Breaking News

ಗಣೇಶ ಹಬ್ಬಕ್ಕೆ ವಿಶೇಷ ಬಸ್ ಗಳ ವ್ಯವಸ್ಥೆ

ಗಣೇಶ ಹಬ್ಬಕ್ಕೆ ಕೆಎಸ್‌ಆರ್‌ಟಿಸಿ ಹೆಚ್ಚುವರಿ ಬಸ್ ಘೋಷಣೆ ಬೆನ್ನಲ್ಲೆ NWKRTC ಸಹ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಬಸ್ ಬಿಡುವುದಾಗಿ ತಿಳಿಸಿದೆ.  ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (NWKRTC)ಯಿಂದ ಗೌರಿ ಗಣೇಶದ ಮುಗಿಸಿ ಉತ್ತರ ಕರ್ನಾಟಕದಿಂದ ತಮ್ಮ ಕೆಲಸದ ಊರುಗಳಿಗೆ ತೆರಳುವವರಿಗೆ ನೆರವಾಗಲೆಂದು 500ಕ್ಕೂ ಅಧಿಕ ವಿಶೇಷ ಬಸ್‌ಗಳನ್ನು ಕಾರ್ಯಾಚರಣೆ ನಡೆಸುವುದಾಗಿ ತಿಳಿಸಿದೆ. ಸೋಮವಾರ ಗಣೇಶ ಚತುರ್ಥಿ ಇದೆ. ಅಲ್ಲದೇ ಶನಿವಾರ, ಭಾನುವಾರ ವಾರಾಂತ್ಯ ಇರುವುದರಿಂದ ಬಹುತೇಕ ಮಂದಿ …

Read More »

ಬ್ರಿಟನ್ ಪ್ರಧಾನಿ ರಿಷಿ ಸುನಕ್‌ ಅವರ ತಂದೆ, ತಾಯಿ ಇಂದು ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳ ಮಠಕ್ಕೆ ಭೇಟಿ ನೀಡಿದರು

ರಾಯಚೂರು: ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರ ತಂದೆ ಯಶವೀರ್ ಸುನಕ್, ತಾಯಿ ಉಷಾ ಸುನಕ್ ಹಾಗೂ ಇನ್ಫೋಸಿಸ್​​ ಫೌಂಡೇಶನ್​ ಸಂಸ್ಥಾಪಕಿ ಸುಧಾ ಮೂರ್ತಿ ಇಂದು ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳ ಮಠಕ್ಕೆ ಭೇಟಿ ನೀಡಿದ್ದರು. ಆರಂಭದಲ್ಲಿ ಗ್ರಾಮದ ಅಧಿದೇವತೆ ಶ್ರೀಮಂಚಾಲಮ್ಮ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ರಾಯರ ಮೂಲಬೃಂದಾವನ ದರ್ಶನ ಪಡೆದು, ವಿಶೇಷ ಪೂಜಾ ಕೈಂಕರ್ಯ ನೆರವೇರಿಸಿದರು. ಮಂತ್ರಾಲಯಕ್ಕೆ ಭೇಟಿ ನೀಡಿದ ಬ್ರಿಟನ್ ಪ್ರಧಾನಿ​ ರಿಷಿ ಸುನಕ್‌ …

Read More »

