Breaking News

ದೇಶದ ಅಭಿವೃದ್ಧಿಯಲ್ಲಿ ಇಂಜಿನಿಯರ್​ಗಳ ಪಾತ್ರ ಪ್ರಮುಖವಾಗಿದೆ.: ಪ್ರಧಾನಿ

ಬೆಂಗಳೂರು: ದೇಶದ ಅಭಿವೃದ್ಧಿಯಲ್ಲಿ ಇಂಜಿನಿಯರ್​ಗಳ ಪಾತ್ರ ಪ್ರಮುಖವಾಗಿದೆ. ಇಂಜಿನಿಯರಿಂಗ್​ ಕ್ಷೇತ್ರಕ್ಕೆ ದೇಶಕ್ಕೆ ಅಪಾರ ಕೊಡುಗೆಯನ್ನು ನೀಡಿದವರಲ್ಲಿ ಪ್ರಮುಖರು ಕರ್ನಾಟಕದ ಮೋಕ್ಷಗುಂಡಂ ವಿಶ್ವೇಶ್ವರಯ್ಯ. ಇಂಜಿನಿಯರಿಂಗ್​ ಕ್ಷೇತ್ರದಲ್ಲಿ ಅವರು ನೀಡಿದ ಕೊಡುಗೆ ಸ್ಮರಣಾರ್ಥವಾಗಿ ಪ್ರತಿ ವರ್ಷ ಅವರ ಜನ್ಮ ದಿನವನ್ನು ಅಂದರೆ ಸೆಪ್ಟೆಂಬರ್​ 15ರಂದು ರಾಷ್ಟ್ರೀಯ ಇಂಜಿನಿಯರ್ಸ್​​​ ದಿನ ಎಂದು ಗುರುತಿಸಲಾಗಿ, ಆಚರಣೆ ಮಾಡಲಾಗುತ್ತಿದೆ. ರಾಷ್ಟ್ರೀಯ ಇಂಜಿನಿಯರ್ಸ್​​​ ದಿನವನ್ನು ಮೊದಲ ಬಾರಿಗೆ 1968ರಲ್ಲಿ ಆಚರಿಸಲಾಯಿತು. ಈ ದಿನವನ್ನು ತಾಂತ್ರಿಕ ಶಿಕ್ಷಣದಲ್ಲಿ ಅತ್ಯಂತ ಪ್ರಮುಖ ದಿನವಾಗಿ …

Read More »

ವಿಚಾರಣೆ ವೇಳೆ ಚೈತ್ರಾ ಕುಂದಾಪುರ ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಬೆಂಗಳೂರು: ಉದ್ಯಮಿಯೊಬ್ಬರಿಗೆ ವಿಧಾನಸಭೆ ಚುನಾವಣೆಗೆ ಬಿಜೆಪಿ ಟಿಕೆಟ್​ ಕೊಡಿಸುವುದಾಗಿ ವಂಚನೆ ಮಾಡಿರುವ ಆರೋಪ ಸಂಬಂಧ ಸಿಸಿಬಿ ಪೊಲೀಸರ ವಿಚಾರಣೆ ಎದುರಿಸುತ್ತಿರುವ ಚೈತ್ರಾ ಕುಂದಾಪುರ ಅವರು ಅಸ್ವಸ್ಥರಾಗಿ ಕುಸಿದು ಬಿದ್ದಿದ್ದಾರೆ. ಮಹಿಳಾ ಸಾಂತ್ವನ ಕೇಂದ್ರದಿಂದ ಬಂದ ಅರ್ಧ ಗಂಟೆಯಲ್ಲೇ ಚೈತ್ರಾ ಮೂರ್ಛೆ ಹೋಗಿದ್ದಾರೆ. ಕೂಡಲೇ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಚೈತ್ರಾ ಬೆಳಗಿನ ಟಿಫಿನ್ ಕೂಡ ಮಾಡಿರಲಿಲ್ಲ ಎಂಬ ಮಾಹಿತಿ ಇದೆ. ಏನಿದು ಪ್ರಕರಣ: ಬೈಂದೂರು ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ನಂಬಿಸಿ …

Read More »

