ರಾಮನಗರ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆಲ್ಲಬೇಕಾದರೆ ಜೆಡಿಎಸ್ನೊಂದಿಗೆ ಮೈತ್ರಿ ಅಗತ್ಯವಿದೆ ಎಂದು ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಪ್ರತಿಪಾದಿಸಿದರು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರಕ್ಕೆ 9 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಇಂದು ರಾಮನಗರ ಜಿಲ್ಲಾ ಬಿಜೆಪಿ ವತಿಯಿಂದ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಜೆಡಿಎಸ್ನೊಂದಿಗೆ ಬಿಜೆಪಿ ಮೈತ್ರಿ ಮಾಡಿಕೊಂಡರೆ 25 ಸ್ಥಾನಗಳನ್ನು ಗೆಲ್ಲಬಹುದು ಎನ್ನುವುದು ನನ್ನ ವೈಯುಕ್ತಿಕ ಅಭಿಪ್ರಾಯ. ಆದರೆ, ಇದರ ಬಗ್ಗೆ ನಮ್ಮ ಪಕ್ಷದ …
Read More »ಮೂಕಪ್ಪ ಶ್ರೀಗಳಿಗೆ ಶ್ರಾವಣ ಮಾಸದ ವಿಶೇಷ ಪೂಜೆ ಸಲ್ಲಿಸಿದ ಭಕ್ತರು
ಹಾವೇರಿ: ಶ್ರಾವಣ ಮಾಸ ಪವಿತ್ರವಾದ ಮಾಸವಾಗಿದೆ. ಶ್ರಾವಣ ಮಾಸದಲ್ಲಿ ಹಲವು ಆಚರಣೆಗಳನ್ನು ಮಾಡಲಾಗುತ್ತದೆ. ಶ್ರಾವಣ ಮಾಸದಲ್ಲಿ ಪುಣ್ಯ ಕ್ಷೇತ್ರಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಲಾಗುತ್ತದೆ. ಮನೆದೇವರು ಸೇರಿದಂತೆ ವಿವಿಧ ಮಠಗಳಿಗೆ ತೆರಳಿ ಮಠಾಧೀಶರನ್ನು ದರ್ಶಿಸಿ ಆಶೀರ್ವಾದ ಪಡೆಯಲಾಗುತ್ತದೆ. ಈ ರೀತಿ ಮಾಡುವುದರಿಂದ ಪುಣ್ಯ ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆ ಭಕ್ತರಲ್ಲಿದೆ. ಕೆಲವು ಭಕ್ತರು ಮಠಾಧೀಶರನ್ನು ತಮ್ಮ ಮನೆಗೆ ಕರೆಸಿಕೊಂಡು ಪಾದಪೂಜೆ ಅಭಿಷೇಕ ಸೇರಿದಂತೆ ವಿವಿಧ ಪೂಜೆಗಳನ್ನು ನೆರವೇರಿಸುತ್ತಾರೆ. ಶ್ರಾವಣ ಮಾಸದಲ್ಲಿ ಭಕ್ತರ ಮನೆಗೆ …
Read More »ಬೆಂಗಳೂರು: ಇನ್ಸ್ಪೆಕ್ಟರ್ ವಿರುದ್ಧವೇ ದೂರು ನೀಡಿದ ಪತ್ನಿ
