ನವದೆಹಲಿ: ಕರ್ನಾಟಕ ಬಿಜೆಪಿಯ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಭದ್ರತೆಯನ್ನು ಹೆಚ್ಚಿಸಲಾಗಿದೆ. ಕೇಂದ್ರೀಯ ಮೀಸಲು ಪೊಲೀಸ್ ಪಡೆಯ (ಸಿಆರ್ಪಿಎಫ್) ಸಿಬ್ಬಂದಿಯನ್ನು ಒಳಗೊಂಡಿರುವ ‘ಝೆಡ್’ ಶ್ರೇಣಿಯ ಭದ್ರತೆ ಕಲ್ಪಿಸಿ ಕೇಂದ್ರ ಗೃಹ ಸಚಿವಾಲಯ ಗುರುವಾರ ಆದೇಶಿಸಿದೆ. ಕರ್ನಾಟಕದಲ್ಲಿ ಮಾತ್ರವೇ ಉನ್ನತ ಭದ್ರತೆಯ ಸೌಲಭ್ಯವನ್ನು ಬಿಎಸ್ವೈ ಹೊಂದಿರಲಿದ್ದು, ಸಿಆರ್ಪಿಎಫ್ ಸಿಬ್ಬಂದಿ ಶೀಘ್ರವೇ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ. ಬಿ.ಎಸ್.ಯಡಿಯೂರಪ್ಪನವರಿಗೆ ಬೆದರಿಕೆ ಇರುವ ಕುರಿತ ಮಾಹಿತಿಯನ್ನು ಗುಪ್ತಚರ ವಿಭಾಗವು ಕೇಂದ್ರ ಗೃಹ ಇಲಾಖೆಯೊಂದಿಗೆ ಹಂಚಿಕೊಂಡಿದೆ. ಇದರ …
Read More »ವಿಜುಗೌಡ ಪಾಟೀಲ್ ನಿವಾಸದಲ್ಲಿ ಅರಣ್ಯಾಧಿಕಾರಿಗಳಿಂದ ತಪಾಸಣೆ
ವಿಜಯಪುರ: ಹುಲಿ ಉಗುರಿನ ಮಾದರಿಯ ಪೆಂಡೆಂಟ್ ಧರಿಸಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬಳಿಕ ಕೇಳಿ ಬಂದ ದೂರಿನ ಹಿನ್ನೆಲೆಯಲ್ಲಿ ಜಿಲ್ಲಾ ಬಿಜೆಪಿ ಮುಖಂಡ ವಿಜುಗೌಡ ಪಾಟೀಲ ಅವರ ನಿವಾಸಕ್ಕೆ ಇಂದು ಬೆಳಿಗ್ಗೆ (ಗುರುವಾರ) ಭೇಟಿ ನೀಡಿದ ಅರಣ್ಯಾಧಿಕಾರಿಗಳು, ಕೆಲಹೊತ್ತು ಶೋಧ ನಡೆಸಿದ್ದಾರೆ. ಜಿಲ್ಲಾ ಉಪ ಅರಣ್ಯಾಧಿಕಾರಿ ಶಿವಶರಣಯ್ಯ, ಸಹಾಯಕ ಅರಣ್ಯಾಧಿಕಾರಿ ಭಾಗ್ಯವಂತ ಮಸೂದೆ, ವಲಯ ಅರಣ್ಯಾಧಿಕಾರಿ ಸಂತೋಷ ಆಜೂರ ಹಾಗೂ ಸಿಬ್ಬಂದಿ ಪರಿಶೀಲಿಸಿದರು. ವಿಜುಗೌಡ, ಪುತ್ರ ಶಾಶ್ವತಗೌಡ ಹಾಜರಿದ್ದು …
Read More »ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡುವ ಸಂದರ್ಭದಲ್ಲಿ ಅರ್ಹರಿಗೆ ಪ್ರಶಸ್ತಿ ನೀಡಬೇಕು.
