ಶಿವಮೊಗ್ಗ: ಚೈತ್ರಾ ಕುಂದಾಪುರ ಪ್ರಕರಣಕ್ಕೂ ಬಿಜೆಪಿಗೂ ಯಾವುದೇ ಸಂಬಂಧ ಇಲ್ಲ. ಆಕೆ ತಪ್ಪು ಮಾಡಿದ್ದರೆ ಶಿಕ್ಷೆ ಅನುಭವಿಸಲಿ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು. ನಗರದಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚೈತ್ರಾ ಕುಂದಾಪುರ ಅವರ ಪ್ರಕರಣವನ್ನು ನಾನು ಮಾಧ್ಯಮಗಳಲ್ಲಿ ನೋಡುತ್ತಿದ್ದೇನೆ. ಸಿಸಿಬಿ ತನಿಖೆ ನಡೆಯುತ್ತಿದೆ, ತನಿಖೆ ನಂತರ ಎಲ್ಲವೂ ಹೊರಬರುತ್ತದೆ ಎಂದು ಹೇಳಿದರು. ಬಿಜೆಪಿಯಲ್ಲಿ ದುಡ್ಡು ಕೊಟ್ಟು ಟಿಕೆಟ್ ಪಡೆಯುವ ಸಂಸ್ಕೃತಿ ಇದೆಯಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಈ ಪ್ರಕರಣಕ್ಕೂ …
Read More »ಗಣೇಶ ಮೂರ್ತಿ ನಾಲ್ಕು ಅಡಿ ಎತ್ತರ ಮೀರಬಾರದು ಎಂಬುದು ಹಾಸ್ಯಾಸ್ಪದ: ಕೇಂದ್ರ ಸಚಿವ ಜೋಶಿ
ಹುಬ್ಬಳ್ಳಿ: ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆ ವಿಚಾರವಾಗಿ ಜಿಲ್ಲಾಡಳಿತ ಹಲವಾರು ಷರತ್ತುಗಳನ್ನು ವಿಧಿಸಿದೆ. ಇದು ಸರಿಯಲ್ಲ, ನಮ್ಮ ಧಾರ್ಮಿಕ ಹಬ್ಬದ ಆಚರಣೆಗೆ ಷರತ್ತು ವಿಧಿಸಲು ಇವರು ಯಾರು?, ಜನರ ಧಾರ್ಮಿಕ ಭಾವನೆಗಳ ಜೊತೆ ಚೆಲ್ಲಾಟವಾಡುತ್ತಿರುವ ರಾಜ್ಯ ಸರ್ಕಾರದ ವರ್ತನೆ ಖಂಡನೀಯ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಮಾನ್ಯವಾಗಿ ಸಾರ್ವಜನಿಕವಾಗಿ ಪ್ರತಿಷ್ಠಾಪನೆ ಮಾಡುವ ಗಣಪತಿ ಮೂರ್ತಿಗಳು ನಾಲ್ಕು ಅಡಿ ಗಳಿಗಿಂತ ಎತ್ತರವಿರುತ್ತವೆ. ಇದು ನಮ್ಮ ಭಕ್ತಿಯ ಸಂಕೇತ. ಆದರೆ ಇವರು …
Read More »ಬೆಂಗಳೂರಿನಲ್ಲಿ ₹7 ಕೋಟಿಗಿಂತ ಹೆಚ್ಚು ಮೌಲ್ಯದ ಮಾದಕವಸ್ತು ವಶ: ವಿದೇಶಿಗ ಸೇರಿ 14 ಮಂದಿ ಆರೋಪಿಗಳ ಬಂಧನ
ಬೆಂಗಳೂರು: ಡ್ರಗ್ಸ್ ಮಾಫಿಯಾ ವಿರುದ್ಧ ಸಮರ ಸಾರಿರುವ ನಗರ ಸಿಸಿಬಿ ಪೊಲೀಸರು ಏಳು ಪ್ರತ್ಯೇಕ ಪ್ರಕರಣಗಳನ್ನು ಭೇದಿಸಿ 14 ಮಂದಿ ದಂಧೆಕೋರರನ್ನು ಬಂಧಿಸಿದ್ದಾರೆ. ಅವರಿಂದ 7 ಕೋಟಿಗಿಂತ ಹೆಚ್ಚು ಮೌಲ್ಯದ ತರಹೇವಾರಿ ಮಾದಕವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕಾಡುಗೋಡಿ, ವಿದ್ಯಾರಣ್ಯಪುರ, ವರ್ತೂರು, ಬನಶಂಕರಿ ಹಾಗೂ ಕಾಟನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಕಾರ್ಯಾಚರಣೆ ನಡೆಸಿ ಮೂವರು ವಿದೇಶಿ ಪ್ರಜೆ ಸೇರಿದಂತೆ 14 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಐರನ್ ಟೇಬಲ್, ಸಿರಿಂಜ್ ಮೂಲಕ ಸ್ಮಗ್ಲಿಂಗ್: 2012ರಲ್ಲಿ …
Read More »ಸೆಪ್ಟಂಬರ್ 18ರಂದು ‘ತೋತಾಪುರಿ 2’ ಚಿತ್ರದ ಟ್ರೈಲರ್ ಅನ್ನು ಹ್ಯಾಟ್ರಿಕ್ ಹೀರೋ ಶಿವ ರಾಜ್ಕುಮಾರ್ ಬಿಡುಗಡೆ ಮಾಡಲಿದ್ದಾರೆ.