ಬೆಂಗಳೂರು : ಸಿಐಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಇನ್ಸ್ಪೆಕ್ಟರ್ ಮಲ್ಲಿಕಾರ್ಜುನ್ ವಿರುದ್ಧ ಪತ್ನಿಯೇ ಯಶವಂತಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪತ್ನಿ ನೀಡಿದ ದೂರಿನ ಮೇರೆಗೆ ಇನ್ಸ್ಪೆಕ್ಟರ್ ಮಲ್ಲಿಕಾರ್ಜುನ ಸೇರಿ ಒಟ್ಟು ನಾಲ್ವರ ವಿರುದ್ಧ ವಂಚನೆ ಹಾಗೂ ವರದಕ್ಷಿಣೆಯಡಿ ಪ್ರಕರಣ ದಾಖಲಾಗಿದೆ. ದೂರಿನಲ್ಲಿ ಇರುವುದೇನು?: ದೂರುದಾರ ಮಹಿಳೆ ದೂರಿನಲ್ಲಿ ಹೇಳಿರುವ ಪ್ರಕಾರ, ನಾನು ಹಾಗೂ ಮಲ್ಲಿಕಾರ್ಜುನ್ ಇಬ್ಬರು 2012ರಲ್ಲಿ ಮದುವೆ ಮಾಡಿಕೊಂಡಿದ್ದೆವು. ವಿವಾಹದ ವೇಳೆ 8 ಲಕ್ಷ ನಗದು, 250 ಗ್ರಾಂ ಚಿನ್ನ ಹಾಗೂ …
Read More »ಧರ್ಮದ ಹೆಸರಿನಲ್ಲಿ ಮನುಷ್ಯರನ್ನು ದ್ವೇಷಿಸುವುದು ಅಧರ್ಮ ಎಂದು ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಧರ್ಮಕ್ಕೋಸ್ಕರ ಮನುಷ್ಯ ಅಲ್ಲ. ಮನುಷ್ಯನಿಗಾಗಿ ಧರ್ಮ ಇದೆ. ಮಾನವನಾಗಿ ಹುಟ್ಟಿದ ಕೃಷ್ಣ ಯಾವತ್ತೂ ಕೈಯಲ್ಲಿ ಶಸ್ತ್ರ ಹಿಡಿಯದೇ ದೈವತ್ವಕ್ಕೆ ಏರಿದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರವೀಂದ್ರ ಕಲಾ ಕ್ಷೇತ್ರದಲ್ಲಿ ಇಂದು ಸಂಜೆ ಹಮ್ಮಿಕೊಂಡಿದ್ದ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮನುಷ್ಯ ಮನುಷ್ಯನನ್ನು ಪ್ರೀತಿಸುವುದೇ ಧರ್ಮ. ಧರ್ಮದ ಹೆಸರಿನಲ್ಲಿ ಮನುಷ್ಯರನ್ನು ದ್ವೇಷಿಸುವುದು ಅಧರ್ಮ. ಮನುಷ್ಯ ದ್ವೇಷ- ಅಧರ್ಮದ ವಿರುದ್ಧವೇ ಕೃಷ್ಣ ಕೈಯಲ್ಲಿ …
Read More »ಕೃಷ್ಣ ಜನ್ಮಾಷ್ಟಮಿ ನಿಯಮ ಜಾರಿ: ಮೊಸರು ಗಡಿಗೆ ಆಚರಣೆಗೆ ಸಿಸಿಟಿವಿ.. ಮಫ್ತಿಯಲ್ಲಿ ಪೊಲೀಸರ ಕಣ್ಗಾವಲು
ಮುಂಬೈ: ಕೃಷ್ಣಾ ಎಂದಾಗ ಅವನು ಗೋಪಿಕೆಯರೊಂದಿಗೆ ಮಾಡುತ್ತಿದ್ದ ತುಂಟಾಟಗಳು ನೆನಪಿಗೆ ಬರುತ್ತವೆ. ಆದರೆ ಕೃಷ್ಣಾಷ್ಟಮಿ ಮತ್ತು ಮೊಸರು ಕುಡಿಕೆಯನ್ನು ಆಚರಿಸುವಾಗ ಕುಚೇಷ್ಟೆಗಳನ್ನು ಮಾಡಿ ಅನುಚಿತವಾಗಿ ವರ್ತಿಸಿದರೆ ಅಂತಹವರ ಮೇಲೆ ನಿಗಾ ಇಡಲು ಮುಂಬೈ ಪೊಲೀಸರು ನಿರ್ಧರಿಸಿದ್ದಾರೆ. ಇದಕ್ಕಾಗಿ ಮಫ್ತಿಯಲ್ಲಿ ಪೊಲಿಸರು ಜನರ ಜೊತೆಯೇ ಇದ್ದು, ಆ ರೀತಿ ನಡೆದುಕೊಂಡದ್ದು ಕಂಡುಬಂದಲ್ಲಿ ಕ್ರಮ ಕೈಗೊಳ್ಳಲು ಸಿದ್ಧರಾಗಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಬಣ್ಣದ ನೀರನ್ನು ಅಜಾಗರೂಕತೆಯಿಂದ ಎಸೆಯುವುದು ಮತ್ತು ಮೊಸರು ಗಡಿಗೆ ಹಬ್ಬದ ಸಮಯದಲ್ಲಿ ಮಹಿಳೆಯರಿಗೆ …
Read More »ಬಿಎಂಟಿಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್.. ಇಂದಿನಿಂದ ರಾತ್ರಿ ಸೇವೆಗೆ ಹೆಚ್ಚುವರಿ ದರ ಸ್ಥಗಿತ, ಹಗಲಿನ ದರವೇ ನಿಗದಿ
ಬೆಂಗಳೂರು : ರಜತ ಮಹೋತ್ಸವದ ಸಂಭ್ರಮದಲ್ಲಿರುವ ಬಿಎಂಟಿಸಿ ತನ್ನ ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಿದೆ. ಇಂದಿನಿಂದಲೇ ಜಾರಿಗೆ ಬರುವಂತೆ ರಾತ್ರಿ ಪಾಳೆ ಸೇವೆಗೆ ಪಡೆಯುತ್ತಿದ್ದ ಒಂದೂವರೆ ಪಟ್ಟು ಹೆಚ್ಚು ಟಿಕೆಟ್ ದರವನ್ನು ರದ್ದುಪಡಿಸಿ ಹಗಲಿನಲ್ಲಿ ಪಡೆಯುವ ದರವನ್ನೇ ನಿಗದಿಪಡಿಸಿ ಆದೇಶ ಹೊರಡಿಸಿದೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಪ್ರಯಾಣಿಕರಿಗೆ ಉತ್ತಮ ಗುಣಮಟ್ಟದ ಸಮರ್ಪಕ ಸುರಕ್ಷಿತ ಸಾರಿಗೆ ಸೇವೆಯನ್ನು ಮಿತವ್ಯಯ ದರದಲ್ಲಿ ಒದಗಿಸುತ್ತಿದೆ. ಬೆಂಗಳೂರು ನಗರದಲ್ಲಿ ತಡರಾತ್ರಿ ಹಾಗೂ ಮುಂಜಾನೆ ಪ್ರಯಾಣಿಸುವ ಸಾರ್ವಜನಿಕರ …
Read More »ಬ್ರಿಜ್ ಭೂಷಣ್ ಸಿಂಗ್ ವಿರುದ್ಧದ ಪೋಕ್ಸೋ ಕೇಸ್: ಅಕ್ಟೋಬರ್ 6ಕ್ಕೆ ತೀರ್ಪು
ನವದೆಹಲಿ: ಭಾರತೀಯ ಕುಸ್ತಿ ಸಂಸ್ಥೆಯ ನಿರ್ಗಮಿತ ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಅಪ್ರಾಪ್ತ ಮಹಿಳಾ ಕುಸ್ತಿಪಟು ದಾಖಲಿಸಿದ್ದ ಪೋಕ್ಸೊ ಪ್ರಕರಣವನ್ನು ವಜಾ ಮಾಡಬೇಕೇ ಬೇಡವೇ ಎಂಬುದರ ತೀರ್ಪನ್ನು ಪಟಿಯಾಲ ಹೌಸ್ ಕೋರ್ಟ್ ಅಕ್ಟೋಬರ್ 6ಕ್ಕೆ ಮುಂದೂಡಿದೆ. ದೂರು ನೀಡಿದ್ದ ಮಹಿಳಾ ಕುಸ್ತಿಪಟು ಕೇಸ್ ವಾಪಸ್ ಪಡೆದಿದ್ದು, ಪ್ರಕರಣವನ್ನು ಅಂತ್ಯಗೊಳಿಸಲು ದೆಹಲಿ ಪೊಲೀಸರು ಜೂನ್ 15 ರಂದು ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದಾರೆ. ಪ್ರಕರಣವನ್ನು ಮುಕ್ತಾಯಗೊಳಿಸುವ ಬಗ್ಗೆ …
Read More »ವಿಶ್ವಕಪ್ ತಂಡದಿಂದ ಚಹಾಲ್ ಕೈಬಿಡಲು ಕಾರಣ ಏನು?
