Breaking News

ಕುರಿ ಕಾಯುತ್ತಿದ್ದ ಬಾಲಕನನ್ನು ಶಾಲೆಗೆ ಸೇರಿಸಲು ನೆರವಾಗಿದ್ದಾರೆ ಸಿಎಂ ಸಿದ್ದರಾಮಯ್ಯ

ಚಿತ್ರದುರ್ಗ : ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಬಸಾಪುರದ ಬಾಲಕನೊಬ್ಬ ಶಾಲೆಗೆ ಹೋಗದೇ ಕುರಿ ಕಾಯುತ್ತಿದ್ದ ಬಗ್ಗೆ ಮಾಹಿತಿ ಪಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆ ಬಾಲಕನನ್ನು ಮತ್ತೆ ಶಾಲೆಗೆ ಸೇರಲು ನೆರವಾಗಿದ್ದಾರೆ. ಬಸಾಪುರ ಗ್ರಾಮದ ಯೋಗೇಶ್ ಎಂಬ ಬಾಲಕನನ್ನು ಮರಳಿ ಶಾಲೆಗೆ ಸೇರಿಸಲಾಗಿದೆ. ಈತನನ್ನು ತಂದೆ ತಾಯಿ ಒತ್ತಾಯಪೂರ್ವಕವಾಗಿ ಶಾಲೆ ಬಿಡಿಸಿ ಕಳೆದ 2 ವರ್ಷದಿಂದ ಕುರಿ ಮೇಯಿಸಲು ಕಳುಹಿಸಿದ್ದರು.     ಈ ಬಗ್ಗೆ ಸ್ಥಳೀಯರಾದ ಮಹೇಂದ್ರ ಎಂಬವರು ತಮ್ಮ …

Read More »

ಅರಭಾವಿ, ಕಲ್ಲೋಳಿ, ನಾಗನೂರ, ಮೂಡಲಗಿ ಪಟ್ಟಣಗಳಿಗೆ ಶುದ್ಧ ಕುಡಿಯುವ ನೀರಿಗಾಗಿ 143 ಕೋಟಿ ರೂ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಅರಭಾವಿ, ಕಲ್ಲೋಳಿ, ನಾಗನೂರ ಮತ್ತು ಮೂಡಲಗಿ ಪಟ್ಟಣಗಳಿಗೆ ಶುದ್ಧ ಕುಡಿಯುವ ನೀರಿನ ಯೋಜನೆಗಾಗಿ 143 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಕಲ್ಲೋಳಿ ಪಟ್ಟಣದ ಪಟ್ಟಣ ಪಂಚಾಯತಿ ಹಾಗೂ ಸಾರ್ವಜನಿಕರ ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದ ಅವರು, ಕರ್ನಾಟಕ ನಗರ ನೀರು ಸರಬರಾಜು ಮಂಡಳಿಯ ಅಮೃತ-2 ಯೋಜನೆಯಡಿ ಈ ಅನುದಾನ ಬಿಡುಗಡೆಯಾಗಿದೆ ಎಂದು ಹೇಳಿದರು. ಅರಭಾವಿ, ಕಲ್ಲೋಳಿ, ನಾಗನೂರ ಪಟ್ಟಣಗಳಿಗೆ ತಲಾ …

Read More »