ವಂಚನೆ ಪ್ರಕರಣ: ಚೈತ್ರಾ ಕುಂದಾಪುರ ಸೇರಿ 6 ಆರೋಪಿಗಳ ಬಂಧನ

ಬೆಂಗಳೂರು/ಉಡುಪಿ: ಉದ್ಯಮಿಯೊಬ್ಬರಿಗೆ ವಂಚಿಸಿರುವ ಆರೋಪದ ಹಿನ್ನೆಲೆಯಲ್ಲಿ ಹಿಂದೂಪರ, ಹಾಗು ಸಾಮಾಜಿಕ ಕಾರ್ಯಕರ್ತೆ ಚೈತ್ರಾ ಕುಂದಾಪುರ ಸೇರಿ 6 ಮಂದಿ ಆರೋಪಿಗಳನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ‌.   ಚೈತ್ರಾ ಕುಂದಾಪುರ, ಮೋಹನ್ ಕುಮಾರ್ ಅಲಿಯಾಸ್ ಗಗನ್ ಕಡೂರು, ರಮೇಶ್ (ವಿಶ್ವನಾಥ್ ಪಾತ್ರಧಾರಿ), ಧನರಾಜ್, ಶ್ರೀಕಾಂತ್ ಹಾಗೂ ಪ್ರಜ್ವಲ್ ಬಂಧಿತರು. ವಂಚನೆಗೊಳಗಾದ ಉದ್ಯಮಿ ಗೋವಿಂದ ಬಾಬು ಪೂಜಾರಿ ಬಂಡೆಪಾಳ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಬಳಿಕ ಪ್ರಕರಣ ಸಿಸಿಬಿಗೆ ವರ್ಗಾವಣೆಯಾಗಿತ್ತು. 3 ಪ್ರತ್ಯೇಕ …

Read More »

ಮಾರುಕಟ್ಟೆಯಲ್ಲಿ ಮಹಾರಾಷ್ಟ್ರದ ಈರುಳ್ಳಿಯದ್ದೇ ದರ್ಬಾರ್

ದಾವಣಗೆರೆ: ಜಿಲ್ಲೆಯಲ್ಲಿ ಮಳೆ ಅಭಾವದಿಂದ ಈರುಳ್ಳಿ ಬೆಳೆ ಕುಂಠಿತವಾಗಿದೆ. ಇದರ ಪರಿಣಾಮ, ಸ್ಥಳೀಯ ಮಾರುಕಟ್ಟೆಯಲ್ಲಿ ಮಹಾರಾಷ್ಟ್ರದ ನಾಸಿಕ್ ಈರುಳ್ಳಿಯದ್ದೇ ದರ್ಬಾರ್ ಮುಂದುವರೆದಿದೆ. ಸಾಮಾನ್ಯವಾಗಿ ಗಣೇಶ ಹಬ್ಬ ಹಾಗೂ ದಸರಾ ನಂತರ ಈರುಳ್ಳಿ ಬೆಲೆ ಗಗನಕ್ಕೇರುತ್ತಿತ್ತು. ಈ ಬಾರಿ ಅದಕ್ಕೂ ಮುನ್ನವೇ ಬೆಲೆ ಏರಿದೆ. ಸ್ಥಳೀಯವಾಗಿ ಈರುಳ್ಳಿ ಬೆಳೆಯಲು ಮಳೆ ಕೊರತೆಯಾಗಿದೆ. ದಾವಣಗೆರೆಗೆ ನಾಸಿಕ್‌ ಈರುಳ್ಳಿ ಲಗ್ಗೆಯಿಟ್ಟಿದ್ದು, ಕೆಜಿಗೆ 27 ರೂಪಾಯಿಗೆ ಮಾರಾಟವಾಗುತ್ತಿದೆ. ಟೊಮೆಟೊ ಬಳಿಕ ಈರುಳ್ಳಿ ಬೆಲೆ ಗಗನಕ್ಕೇರಲಿದೆ ಎಂಬುದನ್ನು ಮನಗಂಡು …

Read More »

