನೇಕ ಯೋಜನೆಗಳ ಬಗ್ಗೆ ಹಾಗೂ ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಕೈಗೊಂಡ ಯೋಜನೆಗಳ ಕುರಿತು ವಿವರಿಸಿದರು. ಅಲ್ಲದೆ ನೂತನ ಸಾರಿಗೆ ಬಸ್, ಹೆಲ್ತ್ ಎಟಿಎಂ ಲೋಕಾರ್ಪಣೆ …

Read More »

ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಯಲ್ಲಿ ಭಗವಾನ್ ಶ್ರೀ ವಿಶ್ವಕರ್ಮ ದಿನ ಆಚರಣೆ

ಗೋಕಾಕ : ಯುವ ನಾಯಕ ಸಂತೋಷ ಜಾರಕಿಹೊಳಿ ಅವರ ಒಡೆತನದ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಯಲ್ಲಿ ಭಗವಾನ್ ಶ್ರೀ ವಿಶ್ವಕರ್ಮ ದಿನಾಚರಣೆ ಆಚರಿಸಲಾಯಿತು.   ತಾಲೂಕಿನ ಚಿಕ್ಕನಂದಿ ಗ್ರಾಮದಲ್ಲಿರುವ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಯಲ್ಲಿ ಭಗವಾನ್ ಶ್ರೀ ವಿಶ್ವಕರ್ಮ ದಿನಾಚರಣೆ ಅಂಗವಾಗಿ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ, ಪ್ರಸಾದ ವಿತರಿಸಿದರು.   ಈ ಸಂದರ್ಭದಲ್ಲಿ ಕಾರ್ಖಾನೆ ಎಲ್ಲ‌ ಸಿಬ್ಬಂದಿಗಳು ಹಾಗೂ ಕಾರ್ಮಿಕರು ಉಪಸ್ಥಿತರಿದ್ದರು.

Read More »

ರುದ್ರಾಕ್ಷಿಗಳಿಂದಲೇ ತಯಾರಿಸಿರುವ ಸುಂದರ ಗಣಪನ ಮೂರ್ತಿ ಇದೀಗ ಎಲ್ಲರ ಗಮನ ಸೆಳೆಯುತ್ತಿದೆ.

ಬೆಳಗಾವಿ: ಅದ್ಧೂರಿಯಾಗಿಗಣೇಶೋತ್ಸವ ಆಚರಿಸಲು ಬೆಳಗಾವಿ ಜಿಲ್ಲೆ ಸಜ್ಜಾಗುತ್ತಿದೆ.‌ ರುದ್ರಾಕ್ಷಿಗಳಿಂದಲೇ ತಯಾರಿಸಿರುವ ಸುಂದರ ಗಣಪನ ಮೂರ್ತಿ ಇದೀಗ ಎಲ್ಲರ ಗಮನ ಸೆಳೆಯುತ್ತಿದೆ. ವಿಶೇಷ ಮೂರ್ತಿಯಲ್ಲಿ ಕಲಾವಿದನ ಕೈಚಳಕವನ್ನು ನೋಡಬಹುದು. ಸಂಪೂರ್ಣವಾಗಿ ರುದ್ರಾಕ್ಷಿಗಳಿಂದಲೇ ಕಂಗೊಳಿಸುತ್ತಿರುವ ಗಣೇಶನನ್ನು ಹಳೆ ಗಾಂಧಿ ನಗರದ ಕಲಾವಿದ ಸುನೀಲ ಸಿದ್ದಪ್ಪ ಆನಂದಾಚೆ ಸಿದ್ಧಪಡಿಸಿದ್ದಾರೆ. ತಮ್ಮ ತಂದೆ ಸಿದ್ದಪ್ಪ ಅವರಿಂದ ಬಳುವಳಿಯಾಗಿ ಪಡೆದಿರುವ ಮೂರ್ತಿ ರಚನೆ ಕಲೆಯನ್ನು ಮುಂದುವರಿಸಿಕೊಂಡು ಹೋಗುತ್ತಿದ್ದಾರೆ. ವೃತ್ತಿಯಲ್ಲಿ ಪ್ಲಂಬರ್​ ಆಗಿರುವ ಸುನೀಲ ಪ್ರವೃತ್ತಿಯಲ್ಲಿ ಪರಿಸರಸ್ನೇಹಿ‌ ಗಣೇಶ ಮೂರ್ತಿ …

Read More »