ಬಾಗಲಕೋಟೆ: ಸಿಎಂ ಬದಲಾವಣೆ ಬಗ್ಗೆ ಚರ್ಚೆ ಆಗಿಲ್ಲ, ಕೇವಲ ಮಾಧ್ಯಮಗಳಲ್ಲಿ ವದಂತಿ ಹರಡಿದೆ ಎಂದು ಅಬಕಾರಿ ಸಚಿವ ಆರ್ ಬಿ ತಿಮ್ಮಾಪೂರ ಹೇಳಿದ್ದಾರೆ. ನಗರದಲ್ಲಿಂದು ಮಾಧ್ಯಮ ಪತ್ರಿನಿಧಿಗಳೊಂದಿಗೆ ಮಾತನಾಡಿದ ಅವರು, ಗೃಹ ಸಚಿವ ಜಿ ಪರಮೇಶ್ವರ್ ಮನೆಯಲ್ಲಿ ಕಾಂಗ್ರೆಸ್ ನಾಯಕರ ಡಿನ್ನರ್ ಪಾರ್ಟಿಯಲ್ಲಿ ನಾನು ಭಾಗಿಯಾಗಿಲ್ಲ. ಆದರೆ ಅದಕ್ಕೆ ಅಂತಹದ್ದೇನು ಮಹತ್ವವೇನಿಲ್ಲ ಎಂದ ಅವರು, ಸಹಜವಾಗಿ ಭೋಜನಕ್ಕೆ ಕರೆದಿದ್ದರು, ಹೋಗಿದ್ದರು. ಅದಕ್ಕೆ ಹೆಚ್ಚು ಮಹತ್ವ ಕೊಡುವ ಅವಶ್ಯಕತೆಯಿಲ್ಲ. ಸಿಎಂ ಬದಲಾವಣೆ ಬಗ್ಗೆ …
Read More »ಬರ ಪರಿಹಾರ ವಿಚಾರದಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಮಲತಾಯಿ ಧೋರಣೆ: ಸಿಎಂ ಸಿದ್ದರಾಮಯ್ಯ ಆರೋಪ
ಮಂಗಳೂರು: ಬರಪರಿಹಾರ ನೀಡುವ ವಿಚಾರದಲ್ಲಿ ಕೇಂದ್ರ ಸರಕಾರ ರಾಜ್ಯದ ಮೇಲೆ ಮಲತಾಯಿ ಧೋರಣೆ ತೋರಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಮಾಧ್ಯಮದೊಂದಿಗೆ ಮಾತನಾಡಿದ ಅವರು, “ಬರ ಪರಿಹಾರಕ್ಕೆ ಕೇಂದ್ರ ಸರ್ಕಾರ ಇವತ್ತಿನವರೆಗೆ ಒಂದು ರೂಪಾಯಿ ಕೊಟ್ಟಿಲ್ಲ. ನಾವು ಎರಡು ಬಾರಿ ಮನವಿ ಕೊಟ್ಟೆವು. ಬರ ಪರಿಹಾರ ವೀಕ್ಷಣೆ ಮಾಡಲು ಕೇಂದ್ರದ ತಂಡ ಬಂದಿದೆ. ಪರಿಶೀಲನೆ ಮಾಡಿ 136 ತಾಲೂಕುಗಳಲ್ಲಿ 116 ತಾಲೂಕುಗಳು ಬರಪೀಡಿತ …
Read More »ನಮ್ಮ ಧರ್ಮವನ್ನು ಪ್ರೀತಿಸೋಣ ಅನ್ಯ ಧರ್ಮವನ್ನು ಗೌರವಿಸೋಣ ; ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿಯಲ್ಲಿ ಮೆಥೋಡಿಸ್ಟ್ ಚರ್ಚ ಆಶ್ರಯದಲ್ಲಿ ಜರುಗಿದ ಭಕ್ತಿ ಸಂಜೀವನ ಕೂಟಗಳನ್ನು ಉದ್ಘಾಟಿಸಿದ ಬಾಲಚಂದ್ರ ಜಾರಕಿಹೊಳಿ ಮೂಡಲಗಿ: ಭಾರತದಲ್ಲಿ ನಾನಾ ಜಾತಿ-ಧರ್ಮಗಳಿದ್ದರೂ ವಿವಿಧತೆಯಲ್ಲಿ ಏಕತೆಯನ್ನು ಬಿಂಬಿಸುತ್ತಿರುವ ನಮ್ಮ ದೇಶವು ಪ್ರಪಂಚದಲ್ಲಿ ಜಾತ್ಯಾತೀತ ರಾಷ್ಟ್ರವಾಗಿದ್ದು, ನಮ್ಮ ಧರ್ಮವನ್ನು ಪ್ರೀತಿಸುವುದರ ಜೊತೆಗೆ ಬೇರೆ ಧರ್ಮಗಳ ಬಗ್ಗೆ ಅಭಿಮಾನ ಹಾಗೂ ಗೌರವವನ್ನು ಹೊಂದಬೇಕೆಂದು ಶಾಸಕ, ಕೆಎಂಎಫ್ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಶುಕ್ರವಾರ ಸಂಜೆ ಪಟ್ಟಣದ ಮೆಥೋಡಿಸ್ಟ್ ಚರ್ಚ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನ ಸಂತರ್ಪಣೆ ಕಾರ್ಯಕ್ರಮ ಹಿರೇನಂದಿ ಗ್ರಾಮದ ಶ್ರೀ ವಾಲ್ಮೀಕಿ ದೇವಸ್ಥಾನದ ಆವರಣದಲ್ಲಿ
ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲೂಕಿನ ಹಿರೇನಂದಿ ಗ್ರಾಮದಲ್ಲಿ ಶ್ರೀ ವಾಲ್ಮೀಕಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ …
Read More »ವರ್ಷದ ಕೊನೆಯ ಚಂದ್ರಗ್ರಹಣ: ಭಕ್ತರಿಗೆ ಎಂದಿನಂತೆ ದರ್ಶನ ನೀಡಲಿರುವ ಮಲೆ ಮಾದಪ್ಪ
ಚಾಮರಾಜನಗರ: ಈ ವರ್ಷದ ಕೊನೆಯ ಚಂದ್ರಗ್ರಹಣ ಇಂದು ನಡೆಯಲಿದೆ. ಭಾರತದಲ್ಲಿ ಮಧ್ಯರಾತ್ರಿ ಭಾಗಶಃ ಚಂದ್ರಗ್ರಹಣ ಗೋಚರಿಸಲಿದೆ. ಚಂದ್ರಗ್ರಹಣ ಮಧ್ಯರಾತ್ರಿ 1:5 ಗಂಟೆಗೆ ಶುರುವಾಗಿ, 2:24ಕ್ಕೆ ಮುಕ್ತಾಯಗೊಳ್ಳಲಿದೆ. ಗ್ರಹಣದ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ದೇವಾಲಯಗಳಲ್ಲಿ ಪೂಜೆಯ ಸಮಯ ಬದಲಾಗಿದ್ದು, ಕೆಲವು ದೇವಾಲಯಗಳನ್ನು ಬೇಗನೆ ಬಂದ್ ಮಾಡಿದರೆ, ಮತ್ತೆ ಕೆಲವೆಡೆ ಗ್ರಹಣ ಕಾಲದಲ್ಲಿ ಭಕ್ತರಿಗೆ ವಿಶೇಷಪೂಜೆ, ಪುನಸ್ಕಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಮತ್ತೊಂದೆಡೆ, ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ದರ್ಶನದಲ್ಲಿ …
Read More »ಸರ್ಕಾರ ಬೀಳಿಸುವ ಬಿಜೆಪಿ ಷಡ್ಯಂತ್ರ ಫಲಿಸಲ್ಲ: ಡಿಸಿಎಂ ಡಿ ಕೆ ಶಿವಕುಮಾರ್