ಒಂದೇ ಸೂರಿನಡಿ ಬದುಕುತ್ತಿರುವ ನಾವೆಲ್ಲ ಒಂದೇ ಎನ್ನುವ ಭಾವೈಕ್ಯತೆಯ ಸಂದೇಶ ಹೊಂದಿದ್ದ ‘ತೋತಾಪುರಿ’ ಚಿತ್ರ ಕನ್ನಡ ಸಿನಿಮಾ ಪ್ರೇಮಿಗಳ ಮನಸ್ಸು ಗೆಲ್ಲುವಲ್ಲಿ ಯಶಸ್ವಿಯಾಗಿತ್ತು. ಇದೀಗ ಮುಂದುವರಿದ ಭಾಗ ‘ತೋತಾಪುರಿ 2’ ಶೀಘ್ರದಲ್ಲೇ ತೆರೆಕಾಣಲು ಸಿದ್ಧವಾಗಿದೆ. ‘ಸಿದ್ಲಿಂಗು’ ಖ್ಯಾತಿಯ ವಿಜಯಪ್ರಸಾದ್ ನಿರ್ದೇಶನದಲ್ಲಿ ಮೂಡಿಬಂದಿರುವ ‘ತೋತಾಪುರಿ 2’ ಚಿತ್ರಕ್ಕೆ ಹ್ಯಾಟ್ರಿಕ್ ಹೀರೋ ಶಿವ ರಾಜ್ಕುಮಾರ್ ಸಾಥ್ ಸಿಕ್ಕಿದೆ. ಇದೇ ಗಣೇಶ ಹಾಗೂ ಗೌರಿ ಹಬ್ಬಕ್ಕೆ ‘ತೋತಾಪುರಿ 2’ ಚಿತ್ರದ ಟ್ರೈಲರ್ ಅನ್ನು ಹ್ಯಾಟ್ರಿಕ್ …
Read More »ಸೆ.25ರಂದು ಎಲ್ಲ ಜಿಲ್ಲೆಗಳಲ್ಲಿ ಏಕಕಾಲಕ್ಕೆ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ‘ಜನತಾ ದರ್ಶನ’ಕ್ಕೆ ಸೂಚನೆ
ಬೆಂಗಳೂರು: ಎಲ್ಲ ಜಿಲ್ಲೆಗಳಲ್ಲಿ ಸೆ.25 ರಂದು ಏಕಕಾಲದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಜನತಾ ದರ್ಶನ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಸಚಿವರ ನೇತೃತ್ವದಲ್ಲಿ ಸಂಬಂಧಿಸಿದ ಚುನಾಯಿತ ಪ್ರತಿನಿಧಿಗಳನ್ನು ಒಳಗೊಂಡಂತೆ ಶಿಷ್ಠಾಚಾರಕ್ಕೆ, ಅನುಗುಣವಾಗಿ ಜನತಾ ದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವಂತೆ ನಿರ್ದೇಶನ ನೀಡಲಾಗಿದೆ. ಈ ಸಂಬಂಧ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು, ಜಿಲ್ಲಾ, ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಅಗತ್ಯ ವ್ಯವಸ್ಥೆಗಳನ್ನು ಕಲ್ಪಿಸಿಕೊಂಡು, ವ್ಯವಸ್ಥಿತವಾಗಿ ಹಾಗೂ ಜವಾಬ್ದಾರಿಯುತವಾಗಿ ನಡೆಸುವ …
Read More »ಕಾಂಗ್ರೆಸ್ ಭವನದಲ್ಲಿ ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಲಿದ್ದಾರೆ. ಸತೀಶ್ ಜಾರಕಿಹೊಳಿ
ಬೆಳಗಾವಿ: ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ, ಲೋಕೋಪಯೋಗಿ ಇಲಾಖೆ ಸಚಿವರು ಆಗಿರು ಸತೀಶ್ ಜಾರಕಿಹೊಳಿ ಅವರು ಬೆಳಗ್ಗೆ ನಗರದ ಕಾಂಗ್ರೆಸ್ ಭವನದಲ್ಲಿ ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಲಿದ್ದಾರೆ. ಇದರ ನಡುವ ಸುದ್ದಿಗಾರರೊಂದಿಗೆ ಮಾತನಾಡಲಿದ್ದಾರೆ ಎಂದು ತಿಳಿದು ಬಂದಿದೆ.