ಬೆಂಗಳೂರು : ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡುವ ಸಂದರ್ಭದಲ್ಲಿ ಅರ್ಹರಿಗೆ ಪ್ರಶಸ್ತಿ ನೀಡಬೇಕು. ಇದರಲ್ಲಿ ಪ್ರಾದೇಶಿಕ ನ್ಯಾಯವನ್ನು ಕಡ್ಡಾಯವಾಗಿ ಪಾಲಿಸಬೇಕು. ಎಲ್ಲಾ ಜಾತಿ, ಧರ್ಮ, ಲಿಂಗದವರಿಗೂ ಪ್ರಾತಿನಿಧ್ಯ ದೊರಕಬೇಕು ಎಂದು ಈ ಬಾರಿಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿಯ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಸಿಎಂ ಮಾತನಾಡಿದರು. ಈ ವೇಳೆ ಕರ್ನಾಟಕ ಎಂದು …
Read More »ವಿದ್ಯುತ್, ಕಲ್ಲಿದ್ದಲು ಖರೀದಿಯಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ: ಸಚಿವ ಕೆ.ಜೆ.ಜಾರ್ಜ್
ನವದೆಹಲಿ/ಬೆಂಗಳೂರು: ವಿದ್ಯುತ್ ಹಾಗೂ ಕಲ್ಲಿದ್ದಲು ಖರೀದಿಯಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ. ದೆಹಲಿಯಲ್ಲಿ ಬುಧವಾರ ಸುದ್ದಿಗೋಷ್ಠಿ ನಡೆಸಿದ ಅವರು, ನಿಯಮದ ಪ್ರಕಾರ ವಿದ್ಯುತ್ ಖರೀದಿ ಮತ್ತು ಕಲ್ಲಿದ್ದಲು ಆಮದು ಪ್ರಕ್ರಿಯೆ ನಡೆಯುತ್ತಿದೆ. ಇದರಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ. ಈ ಬಗ್ಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮಾಡಿರುವ ಆರೋಪ ಸತ್ಯಕ್ಕೆ ದೂರವಾಗಿದ್ದು, ರಾಜ್ಯ ಸರ್ಕಾರ ತಳ್ಳಿ ಹಾಕುತ್ತದೆ ಎಂದರು. ಈ ಹಿಂದಿನ ವರ್ಷಗಳಿಗೆ ಹೋಲಿಸಿದರೆ ಈ ವರ್ಷ …
Read More »ಕುಮಾರಸ್ವಾಮಿ ಸವಾಲು ಸ್ವೀಕರಿಸುತ್ತೇನೆ, ಅಧಿವೇಶನದಲ್ಲಿ ಚರ್ಚೆಗೆ ಸಿದ್ಧ: ಡಿ.ಕೆ.ಶಿವಕುಮಾರ್
ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ಸವಾಲು ಸ್ವೀಕರಿಸಿದ್ದು, ಮುಂದಿನ ಅಧಿವೇಶನದಲ್ಲಿ ಚರ್ಚೆಗೆ ಸಿದ್ಧನಿದ್ದೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಗೃಹ ಕಚೇರಿ ಕೃಷ್ಣಾದಲ್ಲಿ ಗುರುವಾರ ಮಾತಮಾಡಿದ ಅವರು, ನಾನು ಏನು ಮಾಡಿದ್ದೇನೆ, ಕುಮಾರಸ್ವಾಮಿ ಏನು ಮಾಡಿದ್ದಾರೆ ಎಂದು ಗಾಳಿಯಲ್ಲಿ ಗುಂಡು ಹೊಡೆಯುವುದು ಬೇಡ. ಅಧಿವೇಶನದಲ್ಲಿ ದಾಖಲೆ ಸಮೇತ ಚರ್ಚೆ ಮಾಡೋಣ ಎಂದರು. ಕುಮಾರಸ್ವಾಮಿ ಅವರು ನನ್ನ ಸವಾಲು ಸ್ವೀಕರಿಸಿರುವುದು ಬಹಳ ಸಂತೋಷ. ಅವರ ಪ್ರತೀ ಸವಾಲನ್ನೂ ನಾನು ಸ್ವೀಕರಿಸುತ್ತೇನೆ. …
Read More »ನಿಂತ ಮಿಡಿತ..ಇದು ಅಪರೂಪದ ‘ಹೃದಯ’ ಬಡಿತ: ಬ್ಯಾಟರಿಯೇ ಈ ಮಹಿಳೆಯ ‘ನಾಡಿಮಿಡಿತ’ಕ್ಕೆ ಆಸರೆ..
