Breaking News

ಸಂಸತ್ ಸಿಬ್ಬಂದಿಗೆ ಹೊಸ ಡ್ರೆಸ್ ಕೋಡ್: ರಾಜಕೀಯ ಕೆಸರೆರಚಾಟಕ್ಕೆ ನಾಂದಿ

ನವದೆಹಲಿ: ದೇಶದ ನೂತನ ಸಂಸತ್​ ಭವನ ಸಿದ್ಧವಾಗಿದೆ. ಇದು ನವ ಭಾರತದ ಸಂಕೇತ ಎಂದು ಬಣ್ಣಿಸಲಾಗುತ್ತಿದೆ. ಇದರೊಂದಿಗೆ ಹೊಸ ಕಟ್ಟಡದಲ್ಲಿ ಕೆಲಸ ಮಾಡುವ ನೌಕರರ ಡ್ರೆಸ್ ಕೂಡ ಬದಲಿಸಲು ನಿರ್ಧರಿಸಲಾಗಿದೆ. ಹೊಸ ಉಡುಗೆಯು ಸಂಪೂರ್ಣವಾಗಿ ಭಾರತೀಯ ಸಾಂಪ್ರದಾಯಿಕ ಶೈಲಿಯಲ್ಲಿರಲಿದೆ. ಇದೀಗ ನೂತನ ಡ್ರೆಸ್ ಕೋಡ್ ರಾಜಕೀಯ ಗದ್ದಲಕ್ಕೆ ನಾಂದಿ ಹಾಡಿದೆ. “ಆಡಳಿತ ಪಕ್ಷದ ಚುನಾವಣಾ ಚಿಹ್ನೆಯನ್ನು ಪ್ರಚಾರ ಮಾಡಲಾಗುತ್ತಿದೆ, ಇದು ತೀರಾ ಕೆಳಮಟ್ಟದ ರಾಜಕೀಯ ತಂತ್ರಗಾರಿಕೆ” ಎಂದು ಕಾಂಗ್ರೆಸ್ ಟೀಕಿಸಿದೆ. ಲೋಕಸಭೆಯ …

Read More »

ಸಚಿವ ಡಿ ಸುಧಾಕರ್ ವಜಾ ಮಾಡಲು ಮಾಜಿ ಸಿಎಂ ಕುಮಾರಸ್ವಾಮಿ ಆಗ್ರಹ

ಬೆಂಗಳೂರು: ದಲಿತರಿಗೆ ಧಮ್ಕಿ ಹಾಕಿ ದೌರ್ಜನ್ಯ ಎಸಗಿಸಿದ ಆರೋಪ ಎದುರಿಸುತ್ತಿರುವ ಯೋಜನೆ ಹಾಗೂ ಸಾಂಖ್ಯಿಕ ಖಾತೆ ಸಚಿವ ಡಿ ಸುಧಾಕರ್ ಅವರನ್ನು ಕೂಡಲೇ ಸಂಪುಟದಿಂದ ವಜಾ ಮಾಡಬೇಕು ಹಾಗೂ ಅವರನ್ನು ಬಂಧಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಒತ್ತಾಯ ಮಾಡಿದರು. ಜೆಪಿ ನಗರದ ತಮ್ಮ ನಿವಾಸದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ದಲಿತರ ರಕ್ಷಣೆ ಮಾಡುತ್ತೇವೆ ಎಂದು ಹೇಳಿಕೊಂಡು ಅಧಿಕಾರಕ್ಕೆ ಬಂದ ಈ ಸರ್ಕಾರದಲ್ಲಿ ಏನಾಗುತ್ತಿದೆ? ಸಚಿವರೇ ದಲಿತರ ಮೇಲೆ …

Read More »

ಬಿ ಕೆ ಹರಿಪ್ರಸಾದ್​​ಗೆ ಶೋಕಾಸ್ ನೊಟೀಸ್

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಪರೋಕ್ಷವಾಗಿ ಗುಡುಗಿದ್ದ ಎಂಎಲ್‌ಸಿ ಬಿ.ಕೆ.ಹರಿಪ್ರಸಾದ್​​ಗೆ ಎಐಸಿಸಿ ಶೋಕಾಸ್ ನೊಟೀಸ್ ಜಾರಿ ಮಾಡಿದೆ. ಎಐಸಿಸಿ ಶಿಸ್ತು ಸಮಿತಿ ನೋಟಿಸ್ ಜಾರಿ ಮಾಡಿದ್ದು, ಹತ್ತು ದಿನಗಳೊಳಗೆ ಉತ್ತರಿಸುವಂತೆ ತಿಳಿಸಿದೆ. ಕಳೆದ ಶನಿವಾರ ಅತಿ‌ ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಸಿಎಂ ವಿರುದ್ಧ ಬಿ.ಕೆ.ಹರಿಪ್ರಸಾದ್ ಅವರು ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದರು. ಇದು ಸಿಎಂ‌ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷವನ್ನು ತೀವ್ರ ಮುಜುಗರಕ್ಕೀಡು ಮಾಡಿತ್ತು. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಕೂಡ ಎಐಸಿಸಿ …

