ಬೀದರ್: ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ನ್ಯಾಯಾಲಯದ ಆದೇಶದಂತೆ ಪರಿಹಾರ ನೀಡಲು ಹಿಂದೇಟು ಹಾಕಿದ್ದ ಹಿನ್ನೆಲೆಯಲ್ಲಿ ಎರಡು ಸಾರಿಗೆ ಬಸ್‌ಗಳನ್ನು ಜಪ್ತಿ ಮಾಡಿದ ಘಟನೆ ಬೀದರ್ ಜಿಲ್ಲೆಯ ಔರಾದ್‌ನಲ್ಲಿ ನಡೆದಿದೆ. ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಔರಾದ್ ಡಿಪೋದ ಎರಡು ಬಸ್‌ಗಳನ್ನು ಜಪ್ತಿ ಮಾಡಲಾಗಿದೆ. ಔರಾದ್ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜೆಎಂಎಫ್‌ಸಿ ನ್ಯಾಯಾಲಯದ ಆದೇಶದ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ. ಜಪ್ತಿ ಮಾಡಲಾದ ಎರಡು ಬಸ್‌ಗಳನ್ನು ನ್ಯಾಯಾಲಯದ …
Read More »ಪರಿಷ್ಕರಣೆ ಹೆಸರಲ್ಲಿ ಗ್ಯಾರಂಟಿ ಯೋಜನೆ ರದ್ದು ಮಾಡುವ ಹುನ್ನಾರ: ಸರ್ಕಾರದ ವಿರುದ್ಧ ಶ್ರೀರಾಮುಲು ಕಿಡಿ
ಬೆಂಗಳೂರು: ರಾಜ್ಯ ಸರ್ಕಾರ ಗ್ಯಾರಂಟಿಪರಿಷ್ಕಣೆ ಹೆಸರಿನಲ್ಲಿ ಗ್ಯಾರಂಟಿ ಯೋಜನೆ ರದ್ದು ಮಾಡುವ ಹುನ್ನಾರ ಮಾಡ್ತಿದೆ ಅಂತ ಮಾಜಿ ಸಚಿವ ಶ್ರೀರಾಮುಲು ಆರೋಪ ಮಾಡಿದ್ದಾರೆ. ಗೃಹಲಕ್ಷ್ಮಿ ಫಲಾನುಭವಿಗಳ ಪಟ್ಟಿಗೆ ಕತ್ತರಿ ಹಾಕಿರೋ ವಿಚಾರಕ್ಕೆ ಬಿಜೆಪಿ ಕಚೇರಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಸಿಎಂ ಡಿಕೆ ಶಿವಕುಮಾರ್ ಅವರು ಗ್ಯಾರಂಟಿ ವಿಚಾರದಲ್ಲಿ ಪರಿಷ್ಕಣೆ ಮಾಡೋ ತೀರ್ಮಾನ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಗ್ಯಾರಂಟಿ ಯೋಜನೆ ಬಂದ್ ಮಾಡೋ ಹುನ್ನಾರ ಈ ಸಿಎಂ ಮಾಡಿದ್ದಾರೆ ಎಂದು ದೂರಿದ್ದಾರೆ. …
Read More »ಮಾವಿನ ಹಣ್ಣು ಸೇವಿಸಿ ಅಸ್ವಸ್ಥ: ಬೀದರ್ ಮೂಲದ ಇಬ್ಬರು ಸಹೋದರಿಯರು ಅನುಮಾನಾಸ್ಪದ ಸಾವು