ಚಾಕು ತೋರಿಸಿ ವಯೋವೃದ್ಧೆಯ ಕಿವಿಯ ಓಲೆ, ಚಿನ್ನಾಭರಣ ಕಿತ್ತುಕೊಂಡು ಪರಾರಿ

ರಾಯಚೂರು: ಚಾಕು ತೋರಿಸಿ ವಯೋವೃದ್ಧೆಯ ಕಿವಿಯ ಓಲೆ, ಚಿನ್ನಾಭರಣ ಕಿತ್ತುಕೊಂಡು ಪರಾರಿಯಾದ ಘಟನೆ ರಾಯಚೂರು ಜಿಲ್ಲೆಯ ಲಿಂಗಸೂಗೂರು ಪಟ್ಟಣದಲ್ಲಿ ನಡೆದಿದೆ. ಸಂಗಮ ಬಾರ್​ ಹಿಂಭಾಗದ ಬಡಾವಣೆಯ ಮನೆಯೊಂದರಲ್ಲಿ ಗುರುವಾರ ಮಧ್ಯರಾತ್ರಿ ಮನೆಯ ಬಾಗಿಲು ಮುರಿದು ಪಾರ್ವತಮ್ಮ ಲಿಂಗಯ್ಯ ಗುಂತಗೋಳ ಎಂಬುವರ ಮನೆಯಲ್ಲಿ ಕೃತ್ಯ ಎಸಗಲಾಗಿದೆ. ಮಧ್ಯರಾತ್ರಿ ಮನೆಯ ಬಾಗಿಲು ಮುರಿದು ಕಳ್ಳರು ನುಗ್ಗಿದ್ದಾರೆ. ಈ ಸಮಯದಲ್ಲಿ ಮನೆಯಲ್ಲಿ ಇದ್ದ ವಯೋವೃದ್ಧೆ ಕಳ್ಳರ ಕೃತ್ಯಕ್ಕೆ ಪ್ರತಿರೋಧ ತೋರಿದಾಗ ಖದೀಮರು ಬಾಯಿಯಲ್ಲಿ ಬಟ್ಟೆಯನ್ನು ಇಟ್ಟು, …

Read More »

ಸಂವಿಧಾನ ಪೀಠಿಕೆಯ ಜಾಗತಿಕ ವಾಚನ

ಬೆಂಗಳೂರು: ಸಂವಿಧಾನ ವಿರೋಧಿ ಶಕ್ತಿಗಳು ಸಂವಿಧಾನವನ್ನು ನಾಶಗೊಳಿಸಿ ಮತ್ತೆ ಮನುಸ್ಮೃತಿ ಜಾರಿಗೆ ಹುನ್ನಾರ ನಡೆಸುತ್ತಿವೆ. ಈ ಬಗ್ಗೆ ಎಚ್ಚರ ಮತ್ತು ಜಾಗೃತಿ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ವಿಧಾನಸೌಧದಲ್ಲಿ ಆಯೋಜಿಸಿದ್ದ ಭಾರತದ ಸಂವಿಧಾನ ಪೀಠಿಕೆಯ ಜಾಗತಿಕ ವಾಚನ ಕಾರ್ಯಕ್ರಮವನ್ನು ಸಂವಿಧಾನ ಪೀಠಿಕೆ ಓದುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಸಂವಿಧಾನದ ನಾಶ ಮತ್ತು ಮನುಸ್ಮೃತಿಯ ಜಾರಿ ಎಂದರೆ ಶೇ. …

Read More »

IDBI Recruitment: ಐಡಿಬಿಐನ ವಿವಿಧ ವಲಯದಲ್ಲಿ ಖಾಲಿ ಇರುವ ಒಟ್ಟು 600 ಹುದ್ದೆಗಳ ಭರ್ತಿಗೆ ಅಧಿಸೂಚನೆ

IDBI Recruitment: ಐಡಿಬಿಐನ ವಿವಿಧ ವಲಯದಲ್ಲಿ ಖಾಲಿ ಇರುವ ಒಟ್ಟು 600 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಇಂಡಸ್ಟ್ರೀಯಲ್​ ಡೆವಲ್ಮೆಂಟ್​​ ಬ್ಯಾಂಕ್​ ಆಫ್​ ಇಂಡಿಯಾ (ಐಡಿಬಿಐ) 600 ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಿದೆ. ಐಡಿಬಿಐ ಜ್ಯೂನಿಯರ್​ ಅಸಿಸ್ಟಂಟ್​ ಮ್ಯಾನೇಜರ್​ ಹುದ್ದೆ ನೇಮಕಾತಿಗೆ ಮುಂದಾಗಿದೆ. ಕರ್ನಾಟಕ ಸೇರಿದಂತೆ ಭಾರತದಾದ್ಯಂತ ಈ ನೇಮಕಾತಿ ನಡೆಯಲಿದೆ. ಪದವಿ ಆಗಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆ ನೇಮಕಾತಿ, ಅರ್ಜಿ ಸಲ್ಲಿಕೆ ಮತ್ತು …