Read More »ಗರ್ಭಪಾತದ ಭಯದಿಂದ 7 ತಿಂಗಳು ಆಸ್ಪತ್ರೆಯಲ್ಲೇ ವಾಸ ವೈದ್ಯರ ನೆರವಿನಿಂದ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ
ಮಂಡ್ಯ: ನಾಲ್ಕು ಬಾರಿ ಗರ್ಭಪಾತವಾಗಿದ್ದರಿಂದ ನೊಂದಿದ್ದ ಮಹಿಳೆಯೊಬ್ಬರು ಐದನೇ ಬಾರಿಗೆ ಇಂಥಹದ್ದೇ ಸಮಸ್ಯೆಯಾಗಬಹುದು ಎಂಬ ಭಯದಿಂದ ಏಳು ತಿಂಗಳ ಕಾಲ ಆಸ್ಪತ್ರೆಯಲ್ಲೇ ವಾಸ್ತವ್ಯ ಹೂಡಿದ್ದರು. ಅವರು ಈ ಬಾರಿ ಹೆಣ್ಣು ಮಗುವಿಗೆ ಜನ್ಮ ನೀಡಿರುವ ಅಪರೂಪದ ಘಟನೆಗೆ ಮಂಡ್ಯ ಜಿಲ್ಲಾಸ್ಪತ್ರೆ ಸಾಕ್ಷಿಯಾಗಿದೆ. ತಾಲೂಕಿನ ತಗ್ಗಹಳ್ಳಿ ಗ್ರಾಮದ ಮಾದೇಶ್ ಅವರ ಪತ್ನಿ ಜಯಲಕ್ಷ್ಮಿ ನಗರದ ಮಿಮ್ಸ್ ಆಸ್ಪತ್ರೆಯಲ್ಲಿ ಸೆ. 6ರಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ತಾಯಿ- ಮಗು ಆರೋಗ್ಯವಾಗಿದ್ದಾರೆ. ಮಾದೇಶ್ ಹಾಗೂ …
Read More »ಣೇಶೋತ್ಸವ ಹಿನ್ನೆಲೆ ಸೋಮವಾರವೇ ರಜೆ ಇರುತ್ತದೆ: ನಿತೇಶ್ ಪಾಟೀಲ್
ಬೆಳಗಾವಿ : ಗಣೇಶೋತ್ಸವ ಹಿನ್ನೆಲೆಯಲ್ಲಿ ರಾಜ್ಯ ಸರಕಾರವು ಮುಂಚಿತವಾಗಿಯೇ ಘೋಷಿಸಿರುವಂತೆ ಸೋಮವಾರವೇ ರಜೆ ಇರುತ್ತದೆ ಎಂದು ನಿತೇಶ್ ಪಾಟೀಲ್ ತಿಳಿಸಿದ್ದಾರೆ. ಈ ಕುರಿತು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ (ಡಿಪಿಎ ಆರ್) ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದ ಬಳಿಕ ಈ ವಿಷಯವನ್ನು ಸ್ಪಷ್ಟಪಡಿದ್ದಾರೆ.
Read More »ವಿಶೇಷ ಸಂಸತ್ ಅಧಿವೇಶನ: ಹೊಸ ಕಟ್ಟಡದಲ್ಲಿ ರಿಹರ್ಷಲ್.. ಎಲ್ಲ ವ್ಯವಸ್ಥೆಗಳ ಪರಿಶೀಲನೆ!