ಕೃಷ್ಣಾ, ತುಂಗಭದ್ರಾ ನದಿಗಳಲ್ಲಿ ಮೊಸಳೆ ಸಂತತಿ: ಜನರಲ್ಲಿ ಆತಂಕ

ರಾಯಚೂರು: ಜಿಲ್ಲೆಯ ಕೃಷ್ಣಾ ಹಾಗೂ ತುಂಗಭದ್ರಾ ನದಿಗಳು ವಿಶಾಲ ಪ್ರದೇಶದಲ್ಲಿ ಹರಿಯುತ್ತಿವೆ. ನದಿಗಳ ಎರಡೂ ತೀರಗಳ ಸಮೀಪದಲ್ಲಿ ರೈತರು ವ್ಯವಸಾಯ ಮಾಡುತ್ತಿದ್ದಾರೆ. ಈ ನದಿಗಳಲ್ಲಿ ಮೊಸಳೆಗಳ ಸಂತತಿ ಹೆಚ್ಚಾಗುತ್ತಿದೆ. ಜನರನ್ನು ಮೊಸಳೆ ಕಾಟದ ಭಯ ಆವರಿಸಿದೆ. ಜಿಲ್ಲೆಯ ಬಲಭಾಗದಲ್ಲಿ ಕೃಷ್ಣಾ ಹಾಗೂ ಎಡ ಭಾಗದಲ್ಲಿ ತುಂಗಭದ್ರಾ ನದಿಗಳು ಹರಿಯುತ್ತವೆ. ಕೃಷ್ಣಾ ನೂರಕ್ಕೂ ಹೆಚ್ಚು ಕಿಲೋ‌ ಮೀಟರ್ ಮತ್ತು ತುಂಗಭದ್ರಾ 80 ಕಿಲೋ ಮೀಟರ್​ಗಳವರೆಗೆ ಜಿಲ್ಲೆಯಲ್ಲಿ ಹರಿಯುತ್ತದೆ. ಈಗ ನದಿಯಲ್ಲಿ ನೀರಿನ ಪ್ರಮಾಣ …

Read More »

ಮೈಸೂರು ವಿವಿ ಕುಲಪತಿ ಲೋಕನಾಥ್​ ನೇಮಕಾತಿ ರದ್ದುಪಡಿಸಿದ ಹೈಕೋರ್ಟ್

ಬೆಂಗಳೂರು: ಮೈಸೂರು ವಿಶ್ವವಿದ್ಯಾಲಯ ಕುಲಪತಿಯಾಗಿ ಪ್ರೊ. ಎನ್ ಕೆ ಲೋಕನಾಥ್ ನೇಮಕ ಮಾಡಿ ರಾಜ್ಯಪಾಲರು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ. ಮೈಸೂರು ವಿವಿ ಕುಲಪತಿ ಹುದ್ದೆಗೆ ಲೋಕನಾಥ್‌ ಅವರನ್ನು ನೇಮಿಸಿ 2023ರ ಮಾರ್ಚ್ 23ರಂದು ರಾಜ್ಯಪಾಲರು ಹೊರಡಿಸಿದ್ದ ಆದೇಶ ರದ್ದುಪಡಿಸುವಂತೆ ಕೋರಿ ಪ್ರೊ. ಶರತ್ ಅನಂತಮೂರ್ತಿ ಮತ್ತು ಡಾ. ಜಿ ವೆಂಕಟೇಶ್‌ ಕುಮಾರ್‌ ಹೈಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎನ್‌ ಎಸ್‌ ಸಂಜಯ್‌ ಗೌಡ ಅವರ …

Read More »

20ರ ಪ್ರಾಯದಲ್ಲಿ ಎಮ್ಮೆ ಕದ್ದು ತಲೆಮರೆಸಿಕೊಂಡಿದ್ದ ಆರೋಪಿ.. 78ನೇ ವಯಸ್ಸಿನಲ್ಲಿ ಬಂಧನ!

ಬೀದರ್: ಎಮ್ಮೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಬರೋಬ್ಬರಿ 58 ವರ್ಷಗಳ ಬಳಿಕ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. 1965ರಲ್ಲಿ ಮೇಹಕರ್‍ನಲ್ಲಿ ನಡೆದ ಎರಡು ಎಮ್ಮೆ, ಒಂದು ಕರು ಕಳುವಾದ ಕುರಿತು ಮುರಳೀಧರರಾವ್ ಕುಲಕರ್ಣಿ ಎನ್ನುವವರು ಮೇಹಕರ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಘಟನೆ ನಂತರ ಮಹಾರಾಷ್ಟ್ರದ ಉದಗೀರ್ ಮೂಲದ ಕಿಶನ್ ಚಂದರ್ (30) ಹಾಗೂ ಗಣಪತಿ ವಾಗ್ಮೋರೆ (20) ಅವರನ್ನು ಬಂಧಿಸಲಾಗಿತ್ತು. ಆದರೆ, ಜಾಮೀನು ಪಡೆದ ಬಳಿಕ ಈ ಆರೋಪಿಗಳು ನ್ಯಾಯಾಲಯಕ್ಕೆ ಬರದೇ ತಲೆ …

Read More »

ಬಿಜೆಪಿ – ಜೆಡಿಎಸ್ ಮೈತ್ರಿ ಮಾತುಕತೆ: ಸೆ.20 ರೊಳಗೆ ಅಂತಿಮ?