ಸೆಪ್ಟೆಂಬರ್‌ ಕೊನೆಯಲ್ಲಿ ಈ 3 ಸಿನಿಮಾಗಳು ತೆರೆಗೆ

ಸೆಪ್ಟೆಂಬರ್​ 28ರಂದು ಬಹುನಿರೀಕ್ಷಿತ ಮೂರು ಸಿನಿಮಾಗಳು ಬಿಡುಗಡೆಯಾಗಲಿವೆ. ಭಾರತೀಯ ಚಿತ್ರರಂಗದಲ್ಲಿ ಇತ್ತೀಚೆಗಿನ ಕೆಲವು ವರ್ಷಗಳಲ್ಲಿ ಅತ್ಯುತ್ತಮ ಸಿನಿಮಾಗಳು ತೆರೆ ಕಾಣುತ್ತಿವೆ. ಕಾಂತಾರ, ಕೆಜಿಎಫ್​, ಪಠಾಣ್​, ಜೈಲರ್​ ಹೀಗೆ ಸಾಕಷ್ಟು ಸಿನಿಮಾಗಳು ಪ್ರೇಕ್ಷಕರ ಮನರಂಜಿಸುವಲ್ಲಿ ಯಶಸ್ವಿಯಾಗಿವೆ. ಬಾಕ್ಸ್​ ಆಫೀಸ್​ ಕೊಳ್ಳೆ ಹೊಡೆಯುವಲ್ಲಿಯೂ ಸಫಲವಾಗಿವೆ. ವಿಶ್ವಾದ್ಯಂತ ಭಾರತದ ಸಿನಿಮಾಗಳು ತಿಂಗಳುಗಟ್ಟಲೆ ಪ್ರದರ್ಶನ ಕಾಣುತ್ತಿವೆ. ಶಾರುಖ್​ ಖಾನ್​ ನಟನೆಯ ‘ಜವಾನ್​’ ಸಿನಿಮಾ ಇದೀಗ ಎಲ್ಲೆಡೆ ಧೂಳೆಬ್ಬಿಸುತ್ತಿದೆ. ಈ ನಡುವೆ ಇದೇ ತಿಂಗಳು ಮತ್ತೆ ಮೂರು …

Read More »

ಹಗರಣಗಳಿಂದ ಪಾರಾಗಲು ‌ನನ್ನ ವಿರುದ್ಧ ಹೈಕಮಾಂಡ್​​ಗೆ ದೂರು: ಬಿ ಕೆ ಹರಿಪ್ರಸಾದ್

ಕೊಪ್ಪಳ: ‘ಕೆಲವರು ತಾವು ಮಾಡಿದ ಹಗರಣಗಳಿಂದ ಪಾರಾಗಲು ನನ್ನ ವಿರುದ್ಧ ಹೈಕಮಾಂಡ್​ಗೆ ದೂರು ನೀಡುವ ನಾಟಕವಾಡುತ್ತಿದ್ದಾರೆ. ಅವರಿಗೆ ದೈರ್ಯ ಇದ್ದರೆ ಮೊದಲು ಹಗರಣಗಳಿಂದ ಹೊರಗೆ ಬರಲಿ. ಅದು ಬಿಟ್ಟು ನನ್ನ ಮೇಲೆ ದೂರು ನೀಡಲು ಮುಂದಾಗಿರುವುದು ವಿಪರ್ಯಾಸ ಎಂದು ವಿಧಾನ ಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದ್ ಹೇಳಿದರು. ಜಿಲ್ಲೆಯ ಕುಕನೂರು ತಾಲೂಕಿನ ತಳಬಾಳ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿ, ಆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ”ನನ್ನ …

Read More »

ಬಿಟ್ ಕಾಯಿನ್ ಹಗರಣ: ಆರೋಪಿಗಳಿಗೆ ಮುಂದಿನ ವಿಚಾರಣೆವರೆಗೂ ಖುದ್ದು ಹಾಜರಾತಿಯಿಂದ ವಿನಾಯ್ತಿ ನೀಡಿದ ಹೈಕೋರ್ಟ್

ಬೆಂಗಳೂರು: ಬಿಟ್‌ ಕಾಯಿನ್‌ ಹಗರಣದ ಆರೋಪಿಗಳಾದ ಶ್ರೀಕಿ ಅಲಿಯಾಸ್ ಶ್ರೀ ಕೃಷ್ಣ, ಸುನೀಶ್ ಹೆಗ್ಡೆ ಮತ್ತು ಹೇಮಂತ್ ಮುದ್ದಪ್ಪ ಅವರಿಗೆ ಅರ್ಜಿಯ ಕುರಿತ ಮುಂದಿನ ದಿನಾಂಕದ ವರೆಗೂ ಖುದ್ದು ವಿಚಾರಣೆಗೆ ಹಾಜರಾಗುವುದಕ್ಕೆ ವಿನಾಯ್ತಿ ನೀಡಿ ಹೈಕೋರ್ಟ್ ಆದೇಶಿಸಿದೆ.   ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ಹಾಗೂ ಕಾನೂನು ಪ್ರಕ್ರಿಯೆ ವಜಾ ಮಾಡುವಂತೆ ಕೋರಿ ಶ್ರೀಕೃಷ್ಣ ರಮೇಶ್ ಅಲಿಯಾಸ್ ಶ್ರೀಕಿ, ಸಹ ಆರೋಪಿಗಳಾದ ಸುನೀಶ್ ಹೆಗ್ಡೆ …

Read More »

ಭ್ರಷ್ಟಾಚಾರದ ಆರೋಪದಡಿ ತಹಶೀಲ್ದಾರ್ ಶಿವರಾಜ್ ಅಮಾನತು

ದೇವನಹಳ್ಳಿ: ಭ್ರಷ್ಟಾಚಾರದ ಆರೋಪ ಎದುರಿಸುತ್ತಿದ್ದ ದೇವನಹಳ್ಳಿ ತಹಶೀಲ್ದಾರ್ ಶಿವರಾಜ್ ಅವರನ್ನು ಸೋಮವಾರ ಅಮಾನತು ಮಾಡಿ ಕಂದಾಯ ಇಲಾಖೆ ಆದೇಶಿಸಿದೆ. ಲೋಕಾಯುಕ್ತರ ಶಿಫಾರಸ್ಸಿನಂತೆ ಶಿವರಾಜ್ ಅವರನ್ನು ಅಮಾನತು ಮಾಡಿ ಕಂದಾಯ ಇಲಾಖೆಯ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ತಹಶೀಲ್ದಾರ್ ಶಿವರಾಜ್, ಆದಾಯಕ್ಕಿಂತಲೂ ಶೇ.25ರಷ್ಟು ಅಧಿಕ ಪ್ರಮಾಣದ ಆಸ್ತಿ ಹೊಂದಿದ್ದಾರೆ ಎಂದು ಲೋಕಾಯುಕ್ತ ಪ್ರಾಥಮಿಕ ತನಿಖೆಯಲ್ಲಿ ದೃಢಪಟ್ಟಿದೆ ಎಂದು ಮೂಲಗಳು ತಿಳಿಸಿವೆ. ಲೋಕಾಯುಕ್ತ ಪೊಲೀಸರು ಆಗಸ್ಟ್ 17 ರಂದು ಶಿವರಾಜ್, ಅವರ ಸ್ನೇಹಿತರು, ಸಂಬಂಧಿಗಳ …

Read More »

ಅನಿಷ್ಟ ಸರ್ಕಾರದ ವಿರುದ್ಧ ಹೋರಾಟಕ್ಕೆ ಮೈತ್ರಿ ಅನಿವಾರ್ಯ’: ಬೊಮ್ಮಾಯಿ

ಬೆಂಗಳೂರು: ಲೋಕಸಭೆ ಚುನಾವಣೆ ಹಾಗೂ ಜೆಡಿಎಸ್ ಜೊತೆ ಮೈತ್ರಿ ವಿಚಾರ ಚರ್ಚಿಸುವ ನಿಟ್ಟಿನಲ್ಲಿ ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆ ನಡೆಯಿತು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯದ ಜಗನ್ನಾಥ ಭವನದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್, ಮಾಜಿ ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪ, ಡಿ ವಿ ಸದಾನಂದ ಗೌಡ, ಬಸವರಾಜ ಬೊಮ್ಮಾಯಿ, ಸಂಸದ ಪ್ರತಾಪ್ ಸಿಂಹ, ಬಿಜೆಪಿ ಮುಖಂಡರಾದ ತೇಜಸ್ವಿನಿ ಅನಂತಕುಮಾರ್, ಪರಿಷತ್ ಸದಸ್ಯ ರವಿಕುಮಾರ್ ಸೇರಿದಂತೆ …

Read More »

ಅಧಿಕಾರಿಗಳು Work from Home ಮಾಡಬಾರದು, Not Reachable ಆಗಬಾರದು:C.M.

ಬೆಂಗಳೂರು: ಜಿಲ್ಲೆ ಮತ್ತು ತಾಲೂಕು ಕೇಂದ್ರಗಳಲ್ಲಿ ಅಧಿಕಾರಿಗಳು ಮನೆಯಿಂದ ಕೆಲಸ ಮಾಡಬಾರದು. ಕಚೇರಿಯಲ್ಲೇ ಕುಳಿತು ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ನಡೆದ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಅಧಿಕಾರಿಗಳು ಕೇಂದ್ರಸ್ಥಾನದಲ್ಲಿಯೇ ವಾಸವಿದ್ದು, ಜನರ ಸೇವೆಗೆ ಲಭ್ಯರಿರಬೇಕು. ಕಚೇರಿಯಲ್ಲಿರಬೇಕು, ಇಲ್ಲವೆ ಜಿಲ್ಲೆಯಲ್ಲಿ ಪ್ರವಾಸದಲ್ಲಿರಬೇಕು. ಮನೆಯಲ್ಲಿ ಕುಳಿತು ಕೆಲಸ ಮಾಡಬಾರದು. Work from home …