ನ್ಯೂಯಾರ್ಕ್( ವಾಷಿಂಗ್ಟನ್): ಅಪರೂಪದ ಆನುವಂಶಿಕ ಹೃದಯ ಕಾಯಿಲೆಯಿಂದ ಬಳಲುತ್ತಿರುವ 30 ವರ್ಷದ ಅಮೆರಿಕದ ಮಹಿಳೆ, ನಾಡಿಮಿತವಿಲ್ಲದೇ ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದರೆ ಅವರಿಗೆ ಬ್ಯಾಟರಿಯೇ ಉಸಿರಾಟಕ್ಕೆ ಆಸರೆ ಆಗಿದೆ. ಬೋಸ್ಟನ್‌ನ ಟಿಕ್‌ಟಾಕರ್ ಸೋಫಿಯಾ ಹಾರ್ಟ್ ಎಂಬುವವರ ಹೃದಯ ಹಿಗ್ಗಿದ ಕಾರ್ಡಿಯೊಮಿಯೊಪತಿ ಸಮಸ್ಯೆಯಿಂದ ಬಳಲುತ್ತಿದೆ. ಅಂದರೆ ಡಿಲೇಟೆಡ್ ಕಾರ್ಡಿಯೊಮಿಯೋಪತಿ, ಅಥವಾ ಡಿಸಿಎಂ, ಹೃದಯದ ಕೋಣೆಗಳು ಹಿಗ್ಗಿದಾಗ ಮತ್ತು ಸಂಕುಚಿತಗೊಳ್ಳುವ ಸಾಮರ್ಥ್ಯವನ್ನು ಕಳೆದುಕೊಳ್ಳುತ್ತವೆ. ಇದು ಹೆಚ್ಚಾಗಿ ಎಡ ಕುಹರದಲ್ಲಿ ( ಅಂದರೆ ಹೃದಯದ ಕೆಳಗಿನ ಕೋಣೆ) …
Read More »ಚಿಕ್ಕಮಗಳೂರು: ಹುಲಿ ಉಗುರು ಮಾದರಿ ಪೆಂಡೆಂಟ್ ಧರಿಸಿದ್ದ ಇಬ್ಬರು ಅರ್ಚಕರಿಗೆ 14 ದಿನ ನ್ಯಾಯಾಂಗ ಬಂಧನ
ಚಿಕ್ಕಮಗಳೂರು : ಹುಲಿ ಉಗುರಿನಿಂದ ಡಾಲರ್ ಮಾಡಿ ಕತ್ತಿಗೆ ಹಾಕಿಕೊಂಡಿದ್ದ ಆರೋಪದ ಮೇಲೆ ದೇವಸ್ಥಾನದ ಇಬ್ಬರು ಅರ್ಚಕರನ್ನು ಬಂಧಿಸಿರುವ ಘಟನೆ ಚಿಕ್ಕಮಗಳೂರು ತಾಲ್ಲೂಕಿನ ಖಾಂಡ್ಯದಲ್ಲಿ ನಡೆದಿದೆ. ಬಂಧಿತರಿಗೆ ಚಿಕ್ಕಮಗಳೂರು ಜೆಎಂಎಫ್‌ಸಿ ನ್ಯಾಯಾಲಯವು 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. ಬಾಳೆಹೊನ್ನೂರು ಸಮೀಪದ ಖಾಂಡ್ಯಾದ ಪ್ರಸಿದ್ಧ ಮಾರ್ಕಂಡೇಶ್ವರ ಸ್ವಾಮಿ ದೇವಾಲಯದ ಅರ್ಚಕರಾದ ಕೃಷ್ಣಾನಂದ ಹೊಳ್ಳ ಹಾಗೂ ನಾಗೇಂದ್ರ ಜೋಯಿಸ್ ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರಿಂದ ಮೂರು ಹುಲಿ ಉಗುರು ವಶಕ್ಕೆ ಪಡೆಯಲಾಗಿದೆ. ಇಬ್ಬರನ್ನು …
Read More »ಬಾಗಲಕೋಟೆಯ ಮಹಿಳಾ ಒಕ್ಕೂಟದ ಮಹಿಳೆಯರು ಸ್ವಸಹಾಯ ಸಂಘದಡಿಯ ಪರಿಸರ ಸ್ನೇಹಿ ಬ್ಯಾಗ್ ತಯಾರಿಕೆ,
ಬಾಗಲಕೋಟೆ: ಮಹಿಳೆ ಮನಸ್ಸು ಮಾಡಿದರೆ ಪ್ರಪಂಚವನ್ನೇ ಗೆಲ್ಲಬಹದು ಎಂಬುದಕ್ಕೆ ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ ತಾಲೂಕಿನ ಕಟಗೇರಿ ಗ್ರಾಮದ ಮಹಿಳೆಯರು ಮಾದರಿಯಾಗಿದ್ದಾರೆ. ಇವರ ಸಾಧನೆಯ ಫಲ ಎಂಬಂತೆ ಇದೀಗ ಕೇಂದ್ರ ಸರ್ಕಾರ 5 ಕೋಟಿ ರೂಪಾಯಿ ಅನುದಾನ ನೀಡಿ ಬೃಹತ್ ಕಾರ್ಖಾನೆ ನಿರ್ಮಾಣಕ್ಕೆ ಸಿದ್ಧತೆ ನಡೆಸಿದೆ. ಹೌದು.. ಪರಿಸರಸ್ನೇಹಿ ಬ್ಯಾಗ್ ತಯಾರಿಕೆ ಮೂಲಕ ಬಾಗಲಕೋಟೆ ವನಿತೆಯರು ರಾಜ್ಯವಲ್ಲದೇ ಕೇಂದ್ರ ಸರ್ಕಾರದ ಗಮನ ಸೆಳೆಯುವಲ್ಲೂ ಯಶಸ್ವಿಯಾಗಿದ್ದಾರೆ. ಕಟಗೇರಿ ಗ್ರಾಮದಲ್ಲಿರುವ ಪಂಚಾಯತ್ ಮಟ್ಟದ ಸಂಜೀವಿನಿ ಮಹಿಳಾ …
Read More »ವನ್ಯಜೀವಿ ಸಂರಕ್ಷಣಾ ಕಾಯ್ದೆ-1972’ರ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದ ಡಿಸಿಎಫ್- ವಿಡಿಯೋ ನೋಡಿ
ಚಾಮರಾಜನಗರ: ರಾಜ್ಯದಲ್ಲಿ ಹುಲಿ ಉಗುರು ಹೊಂದಿದ್ದ ಆರೋಪದಲ್ಲಿ ಸೆಲೆಬ್ರಿಟಿಗಳು ವಿವಾದಕ್ಕೀಡಾದ ಬಳಿಕ ವನ್ಯಜೀವಿ ವಸ್ತುಗಳನ್ನು ಹೊಂದುವುದು ‘ಅಪರಾಧ’ ಎಂದು ಸಾರ್ವಜನಿಕರಿಗೆ ಮನದಟ್ಟಾಗುತ್ತಿದೆ. ಬಿಳಿಗಿರಿರಂಗನಾಥ ದೇವಾಲಯ ಹುಲಿ ಸಂರಕ್ಷಿತ ಪ್ರದೇಶದ ಡಿಸಿಎಫ್ ದೀಪ್ ಜೆ.ಕಂಟ್ರಾಕ್ಟರ್ ಅವರು ವನ್ಯಜೀವಿ ಸಂರಕ್ಷಣಾ ಕಾಯ್ದೆ-1972ಯ ಕುರಿತಾಗಿ ಈಟಿವಿ ಭಾರತ್ ಜೊತೆ ಮಾತನಾಡುತ್ತಾ ವಿವರವಾದ ಮಾಹಿತಿ ನೀಡಿದರು. ವನ್ಯಜೀವಿಗಳನ್ನು ಸಂರಕ್ಷಣೆ ಮಾಡುವ ಸಲುವಾಗಿ 1972ರಲ್ಲಿ ಈ ಕಾಯ್ದೆ ಮೊದಲು ಜಾರಿಗೆ ಬಂತು. ಬಳಿಕ ಹಲವು ಬಾರಿ ಕಾಯ್ದೆಯನ್ನು ತಿದ್ದುಪಡಿ …
Read More »ಹೆಬ್ಬಾಳ್ಕರ್ ಮತ್ತು ತಮ್ಮ ನಡುವೆ ಯಾವುದೇ ರೀತಿಯ ಅಸಮಾಧಾನವಿಲ್ಲ :ಸಚಿವ ಸತೀಶ್ ಜಾರಕಿಹೊಳಿ
ಬೆಂಗಳೂರು: ಲಕ್ಷ್ಮೀಹೆಬ್ಬಾಳ್ಕರ್ ಹಾಗು ನನ್ನ ನಡುವೆ ಅಸಮಾಧಾನವಿಲ್ಲ. ಎಲ್ಲವೂ ಊಹಾಪೋಹ ಎಂದು ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದರು. ನಗರದಲ್ಲಿ ಗುರುವಾರ ಮಾತನಾಡಿದ ಅವರು, ಯಾವುದೇ ಕೋಲ್ಡ್ ವಾರ್ ಕೂಡ ನಮ್ಮ ಮಧ್ಯೆ ಇಲ್ಲ. ಡಿ.ಕೆ.ಶಿವಕುಮಾರ್ ಯಾಕೆ ಹಸ್ತಕ್ಷೇಪ ಮಾಡ್ತಾರೆ?. ನಾನು ಯಾವ ಹೈಕಮಾಂಡ್ಗೂ ತಿಳಿಸಿಲ್ಲ. ಸಮಸ್ಯೆ ಇದ್ದರೆ ನಾವೇ ಸರಿಮಾಡಿಕೊಳ್ಳುತ್ತೇವೆ ಎಂದರು. ಬೆಳಗಾವಿ ಪಾಲಿಕೆಯಲ್ಲಿ ಗೊಂದಲದ ವಿಚಾರವಾಗಿ ಪ್ರತಿಕ್ರಿಯಿಸಿ, ಬೇಕೆಂದೇ ಅಧಿಕಾರಿಗಳ ಮೇಲೆ ಆರೋಪ ಮಾಡುತ್ತಿದ್ದಾರೆ. ಕೆಲವು ದಾಖಲೆಗಳು ನಾಪತ್ತೆಯಾಗಿವೆ. ಯಾಕೆ, …
Read More »
Laxmi News 24×7