ಬೀದರ್: ಮಾವಿನ ಹಣ್ಣು ಸೇವಿಸಿದ ಬಳಿಕ ಅಸ್ವಸ್ಥಗೊಂಡ ಬೀದರ್ ಮೂಲದ ಇಬ್ಬರು ಸಹೋದರಿಯರು ಹೈದರಾಬಾದ್‌ನಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಶೆಂಬೆಳ್ಳಿ ಗ್ರಾಮದ ಇಬ್ಬರು ಬಾಲಕಿಯರು ದುರಂತ ಅಂತ್ಯ ಕಂಡಿದ್ದಾರೆ. 17 ವರ್ಷದ ಭವಾನಿ ವೈಜಿನಾಥ ಮೇತ್ರೆ ಹಾಗೂ 14 ವರ್ಷದ ಸಂಧ್ಯಾರಾಣಿ ಮೇತ್ರೆ ಮೃತ ಯುವತಿಯರು. ಜೂನ್ 9ರಂದು ಮನೆಯಲ್ಲಿ ಊಟ ಮಾಡಿದ ಬಳಿಕ ಮಾವಿನ ಹಣ್ಣು ಸೇವಿಸಿದ್ದ ವೇಳೆ ಕುಟುಂಬದ ಸದಸ್ಯರ ಆರೋಗ್ಯದಲ್ಲಿ …
Read More »ಶ್ರೀರಾಮನ ಕುರಿತು ಅವಹೇಳನಕಾರಿ ಹೇಳಿಕೆ: ಪ್ರೊ. ಭಗವಾನ್ ವಿರುದ್ಧ ಶಿವಸೇನೆ ದೂರು
ಧಾರವಾಡ: ಶ್ರೀರಾಮ ಹಾಗೂ ಹಿಂದೂ ಧರ್ಮಗ್ರಂಥಗಳ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದಡಿ ಪ್ರೊ. ಕೆ.ಎಸ್. ಭಗವಾನ್ ವಿರುದ್ಧ ಧಾರವಾಡ ಶಹರ ಪೊಲೀಸ್ ಠಾಣೆಗೆ ಶಿವಸೇನೆ (Shiv Sena) ಕಾರ್ಯಕರ್ತರು ದೂರು ನೀಡಿದ್ದಾರೆ. ಪ್ರೊ. ಭಗವಾನ್ ವಿರುದ್ಧ ಪ್ರಕರಣ ದಾಖಲಿಸಿ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಶಿವಸೇನೆ ಮುಖಂಡರು ಆಗ್ರಹಿಸಿದ್ದಾರೆ. ಇತ್ತೀಚೆಗೆ ದಾವಣಗೆರೆ ಜಿಲ್ಲೆಯ ಹರಿಹರದಲ್ಲಿರುವ ಬಿ. ಕೃಷ್ಣಪ್ಪ ಮೈತ್ರಿವನದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಆಯೋಜಿಸಿದ್ದ ಪ್ರೊ. …
Read More »ಕೂಲ್ ಡ್ರಿಂಕ್ಸ್ ಕುಡಿದು ಯುವಕ ಸಾವು
ಯಾದಗಿರಿ: ಕೂಲ್ ಡ್ರಿಂಕ್ಸ್ ಕುಡಿದು ಯುವಕ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದಲ್ಲಿ ನಡೆದಿದೆ. ಮೃತ ಯುವಕನನ್ನ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರದ ನಿವಾಸಿ ಬಾಲಪ್ಪ (18) ಎಂದು ಗುರುತಿಸಲಾಗಿದ್ದು, ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದಲ್ಲಿ ಪದವಿ ಓದುತ್ತಿದ್ದ ಎಂದು ತಿಳಿದುಬಂದಿದೆ. ಮೃತ ಯುವಕ ಅತಿಯಾಗಿ ಕೂಲ್ ಡ್ರಿಂಕ್ಸ್ ಕುಡಿಯುತ್ತಿದ್ದ. ಇದರ ಪರಿಣಾಮ ಕಿಡ್ನಿ ಫೇಲ್ ಆಗಿದ್ದವು. ಇತ್ತೀಚಿಗೆ ಅನಾರೋಗ್ಯದಿಂದಾಗಿ ಬಾಗಲಕೋಟೆಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ. ಆದರೆ ಇಂದು (ಜೂ.12) …
