Breaking News

ಅಭಿಮಾನಿ ಬಳಗದ ವತಿಯಿಂದ ಯುವ ನಾಯಕ ಸಂತೋಷ ಜಾರಕಿಹೊಳಿ ಅವರ ಹುಟ್ಟು ಹಬ್ಬ ಆಚರಣೆ.

ಗೋಕಾಕ : ಯುವ ನಾಯಕ ಸಂತೋಷ ಜಾರಕಿಹೊಳಿ ಅವರ ಹುಟ್ಟು ಹಬ್ಬವನ್ನು ಅಭಿಮಾನಿಗಳು ಅರ್ಥಪೂರ್ಣವಾಗಿ ಆಚರಿಸಿದ್ದಾರೆ.   ಸಂತೋಷ್ ಅಣ್ಣಾ ಜಾರಕಿಹೊಳಿ ಅವರ ಅಭಿಮಾನಿ ಬಳಗ ವತಿಯಿಂದ ಯುವ ನಾಯಕ ಸಂತೋಷ ಜಾರಕಿಹೊಳಿ ಅವರಿಗೆ ಬೃಹತ್ ಹೂವಿನ ಹಾರ ಹಾಕಿ ಕೇಕ್ ಕತ್ತರಿಸುವ ಮೂಲಕ ಹುಟ್ಟು ಹಬ್ಬವನ್ನು ಆಚರಿಸಿದರು. ನಂತರ ಗೋಕಾಕ ಹಾಗೂ ಯರಗಟ್ಟಿ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು, ಉಪಹಾರವನ್ನು ವಿತರಿಸುವ ಅರ್ಥಪೂರ್ಣವಾಗಿ ಹುಟ್ಟು ಹಬ್ಬವನ್ನು …

Read More »

1857ರ ಸಿಪಾಯಿ ದಂಗೆಗೂ 33 ವರ್ಷಗಳ ಮೊದಲೇ ಬ್ರಿಟೀಷರನ್ನು ಕಿತ್ತೂರು ಚೆನ್ನಮ್ಮ ಸೋಲಿಸಿದರು.

1857ರ ಸಿಪಾಯಿ ದಂಗೆಗೂ 33 ವರ್ಷಗಳ ಮೊದಲೇ ಬ್ರಿಟೀಷರನ್ನು ಕಿತ್ತೂರು ಚೆನ್ನಮ್ಮ ಸೋಲಿಸಿದರು. ಬ್ರಿಟೀಷರನ್ನು ಸೋಲಿಸಿ ಕಿತ್ತೂರಿನ ಸ್ವಾಭಿಮಾನವನ್ನು ಗೆಲ್ಲಿಸಿದ ದಿನವೇ ಕಿತ್ತೂರು ಉತ್ಸವದ ದಿನವಾಗಿದೆ. 2017 ರಲ್ಲಿ ಕಿತ್ತೂರು ಉತ್ಸವವನ್ನು ಮೊದಲ ಬಾರಿಗೆ ಆರಂಭಿಸಿದ್ದು ನಮ್ಮ ಸರ್ಕಾರ. ವ್ಯಾಪಾರ ಮಾಡಲು ಬಂದ ಬ್ರಿಟೀಷರು ಭಾರತೀಯರನ್ನು ಪರಸ್ಪರ ಎತ್ತಿಕಟ್ಟಿ ಇಡೀ ದೇಶವನ್ನು ವಶಕ್ಕೆ ಪಡೆದುಕೊಂಡರು. ಬ್ರಿಟೀಷರಿಗೆ ನಮ್ಮವರೇ ಬೆಂಬಲ ಕೊಡುತ್ತಿದ್ದರು. ಚೆನ್ನಮ್ಮ ಮತ್ತು ರಾಯಣ್ಣನವರ ವಿರುದ್ಧ ಪಿತೂರಿ ಮಾಡಿದ್ದರು. ಈಗಲೂ …

Read More »