Why Yuzvendra Singh Chahal Missing From World Cup Team :ಭಾರತ ತಂಡದಲ್ಲಿ ಈ ಹಿಂದೆ ಸ್ಟಾರ್ ಸ್ಪಿನ್ನರ್ ಆಗಿದ್ದ ಯಜುವೇಂದ್ರ ಚಹಾಲ್ಗೆ ಈ ವರ್ಷದ ವಿಶ್ವಕಪ್ನಲ್ಲಿ ಆಡುವ ಅವಕಾಶ ಸಿಕ್ಕಿಲ್ಲ. ಅವರು ತೆರೆಮರೆಗೆ ಸರಿಯಲು ಕಾರಣ ಏನು ಎಂಬುದಕ್ಕೆ ಇಲ್ಲಿದೆ ಕಾರಣ.. ನವದೆಹಲಿ: ಭಾರತ ಕ್ರಿಕೆಟ್ ತಂಡದಲ್ಲಿ ಲೆಗ್ ಬ್ರೇಕ್ ಮತ್ತು ಗೂಗ್ಲಿ ಸ್ಪೆಷಲಿಸ್ಟ್ ಯಜುವೇಂದ್ರ ಚಹಾಲ್ ಅವರನ್ನು ವಿಶ್ವಕಪ್ಗೆ ಏಕೆ ಆಯ್ಕೆ ಮಾಡಿಲ್ಲ ಎಂಬುದರ ಬಗ್ಗೆ …
Read More »ಕುಲಗೋಡಕ್ಕೆ ನಾಡ ಕಛೇರಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ಮೂಡಲಗಿ : ಕುಲಗೋಡ ಗ್ರಾಮಸ್ಥರ ಪ್ರಮುಖ ಬೇಡಿಕೆಯಾಗಿರುವ ನಾಡ ಕಛೇರಿಯನ್ನು ಕುಲಗೋಡದಲ್ಲಿ ಆರಂಭಿಸಲು ಪ್ರಯತ್ನಿಸುತ್ತೇನೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಗ್ರಾಮಸ್ಥರಿಗೆ ಭರವಸೆ ನೀಡಿದರು. ಕುಲಗೋಡ ಗ್ರಾಮದ ಬಲಭೀಮ ದೇವಸ್ಥಾನದಲ್ಲಿ ಗ್ರಾಮಸ್ಥರ ಸತ್ಕಾರ ಸ್ವೀಕರಿಸಿ ಮಾತನಾಡಿದ ಅವರು, ಕುಲಗೋಡ ಗ್ರಾಮವು ಈಗಾಗಲೇ ಅರಭಾವಿ ನಾಡ ಕಛೇರಿಗೆ ಒಳಪಟ್ಟಿದ್ದರಿಂದ ಇಲ್ಲಿನ ಸಾರ್ವಜನಿಕರಿಗೆ ಅರಭಾವಿ ದೂರವಾಗುತ್ತಿರುವುದರಿಂದ ಕುಲಗೋಡದಲ್ಲಿಯೇ ಈ ಕಛೇರಿಯನ್ನು ಆರಂಭಿಸಲಿಕ್ಕೆ ಕಂದಾಯ ಇಲಾಖಾಧಿಕಾರಿಗಳಿಗೆ ನಿರ್ದೇಶನ ನೀಡುವುದಾಗಿ ತಿಳಿಸಿದರು. ರಾಜ್ಯದಲ್ಲಿ ಕಾಂಗ್ರೇಸ್ …
Read More »ಆತ್ಮರಕ್ಷಣೆ ಉದ್ದೇಶದಿಂದ ಹೆಣ್ಣು ಮಕ್ಕಳಿಗೆ ಕರಾಟೆ ತರಬೇತಿ ನೀಡಲಾಗುತ್ತಿದೆ.
ಕಲಬುರಗಿ: ಹೆಣ್ಣು ಮಕ್ಕಳ ಆತ್ಮರಕ್ಷಣೆ ಹಿತದೃಷ್ಟಿಯಿಂದ ವಸತಿ ಶಾಲೆಗಳ ವಿದ್ಯಾರ್ಥಿನಿಯರಿಗೆ ಸೆಲ್ಫ್ ಡಿಫೆನ್ಸ್ (ಸ್ವ-ಆತ್ಮರಕ್ಷಣೆ) ಮಾಡಿಕೊಳ್ಳುವ ಉದ್ದೇಶದಿಂದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲೆಯಲ್ಲಿ ತರಬೇತಿಗಳನ್ನು ಆರಂಭಿಸಲಾಗಿದೆ. ವಿದ್ಯಾರ್ಥಿನಿಯರ ವಸತಿ ನಿಲಯಗಳು ಶಾಲಾ ಕಾಲೇಜುಗಳಿಂದ ದೂರ ಇವೆ. ಕಾಲೇಜು ಮುಗಿಸಿ ವಾಪಾಸ್ ಆಗುವ ವೇಳೆ ಅವರಿಗೆ ರೈಲ್ವೆ ಮತ್ತು ಬಸ್ ನಿಲ್ದಾಣದಂತಹ ಸ್ಥಳಗಳಲ್ಲಿ ಮಾನಸಿಕ ಹಾಗೂ ದೈಹಿಕ, ದೌರ್ಜನ್ಯ ನಡೆಸುವಂತಹ ಘಟನೆಗಳು ನಡೆಯುತ್ತಿರುತ್ತವೆ. ಹೆಣ್ಣು ಮಕ್ಕಳಿಗೆ ಆತ್ಮರಕ್ಷಣೆಯ ಕೌಶಲ್ಯವನ್ನು ಒದಗಿಸುವ ನಿಟ್ಟಿನಲ್ಲಿ …
Read More »