Read More »ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ ಕೋರ್ಸ್‌ಗಳ ಶುಲ್ಕ ಹೆಚ್ಚಳ ಇಲ್ಲ: ಶರಣಪ್ರಕಾಶ್ ಪಾಟೀಲ್
ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ , ದಂತ ವೈದ್ಯಕೀಯ, ಸ್ನಾತಕ ಹಾಗೂ ಸ್ನಾತಕೋತ್ತರ ಕೋರ್ಸ್‌ಗಳ ಶುಲ್ಕವನ್ನ ಹೆಚ್ಚಳ ಮಾಡದೇ ಯಥಾಸ್ಥಿತಿಯಲ್ಲೇ ಮುಂದುವರೆಸುವ ಮಹತ್ವ ತೀರ್ಮಾನವನ್ನು ರಾಜ್ಯಸರ್ಕಾರ ತೆಗೆದುಕೊಂಡಿದೆ. ಸರ್ಕಾರದ ಇಂತಹ ನಿರ್ಧಾರದಿಂದಾಗಿ ಈ ಬಾರಿ ವೈದ್ಯಕೀಯ, ದಂತ ವೈದ್ಯಕೀಯ, ಸ್ನಾತಕ ಹಾಗೂ ಸ್ನಾತಕೋತ್ತರ ಕೋರ್ಸ್‌ಗಳ ಶುಲ್ಕ ) ಹಚ್ಚಳವಾಗುತ್ತದೆ ಎಂಬ ಆತಂಕದಲ್ಲಿದ್ದ ವಿದ್ಯಾರ್ಥಿಗಳು ಹಾಗೂ ಪೋಷಕರು ನೆಮದಿಯ ನಿಟ್ಟುಸಿರು ಬಿಡುವಂತಾಗಿದೆ. ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ …
Read More »ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್
ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಭೇಟಿ ನೀಡಿದ್ದಾರೆ. ವಿಜಯ್ ಅವರಿಗೆ ಹೂಗುಚ್ಛ ನೀಡಿ ಆಡಳಿತ ಮಂಡಳಿಯ ಟ್ರಸ್ಟಿಗಳು ಸ್ವಾಗತ ಕೋರಿದರು. ಮಂತ್ರಘೋಷದೊಂದಿಗೆ ಕ್ಷೇತ್ರದೊಳಗೆ ಅರ್ಚಕ ವೃಂದ ಬರಮಾಡಿಕೊಂಡಿತು. ಶಲ್ಯ ಧರಿಸಿ ಆಗಮಿಸುವ ಮೂಲಕ ಸಿಎಂ ವಿಜಯ್ ದೇವಸ್ಥಾನದ ಶಿಷ್ಟಾಚಾರ ಪಾಲನೆ ಮಾಡಿದರು. ಪ್ರಧಾನ ಅರ್ಚಕ ರಾಮಚಂದ್ರ ಅಡಿಗ ಅವರ ನೇತೃತ್ವದಲ್ಲಿ ಸಂಕಲ್ಪ ಪೂಜೆ ನೆರವೇರಿಸಲಾಯಿತು. ಸಿಎಂ ವಿಜಯ್ ಸಂಕಲ್ಪ ಪೂಜೆ ಮಾಡಿದರು. ಶಕ್ತಿ ದೇವಿಗೆ …
Read More »ರಾಜೀನಾಮೆ ಪರ್ವದ ನಡುವೆ ಟಿಎಂಸಿಗೆ ಶಾಕ್ – ಮಮತಾ ಬ್ಯಾನರ್ಜಿ ವಿರುದ್ಧ FIR