ಬೆಳಗಾವಿ ಚಳಿಗಾಲದ ಅಧಿವೇಶನಕ್ಕೆ ಡೇಟ್ ಫಿಕ್ಸ್: ಬಸವರಾಜ ಹೊರಟ್ಟಿ

ಧಾರವಾಡ, ಅಕ್ಟೋಬರ್​ 25: ಡಿಸೆಂಬರ್​ 8ಕ್ಕೆ ಬೆಳಗಾವಿ ಚಳಿಗಾಲದ ಅಧಿವೇಶನ ಆರಂಭವಾಗುತ್ತೆ ಎಂದು ಪರಿಷತ್​ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ . ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಧಿವೇಶನ ಕುರಿತು ಸಿಎಂ ಜೊತೆ ಚರ್ಚೆ ಮಾಡಿದ್ದೇನೆ. ಮುಂದಿನ ವಾರ ಬೆಳಗಾವಿ ಡಿಸಿಯೊಂದಿಗೆ ಸಭೆ ಮಾಡುತ್ತೇನೆ. ಯಾವೊಬ್ಬ ಶಾಸಕರು ಉತ್ತರ ಕರ್ನಾಟಕದ ಬಗ್ಗೆ ಮಾತನಾಡಲ್ಲ. ಇರೋವರೆಗೂ ಪ್ರಜಾಪ್ರಭುತ್ವದಲ್ಲಿ ಕೇಳೋದು ತಪ್ಪು ಅನಿಸುತ್ತೆ. ಕಾಲ ಸುಧಾರಣೆ ಮಾಡಬೇಕಿದೆ, ನಮ್ಮಿಂದ ಸುಧಾರಣೆ ಆಗಲ್ಲ. ಪ್ರಶ್ನೆ ಕೇಳಿದ …

Read More »

ಹೋರಿ ಬೆದರಿಸುವ ಸ್ಪರ್ಧೆಯ ಆಯೋಜಕರು ಹಾಗೂ ಮಾಲೀಕರ ವಿರುದ್ದ ಕೇಸ್: ಎಸ್​ಪಿ ಯಶೋಧಾ ವಂಟಗೋಡಿ

ಹಾವೇರಿ : ಜಿಲ್ಲೆಯಲ್ಲಿ ದೀಪಾವಳಿ ಹಬ್ಬದ ಸಮಯದಲ್ಲಿ ಎತ್ತುಗಳನ್ನು ಸಾಂಪ್ರದಾಯಿಕವಾಗಿ ಅಲಂಕರಿಸಿ, ನಂತರ ದೇವಾಲಯಕ್ಕೆ ಹೋಗಿ ಅವುಗಳನ್ನು ಮೆರವಣಿಗೆ ಮಾಡುವ ಸಂಪ್ರದಾಯ ಇದೆ ಎಂಬುದು ನಮ್ಮ ಗಮನಕ್ಕೆ ಬಂದಿದೆ. ಆದರೆ, ಮೆರವಣಿಗೆ ಸಮಯದಲ್ಲಿ ಅವರು ಹೋರಿಯನ್ನು ಬೆದರಿಸಿದ್ದರಿಂದಾಗಿ ಅವು ಹೆದರಿ ಓಡಿದ್ದರಿಂದಾಗಿ ನಮ್ಮಲ್ಲಿ ನಾಲ್ಕು ಮಂದಿ ಮೃತಪಟ್ಟಿದ್ದಾರೆ. ಹೀಗಾಗಿ, ದನ ಬೆದರಿಸುವ ಸ್ಪರ್ಧೆಯ ಆಯೋಜಕರು ಹಾಗೂ ಹೋರಿ ಮಾಲೀಕರ ಮೇಲೆ ಕೇಸ್ ದಾಖಲಿಸಿಕೊಂಡಿದ್ದೇವೆ ಎಂದು ಎಸ್​ಪಿ ಯಶೋಧಾ ವಂಟಗೋಡಿ ಅವರು ತಿಳಿಸಿದ್ದಾರೆ. …

Read More »

ಎರಡೂವರೆ ವರ್ಷದ ಬಳಿಕ ಸಂಪುಟ ಪುನಾರಚನೆ ಆಗಲಿದ್ದು, ಮಂತ್ರಿ ಸ್ಥಾನ ಬಿಡಲು ನಾನು ರೆಡಿ: ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು: ಎರಡೂವರೆ ವರ್ಷಗಳ ಬಳಿಕ ಸಂಪುಟ ಪುನಾರಚನೆ ಆಗಲಿದ್ದು, ಹೈಕಮಾಂಡ್ ಹೇಳಿದ್ರೆ ನಾನು ಸಚಿವ ಸ್ಥಾನ ಬಿಡಲು ರೆಡಿ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. ಕೆಪಿಸಿಸಿ ಕಚೇರಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ಪುನರ್ ರಚನೆ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಎರಡೂವರೆ ವರ್ಷಗಳ ಬಳಿಕ ಪುನರ್ ರಚನೆ ಆಗುತ್ತೆ. ಸರ್ಕಾರ ಬಂದಾಗಲೇ ಈ ನಿರ್ಧಾರ ಆಗಿತ್ತು. ಸಚಿವ ಸಂಪುಟದಿಂದ ಹೊರಗಡೆ ಇದ್ದವರಿಗೆ ಅವಕಾಶ ಕೊಡಬೇಕೆಂದು ನಿರ್ಧಾರ ಆಗಿದೆ. ಸಂಪುಟಕ್ಕೆ …