Read More »

ಅಪರೂಪದ ಕಾಯಿಲೆಯಿಂದ ಬಳಲುತ್ತಿರುವ ಮಗುವನ್ನು ದೆಹಲಿಯ ಸಿಎಂ ಅರವಿಂದ್​ ಕೇಜ್ರಿವಾಲ್​ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

ನವದೆಹಲಿ: ಅಪರೂಪದಲ್ಲಿ ಅಪರೂಪ ಕಾಯಿಲೆಯಿಂದ ಬಳಲುತ್ತಿರುವ ದೆಹಲಿಯ ಬಾಲಕನನ್ನು ಸಿಎಂ ಅರವಿಂದ್​ ಕೇಜ್ರಿವಾಲ್​ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಆನುವಂಶಿಕ ಕಾಯಿಲೆಯಾದ ಸ್ಪೈನಲ್ ಮಸ್ಕ್ಯುಲರ್ ಅಟ್ರೋಫಿ (ಎಸ್‌ಎಂಎ) ಚಿಕಿತ್ಸೆಗೆ ಕೋಟ್ಯಂತರ ರೂಪಾಯಿ ಬೇಕಾಗಿದ್ದು, ನೆರವಿಗೆ ಕುಟುಂಬಸ್ಥರು ಮನವಿ ಮಾಡಿದ್ದರು. ಹೀಗಾಗಿ ಸಿಎಂ ಅವರು ಖುದ್ದು ಭೇಟಿ ನೀಡಿ, ಮಾತುಕತೆ ನಡೆಸಿದರು. ಎಸ್​ಎಂಎ ಕಾಯಿಲೆಯು ಅಪಾಯಕಾರಿಯಾಗಿದ್ದು, ಅದು ತೀರಾ ಅಪರೂಪವಾಗಿದೆ. ಇದಕ್ಕೆ ತಕ್ಷಣವೇ ಚಿಕಿತ್ಸೆ ಕೊಡಿಸದಿದ್ದರೆ ಪ್ರಾಣಕ್ಕೆ ಕುತ್ತು ತರಲಿದೆ. ಇಂತಹ ರೋಗ …

Read More »

ಕುರಿ ಕಾಯುತ್ತಿದ್ದ ಬಾಲಕನನ್ನು ಶಾಲೆಗೆ ಸೇರಿಸಲು ನೆರವಾಗಿದ್ದಾರೆ ಸಿಎಂ ಸಿದ್ದರಾಮಯ್ಯ

ಚಿತ್ರದುರ್ಗ : ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಬಸಾಪುರದ ಬಾಲಕನೊಬ್ಬ ಶಾಲೆಗೆ ಹೋಗದೇ ಕುರಿ ಕಾಯುತ್ತಿದ್ದ ಬಗ್ಗೆ ಮಾಹಿತಿ ಪಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆ ಬಾಲಕನನ್ನು ಮತ್ತೆ ಶಾಲೆಗೆ ಸೇರಲು ನೆರವಾಗಿದ್ದಾರೆ. ಬಸಾಪುರ ಗ್ರಾಮದ ಯೋಗೇಶ್ ಎಂಬ ಬಾಲಕನನ್ನು ಮರಳಿ ಶಾಲೆಗೆ ಸೇರಿಸಲಾಗಿದೆ. ಈತನನ್ನು ತಂದೆ ತಾಯಿ ಒತ್ತಾಯಪೂರ್ವಕವಾಗಿ ಶಾಲೆ ಬಿಡಿಸಿ ಕಳೆದ 2 ವರ್ಷದಿಂದ ಕುರಿ ಮೇಯಿಸಲು ಕಳುಹಿಸಿದ್ದರು.     ಈ ಬಗ್ಗೆ ಸ್ಥಳೀಯರಾದ ಮಹೇಂದ್ರ ಎಂಬವರು ತಮ್ಮ …

Read More »