ಬೆಂಗಳೂರು : ಸರ್ಕಾರ ಬೀಳಿಸಲು ಬಿಜೆಪಿ ರೂಪಿಸುತ್ತಿರುವ ಷಡ್ಯಂತ್ರ ಫಲಿಸುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದ್ದಾರೆ. ಶನಿವಾರ ಹೈದರಾಬಾದ್ಗೆ ತೆರಳುವ ಮೊದಲು ಸದಾಶಿವನಗರ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯದ ಶಾಸಕ ರವಿ ಗಣಿಗ ಅವರ ಬಿಜೆಪಿಯ ಆಮಿಷದ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, ಈ ಷಡ್ಯಂತ್ರದ ಬಗ್ಗೆ ನಮಗೆ ಗೊತ್ತಿದೆ. ಇದರ ಹಿಂದೆ ದೊಡ್ಡ, ದೊಡ್ಡ ನಾಯಕರು ಇದ್ದಾರೆ. ಆದರೆ, ಇದರಿಂದ ಏನೂ ಆಗುವುದಿಲ್ಲ ಎಂದು …
Read More »ತೆಲಂಗಾಣದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಹಿಂದುಳಿದ ವರ್ಗದ ನಾಯಕ ಮುಖ್ಯಮಂತ್ರಿ: ಅಮಿತ್ ಶಾ
ಹೈದರಾಬಾದ್ (ತೆಲಂಗಾಣ): ಮುಂಬರುವ ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಜನತೆ ಅಧಿಕಾರಕ್ಕೆ ತಂದರೆ ಹಿಂದುಳಿದ ವರ್ಗದ ನಾಯಕನನ್ನು ಮುಖ್ಯಮಂತ್ರಿ ಹುದ್ದೆಗೆ ಆಯ್ಕೆ ಮಾಡಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಿಸಿದ್ದಾರೆ. ಇಂದು ಸೂರ್ಯಪೇಟ್ ಜಿಲ್ಲೆಯಲ್ಲಿ ಪಕ್ಷದ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಪಾಲ್ಗೊಂಡರು. ”ನಾನು ತೆಲಂಗಾಣದ ಜನತೆಗೆ ಒಂದು ಮಾತು ಹೇಳ ಬಯಸುತ್ತೇನೆ. ನೀವು ಬಿಜೆಪಿಗೆ ಆಶೀರ್ವಾದ ಮಾಡಿ, ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತಂದರೆ, …
Read More »ಚಿಕ್ಕಮಗಳೂರು: ಶಾಖಾದ್ರಿ ಮನೆಯಲ್ಲಿ ಚಿರತೆ, ಜಿಂಕೆ ಚರ್ಮ ವಶಕ್ಕೆ ಪಡೆದ ಅರಣ್ಯಾಧಿಕಾರಿಗಳು
ಚಿಕ್ಕಮಗಳೂರು: ಇಲ್ಲಿನ ಬಾಬಾ ಬುಡನ್ಗಿರಿ ದರ್ಗಾ ಶಾಖಾದ್ರಿ ಅವರ ಮನೆ ಮೇಲೆ ದಾಳಿ ನಡೆಸಿದ ಅರಣ್ಯ ಇಲಾಖೆ ಅಧಿಕಾರಿಗಳು ತಪಾಸಣೆ ನಡೆಸಿ ತಲಾ ಒಂದು ಚಿರತೆ ಹಾಗೂ ಜಿಂಕೆ ಚರ್ಮ ವಶಕ್ಕೆ ಪಡೆದಿದ್ದಾರೆ. ಚಿಕ್ಕಮಗಳೂರು: ಇಲ್ಲಿನ ಬಾಬಾ ಬುಡನ್ಗಿರಿ ದರ್ಗಾ ಶಾಖಾದ್ರಿ ಅವರ ಮನೆ ಮೇಲೆ ದಾಳಿ ನಡೆಸಿದ ಅರಣ್ಯ ಇಲಾಖೆ ಅಧಿಕಾರಿಗಳು ತಪಾಸಣೆ ನಡೆಸಿ ತಲಾ ಒಂದು ಚಿರತೆ ಹಾಗೂ ಜಿಂಕೆ ಚರ್ಮ ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಮೇರೆಗೆ ಈ …