Read More »

ಮಳೆ ಹೊಡೆತಕ್ಕೆ ನೀರು ಪಾಲಾದ ಭತ್ತ

ಉಡುಪಿ : ಜಿಲ್ಲೆಯಲ್ಲಿ ನವರಾತ್ರಿಯಿಂದ ದಿನ ಬಿಟ್ಟು ದಿನ ಮಳೆಯಾಗುತ್ತಿದೆ. ದೀಪಾವಳಿ ಸಂದರ್ಭದಲ್ಲೂ ಭಾರೀ‌ ಮಳೆಯಾಗಿದೆ. ಯಾವ ವರ್ಷದಲ್ಲೂ ಕೂಡ ನವರಾತ್ರಿಯ ಆಸುಪಾಸಿನ ದಿನಗಳಲ್ಲಿ ಈ ಪ್ರಮಾಣದ ಮಳೆ ಬಿದ್ದ ಉದಾಹರಣೆ ಇಲ್ಲ. ಆದರೆ, ಈ ಬಾರಿ ಜಿಲ್ಲೆಯಲ್ಲಿ ಸುರಿದ ಅಕಾಲಿಕ ಮಳೆಗೆ ಭತ್ತ ಬೆಳೆದ ರೈತರು ಕಂಗಾಲಾಗಿದ್ದಾರೆ. ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮಳೆಯಿಂದಾಗಿ ಕಟಾವಿಗೆ ಸಿದ್ಧವಾಗಿದ್ದ ಭತ್ತದ ಬೆಳೆಗೆ ಅಪಾರ ಪ್ರಮಾಣದಲ್ಲಿ ಹಾನಿ ಮಾಡಿದೆ. ಇದರಿಂದಾಗಿ ಉತ್ತಮ ಬೆಳೆಯ ನಿರೀಕ್ಷೆಯಲ್ಲಿದ್ದ …

Read More »

ಧಾರವಾಡದಲ್ಲಿ 54 ಜೂಜಾಟದ ಪ್ರಕರಣಗಳು ದಾಖಲು

ಧಾರವಾಡ: ಜಿಲ್ಲೆಯಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಿಸುವ ಕುರಿತು ಸೂಕ್ತ ಮಾಹಿತಿ ಸಂಗ್ರಹಿಸಿ ಅಕ್ಟೋಬರ್​​ 20 ರಿಂದ 23ರವರೆಗೆ ಜಿಲ್ಲೆಯ ವಿವಿಧ ಪೊಲೀಸ್​​​ ಠಾಣೆಗಳ ವ್ಯಾಪ್ತಿಯಲ್ಲಿ ವಿಶೇಷ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಈ ಮೂರು ದಿನದ ಅವಧಿಯಲ್ಲಿ ಒಟ್ಟು 54 ಜೂಜಾಟ ಪ್ರಕರಣಗಳನ್ನು ಪತ್ತೆ ಮಾಡಲಾಗಿದೆ. ಪ್ರಕರಣದಲ್ಲಿ 492 ಜನ ಆರೋಪಿತರನ್ನು ವಶಕ್ಕೆ ಪಡೆದು, ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ …

Read More »

ಶಿಕ್ಷಣದ ಮಹತ್ವವನ್ನು ಮಕ್ಕಳಲ್ಲಿ ಬಿತ್ತರಿಸುವ ಮಹತ್ವವನ್ನು ಮಾಡಬೇಕು.:

ರಾಯಬಾಗ ತಾಲೂಕಿನ ಕುಡಚಿ ಪಟ್ಟಣದಲ್ಲಿ ಇಂದು ಮುಜಾವರ ವೆಲ್ಫೇರ್ ಹಾಗೂ ಶೈಕ್ಷಣಿಕ ಸಮಿತಿ ಕುಡಚಿ‌ ವತಿಯಿಂದ ಆಯೋಜಿಸಿದ್ದ ಮುಜಾವರ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಾಗೂ ಸಾಧಕರಿಗೆ ಪ್ರಶಸ್ತಿ ಪ್ರಧಾನ ಸಮಾರಂಭ ಹಾಗೂ ಶೈಕ್ಷಣಿಕ ಸಮ್ಮೇಳನವನ್ನು ಉದ್ಘಾಟಿಸಿ, ಮಾತನಾಡಿದೆ.‌ ಈ ಸಂದರ್ಭದಲ್ಲಿ ಶಿಕ್ಷಣದ ಮಹತ್ವವನ್ನು ಮಕ್ಕಳಲ್ಲಿ ಬಿತ್ತರಿಸುವ ಮಹತ್ವವನ್ನು ಮಾಡಬೇಕು. ಸಮಾಜದ ಯುವಕರು ಜ್ಞಾನ, ಕೌಶಲ್ಯ ಮತ್ತು ನೈತಿಕ ಮೌಲ್ಯಗಳಲ್ಲಿ ಮುಂಚೂಣಿಯಲ್ಲಿರಲಿ, ಸಮಾಜದ ಪ್ರಗತಿಗೆ ದಾರಿದೀಪರಾಗಲಿ ಎಂದು ಹಾರೈಸಿದೆ. ಕಾರ್ಯಕ್ರಮದಲ್ಲಿ ಸಾಧಕ …