ಅರಭಾವಿ, ಕಲ್ಲೋಳಿ, ನಾಗನೂರ, ಮೂಡಲಗಿ ಪಟ್ಟಣಗಳಿಗೆ ಶುದ್ಧ ಕುಡಿಯುವ ನೀರಿಗಾಗಿ 143 ಕೋಟಿ ರೂ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಅರಭಾವಿ, ಕಲ್ಲೋಳಿ, ನಾಗನೂರ ಮತ್ತು ಮೂಡಲಗಿ ಪಟ್ಟಣಗಳಿಗೆ ಶುದ್ಧ ಕುಡಿಯುವ ನೀರಿನ ಯೋಜನೆಗಾಗಿ 143 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಕಲ್ಲೋಳಿ ಪಟ್ಟಣದ ಪಟ್ಟಣ ಪಂಚಾಯತಿ ಹಾಗೂ ಸಾರ್ವಜನಿಕರ ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದ ಅವರು, ಕರ್ನಾಟಕ ನಗರ ನೀರು ಸರಬರಾಜು ಮಂಡಳಿಯ ಅಮೃತ-2 ಯೋಜನೆಯಡಿ ಈ ಅನುದಾನ ಬಿಡುಗಡೆಯಾಗಿದೆ ಎಂದು ಹೇಳಿದರು. ಅರಭಾವಿ, ಕಲ್ಲೋಳಿ, ನಾಗನೂರ ಪಟ್ಟಣಗಳಿಗೆ ತಲಾ …

Read More »

ಸೆಪ್ಟೆಂಬರ್‌ ಕೊನೆಯಲ್ಲಿ ಈ 3 ಸಿನಿಮಾಗಳು ತೆರೆಗೆ

ಸೆಪ್ಟೆಂಬರ್​ 28ರಂದು ಬಹುನಿರೀಕ್ಷಿತ ಮೂರು ಸಿನಿಮಾಗಳು ಬಿಡುಗಡೆಯಾಗಲಿವೆ. ಭಾರತೀಯ ಚಿತ್ರರಂಗದಲ್ಲಿ ಇತ್ತೀಚೆಗಿನ ಕೆಲವು ವರ್ಷಗಳಲ್ಲಿ ಅತ್ಯುತ್ತಮ ಸಿನಿಮಾಗಳು ತೆರೆ ಕಾಣುತ್ತಿವೆ. ಕಾಂತಾರ, ಕೆಜಿಎಫ್​, ಪಠಾಣ್​, ಜೈಲರ್​ ಹೀಗೆ ಸಾಕಷ್ಟು ಸಿನಿಮಾಗಳು ಪ್ರೇಕ್ಷಕರ ಮನರಂಜಿಸುವಲ್ಲಿ ಯಶಸ್ವಿಯಾಗಿವೆ. ಬಾಕ್ಸ್​ ಆಫೀಸ್​ ಕೊಳ್ಳೆ ಹೊಡೆಯುವಲ್ಲಿಯೂ ಸಫಲವಾಗಿವೆ. ವಿಶ್ವಾದ್ಯಂತ ಭಾರತದ ಸಿನಿಮಾಗಳು ತಿಂಗಳುಗಟ್ಟಲೆ ಪ್ರದರ್ಶನ ಕಾಣುತ್ತಿವೆ. ಶಾರುಖ್​ ಖಾನ್​ ನಟನೆಯ ‘ಜವಾನ್​’ ಸಿನಿಮಾ ಇದೀಗ ಎಲ್ಲೆಡೆ ಧೂಳೆಬ್ಬಿಸುತ್ತಿದೆ. ಈ ನಡುವೆ ಇದೇ ತಿಂಗಳು ಮತ್ತೆ ಮೂರು …

Read More »

ಹಗರಣಗಳಿಂದ ಪಾರಾಗಲು ‌ನನ್ನ ವಿರುದ್ಧ ಹೈಕಮಾಂಡ್​​ಗೆ ದೂರು: ಬಿ ಕೆ ಹರಿಪ್ರಸಾದ್

ಕೊಪ್ಪಳ: ‘ಕೆಲವರು ತಾವು ಮಾಡಿದ ಹಗರಣಗಳಿಂದ ಪಾರಾಗಲು ನನ್ನ ವಿರುದ್ಧ ಹೈಕಮಾಂಡ್​ಗೆ ದೂರು ನೀಡುವ ನಾಟಕವಾಡುತ್ತಿದ್ದಾರೆ. ಅವರಿಗೆ ದೈರ್ಯ ಇದ್ದರೆ ಮೊದಲು ಹಗರಣಗಳಿಂದ ಹೊರಗೆ ಬರಲಿ. ಅದು ಬಿಟ್ಟು ನನ್ನ ಮೇಲೆ ದೂರು ನೀಡಲು ಮುಂದಾಗಿರುವುದು ವಿಪರ್ಯಾಸ ಎಂದು ವಿಧಾನ ಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದ್ ಹೇಳಿದರು. ಜಿಲ್ಲೆಯ ಕುಕನೂರು ತಾಲೂಕಿನ ತಳಬಾಳ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿ, ಆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ”ನನ್ನ …