Read More »ಮಲೆನಾಡಲ್ಲಿ ಹುಲಿ ಉಗುರು, ಚರ್ಮ ಇರುವುದು ಸಾಮಾನ್ಯ, ಇದನ್ನು ಸರ್ಕಾರ ಇಲ್ಲಿಗೆ ಅಂತ್ಯ ಮಾಡಲಿ: ಎಂ ಪಿ ಕುಮಾರಸ್ವಾಮಿ
ಬೆಂಗಳೂರು : ಪಶ್ಚಿಮ ಘಟ್ಟದ ಎಲ್ಲಾ ಮನೆಗಳಲ್ಲಿ ಹುಲಿ ಉಗುರು, ಪ್ರಾಣಿಗಳ ಚರ್ಮ, ಕೊಂಬು ಇರೋದು ಸಾಮಾನ್ಯ. ಈಗ ಅವರನ್ನು ವಿಲನ್ ಮಾಡುವುದಕ್ಕೆ ಹೊರಟಿರುವುದು ತಪ್ಪು ಎಂದು ಮಾಜಿ ಶಾಸಕ ಎಂ ಪಿ ಕುಮಾರಸ್ವಾಮಿ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಮೂರು ನಾಲ್ಕು ದಿನದಿಂದ ಹುಲಿ ಉಗುರು ವಿಚಾರ ಚರ್ಚೆಯಾಗ್ತಿದೆ. ನಾನು ಮಲೆನಾಡಿನವನಾಗಿದ್ದೇನೆ. ಮಾನವ ಆದಿಕಾಲದಿಂದ ಬೇಟೆ ಮಾಡಿ ಬದುಕಿದ್ದ. 25 ವರ್ಷಗಳಿಂದ ಯಾವುದೇ ಶಿಕಾರಿ ಮಾಡುತ್ತಿಲ್ಲ. ಕಾನೂನು ಪ್ರಕಾರ …
Read More »ವಿಶ್ವವಿದ್ಯಾಲಯಗಳು ಡಿಜಿಟಲ್ ಸಾಕ್ಷರತೆಯ ಅಭಿವೃದ್ಧಿಗೆ ಒತ್ತು ನೀಡಲಿ: ರಾಜ್ಯಪಾಲ ಗೆಹ್ಲೋಟ್
ಬೆಳಗಾವಿ: ”ವಿಶ್ವವಿದ್ಯಾಲಯಗಳು ಗ್ರಾಮಗಳ ಮಟ್ಟದಲ್ಲಿಯೂ ಡಿಜಿಟಲ್ ಸಾಕ್ಷರತೆ ಅಭಿವೃದ್ದಿಗಾಗಿ ಆದ್ಯತೆ ನೀಡಬೇಕಿದೆ. ಇದರೊಂದಿಗೆ, ಸಂಸ್ಕೃತಿಯನ್ನು ಬಿಂಬಿಸುವ ಕಾರ್ಯ ಚಟುವಟಿಕೆಗಳನ್ನೂ ಕೈಗೊಳ್ಳಬೇಕಿದೆ” ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸಲಹೆ ನೀಡಿದ್ದಾರೆ. ಇಲ್ಲಿನ ತಾಂತ್ರಿಕ ವಿಶ್ವವಿದ್ಯಾಲಯದ ಡಾ.ಎ.ಪಿ.ಜೆ. ಅಬ್ದುಲ್ ಕಲಾಂ ಸಭಾಂಗಣದಲ್ಲಿ ನಡೆದ ಭಾರತೀಯ ವಿಶ್ವವಿದ್ಯಾಲಯಗಳ ಸಂಘದ ದಕ್ಷಿಣ ವಲಯ ಕುಲಪತಿಗಳ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಭಾಗಿಯಾಗಿ ಅವರು ಭಾಷಣ ಮಾಡಿದರು. ”ಭಾರತದ ಪ್ರಮುಖ ಉನ್ನತ ಶಿಕ್ಷಣ ಸಂಘಟನೆಗಳಲ್ಲಿ ಭಾರತೀಯ ವಿಶ್ವವಿದ್ಯಾಲಯಗಳ ಸಂಘದ …
Read More »
Laxmi News 24×7