Read More »

ಯತೀಂದ್ರ ಹೇಳಿಕೆಗೆ ನಮ್ಮ ಸಹಮತವಿದೆ:ಕೆ.ಎನ್.ರಾಜಣ್ಣ

ಬೆಂಗಳೂರು: ಯತೀಂದ್ರ ಹೇಳಿಕೆಗೆ ನಮ್ಮ ಸಹಮತವಿದೆ. ತಪ್ಪೇನಿದೆ ಅದರಲ್ಲಿ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಸಮರ್ಥಿಸಿಕೊಂಡಿದ್ದಾರೆ. ಬೆಂಗಳೂರಲ್ಲಿ ಮಾತನಾಡಿದ ಅವರು, ಯತೀಂದ್ರ ಹೇಳಿಕೆಗೆ ನಮ್ಮ ಸಹಮತವಿದೆ ತಪ್ಪೇನಿದೆ ಅದರಲ್ಲಿ? ಎಂದು ಸಮರ್ಥಿಸಿಕೊಂಡಿದ್ದಾರೆ. ಯತೀಂದ್ರ ಬೆಳಗಾವಿಯಲ್ಲಿ ಸಿದ್ದರಾಮಯ್ಯ ನಂತರ ಅಹಿಂದ ಚಳವಳಿ ಮುಂದುವರೆಸುವಲ್ಲಿ ಜಾರಕಿಹೊಳಿ ಸಮರ್ಥರಿದ್ದಾರೆ ಎಂದಿದ್ದಾರೆ. ಇದಕ್ಕೆ ನನ್ನ ಸಹಮತವಿದೆ. ಸತೀಶ್ ಜಾರಕಿಹೊಳಿ ಈಗ ಸಿಎಂ ಆಗಲ್ಲ. 2028ಕ್ಕೆ ಸಿಎಂ ಆಕಾಂಕ್ಷಿ ಎಂದಿದ್ದಾರೆ. ಅದಕ್ಕೂ ನನ್ನ ಸಹಮತವಿದೆ ಎಂದು ಅವರು ಹೇಳಿದ್ದಾರೆ. …

Read More »

ಮೈಸೂರು: ಗ್ಯಾಸ್‌ ಗೀಸರ್​​ನಿಂದ ಅನಿಲ ಸೋರಿಕೆಯಾಗಿ ಇಬ್ಬರು ಸಹೋದರಿಯರು ಸಾವು

ಮೈಸೂರು: ಗ್ಯಾಸ್‌ ಗೀಸರ್​ನಿಂದ ಅನಿಲ ಸೋರಿಕೆಯಾಗಿ ಇಬ್ಬರು ಸಹೋದರಿಯರು ಉಸಿರುಗಟ್ಟಿ ಮೃತಪಟ್ಟಿರುವ ದಾರುಣ ಘಟನೆ ಪಿರಿಯಾಪಟ್ಟಣ ತಾಲೂಕಿನಲ್ಲಿ ನಡೆದಿದೆ. ಪಿರಿಯಾಪಟ್ಟಣದಲ್ಲಿ ವಾಸವಾಗಿರುವ ಬೆಟ್ಟದಪುರ ಮೂಲದ ಅಲ್ತಾಫ್ ಪಾಷಾ ಅವರ ಎರಡನೇ ಮಗಳು ಗುಲ್ಬಮ್ ತಾಜ್(23) ಮತ್ತು ನಾಲ್ಕನೇ ಮಗಳಾದ ಸಿಮ್ರಾನ್ ತಾಜ್ (21) ಮೃತಪಟ್ಟ ಸಹೋದರಿಯರು. ಪಿರಿಯಾಪಟ್ಟಣದ ಜೋನಿಗೇರಿ ಬೀದಿಯಲ್ಲಿ ಅಲ್ತಾಫ್ ಪಾಷಾ ಮತ್ತು ಅವರ ಕುಟುಂದವರು ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾರೆ. ಗುರುವಾರ ರಾತ್ರಿ ಸುಮಾರು 7ರ ಸಮಯದಲ್ಲಿ ಸಹೋದರಿಯರು ಒಟ್ಟಿಗೆ …

Read More »