Read More »

ಬಿಟ್ ಕಾಯಿನ್ ಹಗರಣ: ಆರೋಪಿಗಳಿಗೆ ಮುಂದಿನ ವಿಚಾರಣೆವರೆಗೂ ಖುದ್ದು ಹಾಜರಾತಿಯಿಂದ ವಿನಾಯ್ತಿ ನೀಡಿದ ಹೈಕೋರ್ಟ್

ಬೆಂಗಳೂರು: ಬಿಟ್‌ ಕಾಯಿನ್‌ ಹಗರಣದ ಆರೋಪಿಗಳಾದ ಶ್ರೀಕಿ ಅಲಿಯಾಸ್ ಶ್ರೀ ಕೃಷ್ಣ, ಸುನೀಶ್ ಹೆಗ್ಡೆ ಮತ್ತು ಹೇಮಂತ್ ಮುದ್ದಪ್ಪ ಅವರಿಗೆ ಅರ್ಜಿಯ ಕುರಿತ ಮುಂದಿನ ದಿನಾಂಕದ ವರೆಗೂ ಖುದ್ದು ವಿಚಾರಣೆಗೆ ಹಾಜರಾಗುವುದಕ್ಕೆ ವಿನಾಯ್ತಿ ನೀಡಿ ಹೈಕೋರ್ಟ್ ಆದೇಶಿಸಿದೆ.   ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ಹಾಗೂ ಕಾನೂನು ಪ್ರಕ್ರಿಯೆ ವಜಾ ಮಾಡುವಂತೆ ಕೋರಿ ಶ್ರೀಕೃಷ್ಣ ರಮೇಶ್ ಅಲಿಯಾಸ್ ಶ್ರೀಕಿ, ಸಹ ಆರೋಪಿಗಳಾದ ಸುನೀಶ್ ಹೆಗ್ಡೆ …

Read More »

ಭ್ರಷ್ಟಾಚಾರದ ಆರೋಪದಡಿ ತಹಶೀಲ್ದಾರ್ ಶಿವರಾಜ್ ಅಮಾನತು

ದೇವನಹಳ್ಳಿ: ಭ್ರಷ್ಟಾಚಾರದ ಆರೋಪ ಎದುರಿಸುತ್ತಿದ್ದ ದೇವನಹಳ್ಳಿ ತಹಶೀಲ್ದಾರ್ ಶಿವರಾಜ್ ಅವರನ್ನು ಸೋಮವಾರ ಅಮಾನತು ಮಾಡಿ ಕಂದಾಯ ಇಲಾಖೆ ಆದೇಶಿಸಿದೆ. ಲೋಕಾಯುಕ್ತರ ಶಿಫಾರಸ್ಸಿನಂತೆ ಶಿವರಾಜ್ ಅವರನ್ನು ಅಮಾನತು ಮಾಡಿ ಕಂದಾಯ ಇಲಾಖೆಯ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ತಹಶೀಲ್ದಾರ್ ಶಿವರಾಜ್, ಆದಾಯಕ್ಕಿಂತಲೂ ಶೇ.25ರಷ್ಟು ಅಧಿಕ ಪ್ರಮಾಣದ ಆಸ್ತಿ ಹೊಂದಿದ್ದಾರೆ ಎಂದು ಲೋಕಾಯುಕ್ತ ಪ್ರಾಥಮಿಕ ತನಿಖೆಯಲ್ಲಿ ದೃಢಪಟ್ಟಿದೆ ಎಂದು ಮೂಲಗಳು ತಿಳಿಸಿವೆ. ಲೋಕಾಯುಕ್ತ ಪೊಲೀಸರು ಆಗಸ್ಟ್ 17 ರಂದು ಶಿವರಾಜ್, ಅವರ ಸ್ನೇಹಿತರು, ಸಂಬಂಧಿಗಳ …

Read More »