ಕೋಲ್ಕತ್ತಾ: ತೃಣಮೂಲ ಕಾಂಗ್ರೆಸ್ ಪಕ್ಷದಲ್ಲಿ ಒಂದು ಕಡೆ ರಾಜೀನಾಮೆ ಪರ್ವ ಮುಂದುವರಿದಿದೆ. ಘಟಾನುಘಟಿ ನಾಯಕರು ಪಕ್ಷಕ್ಕೆ ರಾಜೀನಾಮೆ ನೀಡುತ್ತಿದ್ದಾರೆ. ಈ ಮಧ್ಯೆ ಮಾಜಿ ಸಿಎಂ ಮಮತಾ ಬ್ಯಾನರ್ಜಿಗೆ ಮತ್ತೊಂದು ಶಾಕ್ ಎದುರಾಗಿದೆ. ಕಳೆದ ಮಾರ್ಚ್ ತಿಂಗಳಲ್ಲಿ ರಾಜಕೀಯ ಭಾಷಣದ ವೇಳೆ ಕೋಮುದ್ವೇಷ ಹರಡುವ ಹೇಳಿಕೆ ನೀಡಿದ್ದರ ಆರೋಪದ ಮೇಲೆ ಮಮತಾ ಬ್ಯಾನರ್ಜಿ ವಿರುದ್ಧ ಪ್ರಕರಣ ದಾಖಲಾಗಿದೆ. ರಾಜಕೀಯ ಭಾಷಣದ ವೇಳೆ ದೀದಿ, ʻಒಂದು ನಿರ್ದಿಷ್ಟ ಸಮುದಾಯ ಒಟ್ಟಿಗೆ ಬಂದರೆ ಅದು …
Read More »ಕೊಲ್ಲೂರು ಮೂಕಾಂಬಿಕೆಗೆ 1.6 ಕೆಜಿ ತೂಕದ ಬೆಳ್ಳಿ ಖಡ್ಗ ಅರ್ಪಿಸಿದ ಸಿಎಂ ಸಿ. ಜೋಸೆಫ್
ಉಡುಪಿ: ತಮಿಳುನಾಡಿನ ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಉಡುಪಿಗೆ ಆಗಮಿಸಿದ ಸಿಎಂ ಸಿ. ಜೋಸೆಫ್ ವಿಜಯ್ ಅವರು ಕೊಲ್ಲೂರು ಮೂಕಾಂಬಿಕೆ ದೇವಿಯ ದರ್ಶನ ಪಡೆದುಕೊಂಡಿದ್ದಾರೆ. ಜೊತೆಗೆ ದೇವಿಗೆ ವಿಶೇಷ ಕಾಣಿಕೆಯನ್ನೂ ಅರ್ಪಿಸಿ ಕೃಪೆಗೆ ಪಾತ್ರರಾದರು. i ಶಕ್ತಿ ದೇವಿಗೆ ರೇಷ್ಮೆ ಸೀರೆ, ಫಲ-ತಾಂಬೂಲ ಅರ್ಪಿಸಿ ವಿಜಯ್ ಸುಮಾರು ಅರ್ಧ ಗಂಟೆಗಳ ಕಾಲ ಪ್ರಾರ್ಥನೆ ಸಲ್ಲಿಸಿದರು. ಬಳಿಕ ತಾಯಿಗೆ 1 ಕೆಜಿ 600 ಗ್ರಾಂ ತೂಕದ ಬೆಳ್ಳಿ ಖಡ್ಗವನ್ನ ಕಾಣಿಕೆಯಾಗಿ ಅರ್ಪಿಸಿದ್ದಾರೆ …
Read More »11 ಕೋಟಿ ಮೌಲ್ಯದ ಹೈಡ್ರೋಪೋನಿಕ್ಸ್ ಗಾಂಜಾ ಸಮೇತ ಸಿಕ್ಕಿಬಿದ್ದ ಕೇರಳದ ಬ್ಯೂಟಿ ಕಂಟೆಸ್ಟೆಂಟ್
ಮುಂಬೈ: ಸುಮಾರು 11 ಕೋಟಿ ಮೌಲ್ಯದ ಹೈಡ್ರೋಪೋನಿಕ್ಸ್ ಗಾಂಜಾವನ್ನು ಬ್ಯಾಂಕಾಕ್‌ನಿಂದ ಭಾರತಕ್ಕೆ ಸಾಗಿಸುತ್ತಿದ್ದ ಆರೋಪದ ಮೇಲೆ ಮಿಸೆಸ್ ಕೇರಳ ಸೌಂದರ್ಯ ಸ್ಪರ್ಧೆಯ ಮಾಜಿ ಸ್ಪರ್ಧಿಯನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಮಾಡೆಲ್ ಹರ್ಷ ಸನ್ನಿ (28) , ಮುಂಬೈನ ಛತ್ರಪತಿ ಶಿವಾಜಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗಾಂಜಾ ಸಮೇತ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ. ಏರ್ ಇಂಟೆಲಿಜೆನ್ಸ್ ಯೂನಿಟ್ (AIU) ಪ್ರಕಾರ, ಮಾಡೆಲ್ ಹರ್ಷ ಸನ್ನಿ ಜೂನ್ 10-11ರ ರಾತ್ರಿ ಬ್ಯಾಂಕಾಕ್‌ನಿಂದ ಏರ್ ಇಂಡಿಯಾ …
Read More »
Laxmi News 24×7