Read More »

ವಿಜಯಪುರದಲ್ಲಿ ನಾಟಕ ಪ್ರದರ್ಶನದ ವೇಳೆ ಕುಸಿದು ಬಿದ್ದು ಮೃತಪಟ್ಟ ವ್ಯಕ್ತಿ

ವಿಜಯಪುರ: ನಾಟಕ ಪ್ರದರ್ಶನದ ವೇಳೆ ದಿಢೀರ್​ ಕುಸಿದು ಬಿದ್ದು ಪೋಸ್ಟ್​​ಮ್ಯಾನ್ ಸಾವನ್ನಪ್ಪಿರುವ ಮನಕಲಕುವ ಘಟನೆ ಗುರುವಾರ ರಾತ್ರಿ ನಡೆದಿದೆ. ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಕೋಟ್ಯಾಳ ಗ್ರಾಮದಲ್ಲಿ ಘಟನೆ ನಡೆದಿದೆ. ಶರಣು ಬಾಗಲಕೋಟೆ (24) ಎಂಬುವರೆ ಹೃದಯಾಘಾತದಿಂದ ಸಾವನ್ನಪ್ಪಿದ ಪೋಸ್ಟ್​​ಮ್ಯಾನ್ ಆಗಿದ್ದಾರೆ. ನಾಟಕ ಪ್ರದರ್ಶನ ವೇಳೆ ಡಾನ್ಸ್ ಮಾಡಲು ವೇದಿಕೆ ಏರಿದ್ದ ಶರಣು ಕೊಟ್ಯಾಳ್​ಗೆ ಹೃದಯಾಘಾತವಾಗಿದೆ. ”ಹಳ್ಳಿ ಹುಲಿ ಕೊಟ್ಟ ಬೆಳ್ಳಿ ಕಾಲುಂಗುರ” ನಾಟಕ ಪ್ರದರ್ಶನ ವೇಳೆ ಈ ಘಟನೆ ನಡೆದಿದೆ. …

Read More »

ಕಾವೇರಿ ರಕ್ಷಣಾ ಯಾತ್ರೆಗೆ ಬಿಜೆಪಿ ಸಜ್ಜು: ಬಿಎಸ್​ವೈ ನೇತೃತ್ವದಲ್ಲಿ ಮಹತ್ವದ ಸಭೆ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿಚಾರದ ವಿರುದ್ಧ ಕಾವೇರಿ ರಕ್ಷಣಾ ಯಾತ್ರೆ ನಡೆಸಲು ಪ್ರತಿಪಕ್ಷ ಬಿಜೆಪಿ ಮುಂದಾಗಿದ್ದು, ಈ ಸಂಬಂಧ ರಾಜ್ಯ ಬಿಜೆಪಿ ಕಚೇರಿಯಲ್ಲಿ ಮಹತ್ವದ ಸಭೆ ನಡೆಸಲಾಗುತ್ತಿದೆ. ಈಗಾಗಲೇ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಬಿಜೆಪಿ ಹೋರಾಟಕ್ಕೆ ರೂಪುರೇಷೆ ತಯಾರಿಸುತ್ತಿದೆ. ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಮಹತ್ವದ ಸಭೆ ಆರಂಭಗೊಂಡಿದೆ‌. ಕಾವೇರಿ ಕೊಳ್ಳದ ಜಿಲ್ಲೆಗಳಲ್ಲಿ ಕಾವೇರಿ …

Read More »

8 ದಿನಗಳಲ್ಲಿ ಆಯೋಗದ ಪೀಠಕ್ಕೆ ಕಟ್ಟಡ ಸಿಗುವಂತೆ ಮಾಡಬೇಕು ಇಲ್ಲವಾದಲ್ಲಿ ಉಗ್ರ ಹೋರಾಟಬೆಳಗಾವಿ ಜಿಲ್ಲಾಡಳಿತಕ್ಕೆ ಎಚ್ಚರಿಕೆ ನೀಡಿದ ವಕೀಲರು