Read More »

ಅಪಘಾತದ ಬಾಕಿ ಪರಿಹಾರ ಮೊತ್ತ ನೀಡದ ಕೆಎಸ್​ಆರ್​ಟಿಸಿ.. ದಾವಣಗೆರೆಯಲ್ಲಿ ಎರಡು ಬಸ್ ಜಪ್ತಿ

ದಾವಣಗೆರೆ: ಅಪಘಾತ ಪ್ರಕರಣವೊಂದರಲ್ಲಿ ಬಾಕಿ ಪರಿಹಾರ ಮೊತ್ತ ನೀಡದ ಹಿನ್ನೆಲೆ ಸೋಮವಾರ ನ್ಯಾಯಾಲಯದ ಆದೇಶದ ಮೇರೆಗೆ ಎರಡು ವಾಯುವ್ಯ ಕರ್ನಾಟಕ ಸಾರಿಗೆ ಬಸ್​ಗಳನ್ನು ಜಪ್ತಿ ಮಾಡಲಾಯಿತು. ಇಲ್ಲಿನ ಕೆಎಸ್​ಆರ್​ಟಿಸಿ ಬಸ್ ನಿಲ್ದಾಣದಲ್ಲಿ ಹಾವೇರಿ ಡಿಪೋಗೆ ಸೇರಿದ ಎರಡು ಬಸ್‍ಗಳನ್ನು ನ್ಯಾಯಾಂಗ ಇಲಾಖೆ ಸಿಬ್ಬಂದಿ ಜಪ್ತಿ ಮಾಡಿದರು. ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಕೊಡಬೇಕಿದ್ದ ಪರಿಹಾರದ ಬಾಕಿ ಮೊತ್ತ ಉಳಿಸಿಕೊಂಡಿರುವ ಕೆಎಸ್​ಆರ್​ಟಿಸಿ ಸಂಸ್ಥೆಯ ಚರಾಸ್ತಿ ಜಪ್ತಿಗೆ ದಾವಣಗೆರೆ ಹೆಚ್ಚುವರಿ ಹಿರಿಯ ಸಿವಿಲ್ ಮತ್ತು ಜೆಎಂಎಫ್‍ಸಿ …

Read More »

ಶಕ್ತಿ ಯೋಜನೆ: NWKRTC ಬಸ್​ಗಳಲ್ಲಿ ಇದುವರೆಗೂ 13 ಕೋಟಿಗೂ ಅಧಿಕ ಮಹಿಳೆಯರ ಪ್ರಯಾಣ

ಹುಬ್ಬಳ್ಳಿ: ಮಹಿಳೆಯರಿಗೆ ಸರ್ಕಾರಿ ಬಸ್​ಗಳಲ್ಲಿ ಉಚಿತ ಪ್ರಯಾಣ ಒದಗಿಸುವ ರಾಜ್ಯ ಸರ್ಕಾರದ ಶಕ್ತಿ ಯೋಜನೆಯು ಮೂರು ತಿಂಗಳು ಪೂರೈಸಿದೆ. ಇದುವರೆಗೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಸ್​ಗಳಲ್ಲಿ 13.20 ಕೋಟಿ ಮಹಿಳೆಯರು ಶೂನ್ಯ ಟಿಕೆಟ್ ಪಡೆದುಕೊಂಡು ಉಚಿತ ಸಂಚಾರ ಮಾಡಿದ್ದು, ಇದರ ಟಿಕೆಟ್ ಪ್ರಯಾಣದ ಮೊತ್ತ 332.77 ಕೋಟಿ ರೂ.ಗಳಾಗಿದೆ. ಮಹಿಳಾ ಸಬಲೀಕರಣದ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರದಿಂದ ಆರಂಭಿಸಲಾಗಿರುವ ಕರ್ನಾಟಕದ ಮಹಿಳೆಯರಿಗೆ ಸರ್ಕಾರಿ ಬಸ್​​ ನಲ್ಲಿ ರಾಜ್ಯದೊಳಗೆ ಉಚಿತ ಪ್ರಯಾಣದ …

Read More »