ನವದೆಹಲಿ: ಸೆಪ್ಟೆಂಬರ್ 18 ರಂದು ವಿಶೇಷ ಸಂಸತ್ ಅಧಿವೇಶನ ನಡೆಯಲಿದೆ. ಅಧಿವೇಶನಕ್ಕೂ ಮುನ್ನ, ‘ಅಮೃತ್ ಕಾಲ’ ಸಮಯದಲ್ಲಿ ಸರ್ಕಾರವು ಕರೆದಿರುವ ಅಧಿವೇಶನಕ್ಕೆ ಮೂರು ದಿನಗಳ ಮೊದಲು ಹೊಸ ಮತ್ತು ಹಳೆಯ ಸಂಸತ್ತಿನೊಂದಿಗೆ ಪೂರ್ವಾಭ್ಯಾಸ ಕಾರ್ಯ ಕೈಗೊಳ್ಳಲಾಗಿದೆ. ಸರ್ಕಾರದ ಮೂಲಗಳ ಪ್ರಕಾರ ಸಂಸತ್ತಿನ ವಿಶೇಷ ಅಧಿವೇಶನಕ್ಕೆ ಹಳೆಯ ಕಟ್ಟಡದಲ್ಲಿ ಒಂದು ದಿನ ಹಾಗೂ ಹೊಸ ಕಟ್ಟಡದಲ್ಲಿ ಎರಡು ದಿನ ತಾಲೀಮು ನಡೆಸಲಾಗಿದೆ ಎಂದು ತಿಳಿದು ಬಂದಿದೆ. ಹಳೆ ಕಟ್ಟಡದಲ್ಲಿ ವಿಶೇಷ ಅಧಿವೇಶನಕ್ಕೆ ಈಗಾಗಲೇ …
Read More »ರಸ್ತೆಯಲ್ಲಿ ಸಂಚರಿಸುತ್ತಿದ್ದವರ ಮೇಲೆ ಚಿರತೆ ದಾಳಿ: ಸಣ್ಣಪುಟ್ಟ ಗಾಯಗಳಿಂದ ಇಬ್ಬರು ಪಾರು.. ಎಂಪಿ ರೇಣುಕಾಚಾರ್ಯರ ಭೇಟಿ
ದಾವಣಗೆರೆ: ರಸ್ತೆಯಲ್ಲಿ ಸಂಚರಿಸುತ್ತಿದ್ದವರ ಮೇಲೆ ಚಿರತೆ ದಾಳಿ ಮಾಡಿದ್ದು, ಸಣ್ಣಪುಟ್ಟ ಗಾಯಗಳಿಂದ ಇಬ್ಬರು ಪಾರಾಗಿರುವ ಘಟನೆ ಜಿಲ್ಲೆಯ ನ್ಯಾಮತಿಯಲ್ಲಿ ಕಳೆದ ದಿನ ರಾತ್ರಿ ನಡೆದಿದೆ. ಜಿಲ್ಲೆಯ ನ್ಯಾಮತಿ ತಾಲೂಕಿನಲ್ಲಿ ಚಿರತೆ ದಾಳಿ ಮಿತಿಮೀರಿದೆ. ಜಮೀನುಗಳಲ್ಲಿ ಕೆಲಸ ಮಾಡುತ್ತಿದ್ದವರ ಮೇಲೆ ದಾಳಿ ಮಾಡುತ್ತಿದ್ದ ಚಿರತೆಗಳು ಇದೀಗ ರಸ್ತೆಯಲ್ಲಿ ಸಂಚರಿಸುತ್ತಿದ್ದವರ ಮೇಲೂ ಎರಗುತ್ತಿವೆ. ಚಿರತೆಯ ದಾಳಿಯಿಂದ ನ್ಯಾಮತಿ ತಾಲೂಕಿನ ಜನರು ಜೀವ ಅಂಗೈಯಲ್ಲಿ ಬದುಕುವ ಪರಿಸ್ಥಿತಿ ನಿರ್ಮಾಣವಾಗಿದೆ. ನ್ಯಾಮತಿ ತಾಲೂಕಿನ ಹಳೇಮಳಲಿ ಗ್ರಾಮದ ಮಂಜುನಾಥ್, …
Read More »