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಬಿಜೆಪಿ-ಜೆಡಿಎಸ್ ಮೈತ್ರಿ ಮಾತುಕತೆ ಈ ತಿಂಗಳ 19 ಅಥವಾ 20 ರಂದು ಫೈನಲ್ ಆಗಲಿದೆ. ಮುಂದಿನ ವಾರ ನಡೆಯಲಿರುವ ಸಂಸತ್ತಿನ ವಿಶೇಷ ಅಧಿವೇಶನದ ಸಂದರ್ಭದಲ್ಲಿ ಮೈತ್ರಿ ಮಾತುಕತೆಯನ್ನು ಪೂರ್ಣಗೊಳಿಸಲು ನಿರ್ಧರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ದೆಹಲಿಗೆ ತೆರಳಲಿದ್ದು, ಸೆ.19 ಇಲ್ಲವೇ 20 ರಂದು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ …

Read More »

ತಮಿಳುನಾಡಿಗೆ ನೀರು ಬಿಡುಗಡೆಗೆ ಸೂಚನೆ: ಇಂದು ಸಿಎಂ ನೇತೃತ್ವದಲ್ಲಿ ತುರ್ತು ಸರ್ವಪಕ್ಷ ಸಭೆ

ಬೆಂಗಳೂರು: ಕಾವೇರಿ ನದಿ ನೀರು ಬಿಡುಗಡೆಗೆ ಸೂಚಿಸಿರುವ ಹಿನ್ನೆಲೆ ಇಂದು (ಬುಧವಾರ) ರಾಜ್ಯ ಸರ್ಕಾರ ತುರ್ತು ಸರ್ವಪಕ್ಷ ಸಭೆ ಕರೆದಿದೆ. ತಮಿಳುನಾಡಿಗೆ 5 ಸಾವಿರ ಕ್ಯೂಸೆಕ್​​ ನೀರನ್ನು ಬಿಡುವಂತೆ ಕಾವೇರಿ ನದಿ ನೀರು ನಿಯಂತ್ರಣಾ ಸಮಿತಿ ಸೂಚಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಧ್ಯಾಹ್ನ 12:30ಕ್ಕೆ ವಿಶೇಷ ತುರ್ತು ಸಭೆ ನಡೆಯಲಿದೆ. ಕಾವೇರಿ ಜಲಾನಯನ ಪ್ರದೇಶದ ವ್ಯಾಪ್ತಿಯ ಸಚಿವರು, ಎಲ್ಲಾ ಪಕ್ಷಗಳ ಮಾಜಿ ಮುಖ್ಯಮಂತ್ರಿಗಳು, ರಾಜ್ಯ ಸಚಿವ …

Read More »

ಪಿಒಪಿ ಗಣೇಶ ಮೂರ್ತಿ ತಯಾರಕರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ:ಈಶ್ವರ್ ಖಂಡ್ರೆ

ಬೆಂಗಳೂರು : ಪರಿಸರಕ್ಕೆ ಮಾರಕವಾದ ಪ್ಲಾಸ್ಟರ್ ಆಫ್‌ ಪ್ಯಾರಿಸ್ (ಪಿಒಪಿ) ಗಣೇಶ ಮೂರ್ತಿ ತಯಾರಕರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡುವಂತೆ ಸಚಿವ ಈಶ್ವರ ಖಂಡ್ರೆ ಸೂಚಿಸಿದರು. ಮುಂಬರುವ ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಪರಿಸರಸ್ನೇಹಿ ಗಣಪತಿ ಹಬ್ಬದ ಆಚರಣೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಸಚಿವರು ತಮ್ಮ ಕಚೇರಿಯಲ್ಲಿ ಮಂಗಳವಾರ, ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ರಾಸಾಯನಿಕಲೇಪಿತ ಪಿಒಪಿ ಗಣಪತಿ ತಯಾರಕರಿಗೆ ಮಂಡಳಿ ನೊಟೀಸ್ ನೀಡಿದ್ದರೂ ಅವರು ಮತ್ತೆ ತಯಾರಿಕೆಯಲ್ಲಿ ತೊಡಗಿದ್ದರೆ …

Read More »