ಬೆಳಗಾವಿಯಲ್ಲಿ ರಾಜ್ಯ ಗ್ರಾಹಕ ಆಯೋಗದ ಪೀಠ ಮಂಜೂರಾಗಿ 2 ವರ್ಷ ಕಳೆದರೂ ಕಟ್ಟಡದ ಕೊರತೆಯಿಂದ ಇನ್ನೂ ಕಾರ್ಯ ನಿರ್ವಹಿಸುತ್ತಿಲ್ಲ. ಆದ್ದರಿಂದ ಮುಂದಿನ 8 ದಿನಗಳಲ್ಲಿ ಆಯೋಗದ ಪೀಠಕ್ಕೆ ಕಟ್ಟಡ ಸಿಗುವಂತೆ ಮಾಡಬೇಕು ಇಲ್ಲವಾದಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಬೆಳಗಾವಿಯ ವಕೀಲರು ಜಿಲ್ಲಾಡಳಿತಕ್ಕೆ ಎಚ್ಚರಿಕೆ ನೀಡಿದ್ದಾರೆ. ರಾಜ್ಯ ಗ್ರಾಹಕ ಆಯೋಗದ ಶಾಶ್ವತ ಪೀಠವನ್ನು ಬೆಳಗಾವಿಯಲ್ಲಿ ಸ್ಥಾಪಿಸಬೇಕು ಎಂದು ವಕೀಲರು ಬಹಳ ದಿನಗಳಿಂದ ಒತ್ತಾಯಿಸುತ್ತಿದ್ದರು. ಇದಕ್ಕಾಗಿ ಅನೇಕ ಮೆರವಣಿಗೆಗಳು, ಆಂದೋಲನಗಳು ನಡೆದವು. ಅಂದಿನ …

Read More »

ಭೂಸ್ವಾಧೀನಾಧಿಕಾರಿ, ಉಪತಹಶೀಲ್ದಾರ್​ಗೆ ತಲಾ 4 ವರ್ಷ ಜೈಲು ಶಿಕ್ಷೆ, 20 ಸಾವಿರ ರೂ. ದಂಡ

ತುಮಕೂರು : ಜಮೀನು ಖಾತೆ ಮಾಡಿಕೊಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಗರ ಕೆಐಎಡಿಬಿ ವಿಶೇಷ ಭೂಸ್ವಾಧೀನಾಧಿಕಾರಿ ತಬಸುಮ್​ ಜಹೇರಾ ಹಾಗೂ ಬೆಳ್ಳಾವಿ ಉಪ ತಹಶೀಲ್ದಾರ್ ಶಬ್ಬೀರ್​ ಅವರಿಗೆ ತಲಾ ನಾಲ್ಕು ವರ್ಷ ಜೈಲು ಶಿಕ್ಷೆ ಮತ್ತು 20 ಸಾವಿರ ದಂಡ ವಿಧಿಸಿ ಇಲ್ಲಿನ 7ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ. ನ್ಯಾಯಾಧೀಶ ರಾಮಲಿಂಗೇಗೌಡ ಈ ತೀರ್ಪು ನೀಡಿದ್ದಾರೆ. ಜಿಲ್ಲೆಯ ಕುಣಿಗಲ್ ತಾಲೂಕಿನ ಜಯರಾಮ ಎಂಬುವರು 2017ರಲ್ಲಿ …

Read More »

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಬಿಜೆಪಿ ಪಟ್ಟು: ಅಹೋರಾತ್ರಿ ಪ್ರತಿಭಟನೆಗೆ ನಿರ್ಧಾರ

ಹುಬ್ಬಳ್ಳಿ: ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅನುಮತಿ ವಿಳಂಬ ಮಾಡುತ್ತಿರುವದನ್ನು‌ ಖಂಡಿಸಿ ಶಾಸಕ ಅರವಿಂದ ಬೆಲ್ಲದ ನೇತೃತ್ವದಲ್ಲಿ ನಿಯೋಗ ಮಹಾನಗರ ಪಾಲಿಕೆಗೆ ಮುತ್ತಿಗೆ ಹಾಕಿದರು. ಈದ್ಗಾ ಮೈದಾನಲ್ಲಿ ಅನುಮತಿ ವಿಳಂಬಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಶಾಸಕ ಅರವಿಂದ ಬೆಲ್ಲದ ನೇತೃತ್ವದ ನಿಯೋಗ ಕೂಡಲೇ ಗಣೇಶೋತ್ಸವಕ್ಕೆ ಅನುಮತಿ ನೀಡುವಂತೆ ಪಟ್ಟು ಹಿಡಿದಿದ್ದಾರೆ. ಇಲ್ಲದಿದ್ದರೆ ಇಲ್ಲಿಂದ ಎದ್ದು ಹೋಗುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ. ಈದ್ಗಾ ವಿಚಾರ ನ್ಯಾಯಾಲಯದಲ್ಲಿ ವಿಚಾರಣೆಗೆ ಬರುವ ಮುಂಚೆಯೇ ಅನುಮತಿ ನೀಡಬೇಕು. ಪಾಲಿಕೆ …

Read More »